ಬಾಗಲಕೋಟೆ: ಜಿಲ್ಲೆಯ ಬಾದಾಮಿ ತಾಲೂಕಿನ ಚಿಕ್ಕಮುಚ್ಚಳಗುಡ್ಡದಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ಕ್ವಾರಂಟೈನ್ ಆಗಿರುವ ಸೋಂಕಿತರ ಗೋಳು ಕೇಳೋರೆ ಇಲ್ಲ ಎನ್ನುವಂತಾಗಿದೆ.
ಕೇರ್ ಸೆಂಟರ್ ನಲ್ಲಿ 40 ಜನರಿಗೆ ಮೂರು ಬಾತ್ ರೂಮ್, ಶೌಚಾಲಯಗಳಿವೆ. ಜೊತೆಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಸ್ನಾನಕ್ಕೆ ಕೇವಲ ನಾಲ್ಕು ಬಕೆಟ್ ಗಳು ಮಾತ್ರ ನೀಡಲಾಗಿದೆ. ಹಾಗಾಗಿ ಸೋಂಕಿತರು ಶೌಚಾಲಯ ಹಾಗೂ ಸ್ನಾನಕ್ಕಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಲ್ಲದೆ ಮಕ್ಕಳಿಗೆ ಹಾಲು ವಿತರಣೆ ಮಾಡದ ಹಿನ್ನೆಲೆ ಕಂದಮ್ಮಗಳ ಆಕ್ರಂದನ ಹೆತ್ತವರ ನಿದ್ದೆಗೆಡಿಸಿದೆ.
ಮತ್ತೊಂದೆಡೆ ಕೋವಿಡ್ ಸೋಂಕಿತರು ಬಳಸಿದ ಬೆಡ್ ಸ್ಯಾನಿಟೈಸ್ ಮಾಡುತ್ತಿಲ್ಲ. ನಂತರ ಬರುವ ಸೋಂಕಿತರಿಗೆ ಅದೇ ಬೆಡ್ ನೀಡಲಾಗುತ್ತಿದೆ. ಸಮರ್ಪಕ ಊಟ ಸಿಗುತ್ತಿಲ್ಲ ಎಂದು ಕ್ವಾರಂಟೈನ್ ಆಗಿರುವ ಸೋಂಕಿತರು ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ. ಅಲ್ಲದೆ ನಮ್ಮನ್ನು ಮನೆಗೆ ಕಳುಹಿಸಿ. ನಾವು ಅಲ್ಲೇ ಕ್ವಾರಂಟೈನ್ ಆಗುತ್ತೇವೆ ಎಂದು ಹೇಳುತ್ತಿದ್ದಾರೆ.
ಬಾಗಲಕೋಟೆ: ಸಮಸ್ಯೆ ಹೇಳಿದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾಜಿ ಸಿಎಂ, ಬದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಬಲವಂತವಾಗಿ ವೇದಿಕೆಯಿಂದ ಕೆಳಗೆ ಇಳಿಸಿದ್ದಾರೆ.
ಜಿಲ್ಲೆಯ ಬದಾಮಿ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಅಯೋಜಿಸಲಾಗಿತ್ತು. ಈ ಸಭೆಗೆ ಕ್ಷೇತ್ರದ ಶಾಸಕರಾಗಿರುವ ಸಿದ್ದರಾಮಯ್ಯ ಸಹ ಭಾಗಿಯಾಗಿದ್ದರು. ವೇದಿಕೆಯಲ್ಲೇ ಸಿದ್ದರಾಮಯ್ಯನವರ ಎದುರೇ ಕಿತ್ತಲಿ ಗ್ರಾಮದ ಗ್ರಾಪಂ ಸದಸ್ಯ ಸಂಗಣ್ಣ ಜಾಬಣ್ಣವರ್ ಅಸಮಧಾನ ಹೊರಹಾಕಿದರು.
ಯಾರೂ ಸಹ ಹಳ್ಳಿ ಭಾಗದ ಕಡೆಗೆ ಬಂದಿಲ್ಲ. ನಮ್ಮ ಗ್ರಾಮದ ಆಶ್ರಯ ಮನೆಗಳು ಹಾಳಾಗಿ ಹೋಗಿವೆ. ಸಿದ್ದರಾಮಯ್ಯನವರು ಬಂದು ಪಿಡಿಒಗಳಿಗೆ ಎಚ್ಚರಿಕೆ ನೀಡಿದರೂ ಏನು ಬದಲಾವಣೆಯಾಗಿಲ್ಲ. ಹಳ್ಳಿಗಳ ಕಡೆಗೆ ಬಂದು ಜನ್ರು ಸಮಸ್ಯೆಯನ್ನ ಆಲಿಸಬೇಕು ಎಂದು ಭಾಷಣದದಲ್ಲಿ ಸಂಗಣ್ಣ ಜಾವಣ್ಣವರ್ ಹೇಳಿದರು.
ಸಂಗಣ್ಣ ಜಾವಣ್ಣವರ್ ಸಮಸ್ಯೆ ಹೇಳುತ್ತಿದ್ದಂತೆ ಕೋಪಗೊಂಡ ಸಿದ್ದರಾಮಯ್ಯನವರು ಸದಸ್ಯನ ಬಳಿ ಬಂದು ಬಲವಂತವಾಗಿ ವೇದಿಕೆಯಿಂದ ಕೆಳಗೆ ಇಳಿಸಿದರು. ದಿಢೀರ್ ಘಟನೆಯಿಂದ ಕಾರ್ಯಕ್ರಮದಲ್ಲಿ ಗದ್ದಲ ಉಂಟಾಯಿತು.
-ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ?
-ಬಾದಾಮಿ ಕ್ಷೇತ್ರದ ಜನರಲ್ಲಿ ಕ್ಷಮೆ ಕೇಳಿದ ಮಾಜಿ ಸಿಎಂ
ಬೆಂಗಳೂರು: ಉತ್ತರ ಕರ್ನಾಟಕದ ಜನ ಪ್ರವಾಹದ ಸಂಕಷ್ಟದಲ್ಲಿ ಸಿಲುಕಿದ್ರೆ, ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರೊಟ್ಟಿ ಬಡಿಯುತ್ತಾ ಕುಳಿತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇಡೀ ರಾಜ್ಯ ಅತಿವೃಷ್ಟಿಯಿಂದ ತತ್ತರಿಸಿಹೋಗಿದೆ. ಬಿಜೆಪಿ ಸರ್ಕಾರ ಬೆಂಗಳೂರು ಗಲಭೆಯ ಬೆಂಕಿಯಲ್ಲಿ ರಾಜಕೀಯದ ರೊಟ್ಟಿ ಬಡಿಯುತ್ತಾ ಕೂತಿದೆ. ನೊಂದ ಜನರ ಗೋಳು ಅರಣ್ಯರೋದನ. ಅತಿವೃಷ್ಟಿಯ ಪರಿಹಾರದಲ್ಲಿ ಕಳೆದ ವರ್ಷದ ವೈಫಲ್ಯ. ಈ ಬಾರಿ ಜನರ ಕಷ್ಟ-ಕಾರ್ಪಣ್ಯಗಳನ್ನು ದುಪ್ಪಟ್ಟುಗೊಳಿಸಿದೆ.
ಗೃಹಸಚಿವರು ಅತಿವೃಷ್ಟಿ ಸಮೀಕ್ಷೆಗೆ ಪ್ರವಾಸ ಮಾಡುತ್ತಿದ್ದಾರೆ. ಕಂದಾಯ ಸಚಿವರು ಬೆಂಗಳೂರಿನಲ್ಲಿ ಕೂತು ಕಾವಲಭೈರಸಂದ್ರ ಗಲಭೆ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ. ಕಂದಾಯ ಸಚಿವರಿಗೆ ಬೆಂಗಳೂರಿನಲ್ಲೇನು ಕೆಲಸ? ಸಿಎಂ ಯಡಿಯೂರಪ್ಪನವರೇ ಮೊದಲು ಇವರನ್ನು ಪ್ರವಾಹಪೀಡಿತ ಪ್ರದೇಶಕ್ಕೆ ಕಳಿಸಿಕೊಡಿ ಎಂದು ಆಗ್ರಹಿಸಿದ್ದಾರೆ.
ಕ್ಷೇತ್ರದ ಜನರಲ್ಲಿ ಕ್ಷಮೆ: ನನ್ನ ಕ್ಷೇತ್ರವಾದ ಬಾದಾಮಿಯ ಜನ ಪ್ರವಾಹದಿಂದಾಗಿ ಸಂಕಷ್ಟದಲ್ಲಿದ್ದಾರೆ. ಕೊರೋನಾ ಸೋಂಕಿನ ನಂತರ ಕಡ್ಡಾಯ ವಿಶ್ರಾಂತಿಯಲ್ಲಿರುವುದರಿಂದ ಕ್ಷೇತ್ರಕ್ಕೆ ಭೇಟಿ ನೀಡುವ ಸ್ಥಿತಿಯಲ್ಲಿ ನಾನಿಲ್ಲ. ಇದಕ್ಕಾಗಿ ಕ್ಷಮೆ ಇರಲಿ. ಅಧಿಕಾರಿಗಳು ಮತ್ತು ನಮ್ಮ ಪಕ್ಷದ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ತಿಳಿಸಿದ್ದಾರೆ.
ಬಾಗಲಕೋಟೆ: ಕೋವಿಡ್-19 ಕರ್ತವ್ಯಕ್ಕೆ ಆಗಮಿಸುವ ವೇಳೆ ಬೈಕ್‍ನಿಂದ ಬಿದ್ದ ಅಂಗನವಾಡಿ ಕಾರ್ಯಕರ್ತೆ ಮೃತಟಪಟ್ಟ ಘಟನೆ ಬದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ನಡೆದಿದೆ.
ನಂದಿಕೇಶ್ವರ ಗ್ರಾಮದ ಪ್ರಭಾವತಿ ಪೂಜಾರಿ (52) ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆ. ಪ್ರಭಾವತಿ ಅವರು ಬಾದಾಮಿ ಪಟ್ಟಣದಲ್ಲಿ ಮನೆ ಮಾಡಿ ಕೊಂಡಿದ್ದರು. ನಿತ್ಯವೂ ಕೆಲಸಕ್ಕಾಗಿ ನಂದಿಕೇಶ್ವರ ಗ್ರಾಮಕ್ಕೆ ಬರುತ್ತಿದ್ದರು. ಮೇ 18ರಂದು ನಂದಿಕೇಶ್ವರ ಗ್ರಾಮಕ್ಕೆ ಬೈಕ್‍ನಲ್ಲಿ ತೆರಳುವ ವೇಳೆ ಮೂರ್ಛೆ ಹೋಗಿ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಮೃತ ಮಹಿಳೆಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಕೋವಿಡ್-19 ಕೆಲಸದ ವೇಳೆ ಮೃತಪಟ್ಟ ಹಿನ್ನೆಲೆ ಪರಿಹಾರ ನೀಡುವಂತೆ ನಂದಿಕೇಶ್ವರ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
-ಬಾಗಲಕೋಟೆಯಲ್ಲಿ ಗರ್ಭಿಣಿಯಿಂದ 13 ಮಂದಿಗೆ ಕೊರೊನಾ ಸೋಂಕು
-ಬೆಂಗಳೂರಿನ ಡೆಲಿವರಿ ಬಾಯ್‍ಗೆ ಕೊರೊನಾ
ಬೆಂಗಳೂರು: ಇಂದು 19 ಮಂದಿಗೆ ಕೊರೊನಾ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 692ಕ್ಕೇರಿಕೆಯಾಗಿದೆ. ಇಂದು ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಇಂದು ಬೆಳಗ್ಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ, ಬಾಗಲಕೋಟೆಯಲ್ಲಿ 13, ಬೆಂಗಳೂರು 2, ದಕ್ಷಿಣ ಕನ್ನಡ 3 ಮತ್ತು ಕಲಬುರಗಿಯಲ್ಲಿ 1 ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ. ಬಾಗಲಕೋಟೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿ (ರೋಗಿ 607)ಯಿಂದಲೇ 13 ಮಂದಿಗೆ ಸೋಂಕು ತಗುಲಿದೆ. ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮಂಗಮ್ಮನಪಾಳ್ಯದ ಕೂಲಿ ಕಾರ್ಮಿಕನಿ(ರೋಗಿ ನಂಬರ್ 654)ಗೆ ಸೋಂಕು ತಗುಲಿರೋದು ದೃಢವಾಗ್ತಿದ್ದಂತೆ ಆತನ ಕುಟುಂಬಸ್ಥರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಕಾರ್ಮಿಕನ ಪುತ್ರ ಮತ್ತು ಪತ್ನಿಗೆ ಸೋಂಕು ತಗುಲಿದೆ. ಕಾರ್ಮಿಕನ ಪುತ್ರ ನಗರದಲ್ಲಿ ಡೆಲಿವರಿ ಬಾಯ್ (ರೋಗಿ ನಂಬರ್ 678) ಆಗಿ ಕೆಲಸ ಮಾಡಿಕೊಂಡಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಇದೀಗ ಆರೋಗ್ಯ ಇಲಾಖೆಗೆ ಡೆಲಿವರಿ ಬಾಯ್ ಟ್ರಾವೆಲ್ ಹಿಸ್ಟರಿ ಪತ್ತೆ ಮಾಡೋದು ಮತ್ತು ಆತನ ಸಂಪರ್ಕದಲ್ಲಿರುವ ಜನರನ್ನು ಪತ್ತೆ ಹಚ್ಚೋದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಸೋಂಕಿತರ ವಿವರ: 1. ರೋಗಿ 674: ದಕ್ಷಿಣ ಕನ್ನಡದ 11 ವರ್ಷದ ಬಾಲಕಿ. ರೋಗಿ ನಂಬರ್ 536ರ ಜೊತೆ ಸಂಪರ್ಕ 2. ರೋಗಿ 675: ದಕ್ಷಿಣ ಕನ್ನಡದ 35 ವರ್ಷದ ಮಹಿಳೆ. ರೋಗಿ 536ರ ಜೊತೆ ಸಂಪರ್ಕದಲ್ಲಿದ್ದರು. 3. ರೋಗಿ 676: ದಕ್ಷಿಣ ಕನ್ನಡದ ಬಂಟ್ವಾಳದ 16 ವರ್ಷದ ಬಾಲಕಿ. ರೋಗಿ ನಂಬರ್ 390ರ ಜೊತೆ ಸಂಪರ್ಕ 4. ರೋಗಿ 677: ಬೆಂಗಳೂರಿನ 40 ವರ್ಷದ ಮಹಿಳೆ. ರೋಗಿ ನಂಬರ್ 654ರ ಜೊತೆ ಸಂಪರ್ಕದಲ್ಲಿದ್ದರು. 5. ರೋಗಿ 678: ಬೆಂಗಳೂರಿನ 25 ವರ್ಷದ ಯುವಕ. ರೋಗಿ ನಂಬರ್ 654ರ ಜೊತೆ ಸಂಪರ್ಕದಲ್ಲಿದ್ದರು. 6. ರೋಗಿ 679: ಕಲಬುರಗಿಯ 52 ವರ್ಷದ ಪುರುಷ. ರೋಗಿ 610ರ ಜೊತೆ ಸಂಪರ್ಕದಲ್ಲಿದ್ದರು. 7. ರೋಗಿ 680: ಬಾಗಲಕೋಟೆಯ ಬದಾಮಿ ತಾಲೂಕಿನ 18 ವರ್ಷದ ಯುವತಿ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ. 8. ರೋಗಿ 681: ಬಾಗಲಕೋಟೆಯ ಬದಾಮಿ ತಾಲೂಕಿನ 45 ವರ್ಷದ ಪುರುಷ. ರೋಗಿ ನಂಬರ್ 607ರ ಜೊತೆ ಸಂಪರ್ಕ. 9. ರೋಗಿ 682: ಬಾಗಲಕೋಟೆಯ ಬದಾಮಿ ತಾಲೂಕಿನ 55 ವರ್ಷದ ಪುರುಷ. ರೋಗಿ ನಂಬರ್ 607ರ ಜೊತೆ ಸಂಪರ್ಕ. 10. ರೋಗಿ 683: ಬಾಗಲಕೋಟೆಯ ಬದಾಮಿ ತಾಲೂಕಿನ 26 ವರ್ಷದ ಯುವಕ. ರೋಗಿ ನಂಬರ್ 607ರ ಜೊತೆ ಸಂಪರ್ಕ.
11. ರೋಗಿ 684: ಬಾಗಲಕೋಟೆಯ ಬದಾಮಿ ತಾಲೂಕಿನ 47 ವರ್ಷದ ಪುರುಷ. ರೋಗಿ ನಂಬರ್ 607ರ ಜೊತೆ ಸಂಪರ್ಕ. 12. ರೋಗಿ 685: ಬಾಗಲಕೋಟೆಯ ಬದಾಮಿ ತಾಲೂಕಿನ 30 ವರ್ಷದ ಮಹಿಳೆ. ರೋಗಿ ನಂಬರ್ 607ರ ಜೊತೆ ಸಂಪರ್ಕ. 13. ರೋಗಿ 686: ಬಾಗಲಕೋಟೆಯ ಬದಾಮಿ ತಾಲೂಕಿನ 15 ವರ್ಷದ ಬಾಲಕ. ರೋಗಿ ನಂಬರ್ 607ರ ಜೊತೆ ಸಂಪರ್ಕ. 14. ರೋಗಿ 687: ಬಾಗಲಕೋಟೆಯ ಬದಾಮಿ ತಾಲೂಕಿನ 40 ವರ್ಷದ ಮಹಿಳೆ. ರೋಗಿ ನಂಬರ್ 607ರ ಜೊತೆ ಸಂಪರ್ಕ. 15. ರೋಗಿ 688: ಬಾಗಲಕೋಟೆಯ ಬದಾಮಿ ತಾಲೂಕಿನ 23 ವರ್ಷದ ಯುವಕ. ರೋಗಿ ನಂಬರ್ 607ರ ಜೊತೆ ಸಂಪರ್ಕ. 16. ರೋಗಿ 689: ಬಾಗಲಕೋಟೆಯ ಬದಾಮಿ ತಾಲೂಕಿನ 10 ವರ್ಷದ ಬಾಲಕ. ರೋಗಿ ನಂಬರ್ 607ರ ಜೊತೆ ಸಂಪರ್ಕ. 17. ರೋಗಿ 690: ಬಾಗಲಕೋಟೆಯ ಬದಾಮಿ ತಾಲೂಕಿನ 32 ವರ್ಷದ ಪುರುಷ.ರೋಗಿ ನಂಬರ್ 607ರ ಜೊತೆ ಸಂಪರ್ಕ. 18. ರೋಗಿ 691: ಬಾಗಲಕೋಟೆಯ ಬದಾಮಿ ತಾಲೂಕಿನ 30 ವರ್ಷದ ಮಹಿಳೆ. ರೋಗಿ ನಂಬರ್ 607ರ ಜೊತೆ ಸಂಪರ್ಕ. 19. ರೋಗಿ 692: ಬಾಗಲಕೋಟೆಯ ಬದಾಮಿ ತಾಲೂಕಿನ 16 ವರ್ಷದ ಬಾಲಕಿ. ರೋಗಿ ನಂಬರ್ 607ರ ಜೊತೆ ಸಂಪರ್ಕ.
ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.
ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ಗರ್ಭಿಣಿಗೆ ಸೋಂಕು ತಗುಲಿರುವ ವಿಷಯ ತಿಳಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕಾರಣ ಕೆಲವು ದಿನಗಳ ಹಿಂದೆ ನಡೆದ ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮದ ಬಹುತೇಕರು ಭಾಗಿಯಾಗಿದ್ದರು. ಗರ್ಭಿಣಿಯ ಪತಿ ಸಾಂಪ್ರದಾಯಿಕ ಕಜ್ಜಾಯ ಭಿಕ್ಷೆಗಾಗಿ ಗ್ರಾಮದ ಪ್ರತಿ ಪ್ರತಿ ಮನೆಗಳಿಗೂ ತೆರಳಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
-ಡಾಣಕಶಿರೂರ ಗ್ರಾಮ ಸಂಪೂರ್ಣ ಸೀಲ್‍ಡೌನ್
-ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಭಾಗಿ
-ಡ್ರೋಣ್ ಕ್ಯಾಮೆರಾದಿಂದ ಹದ್ದಿನ ಕಣ್ಣು
ಬಾಗಲಕೋಟೆ: ಜಿಲ್ಲೆಯ ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.
ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ಗರ್ಭಿಣಿಗೆ ಸೋಂಕು ತಗುಲಿರುವ ವಿಷಯ ತಿಳಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಕಾರಣ ಕೆಲವು ದಿನಗಳ ಹಿಂದೆ ನಡೆದ ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮದ ಬಹುತೇಕರು ಭಾಗಿಯಾಗಿದ್ದರು. ಗರ್ಭಿಣಿಯ ಪತಿ ಸಾಂಪ್ರದಾಯಿಕ ಕಜ್ಜಾಯ ಭಿಕ್ಷೆಗಾಗಿ ಗ್ರಾಮದ ಪ್ರತಿ ಪ್ರತಿ ಮನೆಗಳಿಗೂ ತೆರಳಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಈಗಾಗಲೇ ಗರ್ಭಿಣಿ (ರೋಗಿ ನಂ.607) ಸಂಪರ್ಕದಲ್ಲಿದ್ದ 128 ಜನರನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗಿದೆ. ಎಲ್ಲ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಜಿಲ್ಲಾಡಳಿತ ವರದಿಗಾಗಿ ಕಾಯುತ್ತಿದೆ.
ಬಾಗಲಕೋಟೆ: ನಾನೇನಾದ್ರು ಮುಖ್ಯಮಂತ್ರಿ ಆಗಿದ್ದಿದ್ದರೆ ನೆರೆ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಮನೆ ಮುಂದೆ ಧರಣಿ ಕೂರುತ್ತಿದ್ದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಬಿಜೆಪಿಯವರ ಕಾಲದಲ್ಲಿ ಮಾತೆತ್ತಿದರೆ ದುಡ್ಡಿಲ್ಲ, ದುಡ್ಡಿಲ್ಲ ಅಂತಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರ ವಹಿಸಿಕೊಂಡು ಆರು ತಿಂಗಳು ಕಳೆಯಲಿ. ಆಮೇಲೆ ಬೀದಿಗೆ ಇಳಿದು ಹೋರಾಟ ಮಾಡುತ್ತೇನೆ ಎಂದರು.
ನನ್ನ ಕ್ಷೇತ್ರಕ್ಕೆ ಗೋವನಕೊಪ್ಪ ಪಂಚಾಯಿತಿ ಮಾಡಲು ಸಿಎಂ ಯಡಿಯೂರಪ್ಪ ಅವರು ಮನಸ್ಸು ಮಾಡಲಿಲ್ಲ. ಎಲ್ಲಾ ಫೈಲ್ ಓಕೆ ಆಗಿದ್ದರೂ ಕ್ಯಾನ್ಸಲ್ ಮಾಡಿದರು. ಇರಲಿ, ನಿಮ್ಮೂರನ್ನ ಸ್ವಂತ ಪಂಚಾಯಿತಿ ಮಾಡುತ್ತೇನೆ. ಇದನ್ನು ಬಹಳ ನೋವಿನಿಂದ ಹೇಳುತ್ತಿದ್ದೇನೆ. ಎಂದು ಗೋವನಕೊಪ್ಪ ಗ್ರಾಮಸ್ಥರ ಮುಂದೆ ಅಸಮಾಧಾನ ಹೊರಹಾಕಿದರು.
ಈ ವೇಳೆ ಗ್ರಾಮಸ್ಥನೊಬ್ಬ ಕೆಲಸ ಮಾಡಿ ಅಂತ ಹೇಳಿದ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ನಾನು ಕೊಟ್ಟ ಭರವಸೆಯಂತೆ ಕೆಲಸ ಮಾಡಿದ್ದೇನೆ. ಆದರೂ ಮತ್ತೆ ಸಿಎಂ ಆಗಲು ಬಿಡಲಿಲ್ಲ. ಕೆಲಸ ಮಾಡದೇ ಇದ್ದರೂ ಬಿಜೆಪಿಗೆ ಮತ ಹಾಕುತ್ತಿರಾ ಎಂದು ಸೋಲಿನ ಬೇಸರ ಹೊರಹಾಕಿದರು.
ಬಾದಾಮಿ ಕ್ಷೇತ್ರದಲ್ಲಿ ಪಂಚಾಯಿತಿ ಮಾಡಲು ಸಮ್ಮಿಶ್ರ ಸರ್ಕಾರದಲ್ಲಿ ಕೆಲಸ ಮಾಡಿಸಿದ್ದೆ. ಸಿಎಂ ಯಡಿಯೂರಪ್ಪ ಬಂದು ಫೈಲ್ ರಿಜೆಕ್ಟ್ ಮಾಡಿಬಿಟ್ಟ. ಸಿಎಂ ಯಡಿಯೂರಪ್ಪ, ಸಚಿವ ಕೆ.ಎಸ್.ಈಶ್ವರಪ್ಪ ಎಲ್ಲಾ ಅಪ್ಪಗಳು ಕೂಡಿಬಿಟ್ಟಿದ್ದಾರೆ. ಏನು ಮಾಡುವುದು ಕೆಲಸ ಮಾಡಿ ಅಂತ ಹೇಳುತ್ತೇನೆ. ಆದರೂ ಮಾಡುತ್ತಿಲ್ಲ ಎಂದು ಹೇಳಿದರು.
ನೆರೆ ಸಂತ್ರಸ್ತರಿಗೆ ಈವರೆಗೂ ಪರಿಹಾರ ಹಂಚಿಲ್ಲ. ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಬೇಡಿಕೆ ಇಟ್ಟಿತ್ತು. ಆದರೆ ಕೇಂದ್ರ ಸರ್ಕಾರ 1,863 ಕೋಟಿ ರೂ. ಕೊಟ್ಟಿದೆ. ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಹಾಕಿದ್ದಾರೆ. ಈ ರಾಜ್ಯದಿಂದ 25 ಸಂಸದರು ಗೆದ್ದಿದ್ದಾರೆ. ಒಮ್ಮೆಯಾದರೂ ಕೇಂದ್ರದ ವಿರುದ್ಧ ಪರಿಹಾರ ಕೊಡಿ ಅಂತ ಗಟ್ಟಿ ಧ್ವನಿ ಎತ್ತಿದ್ದಾರಾ? ಆದರೂ ನೀವು ಅವರನ್ನು ಎರಡು, ಮೂರು ಲಕ್ಷ ಅಂತರದಿಂದ ಗೆಲ್ಲಿಸುತ್ತೀರಿ. ಅದು ಹೇಗೆ? ನಾನು ಸಿಎಂ ಆಗಿದ್ದಿದ್ದರೆ ನೆರೆ ಪರಿಹಾರಕ್ಕಾಗಿ ಪ್ರಧಾನಿ ಮೋದಿ ಮನೆ ಮುಂದೆ ಧರಣಿ ಕುಳಿತುಕೊಳ್ಳುತ್ತಿದ್ದೆ ಎಂದರು.
ಇದಕ್ಕೂ ಮುನ್ನ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಗೋವನಕೊಪ್ಪ ಗ್ರಾಮದ ವ್ಯಾಪ್ತಿಯ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು. ಈ ವೇಳೆ ಗ್ರಾಮದ ಬ್ರಹ್ಮಾನಂದ ಮಠಕ್ಕೆ ಭೇಟಿ ನೀಡಿ ಬ್ರಹ್ಮಾನಂದ ಸ್ವಾಮಿಗಳ ಗದ್ದುಗೆಗೆ ನಮಿಸಿದರು.
ಬಾದಾಮಿ ವಿಧಾನಸಭೆ ಕ್ಷೇತ್ರದ ಗೋವಿನಕೊಪ್ಪ ಗ್ರಾಮದಲ್ಲಿ ರೂ.18 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದೆ. pic.twitter.com/qzxYz4OevR
ಬಾಗಲಕೋಟೆ: ಯುವಕರಿಬ್ಬರ ಮಧ್ಯೆ ನಡೆದ ಜಗಳ ಗುಂಪು ಘರ್ಷಣೆಗೆ ಕಾರಣವಾಗಿ ಪೊಲೀಸರು ಲಘುಲಾಠಿ ಪ್ರಹಾರ ಮಾಡಿದ್ದಾರೆ.
ಬಾದಾಮಿ ಪಟ್ಟಣದಲ್ಲಿ ಈ ಘಟನೆ ಜರುಗಿದ್ದು, ಬೈಕ್ ಸೈಡ್ ತೆಗೆದುಕೊಳ್ಳುವ ವಿಚಾರಕ್ಕೆ ಇಬ್ಬರು ಯುವಕರ ಮಧ್ಯೆಗಿನ ಜಗಳ ಗುಂಪು ಘರ್ಷಣೆಗೆ ಕಾರಣವಾಗಿದೆ. ಬಾದಾಮಿ ಪಟ್ಟಣದಲ್ಲಿ ಯುವಕರಿಬ್ಬರು ಬೈಕ್ ಸೈಡ್ ತಗೆದುಕೊಳ್ಳುವ ವಿಚಾರವಾಗಿ ಪ್ರತಿಷ್ಟೆಗೆ ಬಿದ್ದಿದ್ದಾರೆ, ನಂತರ ಜಗಳ ಮಾಡಿಕೊಂಡಿದ್ದಾರೆ.
ಇದೇ ವಿಚಾರ ಅವರಿಬ್ಬರ ಏರಿಯಾಗಳ ಜನರ ನಡುವೆ ಘರ್ಷಣೆಗೆ ಕಾರಣವಾಗಿದೆ. ಬಾದಾಮಿ ಪಟ್ಟಣದ ತಟಕೋಟಿಗಲ್ಲಿ ಹಾಗೂ ಕಿಲ್ಲಾ ಗಲ್ಲಿಯ ಜನರೇ ಆ ಯುವಕರಿಂದಾಗಿ ಗುಂಪು ಘರ್ಷಣೆ ಮಾಡಿದ್ದಾರೆ. ಸುದ್ದಿ ತಿಳಿದ ಬಾದಾಮಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಗುಂಪು ಚದುರಿಸಲು ಲಘುಲಾಠಿ ಪ್ರಹಾರ ಸಹ ನಡೆಸಿದ್ದಾರೆ. ಸದ್ಯ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಇದ್ದು ಪೊಲೀಸರು ಅಲ್ಲೇ ಬೀಡು ಬಿಟ್ಟಿದ್ದಾರೆ.
ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬಾದಾಮಿಗೆ ಆಗಮಿಸಿದ್ದು, ಮೊದಲಿಗೆ ಮಲಪ್ರಭಾ ಪ್ರವಾಹಕ್ಕೆ ತುತ್ತಾಗಿರುವ ಕರ್ಲಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.
ಸಿದ್ದರಾಮಯ್ಯ ಅವರು ಆಗಮಿಸುತ್ತಿದಂತೆ ಕರ್ಲಕೊಪ್ಪ ಗ್ರಾಮದಲ್ಲಿ ಮಳೆ ಆರಂಭವಾಯಿತು. ಮಳೆಯಿಂದ ರಕ್ಷಣೆಗಾಗಿ ಅಲ್ಲಿಯೇ ಇದ್ದ ದೇವಸ್ಥಾನದೊಳಗೆ ಸಿದ್ದರಾಮಯ್ಯ ತೆರಳಿದರು. ಆ ಬಳಿಕ ಅಲ್ಲಿಯೇ ಕುಳಿತು, ನೆರೆ ಸಂತ್ರಸ್ತರ ಅಹವಾಲು ಆಲಿಸಿದರು.
ಸಿದ್ದರಾಮಯ್ಯ ಅವರ ಎದುರು ತಮ್ಮ ಅಳಲು ತೊಡಿಕೊಂಡ ಗ್ರಾಮಸ್ಥರು, ಮಳೆಯಿಂದ ನೆಲಕ್ಕೆ ಉರುಳಿದ ಮನೆಗಳ ಸರ್ವೆಯಲ್ಲಿ ಲೋಪವಾಗಿದೆ. ಅಲ್ಲದೇ ತಾತ್ಕಾಲಿಕ ಪರಿಹಾರದಲ್ಲಿ ದೋಷದ ಉಂಟಾಗಿದೆ ಎಂದು ಅಳಲು ತೋಡಿಕೊಂಡರು. ಈ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿದ್ದರಾಮಯ್ಯ ಅವರು, ತಾತ್ಕಾಲಿಕ ಪರಿಹಾರ ಪಡಿತರ ಚೀಟಿ ಆಧರಿಸಿ ವಿತರಿಸಬೇಕು ಎಂದರು. ಈ ವೇಳೆ ಸಿದ್ದರಾಮಯ್ಯರ ಸೂಚನೆಗಳನ್ನು ಪಡೆದ ಅಧಿಕಾರಿ ಕ್ರಮಕೈಗೊಳ್ಳುವುದಾಗಿ ಹೇಳಿದರು. ಆದರೆ ಅಧಿಕಾರಿಯ ಉತ್ತರದಿಂದ ಸಂತೃಪ್ತರಾಗದ ಅವರು, ನಾನು ಹೇಳೋದನ್ನ ಬರೀ ಕೇಳಬೇಡಯ್ಯ, ಏನ್ ಹೇಳ್ತೀನೋ ಅದನ್ನು ಬರೆದುಕೊ. ಸರ್ವೆ ಆದ ಮೇಲೂ ಹಲವರ ಮನೆ ಬಿದ್ದಿವೆ. ಆದ್ದರಿಂದ ರೀ ಸರ್ವೆ ಆಗಬೇಕು. ಒಂದೇ ಮನೆಯಲ್ಲಿ ಅಣ್ಣ-ತಮ್ಮ ಇದ್ದರೆ ಪರಿಹಾರ ಹಂಚಿ, ಒಬ್ಬರಿಗೆ ಪರಿಹಾರ ಕೊಟ್ಟರೆ ಮನೆಯಲ್ಲಿ ಉಳಿದವರು ನಾಮ ಹಾಕಿಕೊಳ್ಳಬೇಕಾ? ಎಂದು ತರಾಟೆಗೆ ತೆಗೆದುಕೊಂಡರು.
ಬಿದ್ದ ಮನೆಯಲ್ಲಿ ಎರಡು ಹಂತದ ಪರಿಹಾರ ನೀಡಿ, ಶೇ. 25ಕ್ಕಿಂತ ಕಡಿಮೆ ಬಿದ್ದಿದ್ದರೆ 50 ಸಾವಿರ ರೂ. ಹಾಗೂ ಶೇ.25 ಕ್ಕಿಂತ ಹೆಚ್ಚು ಹಾನಿಯಾಗಿದ್ದರೆ ಎಲ್ಲಾ ಮನೆಗಳಿಗೂ ಐದು ಲಕ್ಷ ರೂ. ಪರಿಹಾರ ನೀಡಿ. ಇದಕ್ಕೆ ವಿಧಾನಸೌಧದಲ್ಲಿ ಸರ್ಕಾರವೂ ಒಪ್ಪಿಗೆ ನೀಡಿದೆ. ಆ ಪ್ರಕಾರವೇ ಸರ್ವೆ ಮಾಡಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬಾಗಲಕೋಟೆ: ಬ್ರಹ್ಮಕುಮಾರಿ ಈಶ್ವರಿ ಆಶ್ರಮದ ಸನ್ಯಾಸಿನಿಯರಿಂದ ರಾಖಿ ಕಟ್ಟಿಸಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುಂಕುಮ ಹಚ್ಚಲು ಬಂದಾಗ ತಡೆದು ಮತ್ತೆ ಚರ್ಚೆಯ ವಿಷಯವಾಗಿದ್ದಾರೆ.
ಬಾದಾಮಿಯ ಕೃಷ್ಣಾ ಹೆರಿಟೇಜ್ ಹೊಟೆಲ್ ಬಳಿ ಸನ್ಯಾಸಿನಿ ಸಿದ್ದರಾಮಯ್ಯ ಅವರಿಗೆ ರಾಖಿ ಕಟ್ಟಿದರು. ಈ ವೇಳೆ ಕುಂಕುಮ ಇಡಲು ಬಂದಾಗ ಬೇಡ ಎಂದು ಹೇಳಿ ಸಿದ್ದರಾಮಯ್ಯ ಅವರು ನಿರಾಕರಿಸಿದ್ದಾರೆ. ಬಳಿಕ ಅವರ ಸಮಸ್ಯೆಯನ್ನು ಆಲಿಸಿ ಬಗೆಹರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಈ ಹಿಂದೆ ಕುಂಕುಮ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ಕೊಟ್ಟು ಸಿದ್ದರಾಮಯ್ಯ ಅವರು ಭಾರೀ ಚರ್ಚೆಗೆ ಗ್ರಾಸವಾಗಿದ್ದರು. ಅವರ ಹೇಳಿಕೆಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಸಿಡಿದೆದ್ದಿದ್ದರು. ಟ್ವೀಟ್ ಮಾಡಿ, ಬಿಜೆಪಿಯಯವರು ಕುಂಕುಮ ನಾಮ, ಕಾವಿ ಬಟ್ಟೆಗಳನ್ನು ದುರುಪಯೋಗ ಮಾಡಿಕೊಂಡಿದ್ದರಿಂದ ಸಾಮಾನ್ಯ ಜನರು ಕುಂಕುಮಧಾರಿಯನ್ನು ನೋಡಿದಾಗ ಭಯ ಹುಟ್ಟದೆ, ಗೌರವ ಹುಟ್ಟುತ್ತಾ ಎಂದು ಟ್ಟಿಟ್ಟರ್ ನಲ್ಲಿ ಪ್ರಶ್ನೆ ಮಾಡಿದ್ದರು.
ಕುಂಕುಮ ನಾಮ, ಕಾವಿ ಬಟ್ಟೆಗಳೆಲ್ಲ ಭಾರತೀಯ ಧಾರ್ಮಿಕ ಪರಂಪರೆಯ ಭಾಗ, ಅದಕ್ಕೊಂದು ಪಾವಿತ್ರ್ಯ ಇತ್ತು. ಆದರೆ ಯಾವಾಗ ಬಿಜೆಪಿ ನಾಯಕರೆಲ್ಲ ಇವುಗಳನ್ನೆಲ್ಲ ರಾಜಕೀಯಕ್ಕೆ ದುರುಪಯೋಗ ಮಾಡಿಕೊಳ್ಳಲು ಹೊರಟರೋ, ಅದ ನಂತರ ಕುಂಕುಮ, ಕಾವಿ ಹಾಕಿಕೊಂಡವರನ್ನು ಜನತೆ ಸಂಶಯ-ಭಯದಿಂದ ನೋಡುವಂತಾಗಿದೆ. ಉತ್ತರ ಪ್ರದೇಶದಲ್ಲೊಬ್ಬರು ಬಿಜೆಪಿ ಮುಖ್ಯಮಂತ್ರಿ ಇದ್ದಾರೆ. ಮೈತುಂಬಾ ಕಾವಿ ಬಟ್ಟೆ, ಮುಖತುಂಬಾ ಕುಂಕುಮ ಬಳಿದುಕೊಳ್ಳುತ್ತಾರೆ. ಆದರೆ ಅವರ ವಿರುದ್ಧ ಹತ್ತಾರು ಕ್ರಿಮಿನಲ್ ಕೇಸ್ ಗಳಿವೆ. ಈ ಕುಂಕುಮಧಾರಿಯನ್ನು ನೋಡಿದಾಗ ಜನರಿಗೆ ಭಯ ಹುಟ್ಟದೆ, ಗೌರವ ಹುಟ್ಟುತ್ತಾ ಎಂದು ಪ್ರಶ್ನಿಸಿದ್ದರು.
ಹೌದು, ತಿಲಕ ಇಟ್ಟುಕೊಂಡವರನ್ನು ನೋಡಿದರೆ ಭಯವಾಗುತ್ತೆ ಎಂದು ಹೇಳಿರುವುದು ನಿಜ. ಬಹಳಷ್ಟು ಕ್ರಿಮಿನಲ್ ಗಳು ತಮ್ಮ ರಕ್ಷಣೆಗಾಗಿ ತಿಲಕ ಧರಿಸಿ ಮೆರೆದಾಡುತ್ತಿದ್ದಾರೆ. ಇವರು ಧರ್ಮದ್ರೋಹಿಗಳು ಮಾತ್ರವಲ್ಲ, ಸಮಾಜ ದ್ರೋಹಿಗಳು ಕೂಡಾ. ಅವರನ್ನು ದೃಷ್ಟಿಯಲ್ಲಿಟ್ಟುಕೊಂಡೇ ಹೇಳಿದ್ದು. ಏನಿವಾಗ? ನಾನು ಬಿಜೆಪಿ ನಾಯಕರಿಗಿಂತ ಒಳ್ಳೆಯ ಹಿಂದೂ. ನಾನೆಂದೂ ಅವರಂತೆ ತಿಲಕ, ಕಾವಿ, ಧರ್ಮಗಳನ್ನು ರಾಜಕೀಯಕ್ಕೆ ದುರುಪಯೋಗ ಪಡಿಸಿಕೊಂಡಿಲ್ಲ. ನನ್ನದು ಜನಪರ ರಾಜಕಾರಣ, ದೇವರು, ಧರ್ಮ ಎಲ್ಲ ನನ್ನ ಮನೆಯೊಳಗಿನ ನಂಬಿಕೆ ಎಂದು ಹೇಳಿ ಬಿಜೆಪಿ ವಿರುದ್ಧ ಕಿಡಿಕಾರಿದ್ದರು.