Tag: bagina

  • ಕೆಆರ್‌ಎಸ್‌ಗೆ 5ನೇ ಬಾರಿ ಸಿಎಂ ಬಾಗಿನ ಅರ್ಪಣೆ – ಇದು ನನ್ನ ಸೌಭಾಗ್ಯವೆಂದ ಬಿಎಸ್‍ವೈ

    ಕೆಆರ್‌ಎಸ್‌ಗೆ 5ನೇ ಬಾರಿ ಸಿಎಂ ಬಾಗಿನ ಅರ್ಪಣೆ – ಇದು ನನ್ನ ಸೌಭಾಗ್ಯವೆಂದ ಬಿಎಸ್‍ವೈ

    ಮಂಡ್ಯ: ಕೆಆರ್‌ಎಸ್‌ ಡ್ಯಾಂ ತುಂಬಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಐದನೇ ಬಾರಿಗೆ ಬಾಗಿನ ಅರ್ಪಿಸಿ, ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು.

    ಭಾನುಪ್ರಕಾಶ್ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಸಿಎಂ ಯಡಿಯೂರಪ್ಪ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ಸಂತೋಷ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಸಿಎಂ, ಐದನೇ ಬಾರಿಗೆ ಬಂದು ನಾನು ಕೆಆರ್‌ಎಸ್‌ಗೆ ಬಾಗಿನ ನೀಡಿದ್ದೇನೆ. ಇದು ನನ್ನ ಸೌಭಾಗ್ಯವಾಗಿದೆ. ಪ್ರತಿ ವರ್ಷವೂ ಇದೇ ರೀತಿ ಕಾವೇರಿ ತುಂಬಿ ಹರಿಯಲಿ. ಈ ನಾಡಿನ ರೈತರಿಗೆ ಅನುಕೂಲವಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ. ವಿಶೇಷ ಎಂದರೆ ಗೌರಿ-ಗಣೇಶ ಹಬ್ಬದಂದು ಬಾಗಿನ ನೀಡುವ ಸೌಭಾಗ್ಯ ನನಗೆ ಸಿಕ್ಕಿದೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿ ತುಳುಕುತ್ತಿವೆ. ಈ ವರ್ಷ ರೈತ ಅತ್ಯಂತ ಸಂತೋಷದಿಂದ ಬೆಳೆ ಬೆಳೆಯಲು ಅನುಕೂಲವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ. ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ. ರಾಜ್ಯದ ಎಲ್ಲಾ ಜಲಾಶಯಗಳು ತುಂಬಿವೆ. ಇದರಿಂದ ರೈತರು ಒಳ್ಳೆಯ ಬೆಳೆ ಬೆಳೆಯಲಿದ್ದಾರೆ. ಅತಿವೃಷ್ಠಿಯಾದ ಕಡೆಗೆ ಸೂಕ್ತ ಪರಿಹಾರ ನೀಡುತ್ತೇನೆ ಎಂದು ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸದರು.

    ಕೆಆರ್‌ಎಸ್‌ನ ಪುನಶ್ಚೇತನ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಇದು ಪ್ರಮುಖ ಪ್ರವಾಸಿ ತಾಣವಾಗಿದೆ. ಇದನ್ನು ವಿಶ್ವ ದರ್ಜೆಗೆ ಏರಿಸಲು ಕ್ರಮ ತೆಗೆದುಕೊಳ್ಳುತ್ತೇನೆ. ಡ್ಯಾಂನ ಸುರಕ್ಷತೆಗೆ ಗೇಟುಗಳ ಬದಲಾವಣೆ ಮಾಡಲಾಗಿದೆ. ನೀರಾವರಿಗೆ ಸರ್ಕಾರ ಬದ್ಧವಾಗಿದ್ದು, 74 ಸಾವಿರ ಕೋಟಿ ಯೋಜನೆಗೆ ಮಂಜೂರಾತಿ ನೀಡಿದ್ದೇವೆ ಎಂದರು.

  • ಮೊದಲ ಬಾರಿಗೆ ಗೌರಿ ಹಬ್ಬದಂದು ಕೆಆರ್‌ಎಸ್‌ಗೆ ಸಿಎಂ ಬಿಎಸ್‍ವೈ ಬಾಗಿನ

    ಮೊದಲ ಬಾರಿಗೆ ಗೌರಿ ಹಬ್ಬದಂದು ಕೆಆರ್‌ಎಸ್‌ಗೆ ಸಿಎಂ ಬಿಎಸ್‍ವೈ ಬಾಗಿನ

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್‌ಎಸ್‌ ಡ್ಯಾಂ ತುಂಬಿದ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ಗೌರಿ ಹಬ್ಬದಂದು ಬಾಗಿನ ಅರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್‌ಗೆ ಐದನೇ ಬಾರಿಗೆ ಬಾಗಿನ ಅರ್ಪಣೆ ಮಾಡಲಿರುವ ಸಿಎಂ ಬಿಎಸ್‍ವೈ

    ಸಂಪ್ರದಾಯದಂತೆ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ನಂತರ ಸಿಎಂ ಯಡಿಯೂರಪ್ಪ ಬಾಗಿನ ಸಮರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ ಅಭಿಜಿತ್ ಮುಹೂರ್ತದಲ್ಲಿ ಸಿಎಂ ಯಡಿಯೂರಪ್ಪ ಬಾಗಿನ ಸರ್ಮಪಿಸಲಿದ್ದಾರೆ. ಇದೇ ಮೊದಲ ಬಾರಿಗೆ ಗೌರಿ ಹಬ್ಬದಂದು ಕೆಆರ್‌ಎಸ್‌ಗೆ ಬಾಗಿನ ಸಮರ್ಪಣೆ ಮಾಡುತ್ತಿರುವುದು ವಿಶೇಷವಾಗಿದೆ. ಹೀಗಾಗಿ ಬಾಗಿನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ.

    ತಳಿರು ತೋರಣ ಕಟ್ಟಿ ಮದುವಣಗಿತ್ತಿಯಂತೆ ಸಿಂಗಾರ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಸ್ಥಳದಲ್ಲೇ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಮತ್ತೊಂದು ವಿಶೇಷತೆ ಎಂದರೆ 5ನೇ ಬಾರಿಗೆ ಕೆಆರ್‌ಎಸ್‌ ಡ್ಯಾಂಗೆ ಸಿಎಂ ಯಡಿಯೂರಪ್ಪ ಬಾಗಿನ ಬಿಡುತ್ತಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆ‌ಗೆ ಯಡಿಯೂರಪ್ಪ ಪಾತ್ರರಾಗಿದ್ದಾರೆ.

    ಖ್ಯಾತ ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆಯಲಿದೆ. ಸಚಿವರಾದ ರಮೇಶ್ ಜಾರಕಿಹೊಳಿ, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್ ಸೇರಿದಂತೆ ಮೈಸೂರು, ಮಂಡ್ಯ ಜಿಲ್ಲೆಯ ಶಾಸಕರು ಮತ್ತು ಸಂಸದರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

    ಕೊರೊನಾದಿಂದ ಗುಣಮುಖರಾದ ನಂತರ ಸಿಎಂ ಯಡಿಯೂರಪ್ಪ ಬೆಂಗಳೂರು ಬಿಟ್ಟು ಹೊರಗೆ ಹೋಗುತ್ತಿದ್ದಾರೆ. ಸಿಎಂ ಕೊರೊನಾ ಪ್ರಾರಂಭವಾದಗಿನಿಂದಲೂ ಜಿಲ್ಲಾ ಪ್ರವಾಸ ಮಾಡಿರಲಿಲ್ಲ. ಇಂದು ಬಾಗಿನ ಸಮರ್ಪಣೆ ಮಾಡುವ ಮೂಲಕ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ. ಇದೇ ವೇಳೆ ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೂ ಸಿದ್ಧತೆ ಮಾಡಲಾಗಿದೆ. ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳಿಂದ ಕಪ್ಪು ಬಾವುಟ ಪ್ರದರ್ಶನಕ್ಕೆ ತೀರ್ಮಾನ ಮಾಡಲಾಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಘಟನೆಗಳು ಪ್ರತಿಭಟನೆ‌ಗೆ ಸಿದ್ಧತೆ ನಡೆಸಿವೆ.

  • ‘ಮಾತೇ ಸಾಧನೆಯಾಗಬಾರದು, ಸಾಧನೆ ಮಾತನಾಡಬೇಕು’ – 4ನೇ ಬಾರಿ ಕೆಆರ್‌ಎಸ್‌ಗೆ ಸಿಎಂ ಬಾಗಿನ

    ‘ಮಾತೇ ಸಾಧನೆಯಾಗಬಾರದು, ಸಾಧನೆ ಮಾತನಾಡಬೇಕು’ – 4ನೇ ಬಾರಿ ಕೆಆರ್‌ಎಸ್‌ಗೆ ಸಿಎಂ ಬಾಗಿನ

    ಮಂಡ್ಯ: ಕೃಷ್ಣರಾಜಸಾಗರ ಜಲಾಶಯ(ಕೆಆರ್‌ಎಸ್‌) ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಕೆಆರ್‌ಎಸ್‌ಗೆ ಬಿಎಸ್‍ವೈ ನಾಲ್ಕನೇ ಬಾರಿ ಬಾಗಿನ ಅರ್ಪಿಸಿದರು.

    ಆರಂಭದಲ್ಲಿ ಮಳೆಯಾಗದೆ, ಡ್ಯಾಂ ತುಂಬುತ್ತೋ ಇಲ್ಲವೋ ಎಂದು ರೈತರಲ್ಲಿ ಆತಂಕ ಮನೆ ಮಾಡಿತ್ತು. ಆದರೆ, ನಂತರ ಸುರಿದ ಭಾರೀ ಮಳೆಯಿಂದಾಗಿ ಕೆಆರ್‌ಎಸ್‌ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿದ್ದು, ರೈತರಲ್ಲಿ ಮಂದಹಾಸವನ್ನು ಮೂಡಿಸಿದೆ.

    ಬಾಗಿನ ಸಲ್ಲಿಸಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದೇನೆ. 1 ತಿಂಗಳ ಹಿಂದೆ ಈ ರಾಜ್ಯದ ಯಾವುದೇ ಜಲಾಶಯ ತುಂಬಿಲ್ಲ. ಮುಂದೆ ಈ ನಾಡಿನ ಭವಿಷ್ಯ ಏನು ಎಂದು ಚಿಂತೆ ಮಾಡುತ್ತಿದ್ದೆವು. ಪ್ರತಿ ದಿನ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗೆ ಕರೆಮಾಡಿ ಜಲಾಶಯದ ಒಳಹರಿವಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ. ಆದರೆ ವರುಣದೇವನ ಕೃಪೆಯಿಂದ ಕೇವಲ 4-5ದಿನಗಳಲ್ಲಿ ಕೆಆರ್‍ಎಸ್ ಭರ್ತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಈ ಭಾಗದ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಭರದಿಂದ ಸಾಗಿದೆ. ಕೆರೆಗಳಲ್ಲಿ ನೀರು ಸಂಗ್ರಹದಿಂದ ಅಂತರ್ಜಲ ಕುಸಿಯುವುದು ತಪ್ಪಲಿದೆ. ಕೆಆರ್‌ಎಸ್‌ ಅಭಿವೃದ್ಧಿಗೆ ನಾನು ಶ್ರಮಿಸಲಿದ್ದೇನೆ. ದೇಶವಿದೇಶಗಳಿಂದ ಬರುವ ಪ್ರವಾಸಿಗರಿಗೆ ಆಕರ್ಷಣೀಯ ಸ್ಥಳವಾಗಿ ಕೆಆರ್‌ಎಸ್‌ ಅಣೆಕಟ್ಟೆಯನ್ನು ರೂಪಿಸಲು ಚಿಂತನೆ ನಡೆದಿದೆ. ಈ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಎಸ್ಟಿಮೇಟ್ ಕಳುಹಿಸುವಂತೆ ಸೂಚಿಸಿದ್ದೇನೆ ಎಂದು ಮಾಹಿತಿ ನೀಡಿದರು.

    ಕೆಆರ್‌ಎಸ್‌ ಗ್ರಾಮವನ್ನು ಕಂದಾಯ ಗ್ರಾಮ ಎಂದು ಘೋಷಣೆ ಮಾಡಿ. ಇಲ್ಲಿನ ಗ್ರಾಮಸ್ಥರಿಗೆ ಹಕ್ಕು ಪತ್ರ ಕೊಡಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಕನ್ನಂಬಾಡಿ ಗ್ರಾಮದಲ್ಲಿ ನನ್ನ ಅಜ್ಜ ಇದ್ದರು. ಬೂಕನಕೆರೆಯಲ್ಲಿ ನನ್ನ ತಂದೆ ಇದ್ದರು. ದಸರಾ ನೋಡಲು ನಾನು ಇಲ್ಲಿಗೆ ಬರುತ್ತಿದೆ. ಈಗ ಈ ಭಾಗವನ್ನು ಅಭಿವೃದ್ಧಿ ಪಡಿಸುವ ಸೌಭಾಗ್ಯ ನನ್ನದಾಗಿದೆ. ಶೀಘ್ರದಲ್ಲೇ ಮೈ ಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್‍ಎಸ್‍ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

    ಕಾರ್ಖಾನೆ ಆರಂಭ ಮಾಡಲು ಹಣಕಾಸಿನ ನೆರವು ಎಷ್ಟಿದೆ ಎನ್ನುವುದನ್ನು ಜಿಲ್ಲಾಧಿಕಾರಿಗಳು ನನಗೆ ತಿಳಿಸಿದಲ್ಲಿ ನಾನು ತಕ್ಷಣ ಅಗತ್ಯ ಹಣವನ್ನು ಬಿಡುಗಡೆ ಮಾಡುತ್ತೇನೆ. ಮತ್ತೊಮ್ಮೆ ಕಾರ್ಖಾನೆಗಳು ಮುಚ್ಚಿದೆ ಎಂಬ ಮಾತನ್ನು ನಾವು ಕೇಳಬಾರದು. ಯಡಿಯೂರಪ್ಪ ಭರವಸೆ ಕೊಟ್ಟರೆ ಅದು ಕೇವಲ ಭರವಸೆಯಾಗಿ ಉಳಿಯುವುದಿಲ್ಲ ಕಾರ್ಯರೂಪಕ್ಕೆ ಬರಲಿದೆ. ಮಾತೇ ಸಾಧನೆಯಾಗಬಾರದು, ಸಾಧನೆ ಮಾತನಾಡಬೇಕು. ಕಾವೇರಿ ಮುನಿಸಿಕೊಳ್ಳದೆ ಪ್ರತಿ ವರ್ಷ ಇದೇ ರೀತಿ ತುಂಬಿ ತುಳುಕಲಿ ಎಂದು ಪ್ರಾರ್ಥಿಸುತ್ತೇನೆ. ಕೆಲವು ಜಿಲ್ಲೆಗಳಲ್ಲಿ ಬರಗಾಲವಿದೆ, ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಾಗಿದೆ. ಎರಡು ಸವಾಲುಗಳನ್ನು ಎದುರಿಸಬೇಕಿದೆ. ಕೇಂದ್ರ ಸರ್ಕಾರ ಸಹಕಾರ ನೀಡಲಿದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಸೆ. 7,8 ರಂದು ಮೋದಿ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಆಗ ಅತಿವೃಷ್ಠಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಗುವುದು ಎಂದು ತಿಳಿಸಿದರು.

    ನಾರಯಣಗೌಡ ಪ್ರತ್ಯಕ್ಷ
    ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದಿದ್ದರೂ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಅನರ್ಹ ಶಾಸಕ ನಾರಯಣಗೌಡ ಯಡಿಯೂರಪ್ಪನವರ ಪಕ್ಕದಲ್ಲಿಯೇ ನಿಂತು ಆಶ್ಚರ್ಯ ಉಂಟುಮಾಡಿದರು. ಅಲ್ಲದೆ, ಬಾಗಿನ ಅರ್ಪಿಸಿದ ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲೂ ನಾರಾಯಣಗೌಡ ಕಾಣಿಸಿಕೊಂಡಿದ್ದರು. ಅಲ್ಲದೆ ವೇದಿಕೆ ಹತ್ತಿ ಮುಂದಿನ ಸಾಲಿನಲ್ಲೇ ಕುಳಿತಿದ್ದರು. ವೇದಿಕೆ ಮೇಲೆ ಗಣ್ಯರನ್ನು ಸ್ವಾಗತ ಕೋರುವ ವೇಳೆ ನಾರಾಯಣಗೌಡರಿಗೂ ಸ್ವಾಗತ ಕೋರಲಾಯಿತು. ಈ ಮೂಲಕ ಅನರ್ಹ ಶಾಸಕ ನಾರಾಯಣಗೌಡ ಅವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಮತ್ತಷ್ಟು ಪುಷ್ಟಿ ಸಿಕ್ಕಂತಾಯಿತು.

  • ತುಂಗಭದ್ರಾ ಜಲಾಶಯಕ್ಕೆ ಉಜ್ಜಯಿನಿ ಜಗದ್ಗುರುಗಳಿಂದ ಬಾಗಿನ ಅರ್ಪಣೆ

    ತುಂಗಭದ್ರಾ ಜಲಾಶಯಕ್ಕೆ ಉಜ್ಜಯಿನಿ ಜಗದ್ಗುರುಗಳಿಂದ ಬಾಗಿನ ಅರ್ಪಣೆ

    ಬಳ್ಳಾರಿ: ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ಸ್ವಾಮೀಜಿ ಬಾಗಿನ ಅರ್ಪಣೆ ಮಾಡಿದ್ದಾರೆ.

    ತುಂಗಭದ್ರಾ ರೈತ ಸಂಘ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಜ್ಜಯಿನಿ ಜಗದ್ಗುರು ನೇತೃತ್ವದಲ್ಲಿ 20 ಸ್ವಾಮೀಜಿಗಳಿಂದ ಗಂಗೆಪೂಜೆ, ಬಾಗಿನ ಅರ್ಪಣೆ ಮಾಡಲಾಗಿದೆ. ಜಲಾಶಯದ ಅಚ್ಚುಕಟ್ಟು ಭಾಗದ 50ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದರು.

    ಈ ವೇಳೆ ಮಾತನಾಡಿದ ಶ್ರೀಗಳು, ಲೋಕಸಭೆ ಚುನಾವಣೆಯಲ್ಲಿ ಮತದಾನ ಕಡ್ಡಾಯವಾಗಬೇಕು. ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು ವಿಧಾನಸಭೆ ಮುನ್ನ ಪ್ರತ್ಯೇಕ ಲಿಂಗಾಯತ ಮಾಡಲು ಹೋದವರಿಗೆ ಏನಾಗಿದೆ ಎನ್ನುವುದು ಗೊತ್ತಿದೆ. ಎಲ್ಲರೂ ಜಾತ್ಯಾತೀತರಾಗಿ ಮುನ್ನಡೆಯಬೇಕು ಎಂದರು.

    ಜಲಾಶಯದಲ್ಲಿ 33 ಟಿಎಂಸಿ ಹೂಳು ತುಂಬಿದ್ದು, ಹಲವು ಸರ್ಕಾರಗಳು ಬಂದರೂ ಹೂಳೆತ್ತಲು ಆಗಿಲ್ಲ. ತುಂಗಭದ್ರಾ ರೈತರು ಪ್ರತಿವರ್ಷ ಹೂಳೆತ್ತುವ ಮೂಲಕ ಸರ್ಕಾರವನ್ನು ಎಚ್ಚರಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಹೂಳೆತ್ತುವ ಬಗ್ಗೆ ತಜ್ಞರ ಸಮಿತಿ ರಚಿಸಿ ಹೂಳೆತ್ತಲು ಮುಂದಾಗಬೇಕು, ಇಲ್ಲವಾದಲ್ಲಿ ಪತ್ರ ಚಳುವಳಿ ಮಾಡಿ ಸರ್ಕಾರವನ್ನು ಎಚ್ಚರಿಸಲಾಗುವುದು ಎಂದು ರೈತರು ಹೇಳಿದ್ದಾರೆ.

    ಆಗಸ್ಟ್ 15 ರಂದು ಬಳ್ಳಾರಿ ಉಸ್ತುವಾರಿ ಸಚಿವ ಡಿ ಕೆ ಶಿವಕುಮಾರ್ ಸರ್ಕಾರದ ಪರವಾಗಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಧರ್ಮವನ್ನು ಯಾರು ಕಾಪಾಡ್ತಾರೋ ಅವರನ್ನು ಧರ್ಮ ಕಾಪಾಡುತ್ತೆ: ಡಿ.ಕೆ ಶಿವಕುಮಾರ್

    ಧರ್ಮವನ್ನು ಯಾರು ಕಾಪಾಡ್ತಾರೋ ಅವರನ್ನು ಧರ್ಮ ಕಾಪಾಡುತ್ತೆ: ಡಿ.ಕೆ ಶಿವಕುಮಾರ್

    ಮಡಿಕೇರಿ: ತಲಕಾವೇರಿಗೆ ಬಾಗಿನ ಅರ್ಪಿಸಿ ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ ಎಂದು ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ದಂಪತಿ ಕೊಡಗಿನಲ್ಲಿ ತಲಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಇವರ ಜೊತೆ ಡಿ.ಕೆ. ಶಿವಕುಮಾರ್ ಅವರು ಕೂಡ ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶಿವಕುಮಾರ್, 19 ವರ್ಷದ ನಂತರ ಕರ್ನಾಟಕ ಸರ್ಕಾರ ಪೂಜೆ ಸಲ್ಲಿಸುವಂತಹ ಕಾರ್ಯವನ್ನು ಮಾಡುತ್ತಿದೆ. ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ. ಧರ್ಮದಿಂದ ಭಕ್ತಿಯಿಂದ ಈ ರಾಜ್ಯವನ್ನು ಸುಭೀಕ್ಷೆಯಿಂದ ನಡೆಸುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಸಂತಸದಿಂದ ಹೇಳಿದ್ದಾರೆ.

    ಈ ಹಿನ್ನೆಲೆಯಲ್ಲಿ ನಮಗೆ ಎಲ್ಲ ನದಿಗಳ ಬಗ್ಗೆ, ನಮ್ಮ ನಾಡಿನ ಬಗ್ಗೆ, ಈ ನಾಡಿನ ಕ್ಷೇಮಕ್ಕೋಸ್ಕರ ಒಳ್ಳೆದಾಗಲಿ ಎಂದು ಇಂದು ನಮ್ಮ ಭೂಮಿ ತಾಯಿ ಕಾವೇರಿಗೆ ಮುಖ್ಯಮಂತ್ರಿಗಳು ಸರ್ಕಾರದ ಸಮೇತವಾಗಿ ಪೂಜೆ ಮಾಡಿ ಬಾಗಿನ ಅರ್ಪಿಸುವ ಕಾರ್ಯವನ್ನು ಮಾಡಿದ್ದಾರೆ. ಇಲ್ಲಿ ಪೂಜೆ ಮುಗಿದ ಮೇಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.

    ನಮ್ಮ ನಾಡಿದ ದೇವತೆ ಚಾಮುಂಡಿ ದೇವತೆಯ ಬಳಿ ಹೋಗಿ ದುಃಖವನ್ನು ಮತ್ತು ದಾರಿದ್ರ್ಯವನ್ನು ನಿವಾರಣೆ ಮಾಡುವ ಶಕ್ತಿಯನ್ನು ಆ ದೇವಿ ನಮಗೆ ಕೊಡಲಿ ಎಂದು ಬೇಡಿಕೊಳ್ಳುತ್ತೇವೆ. ಇವತ್ತು ಒಂದೇ ದಿನ ಹಾರಂಗಿ, ಕಬಿನಿ ಮತ್ತು ಕೆಆರ್‍ಎಸ್ ಎಲ್ಲ ಕಡೆ ಪೂಜೆ ಮಾಡುತ್ತಿದ್ದೇವೆ. ಅವರ ಕರ್ತವ್ಯವನ್ನು ದಂಪತಿ ಸಮೇತ ನಿಮ್ಮೆಲ್ಲರ ಪರವಾಗಿ ಅವರು ಮಾಡುತ್ತಿದ್ದಾರೆ ಎಂದು ಸಿಎಂ ಬಗ್ಗೆ ಶಿವಕುಮಾರ್ ಅವರು ಹೇಳಿದ್ದಾರೆ.

  • ಬರೋಬ್ಬರಿ 7 ಗಂಟೆ ಬೆಂಗ್ಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ – ಮಾರ್ಗ ಬದಲು

    ಬರೋಬ್ಬರಿ 7 ಗಂಟೆ ಬೆಂಗ್ಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ – ಮಾರ್ಗ ಬದಲು

    ಮಂಡ್ಯ: ಜಿಲ್ಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿ ಬರೋಬ್ಬರಿ 7 ಗಂಟೆಗಳ ಕಾಲ ಬಂದ್ ಆಗಲಿದೆ.

    ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಕೆಆರ್ ಎಸ್‍ಗೆ ಬಾಗಿನ ಅರ್ಪಿಸಲಿದ್ದಾರೆ. ನಂತರ ಮಂಡ್ಯ ನಗರದ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ಕಾರ್ಯಕ್ರಮಕ್ಕೆ ಬಸ್ ಮತ್ತು ಮಿನಿ ವಾಹನಗಳಲ್ಲಿ ಸುಮಾರು ಒಂದು ಲಕ್ಷ ಜನ ಆಗಮಿಸುವ ಸಾಧ್ಯತೆ ಇದೆ.

    ಈ ಹಿನ್ನೆಲೆಯಲ್ಲಿ ಮೈಸೂರು ಹೆದ್ದಾರಿ 275 ರಲ್ಲಿ ಆಗಬಹುದಾದ ವಾಹನ ದಟ್ಟಣೆ ಹಾಗೂ ಸುಗಮ ಸಂಚಾರ ಕಲ್ಪಿಸುವ ದೃಷ್ಟಿಯಿಂದ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬೆಂಗಳೂರಿನಿಂದ ಮೈಸೂರಿನ ಕಡೆಗೆ ಸಾಗುವಂತಹ ವಾಹನಗಳ ಮಾರ್ಗ ಬದಲು ಮಾಡಲಾಗಿದೆ.

    ಬೆಂಗಳೂರಿನಿಂದ ಮೈಸೂರಿಗೆ ಹೋಗುವವರು ಮದ್ದೂರಿನ ಟಿ.ಬಿ.ಕ್ರಾಸ್- ಮಳವಳ್ಳಿ ಮಾರ್ಗವಾಗಿ ಹಾಗೂ ಮೈಸೂರಿನಿಂದ ಬೆಂಗಳೂರು ಕಡೆಗೆ ಸಾಗುವ ವಾಹನಗಳು ಕರಿಘಟ್ಟ ಜಂಕ್ಷನ್‍ನಿಂದ ಅರಕೆರೆ ಮಾರ್ಗವಾಗಿ ಮತ್ತು ಬನ್ನೂರು-ಬೆಂಗಳೂರು ಕಡೆಗೆ ಸಂಚಾರ ಮಾರ್ಗ ಬದಲಿಸಲು ಜಿಲ್ಲಾಧಿಕಾರಿ ಮಂಜುಶ್ರೀ ಅವರು ಆದೇಶ ಹೊರಡಿಸಿದ್ದಾರೆ.

    ಇದೇ ಮೊದಲ ಬಾರಿಗೆ ಇಷ್ಟು ದೀರ್ಘಾವಧಿವರೆಗೂ ಬಂದ್ ಮಾಡಿದ್ದಾರೆ. ಇವತ್ತು ಆಷಾಢ ಶುಕ್ರವಾರವಾಗಿರುವುದರಿಂದ ಅನೇಕ ಜನರಿಗೆ ಓಡಾಡುವುದು ತುಂಬಾ ತೊಂದರೆಯಾಗುತ್ತಿದೆ. ವಾಹನ ಸವಾರರಿಗೆ ಸಮಯ ಮತ್ತು ಹಣವೂ ವ್ಯರ್ಥವಾಗುತ್ತದೆ. ಇದರಿಂದ ಸವಾರರು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ವಾಹನಗಳ ದಟ್ಟಣೆ ನಿರ್ಮಾಣವಾಗಿದೆ. ಇದನ್ನು ಅರಿತುಕೊಂಡು ಆದಷ್ಟು ಬೇಗ ಮುಖ್ಯಮಂತ್ರಿಗಳು ವಾಪಸ್ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    ಬದಲು ಮಾರ್ಗ
    * ಬೆಂಗಳೂರು-ಮೈಸೂರು – ಮದ್ದೂರಿನ ಟಿ.ಬಿ.ಕ್ರಾಸ್- ಮಳವಳ್ಳಿ ಮಾರ್ಗ
    * ಮೈಸೂರು-ಬೆಂಗಳೂರು – ಕರಿಘಟ್ಟ ಜಂಕ್ಷನ್‍ನಿಂದ ಅರಕೆರೆ ಮಾರ್ಗ

  • 35 ವರ್ಷದ ನಂತ್ರ ಉತ್ತಮ ಮಳೆ – ಹಾರಂಗಿ ಜಲಾಶಯಕ್ಕೆ ಸಿಎಂ ದಂಪತಿಯಿಂದ ಬಾಗಿನ

    35 ವರ್ಷದ ನಂತ್ರ ಉತ್ತಮ ಮಳೆ – ಹಾರಂಗಿ ಜಲಾಶಯಕ್ಕೆ ಸಿಎಂ ದಂಪತಿಯಿಂದ ಬಾಗಿನ

    ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಹಾರಂಗಿ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಬಾಗಿನ ಅರ್ಪಿಸಿದ್ದಾರೆ.

    ಗುರುವಾರ ಸಿಎಂ ಕುಮಾರಸ್ವಾಮಿ ಸುಮಾರು 4 ಗಂಟೆ ವೇಳೆಗೆ ಕೊಡಗಿಗೆ ಆಗಮಿಸಿದ್ದರು. ಮೊದಲು ಹಾರಂಗಿ ಜಲಾಶಯದ ಬಳಿಯಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಬಾಗಿನ ಅರ್ಪಿಸಿದ್ದಾರೆ. ಜಲಾಶಯ ಭರ್ತಿಗೊಂಡ ನಂತರ ಗುಂಡುರಾವ್ ಬಳಿಕ ಕುಮಾರಸ್ವಾಮಿ ಅವರೇ ಬಾಗಿನ ಅರ್ಪಿಸಿದರು ಎಂಬ ಕೀರ್ತಿಗೂ ಕೂಡ ಪಾತ್ರರಾದರು.

    ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಎಚ್.ಡಿ.ಕೆ, 35 ವರ್ಷದ ಬಳಿಕ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದ ಜನರಿಗೆ ಸಂಕಷ್ಟ ಕೂಡ ಎದುರಾಗಿರುವುದು ತಿಳಿದುಬಂದಿದೆ. ನಾಡಿಗೆ ನೀರುಣಿಸುವ ಕೊಡಗಿನ ಜನರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿದೆ ಎಂದು ಹೇಳಿದ್ದಾರೆ.

    ಸಿಎಂ ಬಾಗಿನ ಕಾರ್ಯಕ್ರಮಕ್ಕೆ ಸಚಿವ ಡಿ.ಕೆ ಶಿವಕುಮಾರ್, ಹೆಚ್.ಡಿ ರೇವಣ್ಣ, ಎಂಎಲ್ ಸಿ ಬೋಜೆಗೌಡ, ಶಾಸಕ ಬೋಪಯ್ಯ, ಅಪ್ಪಚ್ಚು ರಂಜನ್ ಮತ್ತು ಸುನೀಲ್ ಸುಬ್ರಮಣಿ ಅವರು ಸಾಥ್ ನೀಡಿದ್ದಾರೆ.

  • ಮಾಧ್ಯಮದವರನ್ನ ಹೊರಗಿಟ್ಟು ಸಭೆ ನಡೆಸಿದ ಎಚ್‍ಡಿಕೆ

    ಮಾಧ್ಯಮದವರನ್ನ ಹೊರಗಿಟ್ಟು ಸಭೆ ನಡೆಸಿದ ಎಚ್‍ಡಿಕೆ

    ಮಡಿಕೇರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದು, ಸಭೆಗೆ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಲಾಗಿತ್ತು.

    ಹಾರಂಗಿ ಡ್ಯಾಂಗೆ ಬಾಗಿನ ಅರ್ಪಿಸಿ, ಬಳಿಕ ಕುಮಾರಸ್ವಾಮಿ ಸಭೆ ನಡೆಸಿ, ಕೊಡಗು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸಿಎಂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸಾಥ್ ನೀಡಿದರು.

    ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಕೊಡಗಿನ ಮಳೆಹಾನಿ ಪರಿಸ್ಥಿತಿ ತಿಳಿದು ಸ್ಪಂದಿಸಲು ಬಂದಿದ್ದೇನೆ. 35 ವರ್ಷಗಳ ಬಳಿಕ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಜಿಲ್ಲೆಯ ಜಲಾಶಯ, ಜಲಪಾತಗಳು ಉಕ್ಕಿ ಹರಿಯುತ್ತಿವೆ. ಆದರೆ ಮಳೆಯಿಂದ ಜಿಲ್ಲೆಯ ಜನತೆ ಸಂಕಷ್ಟಕ್ಕೆ ಸಿಲುಕಿರೋದು ಗಮನಕ್ಕೆ ಬಂದಿದ್ದು, ನಾಡಿನ ಜನರಿಗೆ ನೀರುಣಿಸುವ ಕೊಡಗಿನ ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಲಿದೆ. ವಿದ್ಯುತ್ ಸಂಪರ್ಕ ಕಡಿತ ಹಿನ್ನೆಲೆ ಪಕ್ಕದ ಮೈಸೂರು, ಹಾಸನ ಜಿಲ್ಲೆಯ ಸಿಬ್ಬಂದಿ ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

  • 4 ವರ್ಷಗಳ ಬಳಿಕ ತುಂಬಿದ ಹೇಮಾವತಿ ನದಿಗೆ ಬಾಗಿನ

    4 ವರ್ಷಗಳ ಬಳಿಕ ತುಂಬಿದ ಹೇಮಾವತಿ ನದಿಗೆ ಬಾಗಿನ

    ಚಿಕ್ಕಮಗಳೂರು: ಕಳೆದ ಮೂರು-ನಾಲ್ಕು ವರ್ಷಗಳಿಂದ ನೀರಿಲ್ಲದೆ ಸೊರಗಿದ್ದ ಹೇಮಾವತಿ ನದಿ ಕುಂಭದ್ರೋಣ ಮಳೆಯಿಂದಾಗಿ ಮೈದುಂಬಿ ಹರಿಯುತ್ತಿದೆ.

    ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಸಮೀಪ ಹುಟ್ಟೋ ಹೇಮಾವತಿ ನದಿ ಕಳೆದ ಹದಿನೈದು ದಿನಗಳಿಂದು ಸುರಿಯುತ್ತಿರುವ ಮಳೆಗೆ ಮೈದುಂಬಿ ಹರಿಯುತ್ತಿದ್ದು, ನದಿಯ ಇಕ್ಕೆಲಗಳ ಜಮೀನು ಕೂಡ ಜಲಾವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮೈದುಂಬಿ ಹರಿಯದ ಹೇಮಾವತಿ ನದಿಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಬಾಗಿನ ಅರ್ಪಿಸಿದ್ದಾರೆ.

    ಹೇಮಾವತಿ ಮೈದುಂಬಿ ಹರಿಯುತ್ತಿರುವುದರಿಂದ ಜನ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನಮ್ಮ ಮಲೆನಾಡಿನ ಜೀವನದಿಯ ಉಗಮ ಸ್ಥಾನವಾದ ಹೇಮಾವತಿ ನದಿ ಈ ಬಾರಿ ಮಳೆಯಿಂದ ಭರ್ತಿಯಾಗಿದೆ. ಸಮೃದ್ಧಿ ಮಳೆಯಾಗಿರುವುದರಿಂದ ಮೊಟ್ಟ ಮೊದಲ ಬಾರಿಗೆ ಈ ನದಿಗೆ ಬಾಗಿನ ಕೊಟ್ಟಿದ್ದೇವೆ. ಇಲ್ಲಿ ತುಂಬಿ ಮೈಸೂರು ನಗರದ ಕೆಆರ್ ಎಸ್ ಗೆ ಹೋಗಿ ತಲುಪುತ್ತದೆ. ಇದರಿಂದ ರೈತರಿಗೆ ಅನುಕೂಲವಾಗಲಿ ಎಂದು ಹೇಳಿದ್ದಾರೆ.