Tag: baffalo

  • ಎಮ್ಮೆಯನ್ನು ತಪ್ಪಿಸಲು ಹೋಗಿ ಸೇತುವೆಯಿಂದ ಬಸ್ ಪಲ್ಟಿ – 12 ಮಂದಿ ಸಾವು

    ಎಮ್ಮೆಯನ್ನು ತಪ್ಪಿಸಲು ಹೋಗಿ ಸೇತುವೆಯಿಂದ ಬಸ್ ಪಲ್ಟಿ – 12 ಮಂದಿ ಸಾವು

    ಭುವನೇಶ್ವರ: ರಸ್ತೆಗೆ ಅಡ್ಡ ಬಂದ ಎಮ್ಮೆಯನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಬಸ್ ಪಲ್ಟಿಯಾಗಿರುವ ಘಟನೆ ಒಡಿಶಾ ರಾಜ್ಯದ ಜಗತ್‍ಪುರದ ಮಹಾನದಿ ಸೇತುವೆ ಬಳಿ ಮಂಗಳವಾರ ನಡೆದಿದೆ.

    ಅಪಘಾತಕ್ಕಿಡಾದ ಬಸ್ಸಿನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಮಹಾನದಿ ಸೇತುವೆ ಮೇಲೆ ಬಸ್ ಚಲಿಸುತ್ತಿದ್ದ ವೇಳೆ ರಸ್ತೆಗೆ ಎಮ್ಮೆಯೊಂದು ಅಡ್ಡ ಬಂದಿದೆ. ಎಮ್ಮೆಯನ್ನು ತಪ್ಪಿಸಲು ಹೋಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಪಲ್ಟಿಯಾಗಿ ಕೆಳಕ್ಕುರುಳಿದೆ. ಬಸ್ ಪಲ್ಟಿಯಾದ ಪರಿಣಾಮ ಸುಮಾರು 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ಉಚಿತ ಚಿಕಿತ್ಸೆಯನ್ನು ನೀಡುಲಾಗುತ್ತದೆ. ಈ ಅವಘಡದಿಂದ ಬಹಳ ಬೇಸರವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ತಂಡದವರು ಆಗಮಿಸಿದ್ದು, ಜಿಲ್ಲಾಡಳಿತ ಅಧಿಕಾರಿಗಳು ಸೇರಿ ಸ್ಥಳೀಯ ಪೊಲೀಸರ ನೇತೃತ್ವದಲ್ಲಿ ರಕ್ಷಣಾ ಕಾರ್ಯಚರಣೆಯು ಮುಂದುವರಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews