Tag: bagalkote

  • ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ

    ಬೆಂಗಳೂರು : ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನು (Bagalkote Horticulture University) ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ (Chaluvaraya Swamy) ಸ್ಪಷ್ಟಪಡಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಹನುಮಂತ ನಿರಾಣಿ ಪ್ರಶ್ನೆ ಕೇಳಿದ್ರು. ಸರ್ಕಾರ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ .ಮಂಡ್ಯದಲ್ಲಿ ಸಮಗ್ರ ವಿವಿ ಮಾಡಲು ಸರ್ಕಾರ ಹೊರಟಿದೆ. ಈ ಮೂಲಕ ಬಾಗಲಕೋಟೆ ವಿವಿ ಮುಚ್ಚುವ ಹುನ್ನಾರ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನು ಮುಚ್ಚಬಾರದು, ಮಂಡ್ಯಗೆ ಬದಲಾವಣೆ ಮಾಡಬಾರದು ಅಂತ ಒತ್ತಾಯ ಮಾಡಿದರು.  ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

     

    ಇದಕ್ಕೆ ಸಚಿವ ಚೆಲುವರಾಯಸ್ವಾಮಿ ಉತ್ತರ ನೀಡಿ, ಸಮಗ್ರ ವಿವಿ ಮಾಡುವ ಹಿನ್ನೆಲೆಯಲ್ಲಿ ವಿಜಯ್ ಭಾಸ್ಕರ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ‌. ಇನ್ನು ವರದಿ ಬಂದಿಲ್ಲ. ವರದಿ ಬಂದ ಮೇಲೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಬಾಗಲಕೋಟೆ ತೋಟಗಾರಿಕೆ ವಿವಿಯನ್ನ ಮುಚ್ಚುವುದಿಲ್ಲ ಮತ್ತು ವಿಲೀನ ಮಾಡುವುದಿಲ್ಲ. ಯಾವುದೇ ಕಡೆ ಶಿಫ್ಟ್ ಕೊಡೋದು ಇಲ್ಲ ಎಂದು ಹೇಳಿದರು.

  • ಒಂದು ಬಸ್ಸಿನ ಹಿಂದೆ, ಇನ್ನೊಂದು ಬಸ್ಸಿನ ಮುಂಭಾಗಕ್ಕೆ ಗುದ್ದಿ ಲಾರಿ ಪಲ್ಟಿ

    ಒಂದು ಬಸ್ಸಿನ ಹಿಂದೆ, ಇನ್ನೊಂದು ಬಸ್ಸಿನ ಮುಂಭಾಗಕ್ಕೆ ಗುದ್ದಿ ಲಾರಿ ಪಲ್ಟಿ

    ಬಾಗಲಕೋಟೆ: ಚಾಲಕನ ಅಚಾತುರ್ಯದಿಂದ ಎರಡು ಬಸ್ಸುಗಳಿಗೆ ಲಾರಿ (Lorry) ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಬಾಗಲಕೋಟೆ (Bagalkote) ತಾಲೂಕಿನ ಸಿದ್ನಾಳ್ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ರಲ್ಲಿ ನಡೆದಿದೆ.

    ಮುಧೋಳ ಮೂಲದ ಲಾರಿ ಇದಾಗಿದ್ದು, ಸುಣ್ಣದ ಕಲ್ಲು ಲೋಡ್ ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿತ್ತು. ಈ ವೇಳೆ ಚಾಲಕ ಅಚಾತುರ್ಯದಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ನಂತರ ವಿಜಯಪುರ ಕಡೆಗೆ ಹೊರಟಿದ್ದ ಬಸ್ಸಿನ ಮುಂಭಾಗಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

     

    ಎರಡು ಬಸ್ಸುಗಳಿಗೆ ಲಾರಿ ಗುದ್ದಿದ್ದರಿಂದ ನಿರ್ವಾಹನ ತಲೆಗೆ ಗಾಯವಾಗಿದ್ದು, ಲಾರಿ ಚಾಲಕನ ಕೈ ಕಾಲಿಗೆ ಗಂಭೀರ ಗಾಯವಾಗಿದೆ. ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಲಾರಿ ಚಾಲಕ ವೇಗವಾಗಿ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ.

    ಯಾವುದೇ ಪ್ರಾಣಹಾನಿ ಸಂಭವಿಸದ ಕಾರಣ ನಡೆಯಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಸುಮಾರು ಐದಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾರಿಗೂ ದೊಡ್ಡ ಪ್ರಮಾಣದ ಹಾನಿಯಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಕಲಾದಗಿ ಪೊಲೀಸರು ಪರಿಶೀಲನೆ‌ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

    ಮುಧೋಳ ಬಿಸಿಎಂ ಕಚೇರಿಯನ್ನು ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರಿಸಿ, ಇಲ್ಲವೇ ಬಂದ್ ಮಾಡಿ!

    – ಮುಧೋಳ  ಹಿಂದುಳಿದ ವರ್ಗಗಳ ಕಲ್ಯಾಣ ಕಚೇರಿಗೆ ಬರುತ್ತಿಲ್ಲ ಜನ
    – ನಗರದಿಂದ 3 ಕಿ.ಮೀ ದೂರದಲ್ಲಿದೆ ಆಫೀಸ್‌

    ಬಾಗಲಕೋಟೆ: ಸರ್ಕಾರದ ಯೋಜನೆಗಳನ್ನು ಪಡೆಯಬೇಕು ಎನ್ನುವ ಕನಸು, ಆಸೆ ಎಲ್ಲ ಹಿಂದುಳಿದ ವರ್ಗದವರಿಗೂ ಇರುತ್ತದೆ. ಆದರೆ ಮೂರು ಮೈಲಿ ದೂರದಲ್ಲಿರುವ ಕಚೇರಿ ತಲುಪುವುದೇ ಹರಸಾಹಸ. ಕಚೇರಿ ಮೆಟ್ಟಿಲು ಹತ್ತುವುದೊರಳಗೆ ಸಾಕಪ್ಪ ಸಾಕು ಎನಿಸಿ ಬಿಡುತ್ತದೆ.

    ಹೌದು, ಬಾಗಲಕೋಟೆ (Bagalkote) ಜಿಲ್ಲೆಯಲ್ಲಿ, ಹಿಂದುಳಿದ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಅದರಲ್ಲೂ ಹಿಂದುಳಿದವರಿಗಾಗಿ ಮೀಸಲಿರುವ ಹಿಂದುಳಿದ ವರ್ಗಗಳ ತಾಲೂಕ ಕಚೇರಿಯ ಕಥೆ-ವ್ಯಥೆ ಇದು. ಮುಧೋಳ (Mudhol) ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM Office) ಕಛೇರಿಯ ಸ್ಥಿತಿ ಇದು. ನಗರದ ಪ್ರಮುಖ ಜನ ವಸತಿ ಪ್ರದೇಶ, ಪ್ರಮುಖ ಬೀದಿಗಳಲ್ಲಿ ಇರಬೇಕಿದ್ದ ಇಲಾಖೆ ಕಚೇರಿ, ನಗರದಿಂದ ಬರೋಬ್ಬರಿ 3 ಕಿ.ಮೀ ದೂರದಲ್ಲಿದೆ. ಇದು ಸಾರ್ವಜನಿಕರಿಗೆ ವರದಾನ ಆಗುವ ಬದಲು ನತದೃಷ್ಟ ಇಲಾಖೆ ಎನ್ನುವ ಹಣೆಪಟ್ಟಿ ಕಟ್ಟಿಕೊಂಡಿದೆ.

    ಅತೀ ಹೆಚ್ಚಿನ ಪ್ರಮಾಣದಲ್ಲಿ ಯೋಜನೆಗಳು ಇರುವುದೇ ಹಿಂದುಳಿದ ವರ್ಗಗಗಳ ಇಲಾಖೆಯಲ್ಲ. ಮುಖ್ಯವಾಗಿ ವಿದ್ಯಾರ್ಥಿಗಳ ಶಿಕ್ಷಣ, ವಸತಿ, ರೈತರಿಗೆ ಗಂಗಾ ಕಲ್ಯಾಣ ಸೇರಿ ಅನೇಕ ಯೋಜನೆಗಳು ಜಾರಿಯಲ್ಲಿವೆ. ಮುಧೋಳ ತಾಲೂಕಿನಲ್ಲಿ ಹತ್ತಾರು ಸರ್ಕಾರಿ ವಸತಿ ನಿಲಯಗಳು ಈ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈವರೆಗೆ ಸ್ವಂತ ಜಾಗ, ಕಟ್ಟಡ ಹೊಂದಿಲ್ಲ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನ ಹರಿಸಿಲ್ಲ ಎನ್ನುವುದೇ ದುರಂತದ ಸಂಗತಿ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ 13ನೇ ಸ್ಥಳದಲ್ಲಿ ಮೂಳೆ ಸಿಗದೇ ಇದ್ರೆ ತನಿಖೆ ಸ್ಥಗಿತ?

    ಬೀಳಗಿ, ಗಲಗಲಿ ರಸ್ತೆ ಪಕ್ಕದ ಸೈಯದಸಾಬ ದರ್ಗಾ ಹಿಂಭಾಗದಲ್ಲಿರುವ ದೇವರಾಜ ಅರಸು ಭವನ ಕಟ್ಟಡದಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಅದು ಕೂಡ ಕಳಪೆ ಕಟ್ಟಡ ಎನ್ನುವುದು ಕಚೇರಿ ಒಳಗೆ ಕಾಲಿಟ್ಟರೆ ಸಾಕು ಗೋಡೆಗಳೇ ಸಾರಿ ಸಾರಿ ಹೇಳುತ್ತವೆ. ಈ ಕಚೇರಿ ತಲುಪಬೇಕಾದರೆ ಸ್ವಂತ ವಾಹನ ಖಂಡಿತ ಬೇಕು. ಇಲ್ಲವಾದಲ್ಲಿ ಕಾಲ್ನಡಿಗೆಯಲ್ಲಿ ಕನಿಷ್ಠ ಮೂರು ಕಿಲೋ ಮೀಟರ್ ನಡೆದೇ ಸಾಗಬೇಕು. ಕಚೇರಿ ತಲುಪಬೇಕಾದ್ರೆ ಸರ್ಕಾರಿ ಬಸ್, ವಾಹನದ ಸೌಲಭ್ಯ ಇಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶದ ಜನರು ಈ ಕಚೇರಿಯನ್ನೇ ಅವಲಂಬಿಸಿದ್ದಾರೆ.

    ಕಚೇರಿ ಸ್ಥಳ ಪತ್ತೆ ಮಾಡಲು ಪರದಾಡುವುದನ್ನು ನೋಡಿದರ ಅಯ್ಯೋ ಭಗವಂತ ಯಾಕ ಬೇಕು ಹರಸಾಹಸ ಅಂತ ಅನಿಸಿ ಬಿಡುತ್ತದೆ. ನಿರ್ಜನ ಪ್ರದೇಶವಾಗಿರುವುದರಿಂದ ಆಟೋ ಸಂಚಾರ ದುರ್ಲಭ. ಜನಸಂದಣಿ ಇಲ್ಲದಿರುವುದು ಮತ್ತು ಪಕ್ಕದಲ್ಲಿ ಸ್ಮಶಾನ, ಕಲ್ಲಿನ ಕಣಿವೆಗಳು ಇರುವುದರಿಂದ ಒಂಟಿಯಾಗಿ ಮಹಿಳೆಯರು, ವಯೋವೃದ್ಧರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಚೇರಿಗೆ ಹೋಗಲು ಭಯ ಪಡುತ್ತಿದ್ದಾರೆ. ಕಚೇರಿ ಒಳಪ್ರವೇಶ ಮಾಡಲು ಅಂಗವಿಕಲರಿಗೆ ಬಹಳಷ್ಟು ತೊಂದರೆ ಎದುರಾಗುತ್ತದೆ. ಅವರ ಗೋಳಾಟ ದೇವರೇ ಬಲ್ಲ. ಕಚೇರಿಗೆ ದೂರವಾಣಿ ಸಂಪರ್ಕವೂ ಇಲ್ಲ. ಕಚೇರಿಯಲ್ಲಿನ ಅಧಿಕಾರಿಗಳು, ಸಿಬ್ಬಂದಿಯ ನಿಷ್ಕಾಳಜಿ, ಅಸಮರ್ಪಕ ಕಾರ್ಯನಿರ್ವಹಣೆ ಬೇಸರ ಉಂಟು ಮಾಡುತ್ತದೆ. ಆಡಳಿತ ವ್ಯವಸ್ಥೆ ಜನರಿಗೆ ಹತ್ತಿರವಿರಲಿ ಅಂತ ಸರ್ಕಾರ ಬಯಸುತ್ತಿದೆ. ಆದರೆ ಮುಧೋಳ ಹಿಂದುಳಿದ ವರ್ಗಗಳ ಇಲಾಖೆ ಜನರ ಸೇವೆಯಿಂದ ಬಹು ದೂರವಾಗುತ್ತಿದೆ.

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ಕಚೇರಿ ನಗರದಿಂದ ಮೂರು ಕಿ.ಮೀ. ದೂರದಲ್ಲಿದೆ. ಪಕ್ಕದಲ್ಲಿ ಸ್ಮಶಾನ, ಕಲ್ಲಿನ ಕ್ವಾರಿ ಇದೆ. ಜನರ ಓಡಾಟ ಇಲ್ಲವೇ ಇಲ್ಲ. ಸೌಲಭ್ಯ ಪಡೆಯಲು ಹರಸಾಹಸ ಪಡಬೇಕು. ತಾಲೂಕು ಆಡಳಿತ ಭವನಕ್ಕೆ ಸ್ಥಳಾಂತರ ಮಾಡಬೇಕು. ಇಲ್ಲವೆ ಬಂದ್ ಮಾಡುವುದು ಒಳಿತು ಎಂದು ಜನರು ಆಕ್ರೋಶ ಹೊರ ಹಾಕ್ತಿದ್ದಾರೆ.

  • ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ

    ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ

    ಬಾಗಲಕೋಟೆ: ಮಾಜಿ ಸಚಿವ ಅರವಿಂದ ಲಿಂಬಾವಳಿ (Arvind Limbavali) ತಾಯಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

    ಬಾಗಲಕೋಟೆ (Bagalkote) ನಗರದ ದೀಪಂ ಕಾಲೋನಿಯಲ್ಲಿ ಭೀಮಾಬಾಯಿ ಲಿಂಬಾವಳಿ(84) ನೆಲೆಸಿದ್ದರು. ಇಂದು ಬೆಳಗ್ಗೆ 4 ಗಂಟೆಗೆ ಅವರು ಮನೆಯಲ್ಲೇ ಮೃತಪಟ್ಟಿದ್ದಾರೆ.

    ಇಂದು ಸಂಜೆ ತುಳಸಿಗೇರಿಯ ಹೊಲದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ. ಮೃತರಿಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿದಂತೆ ಐವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಇದನ್ನೂ ಓದಿ: ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ


    ತಾಯಿಯ ಪ್ರೀತಿ, ಮಮತೆ ಮತ್ತು ಆಶೀರ್ವಾದ ನಮ್ಮ ಹೃದಯದಲ್ಲಿ ಸದಾ ಹಸಿರಾಗಿರುತ್ತದೆ. ಜೀವನದಲ್ಲಿ ಅವರು ಕಲಿಸಿದ ಸರಳತೆ ಮತ್ತು ನೀತಿ ಪಾಠಗಳು ನನಗೆ ಸನ್ಮಾರ್ಗದಲ್ಲಿ ನಡೆಯಲು ಸದಾ ಪ್ರೇರಣೆ ನೀಡುತ್ತಿರುತ್ತವೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಕೋರುತ್ತೇನೆ ಎಂದು ಲಿಂಬಾವಳಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

  • ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

    ಬಾಗಲಕೋಟೆ | ಸಹಪಾಠಿಗಳಿಂದ ರ‍್ಯಾಗಿಂಗ್ – ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

    ಬಾಗಲಕೋಟೆ: ಸಹಪಾಠಿಗಳು ರ‍್ಯಾಗಿಂಗ್ ಮಾಡಿದ್ದಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.

    ಗುಳೇದಗುಡ್ಡ ಪಟ್ಟಣದ ಖಾಸಗಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಗದಗ | ಐಪಿಎಸ್ ಅಧಿಕಾರಿಯ ಸಹೋದರನ ದರ್ಪ – ಕುಡಿದ ಮತ್ತಲ್ಲಿ ಠಾಣೆಗೆ ನುಗ್ಗಿ ರಂಪಾಟ

    ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳಾದ ವರ್ಷಾ ಹಾಗೂ ಪ್ರದೀಪ್ ಸೇರಿ ಅಂಜಲಿಗೆ ರ‍್ಯಾಗಿಂಗ್ ಮಾಡಿದ್ದರು. ಇದರಿಂದ ಮಾನಸಿಕ ಕಿರುಕುಳ ಅನುಭವಿಸಿದ್ದ ಅಂಜಲಿ, ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಆಪರೇಷನ್ ಅಖಾಲ್ | ಭದ್ರತಾ ಸಿಬ್ಬಂದಿ, ಉಗ್ರರ ನಡುವೆ ಗುಂಡಿನ ಚಕಮಕಿ – ಇಬ್ಬರು ಯೋಧರು ಹುತಾತ್ಮ

    ಈ ಸಂಬಂಧ ವರ್ಷಾ ಜಮ್ಮನಕಟ್ಟಿ ಹಾಗೂ ಪ್ರದೀಪ್ ಅಳಗುಂದಿ ಇನ್ನಿತರರ ಮೇಲೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    ಡೆತ್‌ನೋಟ್‌ನಲ್ಲೇನಿದೆ?
    ನನ್ನ ಸಾವಿಗೆ ಕಾರಣ ಈ ಮೂವರು ವ್ಯಕ್ತಿಗಳು. ನನ್ನ ಬದುಕಿನಲ್ಲಿ ಅವರು ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು. ನನ್ನ ಬಗ್ಗೆಯೇ ಮಾತನಾಡಿ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. ಸೇಯಿಂಗ್ ಗುಡ್ ಬೈ ಎಂದು ಸಹಿ ಹಾಕಿ ಅಂಜಲಿ ಡೆತ್‌ನೋಟ್ ಬರೆದಿದ್ದಾಳೆ.

  • ಬಾಗಲಕೋಟೆ ನಡುರಸ್ತೆಯಲ್ಲಿ ಗೂಳಿಗಳ ಕಾದಾಟ – ವಾಹನಗಳು ಜಖಂ

    ಬಾಗಲಕೋಟೆ ನಡುರಸ್ತೆಯಲ್ಲಿ ಗೂಳಿಗಳ ಕಾದಾಟ – ವಾಹನಗಳು ಜಖಂ

    ಬಾಗಲಕೋಟೆ: ಜಿಲ್ಲೆಯಲ್ಲಿ ಬಿಡಾಡಿ ಗೂಳಿಗಳ (Bulls) ಕಾಟ ಹೆಚ್ಚಾಗಿದ್ದು, ರಸ್ತೆ ಮಧ್ಯೆ ಮದಗಜಗಳಂತೆ ಗೂಳಿಗಳ ಕಾದಾಟ ನಡೆಸುವುದು ಈಗ ಸಾಮಾನ್ಯವಾಗಿದೆ.

    ನವನಗರದಲ್ಲಿ ಎರಡು ಬೀದಿ ಗೂಳಿಗಳ ಕಾದಾಟಕ್ಕೆ ವಾಹನಗಳು ಜಖಂಗೊಂಡಿವೆ. ಕಾದಾಡುತ್ತಾ ಬೈಕ್ ಮೇಲೆ ಗೂಳಿಗಳು ಎಗರಿದ್ದರಿಂದ ಬೈಕ್‌ಗಳು ಕೆಳಗೆ ಬಿದ್ದಿದೆ.  ಇದನ್ನೂ ಓದಿ: ಧರ್ಮಸ್ಥಳವನ್ನು ಕಬಳಿಸಲು ಸರ್ಕಾರ ಈಗ ಸಾಕ್ಷಿ ಹುಡುಕುತ್ತಿದೆ: ಪ್ರತಾಪ್‌ ಸಿಂಹ

    ಬಿಡಾಡಿ ದನಗಳ ನಿಯಂತ್ರಣಕ್ಕೆ ಬಾಗಲಕೋಟೆ (Bagalkote) ನಗರಸಭೆ ಕ್ರಮ ಕೈಗೊಂಡಿಲ್ಲ. ಹೀಗಾಗಿ ಬಿಡಾಡಿ ಗೂಳಿಗಳ ಹಾವಳಿ ತಪ್ಪಿಸಿ ಎಂದು ಸ್ಥಳೀಯರ ಆಗ್ರಹಿಸಿದ್ದಾರೆ.

  • ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಭ್‌ ಪಂತ್ ಆರ್ಥಿಕ ನೆರವು

    ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಭ್‌ ಪಂತ್ ಆರ್ಥಿಕ ನೆರವು

    ಬಾಗಲಕೋಟೆ: ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದ್ರೂ ಪದವಿ ಪ್ರವೇಶಾತಿಗೆ ಹಣವಿಲ್ಲದೇ ಪರದಾಡುತ್ತಿದ್ದ ವಿದ್ಯಾರ್ಥಿನಿಗೆ ಟೀಂ ಇಂಡಿಯಾ ಆಟಗಾರ ರಿಷಭ್‌ ಪಂತ್ (Rishabh Pant) ಆರ್ಥಿಕ ನೆರವು ನೀಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.

    ಬಾಗಲಕೋಟೆ (Bagalkote) ತಾಲೂಕಿನ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ್ ಎಂಬ ವಿದ್ಯಾರ್ಥಿನಿ ಪಿಯುಸಿಯಲ್ಲಿ 83% ಅಂಕ ಗಳಿಸಿದ್ದಳು. ಉನ್ನತ ಶಿಕ್ಷಣ ಪಡೆಯಬೇಕು ಎಂದು ಕನಸು ಕಂಡಿದ್ದ ಆಕೆಗೆ ಬಡತನ ಹಾಗೂ ಆರ್ಥಿಕ ತೊಂದರೆ ಕಾಡ ತೊಡಗಿತ್ತು. ಇದನ್ನೂ ಓದಿ: ಉಡಾನ್ ಯೋಜನೆಯಡಿ ಬಳ್ಳಾರಿ, ಕೋಲಾರ ಮಿನಿ ಏರ್‌ಪೋರ್ಟ್‌ಗೆ ಬಿಡ್ ಸ್ವೀಕಾರ: ಕೇಂದ್ರ ವಿಮಾನಯಾನ ಸಚಿವಾಲಯ

    ತಂದೆ ತೀರ್ಥಯ್ಯ ಗ್ರಾಮದಲ್ಲಿ ಚಿಕ್ಕದಾದ ಚಹಾದ ಅಂಗಡಿ ನಡೆಸುತ್ತಿದ್ದು, ಅದರಿಂದ ಬಂದ ಹಣದಲ್ಲಿ ಕುಟುಂಬ ನಡೆಸುವುದೇ ಕಷ್ಟವಾಗಿತ್ತು. ಇಂತಹ ಕಿತ್ತು ತಿನ್ನುವ ಬಡತನದಲ್ಲಿ ಮಗಳಿಗೆ ಶಿಕ್ಷಣ ಕೊಡಿಸೋದು ಅವ್ರಿಗೆ ಗಗನ ಕುಸುಮವಾಗಿತ್ತು. ಇದನ್ನೂ ಓದಿ: ಆವತ್ತು ಸೈಕಲ್; ಇವತ್ತು ಸ್ಕೂಟರ್ – ಹೊಸ ಫ್ಲೈಓವರ್ ಮೇಲೆ ಡಿಕೆಶಿ ಸ್ಕೂಟರ್ ಸವಾರಿ

    ಮಗಳು ಕಲಿಕೆಗೆ ಪರದಾಡುತ್ತಿದ್ದ ಈ ಸಂದರ್ಭದಲ್ಲಿ ಗ್ರಾಮದವರಾದ ಗುತ್ತಿಗೆದಾರ ಅನಿಲ್ ಹುಣಶಿಕಟ್ಟಿ ಅವರನ್ನು ಜಮಖಂಡಿ ಬಿಎಲ್‌ಡಿಇ ಸಂಸ್ಥೆಯ ಕಾಲೇಜಿನಲ್ಲಿ ಬಿಸಿಎಗೆ ಸೀಟ್ ಕೊಡಿಸುವಂತೆ ಕೋರಿಕೊಂಡಿದ್ದರು. ಅವರು ಸೀಟ್ ಕೊಡಿಸುವ ಜೊತೆಗೆ ಆರ್ಥಿಕ ನೆರವು ಒದಗಿಸುವುದಕ್ಕೂ ಪ್ರಯತ್ನಿಸುವ ಭರವಸೆ ನೀಡಿದ್ದರು.

    ಅನಿಲ್ ಅವರು ರಿಷಭ್‌ ಪಂತ್ ಅವರಿಗೆ ಆತ್ಮೀಯರಾಗಿರುವ ಹಿನ್ನೆಲೆ ಈ ವಿಚಾರವನ್ನು ಪಂತ್ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿಯುತ್ತಿದ್ದಂತೆ ಟೀಂ ಇಂಡಿಯಾ ಆಟಗಾರ ಪಂತ್ ಅವರು ಜುಲೈ 17ರಂದು ಬಿಎಲ್‌ಡಿಇ ಕಾಲೇಜಿನ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಮೂಲಕ ವಿದ್ಯಾರ್ಥಿನಿ ಜ್ಯೋತಿಗೆ ಆರ್ಥಿಕ ಬೆಂಬಲವನ್ನು ನೀಡಿದ್ದಾರೆ. ಇದನ್ನೂ ಓದಿ: ಯೆಲ್ಲೋ ಲೈನ್ ಮೆಟ್ರೋ ಉದ್ಘಾಟನೆಗೆ ಮೋದಿ ಆಗಮನ ಖಚಿತ – ಬಿಜೆಪಿ ಕಾರ್ಯಕರ್ತರ ಸಮಾವೇಶ, ರೋಡ್ ಶೋಗೆ ಕೊಕ್

    ವಿದ್ಯಾರ್ಥಿನಿ ಜ್ಯೋತಿಯ ಮೊದಲ ಸೆಮಿಸ್ಟರ್‌ನ ಶುಲ್ಕ 40 ಸಾವಿರ ರೂ. ಹಣವನ್ನು ರಿಷಭ್‌ ಪಂತ್‌ ಪಾವತಿಸಿ ಮಾನವೀಯತೆ ಮರೆದ್ದಾರೆ. ಪುಟ್ಟ ಗ್ರಾಮದ ವಿದ್ಯಾರ್ಥಿನಿಗೆ ಯಾವುದೇ ಅಪೇಕ್ಷೆ ಇಲ್ಲದೆ ರಿಷಬ್ ಪಂತ್ ಅವರು ನೆರವಾಗುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದು, ಅವರ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಅಪಾರ ಮೆಚ್ಚುಗೆ ವ್ಯಕ್ತವಾಗ್ತಿದೆ.

    ಅಲ್ಲದೇ ರಿಷಭ್‌ ಪಂತ್ ಅವರ ಸಹಾಯಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರಿಗೆ ದೇವರು ಆಯುಸ್ಸು, ಅಂತಸ್ತು ಆರೋಗ್ಯ ಕೊಟ್ಟು ಕಾಪಾಡಲಿ. ಇನ್ನಷ್ಟು ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಶಕ್ತಿ ದೇವರು ಕರುಣಿಸಲಿ ಎಂದು ಅವರ ಸಹಾಯವನ್ನ ನೆನೆಸಿಕೊಂಡಿದ್ದಾರೆ.

  • ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

    ಬಾಗಲಕೋಟೆ | ಬೈಕ್ ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ ಪಲ್ಟಿ – ಇಬ್ಬರು ದುರ್ಮರಣ

    ಬಾಗಲಕೋಟೆ: ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರಿನ ಮೇಲೆ ಲಾರಿ (Lorry) ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರ ಸೀಮಿಕೇರಿ (Simikeri) ಬಳಿ ನಡೆದಿದೆ.

    ಬಾಗಲಕೋಟೆ (Bagalkote) ತಾಲೂಕಿನ ಕೇಸನೂರು ಗ್ರಾಮದ ನಿವಾಸಿ ರಮೇಶ್ ಹೂಗಾರ(45) ಹಾಗೂ ಗದ್ದನಕೇರಿ ನಿವಾಸಿ ಅಕ್ಬರ್ ನಬಿಸಾಬ್ ಚೇರ್ಮನ್ (33) ಮೃತರೆಂದು ಗುರುತಿಸಲಾಗಿದೆ. ಇದನ್ನೂ ಓದಿ: ಉದಯಪುರದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಶಿಕ್ಷಕರಿಂದ ಕಿರುಕುಳ ಆರೋಪ

    ಎದುರಿಗೆ ಬಂದ ಬೈಕ್ ಡಿಕ್ಕಿಯಾಗುವುದನ್ನೂ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಲಾರಿ, ಕಾರಿನ ಮೇಲೆ ಪಲ್ಟಿಯಾಗಿ ಬೈಕ್‌ಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ದುರ್ಮರಣಕ್ಕಿಡಾಗಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಬೈಕ್‌ನಲ್ಲಿದ್ದ ಓರ್ವನಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ತೆಲಂಗಾಣ | ಡಿವೈಡರ್‌ಗೆ ಪೊಲೀಸ್ ವಾಹನ ಡಿಕ್ಕಿ – ಇಬ್ಬರು ಡಿಎಸ್ಪಿ ಸಾವು

    ಕಾರು ಮತ್ತು ಬೈಕ್ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದು, ವಿಜಯಪುರದ ಕಡೆಗೆ ಪ್ಲಾಸ್ಟಿಕ್ ಚೀಲಗಳಿರುವ ಬ್ಯಾಗ್ ಹೊತ್ತುಕೊಂಡು ಲಾರಿ ಹೊರಟಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿದ್ದು, ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬಾಗಲಕೋಟೆ | ಸಹೋದರನ 3 ವರ್ಷದ ಮಗುವನ್ನು ಕತ್ತು ಸೀಳಿ ಕೊಂದ ಪಾಪಿ

    ಬಾಗಲಕೋಟೆ | ಸಹೋದರನ 3 ವರ್ಷದ ಮಗುವನ್ನು ಕತ್ತು ಸೀಳಿ ಕೊಂದ ಪಾಪಿ

    ಬಾಗಲಕೋಟೆ: ವ್ಯಕ್ತಿಯೊಬ್ಬ ತನ್ನ ಸಹೋದರನ 3 ವರ್ಷದ ಮಗುವನ್ನೇ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವುದು ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ ನಡೆದಿದೆ.

    ಮಾರುತಿ ವಾಲಿಕಾರ ಎಂಬವರ 3 ವರ್ಷದ ಮಗು ಅಂಗನವಾಡಿಗೆ ತೆರಳಿತ್ತು. ಈ ವೇಳೆ, ಮಾರುತಿಯ ಸಹೋದರ ಭೀಮಪ್ಪ ವಾಲಿಕಾರ ಅಲ್ಲಿಗೆ ತೆರಳಿ, ಅಂಗನವಾಡಿಯ ಹಿಂಭಾಗದಲ್ಲಿ ಮಗುವಿನ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

    ಈ ಸಂಬಂಧ ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು

    ಪಂಚಮಸಾಲಿ ಶ್ರೀ ಆರೋಗ್ಯದಲ್ಲಿ ಚೇತರಿಕೆ – ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ನಾಯಕರು

    ಬಾಗಲಕೋಟೆ: ಅನಾರೋಗ್ಯಕ್ಕೆ ತುತ್ತಾಗಿದ್ದ ಪಂಚಮಸಾಲಿ (Panchamasali) ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಆರೋಗ್ಯದಲ್ಲಿ (Health) ಚೇತರಿಕೆ ಕಂಡು ಬಂದಿದೆ.

    ಬಾಗಲಕೋಟೆ (Bagalkote) ಕೆರೂಡಿ ಆಸ್ಪತ್ರೆಯಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡ ಬಂದ ಹಿನ್ನೆಲೆಯಲ್ಲಿ ಭಕ್ತರು ಅವರನ್ನು ಭೇಟಿ ಮಾಡಿ ವಿಚಾರಿಸುತ್ತಿದ್ದಾರೆ. ಇದನ್ನೂ ಓದಿ: ಪಂಚಮಸಾಲಿ ಪೀಠಕ್ಕೆ ಹೊಸ ಶ್ರೀ? ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆಗೆ ನಿರ್ಧಾರ?

     

    ಬಾಗಲಕೋಟೆ ಮಾಜಿ ಶಾಸಕ ವೀರಣ್ಣ ಚರಂತಿಮಠ, ಸಂಸದ ಪಿಸಿ ಗದ್ದಿಗೌಡರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮಧ್ಯಾಹ್ನ ಆಸ್ಪತ್ರೆಗೆ ಧಾರವಾಡದ ಶಾಸಕ ಅರವಿಂದ್ ಬೆಲ್ಲದ್ ಭೇಟಿ ನೀಡಲಿದ್ದಾರೆ.

    ಲೋ ಬಿಪಿ, ವಾಂತಿ, ಎದೆ ನೋವು, ತಲೆ ನೋವಿನಿಂದ ಬಳಲುತ್ತಿರುವ ಸ್ವಾಮೀಜಿ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು.