Tag: bagalkote

  • 2 ಗುಂಪುಗಳ ಮಧ್ಯೆ ನಡುಬೀದಿಯಲ್ಲಿ ಮಾರಾಮಾರಿ – ದೂರು ನೀಡಲು ಹಿರಿಯರ ಹಿಂದೇಟು!

    2 ಗುಂಪುಗಳ ಮಧ್ಯೆ ನಡುಬೀದಿಯಲ್ಲಿ ಮಾರಾಮಾರಿ – ದೂರು ನೀಡಲು ಹಿರಿಯರ ಹಿಂದೇಟು!

    – ದೊಣ್ಣೆ, ಹಾಕಿ ಸ್ಟಿಕ್, ತಲ್ವಾರ್‌ ಹಿಡಿದು ಗಲಾಟೆ
    – ಸುಮೋಟೋ ಕೇಸ್‌ ದಾಖಲಿಸಿದ ಪೊಲೀಸರು

    ಬಾಗಲಕೋಟೆ: ಬೈಕ್ ಸೈಡ್ ಹಾಕುವ ವಿಚಾರಕ್ಕೆ ಎರಡು ಗುಂಪುಗಳ ಯುವಕರ ಮಧ್ಯೆ ಮಾರಾಮಾರಿ ನಡೆದಿರುವ ಘಟನೆ ಇಳಕಲ್(Ilkal) ನಗರದ ಹೊಸಪೇಟೆ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

    ದಾದಾಪೀರ್ ಜಕ್ಕಲಿ, ಮಹಮ್ಮದ್ ಜಕ್ಕಲಿ ಹಾಗೂ ಸ್ನೇಹಿತರ ಗುಂಪು, ಶಾಮೀದ್ ರೇಶ್ಮಿ, ರಂಜಾನ್ ಬನ್ನು ಮಧ್ಯೆ ಬೈಕ್ ಸೈಡ್ ಹಾಕುವ ವಿಚಾರಕ್ಕೆ ಜಗಳ (Fight) ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಎರಡು ಗುಂಪಿನ ಯುವಕರು ದೊಣ್ಣೆ, ಹಾಕಿ ಸ್ಟಿಕ್ ಹಾಗೂ ಮಾರಾಕಾಸ್ತ್ರಗಳನ್ನು ಬಳಸಿ ಗಲಾಟೆ ಶುರು ಮಾಡಿದ್ದಾರೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ ತನಿಖೆ ಏನಾಯ್ತು – ಪಾದಯಾತ್ರೆ ನೆನಪಿಸಿ ಸಿಎಂಗೆ ಪತ್ರ ಬರೆದ ಹೆಚ್.ಕೆ ಪಾಟೀಲ್

    ಹೊಡೆದಾಟ ಜೋರಾಗುತ್ತಿದ್ದಂತೆ ಯುವಕನೊಬ್ಬ ತಲ್ವಾರ್‌ ಬಳಸಿ ಜಗಳಕ್ಕೆ ಇಳಿದಿದ್ದ. ಈ ಗಲಾಟೆಯ ಭಯಾನಕ ವಿಡಿಯೋ ಜಿಲ್ಲೆಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ರಸ್ತೆಗೆ ಅಡ್ಡಲಾಗಿ ನಿಂತ ವಾಹನವನ್ನು ಸೈಡಿಗೆ ಹಾಕುವ ವಿಚಾರವಾಗಿ ಶುರುವಾದ ಈ ಜಗಳ ನಂತರ ಮಾರಣಾಂತಿಕ‌ ಹಲ್ಲೆಯವರೆಗೆ ತಿರುಗಿದೆ. ಗಲಾಟೆಯಲ್ಲಿ ಮೂವರು ಗಾಯಗೊಂಡಿದ್ದು ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಇರಾನ್‌ ಪರ ನಿಲ್ಲಿ: ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

    ಈ ಪ್ರಕರಣದ ಕುರಿತು ಇಳಕಲ್ ನಗರದ ಶಹರ್ ಪೊಲೀಸರು ಎರಡೂ ಗುಂಪಿನ ಹಿರಿಯರನ್ನ ಕರೆದು ದೂರು ದಾಖಲಿಸುವಂತೆ ಸೂಚಿಸಿದ್ದರು. ಎರಡೂ ಗುಂಪಿನ ಹಿರಿಯರು ದೂರು ನೀಡಲು ಹಿಂದೇಟು ಹಾಕಿದ್ದರಿಂದ ಪೊಲೀಸರೇ ಸ್ವಯಂಪ್ರೇರಿತ ಕೇಸ್‌ ದಾಖಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

  • ನರೇಗಾದಲ್ಲಿ ಭಾರೀ ಗೋಲ್ಮಾಲ್‌ – ಬಿಲ್ ಪಡೆಯಲು ಸೀರೆಯುಟ್ಟ ಯುವಕ!

    ನರೇಗಾದಲ್ಲಿ ಭಾರೀ ಗೋಲ್ಮಾಲ್‌ – ಬಿಲ್ ಪಡೆಯಲು ಸೀರೆಯುಟ್ಟ ಯುವಕ!

    ಬಾಗಲಕೋಟೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಬಿಲ್ ಪಡೆಯಲು ಯುವಕನೊಬ್ಬ ಸೀರೆಯುಟ್ಟು ಫೋಟೋಗೆ ಪೋಸ್ ನೀಡಿ ಅಕ್ರಮ ಎಸಗಿರುವ ಘಟನೆ ಹುನಗುಂದ (Hungunda) ಹಾಗೂ ಇಳಕಲ್ (Ilkal) ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ.

    ಯುವಕನೋರ್ವ MGNREGA ಬಿಲ್ ಪಡೆಯಲು ಸೀರೆ ಉಟ್ಟು ಫೋಟೋಗೆ ಫೋಸ್‌ ನೀಡಿ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡಿಸಿದ್ದಾನೆ. ಇಳಕಲ್ ತಾಲ್ಲೂಕಿನ ಚಿಕನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ‌ ಸಿದ್ದನಕೊಳ್ಳ ಗ್ರಾಮದಲ್ಲಿ ಬ್ಲಾಕ್ ಪ್ಲಾಂಟೇಷನ್ ಕಾಮಗಾರಿಗೆ ಮಂಗಳಮ್ಮ ಆರಿ ಹೆಸರಲ್ಲಿ ಯುವಕ ಸೀರೆ ಉಟ್ಟು ಪೋಸ್ ಕೊಟ್ಟಿದ್ದಾನೆ.

    ಪಂಚಾಯತ್ ರಾಜ್ ಹಾಗೂ ಗ್ರಾಮ ಪಂಚಾಯತ್‌ಗಳಿಂದ (Village Panchayat) ನಿಯಮ ಮೀರಿದ ಕಾಮಗಾರಿ ಮಾಡಲಾಗಿದ್ದು, ಬಿಲ್‌ಪಾಸ್ ಮಾಡಿಕೊಳ್ಳಲು ಈ ರೀತಿಯ ವಿನೂತನ ರೀತಿಯಲ್ಲಿ ಭ್ರಷ್ಟಾಚಾರ ಮಾಡಿ ಯುವಕ ಈಗ ಸುದ್ದಿಯಾಗಿದ್ದಾನೆ. ಇದನ್ನೂ ಓದಿ: ಆನ್‌ಲೈನ್‌ನಲ್ಲಿ ಬುಕ್‌ ಮಾಡಿ – ಪಾರ್ಸೆಲ್ ಪಡೆಯಲು ಮನೆಗೆ ಬರ್ತಾರೆ ಪೋಸ್ಟ್‌ಮ್ಯಾನ್‌!

    ಅಧಿಕಾರಿಗಳು ಅಂಗನವಾಡಿ ಕಟ್ಟಡಕ್ಕೆ ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರನ್ನು ಬಳಕೆ‌ ಮಾಡಿದ್ದಾರೆ. ಹುನಗುಂದ ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ನಡೆದಿರುವ ಅಕ್ರಮ ಇದಾಗಿದ್ದು ಇದರಲ್ಲಿ ಅಧಿಕಾರಿಗಳು ಭಾಗಿಯಾಗಿರುವ ಗಂಭೀರ ಆರೋಪ ಬಂದಿದೆ. ಇದನ್ನೂ ಓದಿ: ಬಿಜೆಪಿ ಕಚೇರಿಗೆ ದಿಢೀರ್ ಭೇಟಿ – ಅಸಮಾಧಾನಿತರ ಜೊತೆ ಮಾತುಕತೆಗೆ ಸಿದ್ಧ ಎಂದ ಬಿಎಸ್‌ವೈ

    ಕೂಲಿಕಾರ್ಮಿಕರ ಒಂದೇ ಫೋಟೋ ಎರಡೆರಡು ಗ್ರಾಮ ಪಂಚಾಯತ್‌ಗಳಲ್ಲಿ ಬಳಕೆ ಮಾಡಿಕೊಂಡಿರುವದು ಬೆಳಕಿಗೆ ಬಂದಿದೆ. ಗಂಜಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿ ಅಂಗನವಾಡಿ ಕಟ್ಟಡ ಮತ್ತು ಬಿಂಜವಾಡಗಿ ಗ್ರಾಪಂ ವ್ಯಾಪ್ತಿಯ ಅಂಗನವಾಡಿ ಕಟ್ಟಡಕ್ಕೆ ಕೂಲಿ ಕಾರ್ಮಿಕರ ಒಂದೇ ಫೋಟೋ ಅಪ್ಲೋಡ್ ಮಾಡಲಾಗಿದ್ದು, ಹೆಸರು ಮಾತ್ರ ಬೇರೆ ಬೇರೆ ಮಾಡಲಾಗಿದೆ.

    ಇದೇ ರೀತಿ ಹುನಗುಂದ ಹಾಗೂ ಇಳಕಲ್ ತಾಲೂಕಿನ ರಾಮವಾಡಗಿ, ಚಿನ್ನಾಪುರ ಎಸ್ ಟಿ ಅಂಗನವಾಡಿ ಕಟ್ಟಡಕ್ಕೆ ಒಂದೇ ರೀತಿಯ ಫೋಟೋ ಅಪ್ಲೋಡ್ ಮಾಡಲಾಗಿದೆ. ಇವುಗಳನ್ನು ನೋಡಿದಾಗ ಅಧಿಕಾರಿಗಳು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

  • ಆನ್‌ಲೈನ್‌ನಲ್ಲಿ ಬುಕ್‌ ಮಾಡಿ – ಪಾರ್ಸೆಲ್ ಪಡೆಯಲು ಮನೆಗೆ ಬರ್ತಾರೆ ಪೋಸ್ಟ್‌ಮ್ಯಾನ್‌!

    ಆನ್‌ಲೈನ್‌ನಲ್ಲಿ ಬುಕ್‌ ಮಾಡಿ – ಪಾರ್ಸೆಲ್ ಪಡೆಯಲು ಮನೆಗೆ ಬರ್ತಾರೆ ಪೋಸ್ಟ್‌ಮ್ಯಾನ್‌!

    – ಅಂಚೆ ಇಲಾಖೆಯಿಂದ ಆನ್‌ಲೈನ್‌ ಸೇವೆ
    –  ಪ್ರಾಯೋಗಿಕ ಸೇವೆಗೆ ದೇಶದಲ್ಲೇ ಬಾಗಲಕೋಟೆ ಜಿಲ್ಲೆ ಆಯ್ಕೆ

    ಬಾಗಲಕೋಟೆ: ಭಾರತೀಯ ಅಂಚೆ ಇಲಾಖೆಯ (Department of Post) ಹಲವು ಸೇವೆಗಳು ಈಗ ಆನ್‌ಲೈನ್‌ನಲ್ಲಿ (Online) ದೊರೆಯಲಿದ್ದು, ಪ್ರಾಯೋಗಿಕವಾಗಿ ಈ ಸೌಲಭ್ಯ ಒದಗಿಸಲು ದೇಶದಲ್ಲೇ ಬಾಗಲಕೋಟೆ (Bagalkote) ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ.

    ಅಂಚೆ ಇಲಾಖೆಯಿಂದ ಹೊಸ ತಂತ್ರಾಂಶ ಅಳವಡಿಸಿ ಸರಕು, ಪತ್ರಗಳ ರವಾನೆಯನ್ನು ಆನ್‌ಲೈನ್ ಸೌಲಭ್ಯದಡಿ ಒದಗಿಸಲಾಗುತ್ತಿದೆ. ಮೈಸೂರು ವಿಭಾಗ ಹಾಗೂ ಬಾಗಲಕೋಟೆ ವಿಭಾಗಗಳು ಪ್ರಾಯೋಗಿಕವಾಗಿ ಸೌಲಭ್ಯ ಒದಗಿಸಲು ಆಯ್ಕೆಯಾಗಿವೆ. ಈ ವಿಭಾಗಗಳಲ್ಲಿನ ಯಶಸ್ಸು ನೋಡಿಕೊಂಡು ರಾಷ್ಟ್ರಾದ್ಯಂತ ಸೇವೆ ಒದಗಿಸಲು ಇಲಾಖೆ ಯೋಜನೆ ರೂಪಿಸಿದೆ.

    ಇಲಾಖೆ ಅಡ್ವಾನ್ಸ್‌ಡ್ ಪೋಸ್ಟಲ್ ಟೆಕ್ನಾಲಜಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶದಡಿ ಹೊಸ ಸೌಲಭ್ಯ ಒದಗಿಸಲಾಗುತ್ತಿದೆ. ಈಗ ಬುಕ್ಕಿಂಗ್ ಹಾಗೂ ಡೆಲಿವರಿ ಸೌಲಭ್ಯ ಆನ್‌ಲೈನ್ ಆಗಲಿವೆ. ಗ್ರಾಹಕರು ಅಂಚೆ ಮೂಲಕ ವಸ್ತುವೊಂದನ್ನು ಕಳಿಸಬೇಕಿದ್ದರೆ ಆನ್‌ಲೈನ್‌ನಲ್ಲಿ ಬುಕ್ ಮಾಡಬಹುದು. ನಿಗದಿತ ಶುಲ್ಕ ಪಡೆದು ಈ ಸೇವೆ ಒದಗಿಸಲಾಗುತ್ತಿದೆ. ಬುಕ್ ಮಾಡಿದ ನಂತರ ಪೋಸ್ಟ್‌ಮನ್ ಮನೆಗೆ ಬಂದು ಪಾರ್ಸೆಲ್ ಪಡೆಯುತ್ತಾರೆ. ಪಾರ್ಸಲ್ ಕಳುಹಿಸಿದ ನಂತರ ಗ್ರಾಹಕರಿಗೆ ಮಾಹಿತಿ ದೊರೆಯುತ್ತದೆ. ಈ ಸೌಲಭ್ಯದಡಿ ತಮ್ಮ ಪಾರ್ಸೆಲ್ ಎಲ್ಲಿದೆ ಎಂಬ ಬಗ್ಗೆ ಗ್ರಾಹಕರು ಮಾಹಿತಿ ಪಡೆಯಬಹುದು. ಇದನ್ನೂ ಓದಿ: ದೇಶದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆ ಪಡುತ್ತಾರೆ: ಅಮಿತ್ ಶಾ

    ಪಾರ್ಸೆಲ್‌ ತಲುಪಿಸಿದ ನಂತರ ಪೋಸ್ಟ್‌ಮನ್ ಗ್ರಾಹಕರ ಡಿಜಿಟಲ್ ಸಹಿ ಪಡೆಯಲಿದ್ದಾರೆ. ಪಾರ್ಸೆಲ್‌ ತಲುಪಿದ ಬಗ್ಗೆ ಕಳುಹಿಸಿದವರಿಗೂ ಸಂದೇಶ ರವಾನೆಯಾಗುತ್ತದೆ. ಸಾಮಾನ್ಯ ಪತ್ರಗಳು, ಲಕೋಟೆಗಳನ್ನು ಕಳುಹಿಸಲು ಭವಿಷ್ಯದಲ್ಲಿ ಬಾರ್ ಕೋಡ್ ಸೌಲಭ್ಯ ಒದಗಿಸಲಾಗುತ್ತದೆ. ಈ ಸೇವೆಯಡಿ ತಮ್ಮ ಲಕೋಟೆ, ಪತ್ರ ಯಾವ ಸ್ಥಳದಲ್ಲಿದೆ ಎಂಬ ಮಾಹಿತಿಯನ್ನು ಗ್ರಾಹಕರು ಆನ್‌ ಲೈನ್ ಮೂಲಕ ಪಡೆಯಬಹುದು. ಇದನ್ನೂ ಓದಿ: ಬಮೂಲ್ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಅವಿರೋಧ ಆಯ್ಕೆ

    ಜಿಲ್ಲೆಯಲ್ಲಿ ಜೂನ್ 17 ರಿಂದ ಹೊಸ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಜಿಲ್ಲೆಯಾದ್ಯಂತ ನಗರ, ಗ್ರಾಮೀಣ ಪ್ರದೇಶ ಸೇರಿದಂತೆ 46 ಅಂಚೆ ಕಚೇರಿಗಳಲ್ಲಿ ಸೌಲಭ್ಯ ದೊರೆಯಲಿದೆ. ಎಲ್ಲ ಕಚೇರಿಗಳು ಗಣಕೀಕರಣಗೊಂಡಿದ್ದು, ಸೌಲಭ್ಯ ಜಾರಿಗೆ ಸಿದ್ಧತೆ ಪೂರ್ಣಗೊಂಡಿದೆ. ಉತ್ತಮ ನೆಟ್ವರ್ಕ್, ತಾಂತ್ರಿಕ ತರಬೇತಿ ಪಡೆದ ಸಿಬ್ಬಂದಿ ಹಾಗೂ ಮೂಲ ಸೌಕರ್ಯವಿರುವ ಕಾರಣ ಜಿಲ್ಲೆ ಪೈಲೆಟ್ ಯೋಜನೆಗೆ ಆಯ್ಕೆಯಾಗಿದೆ.

  • ಛತ್ತೀಸ್‌ಗಢದಲ್ಲಿ ಹೃದಯಾಘಾತ – ಬಾಗಲಕೋಟೆಯ ಯೋಧ ನಿಧನ

    ಛತ್ತೀಸ್‌ಗಢದಲ್ಲಿ ಹೃದಯಾಘಾತ – ಬಾಗಲಕೋಟೆಯ ಯೋಧ ನಿಧನ

    ಬಾಗಲಕೋಟೆ: ಇತ್ತೀಚೆಗೆ ಸೈನಿಕನಾಗಿ ಕರ್ತವ್ಯಕ್ಕೆ ಹಾಜರಾಗಿ ತರಬೇತಿ ಪಡೆಯುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಛತ್ತೀಸ್‌ಗಢದಲ್ಲಿ (Chhattisgarh) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಬಾಗಲಕೋಟೆ (Bagalkote) ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟಿ ತಾಂಡಾ ಗ್ರಾಮದ ಉಪೇಂದ್ರ ಸೋಮನಾಥ ರಾಥೋಡ್(24) ಮೂರು ತಿಂಗಳ ಹಿಂದೆ ಅಸ್ಸಾಂ ರೈಫಲ್ಸ್‌ (Assam Rifles) ಸೇರಿದ್ದರು. ಇದನ್ನೂ ಓದಿ: ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

     

    ಛತ್ತೀಸ್‌ಗಢದಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾಗ ತರಬೇತಿಯಲ್ಲಿದ್ದಾಗ ಸೋಮನಾಥ ರಾಥೋಡ್ ಅವರಿಗೆ ಹೃದಯಾಘಾತವಾಗಿದೆ. ಇದನ್ನೂ ಓದಿ: ಸರ್ಕಾರಕ್ಕೆ ಭಾರೀ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ಆದೇಶವೇ ರದ್ದು

    ಮೃತ ಯೋಧನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಪಾರ್ಥಿವ ಶರೀರ ಶುಕ್ರವಾರ ಮಧ್ಯಾಹ್ನ ತಾಲೂಕಿಗೆ ಬರಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಯಲಿದೆ.

  • ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಮೇಖಳಿಯ ಸ್ವಾಮೀಜಿ ಅರೆಸ್ಟ್‌, ಜೈಲುಪಾಲು

    ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಮೇಖಳಿಯ ಸ್ವಾಮೀಜಿ ಅರೆಸ್ಟ್‌, ಜೈಲುಪಾಲು

    ಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ (Rape) ಎಸಗಿದ ಆರೋಪದಡಿ ಕಾಮುಕ ಸ್ವಾಮೀಜಿಯನ್ನು ಅರೆಸ್ಟ್ ಮಾಡಲಾಗಿದೆ.

    ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರದ (Ram Mandir) ಲೋಕೇಶ್ವರ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್‌ (Pocso Case) ದಾಖಲಾಗಿದ್ದು ಪೊಲೀಸರು ಈಗ ಜೈಲಿಗಟ್ಟಿದ್ದಾರೆ.

    ಬಾಗಲಕೋಟೆ (Bagalkote) ನಗರದ ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿ ಬಳಿಕ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಡಲಾಗಿತ್ತು. ಬಾಗಲಕೋಟೆಯ ನವನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ನಂತರ ಬೆಳಗಾವಿಯ ಮೂಡಲಗಿಗೆ ವರ್ಗಾವಣೆಯಾಗಿತ್ತು. ಇದನ್ನೂ ಓದಿ: ಭಾರತದಲ್ಲಿ ಐಫೋನ್‌ ತಯಾರಿಸಿದರೆ 25% ಸುಂಕ – ಆಪಲ್‌ಗೆ ಟ್ರಂಪ್‌ ವಾರ್ನಿಂಗ್‌

     

    ಏನಿದು ಕೇಸ್‌?
    ಬಾಲಕಿಗೆ 17 ವರ್ಷ ಆಗಿದ್ದು ಆಕೆ ಹುಷಾರಿಲ್ಲದೇ ಇದ್ದಾಗ ಪೋಷಕರು ಆಕೆಯನ್ನು ಆಗಾಗ ಮಠಕ್ಕೆ ತಂದು ಬಿಟ್ಟು ಹೋಗುತ್ತಿದ್ದರು. ವಾರಗಟ್ಟಲೇ ಮಗಳನ್ನು ಸ್ವಾಮೀಜಿಯ ಸುಪರ್ದಿಗೆ ಒಪ್ಪಿಸಿ ಮಠದಲ್ಲೇ ಬಿಡುತ್ತಿದ್ದರು.

    ಹೀಗೆ ಮಠಕ್ಕೆ ಬಂದಿದ್ದ ಬಾಲಕಿಯನ್ನು ಆಕೆಯ ಮನೆಗೆ ಬಿಡಲು ಲೋಕೇಶ್ವರ ಸ್ವಾಮೀಜಿ ತೀರ್ಮಾನಿಸಿದ್ದ. ಮೇ 13 ರಂದು ಇಬ್ಬರು ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ರಾಯಚೂರಿನಲ್ಲಿ 2 ದಿನ ಇದ್ದ ಇವರು ಮೇ15 ರಂದು ಬಾಗಲಕೋಟೆಗೆ ಬಂದಿದ್ದಾರೆ.

    ಈ ಎರಡು ಕಡೆ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರ ಎಸಗಿದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನು ಹಾಕಿ ಮೇ 16 ರಂದು ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ತೆರಳಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌

    ಮೇ17 ರಂದು ಬಾಗಲಕೋಟೆ ಮಹಿಳಾ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುತ್ತದೆ. ವಿಚಾರಣೆಗೆ ಒಳಪಡಿಸಿದಾಗ ಬಾಲಕಿ ನಡೆದ ಎಲ್ಲಾ ಘಟನೆಗಳನ್ನು ವಿವರಿಸಿದ್ದಾಳೆ. ಕೇಸ್‌ ದಾಖಲಾದ ಬಳಿಕ ಪ್ರಕರಣ ಬೆಳಗಾವಿಯ ಮೂಡಲಗಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು.

    2021ರಲ್ಲಿ ಸ್ವಾಮೀಜಿಗೆ ಧರ್ಮದೇಟು ನೀಡಿ ಗ್ರಾಮಸ್ಥರು ಬುದ್ಧಿವಾದ ಹೇಳಿದ್ದರು. ಮಠದಲ್ಲಿ ಸಾಕಷ್ಟು ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

  • Bagalkote | ಮದುವೆ ಮಂಟಪದಲ್ಲೇ ಹೃದಯಾಘಾತ – ಕುಸಿದು ಬಿದ್ದು ವರ ಸಾವು

    Bagalkote | ಮದುವೆ ಮಂಟಪದಲ್ಲೇ ಹೃದಯಾಘಾತ – ಕುಸಿದು ಬಿದ್ದು ವರ ಸಾವು

    ಬಾಗಲಕೋಟೆ: ಮದುವೆ ಸಂಭ್ರಮದಲ್ಲಿದ್ದ ವರ ಆರತಕ್ಷತೆ ಸಮಯದಲ್ಲಿ ಹೃದಯಾಘಾತಕ್ಕೊಳಗಾಗಿ (Heart Attack) ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಜಮಖಂಡಿ (Jamakhandi) ನಗರದಲ್ಲಿ ನಡೆದಿದೆ.

    ಪ್ರವೀಣ್ ಕುರಣಿ ಮೃತ ವರ. ಇಂದು ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರಣಿ ಹಾಗೂ ಪೂಜಾ ಎಂಬವರ ಮದುವೆ ಸಮಾರಂಭ ಅದ್ಧೂರಿಯಾಗಿ ನಡೆದಿತ್ತು. ಆದರೆ ವಿಧಿಯಾಟ ಬೇರೆಯೇ ಇತ್ತು. ಆರತಕ್ಷತೆ ಮುಗಿಯುವಷ್ಟರಲ್ಲಿ ಮಧುಮಗ ಪ್ರವೀಣ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಕೊಹ್ಲಿಯನ್ನು ಹಗ್ ಮಾಡ್ತೀನಿ – ಪೋಸ್ಟ್ ಹಾಕಿ ಪೊಲೀಸರ ಅತಿಥಿಯಾದ ಯುವಕ

    ಪ್ರವೀಣ್ ರಾಜ್ಯ ಸೈಕ್ಲಿಂಗ್ ಕಾರ್ಯದರ್ಶಿ ಶ್ರೀಶೈಲ ಕುರಣಿ ಅವರ ಪುತ್ರ. ಮೂಲತಃ ಜಮಖಂಡಿ ತಾಲೂಕಿನ ಕುಂಬಾರಹಳ್ಳಿ ಗ್ರಾಮದ ನಿವಾಸಿಯಾದ ಪ್ರವೀಣ್ ಮನೆಯಲ್ಲಿ ಬೆಳಗ್ಗೆ ದೈವದ ಅಕ್ಕಿಕಾಳು ಕಾರ್ಯ ನಡೆದಿತ್ತು. ಬಳಿಕ ನಂದೀಶ್ವರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಇಟ್ಟುಕೊಂಡಿದ್ದರು. ಕಲ್ಯಾಣಮಂಟಪಕ್ಕೆ ಆಗಮಿಸಿದ ನವ ದಂಪತಿಗೆ ಬಂಧು-ಮಿತ್ರರು ಆರತಕ್ಷತೆ ಹಾಕಿ ಆಶೀರ್ವದಿಸುವ ಗಳಿಗೆಯಲ್ಲೇ ಯಾರೂ ಊಹಿಸದ ರೀತಿ ದುರ್ಘಟನೆ ನಡೆದಿದೆ. ಇದನ್ನೂ ಓದಿ: ‘ಆಪರೇಷನ್‌ ಸಿಂಧೂರ’ದಲ್ಲಿ ಶೌರ್ಯ ಮೆರೆದ BSF ಯೋಧ – ಗೌರವಿಸಿದ ಸೇನಾ ಮುಖ್ಯಸ್ಥ

    ಹಸೆಮಣೆ ಏರಿ ವಿಭಿನ್ನ ಕನಸುಗಳನ್ನು ಕಂಡಿದ್ದ ಪ್ರವೀಣ್ ದಿಢೀರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಘಟನೆಯಿಂದ ಮದುವೆ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಶುಭ ಸಂದರ್ಭದಲ್ಲಿ ಹೃದಯಾಘಾತಕ್ಕೆ ವರ ಬಲಿಯಾಗಿದ್ದನ್ನು ಕಂಡು ಕುಟುಂಬಸ್ಥರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಇದನ್ನೂ ಓದಿ: ಕೊತ್ತೂರು ಮಂಜುನಾಥ್ ಅನುಮಾನ ಸೇನೆ ಬಗ್ಗೆ ಅಲ್ಲ, ಬಿಜೆಪಿ ನಾಯಕರ ಬಗ್ಗೆ: ರಾಮಲಿಂಗಾ ರೆಡ್ಡಿ

  • ಬೈಕ್, ಕ್ಯಾಂಟರ್ ಮಧ್ಯೆ ಭೀಕರ ಅಪಘಾತ – ಮೂವರು ಬಾಲಕರು ದುರ್ಮರಣ

    ಬೈಕ್, ಕ್ಯಾಂಟರ್ ಮಧ್ಯೆ ಭೀಕರ ಅಪಘಾತ – ಮೂವರು ಬಾಲಕರು ದುರ್ಮರಣ

    ಬಾಗಲಕೋಟೆ: ಡಿಜೆ ನೋಡಿಕೊಂಡು ಬರಲು ಬೈಕ್‌ನಲ್ಲಿ ಹೋದ ಮೂವರು ಬಾಲಕರು ಲಾರಿಯಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬಾಗಲಕೋಟೆ(Bagalkote) ತಾಲೂಕಿನ ಸಿಮೀಕೇರಿ ಕ್ರಾಸ್ ಬಳಿಯ ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

    ಬಾಗಲಕೋಟೆ ತಾಲೂಕಿನ ಮುರನಾಳ ಗ್ರಾಮದ ನಿವಾಸಿಗಳಾದ ಸಿದ್ದು ರಾಜು ಗಣಿ(16), ಸಂತೋಷ ಕೂಡಗಿ(16), ಕಾಮಣ್ಣ ಕುಪಲಿ(16) ಮೃತ ಬಾಲಕರು. ಇದನ್ನೂ ಓದಿ: ಆಪರೇಷನ್ ಸಿಂಧೂರ – ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್‌ಮೈಂಡ್ ಸಾವು

    ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂವರು ಬಾಲಕರು ಬೈಕ್‌ನಲ್ಲಿ ಎಡ ಬದಿಯಿಂದ ಲಾರಿಯೊಂದನ್ನು ಓವರ್‌ಟೇಕ್ ಮಾಡಲು ಹೋಗಿ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದ ಬಾಲಕರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಬಿಬಿಎಂಪಿ ಕಾರ್ಮಿಕರಿಗೆ ಬಿಎಂಟಿಸಿ ಬಸ್ ಡಿಕ್ಕಿ – ಇಬ್ಬರಿಗೆ ಗಂಭೀರ ಗಾಯ

    ಒಂದೇ ಬೈಕ್‌ನಲ್ಲಿ ಮೂವರು ಬಾಲಕರು ತ್ರಿಬಲ್ ರೈಡಿಂಗ್ ಮಾಡಿದ್ದು, ಯಾರೂ ಕೂಡಾ ಹೆಲ್ಮೆಟ್ ಧರಿಸಿರಲಿಲ್ಲ. ಎಡ ಬದಿಯಿಂದ ಲಾರಿಯನ್ನು ಓವರ್‌ಟೇಕ್ ಮಾಡಲು ಹೋಗಿ ಮೂವರು ಜೀವ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಯುದ್ಧವು ದೇಶದ ಖ್ಯಾತಿಗೆ ಒಳ್ಳೆಯದಲ್ಲ: ‘ಆಪರೇಷನ್ ಸಿಂಧೂರ’ ಬಗ್ಗೆ ಸಂಜನಾ ಗಲ್ರಾನಿ ಪೋಸ್ಟ್

    ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಘಟನೆಯ ಕುರಿತು ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • SSLC ಫಲಿತಾಂಶ| 6 ವಿಷಯಗಳಲ್ಲಿ ಫೇಲ್‌ ಆದ ಪುತ್ರನಿಗೆ ಕೇಕ್‌ ತಿನ್ನಿಸಿದ ಪೋಷಕರು!

    SSLC ಫಲಿತಾಂಶ| 6 ವಿಷಯಗಳಲ್ಲಿ ಫೇಲ್‌ ಆದ ಪುತ್ರನಿಗೆ ಕೇಕ್‌ ತಿನ್ನಿಸಿದ ಪೋಷಕರು!

    ಬಾಗಲಕೋಟೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC) ಆರು ವಿಷಯದಲ್ಲಿ ಫೇಲ್‌ ಆದ ಪುತ್ರನಿಗೆ (Son) ಪೋಷಕರು ಕೇಕ್‌ (Cake) ತಿನ್ನಿಸಿ ಆತ್ಮಸ್ಥೈರ್ಯ ತುಂಬಿದ್ದಾರೆ.

    ಪರೀಕ್ಷೆಯಲ್ಲಿ ಫೇಲ್‌ ಆದರೂ ಆತ್ಮಸ್ಥೈರ್ಯ ಕುಗ್ಗಬಾರದು ಎಂಬ ಎಂಬ ಕಾರಣಕ್ಕೆ ತಂದೆ, ತಾಯಿ ಸಹೋದರ, ಸಹೋದರಿ, ಅಜ್ಜಿ ಹಾಗೂ ಕುಟುಂಬವರು ಕೇಕ್‌ ತಿನ್ನಿಸಿದ್ದಾರೆ.

    ಬಸವೇಶ್ವರ ಹೈಸ್ಕೂಲ್‌ನಲ್ಲಿ ಆಂಗ್ಲ ಮಾಧ್ಯಮದಲ್ಲಿ 10ನೇ ತರಗತಿ ಓದಿದ್ದ ಅಭಿಷೇಕ್‌ ಯಲ್ಲಪ್ಪ ಚೊಳಚಗುಡ್ಡ 625ಕ್ಕೆ 200 ಅಂಕ ಪಡೆದು ಫೇಲ್‌ ಆಗಿದ್ದ. ಇದನ್ನೂ ಓದಿ: SSLC Results – ದಕ್ಷಿಣ ಕನ್ನಡ ಫಸ್ಟ್‌, ಕಲಬುರಗಿ ಲಾಸ್ಟ್‌ : ನಿಮ್ಮ ಜಿಲ್ಲೆಗೆ ಎಷ್ಟನೇ ಸ್ಥಾನ?

    6ಕ್ಕೆ 6 ವಿಷಯಗಳಲ್ಲಿ ಫೇಲ್‌ ಆದ ಹಿನ್ನೆಲೆಯಲ್ಲಿ ನವನಗರದಲ್ಲಿರುವ ನಿವಾಸದಲ್ಲಿ ಅಭಿಷೇಕ್‌ ಬೇಸರದಲ್ಲಿದ್ದ. ಬೇಸರದಲ್ಲಿದ್ದ ಅಭಿಷೇಕ್‌ಗೆ ಆತ್ಮಸ್ಥೈರ್ಯ ತುಂಬಲು ಅಚ್ಚರಿ ಎಂಬಂತೆ ಪೋಷಕರು (Parents) ಕೇಕ್‌ ತಿನ್ನಿಸಿ ಸಿಹಿ ಮುತ್ತು ನೀಡಿ ಸಮಾಧಾನ ಮಾಡಿದ್ದಾರೆ. ಪರೀಕ್ಷೆ ಒಂದೇ ಜೀವನವಲ್ಲ ಮರಳಿ ಪ್ರಯತ್ನ ಮಾಡು ಎಂದು ಹೆಗಲ ಮೇಲೆ ಕೈ ಇಟ್ಟು ತಂದೆ ಧೈರ್ಯ ತುಂಬಿದ್ದಾರೆ. ಇದನ್ನೂ ಓದಿ: SSLC ಫಲಿತಾಂಶ ಪ್ರಕಟ; ಶೇ.62.34 ರಿಸಲ್ಟ್‌ – ಈ ಬಾರಿಯೂ ಬಾಲಕಿಯರೇ ಮೇಲುಗೈ

    15 ತಿಂಗಳ ಮಗುವಾಗಿದ್ದಾಗ ಎರಡು ಪಾದ ಸುಟ್ಟು ಹೋಗಿದ್ದರಿಂದ ಅಭಿಷೇಕ್‌ ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದಾನೆ. ಇದರಿಂದಾಗಿ ಉತ್ತರ ನೆನಪಿಟ್ಟುಕೊಂಡು ಬರೆಯಲು ಅಭಿಷೇಕ್‌ಗೆ ಸಾಧ್ಯವಾಗಿಲ್ಲ.

    ಫೇಲ್ ಆಗಿದ್ದರಿಂದ ಬಹಳ ಬೇಸರವಾಗಿತ್ತು. ತಂದೆ, ತಾಯಿ ಎಲ್ಲರೂ ಈಗ ಧೈರ್ಯ ತುಂಬಿದ್ದಾರೆ. ಫೇಲ್ ಆದರೂ ಧೈರ್ಯ ತುಂಬಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ನಾನು ಪರೀಕ್ಷೆಯಲ್ಲಿ ಫೇಲ್‌ ಆಗಿರಬಹುದು, ಜೀವನದಲ್ಲಿ ಫೇಲ್ ಆಗಲ್ಲ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗುತ್ತೇನೆ. ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಸಾಧಿಸಿ ತೋರಿಸುತ್ತೇನೆ ಎಂದು ಅಭಿಷೇಕ್‌ ಹೇಳಿದ್ದಾನೆ.

  • ಧರ್ಮ ನೋಡಿ ಹೊಡೆದಿಲ್ಲ ಎಂದು ನಾನು ಹೇಳಿಯೇ ಇಲ್ಲ: ಆರ್‌ಬಿ ತಿಮ್ಮಾಪುರ ಯೂ ಟರ್ನ್

    ಧರ್ಮ ನೋಡಿ ಹೊಡೆದಿಲ್ಲ ಎಂದು ನಾನು ಹೇಳಿಯೇ ಇಲ್ಲ: ಆರ್‌ಬಿ ತಿಮ್ಮಾಪುರ ಯೂ ಟರ್ನ್

    ಬಾಗಲಕೋಟೆ: ಪಹಲ್ಗಾಮ್ ದಾಳಿಯಲ್ಲಿ ಉಗ್ರರು (Pahalgam Terror Attack) ಹಿಂದೂಗಳನ್ನ ಹುಡುಕಿ ಹುಡುಕಿ ಕೊಂದ್ರು ಎಂಬ ಆರೋಪಕ್ಕೆ ಆಕ್ಷೇಪವೆತ್ತಿದ್ದ ಸಚಿವ ಆರ್‌ಬಿ ತಿಮ್ಮಾಪುರ (RB Timmapur), ಧರ್ಮ ನೋಡಿ ಹೊಡೆದಿಲ್ಲ ಎಂದು ನಾನು ಹೇಳಿಯೇ ಇಲ್ಲ ಎಂದು ಇದೀಗ ಯೂ ಟರ್ನ್ ಹೊಡೆದಿದ್ದಾರೆ.

    ಬಾಗಲಕೋಟೆ (Bagalkote) ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಖಡಾಖಂಡಿತವಾಗಿ ಹಾಗೆ ಮಾಡಿಲ್ಲ ಎಂದು ಹೇಳಿಲ್ಲ. ನಾನು ನೋಡಿದ ಟಿವಿ ಚಾನೆಲ್‌ಗಳಲ್ಲಿ ಅದು ಬಂದಿರಲಿಲ್ಲ. ಹಾಗಾಗಿ ನಾನು ಸಂಶಯ ವ್ಯಕ್ತಪಡಿಸಿದ್ದೇನೆ ವಿನಃ ಹಿಂದೂಗಳನ್ನು ನೋಡಿ ಮಾಡಿಲ್ಲ ಎಂದು ನಾನು ಹೇಳಿಲ್ಲ. ನಾನು ಭಯೋತ್ಪಾದಕರ ಪರವಾಗಿಯೇ ಮಾತನಾಡಿದ್ದೇನೆ ಎಂಬ ರೀತಿ ಬಿಂಬಿತವಾಗಿದೆ. ನಾನು ಭಯೋತ್ಪಾದನೆಯನ್ನು ಖಂಡನೆ ಮಾಡುತ್ತೇನೆ ಎಂದರು. ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ – ಕೇಂದ್ರದ ನಿರ್ಧಾರಕ್ಕೆ ನಮ್ಮ ಸಹಕಾರವಿದೆ: ದೇವೇಗೌಡ

    ಅಲ್ಲಿನ ಪ್ರವಾಸಿಗರಿಗೆ ರಕ್ಷಣೆ ಕೊಡೋದು ನಮ್ಮ ಧರ್ಮ. ಅದು ಪಾಲನೆಯಾಗಿಲ್ಲ ಎಂಬ ನೋವಿದೆ. ನಾವು ಎಲ್ಲರೂ ದೇಶದ ಪಕ್ಷ, ಪಂಗಡ, ರಾಜಕಾರಣ ತರದೇ ಎಲ್ಲರೂ ಒಗ್ಗಟ್ಟಾಗಿ ಎದುರಿಸಬೇಕೆ ವಿನಃ ಅದರಲ್ಲಿ ಸಣ್ಣಪುಟ್ಟ ವಿಷಯಗಳನ್ನ ತರುವುದು ದೇಶಕ್ಕೆ ಒಳ್ಳೆಯದಲ್ಲ. ಧರ್ಮ ನೋಡಿ ಹೊಡಿದಿಲ್ಲ ಎಂದು ನಾನು ಹೇಳಿಯೇ ಇಲ್ಲ. ನಾನು ಕಾರವಾರದ ಘಟನೆ ಬಗ್ಗೆ ಹೇಳಿದೆ. ಕಾರವಾರದಲ್ಲಿ ಹಿಂದೂ ಕೊಲೆ ಆಯ್ತು ಅಂದ್ರು, ನಂತರ ಸಹಜ ಸಾವು ಅಂತಾ ಬಂತು. ಹಾಗೆಯೇ ಇಂತಹದರಲ್ಲಿ ರಾಜಕಾರಣ ಬೇಡ ಅಂದಿದ್ದೆ. ನಾನು ನೋಡಿದ ಚಾನೆಲ್ ಪ್ರಕಾರ ನನಗೆ ಡೌಟ್ ಇದೆ ಅಂತಾ ಹೇಳಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: Kolar | ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿ ನೇಣಿಗೆ ಶರಣು

    ಪಾಕ್ ಮೇಲೆ ಯುದ್ಧ ಬೇಕೋ ಬೇಡವೋ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದು ದೇಶದ ಪರಿಸ್ಥಿತಿ ಇದೆ. ನಮ್ಮ ದೇಶದ ಪ್ರಧಾನಿಗಳು ನಿರ್ಧರಿಸಲಿ. ನಾವೆಲ್ಲ ಬದ್ಧತೆ ತೋರಿಸಬೇಕಲ್ಲ. ಯುದ್ಧ ಎಷ್ಟರಮಟ್ಟಿಗೆ ಬೇಕು ಬೇಡಾ ಎಂದು ಯೋಚನೆ ಮಾಡಿ ಅಂತಾ ಹೇಳಿರಬೇಕೆ ವಿನಃ ಯುದ್ಧ ಬೇಡ ಅಂತಾ ಯಾರೂ ಹೇಳಲ್ಲ. ಬೇಹುಗಾರಿಕೆಯನ್ನ ಬಲಪಡಿಸಲಿ. ನಾಗರಿಕರು ಹಾಗೂ ಪ್ರವಾಸಿಗರ ಮೇಲೆ ಈ ರೀತಿ ಆದರೆ ಹೇಗೆ? ಈಗ ಹೋಗಿ ನಾವು ಹೊಡೆದು ಹಾಕಿದ್ದೇವೆ ಅಂದ್ರೆ ಹೇಗೆ?
    ನಾನು ಈ ಹಿಂದೆಯೂ ಹೇಳಿದ್ದೆ, ಪುಲ್ವಾಮಾ ಏನಾಯ್ತು ಅಂತಾ ಹೇಳಿದ್ದೇನೆ. ಈ ದೇಶದ ವಿಚಾರದಲ್ಲಿ ಎಲ್ಲರೂ ಒಂದಾಗಿ ಕೆಲಸ ಮಾಡಬೇಕಿದೆ ವಿನಃ ರಾಜಕಾರಣ ಬೇಡ ಎಂದಿದ್ದೇನೆ. ಅದನ್ನ ಬಿಟ್ಟು ಸಣ್ಣಪುಟ್ಟ ವಿಚಾರಗಳನ್ನ ದೇಶಕ್ಕೆ ತೋರಿಸುವುದರಲ್ಲಿ ಅರ್ಥ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: Pahalgam Terrorist Attack | ನಾಳೆ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ಹೈವೋಲ್ಟೇಜ್‌ ಸಭೆ

    ಸಿಎಂ (CM Siddaramaiah) ಎಎಸ್‌ಪಿ ಮೇಲೆ ಕೈ ಮಾಡಿದ ವಿಚಾರವಾಗಿ ಮಾತನಾಡಿದ ಅವರು, ಏಯ್ ನೀನ್ಯಾಕೆ ಹೀಗೆ ಮಾಡಿದೆ ಅಂದಿರಬೇಕು. ಅವರ ಮೇಲೆ ಕೈ ಮಾಡಿದ್ದು ಅಂತಾ ಯಾಕೆ ಹೇಳ್ತೀರಿ? ನೀವು ಕೈ ಮಾಡಿದ್ದಾರೆ ಅಂತಾ ಯಾಕೆ ಅಂದುಕೊಳ್ಳುತ್ತೀರಿ? ಹಿಂದೆ ಯಡಿಯೂರಪ್ಪನವರು ಐಎಎಸ್ ಅಧಿಕಾರಿಗಳ ಮೇಲೆ ಕೈ ಮಾಡಿದ್ದೂ ಗೊತ್ತಿದೆ. ಎಮೋಷನ್‌ನಲ್ಲಿ ಮಾಡಿದ್ದರೂ ಮಾಡಿರಬಹುದು. ಹಿಂದೆ ಯಡಿಯೂರಪ್ಪನವರು ಈ ರೀತಿ ಮಾಡಿಲ್ಲ ಎಂದು ವಿಜಯೇಂದ್ರ ಅವರು ಹೇಳಲಿ ನೋಡೋಣ ಎಂದರು. ಇದನ್ನೂ ಓದಿ: ಮಗುವಿನ ಕಾಲಿಗೆ ಪೆಟ್ಟು – ಮಗುಗೆ ಏನಾಗುತ್ತೋ ಅನ್ನೋ ಆತಂಕದಲ್ಲಿ 12ರ ಬಾಲಕ ಆತ್ಮಹತ್ಯೆ

  • ಗುಡ್ಡಕುಸಿತವಾಗಿದ್ದಕ್ಕೆ ಬಚಾವ್ – ಪಹಲ್ಗಾಮ್‌ಗೆ ಹೋಗಬೇಕಿದ್ದ 13 ಕನ್ನಡಿಗರು ಅದೃಷ್ಟವಶಾತ್ ಪಾರು

    ಗುಡ್ಡಕುಸಿತವಾಗಿದ್ದಕ್ಕೆ ಬಚಾವ್ – ಪಹಲ್ಗಾಮ್‌ಗೆ ಹೋಗಬೇಕಿದ್ದ 13 ಕನ್ನಡಿಗರು ಅದೃಷ್ಟವಶಾತ್ ಪಾರು

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕರ ಪೈಶಾಚಿಕ ದಾಳಿಯಲ್ಲಿ (Terrorist Attack) 13 ಕನ್ನಡಿಗರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಹಲ್ಗಾಮ್‌ಗೆ ಹೋಗುವ ರಸ್ತೆಯಲ್ಲಿ ಗುಡ್ಡಕುಸಿತವಾಗಿದ್ದೇ ಜೀವ ಉಳಿದಿದೆ.

    ಬಾಗಲಕೋಟೆಯ (Bagalkote) ಮಾರವಾಡಿ ಗಲ್ಲಿಯ ನಿವಾಸಿಗಳಾದ ಕಿಶೋರ್ ಕಾಸಟ್, ಸೂರಜ್ ಕಾಸಟ್, ಗಿರೀಶ್ ಕಾಸಟ್, ನಿತೀಶ್ ಬಂಗ್ ಹಾಗೂ ಮಕ್ಕಳು ಸೇರಿದಂತೆ ಒಟ್ಟು 13 ಜನ ಏ.19 ರಂದು ಜಮ್ಮು ಕಾಶ್ಮೀರಕ್ಕೆ ಟ್ರಿಪ್ ಹೋಗಿದ್ದರು. ವೈಷ್ಣೋದೇವಿ ದರ್ಶನ ಮಾಡಿ, ಮಂಗಳವಾರ ಪಹಲ್ಗಾಮ್‌ಗೆ ಹೊರಟಿದ್ದರು.ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ; ಮಾಹಿತಿ ಕೊರತೆ, ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ: ಸಿಎಂ

    ಮಾರ್ಗಮಧ್ಯೆ ಗುಡ್ಡಕುಸಿತವಾಗಿತ್ತು. ಇದರಿಂದ ಪಹಲ್ಗಾಮ್‌ಗೆ 70 ಕಿ.ಮೀ ಬಳಸಿಕೊಂಡು ಹೋಗಬೇಕಿತ್ತು. ಸುತ್ತುವರೆದು ಹೋಗುತ್ತಿರುವಾಗ ಪ್ರಯಾಣಿಕರಿಗೆ ಮನೆಯವರು ಕರೆ ಮಾಡಿದ್ದು, ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿಯಾಗಿರುವ ಕುರಿತು ಮಾಹಿತಿ ನೀಡಿದ್ದಾರೆ. ಇದನ್ನು ತಿಳಿದು ತಕ್ಷಣ ಪ್ರಯಾಣಿಕರೆಲ್ಲರು ಪಹಲ್ಗಾಮ್‌ಗೆ ಹೋಗುವುದನ್ನು ನಿಲ್ಲಿಸಿದ್ದಾರೆ.

    ಒಂದು ವೇಳೆ ಗುಡ್ಡಕುಸಿತ ಆಗದಿದ್ದರೆ ಪಹಲ್ಗಾಮ್‌ಗೆ ಬೇಗ ತಲುಪಿ, ಭಾರೀ ಅನಾಹುತ ಆಗುವ ಸಾಧ್ಯತೆಯಿತ್ತು. ಸದ್ಯ ವೈಷ್ಣೋದೇವಿ ಕೃಪೆಯಿಂದಲೇ ಎಲ್ಲರು ಪಾರಾಗಿದ್ದಾರೆ ಎನ್ನಬಹುದು. ಸದ್ಯ ಸೇಫ್ ಆಗಿರುವ ಪ್ರಯಾಣಿಕರು, ಶ್ರೀನಗರದ ರಾಜೋರಿ ಪ್ರದೇಶವನ್ನು ತಲುಪಿದ್ದಾರೆ. ನಂತರ ಅಲ್ಲಿಂದ ಜಮ್ಮು ತಲುಪಿ, ಬಳಿಕ ಬಾಗಲಕೋಟೆಗೆ ವಾಪಸ್ ಮರಳುತ್ತಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

    ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಂನಲ್ಲಿ ಭಯೋತ್ಮಾದಕರ ದಾಳಿ ನಡೆದಿದ್ದು, ಮೂವರು ಕನ್ನಡಿಗರು ಬಲಿಯಾಗಿದ್ದಾರೆ.ಇದನ್ನೂ ಓದಿ: ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ