Tag: Badruddin Mani

  • ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ RTI ಅರ್ಜಿಗಳ ವಿಲೇವಾರಿ ವಿಳಂಬ: ಬಿ.ಆರ್ ಮಮತಾ

    ಅಧಿಕಾರಿಗಳಲ್ಲಿ ಮಾಹಿತಿ ಕೊರತೆಯಿಂದ RTI ಅರ್ಜಿಗಳ ವಿಲೇವಾರಿ ವಿಳಂಬ: ಬಿ.ಆರ್ ಮಮತಾ

    – ಆರ್‌ಟಿಐ ದುರ್ಬಳಕೆ ತಡೆಗೆ ಬದ್ರುದ್ದೀನ್ ಕೆ.ಮಾಣಿ ಕರೆ

    ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗೂ ಸಾರ್ವಜನಿಕ ದಾಖಲೆಗಳನ್ನ ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು (RTI)ನ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ತಿಳಿಸಿದರು.

    ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಪೊಲೀಸ್ ಇಲಾಖೆ (Police Department) ವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಅಧಿನಿಯಮ 2005ರ ಅನ್ವಯ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು. ಮಾಹಿತಿ ಹಕ್ಕು ಬಹಳ ಸರಳ ಹಾಗೂ ಗಂಭೀರ ಸ್ವರೂಪ ಹೊತ್ತಾಗಿದ್ದು ಸರ್ಕಾರವನ್ನು ಬುಡಮೇಲು ಮಾಡುವ ಶಕ್ತಿ ಕೂಡ ಇದೆ. ಜನಪರ ಕಾನೂನು ಜಾರಿಯಾದ ನಂತರ ಅದರ ಬಗ್ಗೆ ಸರ್ಕಾರಿ ಅಧಿಕಾರಿಗಳು ತಿಳಿದಿರಬೇಕು ಎಂದು ತಿಳಿವಳಿಕೆ ನೀಡಿದರು. ಇದನ್ನೂ ಓದಿ: ದೇಶದಲ್ಲಿ ಹೆಚ್ಚಾಗ್ತಿದೆ ನಾಯಿ ಕಡಿತ, ರೇಬಿಸ್ ಆತಂಕ! – ಕರ್ನಾಟಕದಲ್ಲಿ ಪರಿಸ್ಥಿತಿ ಹೇಗಿದೆ?

    ಅರ್ಜಿದಾರರು ಕೂಡ ಮಾಹಿತಿ ಹಕ್ಕು ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳದೇ ಸಮಾಜದ ನೈತಿಕತೆ ಸಾಮಾಜಿಕ ಸ್ವಾತಂತ್ರ್ಯತೆ ಕಾಪಾಡುವ ನಿಟ್ಟಿನಲ್ಲಿ ಆರ್‌ಟಿಐ ಮೂಲಕ ಸಾರ್ವಜನಿಕರು ಮಾಹಿತಿ ಕೇಳಬೇಕು. ಮುಖ್ಯವಾಗಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್, ಹಣಕಾಸು, ನರೇಗಾ, ಕಂದಾಯ, ನಗರಾಭಿವೃದ್ಧಿ, ಲೋಕೋಪಯೋಗಿ ಇಲಾಖೆಗಳಲ್ಲಿ ಹೆಚ್ಚು ಆರ್.ಟಿ.ಐ ಅರ್ಜಿಗಳು ಬರುತ್ತವೆ. ಸಾರ್ವಜನಿಕ ಸಂಪರ್ಕ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ಇದ್ದಲ್ಲಿ ಶೀಘ್ರ ವಿಲೇವಾರಿ ಮಾಡಬಹುದು ಎಂದರು.

    ಪೊಲೀಸ್ ಸ್ಟೇಷನ್‌ಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂಬ ಸುಪ್ರೀಂ ಕೋರ್ಟ್ ಹೇಳಿಕೆಯನ್ನು ಆಧರಿಸಿ ಕಡ್ಡಾಯವಾಗಿ ಎಲ್ಲಾ ಪೊಲೀಸ್ ಸ್ಟೇಷನ್‌ಗಳಲ್ಲಿ ಸಿಸಿಟಿವಿ ಅಳವಡಿಸಿರಬೇಕು. ಹಾಗೆಯೇ ಅವುಗಳನ್ನ ಒಂದು ವರ್ಷಗಳ ಕಾಲ ನಿರ್ವಹಣೆ ಮಾಡಬೇಕಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಪಾಲಿಸುವುದು ಅವಶ್ಯಕ. ಅಧಿಕಾರಿಯು ಕಾರಣವಿಲ್ಲದೇ ಮಾಹಿತಿ ನೀಡದಿದ್ದಲ್ಲಿ ಅಥವಾ ದುರುದ್ದೇಶದಿಂದ ತಪ್ಪಾದ ಮಾಹಿತಿ ನೀಡಿದ್ದಲ್ಲಿ ದಂಡ ಪಾವತಿಸಬೇಕಾಗುತ್ತದೆ. ಜೊತೆಗೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಕಾಲಕಾಲಕ್ಕೆ ಅರ್ಜಿಗಳ ವಿಲೇವಾರಿ ಮಾಡಬೇಕು ಎಚ್ಚರಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಶಿಕ್ಷೆ ಬಗ್ಗೆ ನಮಗಿಂತ ಜೆಡಿಎಸ್ – ಬಿಜೆಪಿ ನಾಯಕರ ಪ್ರತಿಕ್ರಿಯೆ ಬಹುಮುಖ್ಯ: ಡಿಕೆಶಿ

    RTI ಜನಸ್ನೇಹಿ ಕಾಯ್ದೆ 
    ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಡಾ.ಬಿ.ಆರ್ ಮಮತಾ ಮಾತನಾಡಿ, ಮಾಹಿತಿ ಹಕ್ಕಿನ ಕಾಯ್ದೆಯ ಬಗ್ಗೆ ಸಾರ್ವಜನಿಕರಲ್ಲಿ ಹಾಗೂ ಅಧಿಕಾರಿಗಳಲ್ಲಿ ಅರಿವಿನ ಕೊರತೆ ಇದೆ. ಈ ಕಾಯ್ದೆಯು ಸಾರ್ವಜನಿಕ ಜನ ಸ್ನೇಹಿ ಕಾಯ್ದೆಯಾಗಿದೆ. ಇದನ್ನು ಪೋಷಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. 6(1) ಅಧಿನಿಯಮದ ಪ್ರಕಾರ ಮಾಹಿತಿ ಕೋರಿ ಅರ್ಜಿ ಬಂದರೆ ಅಂತಹ ಅರ್ಜಿಗೆ 30 ದಿನಗಳ ಒಳಗಾಗಿ ಪ್ರತಿ ಪುಟಕ್ಕೆ ಎರಡು ರೂ ಗಳಂತೆ ಹಣ ಪಾವತಿಸಿಕೊಂಡು ಮಾಹಿತಿ ನೀಡಬೇಕು, ನಿಗದಿತ ಕಾಲಮಾನಕ್ಕೆ ಮಾಹಿತಿ ನೀಡಲು ಸಾಧ್ಯವಾಗದಿದ್ದಲ್ಲಿ ಉಚಿತವಾಗಿ ಮಾಹಿತಿಯನ್ನು ನೀಡಬೇಕು. 41ಎ ಮತ್ತು 41ಬಿ ಯನ್ನು ಎಲ್ಲಾ ಕಚೇರಿಗಳಲ್ಲಿ ಕಡ್ದಾಯವಾಗಿ ಅಳವಡಿಸಬೇಕು. ಅಧಿಕಾರಿಗಳಿಗೆ ಕಾಲಕಾಲಕ್ಕೆ ತರಬೇತಿಗಳು ನೀಡಬೇಕು ಕಾಯ್ದೆಯ ನಿರ್ಲಕ್ಷ್ಯತೆ ಆಗಬಾರದು ಎಂದರು.

    ಜಿಲ್ಲೆಯಲ್ಲಿ 1,440 ದ್ವಿತೀಯ ಮೇಲ್ಮನವಿ ಪ್ರಕರಣಗಳು ಬಾಕಿ
    ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಬದ್ರುದ್ದೀನ್ ಕೆ. ಮಾಣಿ (Badruddin K Mani) ಮಾತನಾಡಿ, ಎಲ್ಲಾ ಅಧಿಕಾರಿ, ಸಿಬ್ಬಂದಿ ಮಾಹಿತಿ ಹಕ್ಕು ಕಾಯ್ದೆ ಕುರಿತು ಸಂಪೂರ್ಣ ಅರಿವು ಹೊಂದಿದ್ದಲ್ಲಿ ಮಾತ್ರ ಅರ್ಜಿದಾರರಿಗೆ ಸಮರ್ಪಕ ಮಾಹಿತಿ ಒದಗಿಸಲು ಸಾಧ್ಯ. ರಾಜ್ಯದಲ್ಲಿ 45,000 ದ್ವಿತೀಯ ಹಂತದ ಮೇಲ್ಮನವಿ ಪ್ರಕರಣಗಳು ಬಾಕಿ ಇದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು 9ನೇ ಸ್ಥಾನದೊಂದಿಗೆ 1,440 ದ್ವಿತೀಯ ಮೇಲ್ಮನವಿ ಪ್ರಕರಣಗಳು ಬಾಕಿ ಉಳಿದಿವೆ ಎಂದು ಹೇಳಿದರು.

    ಹಾಗೆಯೇ ಕಾಯ್ದೆಯು ಬಹಳ ಸುಲಭವಾಗಿದ್ದು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡರೇ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬಹುದು. ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಮಾಹಿತಿ ಹಕ್ಕು ಅಡಿಯಲ್ಲಿ ಸುಪ್ರೀಂ ಇದ್ದ ಹಾಗೆ. ಮಾಹಿತಿ ಹಕ್ಕನ್ನು ಸರಿಯಾಗಿ ಅರ್ಥೈಸಿಕೊಂಡು ಶೀಘ್ರ ಬಗೆಹರಿಸಬಹುದಾಗಿದೆ. ಮಾಹಿತಿ ಹಕ್ಕು ಕಾಯ್ದೆ ಅನಿವಾರ್ಯವಾಗಿದ್ದು ನಿಭಾಯಿಸುವುದು ನಮ್ಮ ಕರ್ತವ್ಯ. ನಿಷ್ಠಾವಂತ ಆರ್‌ಟಿಐ ಅರ್ಜಿದಾರರಿಗೆ ವಂಚಿತತೆ, ದುರ್ಬಳಕೆ ಆಗುತ್ತಿರುವುದನ್ನ ತಡೆಯುವುದು ನಮ್ಮ ಅಧಿಕಾರಿಗಳ ಕರ್ತವ್ಯ ಕೂಡ ಆಗಿದೆ ಎಂದರು. ಇದನ್ನೂ ಓದಿ: ಭಾರತದ ಮೇಲೆ ಅಮೆರಿಕ 25% ಟ್ಯಾರಿಫ್‌ – ‘ಸ್ವದೇಶಿ’ ವಸ್ತು ಖರೀದಿಸಿ: ಮೋದಿ ಕರೆ

    ಜಿಲ್ಲಾಧಿಕಾರಿ ಎಬಿ ಬಸವರಾಜು ಅವರು ಮಾತನಾಡಿ, ಕಂದಾಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಈಗ ಎಲ್ಲವೂ ಆನ್ಲೈನ್ ಅಲ್ಲಿ ಸಿಗುವಂತೆ ಮಾಡಲಾಗಿದೆ. ನ್ಯಾಯಾಲಯಕ್ಕೆ ಸಂಬಂಧಪಟ್ಟ ಮಾಹಿತಿಗಾಗಿ ಆರ್.ಸಿ.ಸಿ.ಎಂ.ಎಸ್ ಪೋರ್ಟಲ್ ಮತ್ತು ಭೂಮಿಗೆ ಸಂಬಂಧಪಟ್ಟ ಮಾಹಿತಿಗಾಗಿ ಭೂ ಸುರಕ್ಷಾ ಪೋರ್ಟಲ್ ಅಲ್ಲಿ ಮಾಹಿತಿ ಪಡೆಯಬಹುದು. ಸರ್ವೆ ದಾಖಲೆ ಕೂಡ ಈಗ ಸಿಗುತ್ತದೆ ಎಂದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಮುಖ್ಯ. ಅಧಿಕಾರಿಗಳು ಯಾವುದೇ ಭಯ ಪಡದೇ ಮಾಹಿತಿ ಹಕ್ಕು ಕಾಯ್ದೆ ಅಡಿ ಅರ್ಜಿ ವಿಲೇವಾರಿ ಮಾಡಿ ಎಂದರು.

    ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಡಾ.ಕೆ.ಎನ್ ಅನುರಾಧಾ, ಎಡಿಸಿ ಸೈಯಿದಾ ಅಯಿಷಾ, ಎಎಸ್ಪಿ ನಾಗರಾಜ್, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕ ಸಂಪರ್ಕ ಅಧಿಕಾರಿಗಳು, ಪ್ರಥಮ ಮೇಲ್ಮನವಿ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ – ಹೈಡೆಲ್ ಪ್ರಾಜೆಕ್ಟ್ ಸೈಟ್‌ನಲ್ಲಿದ್ದ 12 ಕಾರ್ಮಿಕರಿಗೆ ಗಾಯ

  • ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಕೆ.ಮಾಣಿ ಸೇರಿದಂತೆ 7 ಮಂದಿ ಪ್ರಮಾಣವಚನ ಸ್ವೀಕಾರ

    ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಕೆ.ಮಾಣಿ ಸೇರಿದಂತೆ 7 ಮಂದಿ ಪ್ರಮಾಣವಚನ ಸ್ವೀಕಾರ

    ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು (Karnataka Chief Information Commissioner) ಹಾಗೂ ರಾಜ್ಯ ಮಾಹಿತಿ ಆಯುಕ್ತರುಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ರಾಜಭವನದ ಗಾಜಿನಮನೆಯಲ್ಲಿ ನಡೆಯಿತು.

    ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Tawar Chandra Gehlot) ಪ್ರಮಾಣ ವಚನ ಬೋಧನೆ ಮಾಡಿದರು. ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಆಶಿತ್ ಮೋಹನ್ ಪ್ರಸಾದ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದನ್ನೂ ಓದಿ: ಇದನ್ನೂ ಓದಿ: ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

     

    ರಾಜ್ಯ ಮಾಹಿತಿ ಆಯುಕ್ತರಾಗಿ ಪಬ್ಲಿಕ್‌ ಟಿವಿಯ ಮಾಜಿ ಉದ್ಯೋಗಿ ಬದ್ರುದ್ದೀನ್ ಕೆ.ಮಾಣಿ (Badruddin Mani), ಕೆ. ರಮಣ್‌, ಡಾ.ಹರೀಶ್‌ಕುಮಾರ್‌, ನಾರಾಯಣ್‌ ಜಿ. ಚನ್ನಾಳ್‌, ನಿವೃತ್ತ ಐಎಎಸ್‌ ಅಧಿಕಾರಿ ಬಿ.ಆರ್‌. ಮಮತಾ, ಹಿರಿಯ ಪತ್ರಕರ್ತರಾದ ರುದ್ರಣ್ಣ ಹರ್ತಿಕೋಟೆ, ಎಸ್‌. ರಾಜಶೇಖರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು.

  • ಪಬ್ಲಿಕ್ ಟಿವಿಯ ಬದ್ರುದ್ದೀನ್‌ಗೆ ಒಲಿದ ಕಾಸರಗೋಡು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ

    ಪಬ್ಲಿಕ್ ಟಿವಿಯ ಬದ್ರುದ್ದೀನ್‌ಗೆ ಒಲಿದ ಕಾಸರಗೋಡು ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿ

    ಬೆಂಗಳೂರು: ಕಾಸರಗೋಡು (Kasargod) ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ (Endowment) ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಕೇರಳದ (Kerala) ಕೊಚ್ಚಿಯಲ್ಲಿ ಭಾನುವಾರ ನಡೆಯಿತು.

    ಈ ವೇಳೆ ಪಬ್ಲಿಕ್ ಟಿವಿಯ (Public TV) ಹಿರಿಯ ಪತ್ರಕರ್ತ ಬದ್ರುದ್ದೀನ್ ಮಾಣಿ (Badruddin Mani) ಅವರಿಗೆ ಕೆ.ವಿ.ಆರ್.ಠ್ಯಾಗೋರ್ ಸ್ಮರಣಾರ್ಥ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಹಾಗೂ ಡಾ.ವೆಂಕಟೇಶ್ ತುಪ್ಪಿಲ್ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ಪ್ರಧಾನಿ ಮೋದಿ ನಾಲಾಯಕ್‌: ಪ್ರಿಯಾಂಕ್‌ ಖರ್ಗೆ ಮೂದಲಿಕೆ

    ಬದ್ರುದ್ದೀನ್ ಮಾಣಿ ಅವರು 2014ರಿಂದ ಪಬ್ಲಿಕ್ ಟಿವಿಯಲ್ಲಿ ರಾಜಕೀಯ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಮಾಧ್ಯಮದಲ್ಲಿ (Media) ಸರಿ ಸುಮಾರು 3 ದಶಕಗಳ ಕಾಲ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ ನಟಿ ರಮ್ಯಾ

    ಮಾರ್ಚ್ 21ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆಯವರು ಪ್ರಶಸ್ತಿಗಳನ್ನು ಘೋಷಿಸಿದ್ದರು. ದತ್ತಿನಿಧಿ ಪ್ರಶಸ್ತಿಗೆ 12 ಮಂದಿ ಪತ್ರಕರ್ತರು ಭಾಜನರಾಗಿದ್ದರು. ಈ ಕಾರ್ಯಕ್ರಮವು ಕೇರಳದ ಕೊಚ್ಚಿಯಲ್ಲಿ ನಡೆದಿದ್ದು, ತಲಾ 10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು. ಇದನ್ನೂ ಓದಿ: ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ ಭಾರೀ ಇಳಿಕೆ

  • ಪಬ್ಲಿಕ್‌ ಟಿವಿಯ ಬದ್ರುದ್ದೀನ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ

    ಪಬ್ಲಿಕ್‌ ಟಿವಿಯ ಬದ್ರುದ್ದೀನ್‌ಗೆ ಕಾಸರಗೋಡು ಪತ್ರಕರ್ತರ ಸಂಘದ ದತ್ತಿ ಪ್ರಶಸ್ತಿ

    ಬೆಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಘೋಷಣೆಯಾಗಿದ್ದು, ಪಬ್ಲಿಕ್‌ ಟಿವಿಯ (PUBLiC TV) ಹಿರಿಯ ಪತ್ರಕರ್ತ ಬದ್ರುದ್ದೀನ್‌ ಮಾಣಿ (Badruddin Mani) ಸೇರಿದಂತೆ 12 ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

    ಕೆ.ವಿ. ಆರ್. ಠ್ಯಾಗೋರ್ ಸ್ಮರಣಾರ್ಥ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಟಿ. ತಿಮ್ಮೇಗೌಡ ಹಾಗೂ ಡಾ. ವೆಂಕಟೇಶ್ ತುಪ್ಪಿಲ್ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಗೆ ಬದ್ರುದ್ದೀನ್ ಕೆ. ಮಾಣಿ ಆಯ್ಕೆ ಆಗಿದ್ದಾರೆ. 2014ರಿಂದ ಪಬ್ಲಿಕ್‌ ಟಿವಿಯ ಹಿರಿಯ ರಾಜಕೀಯ ವರದಿಗಾರ ಬದ್ರುದ್ದೀನ್‌ ಮಾಣಿ ಅವರು ಕಾರ್ಯ ನಿರ್ವಹಿಸುತ್ತಿದ್ದು ಮಾಧ್ಯಮದಲ್ಲಿ ಸರಿ ಸುಮಾರು 3 ದಶಕಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರು ಪ್ರಶಸ್ತಿಗಳನ್ನು ಪ್ರಕಟಿಸಿದರು. ಪ್ರಶಸ್ತಿಯು ತಲಾ 10 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಗೌರವಾಧಾರಗಳನ್ನು ಒಳಗೊಂಡಿರುತ್ತದೆ ಎಂದು ಅವರು ಹೇಳಿದರು. ಕೇರಳದ  ಏರ್ನಾಕುಲಂನಲ್ಲಿ ಏಪ್ರಿಲ್ 30ಕ್ಕೆ ಕಾರ್ಯಕ್ರಮ ನಡೆಯಲಿದೆ.

    ಪ್ರಶಸ್ತಿಗಳ ವಿವರ:
    ಮಂಗಳೂರಿನ ಹಿರಿಯ ಪತ್ರಕರ್ತರಾದ ಮನೋಹರ್ ಪ್ರಸಾದ್ (ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿಯವರ ನೆನಪಿಗಾಗಿ ಶ್ರೀ ಮಠವು ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಮಂಗಳೂರಿನ ಯು.ಕೆ. ಕುಮಾರನಾಥ್ (ಅವ್ವ ಸೇವಾ ಟ್ರಸ್ಟ್ ಹುಬ್ಬಳ್ಳಿ ಇದರ ಸಂಸ್ಥಾಪಕರ ಹಾಗೂ ರಾಜ್ಯ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಬೆಳಗಾವಿ ಜಿಲ್ಲೆ ಸಂಯುಕ್ತ ಕರ್ನಾಟಕ ಪತ್ರಿಕೆಯ ಕೀರ್ತಿಶೇಖರ್ ಕಾಸರಗೋಡು (ಹವ್ವಾ ಹಸನ್ ಫೌಂಡೇಶನ್ ಕುದ್ಕೋಳಿ ಸಂಸ್ಥಾಪಕ ಹಾಗೂ ಹಿರಿಯ ಆರ್ಥಿಕ ತಜ್ಞ ಅಬ್ದುಲ್ಲ ಮಾದುಮೂಲೆ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಪ್ರಜಾವಾಣಿ ವರದಿಗಾರ ರಾಜೇಶ್ ರೈ ಚಟ್ಲ (ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಸ್ಥಾಪಿಸಿರುವ ದತ್ತಿ ಪ್ರಶಸ್ತಿ), ವಿಕ್ರಂ ಕಾಂತಿಕೆರೆ (ಹೇರಂಭ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಹಂಝ ಮಲಾರ್ (ಪತ್ರಕರ್ತ ಜೆ.ಆರ್. ಕೆಂಚೇಗೌಡ ಹಾಸನ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಮುಂಬಯಿ ರೋನ್ಸ್ ಬಂಟ್ವಾಳ್ (ನ್ಯಾಯವಾದಿ ಮೊಹಮ್ಮದ್ ಇಬ್ರಾಹಿಂ ಪಾರ ಸ್ಮರರ್ಣಾಥ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ಕೊಡಗು ಜಿಲ್ಲೆಯ ಅಜ್ಜಮಾಡ ರಮೇಶ್ ಕುಟ್ಟಪ್ಪ (ಸಾಹಿತಿ ಸಂಘಟಕ ಪ್ರಭಾಕರ ಕಲ್ಲೂರಾಯ ಬನದಗದ್ದೆ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ), ದಯಾಸಾಗರ್ ಚೌಟ (ಮೊಗರೋಡಿ ಗೋಪಾಲಕೃಷ್ಣ ಮೇಲಾಂಟ ಸ್ಮರಣಾರ್ಥ ಹರ್ಷ ಮೇಲಾಂಟ ಹಾಗೂ ಕುಟುಂಬ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿ) ಭಾಜನರಾಗಿದ್ದಾರೆ.  ಇದನ್ನೂ ಓದಿ: ‘ನಾಟು ನಾಟು’ ಹಾಡಿಗೆ ಸಾವಿರಾರು ಟೆಸ್ಲಾ ಕಾರು ಡಾನ್ಸ್

    ಇದೇ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಸ್ಥಾಪಿಸಿರುವ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಕಾಸರಗೋಡಿನ ಪ್ರದೀಪ್ ಕುಮಾರ್ ಬೇಕಲ್ ಮತ್ತು ದೇವದಾಸ ಪಾರೆಕಟ್ಟೆ ಆಯ್ಕೆಯಾಗಿದ್ದಾರೆ.

    ಮೀನುಗಾರಿಕಾ ದತ್ತಿ ಪ್ರಶಸ್ತಿ:
    ದೈವ ನರ್ತಕ ಕೀರ್ತಿಶೇಷ ಶ್ರೀ ದೇವಯ್ಯ ಖಾರ್ವಿ ಗಂಗೊಳ್ಳಿ ಅವರ ಹೆಸರಿನಲ್ಲಿ ಹಿರಿಯ ಪತ್ರಕರ್ತ ವಿನಾಯಕ ಗಂಗೊಳ್ಳಿ ಅವರು ಸ್ಥಾಪಿಸಲು ಉದ್ದೇಶಿಸಿರುವ ಮೀನುಗಾರಿಕಾ ದತ್ತಿ ಪ್ರಶಸ್ತಿಗೂ ಚಾಲನೆ ನೀಡಲಾಗುವುದು ಎಂದು ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗಂಗಾಧರ್, ಕೋಶಾಧಿಕಾರಿ ಪುರುಷೋತ್ತಮ ಪೆರ್ಲ ಅವರು ಹಾಜರಿದ್ದರು.

  • ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿಗೆ ಪಬ್ಲಿಕ್ ಟಿವಿಯ ಬದ್ರುದ್ದೀನ್ ಆಯ್ಕೆ

    ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿಗೆ ಪಬ್ಲಿಕ್ ಟಿವಿಯ ಬದ್ರುದ್ದೀನ್ ಆಯ್ಕೆ

    ಬೆಂಗಳೂರು: ಪಬ್ಲಿಕ್ ಟಿವಿಯ ಮುಖ್ಯ ವರದಿಗಾರ ಬದ್ರುದ್ದೀನ್.ಕೆ ಮಾಣಿಯವರು ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸೇವೆ/ ಸಾಧನೆಗಾಗಿ ಮತ್ತು ಅತ್ಯುತ್ತಮ ವರದಿಗಳಿಗಾಗಿ ಪತ್ರಕರ್ತರಿಗೆ ನೀಡುವ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಬದ್ರುದ್ದೀನ್ ಮಾಣಿಯವರಿಗೆ ಲಭಿಸಿದೆ.

    ಮಾ.7 ಮತ್ತು 8ರಂದು ಮಂಗಳೂರಿನಲ್ಲಿ ನಡೆಯಲಿರುವ 35ನೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

  • ಪಬ್ಲಿಕ್ ಟಿವಿಯ ಬದ್ರುದ್ದೀನ್ ಮಾಣಿಗೆ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

    ಪಬ್ಲಿಕ್ ಟಿವಿಯ ಬದ್ರುದ್ದೀನ್ ಮಾಣಿಗೆ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ

    ಬೆಂಗಳೂರು: 2018ನೇ ಸಾಲಿನ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಪಬ್ಲಿಕ್ ಟಿವಿಯ ರಾಜಕೀಯ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ವರದಿಗಾರರಾದ ಬದ್ರುದ್ದೀನ್ ಮಾಣಿ ಅವರು ಆಯ್ಕೆಯಾಗಿದ್ದಾರೆ. ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರು ಆಯ್ಕೆಯಾಗಿದ್ದಾರೆ.

    ಬದ್ರುದ್ದೀನ್ ಮಾಣಿ ಸೇರಿದಂತೆ 15 ಮಂದಿ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದು ಡಿಸೆಂಬರ್ 31ರಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಿದ್ದಾರೆ.

    ಪ್ರಶಸ್ತಿ ಪುರಸ್ಕೃತರು: ಕೆ.ಎನ್ ತಿಲಕ್ ಕುಮಾರ್, ರವಿ ಹೆಗಡೆ, ಕೆ.ಎಸ್.ಸಚ್ಚಿದಾನಂದ ಮೂರ್ತಿ (ಸಚ್ಚಿ), ತಿಮ್ಮಪ್ಪ ಭಟ್, ಎ.ಬಾಲಚಂದ್ರ, ವೆಂಕಟನಾರಾಯಣ, ರಾಮಣ್ಣ ಎಚ್. ಕೋಡಿ ಹೊಸಹಳ್ಳಿ, ತುಂಗಾ ರೇಣುಕ, ಕೆ.ವಿ.ಪ್ರಭಾಕರ್, ಡಿ.ಸಿ.ನಾಗೇಶ್, ರಾಜಶೇಖರ ಹತ್ ಗುಂದಿ, ವೇದಂ ಜಯಶಂಕರ್, ರಾಜಶೇಖರ ಅಬ್ಬೂರು, ಶಿವಾಜಿ ಗಣೇಶನ್.

    ಡಿಸೆಂಬರ್ 31ರಂದು ನಡೆಯುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಚಲನಚಿತ್ರ ನಟ,ನಟಿಯರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv