Tag: Badruddin Ajmal

  • ವಕ್ಫ್‌ ಜಾಗದಲ್ಲಿ ಹೊಸ ಸಂಸತ್‌ ಭವನ ನಿರ್ಮಾಣ: ಬದ್ರುದ್ದೀನ್ ಅಜ್ಮಲ್ ವಿವಾದ

    ವಕ್ಫ್‌ ಜಾಗದಲ್ಲಿ ಹೊಸ ಸಂಸತ್‌ ಭವನ ನಿರ್ಮಾಣ: ಬದ್ರುದ್ದೀನ್ ಅಜ್ಮಲ್ ವಿವಾದ

    ಗುವಾಹಟಿ: ವಕ್ಫ್‌ ಆಸ್ತಿಯ (Waqf Land) ಜಾಗದಲ್ಲಿ ಹೊಸ ಸಂಸತ್ತಿನ (Parliament) ಕಟ್ಟಡವನ್ನು ನಿರ್ಮಿಸಲಾಗಿದೆ ಎಂದು ಹೇಳುವ ಮೂಲಕ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Ajmal) ಅವರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಸತ್‌ ಕಟ್ಟಡ, ರಾಷ್ಟ್ರ ರಾಜಧಾನಿಯ ವಸಂತ ವಿಹಾರ್ ಸುತ್ತಮುತ್ತ ವಿಮಾನ ನಿಲ್ದಾಣದವರೆಗಿನ (Airport) ಪ್ರದೇಶ ವಕ್ಫ್‌ ಆಸ್ತಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ಇಸ್ರೇಲ್‌ ರಾಯಭಾರಿ ಭೇಟಿ

     

    ಅನುಮತಿ ಇಲ್ಲದೆ ವಕ್ಫ್ ಭೂಮಿಯನ್ನು ಬಳಸುವುದು ಸರಿಯಲ್ಲ. ವಕ್ಫ್‌ ಬೋರ್ಡ್‌ ಸಮಸ್ಯೆ ಇತ್ಯರ್ಥವಾದ ಕೂಡಲೇ ತಮ್ಮ ಸಚಿವಾಲಯದ ಜಾಗವನ್ನು ಕಳೆದುಕೊಳ್ಳುತ್ತಾರೆ ಎಂದು ತಿಳಿಸಿದರು.

    15 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಿದ ಅಜ್ಮಲ್ ಅವರು ಈ ವಿಷಯದ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು. ನಾನು 15 ವರ್ಷಗಳ ಕಾಲ ಸಂಸತ್ತಿನಲ್ಲಿದ್ದೆ ಮತ್ತು ವಕ್ಫ್ ಭೂಮಿಯಲ್ಲಿ ಸಂಸತ್ತು ನಿರ್ಮಿಸಲಾಗಿದೆ ಎಂಬ ವದಂತಿಗಳಿವೆ. ಅದಕ್ಕಾಗಿಯೇ ನಾನು ಈ ಬಗ್ಗೆ ತನಿಖೆಗೆ ಆಗ್ರಹಿಸುತ್ತಿದ್ದೇನೆ ಎಂದರು. ಇದನ್ನೂ ಓದಿ: ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ವಕ್ಫ್‌ ಮಸೂದೆಯನ್ನು ಪ್ರಶ್ನಿಸಲು ಜಮಿಯತ್ ಉಲೇಮಾ-ಎ-ಹಿಂದ್ ಅಸ್ಸಾಂನಲ್ಲಿ ವಕ್ಫ್ ಬೋರ್ಡ್ ಜಮೀನುಗಳ ಸಮೀಕ್ಷೆಯನ್ನು ನಡೆಸಲಿದೆ.ವಕ್ಫ್ ಮಸೂದೆಯ ಮೇಲಿನ ಕಾನೂನು ಹೋರಾಟ ಮುಂದುವರಿಯುತ್ತದೆ ಎಂದು ಅವರು ಹೇಳಿದರು.

     

  • ಮತ್ತೆ ಮದುವೆಯಾಗಬೇಕಿದ್ದರೆ ಚುನಾವಣೆಗೆ ಮುಂಚೆಯೇ ಆಗಿಬಿಡಿ, ಇಲ್ಲಾಂದ್ರೆ ಜೈಲು ಗ್ಯಾರಂಟಿ; ಅಸ್ಸಾಂ ಸಿಎಂ ವಾರ್ನಿಂಗ್‌!

    ಮತ್ತೆ ಮದುವೆಯಾಗಬೇಕಿದ್ದರೆ ಚುನಾವಣೆಗೆ ಮುಂಚೆಯೇ ಆಗಿಬಿಡಿ, ಇಲ್ಲಾಂದ್ರೆ ಜೈಲು ಗ್ಯಾರಂಟಿ; ಅಸ್ಸಾಂ ಸಿಎಂ ವಾರ್ನಿಂಗ್‌!

    ಗುವಾಹಟಿ: ಲೋಕಸಭಾ ಚುನಾವಣಾ (Lok Sabha Elections) ಸಮೀಪಿಸುತ್ತಿರುವ ಹೊತ್ತಿನಲ್ಲೇ ಅಸ್ಸಾಂ ಸಿಎಂ ಹಿಮಂತ ನಿಸ್ವಾ ಶರ್ಮಾ (Himanta Biswa Sarma) ಅವರು ಸಂಸದರೂ ಆಗಿರುವ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಧುಬ್ರಿ ಸಂಸದರು ಮತ್ತೆ ಮದುವೆಯಾಲು ಬಯಸಿದ್ದರೆ ಲೋಕಸಭಾ ಚುನಾವಣೆಗೆ ಮುಂಚಿತವಾಗಿಯೇ ಮದುವೆಯಾಗಲಿ. ಇಲ್ಲದಿದ್ದರೆ ಬಂಧನ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ಶನಿವಾರ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ನನಗೆ ಇನ್ನೂ ತುಂಬಾ ಶಕ್ತಿ ಇದೆ, ನಾನು ಮದುವೆಯಾಗುತ್ತೇನೆ. ಮುಖ್ಯಮಂತ್ರಿ ಬಯಸದಿದ್ದರೂ ನಾನು ಆ ಕೆಲಸ ಮಾಡಬಲ್ಲೆ ಅದು ನನ್ನ ಶಕ್ತಿ ಅಷ್ಟೆ ಎಂಬ ಬದ್ರುದ್ದೀನ್ ಅಜ್ಮಲ್ (Badruddin Ajmal) ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ. ಆಗ ಬಹುಪತ್ನಿತ್ವ ಕಾನೂನು ಬಾಹಿರವಾಗಲಿದೆ. ಆಮೇಲೆ ಜೈಲು ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

    ಧುಬ್ರಿ ಸಂಸದರು ಮತ್ತೆ ಮದುವೆಯಾಲು ಬಯಸಿದ್ದರೆ ಲೋಕಸಭಾ ಚುನಾವಣೆಗೆ ಮುಂಚಿತವಾಗಿಯೇ ಮದುವೆಯಾಗಲಿ. ನಮಗೆ ಆಹ್ವಾನ ಕೊಟ್ಟರೆ ನಾವೂ ಹೋಗ್ತೀವಿ. ಏಕೆಂದರೆ ಈಗ ಅದು ಕಾನೂನು ಬಾಹಿರವಾಗಿಲ್ಲ. ನನಗೆ ತಿಳಿದಿರುವಂತೆ ಈಗಾಗಲೇ ಅವರಿಗೆ ಒಬ್ಬರು ಪತ್ನಿ ಇದ್ದಾರೆ. ಇನ್ನೂ ಎರಡು ಮೂರು ಮದುವೆ ಆಗುವುದಿದ್ದರೆ ಆಗಿಬಿಡಲಿ. ಚುನಾವಣೆಯ ನಂತರ ಬಹುಪತ್ನಿತ್ವ ನಿಲ್ಲಿಸುತ್ತೇವೆ. ಈಗಾಗಲೇ ಯುಸಿಸಿ ಜಾರಿಗೆ ತರಲು ಸಂಪೂರ್ಣ ಕರಡು ಸಿದ್ಧವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಈಗಾಗಲೇ ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗಿದೆ. ಈ ಕಾನೂನಿನ ಅನ್ವಯ ರಾಜ್ಯದ ಮುಸ್ಲಿಮರು (Muslims) ಸೇರಿದಂತೆ ಎಲ್ಲಾ ಧರ್ಮದವರು 2ನೇ ವಿವಾಹವಾಗುವುದು ಅಪರಾಧವಾಗುತ್ತದೆ. ಒಬ್ಬ ವ್ಯಕ್ತಿಗೆ ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ. ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ.

  • ರಾಮಮಂದಿರ ಉದ್ಘಾಟನೆ ವೇಳೆ ಮುಸ್ಲಿಮರು ರೈಲಿನಲ್ಲಿ ಪ್ರಯಾಣಿಸಬೇಡಿ.. ಮನೆಯಲ್ಲೇ ಇರಿ: ಬದ್ರುದ್ದೀನ್‌ ಅಜ್ಮಲ್‌ ಕರೆ

    ರಾಮಮಂದಿರ ಉದ್ಘಾಟನೆ ವೇಳೆ ಮುಸ್ಲಿಮರು ರೈಲಿನಲ್ಲಿ ಪ್ರಯಾಣಿಸಬೇಡಿ.. ಮನೆಯಲ್ಲೇ ಇರಿ: ಬದ್ರುದ್ದೀನ್‌ ಅಜ್ಮಲ್‌ ಕರೆ

    ನವದೆಹಲಿ: ಅಯೋಧ್ಯೆ ರಾಮಮಂದಿರ (Ayodhya Ram Mandir) ಉದ್ಘಾಟನೆ ಸಂದರ್ಭದಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ. ಎಲ್ಲರೂ ಮನೆಯಲ್ಲೇ ಇರಿ ಎಂದು ಮುಸ್ಲಿಮರಿಗೆ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಧ್ಯಕ್ಷ ಬದ್ರುದ್ದೀನ್ ಅಜ್ಮಲ್ (Badruddin Ajmal) ಕರೆ ನೀಡಿದ್ದಾರೆ.

    ದಾರುಲ್ ಉಲೂನ್ ದಿಯೋಬಂದ್‌ನ ಹಳೆಯ ವಿದ್ಯಾರ್ಥಿಯೂ ಆಗಿರುವ ಅಜ್ಮಲ್ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ದೇಶದಾದ್ಯಂತ ಕರಸೇವಕರ (ಸ್ವಯಂಸೇವಕರ) ದೊಡ್ಡ ಚಳುವಳಿ ಇರುತ್ತದೆ. ಬಾಬ್ರಿ ಮಸೀದಿ ಧ್ವಂಸದ ನಂತರ ನಡೆದ ಘಟನೆಗಳು ಪುನರಾವರ್ತನೆಯಾಗುವುದನ್ನು ನಾವು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 51 ಇಂಚು ಎತ್ತರ, 1.5 ಟನ್ ತೂಕ ಇರಲಿದೆ ಅಯೋಧ್ಯೆ ರಾಮನ ವಿಗ್ರಹ

    ಮುಸ್ಲಿಂ ಸಹೋದರರ ಹಿತಾಸಕ್ತಿ ಮತ್ತು ದೇಶದ ಶಾಂತಿಗಾಗಿ ಮುಸ್ಲಿಮರು ರೈಲಿನಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ ಮತ್ತು ಈ ಅವಧಿಯಲ್ಲಿ ಮನೆಯಲ್ಲೇ ಇರುವುದು ಸೂಕ್ತ ಎಂದು ಹೇಳಿದ್ದಾರೆ.

    ಭಾರತದಾದ್ಯಂತ ಸ್ವಯಂಸೇವಕರು ರೈಲು ಮತ್ತು ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಯುವಕರಿರುವ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಒಂದೆರಡು ಮುಸ್ಲಿಮರು ಸಿಕ್ಕಿಹಾಕಿಕೊಂಡರೆ ಸಮಸ್ಯೆಯಾಗಬಹುದು. ಇದು ಕೋಮುವಾದ ಎಂದು ಕೆಲವರು ಭಾವಿಸಿದರೆ ಅದು ತಪ್ಪು. ಯಾವುದೇ ರೀತಿಯ ಘರ್ಷಣೆಯಾಗದಂತೆ ಜನರನ್ನು ರಕ್ಷಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ವೈದಿಕ ಪಂಡಿತರಿಗಾಗಿ ಕ್ರಿಕೆಟ್‌ ಟೂರ್ನಿ – ವಿಜೇತರಿಗೆ ಅಯೋಧ್ಯೆ ಟ್ರಿಪ್‌

    ಜನವರಿ 22 ರಂದು ರಾಮಮಂದಿರದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಭಾರತ ಮತ್ತು ವಿದೇಶದಿಂದ ಹಲವಾರು ವಿವಿಐಪಿ ಅತಿಥಿಗಳು ಅಯೋಧ್ಯೆಯಲ್ಲಿ ಶುಭ ಸಂದರ್ಭದಲ್ಲಿ ಭಾಗವಹಿಸಲು ಆಹ್ವಾನಗಳನ್ನು ಸ್ವೀಕರಿಸಿದ್ದಾರೆ.

    ಅಯೋಧ್ಯೆಯಲ್ಲಿ ರಾಮಲಲ್ಲಾ (ಶಿಶು ಭಗವಾನ್ ರಾಮ) ಅವರ ಪ್ರಾಣ ಪ್ರತಿಷ್ಠಾ (ಪ್ರತಿಷ್ಠಾಪನೆ) ಸಮಾರಂಭ ಜ.22 ರಂದು ನಡೆಯಲಿದೆ. ಇದಕ್ಕೂ ಒಂದು ವಾರದ ಮೊದಲು ಅಂದರೆ ಜನವರಿ 16 ರಿಂದ ವೈದಿಕ ಆಚರಣೆಗಳು ಪ್ರಾರಂಭವಾಗುತ್ತವೆ. ಇದನ್ನೂ ಓದಿ: ಉತ್ತರ ಪ್ರದೇಶದ ಎಲ್ಲಾ ಜೈಲುಗಳಲ್ಲೂ ರಾಮಮಂದಿರ ಉದ್ಘಾಟನೆ ನೇರಪ್ರಸಾರ

  • ದರೋಡೆ, ಅತ್ಯಾಚಾರ, ಜೈಲಿಗೆ ಹೋಗೋದ್ರಲ್ಲಿ ಮುಸ್ಲಿಮರೇ ನಂ.1- ವಿವಾದಕ್ಕೀಡಾದ ಅಜ್ಮಲ್ ಹೇಳಿಕೆ

    ದರೋಡೆ, ಅತ್ಯಾಚಾರ, ಜೈಲಿಗೆ ಹೋಗೋದ್ರಲ್ಲಿ ಮುಸ್ಲಿಮರೇ ನಂ.1- ವಿವಾದಕ್ಕೀಡಾದ ಅಜ್ಮಲ್ ಹೇಳಿಕೆ

    ಡಿಸ್ಪುರ್: ದರೋಡೆ, ಅತ್ಯಾಚಾರ, ಲೂಟಿ ಮಾಡುವುದರಲ್ಲಿ ನಾವೇ ನಂಬರ್ ಒನ್ ಎಂದು ಹೇಳುವ ಮೂಲಕ ಆಲ್ ಇಂಡಿಯಾ ಯುನೈಡೆಟ್ ಡೆಮಾಕ್ರಟಿಕ್ ಫ್ರಂಟ್ (AIUDF)  ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Ajmal) ವಿವಾದಕ್ಕೀಡಾಗಿದ್ದಾರೆ.

    ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಮ್ಮ ಧರ್ಮದವರ ಬಗ್ಗೆಯೇ ಬಾಯಿಬಿಟ್ಟಿದ್ದಾರೆ. ಮುಸ್ಲಿಮರು ದರೋಡೆ, ಅತ್ಯಾಚಾರ. ಸುಲಿಗೆಯಂತಹ ಎಲ್ಲಾ ಅಪರಾಧಗಳಲ್ಲಿ ನಂಬರ್ ಒನ್ ಆಗಿದ್ದೇವೆ. ಜೈಲಿಗೆ ಹೋಗುವುದರಲ್ಲಿಯೂ ನಾವೇ ನಂಬರ್ ಒನ್ ಎಂದು ಹೇಳಿ ಫಜೀತಿಗೆ ಸಿಲುಕಿದ್ದಾರೆ.

    ಅಜ್ಮಲ್ ಹೇಳಿಕೆಯ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಪರ ವಿರೋಧ ಚರ್ಚೆಗಳು ಕೂಡ ಹುಟ್ಟಿಕೊಂಡಿದೆ. ಅಲ್ಲದೆ ಮುಸ್ಲಿಂ ಸಂಘಟನೆಗಳ ನಾಯಕರು, ಧಾರ್ಮಿಕ ಗುರುಗಳೇ ಅಜ್ಮಲ್ ಹೇಳಿಕೆಯನ್ನು ಖಂಡಿಸಿದ್ದಾರೆ. ಇದನ್ನೂ ಓದಿ: 20 ಕೋಟಿ ಕೊಡಿ, ಇಲ್ಲದಿದ್ದರೆ ಕೊಲೆ ಮಾಡ್ತೀವಿ: ಮುಕೇಶ್ ಅಂಬಾನಿಗೆ ಬೆದರಿಕೆ

    ಈ ಬೆನ್ನಲ್ಲೇ ಅಜ್ಮಲ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ತಮ್ಮ ಹೇಳಿಕೆಯನ್ನು ಒಪ್ಪಿಕೊಂಡಿರುವ ಅವರು, ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಶಿಕ್ಷಣದ ಕೊರತೆಯಿಂದ ಜನ ಈ ರೀತಿಯ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಸ್ಲಿಂ ಪುರುಷರು 3-4 ಮದುವೆಯಾಗುವ ವ್ಯವಸ್ಥೆ ಬದಲಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು: ಹಿಮಂತ ಶರ್ಮಾ

    ಮುಸ್ಲಿಂ ಪುರುಷರು 3-4 ಮದುವೆಯಾಗುವ ವ್ಯವಸ್ಥೆ ಬದಲಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು: ಹಿಮಂತ ಶರ್ಮಾ

    ದಿಸ್ಪುರ್: ಮುಸ್ಲಿಂ ಮಹಿಳೆಯರಿಗೆ (Muslim Woman) ನ್ಯಾಯ ಒದಗಿಸಬೇಕೆಂದರೆ ಮುಸ್ಲಿಂ ಪುರುಷರು 3-4 ಮಹಿಳೆಯರನ್ನು ಮದುವೆಯಾಗುವ (Marriage) ವ್ಯವಸ್ಥೆಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಂತ ಬಿಸ್ವಾ ಶರ್ಮಾ (Himanta Biswa Sarma) ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Ajmal) ವಿರುದ್ಧ ವಾಗ್ದಾಳಿ ನಡೆಸಿದರು.

    ಸ್ವತಂತ್ರ ಭಾರತದಲ್ಲಿ ವಾಸಿಸುವ ಪುರುಷನಿಗೆ ಹಿಂದಿನ ಪತ್ನಿಗೆ ವಿಚ್ಛೇದನ ನೀಡದೇ 3-4 ಮಹಿಳೆಯರನ್ನು ಮದುವೆಯಾಗುವ ಯಾವುದೇ ಹಕ್ಕಿಲ್ಲ. ನಾವು ಅಂತಹ ವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ನಾವು ನ್ಯಾಯವನ್ನು ನೀಡಲು ಪ್ರಯತ್ನಿಸಬೇಕು. ಮುಸ್ಲಿಂ ಹೆಂಗಸರು, ಮುಸ್ಲಿಂ ಹುಡುಗಿಯರು ಹಿಜಬ್ ಧರಿಸಲು ಕೇಳುತ್ತಾರೆ. ಹುಡುಗರು ಕೂಡಾ ಅದನ್ನೇ ಯಾಕೆ ಧರಿಸಬಾರದು? ಮುಸ್ಲಿಂ ಹುಡುಗಿಯರು ಶಾಲೆಗಳಲ್ಲಿ ಯಾಕೆ ಓದಬಾರದು? ನಾವು ಈ ವ್ಯವಸ್ಥೆಗೆ ವಿರುದ್ಧವಾಗಿದ್ದೇವೆ ಎಂದು ಕಿಡಿಕಾರಿದರು.

    ಅಸ್ಸಾಂನಲ್ಲಿ ಬದ್ರುದ್ದೀನ್ ಅಜ್ಮಲ್ ಅವರಂತಹ ಕೆಲವು ನಾಯಕರು ಇದ್ದಾರೆ. ಅವರು ಮಹಿಳೆಯರಿಗೆ ಆದಷ್ಟು ಬೇಗ ಮದುವೆಯಾಗಿ ಮಕ್ಕಳಿಗೆ ಜನ್ಮ ನೀಡಬೇಕು ಎಂದು ಹೇಳಿದ್ದಾರೆ. ಭೂಮಿ ಫಲವತ್ತಾಗಿದ್ದರೆ ಮಾತ್ರ ಉತ್ತಮ ಬೆಳೆ ನೀಡಲು ಸಾಧ್ಯ ಎಂದು ಹೇಳಿ ಮಹಿಳೆಯ ಹೆರಿಗೆ ಪ್ರಕ್ರಿಯೆಯನ್ನು ಹೊಲಕ್ಕೆ ಹೋಲಿಸಿದ್ದಾರೆ. ಈ ರೀತಿ ಹೇಳಿಕೆ ನೀಡಲು ಹೇಗೆ ಸಾಧ್ಯ? ನಮ್ಮ ಮಹಿಳೆಯರು 20-25 ಮಕ್ಕಳಿಗೆ ಜನ್ಮ ನೀಡಬಹುದು. ಆದರೆ ಅವರ ಆಹಾರ, ಬಟ್ಟೆ, ಶಿಕ್ಷಣ ಹಾಗೂ ಇತರ ಎಲ್ಲಾ ವೆಚ್ಚಗಳನ್ನೂ ಅಜ್ಮಲ್ ಅವರೇ ಭರಿಸಬೇಕು. ಹೀಗಾದರೆ ನಮಗೆ ಯಾವುದೇ ಸಮಸ್ಯೆಯಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಬುರ್ಕಾ ಧರಿಸಿ ಐಟಂ ಸಾಂಗ್‌ಗೆ ಸ್ಟೆಪ್ – ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳು ಅಮಾನತು

    ಮಹಿಳೆಯರ ವೆಚ್ಚವನ್ನು ಪಾವತಿಸಲಾಗದವರಿಗೆ ಮಹಿಳೆಯರ ಹೆರಿಗೆಯ ಕುರಿತು ಉಪನ್ಯಾಸ ನೀಡುವ ಹಕ್ಕು ಯಾರಿಗೂ ಇಲ್ಲ. ನಾವು ನಮ್ಮ ಕೈಲಾದಷ್ಟು ಆಹಾರವನ್ನು ಒದಗಿಸಲು ಹಾಗೂ ಉತ್ತಮ ಮನುಷ್ಯರನ್ನಾಗಿ ಮಾಡಲು ಸಾಧ್ಯವಾಗುವಷ್ಟು ಮಕ್ಕಳಿಗೆ ಮಾತ್ರವೇ ಜನ್ಮ ನೀಡುತ್ತೇವೆ ಎಂದು ಬಿಸ್ವಾ ಶರ್ಮಾ ಟಾಂಗ್ ನೀಡಿದರು. ಇದನ್ನೂ ಓದಿ: ಇಸ್ಲಾಂ ಹುಟ್ಟುವ ಮುಂಚೆಯೇ ಚಂದ್ರದ್ರೋಣ ಪರ್ವತಗಳ ಸಾಲಲ್ಲಿ ದತ್ತಪೀಠವಿತ್ತು – ಸಿ.ಟಿ ರವಿ

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳಿಗೆ ಅವಹೇಳನ ಮಾಡಿದ ಬದ್ರುದ್ದೀನ್ ಅಜ್ಮಲ್ ಕ್ಷಮೆ

    ಹಿಂದೂಗಳಿಗೆ ಅವಹೇಳನ ಮಾಡಿದ ಬದ್ರುದ್ದೀನ್ ಅಜ್ಮಲ್ ಕ್ಷಮೆ

    ನವದೆಹಲಿ: ಹಿಂದೂ (Hindu) ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಎಐಯುಡಿಎಫ್ ಮುಖ್ಯಸ್ಥ, ಅಸ್ಸಾಂನ ಲೋಕಸಭಾ ಸಂಸದ ಬದ್ರುದ್ದೀನ್ ಅಜ್ಮಲ್ (Badruddin Ajmal) ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ (Apology).

    ನಾನು ನೀಡಿರುವ ವಿವಾದಿತ ಹೇಳಿಕೆಯಿಂದ ನನಗೆ ನಾಚಿಕೆಯಾಗಿದೆ. ಆದರೂ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನಾನು ಯಾವುದೇ ಸಮುದಾಯವನ್ನು ಅಥವಾ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಈ ಹೇಳಿಕೆಯನ್ನು ನೀಡಿಲ್ಲ. ನನ್ನ ಉದ್ದೇಶ ಯಾವುದೇ ವ್ಯಕ್ತಿಯ ಹೃದಯಕ್ಕೆ ಘಾಸಿ ಮಾಡುವುದಾಗಿರಲಿಲ್ಲ ಎಂದು ತಿಳಿಸಿದ್ದಾರೆ.

    ನನ್ನ ಹೇಳಿಕೆ ವಿವಾದ ಹುಟ್ಟುಹಾಕಿದೆ, ಇದರಿಂದ ನನಗೆ ನಾಚಿಕೆಯಾಗಿದೆ. ನಾನು ಇದಕ್ಕಾಗಿ ಕ್ಷಮೆ ಯಾಚಿಸುತ್ತೇನೆ. ನನ್ನಂತಹ ಹಿರಿಯ ವ್ಯಕ್ತಿ ಇಂತಹ ಹೇಳಿಕೆಯನ್ನು ನೀಡಬಾರದಿತ್ತು. ಈ ಬಗ್ಗೆ ನನ್ನ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ಹಿಂದೂ ನಾಯಕರು ಪ್ರತಿ ದಿನ ಮುಸ್ಲಿಮರ (Muslim) ವಿರುದ್ಧ ಮಾತನಾಡುತ್ತಾರೆ. ನಾವು ಅವರ ವಿರುದ್ಧ ಪ್ರಕರಣವನ್ನು ದಾಖಲಿಸಿಲ್ಲ ಎಂದು ಹೇಳಿದ್ದಾರೆ.

    ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಜ್ಮಲ್, ಮುಸ್ಲಿಂ ಪುರುಷರು 20 ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಆದರೆ ಹಿಂದೂಗಳು ಮದುವೆಗೆ ಮುನ್ನ ಒಬ್ಬೊಬ್ಬರು 2 ಅಥವಾ 3 ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ. ಅವರು ಮಕ್ಕಳನ್ನು ಹೆರುವುದಿಲ್ಲ, ಜೀವನವನ್ನು ಆನಂದಿಸಿ ಹಣ ಉಳಿಸುತ್ತಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗಳನ್ನು ಕೋಚಿಂಗ್ ಸೆಂಟರ್‌ಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ರಾಜಸ್ಥಾನದ ಗ್ಯಾಂಗ್‌ವಾರ್‌ಗೆ ಬಲಿ

    ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅಜ್ಮಲ್, 40 ವರ್ಷ ವಯಸ್ಸಿನ ನಂತರ ಹಿಂದೂಗಳು ಪೋಷಕರ ಒತ್ತಡದಲ್ಲಿ ಮದುವೆಯಾಗುತ್ತಾರೆ. ಹಾಗಾದರೆ ಅವರು 40ರ ನಂತರ ಮಕ್ಕಳನ್ನು ಹೆರುತ್ತಾರೆ ಎಂದು ನೀವು ಹೇಗೆ ನಿರೀಕ್ಷಿಸುತ್ತೀರಿ? ಫಲವತ್ತಾದ ಭೂಮಿಯಲ್ಲಿ ಬಿತ್ತನೆ ಮಾಡಿದರೆ ಮಾತ್ರ ಉತ್ತಮ ಬೆಳೆಗಳನ್ನು ಬೆಳೆಯಲು ಸಾಧ್ಯ. ಆದ್ದರಿಂದ ಹಿಂದೂಗಳು ಮುಸ್ಲಿಮರ ಸೂತ್ರವನ್ನು ಅನುಸರಿಸಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಬೇಕು ಎಂದಿದ್ದರು. ಇದನ್ನೂ ಓದಿ: ಬೆತ್ತನಗೆರೆ ಶಂಕರನ ರಾಜಕೀಯ ಎಂಟ್ರಿಗೆ ಖಾಕಿ ಬ್ರೇಕ್!

    Live Tv
    [brid partner=56869869 player=32851 video=960834 autoplay=true]

  • ಭೂಮಿ ಫಲವತ್ತಾಗಿದ್ರೆ ಉತ್ತಮ ಬೆಳೆ – ಚಿಕ್ಕವಯಸ್ಸಿಗೆ ಮದುವೆ ಮಾಡುವಂತೆ ಹಿಂದೂಗಳಿಗೆ ಬದ್ರುದ್ದೀನ್ ಸಲಹೆ

    ಭೂಮಿ ಫಲವತ್ತಾಗಿದ್ರೆ ಉತ್ತಮ ಬೆಳೆ – ಚಿಕ್ಕವಯಸ್ಸಿಗೆ ಮದುವೆ ಮಾಡುವಂತೆ ಹಿಂದೂಗಳಿಗೆ ಬದ್ರುದ್ದೀನ್ ಸಲಹೆ

    ನವದೆಹಲಿ: ಹಿಂದೂಗಳು ಮುಸ್ಲಿಂ ಸೂತ್ರವನ್ನು ಅಳವಡಿಸಿಕೊಳ್ಳಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲೇ ಮದುವೆ ಮಾಡಬೇಕು ಎಂದು ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Ajmal) ಸಲಹೆ ನೀಡಿ ವಿವಾದಕ್ಕೀಡಾಗಿದ್ದಾರೆ.

    ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಸ್ಲಿಂ (Muslims) ಪುರುಷರು 20 ರಿಂದ 22ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಮುಸ್ಲಿಂ ಮಹಿಳೆಯರು ಸಹ ಸರ್ಕಾರದ ಅನುಮತಿ ಮೇರೆಗೆ 18ನೇ ವಯಸ್ಸಿನಲ್ಲಿ ಮದುವೆಯಾಗುತ್ತಾರೆ. ಆದ್ರೆ ಹಿಂದೂಗಳು ಮದುವೆಗೆ ಮುನ್ನ ಒಬ್ಬೊಬ್ಬರು ಎರಡು ಅಥವಾ ಮೂರು ಅಕ್ರಮ ಸಂಬಂಧಗಳನ್ನು ಇಟ್ಟುಕೊಳ್ಳುತ್ತಾರೆ. ಅವರು ಮಕ್ಕಳನ್ನು ಹೆರುವುದಿಲ್ಲ, ಜೀವನವನ್ನು ಆನಂದಿಸಿ ಹಣ ಉಳಿಸುತ್ತಾರೆ ಅಷ್ಟೇ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ಹತ್ಯೆಗೆ ಸ್ಕೆಚ್ – ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡ ಗಂಭೀರ ಆರೋಪ

    ಮುಸ್ಲಿಂ ಜನಸಂಖ್ಯೆ ಹೆಚ್ಚುತ್ತಿದೆ ಎಂಬ ಆರೋಪದ ಬಗ್ಗೆ ಮಾತನಾಡಿದ ಅಜ್ಮಲ್, 40 ವರ್ಷ ವಯಸ್ಸಿನ ನಂತರ ಹಿಂದೂಗಳು ಪೋಷಕರ ಒತ್ತಡದಲ್ಲಿ ಮದುವೆಯಾಗುತ್ತಾರೆ. ಹಾಗಾದ್ರೆ ಅವರು 40ರ ನಂತರ ಮಕ್ಕಳನ್ನು ಹೆರುತ್ತಾರೆ ಎಂದು ನೀವು ಹೇಗೆ ನಿರೀಕ್ಷಿಸುತ್ತೀರಿ? ಫಲವತ್ತಾದ ಭೂಮಿಯಲ್ಲಿ ಬಿತ್ತನೆ ಮಾಡಿದ್ರೆ ಮಾತ್ರ ಉತ್ತಮ ಬೆಳೆಗಳನ್ನು ಬೆಳೆಯಲು ಸಾಧ್ಯ. ಆದ್ದರಿಂದ ಹಿಂದೂಗಳು ಮುಸ್ಲಿಮರ ಸೂತ್ರವನ್ನು ಅನುಸರಿಸಬೇಕು. ತಮ್ಮ ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡಬೇಕು. 20-22ನೇ ವಯಸ್ಸಿನಲ್ಲಿ ಮದುವೆ ಮಾಡಬೇಕು. 18-20 ವರ್ಷಕ್ಕೆ ಹುಡುಗಿಯರ ಮದುವೆಯಾಗಬೇಕು ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಡಿ.6 ರಂದು ಬೆಳಗಾವಿಗೆ ಹೋಗಿಯೇ ತೀರುತ್ತೇವೆ – ಬೊಮ್ಮಾಯಿಗೆ ʼಮಹಾʼ ಸಚಿವರ ಸವಾಲು

    ಇದೇ ವೇಳೆ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು (Shraddha Walker Murder Case) ಉಲ್ಲೇಖಿಸಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರ ಲವ್ ಜಿಹಾದ್ (Love Jihad) ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಅಸ್ಸಾಂ ಸಿಎಂ ದೇಶದ ಅಗ್ರಮಾನ್ಯ ನಾಯಕರಲ್ಲಿ ಒಬ್ಬರು. ಆದ್ರೆ ಅವರನ್ನ ತಡೆಯೋರು ಯಾರು. ನೀವು ಬೇಕಿದ್ರೆ ನಾಲ್ಕೈದು ಲವ್ ಜಿಹಾದ್ ನಡೆಸಿ, ನಮ್ಮ ಮುಸ್ಲಿಂ ಹೆಣ್ಣುಮಕ್ಕಳನ್ನು ಕರೆದುಕೊಂಡು ಹೋಗಿ, ನಾವು ಅದನ್ನ ಸ್ವಾಗತ ಮಾಡುತ್ತೇವೆಯೇ ಹೊರತು ಜಗಳವಾಡುವುದಿಲ್ಲ. ಹಾಗೆ ಮಾಡಿದ್ರೆ ನಿಮ್ಮಲ್ಲೂ ಎಷ್ಟು ಶಕ್ತಿಯಿದೆ ಎಂದು ನೋಡಬಹುದು ಎಂದು ಲೇವಡಿ ಮಾಡಿದ್ದಾರೆ.

    ಇತ್ತೀಚೆಗೆ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಲವ್ ಜಿಹಾದ್ ಅಂಶ ಉಲ್ಲೇಖಿಸಿದ್ದ ಅಸ್ಸಾಂ ಸಿಎಂ ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಹಾಗೂ ಲವ್ ಜಿಹಾದ್ ವಿರುದ್ಧ ಕಾನೂನು ಅಗತ್ಯವಿದೆ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • BJP ಸಂಸದರ ಪತ್ನಿಯರು ಅಡುಗೆ ಮನೆ ಹೇಗೆ ನಿಭಾಯಿಸ್ತಾರೆ: AIUDF ಮುಖ್ಯಸ್ಥ ಪ್ರಶ್ನೆ

    BJP ಸಂಸದರ ಪತ್ನಿಯರು ಅಡುಗೆ ಮನೆ ಹೇಗೆ ನಿಭಾಯಿಸ್ತಾರೆ: AIUDF ಮುಖ್ಯಸ್ಥ ಪ್ರಶ್ನೆ

    ನವದೆಹಲಿ: ಆಹಾರ ಪದಾರ್ಥ, ಇಂಧನ ಹಾಗೂ ಅಗತ್ಯ ವಸ್ತುಗಳ ಮೇಲಿನ ಬೆಲೆ ಏರಿಕೆಯಿಂದಾಗಿ ಪ್ರತಿ ಪಕ್ಷಗಳು ಬಿಜೆಪಿ ವಿರುದ್ಧ ಕಿಡಿಕಾರಿವೆ. ಈ ನಡುವೆ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಸಹ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕಿಡಿ ಕಾರಿದ್ದಾರೆ. ಭಾರತದ ಹಣ, ಹಣಕಾಸು ಸಚಿವರ ಬಳಿಯಿದೆ. ಒಬ್ಬ ವ್ಯಕ್ತಿಯು ಖರಿದಿಸಲು ಎಷ್ಟು ಖರ್ಚು ಮಾಡಬೇಕು ಎಂದು ಅವರು ಹೇಗೆ ತಿಳಿಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚೀನಾದೊಂದಿಗಿನ ಉದ್ವಿಗ್ನದ ಮಧ್ಯೆ ತೈವಾನ್ ರಕ್ಷಣಾ ಅಧಿಕಾರಿ ಶವವಾಗಿ ಪತ್ತೆ

    ಬೆಲೆ ಏರಿಕೆ ಜನಸಂಖ್ಯೆಯ ಮೇಲೆ ಪರಿಣಾಮ ಬೀರುತ್ತಿದೆ. ಯಾವ ಸಚಿವರಿಗೂ ಹಣದುಬ್ಬರವಿಲ್ಲ. ಬಿಜೆಪಿ ಸಂಸದರು ತಮ್ಮ ಪತ್ನಿಯರಿಗೆ ಅಡುಗೆ ಮನೆ ಹೇಗೆ ನಡೆಸುತ್ತಿದ್ದಾರೆ ಎಂದು ಕೇಳಬೇಕು. 2024 ರಲ್ಲಿ ಹಣದುಬ್ಬರವು ಅವರ ಸರ್ಕಾರವನ್ನೇ ತಿನ್ನುತ್ತದೆ. ಈಗಾಗಲೇ ಇದರ ಬೆಳವಣಿಗೆಯನ್ನು ಗಮನಿಸುತ್ತಿರಬೇಕು ಎಂದು ಎಐಯುಡಿಎಫ್ ಮುಖ್ಯಸ್ಥರು ಹೇಳಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ವಾಸುಕಿ ವೈಭವ್ ಎಂಟ್ರಿ: ದೊಡ್ಮನೆಯಲ್ಲಿ ‘ಏನ್ ಕಿತ್ತು ದಬ್ಬಾಕ್ತಿಯೋ’ ಎಂದ ಗಾಯಕ

    ರಾಷ್ಟ್ರೀಯ ಕಾಂಗ್ರೆಸ್ ಬೆಲೆ ಏರಿಕೆ, ಜಿಎಸ್‌ಟಿ ನೀತಿಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈದ್‌ನಲ್ಲಿ 1 ದಿನ ಹಸು ತಿನ್ನದಿದ್ರೆ ನೀವು ಸಾಯಲ್ಲ; ಗೋಹತ್ಯೆ ಮಾಡದೇ ಬಕ್ರೀದ್‌ ಆಚರಿಸೋಣ – ಮುಸ್ಲಿಮರಿಗೆ ಅಜ್ಮಲ್‌ ಕರೆ

    ಈದ್‌ನಲ್ಲಿ 1 ದಿನ ಹಸು ತಿನ್ನದಿದ್ರೆ ನೀವು ಸಾಯಲ್ಲ; ಗೋಹತ್ಯೆ ಮಾಡದೇ ಬಕ್ರೀದ್‌ ಆಚರಿಸೋಣ – ಮುಸ್ಲಿಮರಿಗೆ ಅಜ್ಮಲ್‌ ಕರೆ

    ಗುವಾಹಟಿ: ಈ ಬಾರಿ ಬಕ್ರೀದ್‌ ಆಚರಣೆ ವೇಳೆ ಹಿಂದೂಗಳ ಭಾವನೆಯನ್ನು ಗೌರವಿಸೋಣ. ಗೋವುಗಳ ಹತ್ಯೆ ಮಾಡದಿರೋಣ ಎಂದು ಅಸ್ಸಾಂ ಸಂಸದ ಹಾಗೂ ಆಲ್‌ ಇಂಡಿಯಾ ಯುನೈಟೆಡ್‌ ಡೆಮೊಕ್ರಾಟಿಕ್‌ ಫ್ರಂಟ್‌ (ಎಐಯುಡಿಎಫ್‌) ಮುಖ್ಯಸ್ಥ ಮೌಲಾನಾ ಬದ್ರುದ್ದಿನ್‌ ಅಜ್ಮಲ್‌ ಅವರು ಮುಸ್ಲಿಮರಲ್ಲಿ ಮನವಿ ಮಾಡಿದ್ದಾರೆ.

    ಆರ್‌ಎಸ್‌ಎಸ್‌ನ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಕೆಲವರು ಹಿಂದೂ ರಾಜ್ ಮಾಡಲು ಪ್ರಯತ್ನಿಸುವ ಮೂಲಕ ಹಿಂದೂಸ್ತಾನವನ್ನು ಕೊನೆಗೊಳಿಸಲು ಬಯಸಿದ್ದಾರೆ. ಅವರ ಕನಸಿನಲ್ಲಿಯೂ ಹಿಂದೂ ರಾಜ್ ಎಂದಿಗೂ ನಿಜವಾಗುವುದಿಲ್ಲ. ಅವರು ಈ ದೇಶದಲ್ಲಿ ಮುಸ್ಲಿಮರು ಮತ್ತು ಹಿಂದೂಗಳ ನಡುವಿನ ಏಕತೆಯನ್ನು ಒಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಕ್ರೀದ್‌ ಆಚರಣೆ; ಪ್ರಾಣಿ ಬಲಿಗೆ ಹಲವು ನಿರ್ಬಂಧ – ಸರ್ಕಾರದ ಮಾರ್ಗಸೂಚಿಯಲ್ಲೇನಿದೆ?

    ಈದ್‌ನಲ್ಲಿ ಒಂದು ದಿನ ಹಸು ತಿನ್ನದಿದ್ದರೆ ನೀವು ಸಾಯುವುದಿಲ್ಲ. ಈ ಹಬ್ಬವನ್ನು ನಾವು ಹಿಂದೂ ಸಹೋದರರೊಂದಿಗೆ ಆಚರಿಸೋಣ. ನಮ್ಮ ಪೂರ್ವಜರೆಲ್ಲರೂ ಹಿಂದೂಗಳು. ಇಸ್ಲಾಂನಲ್ಲಿ ಮೌಲ್ಯಗಳಿರುವುದರಿಂದ ಅವರು ಧರ್ಮಕ್ಕೆ ಬಂದಿದ್ದಾರೆ. ಏಕೆಂದರೆ ಅದು ವಿಶೇಷ ಗುಣಗಳನ್ನು ಹೊಂದಿದೆ. ಇಸ್ಲಾಂ ಇತರ ಧರ್ಮಗಳ ಭಾವನೆಗಳನ್ನು ಗೌರವಿಸುತ್ತದೆ ಎಂದು ತಿಳಿಸಿದ್ದಾರೆ.

    ಸಾಂರ್ಭಿಕ ಚಿತ್ರ

    ಭಾರತ ವೈವಿಧ್ಯಮಯ ಸಮುದಾಯಗಳು, ಜನಾಂಗೀಯ ಗುಂಪುಗಳು ಮತ್ತು ಧರ್ಮಗಳ ಜನರ ದೇಶವಾಗಿದೆ. ಭಾರತದ ಹೆಚ್ಚಿನ ನಿವಾಸಿಗಳು ಸನಾತನ ಮೇಲೆ ನಂಬಿಕೆಯಿಟ್ಟವರು. ಸನಾತನ ಧರ್ಮ, ಹಸು ಪ್ರಾಣಿ ಎಂದು ಗೌರವಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಶಿರಚ್ಛೇದನದ ಬೆದರಿಕೆ – ಯುಪಿಯಲ್ಲಿ ಆರೋಪಿ ಅರೆಸ್ಟ್

    ನೂಪುರ್‌ ಶರ್ಮಾ ವಿವಾದ ಕುರಿತು ಮಾತನಾಡಿ, ಮುಸ್ಲಿಮರು ಈ ಬಗ್ಗೆ ಪ್ರತಿಕ್ರಿಯಿಸಬಾರದು. ಬದಲಿಗೆ, ದೇವರು ನೂಪುರ್ ಶರ್ಮಾ ಅವರಂತಹವರಿಗೆ ಬುದ್ದಿಯನ್ನು ನೀಡಬೇಕೆಂದು ಪ್ರಾರ್ಥಿಸಬೇಕು. ಶಿರಚ್ಛೇದ ಮಾಡುತ್ತೇನೆ ಎನ್ನುವುದು ಮೂರ್ಖತನದ ಪರಮಾವಧಿ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]