ಬಾಗಲಕೋಟೆ: ಹುನಗುಂದ ತಾಲೂಕಿನ ಸಿದ್ದನಕೊಳ್ಳದ ಶಿವಕುಮಾರ ಸ್ವಾಮೀಜಿ ಅವರ ಕಾಲಿಗೆ ಬಿದ್ದ ಪೊಲೀಸರ (Police) ವಿರುದ್ಧ ಗೃಹ ಇಲಾಖೆ ಶಿಸ್ತು ಕ್ರಮ ಕೈಗೊಂಡಿದೆ.
ಗುರುವಾರ ಶಿವಕುಮಾರ ಸ್ವಾಮೀಜಿ ಬಾದಾಮಿಗೆ (Badami) ಆಗಮಿಸಿದ ವೇಳೆ ಬಾದಾಮಿ ಠಾಣೆಯ ಪೊಲೀಸ್ ಸಿಬ್ಬಂದಿ ಸ್ವಾಮೀಜಿ ಕಾಲಿಗೆ ಅಡ್ಡ ಬಿದ್ದಿದ್ದರು. ಈ ವೇಳೆ ಸ್ವಾಮೀಜಿ ಭಕ್ತರಿಗೆ ಆಶೀರ್ವಾದ ಮಾಡುವಂತೆ ಪೊಲೀಸ್ ಸಿಬ್ಬಂದಿಗೆ ದುಡ್ಡು ನೀಡಿ ಆಶೀರ್ವಾದ ಮಾಡಿದ್ದರು.
ಈ ಸಂದರ್ಭದಲ್ಲಿ ಪೊಲೀಸ್ ಸಮವಸ್ತ್ರದಲ್ಲಿ (Uniform) ಯಾವುದೇ ಸ್ವಾಮೀಜಿಗೆ ಕಾಲಿಗೆ ಬೀಳಬಾರದು ಬದಲಾಗಿ ಸೆಲ್ಯೂಟ್ ಹೊಡಿಯಬೇಕು ಎಂದು ಸ್ವಾಮೀಜಿ ಹೇಳಿದ್ದರು. ಸ್ವಾಮೀಜಿ ಹಾಗೂ ಪೊಲೀಸರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಇದನ್ನೂ ಓದಿ: ಹಮಾಸ್ ಬೆಂಬಲಿಸಿದ್ದ ಭಾರತೀಯ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಅಮೆರಿಕ
ಬಾದಾಮಿಯ ಎಎಸ್ಐ ಜಿ.ಬಿ ದಳವಾಯಿಯನ್ನು ಹುನಗುಂದ ಠಾಣೆಗೆ, ಡಿ.ಜೆ ಶಿವಪುರ ಅವರನ್ನು ಬಾಗಲಕೋಟೆ ಗ್ರಾಮೀಣ ಠಾಣೆಗೆ, ಪೇದೆಗಳಾದ ನಾಗರಾಜ ಅಂಕೋಲೆಯನ್ನು ಬೀಳಗಿ ಠಾಣೆಗೆ, ಜಿ.ಬಿ ಅಂಗಡಿಯನ್ನು ಇಳಕಲ್ ನಗರ ಠಾಣೆಗೆ, ರಮೇಶ್ ಈಳಗೇರ ಅವರನ್ನು ಬಾಗಲಕೋಟೆ ಗ್ರಾಮೀಣ ಠಾಣೆಗೆ ಹಾಗೂ ರಮೇಶ್ ಹುಲ್ಲೂರ್ ಅವರನ್ನು ಬಾಗಲಕೋಡೆ ಜಿಲ್ಲಾ ಪೊಲೀಸ್ ಕಚೇರಿಗೆ ವರ್ಗಾವಣೆ ಮಾಡಿದೆ.
ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಯಾದ ಸಿಬ್ಬಂದಿ ಸದ್ಯ ವಾಸವಿರುವ ವಸತಿಗೃಹವನ್ನು ತೆರವುಗೊಳಿಸುವಂತೆ ಸೂಚನೆ ನೀಡಲಾಗಿದೆ.
ಬಾಗಲಕೋಟೆ: ಕುರಿ ಕಳ್ಳರನ್ನು ಹಿಡಿಯಲು ಹೋದ ವ್ಯಕ್ತಿಯನ್ನ ಮೂವರು ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದ ಘಟನೆ ಬಾಗಲಕೋಟೆ (Bagalakote) ಜಿಲ್ಲೆಯ ಬಾದಾಮಿ (Badami) ತಾಲೂಕಿನ ಹಳಗೇರಿ ಗ್ರಾಮದ ಟೋಲನಾಕಾ ಹತ್ತಿರ ನಡೆದಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಆರೋಪಿಗಳು, ಶರಣಪ್ಪ ಅವರ ಹೊಲದ ದಡ್ಡಿಯಲ್ಲಿರುವ ಕುರಿಗಳನ್ನು ಕಳ್ಳತನ ಮಾಡಲು ಬಂದಿದ್ದರು. ಕುರಿಕಳ್ಳರನ್ನು ಗಮನಿಸಿದ ಶರಣಪ್ಪ, ಯಾಕುಬ್ ಅಗಸಿಮನಿಯನ್ನು ಹಿಡಿದುಕೊಂಡಿದ್ದರು. ಈ ವೇಳೆ ಆರೋಪಿಗಳು, ಶರಣಪ್ಪ ಅವರನ್ನು ಕಲ್ಲು, ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿ ಮತದಾರರ ಪಟ್ಟಿಯಲ್ಲಿನ ದೋಷಗಳ ಚರ್ಚೆಗೆ ವಿಪಕ್ಷಗಳ ಆಗ್ರಹ
ಬಾಗಲಕೋಟೆ: ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆ (Illegal Slaughter House) ಮೇಲೆ ಕೆರೂರು ಪೊಲೀಸರು (Kerur Police) ದಾಳಿ ನಡೆಸಿ 12 ಗೋವುಗಳನ್ನು ರಕ್ಷಿಸಿದ್ದಾರೆ.
ಬಾದಾಮಿ (Badami) ತಾಲೂಕಿನ ಕೆರೂರು ಪಟ್ಟಣದ ಹಜರತ್ ನಿಬಿಸಾಬ್ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ. ಸಾರ್ವಜನಿಕರು ಎಷ್ಟೇ ಹೇಳಿದರೂ ಅಕ್ರಮ ಕಸಾಯಿಖಾನೆ ನಡೆಸುವುದನ್ನು ಬಿಟ್ಟಿರಲಿಲ್ಲ. ಹೀಗಾಗಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: 25 ವರ್ಷದ ಬಳಿಕ ವಿದ್ಯಾರ್ಥಿಗಳ ಸಮಾಗಮ – ತರಗತಿಯಲ್ಲಿ ಗುರುಗಳ ಪಾಠ!
ಇಂದು ಖಚಿತ ಮಾಹಿತಿ ಮೇರೆಗೆ ಕೆರೂರು ಪಿಎಸ್‌ಐ ನೇತೃತ್ವದಲ್ಲಿ ಅಕ್ರಮ ಕಸಾಯಿಖಾನೆಗೆ ದಾಳಿ ಮಾಡಿದ ಪೊಲೀಸರು ಅಲ್ಲಿರುವ ಗೋವುಗಳನ್ನು ರಕ್ಷಿಸಿದ್ದಾರೆ.
ಗೋವುಗಳನ್ನ ಕೆರೂರು ಸಂತೆಯಲ್ಲಿ ಖರೀದಿಸುತ್ತಿದ್ದ ಹಜರತ್ ನಬಿಸಾಬ್ ನಂತರ ಅವುಗಳನ್ನು ಕತ್ತರಿಸಿ ಮಾಂಸಗಳನ್ನು ಬೇರೆಡೆಗೆ ಸಾಗಾಟ ಮಾಡುತ್ತಿದ್ದ. ಪೊಲೀಸರು ದಾಳಿ ನಡೆಸಿದ ವೇಳೆ ಕಸಾಯಿಖಾನೆಯಲ್ಲಿ 7 ಹಸು, 4 ಕರು ಸೇರಿದಂತೆ 12 ಹಸುಗಳು ಇರುವುದು ಬೆಳಕಿಗೆ ಬಂದಿದೆ.
ಹಸುಗಳನ್ನು ರಕ್ಷಣೆ ಮಾಡಿ ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಹಜರತ್ ನಿಬಿಸಾಬ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬಾಗಲಕೋಟೆ: ಪಬ್ಲಿಕ್ ಹೀರೋ (PUBLiC Hero) ನಿವೃತ್ತ ಉಪನ್ಯಾಸಕ ಪ್ರೊ. ಶಿವ ರೆಡ್ಡಿ ವಾಸನ್ (Shiva Reddy Vasan) ಅವರು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award) ಆಯ್ಕೆ ಆಗಿದ್ದಾರೆ.
ಎಸ್.ಎಸ್ ವಾಸನ್ ಅವರು ಬಾದಾಮಿ (Badami) ಪಟ್ಟಣದ ನಿವಾಸಿಯಾಗಿದ್ದು, ವೃತ್ತಿಯಿಂದ ಜೀವಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. ನಿವೃತ್ತಿಯ ನಂತರವೂ ಅವರ ನಿಸರ್ಗದ ಪ್ರೀತಿ ಕಡಿಮೆ ಆಗಲಿಲ್ಲ. ಯುವ ಪೀಳಿಗೆಗೆ ಪರಿಸರದ ಬಗ್ಗೆ ಅರಿವು ಮೂಡಿಸುತ್ತಾ, ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಟ್ಟು ತಾಪಮಾನ ಕಡಿಮೆ ಮಾಡುವ ಪಣ ತೊಟ್ಟಿದ್ದಾರೆ.
ನಿವೃತ್ತಿ ನಂತರ ಬಾದಾಮಿ ಪಟ್ಟಣದಲ್ಲಿ ನಿಸರ್ಗ ಬಳಗ ಎಂಬ ಸಂಘ ತೆರೆದಿದ್ದಾರೆ. ಈ ಬಳಗದ ಸದಸ್ಯರೊಂದಿಗೆ ಸಸಿ ನೆಡುವ ಕಾರ್ಯ ಮಾಡುತ್ತಿದ್ದಾರೆ. ಇವರ ಪರಿಸರ ಕಾಳಜಿಯನ್ನು ಗಮನಿಸಿದ್ದ ಪಬ್ಲಿಕ್ ಟಿವಿ 2019ರ ಸೆಪ್ಟೆಂಬರ್ 13 ರಂದು ನಿಸರ್ಗ ಪ್ರೇಮಿ ಎಂದು ಪಬ್ಲಿಕ್ ಹಿರೋ ಕಾರ್ಯಕ್ರಮದ ಅಡಿ, ಇವರ ಸಾಮಾಜಿಕ ಕಳಕಳಿ ಹಾಗೂ ಪರಿಸರ ಪ್ರೇಮದ ಕುರಿತು ವರದಿ ಮಾಡಿತ್ತು. ಇದನ್ನೂ ಓದಿ: ಇಸ್ರೋ ಮುಖ್ಯಸ್ಥ ಸೋಮನಾಥ್, ಗಾಲ್ಫರ್ ಅದಿತಿ ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ- Full List
ಹೆಚ್ಚುತ್ತಿರುವ ತಾಪಮಾನವನ್ನು ಸಸಿ ನೆಡುವ ಮೂಲಕ ಕಡಿಮೆ ಮಾಡಬೇಕು. ನೀರಿನ ಅಂತರ್ಜಲ ಮಟ್ಟ ವೃದ್ಧಿಯಾಗಬೇಕು ಎಂಬ ಕನಸುಗಳನ್ನು ಹೊತ್ತು ಬಿಡುವಿನ ವೇಳೆಯಲ್ಲಿ ಊರೂರು ಸುತ್ತಿ ಪರಿಸರ ರಕ್ಷಣೆ, ಗಿಡ ನೆಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ಪರಿಸರ ಪ್ರೇಮಿ ಎನಿಸಿಕೊಂಡಿದ್ದಾರೆ. ಯುವಕರು, ಮಹಿಳೆಯರು, ಶಿಕ್ಷಕರನ್ನೊಳಗೊಂಡ ಸುಮಾರು 50 ಸದಸ್ಯರ ನಿಸರ್ಗ ಬಳಗ ಹುಟ್ಟು ಹಾಕಿ ಚಾಲುಕ್ಯರ ನಾಡನ್ನು ಹಸಿರು ನಾಡು ಮಾಡಲು ಹೊರಟಿದ್ದಾರೆ.
ಬಾದಾಮಿ ಐತಿಹಾಸಿಕ ಪ್ರವಾಸಿ ತಾಣ, ಪಟ್ಟಣದಲ್ಲಿ ಚಾಲುಕ್ಯರ ಆಳ್ವಿಕೆಗೆ ಸಾಕ್ಷಿಯಾದ ಸುಂದರ ಕಲಾಶಿಲ್ಪಗಳಿವೆ. ಇದನ್ನು ವೀಕ್ಷಿಸಲು ದೇಶ-ವಿದೇಶದಿಂದ ಪ್ರವಾಸಿಗರು ಬರುತ್ತಾರೆ. ಆದರೆ ಪಟ್ಟಣ ಮಾತ್ರ ಬಿಸಿಲ ಕೂಪದಲ್ಲಿ ಸುಡುವಂತಿದೆ. ಇದನ್ನರಿತ ವಾಸನ್, ಬಾದಾಮಿ ಪಟ್ಟಣವನ್ನು ಸುಂದರ ಪರಿಸರದ ಪಟ್ಟಣವನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ, ಪಟ್ಟಣದ ಹಸರೀಕರಣಕ್ಕಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ.
ಸಸಿ ನೆಡುವುದರಲ್ಲಿಯೂ ಜಾಣತನ ಮೆರೆದಿರುವ ಇವರು, ಹೊಂಗೆ ಮರದಿಂದ ಮುಂದೊಂದು ದಿನ ಜೈವಿಕ ಇಂಧನ ಸಿಗಬಹುದು ಎಂಬ ಉದ್ದೇಶದಿಂದ ಹೆಚ್ಚಾಗಿ ಹೊಂಗೆ ಸಸಿಗಳನ್ನೇ ನೆಡುತ್ತಿದ್ದಾರೆ. ಇಲ್ಲಿಯವರೆಗೆ ವಾಸನ್ ಅವರು 15 ಸಾವಿರಕ್ಕೂ ಅಧಿಕ ವಿವಿದ ಸಸಿಗಳನ್ನು ನೆಟ್ಟಿದ್ದಾರೆ. ಈ ಎಲ್ಲಾ ಕಾರಣದಿಂದ ಬಾದಾಮಿ ಜನ ಇವರನ್ನು ಪರಿಸರ ಪ್ರೇಮಿ ವಾಸನ್ ಎಂದು ಕರೆಯುತ್ತಿದ್ದಾರೆ.
ಬಾಗಲಕೋಟೆ: ಕಾಂಗ್ರೆಸ್ ಸರ್ಕಾರವೂ (Congress Government) ಬಂದಾಯಿತು. ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದೂ ಆಯ್ತು. ಆದ್ರೆ ಚುನಾವಣೆ ಮೊದಲು ಕೊಟ್ಟ ಮಾತು ತಪ್ಪಿದ್ದಾರೆ ಎಂಬ ಅಭಿಪ್ರಾಯ ಬಾದಾಮಿ (Badami) ಜನರಲ್ಲಿ ವ್ಯಕ್ತವಾಗುತ್ತಿದೆ.
ಈ ಹಿಂದೆ ಬಾದಾಮಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿದ್ದರಾಮಯ್ಯ ಈ ಬಾರಿಯ ಚುನಾವಣೆಯಲ್ಲಿ (Election) ಬಾದಾಮಿ ಕ್ಷೇತ್ರವನ್ನು ಬಿಟ್ಟು ವರುಣಾದಲ್ಲಿ (Varuna) ನಿಂತಿದ್ದರು. ಚುನಾವಣಾ ಸಮಯದಲ್ಲಿ ಬಾದಾಮಿಯಿಂದಲೇ ಸ್ಪರ್ಧಿಸಿ ಎಂದು ಬೆಂಬಲಿಗರ ಒತ್ತಾಯ ಮಾಡಿದಾಗ ಮನವೊಲಿಸಲು ಬಾದಾಮಿ ಕ್ಷೇತ್ರವನ್ನು ದತ್ತು ಪಡೆದು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದರು.
ಅಧಿಕಾರಕ್ಕೆ ಬಂದು ನೂರು ದಿನಗಳು ದಾಟಿದರೂ ಬಾದಾಮಿ ಅಭಿವೃದ್ಧಿ ಬಗ್ಗೆ ಸಿಎಂ ಮಾತನಾಡುತ್ತಿಲ್ಲ. ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದ ಬಳಿಕ ತಮ್ಮ ಹಳೆ ಕ್ಷೇತ್ರವನ್ನು ಸಿದ್ದರಾಮಯ್ಯ ಮರೆತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದನ್ನೂ ಓದಿ: ಹೂ ದರ ಭಾರೀ ಇಳಿಕೆ – ಮಾರುಕಟ್ಟೆಯಲ್ಲೇ ಎಸೆದು ಹೋದ ರೈತರು
ಬೆಟ್ಟದಷ್ಟು ಸಮಸ್ಯೆ ಎದುರಿಸುತ್ತಿರುವ ಕ್ಷೇತ್ರದ ಜನರಿಗೆ ಹೊಸ ಸರ್ಕಾರ ಬಂದ ಮೇಲೆ ಸಮಸ್ಯೆಗಳು ಪರಿಹಾರವಾಗುತ್ತದೆ ಎಂಬ ಭಾವನೆಯಲ್ಲಿದ್ದರು. ಆದರೆ ಸರ್ಕಾರ ಬಂದು ಇಷ್ಟು ದಿನಗಳಾದರೂ ಬಾದಾಮಿ ಅಭಿವೃದ್ಧಿಗೆ ಯಾವುದೇ ಅನುದಾನ ನೀಡಿಲ್ಲ. ಬಾದಾಮಿ ಪಟ್ಟಣದಲ್ಲಿ ಸುಸಜ್ಜಿತ ರಸ್ತೆ, ಮಾರುಕಟ್ಟೆ ಇಲ್ಲದೇ ಜನ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರವಾಸಿ ತಾಣಗಳ ಬಳಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿದೆ. ನೀರಾವರಿ ಯೋಜನೆಗಳು ಕುಂಠಿತವಾಗಿವೆ. ಇಷ್ಟೆಲ್ಲ ಸಮಸ್ಯೆ ಇರುವುದನ್ನು ಅರಿತ ಸಿದ್ದರಾಮಯ್ಯ ಒಮ್ಮೆಯೂ ತಮಗೆ ಪುನರ್ಜನ್ಮ ನೀಡಿದ ಕ್ಷೇತ್ರದ ಬಗ್ಗೆ ಚಿಂತಿಸುತ್ತಿಲ್ಲ ಎಂದು ಕ್ಷೇತ್ರದ ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಬಾಗಲಕೋಟೆ: ನೂತನ ಸಂಸತ್ ಭವನದ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಸಂಸತ್ ಭವನದ ಆಕರ್ಷಣಾ ಕೆಂದ್ರಬಿಂದುವಾಗಿರುವ ಸೆಂಗೊಲ್ (Sengol) ಪ್ರತಿಷ್ಠಾಪನೆ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದೆ. ಇದರ ಮಧ್ಯೆ ಸೆಂಗೊಲ್ ರಾಜದಂಡದ ನಂಟು ಬಾಗಲಕೋಟೆ (Bagalkote) ಜಿಲ್ಲೆಗೂ ವ್ಯಾಪಿಸಿದೆ. ಐತಿಹಾಸಿಕ ತಾಣವಾದ ಬಾಗಲಕೋಟೆಯಲ್ಲಿ ಸೆಂಗೊಲ್ ಪ್ರತಿರೂಪ ಕಲಾಕೃತಿಯಲ್ಲಿ ಕಂಡು ಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಾದಾಮಿ (Badami) ತಾಲೂಕಿನ ಪಟ್ಟದಕಲ್ಲು (Pattadakal) ಗ್ರಾಮದ ವಿರೂಪಾಕ್ಷ ದೇವಾಲಯದ (Virupaksha Temple) ಬಲ ಗೋಡೆಯ ಮೇಲೆ ಸೆಂಗೋಲ್ ಪ್ರತಿರೂಪದ ಕಲಾಕೃತಿ ಎಲ್ಲರ ಗಮನ ಸೆಳೆಯುತ್ತಿದೆ. ದೇವಾಲಯದ ಗೋಡೆಯ ಮೇಲೆ ಕಲಾವಿದನಿಂದ ಕೆತ್ತಲ್ಪಟ್ಟ ಕಲಾಕೃತಿ ಸೆಂಗೊಲ್‌ಗೆ ಸಾಮ್ಯತೆ ಹೊಂದಿದೆ. ಕಲಾಕೃತಿಯಲ್ಲಿ ನಾಟ್ಯರೂಪದ ಚತುರ್ಭುಜದ ಶಿವನ ಎಡಗೈನಲ್ಲಿ ಸೆಂಗೊಲ್ ಕಾಣಿಸುತ್ತಿದೆ. ಸೆಂಗೊಲ್ ಮೇಲೆ ನಂದಿಯ ಕೆತ್ತನೆಯಾಗಿದೆ. ಅಜ್ಞಾನದ ಸಂಕೇತವಾಗಿರುವ ಮೂರ್ತಿಯನ್ನು ನಾಶಪಡಿಸಿ, ದುಷ್ಟಶಕ್ತಿಯನ್ನು ಕಾಲಿನಿಂದ ನಿರ್ನಾಮ ಮಾಡುವ ರೂಪದಲ್ಲಿ ಶಿವನ ಮೂರ್ತಿಯ ಕಲಾಕೃತಿ ಕೆತ್ತನೆಯಾಗಿದೆ. ಇದನ್ನೂ ಓದಿ: ಹೊಸ ಸಂಸತ್‌ನಲ್ಲಿ `ಸೆಂಗೋಲ್’ ಸಮರ – ಅಧಿಕಾರ ಹಸ್ತಾಂತರದ ರಾಜದಂಡಕ್ಕೆ ಸಾಕ್ಷ್ಯವೇ ಇಲ್ಲ ಅಂತಿದೆ ಕಾಂಗ್ರೆಸ್
ಚಾಲುಕ್ಯರ ಲೋಕಮಹಾದೇವಿ ಕಟ್ಟಿಸಿದ ದೇವಾಲಯದಲ್ಲಿ ಈ ಕಲಾಕೃತಿ ಕಂಡು ಬಂದಿದ್ದು, ಈ ಒಂದು ರಾಜಮುದ್ರೆ ಸೆಂಗೊಲ್ 7ನೇ ಶತಮಾನದಲ್ಲಿ ಚಾಲನೆಯಲ್ಲಿತ್ತು ಎನ್ನುವುದಕ್ಕೆ ಸಾಕ್ಷಿಯಾಗಿದೆ. ಚಾಲುಕ್ಯ ದೊರೆ ಎರಡನೇ ವಿಕ್ರಮಾದಿತ್ಯ ಕಂಚಿ ಪಲ್ಲವರ ಮೇಲೆ ಯುದ್ಧಸಾರಿ ಜಯ ಸಾಧಿಸಿದ ನೆನಪಿಗಾಗಿ ಕಟ್ಟಿಸಲ್ಪಟ್ಟಿರುವ ವಿರೂಪಾಕ್ಷ ದೇವಾಲಯದ ಗೋಡೆಯ ಮೇಲೆ ಕಂಡುಬಂದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?
ಬಾಗಲಕೋಟೆ: ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿವೆ. ಸದ್ಯಕ್ಕೆ ಬಾದಾಮಿ (Badami) ಹೈವೋಲ್ಟೇಜ್ ಕ್ಷೇತ್ರವಾಗಿದ್ದರೂ, ತೇರದಾಳ ಕೂಡ ಹೈವೋಲ್ಟೇಜ್ ಕ್ಷೇತ್ರವಾಗಿ ಬದಲಾಗುತ್ತಿದೆ. ತೇರದಾಳ ಕ್ಷೇತ್ರಕ್ಕೆ ಬಹಳ ಹಳೆಯ ರಾಜಕೀಯ ಇತಿಹಾಸವಿಲ್ಲ. ಈ ಕ್ಷೇತ್ರ ಉಗಮವಾಗಿದ್ದೇ 2008ರಲ್ಲಿ.
ತೇರದಾಳ ಕ್ಷೇತ್ರದ ಜನರಿಗೆ ಮೊದಲ ಬಾರಿ ಚುನಾವಣೆ (Election) ಆಗಿದ್ದರಿಂದ ಬಾರಿ ಕುತೂಹಲವನ್ನು ಕೆರಳಿಸಿತ್ತು. ಇನ್ನು 2008ರ ಚುನಾವಣೆಯಲ್ಲಿ ಈ ಕ್ಷೇತ್ರ ಇಷ್ಟು ಕುತೂಹಲಕಾರಿ ಹಾಗೂ ಹೈವೋಲ್ಟೇಜ್ ಕ್ಷೇತ್ರ ಆಗಲೂ ಪ್ರಮುಖ ಕಾರಣ ಚಿತ್ರನಟಿ ಹಿರಿಯ ಕಲಾವಿದೆ ಉಮಾಶ್ರಿಯವರ ಸ್ಪರ್ಧೆ.
ಚಿತ್ರನಟಿಯಾಗಿ ತನ್ನದೇ ಗುರುತು ಮೂಡಿಸಿದ್ದ ಉಮಾಶ್ರಿ ನೇಕಾರ ಸಮುದಾಯದವರೇ ಆಗಿದ್ದರು. ಈ ಕ್ಷೇತ್ರದಲ್ಲಿ ನೇಕಾರರ 40 ಸಾವಿರ ಮತಗಳಿವೆ. ನೇಕಾರರ ಪ್ರಭಾವ ಹೆಚ್ಚಾಗಿರುವ ತೇರದಾಳ (Terdal) ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಅವರು ಮುಂದಾಗಿದ್ದರು.
ಇನ್ನೂ ಮಹಿಳೆ ಎಂಬ ಅನುಕಂಪದೊಂದಿದೆ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಟಿಕೆಟ್ ಪಡೆದು ಅಖಾಡಕ್ಕೆ ಇಳಿದಿದ್ದರು. ಮೊದಲ ಬಾರಿ ಇಷ್ಟೆಲ್ಲ ಪ್ರಭಾವ ಬಿಜೆಪಿ (BJP) ವಿರೋಧಿ ಅಲೆ ಇದ್ದರೂ ಸಹ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಸಿದ್ದು ಸವದಿ ವಿರುದ್ಧ ಸೋತಿದ್ದರು. ಭಾರತೀಯ ಸೇನೆಯಲ್ಲಿ ಕೆಲ ವರ್ಷ ಸೇವೆ ಸಲ್ಲಿಸಿ ಬಂದು ರಾಜಕೀಯ ಅಖಾಡಕ್ಕೆ ಇಳಿದು ನೆಲೆ ಕಂಡುಕೊಂಡಿರುವ ಸಿದ್ದು ಸವದಿ. 2008ರ ಮೊದಲು ಜಮಖಂಡಿ ಶಾಸಕರಾಗಿದ್ದರು. ತೇರದಾಳ ಜಮಖಂಡಿ ಕ್ಷೇತ್ರದ ವ್ಯಾಪ್ತಿಯಲ್ಲೇ ಇದ್ದಿದ್ದರಿಂದ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದರು.
ಉಮಾಶ್ರಿ (Umashree) ಅವರಿಗೆ ಕಲೆ, ಮಹಿಳಾ ಅನುಕಂಪ, ಕಾಂಗ್ರೆಸ್ ಕೃಪಾಶೀರ್ವಾದ ವರ್ಚಸ್ಸು ಇದ್ದಾಗಲೂ ಸಿದ್ದು ಸವದಿ (Siddu Savadi) 62,595 ಮತ ಪಡೆದರೆ, ಉಮಾಶ್ರಿ 50,351 ಮತ ಪಡೆದಿದ್ದರು. ಉಮಾಶ್ರಿ ವಿರುದ್ಧ 12,244 ಮತಗಳ ಅಂತರದಿಂದ ಸಿದ್ದು ಸವದಿ ಗೆದ್ದು ಬೀಗಿದ್ದರು.
ಇನ್ನು 2013ರ ಚುನಾವಣೆಯಲ್ಲಿ ಪುನಃ ಸಿದ್ದು ಸವದಿ ಹಾಗೂ ಉಮಾಶ್ರಿ ಮಧ್ಯೆ ನೇರ ಹಣಾಹಣಿ ನಡೆದಿತ್ತು. ಆಗ ಬಿಜೆಪಿ ಸರ್ಕಾರದಲ್ಲಿ ನಡೆದ ಏರುಪೇರುಗಳು, ಬಿ.ಎಸ್.ಯಡಿಯೂರಪ್ಪ ಕೆಜೆಪಿ ಪಕ್ಷ ಕಟ್ಟಿದ್ದು, ಶ್ರೀರಾಮುಲು ಬಿಎಸ್‍ಆರ್ ಪಕ್ಷದ ಪರಿಣಾಮದಿಂದ ಉಮಾಶ್ರಿ, ಸಿದ್ದು ಸವದಿ ವಿರುದ್ಧ ಜಯ ಸಾಧಿಸಿದ್ದರು.
ಉಮಾಶ್ರಿ 70,189 ಮತ ಪಡೆದರೆ ಸಿದ್ದು ಸವದಿ 67,590 ಮತ ಪಡೆದಿದ್ದರು. ಕೇವಲ 2599 ಮತಗಳ ಅಂತರದಿಂದ ಉಮಾಶ್ರಿ ಜಯ ಸಾಧಿಸಿದ್ದರು. ನಂತರ 2018ರಲ್ಲಿ ಪ್ರಧಾನಿ ಮೋದಿ ಹವಾ, ಯಡಿಯೂರಪ್ಪ ಪುನಃ ಬಿಜೆಪಿಗೆ ಬಂದಿದ್ದು, ಕಾಂಗ್ರೆಸ್ ಆಡಳಿತ ವಿರೋಧಿ ಅಲೆ ಕಾರಣದಿಂದ 2018ರಲ್ಲಿ ತೇರದಾಳ ಕ್ಷೇತ್ರದಲ್ಲಿ ಮತ್ತೆ ಎದುರಾಳಿಯಾಗಿದ್ದ ಉಮಾಶ್ರಿ ಸಿದ್ದು ಸವದಿ ಮಧ್ಯೆ ನೇರ ಹಣಾಹಣಿ ನಡೆದಿತ್ತು. ಆಗ ಸಿದ್ದು ಸವದಿ 87,583 ಮತ ಪಡೆದರೆ, ಉಮಾಶ್ರಿ 66,470 ಮತ ಪಡೆದಿದ್ದರು. 21,113 ಮತಗಳ ಅಂತರದಿಂದ ಸಿದ್ದು ಸವದಿ ಜಯ ಗಳಿಸಿದ್ದರು.
ತೇರದಾಳ ಕ್ಷೇತ್ರದಲ್ಲಿ ನೇಕಾರರು, ಲಿಂಗಾಯತ ಮತದಾರರು ಹೆಚ್ಚಾಗಿದ್ದು ನೇಕಾರರೇ ಇಲ್ಲಿ ಪ್ರಮುಖ ನಿರ್ಣಾಯಕರಾಗಿದ್ದಾರೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ನೇಕಾರ ಹಾಗೂ ಲಿಂಗಾಯತರ ಸಮುದಾಯದವರೇ ಶಾಸಕರಾಗಿದ್ದಾರೆ. ಎರಡು ಬಾರಿ ಲಿಂಗಾಯತ ಪಂಚಮಾಲಿ ಸಮುದಾಯದ ಸಿದ್ದು ಸವದಿ ಶಾಸಕರಾದರೆ. ಒಂದು ಬಾರಿ ನೇಕಾರ ಸಮಾಜದ ಉಮಾಶ್ರಿ ಶಾಸಕಿಯಾಗಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಉಮಾಶ್ರಿ ಸಚಿವೆಯಾಗಿ ಕೂಡ ಕೆಲಸ ಮಾಡಿದ್ದಾರೆ. ಇಂತಹ ಕ್ಷೇತ್ರದಲ್ಲಿ 2023ರ ಚುನಾವಣೆ ಬಾರಿ ಕುತೂಹಲ ಕೆರಳಿಸಿದೆ.
ಉಮಾಶ್ರಿ ವಿರುದ್ಧ ಪರಕೀಯರು ಎಂಬ ವಿರೋಧಿ ಅಲೆ
ಈ ಬಾರಿ ತೇರದಾಳ ಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಂಖ್ಯೆ ಎರಡು ಪಕ್ಷದಲ್ಲಿ ಹೆಚ್ಚಾಗಿದೆ. ಉಮಾಶ್ರಿ ಈ ಭಾಗದವರಾಗದ ಕಾರಣ ಈ ಬಾರಿ ಕಾಂಗ್ರೆಸ್‍ನಲ್ಲಿ ಎಲ್ಲಾ ಮುಖಂಡರು ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. 16 ಜನರು ತೇರದಾಳ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಗಳಾಗಿದ್ದು, ಟಿಕೆಟ್‍ಗಾಗಿ ಇನ್ನಿಲ್ಲದ ಪ್ರಯತ್ನ ಶುರು ಮಾಡಿದ್ದಾರೆ. ಉಮಾಶ್ರಿ ಬಿಟ್ಟು ಸ್ಥಳೀಯರಿಗೆ ಟಿಕೆಟ್ ಕೊಟ್ಟರೆ ಮಾತ್ರ ಕಾಂಗ್ರೆಸ್ ಬೆಂಬಲಿಸೋದಾಗಿ ಕಾರ್ಯಕರ್ತರು ನಿಂತಿದ್ದಾರೆ. ಕಾಂಗ್ರೆಸ್ ನಲ್ಲಿ ಪ್ರಮುಖವಾಗಿ ವೈದ್ಯರೇ ಆಕಾಂಕ್ಷಿಗಳಾಗಿದ್ದಾರೆ. ಕಣ್ಣಿನ ವೈದ್ಯ ಡಾ.ಪದ್ಮಜಿತ್ ನಾಡಗೌಡ, ಜೈನ ಸಮುದಾಯಕ್ಕೆ ಸೇರಿದವರು. ಪಂಚಮಸಾಲಿ ಸಮುದಾಯಕ್ಕೆ ಸೇರಿದ ಡಾ.ಎ.ಆರ್ ಬೆಳಗಲಿ, ನೇಕಾರ ಸಮುದಾಯಕ್ಕೆ ಸೇರಿರುವ ಎಮ್.ಎಸ್ ದಡ್ಡೆನವರ ಸೇರಿದಂತೆ 16 ಜನರು ಆಕಾಂಕ್ಷಿಗಳಿದ್ದಾರೆ. ಆದರೆ ಮುಖ್ಯ ರೇಸ್ ನಲ್ಲಿ ಉಮಾಶ್ರಿ, ಪದ್ಮಜಿತ್ ನಾಡಗೌಡ. ಡಾ.ಎ.ಆರ್ ಬೆಳಗಲಿ ಇದ್ದಾರೆ.
ಬಿಜೆಪಿಯಲ್ಲೂ ಕೂಡ ಟಿಕೆಟ್ ಅಸಮಾಧಾನ
ಬಿಜೆಪಿಯಿಂದ 6-7 ಜನರು ಆಕಾಂಕ್ಷಿಗಳಿದ್ದು ಈ ಬಾರಿ ಟಿಕೆಟ್ ಸಿದ್ದು ಸವದಿಗೆ ನೀಡಬಾರದು ಎಂಬ ಕೂಗು ಕೇಳಿ ಬಂದಿದೆ. ಜೊತೆಗೆ ನೇಕಾರ ಸಮುದಾಯಕ್ಕೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡುವಂತೆ ಒತ್ತಡ ಬರುತ್ತಿದೆ. ಆದರೆ ಯಡಿಯೂರಪ್ಪ ಬನಹಟ್ಟಿ ವಿಜಯಸಂಕಲ್ಪ ಯಾತ್ರೆಗೆ ಬಂದಾಗ ಸಿದ್ದು ಸವದಿಯನ್ನು ಆರಿಸಿ ಕಳಿಸಿ ಎಂದಿದ್ದರು. ಮರುದಿನ ಬಾಯಿ ತಪ್ಪಿ ಹೇಳಿದ್ದೇನೆ ಎಂದು ಸಮರ್ಥನೆ ಮಾಡಿಕೊಂಡಿದ್ದರು.
ಕ್ಷೇತ್ರದಲ್ಲಿ ನೇಕಾರರು ಹೆಚ್ಚಿನ ಪ್ರಭಾವ ಹೊಂದಿದ ಕಾರಣ ನೇಕಾರರಿಗೆ ಸಾಲ ಸೌಲಭ್ಯ, ನೇಕಾರರ ಅಭಿವೃದ್ಧಿ, ನೇಕಾರರ ಸಾಲ ಮನ್ನಾ, ಮಗ್ಗಗಳಿಗೆ ವಿದ್ಯುತ್ ಎಲ್ಲವೂ ಚುನಾವಣೆಯ ಪ್ರಮುಖ ಅಸ್ತ್ರಗಳಾಗಿರುತ್ತವೆ. ನೇಕಾರ ಕ್ಷೇತ್ರದಲ್ಲಿ ಈ ಬಾರಿ ಆಕಾಂಕ್ಷಿಗಳ ಪಟ್ಟಿ ಎರಡು ಪಕ್ಷದಲ್ಲಿ ಹೆಚ್ಚಾಗಿದೆ. ಇದು ಚುನಾವಣೆಯ ಕುತೂಹಲದ ಕಾವನ್ನು ಹೆಚ್ಚಿಸಿದೆ. ಇದನ್ನೂ ಓದಿ: ಈ ಬಾರಿ 20ಕ್ಕೂ ಹೆಚ್ಚು ಹಾಲಿ ಬಿಜೆಪಿ ಶಾಸಕರಿಗೆ ಕೊಕ್?
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚುನಾವಣೆಗೆ ಸ್ಪರ್ಧಿಸಿ ಸೋಲಬೇಕು ಎಂಬುದೇ ನನ್ನ ಆಸೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S. Eshwarappa) ಹೇಳಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ತುದಿ ಬುಡ ಇಲ್ಲದ ಬಸ್ ಪ್ರಯಾಣ ಮಾಡಿಕೊಂಡು ಹೋಗುತ್ತಿದ್ದಾರೆ. ವರುಣಾದಿಂದ (Varuna) ಬಾದಾಮಿ, ಬಾದಾಮಿಯಿಂದ (Badami) ಕೋಲಾರ, ಕೋಲಾರದಿಂದ ಕುಷ್ಟಗಿ, ಕುಷ್ಟಗಿಯಿಂದ ವರುಣಾಕ್ಕೆ ಓಡಾಡುತ್ತಿದ್ದಾರೆ ಎಂದು ಗೇಲಿ ಮಾಡಿದ್ದಾರೆ. ಇದನ್ನೂ ಓದಿ: ನಾಳೆ ಕರೆದಿದ್ದ ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್
ಮೊದಲು ಸಿದ್ದರಾಮಯ್ಯ ಹೈಕಮಾಂಡ್ ಎಲ್ಲಿ ಸೂಚಿಸಿದಲ್ಲಿ ನಿಲ್ಲುತ್ತೇನೆ ಎಂದಿದ್ದರು. ಈಗ ನನ್ನ ಹೆಂಡತಿ ಮಗ ಯಾವ ಕ್ಷೇತ್ರದಲ್ಲಿ ಹೇಳುತ್ತಾರೋ ಅಲ್ಲಿ ನಿಲ್ಲುತ್ತೇನೆ ಎನ್ನುತ್ತಿದ್ದಾರೆ. ಕ್ಷೇತ್ರವೇ ಸಿಗದ ವಿಪಕ್ಷ ನಾಯಕರು ಬೇರೆಯವರಿಗೆ ಹೇಗೆ ಟಿಕೆಟ್ ಕೊಡುತ್ತಾರೆ ಎಂದು ಕುಟುಕಿದ್ದಾರೆ.
ಸಿದ್ದರಾಮಯ್ಯ ಎಲ್ಲಿ ಸ್ಪರ್ಧಿಸಿದರೂ ಅವರ ಪಕ್ಷದವರೇ ಅವರನ್ನು ಸೋಲಿಸುತ್ತಾರೆ. ದಲಿತರು, ಹಿಂದುಳಿದವರು, ಒಕ್ಕಲಿಗರು, ಲಿಂಗಾಯತರು ಈ ಬಾರಿ ಅವರನ್ನು ಸೋಲಿಸುತ್ತಾರೆ. ಅವರ ಅಧಿಕಾರದ ಅವಧಿಯಲ್ಲಿ 20 ಮಂದಿ ಹಿಂದೂ ಯುವಕರ ಕಗ್ಗೊಲೆ ನಡೆದಿದೆ. ಹೀಗಾಗಿ ಮುಸ್ಲಿಮರು ಅವರನ್ನು ಬೆಂಬಲಿಸುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಸಿಎಂ ಆಗೋದು ಪಕ್ಕಾ : ತೇಜಸ್ವಿ ಸೂರ್ಯ
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಗೆ (Assembly Election) ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಕೋಲಾರ (Kolara) ಹಾಗೂ ವರುಣಾ (Varuna) ಕ್ಷೇತ್ರಗಳ ಪೈಕಿ ಎಲ್ಲಿ ಸ್ಪರ್ಧೆಗೆ ನಿಲ್ಲುತ್ತಾರೆ ಎಂಬುದು ಭಾರೀ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದರೆ ಇದರ ಬೆನ್ನಲ್ಲೆ ಸಿದ್ದರಾಮಯ್ಯ ಈ ಎರಡೂ ಕ್ಷೇತ್ರಗಳನ್ನು ಪಕ್ಕಕ್ಕಿಟ್ಟು ಈಗ ಬಾದಾಮಿಯಲ್ಲಿ (Badami) ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಕೋಲಾರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಗೊಂದಲವಿರುವ ನಡುವೆಯೇ ಸಿದ್ದರಾಮಯ್ಯ ಇದೀಗ ಬಾದಾಮಿ ಪ್ರವಾಸಕ್ಕೆ ಮುಂದಾಗುತ್ತಿದ್ದಾರೆ. ಶುಕ್ರವಾರ ಬಾದಾಮಿಗೆ ತೆರಳಲಿರುವ ಸಿದ್ದರಾಮಯ್ಯ ಅಲ್ಲಿ 500 ಕೋಟಿ ರೂ. ವೆಚ್ಚದ ಬಾದಾಮಿ-ಕೆರೂರು ಶಾಶ್ವತ ಕುಡಿಯವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಿದ್ದಾರೆ.
ಸ್ವಕ್ಷೇತ್ರದಲ್ಲಿ ನಡೆಯಲಿರಯವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಬಾಗಿಯಾಗುವುದರಲ್ಲಿ ಯಾವುದೇ ವಿಶೇಷ ಇಲ್ಲ. ಆದರೆ ಈ ಕಾರ್ಯಕ್ರಮದ ಬಳಿಕ ರೋಡ್ ಶೋ (Road Show) ನಡೆಸಲಿದ್ದಾರೆ. ಈ ರೋಡ್ ಶೋ ನಡೆಸಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರಾ ಎಂಬ ಪ್ರಶ್ನೆ ಎದ್ದಿದೆ. ಭರ್ಜರಿ ರೋಡ್ ಶೋಗೆ ಸಿದ್ಧತೆಗಳನ್ನು ಮಾಡಲಾಗಿದ್ದು, ಸಿದ್ದರಾಮಯ್ಯ ಅವರ ಈ ನಡೆ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸುತ್ತಿದೆ. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್
ಬಾದಾಮಿ ನಗರದ ರಾಮದುರ್ಗ ಕ್ರಾಸ್‌ನಿಂದ ಎಪಿಎಂಸಿ ಆವರಣದ ವರೆಗೆ ರೋಡ್ ಶೋ ನಡೆಸಲಿದ್ದಾರೆ. ಸಿದ್ದರಾಮಯ್ಯನವರ ಈ ನಡೆಯಿಂದ ಪರೋಕ್ಷವಾಗಿ ಬಾದಾಮಿ ಮತದಾರರ ಮನಸ್ಥಿತಿ ಅಳೆಯಲು ಅವರು ಮುಂದಾಗಿದ್ದಾರಾ ಎಂಬ ಪ್ರಶ್ನೆ ಮೂಡುತ್ತಿದೆ.
ಈ ಬಾರಿ ಕೋಲಾರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಬಹಿರಂಗವಾಗಿ ಘೋಷಣೆ ಮಾಡಿದ್ದ ಸಿದ್ದರಾಮಯ್ಯ ಬಳಿಕ ಯು ಟರ್ನ್ ಹೊಡೆದು ವರುಣಾದಲ್ಲಿ ಕಣಕ್ಕಿಳಿಯಲು ಚಿಂತಿಸಿದ್ದರು. ಆದರೆ ಮತ್ತೆ ಸಿಎಂ ಆಗಬೇಕೆಂದು ಕನಸು ಕಾಣುತ್ತಿರುವ ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಗೊಂದಲಕ್ಕೆ ಒಳಗಾಗಿದ್ದಾರೆ. ಇದರ ನಡುವೆಯೇ ಹಲವು ಕ್ಷೇತ್ರಗಳಿಂದ ಅವರಿಗೆ ಆಹ್ವಾನಗಳೂ ಬರತೊಡಗಿವೆ. ಇದನ್ನೂ ಓದಿ: ಯಾವುದೇ ಬೌಲಿಂಗ್ ಬಂದರೂ ಉತ್ತಮ ಸ್ಕೋರ್ ಮಾಡ್ತೇನೆ – ಪ್ರೀತಂ ಗೌಡ
ಈ ಬಾರಿ ನಾನು ಬಾದಾಮಿಯಿಂದ ಸ್ಪರ್ಧೆ ಮಾಡುವುದಿಲ್ಲ. ಬೆಂಗಳೂರಿನಿಂದ ಬಾದಾಮಿ ಬಹಳ ದೂರದಲ್ಲಿದೆ. ಬೆಂಗಳೂರು ಹತ್ತಿರದಲ್ಲಿರುವ ಕ್ಷೇತ್ರದಲ್ಲಿ ಈ ಬಾರಿ ನಿಲ್ಲುತ್ತೇನೆ. ಹೀಗಾಗಿ ವರುಣಾ ಇಲ್ಲವೇ ಕೋಲಾರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದರು.
ಬಾಗಲಕೋಟೆ: ಬಾದಾಮಿ ಕ್ಷೇತ್ರದಲ್ಲಿ ಈಗಾಗಲೇ ನಾಲ್ಕು ಜನ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ನಾನು ಸೇರಿ ಐದನೆಯವನು. ಎಲ್ಲರೂ ಸೇರಿಕೊಂಡು ಪಾಂಡವರಂತೆ (Pandavas) ಕಾಂಗ್ರೆಸ್ (Congress) ಕೌರವರ (Kauravas) ಸೇನೆಯನ್ನು ಸದೆಬಡಿಯುತ್ತೇವೆ ಎಂದು ಸಚಿವ ಶ್ರೀರಾಮುಲು (Sriramulu) ಹೇಳಿದ್ದಾರೆ.
ಬಾದಾಮಿಯಲ್ಲಿ (Badami) ನಡೆದ ಎಸ್ಟಿ ಸಮಾವೇಶದಲ್ಲಿ ಮಾತನಾಡಿದ ಅವರು, ನಾಲ್ಕು ಜನ ಬಾದಾಮಿ ಟಿಕೆಟ್ ಆಕಾಂಕ್ಷಿಗಳಿದ್ದರೂ ನಾವೆಲ್ಲ ಪಾಂಡವರಂತೆ ಅಣ್ಣತಮ್ಮಂದಿರ ಹಾಗೆ ಇದ್ದೇವೆ ಎಂದು ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಎಲ್ಲೆಲ್ಲಿ ಪಂಚ್ ಕೊಡ್ಬೇಕು ಅನ್ನೋದ್ರಲ್ಲಿ ಮೋದಿ ಮಾಸ್ಟರ್ : ಸುಮಲತಾ