Tag: bail

  • MUDA Scam| ಜಾಮೀನು ಅರ್ಜಿ ವಜಾ, 9 ದಿನ ಇಡಿ ಕಸ್ಟಡಿಗೆ ದಿನೇಶ್‌ ಕುಮಾರ್‌

    MUDA Scam| ಜಾಮೀನು ಅರ್ಜಿ ವಜಾ, 9 ದಿನ ಇಡಿ ಕಸ್ಟಡಿಗೆ ದಿನೇಶ್‌ ಕುಮಾರ್‌

    – ಕೇಜ್ರಿವಾಲ್‌ಗೆ ನೀಡಿದಂತೆ ಜಾಮೀನು ನೀಡಿ ಎಂದ ವಕೀಲ
    – 14 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದ ಇಡಿ

    ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಸೈಟ್‌ ಹಂಚಿಕೆ ಹಗರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ (Dinesh Kumar) ಅವರನ್ನು ಕೋರ್ಟ್‌ 9 ದಿನಗಳ ಕಾಲ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದೆ.

    ಮಂಗಳವಾರ(ಸೆ.16) ಬೆಂಗಳೂರಿನ ಕಚೇರಿಗೆ ವಿಚಾರಣೆಗೆ ಆಗಮಿಸಿದ್ದ ದಿನೇಶ್‌ ಕುಮಾರ್‌ ಅವರನ್ನು ಇಡಿ ಬಂಧಿಸಿತ್ತು. ರಾತ್ರಿ ನ್ಯಾಯಾಧೀಶರ ಮನೆ ಹಾಜರು ಪಡಿಸಿ 1 ದಿನ ಕಸ್ಟಡಿಗೆ ಪಡೆದುಕೊಂಡಿದ್ದ ಇಡಿ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿತು.

    ವಿಚಾರಣೆ ಸಮಯದಲ್ಲಿ ದಿನೇಶ್‌ ಕುಮಾರ್‌ ಪರವಾಗಿ ಹಾಜರಾದ ವಕೀಲರು, ಒಂದು ವರ್ಷದಿಂದ ಸುಮ್ಮನಿದ್ದ ಇಡಿ ಅಧಿಕಾರಿಗಳು ಈಗ ತನಿಖೆಗೆ ದಿನೇಶ್‌ ಬೇಕು ಎನ್ನುತ್ತಿದ್ದಾರೆ. ಇಷ್ಟು ದಿನ ಬಂಧನ ಮಾಡದೇ ಇದ್ದವರನ್ನು ಈಗ ಬಂಧಿಸಿದ್ದು ಯಾಕೆ? ಈಗಾಗಲೇ ಬ್ಯಾಂಕ್ ವಿವರಗಳನ್ನು ಎಲ್ಲವನ್ನೂ ನೀಡಿದ್ದು ಈಗ ಮತ್ತೆ ಕಸ್ಟಡಿಗೆ ಕೇಳುವುದು ಸರಿಯಲ್ಲ ಎಂದು ವಾದಿಸಿದರು. ಇದನ್ನೂ ಓದಿ:  ಮುಡಾ ಮಾಜಿ ಆಯುಕ್ತನ ಹೆಸ್ರಲ್ಲಿ 198, ಎಂಎಲ್‌ಸಿ ಹೆಸ್ರಲ್ಲಿ 128 ಬೇನಾಮಿ ಸೈಟ್ – 631 ಸೈಟುಗಳ ಮಾಹಿತಿ ಕೇಳಿದ ಇಡಿ

    ನಮ್ಮ ಕಕ್ಷಿದಾರರು, ಅಸ್ತಮಾ ಸೇರಿದಂತೆ ಕೆಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿ ದೆಹಲಿ ಮಾಜಿ ಸಿಎಂ ಕೇಜ್ರಿವಾಲ್ ಮಧ್ಯಂತರ ಜಾಮೀನು ಆದೇಶ ಉಲ್ಲೇಖಿಸಿ ಜಾಮೀನು ನೀಡಬೇಕು ಎಂದು ಕೇಳಿಕೊಂಡರು. ಈ ವೇಳೆ ಜಡ್ಜ್‌, ದಿನೇಶ್‌ ಕುಮಾರ್‌ ರಾಜಕಾರಣಿ ಅಲ್ಲ. ಮುಡಾ ಪ್ರಕರಣದಲ್ಲಿ ಈ ಅಂಶವನ್ನು ಪ್ರಸ್ತಾಪ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

    ಇಡಿ ಪರ ವಕೀಲರು ನಮಗೆ ತನಿಖೆಗೆ ಬೇಕಾದ ಅಗತ್ಯ ದಾಖಲೆಗಳು ಸಿಕ್ಕಿದ್ದು 14 ದಿನ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಎರಡು ಕಡೆಯ ವಾದ ಆಲಿಸಿದ ಕೋರ್ಟ್‌ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಸೆ. 26 ರಂದು ಸಂಜೆ 5 ಗಂಟೆಗೆ ದಿನೇಶ್‌ಕುಮಾರ್‌ ಅವರನ್ನು ಹಾಜರುಪಡಿಸಬೇಕು ಎಂದು ಇಡಿಗೆ ಸೂಚಿಸಿತು.  ಇದನ್ನೂ ಓದಿ: ಕುರುಬರನ್ನು ಎಸ್‌ಟಿಗೆ ಸೇರಿಸಿ ನಮ್ಮನ್ನು ತುಳಿಯುವ ಹುನ್ನಾರ: ಸಿಎಂ ವಿರುದ್ಧ ವಾಲ್ಮೀಕಿ ನಾಯಕ ಒಕ್ಕೂಟ ಆಕ್ರೋಶ

    ದಿನೇಶ್‌ ಕುಮಾರ್‌ ಮೇಲಿರುವ ಆರೋಪ ಏನು?
    ದಿನೇಶ್ ಕುಮಾರ್ ಆಯುಕ್ತರಾಗಿದ್ದ ಅವಧಿಯಲ್ಲಿ ಮಧ್ಯವರ್ತಿಗಳ ಮೂಲಕ 1000 ರಕ್ಕೂ ಹೆಚ್ಚು ನಿವೇಶನಗಳು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ಬದಲಿ ನಿವೇಶನ ಹಂಚಿಕೆ ಪ್ರಕ್ರಿಯೆ ದಿನೇಶ್‌ ಕುಮಾರ್‌ ನೇತೃತ್ವದಲ್ಲಿ ನಡೆದಿದೆ. ನಿವೇಶನ ಹಂಚಿಕೆ ಮಾಡಲು ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಬ್ಯಾಕ್‌ ವ್ಯವಹಾರದ ಮೂಲಕ ಸೈಟ್‌ ಹಂಚಿಕೆ ಮಾಡಿರುವುದಕ್ಕೆ ಸಾಕ್ಷ್ಯಗಳು ಸಿಕ್ಕಿವೆ ಎಂದು ಇಡಿ ಈ ಹಿಂದೆ ಹೇಳಿತ್ತು.

  • ಬೆಂಗಳೂರು ಟು ಬಳ್ಳಾರಿ ಜೈಲು – ದರ್ಶನ್ ಭವಿಷ್ಯ ಇಂದು ಕೋರ್ಟ್‌ನಲ್ಲಿ ನಿರ್ಧಾರ

    ಬೆಂಗಳೂರು ಟು ಬಳ್ಳಾರಿ ಜೈಲು – ದರ್ಶನ್ ಭವಿಷ್ಯ ಇಂದು ಕೋರ್ಟ್‌ನಲ್ಲಿ ನಿರ್ಧಾರ

    – ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದ ಪವಿತ್ರಾ ಗೌಡ; ಇಂದು ಬೇಲ್ ಭವಿಷ್ಯ

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Case) ಎರಡನೇ ಬಾರಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ಗೆ (Actor Darshan) ಇಂದು ಅದೃಷ್ಟ ಪರೀಕ್ಷೆ ದಿನ. ಪರಪ್ಪನ ಅಗ್ರಹಾರದಲ್ಲೇ ಉಳಿಯುತ್ತಾರಾ ಅಥವಾ ಬಳ್ಳಾರಿ ಜೈಲಿಗೆ (Ballary Jail) ಶಿಫ್ಟ್ ಆಗ್ತಾರಾ ಎಂಬುದು ಇಂದು ಕೋರ್ಟ್ನಲ್ಲಿ ನಿರ್ಧಾರ ಆಗಲಿದೆ. ಇತ್ತ, ಎ1 ಆರೋಪಿ ಪವಿತ್ರಗೌಡ (Pavitra Gowda) ಬೇಲ್ ಭವಿಷ್ಯ ಕೂಡ ನಿರ್ಧಾರವಾಗಲಿದೆ.

    ಭದ್ರತಾ ದೃಷ್ಟಿಯಿಂದ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂದು ಸರ್ಕಾರಿ ಪರ ವಕೀಲರು ಮಾಡಿರೋ ಮನವಿ ಅರ್ಜಿ ವಿಚಾರಣೆ ನಡೆಸಲಿದೆ. ಈಗಾಗಲೇ ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದು, ಟ್ರಯಲ್ ಅತೀ ಶೀಘ್ರದಲ್ಲೇ ಪ್ರಾರಂಭ ಆಗ್ತಾ ಇದೆ. ಹೀಗಾಗಿ, ಆರೋಪಿಯನ್ನು ಪದೇ ಪದೇ ಬಳ್ಳಾರಿಯಿಂದ ಕರೆತರಲು ಸಾಧ್ಯವಿಲ್ಲ. ಜೊತೆಗೆ ಆರೋಪಿ ತಾಯಿಗೆ ಕ್ಯಾನ್ಸರ್ ಮಾರಕ ಕಾಯಿಲೆ ಇದ್ದು, ಬಳ್ಳಾರಿಗೆ ಪ್ರಯಣ ಮಾಡಲು ಕಷ್ಟ. ಹೀಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರಿಸುವಂತೆ ಮನವಿ ಮಾಡಿದೆ. ಇಂದು ವಾದ ಮಂಡನೆ ಮಾಡಲಿರೋ ಸರ್ಕಾರಿ ಪರ ವಕೀಲರು ಯಾವ ಅಂಶವನ್ನು ಮುಂದಿಡಲಿದ್ದಾರೆ ಎಂಬುದನ್ನು ನೋಡಬೇಕು. ಇದನ್ನೂ ಓದಿ: ಧರ್ಮಸ್ಥಳ ಕೇಸ್-‌ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಎಸ್‌ಐಟಿ ಕಸ್ಟಡಿ ನಾಳೆಗೆ ಅಂತ್ಯ

     ಪವಿತ್ರಗೌಡಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿ ಜೈಲಿಗೆ ಕಳುಹಿಸಿದೆ. ಆದರೆ, ಜೈಲಿಗೆ ಹೋದ ನಾಲ್ಕನೇ ದಿನಕ್ಕೆ ಮತ್ತೆ ಸೆಷನ್ಸ್ ಕೋರ್ಟ್ ಜಾಮೀನಿಗೆ ಪವಿತ್ರಾ ಗೌಡ ಅರ್ಜಿ ಹಾಕಿದ್ದರು. ಬಿಎನ್‌ಎಸ್‌ಎಸ್ ಅಲ್ಲಿ ವಿಚಾರಣೆ ನಡೆಸೋ ಬದಲು ಸಿಆರ್‌ಪಿಸಿನಲ್ಲಿ ವಿಚಾರಣೆ ನಡೆಸ್ತಾ ಇದ್ದಾರೆ. ಹೀಗಾಗಿ ತಾಂತ್ರಿಕ ಕಾರಣಗಳಿಂದ ಜಾಮೀನು ಮಂಜೂರು ಮಾಡಬೇಕೆಂದು ಪವಿತ್ರಗೌಡ ಪರ ವಕೀಲರು ವಾದ ಮಂಡನೆ ಮಾಡಿದ್ರು. ಇತ್ತ ಸರ್ಕಾರಿ ಪರ ವಕೀಲರು ಕಾನೂನಿನ ಅವಕಾಶದ ಬಗ್ಗೆ ವಾದ ಮಂಡನೆ ಮಾಡಿದ್ದು, ವಾದ – ಪ್ರತಿವಾದ ಆಲಿಸಿರೋ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿದೆ. ಸುಪ್ರೀಂ ಕೋರ್ಟ್ನ ಶಾಕ್ ಬಳಿಕ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಇಂದು ಕೋರ್ಟ್ ಏನು ಆದೇಶ ನೀಡಲಿದೆ ಎಂದು ಕುತೂಹಲ ಮೂಡಿಸಿದೆ.

  • ಗಟ್ಟಿಯಾದ ಬ್ಲಾಂಕೆಟ್‌, ದಿಂಬು, ನೈಟ್ ಡ್ರೆಸ್ ಬೇಕು – ಜೈಲಲ್ಲಿರೋ ದರ್ಶನ್ ಹೊಸ ಬೇಡಿಕೆ

    ಗಟ್ಟಿಯಾದ ಬ್ಲಾಂಕೆಟ್‌, ದಿಂಬು, ನೈಟ್ ಡ್ರೆಸ್ ಬೇಕು – ಜೈಲಲ್ಲಿರೋ ದರ್ಶನ್ ಹೊಸ ಬೇಡಿಕೆ

    ರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿರೋ ದರ್ಶನ್ & ಗ್ಯಾಂಗ್‌ಗೆ ಸೆಪ್ಟೆಂಬರ್ 2 ಮಹತ್ವದ ದಿನವಾಗಿದೆ. ನಟ ದರ್ಶನ್ ಬಳ್ಳಾರಿ ಜೈಲಿಗೆ ಲಕ್ಷಣ್ ಶಿವಮೊಗ್ಗ ಜೈಲಿಗೆ, ನಾಗರಾಜ್ ಕಲಬುರಗಿ ಜಿಲ್ಲೆಗೆ ಶಿಫ್ಟ್ ಮಾಡುವಂತೆ ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ 64ನೇ ಸಿಸಿಎಚ್ ಕೋರ್ಟ್ ವಿಚಾರಣೆಯನ್ನು ಸೆ.2ಕ್ಕೆ ಮುಂದೂಡಿದೆ.

    ಜೈಲಾಧಿಕಾರಿಗಳ ಅರ್ಜಿಗೆ ದರ್ಶನ್ (Darshan), ಲಕ್ಷ್ಮಣ್‌, ನಾಗರಾಜ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ಜೈಲಿನಲ್ಲಿ ದರ್ಶನ್ ನರಕಯಾತನೆ ಅನುಭವಿಸ್ತಿದ್ದಾರೆ. 2 ಗಟ್ಟಿಯಾದ ಬ್ಲಾಂಕೆಟ್, 2 ದಿಂಬು ಮತ್ತು ಹೆಚ್ಚುವರಿ ಬಟ್ಟೆ ಮತ್ತು ನೈಟ್ ಡ್ರೆಸ್ ಬೇಕು ಅಂತ ದರ್ಶನ್ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಸರ್ಕಾರಿ ಪರ ವಕೀಲರಿಗೆ ಆಕ್ಷೇಪಣೆ ಕೋರಿದ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ.

    ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಕೋರ್ಟ್ ಪವಿತ್ರಗೌಡ ಜಾಮೀನು ಅರ್ಜಿ ತೀರ್ಪನ್ನು ಸೆ.2ಕ್ಕೆ ಪ್ರಕಟಿಸಲಿದೆ. ಈ ಮಧ್ಯೆ, ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡ್ತಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಈಗಾಗಲೇ 6 ಟ್ವಿಟರ್ ಖಾತೆಗಳ ಬಗ್ಗೆ ಪರಿಶೀಲಿಸಿದ್ದಾರೆ. ಐಪಿ ಅಡ್ರೆಸ್ ಪತ್ತೆ ಜೊತೆಗೆ ಟ್ವಿಟರ್‌ಗೆ ಪೊಲೀಸರು ಪತ್ರ ಬರೆಯಲು ಮುಂದಾಗಿದ್ದಾರೆ.

  • ಕಲರ್‌ ಕಲರ್‌ ಕಾಗೆ ಹಾರಿಸಿದ್ದ ಸಮೀರ್‌ಗೆ ಈಗ ಬಂಧನ ಭೀತಿ

    ಕಲರ್‌ ಕಲರ್‌ ಕಾಗೆ ಹಾರಿಸಿದ್ದ ಸಮೀರ್‌ಗೆ ಈಗ ಬಂಧನ ಭೀತಿ

    ಬೆಂಗಳೂರು: ಧರ್ಮಸ್ಥಳ ದೇವಸ್ಥಾನದ (Dharmasthala Temple) ವಿರುದ್ಧ ಎಐ ವಿಡಿಯೋ ಮಾಡಿ ಕಲರ್‌ ಕಲರ್‌ ಕಾಗೆ ಹಾರಿಸಿದ್ದ ಯೂಟ್ಯೂಬರ್‌ ಸಮೀರ್‌ (Youtuber Sameer) ಮೇಲೆ ಮತ್ತೆ ಮೂರು ಎಫ್‌ಐಆರ್‌ ದಾಖಲಾಗಿದೆ.

    ಒಂದು ಪ್ರಕರಣದಲ್ಲಿ ಮಂಗಳೂರು (Mangaluru) ನ್ಯಾಯಾಲಯದಿಂದ ಜಾಮೀನು (Bail) ಸಿಕ್ಕ ಬಳಿಕ ಸಮೀರ್‌ಗೆ ಬಲ ಬಂದಿತ್ತು. ಜಾಮೀನು ಸಿಕ್ಕಿದ ಬಳಿಕ ನಾನು ಏನೇ ಮಾಡಿದರೂ ನಾನು ನಡೆಯುತ್ತಿದ್ದೆ ಎಂಬ ಭಂಡ ಧೈರ್ಯದಿಂದ ಲೈವ್‌ಗೆ ಬಂದಿದ್ದ.

    ಈಗ ಸುಜಾತ ಭಟ್‌ (Sujatha Bhat) ನನಗೆ ಮಗಳೇ ಇಲ್ಲ. ಅನನ್ಯಾ ಭಟ್‌ (Ananya Bhat) ಪಾತ್ರವನ್ನು ಗಿರೀಶ್‌ ಮಟ್ಟಣ್ಣನವರ್‌ ಮತ್ತು ಜಯಂತ್‌ ಹೇಳಿದ್ದಂತೆ ನಾನು ಹೇಳಿದ್ದೆ ಎಂದು ಹೇಳಿದ ಬೆನ್ನಲ್ಲೇ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌ ಸಿಕ್ಕಿತ್ತು. ಇದನ್ನೂ ಓದಿ: Dharmasthala Case | ಎಸ್‌ಐಟಿಯಿಂದ ಮಾಸ್ಕ್‌ ಮ್ಯಾನ್‌ ಅರೆಸ್ಟ್

     
    ಈಗ ಮುಸುಕುಧಾರಿ ಚಿನ್ನಯ್ಯನನ್ನು ವಿಶೇಷ ತನಿಖಾ ತಂಡ (SIT) ಬಂಧಿಸಿದ ಬೆನ್ನಲ್ಲೇ ಸಮೀರ್‌ಗೆ ಬಂಧನ ಭೀತಿ ಎದುರಾಗಿದೆ. ಇನ್ನೊಂದು ಕಡೆ ಜಾರಿ ನಿರ್ದೇಶನಾಲಯ (ED) ಕೂಡ ದಾಖಲೆಗಳನ್ನು ಕೆದಕಲು ಆರಂಭಿಸಿದೆ.

    ಈಗಾಗಲೇ ಪೊಲೀಸರು ಬಳ್ಳಾರಿಯ ನಿವಾಸಕ್ಕೆ ತೆರಳಿ ನೋಟಿಸ್‌ ಅಂಟಿಸಿದ್ದಾರೆ. ಬಂಧನ ಭೀತಿಯಲ್ಲಿರುವ ಸಮೀರ್‌ ಈಗ ಯಾರ ಸಂಪರ್ಕಕ್ಕೆ ಸಿಗುತ್ತಿಲ್ಲ.

    ಒಂದು ಪ್ರಕರಣದಲ್ಲಿ ಜಾಮೀನು ಪಡೆದಿರುವ ಸಮೀರ್‌ ನಾಳೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾಗಬೇಕಿದೆ. ಒಂದು ವೇಳೆ ನಾಳೆ ವಿಚಾರಣೆಗೆ ಹಾಜರಾಗದೇ ಇದ್ದರೆ ಕೋರ್ಟ್‌ ಆದೇಶ ಉಲ್ಲಂಘನೆಯಾಗಿ ನ್ಯಾಯಾಂಗ ನಿಂದನೆಯಾಗಲಿದೆ.

     

  • ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

    ಮಹೇಶ್ ಶೆಟ್ಟಿ ತಿಮರೋಡಿಗೆ ಜೈಲಾ? ಬೇಲಾ? – ಇಂದು ಉಡುಪಿ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ

    ಉಡುಪಿ: ಬಿ.ಎಲ್ ಸಂತೋಷ್ (BL Santosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಗೆ (Mahesh Shetty Thimarody) ಇಂದು ಮಹತ್ವದ ದಿನವಾಗಿದೆ. ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನ ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಹಿರಿಯಡ್ಕ ಸಬ್ ಜೈಲಿನಲ್ಲಿರುವ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದಕ್ಕೆ ಬ್ರಹ್ಮಾವರ ಪೊಲೀಸರು ಮಹೇಶ್ ತಿಮರೋಡಿಯನ್ನು ಬಂಧಿಸಿ ಆನಂತರ ಹೈಡ್ರಾಮಾ ನಡೆದು ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿತ್ತು. ಹಿರಿಯಡ್ಕ ಸಬ್ ಜೈಲಿನಲ್ಲಿರುವ ಮಹೇಶ್ ತಿಮರೋಡಿ ಪ್ರತ್ಯೇಕ ಸೆಲ್‌ನಲ್ಲಿ ಚಡಪಡಿಸುತ್ತಾ ಎರಡು ದಿನ ಕಳೆದಿದ್ದಾರೆ. ತಿಮರೋಡಿ ಭೇಟಿಗೆ ಬಂದ ಬೆಂಬಲಿಗರಿಗೆ ಅವಕಾಶವೂ ಸಿಕ್ಕಿಲ್ಲ. ಬಿಪಿ ಏರುಪೇರು ಆದ ಕಾರಣ ವೈದ್ಯರನ್ನು ಕರೆಸಿ ತಪಾಸಣೆ ಮಾಡಿಸಲಾಗಿದೆ. ಇದನ್ನೂ ಓದಿ: ಭೀಮಾ ನದಿಗೆ 2.10 ಲಕ್ಷ ಕ್ಯೂಸೆಕ್ ನೀರು ರಿಲೀಸ್‌ – ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

    ಗುರುವಾರ ಬ್ರಹ್ಮಾವರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಸಂಚಾರಿ ಪೀಠವಾದ ಕಾರಣ ಇಂದು ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ತಿಮರೋಡಿ ಬೇಲ್ ಸಂಬಂಧ ಕೋರ್ಟ್‌ನಲ್ಲಿ ಯಾವೆಲ್ಲಾ ಅಂಶಗಳ ಮೇಲೆ ವಾದ-ಪ್ರತಿವಾದ ನಡೆಯಲಿದೆ? ನ್ಯಾಯಾಲಯದ ಮುಂದೆ ಇರುವ ಆಯ್ಕೆಗಳೇನು ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಇದನ್ನೂ ಓದಿ: Nelamangala | 16 ವರ್ಷದ ಬಾಲಕಿ ನೇಣಿಗೆ ಶರಣು

    ನ್ಯಾಯಾಲಯದ ಮುಂದೆ ಹಲವು ಆಯ್ಕೆಗಳು:
    -ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಬಹುದು.
    -ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಣೆ ಸಲ್ಲಿಸಿ ವಾದ-ಪ್ರತಿವಾದ.
    -ವಾದ-ಪ್ರತಿವಾದ ನಡೆದು ತೀರ್ಪನ್ನು ಕಾಯ್ದಿರಿಸುವ ಅವಕಾಶ.
    -ಮಹೇಶ್ ಶೆಟ್ಟಿ ತಿಮರೋಡಿಗೆ ಬೇಲ್ ಸಿಗಬಹುದು.
    -ಬೇಲ್ ಸಿಕ್ಕ ನಂತರವೂ ಬಾಡಿ ವಾರೆಂಟ್ ಪಡೆದು ಮತ್ತೆ ಅರೆಸ್ಟ್ ಸಾಧ್ಯತೆ.
    -ಬೆಳ್ತಂಗಡಿ ಕೇಸ್‌ನ ಆಧಾರದಲ್ಲಿ ಬಾಡಿ ವಾರೆಂಟ್ ಮೇಲೆ ಮತ್ತೆ ಬಂಧಿಸಬಹುದು.
    -ಈ ಮಧ್ಯೆ ಆರೋಪಿ ಹೈಕೋರ್ಟ್ನಿಂದ ಸ್ಟೇ ತರಲು ಅವಕಾಶ ಇದೆ.
    -ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ ಕೇಸ್‌ಗೆ ಸ್ಟೇ ಪಡೆಯಬಹುದು.
    -ತಡೆಯಾಜ್ಞೆ ಸಿಕ್ಕರೆ ಆರೋಪಿ ತಿಮರೋಡಿ ಬಿಡುಗಡೆಯೂ ಆಗಬಹುದು.

    ಒಟ್ಟಾರೆ ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿ ಜೈಲು ಸೇರಿರುವ ತಿಮರೋಡಿಗೆ ಇಂದು ಕೋರ್ಟ್‌ನಲ್ಲಿ ಬೇಲ್ ಸಿಗುತ್ತಾ? ಇಲ್ವಾ ಅನ್ನೋದು ಸದ್ಯದ ಕುತೂಹಲದ ಸಂಗತಿಯಾಗಿದೆ. ಇದನ್ನೂ ಓದಿ: ರಷ್ಯಾ ತೈಲ ಖರೀದಿಸಲು ಸಾಧ್ಯವಾಗದಿದ್ರೆ ಭಾರತಕ್ಕಿರೋ ಆಯ್ಕೆಗಳೇನು? – ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?‌

  • ಮಂಗಳೂರು | ಕುಡುಪುವಿನಲ್ಲಿ ಅಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ವಜಾ

    ಮಂಗಳೂರು | ಕುಡುಪುವಿನಲ್ಲಿ ಅಶ್ರಫ್ ಕೊಲೆ ಪ್ರಕರಣ – 10 ಆರೋಪಿಗಳ ಜಾಮೀನು ಅರ್ಜಿ ವಜಾ

    ಬೆಂಗಳೂರು: ಮಂಗಳೂರಿನ (Mangaluru) ಕುಡುಪುವಿನಲ್ಲಿ ಕೇರಳದ ಆಶ್ರಫ್ ಕೊಲೆ ಪ್ರಕರಣ (Kudupu Ashraf Murder Case) ಸಂಬಂಧ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ (High Court) ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

    ಕುಡುಪುವಿನ ಮೈದಾನದಲ್ಲಿ 2025ರ ಏಪ್ರಿಲ್ 27ರಂದು ಅಶ್ರಫ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಪೈಕಿ ಪ್ರಕರಣದ ಆರೋಪಿಗಳಾದ ಅನಿಲ್ ಕುಮಾರ್, ಸಾಯಿದೀಪ್, ಅನಿಲ್ ಕುಮಾರ್, ಯತಿರಾಜ್, ಮನೀಶ್ ಶೆಟ್ಟಿ, ಪ್ರದೀಪ್, ವಿವಿಯನ್ ಆಲ್ವರಿಸ್, ಶ್ರೀದತ್ತ, ಧನುಷ್, ಕಿಶೋರ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದನ್ನೂ ಓದಿ: ಕುಡುಪು ಕ್ರಿಕೆಟ್ ಮೈದಾನದಲ್ಲಿ ವ್ಯಕ್ತಿ ಕೊಲೆ ಕೇಸ್ – 20 ಆರೋಪಿಗಳು ಬಂಧನ

    ಪ್ರಕರಣ ಏನು?
    ಏ.27ರ ಭಾನುವಾರ ಸಂಜೆ 5:30ರ ಸುಮಾರಿಗೆ ಮಂಗಳೂರಿನ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುಮಾನಾಸ್ಪದ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿದ್ದರು. ಮೃತದೇಹದ ಮರಣೋತ್ತರ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೃತನ ಬೆನ್ನಿಗೆ ಬಲವಾದ ಹೊಡೆತ ಬಿದ್ದಿದೆ. ಗಂಭೀರ ಗಾಯಗೊಂಡ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು – ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

    ಅಪರಿಚಿತ ಮೃತದೇಹ ಅನುಮಾನಾಸ್ಪದವಾಗಿ ಸಿಕ್ಕಿದ ಹಿನ್ನಲೆಯಲ್ಲಿ ಬಿಸಿ ಬಿಸಿ ಚರ್ಚೆಗಳು ಅದಾಗಲೇ ಆರಂಭವಾಗಿತ್ತು. ಹಿಂದೂ ಯುವಕರು ಮುಸ್ಲಿಂ ಯುವಕನನ್ನು ಗುಂಪು ಹತ್ಯೆ ನಡೆಸಿದ್ದಾರೆ. ಇದೊಂದು ವ್ಯವಸ್ಥಿತ ಕೊಲೆ ಅಂತಾ ಸಿಪಿಐಎಂ, ಎಸ್‌ಡಿಪಿಐ ಪಕ್ಷಗಳು ಆರೋಪ ಮಾಡಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ನೈಜ ವಿಚಾರ ಗೊತ್ತಾಗಿದೆ. ಇದನ್ನೂ ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ, ಮಹಾರಾಷ್ಟ್ರ ಅಡ್ಡಿ: ಡಿಕೆಶಿ

    ಕೊಲೆಯಾಗಿದ್ದು ಯಾಕೆ?
    ಏ.27ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿತ್ತು. ಈ ಸಂದರ್ಭ ವಿಚಾರವೊಂದಕ್ಕೆ ಮೃತ ವ್ಯಕ್ತಿಗೆ ಅಲ್ಲಿದ್ದ ಸಚಿನ್ ಎಂಬಾತನೊಂದಿಗೆ ವಾಗ್ವಾದ ನಡೆದಿತ್ತು. ಈ ಸಂದರ್ಭ ಸಚಿನ್ ಆತನಿಗೆ ಥಳಿಸಿದ್ದು, ಬಳಿಕ ಅಲ್ಲಿದ್ದ 25ರಿಂದ 30 ಮಂದಿಯ ಗುಂಪು ಅಪರಿಚಿತ ವ್ಯಕ್ತಿಗೆ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ್ವ ತುಳಿದು ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ

    ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿ ದೀಪಕ್ ಕುಮಾರ್ ಎಂಬುವವರು 19 ಮಂದಿ ಮತ್ತು ಇತರರ ವಿರುದ್ಧ ನೀಡಿದ ದೂರಿನ ಆಧಾರದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 37/2025, ಕಲಂ: 103(2), 115(2), 189(2), 190, 191(1), 191(3), 240 ಕಾಯ್ದೆಯಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಪೊಲೀಸರು 20 ಮಂದಿಯನ್ನು ಬಂಧಿಸಿದ್ದರು. ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

  • ಯೂಟ್ಯೂಬರ್‌ ಸಮೀರ್‌ಗೆ ಜಾಮೀನು ಮಂಜೂರು

    ಯೂಟ್ಯೂಬರ್‌ ಸಮೀರ್‌ಗೆ ಜಾಮೀನು ಮಂಜೂರು

    ಮಂಗಳೂರು: ಧರ್ಮಸ್ಥಳ ದೇವಸ್ಥಾನದ (Dharmasthala Temple) ವಿರುದ್ಧ ಅಪಪ್ರಚಾರ ನಡೆಸಿದ್ದ ಯೂಟ್ಯೂಬರ್‌ ಸಮೀರ್‌ಗೆ (Sameer MD) ಮಂಗಳೂರಿನಲ್ಲಿರುವ (Mangaluru) ಜಿಲ್ಲಾ ಕೋರ್ಟ್‌ ಜಾಮೀನು (Bail) ಮಂಜೂರು ಮಾಡಿದೆ.

    ಇಂದು ಬೆಳಗ್ಗೆ ಧರ್ಮಸ್ಥಳ ಪೊಲೀಸರು ಸಮೀರ್‌ ಬಂಧನಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ನಿವಾಸಕ್ಕೆ ತೆರಳಿದ್ದರು. ಆದರೆ ಪೊಲೀಸರು ತೆರಳಿದಾಗ ಸಮೀರ್‌ ಮನೆಯಲ್ಲಿ ಇರಲಿಲ್ಲ.

    ಸಮೀರ್‌ ಬಂಧನಕ್ಕೆ ಪೊಲೀಸರು ಮುಂದಾಗುತ್ತಿದ್ದಂತೆ ಇತ್ತ ಸಮೀರ್‌ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್‌ 75 ಸಾವಿರ ರೂ. ಬಾಂಡ್‌, ಒಬ್ಬರು ಶ್ಯೂರಿಟಿ ನೀಡಬೇಕೆಂದು ಸೇರಿ ಕೆಲ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.

    ಷರತ್ತು ಏನು?
    ಮುಂದೆ ಇದೇ ರೀತಿಯ ಅಪರಾಧವನ್ನು ಮಾಡಬಾರದು ಮತ್ತು ವಿಚಾರಣೆಗೆ ತಪ್ಪಿಸಬಾರದು. ಬೆದರಿಕೆ, ಪ್ರಚೋದನೆಗಳು ಅಥವಾ ಇತರ ರೀತಿಯಲ್ಲಿ ಪ್ರಾಸಿಕ್ಯೂಷನ್ ಸಾಕ್ಷಿಗಳನ್ನು ಅವರು ಹಾಳು ಮಾಡಬಾರದು. ತನಿಖಾ ಅಧಿಕಾರಿಗೆ ತಮ್ಮನ್ನು ತಾವು ಲಭ್ಯವಾಗುವಂತೆ ಮಾಡಿಕೊಳ್ಳಬೇಕು ಮತ್ತು ಅವರ ಉಪಸ್ಥಿತಿ ಅಗತ್ಯವಿದ್ದಾಗಲೆಲ್ಲಾ ತನಿಖೆಯ ಸಮಯದಲ್ಲಿ ಸಹಕರಿಸಬೇಕು. ಉಪಸ್ಥಿತಿಯಿಂದ ವಿನಾಯಿತಿ ಪಡೆದಿರುವುದನ್ನು ಹೊರತುಪಡಿಸಿ, ವಿಚಾರಣೆಯ ಎಲ್ಲಾ ದಿನಗಳಲ್ಲಿ ಅವರು ನಿಯಮಿತವಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಷರತ್ತು ವಿಧಿಸಿದೆ.

  • ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?

    ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?

    ಬೆಂಗಳೂರು: ಅಪಹರಣಕ್ಕೆ ಸೂಚನೆ ನೀಡಿದ್ದೇನೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಾಗಿ ಹೈಕೋರ್ಟ್‌ ನೀಡಿದ ಜಾಮೀನನ್ನು ರದ್ದುಗೊಳಿಸಬಾರದು ಎಂದು ದರ್ಶನ್‌ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

    ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ದರ್ಶನ್ (Darshan) ಸೇರಿ 7 ಆರೋಪಿಗಳಿಗೆ ಹೈಕೋರ್ಟ್‌ ನೀಡಿದ ಜಾಮೀನನ್ನು (Bail) ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್​ಗೆ (Supreme Court) ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ.

    ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್‌ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ದಿಢೀರ್‌ ಭೇಟಿ

    ದರ್ಶನ್‌ ವಾದ ಏನು?
    ನಾನು ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ. ರೇಣುಕಾಸ್ವಾಮಿ ಅಪಹರಣಕ್ಕೆ ಸೂಚನೆ ನೀಡಿದ್ದೇನೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ. ನನ್ನ ಮತ್ತು ಎ3 ಆರೋಪಿಯಾಗಿರುವ ಪವನ್‌ ನಡುವೆ ಕರೆಗಳು ಅಥವಾ ವಾಟ್ಸಪ್ ಸಂದೇಶಗಳ ವಿನಿಮಯ ಆಗಿಲ್ಲ.

    ಸಾಕ್ಷಿಗಳಾದ ಕಿರಣ್, ಮಲ್ಲಿಕಾರ್ಜುನ್ ಮತ್ತು ನರೇಂದ್ರ ಸಿಂಗ್ ಅವರ ಹೇಳಿಕೆಗಳ ವಿಶ್ವಾಸಾರ್ಹತೆ ಬಗ್ಗೆ ಅನುಮಾನವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.. ಘಟನೆ ನಡೆದ 7 ದಿನಗಳ ನಂತರ ಕಿರಣ್ ಹೇಳಿಕೆ ದಾಖಲಿಸಲಾಗಿದೆ. ಸಾಕ್ಷಿಗಳಾದ ಮಲ್ಲಿಕಾರ್ಜುನ್ ಮತ್ತು ನರೇಂದ್ರ ಸಿಂಗ್‌ ನ್ಯಾಯಾಲಯದಲ್ಲಿ ದರ್ಶನ್ ಹೆಸರನ್ನು ಉಲ್ಲೇಖಿಸಿಲ್ಲ. ಇದನ್ನೂ ಓದಿ: ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ: ಸುಪ್ರೀಂಗೆ ಪವಿತ್ರಾ ಗೌಡ ಮನವಿ

    ಮೂರು ಸೆಕೆಂಡ್ ವಿಡಿಯೋ ಇದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ. ಆದರೆ ಈ ವಾದದಲ್ಲಿ ಯಾವುದೇ ಹುರುಳಿಲ್ಲ. ಮೂರು ಸೆಕೆಂಡ್ ವಿಡಿಯೋ ಅಸ್ತಿತ್ವದಲ್ಲೇ ಇಲ್ಲ. ಮೂರು ಸೆಕೆಂಡಿನ ವಿಡಿಯೋ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಆಗಿಲ್ಲ ಅಥವಾ ಹೈಕೋರ್ಟ್‌ನಲ್ಲಿ ಸಲ್ಲಿಸಿಲ್ಲ. ಮರಣದ ಸಮಯವನ್ನು ಪ್ರಾಸಿಕ್ಯೂಷನ್ ಕಥೆಗೆ ಅನುಗುಣವಾಗಿ ನಿರ್ಧರಿಸಲಾಗಿದೆ ಎಂದು ಕಾರಣಗಳನ್ನು ನೀಡಲಾಗಿದೆ.

  • ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ: ಸುಪ್ರೀಂಗೆ ಪವಿತ್ರಾ ಗೌಡ ಮನವಿ

    ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ: ಸುಪ್ರೀಂಗೆ ಪವಿತ್ರಾ ಗೌಡ ಮನವಿ

    ಬೆಂಗಳೂರು: ನನಗೆ ಮಗಳಿದ್ದಾಳೆ. ಹೈಕೋರ್ಟ್‌ (High Court) ನೀಡಿದ ಜಾಮೀನು ರದ್ದು ಮಾಡಬೇಡಿ ಎಂದು ಸುಪ್ರೀಂ ಕೋರ್ಟ್‌ಗೆ ಪವಿತ್ರಾ ಗೌಡ (Pavithra Gowda) ಮನವಿ ಮಾಡಿದ್ದಾರೆ.

    ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ದರ್ಶನ್ (Darshan) ಸೇರಿ 7 ಆರೋಪಿಗಳಿಗೆ ಹೈಕೋರ್ಟ್‌ ನೀಡಿದ ಜಾಮೀನನ್ನು (Bail) ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್​ಗೆ (Supreme Court) ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ.

    ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್‌ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಮನೆಯ ಟೆರೆಸ್ ಪೂರ್ತಿ ಸಮಂತಾ ಚಿತ್ರ ಬಿಡಿಸಿದ ಅಭಿಮಾನಿ!

     

    ಪವಿತ್ರಾ ಗೌಡ ವಾದ ಏನು?
    ನಾನು ರೇಣುಕಾಸ್ವಾಮಿಯಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ. ಘಟನೆ ನಡೆದ ದಿನ ಇತರೇ ಆರೋಪಿಗಳ ಜೊತೆ ಯಾವುದೇ ಸಂವಹನ ನಡೆಸಿಲ್ಲ. ರೇಣುಕಾಸ್ವಾಮಿಯ ಅಪಹರಣ ಮತ್ತು ಕೊಲೆಯ ಸಂಚಿನಲ್ಲಿ ಭಾಗಿಯಾಗಿದ್ದೇನೆ ಎಂದು ಸಾಬೀತುಪಡಿಸಲು ಪ್ರಾಸಿಕ್ಯೂಷನ್‌ ವಿಫಲವಾಗಿದೆ. ರೇಣುಕಾ ಸ್ವಾಮಿ ಕೊಲೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಇದನ್ನೂ ಓದಿ: ಉಪೇಂದ್ರಾಗೆ ಮಾಲಾಶ್ರೀ ಮಗಳು ಆರಾಧನಾ ಜೋಡಿ

    ರೇಣುಕಾ ಸ್ವಾಮಿಯ ಮೃತ ದೇಹದ ಮೇಲಿನ ಗಾಯಗಳು ನನ್ನಿಂದ ಆಗಿಲ್ಲ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿದೆ. ನಾನು ಒಬ್ಬಂಟಿ ಪೋಷಕಳಾಗಿದ್ದು ನನಗೆ 10ನೇ ತರಗತಿಯಲ್ಲಿ ಓದುತ್ತಿರುವ ಮಗಳನ್ನು ನೋಡಿಕೊಳ್ಳಬೇಕಿದೆ. ಅಷ್ಟೇ ಅಲ್ಲದೇ ವಯಸ್ಸಾದ ಪೋಷಕರು ಇದ್ದು, ಅವರಿಗೆ ನಾನೇ ಆಧಾರವಾಗಿದ್ದೇನೆ.

    ನನಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ, ನನ್ನ ಬಂಧನಕ್ಕೆ ಕಾರಣಗಳನ್ನು ಪೊಲೀಸರು ಲಿಖಿತವಾಗಿ ನೀಡಿಲ್ಲ. ಮಹಿಳೆಯಾಗಿರುವುದರಿಂದ ಜಾಮೀನು ರದ್ದು ಮಾಡಬಾರದು ಎಂದು ಮನವಿ ಮಾಡುತ್ತಿದ್ದೇನೆ.

  • ಜಾಮೀನಿನ ಮೇಲೆ ಹೊರಗೆ ಬಂದು ಸಂತ್ರಸ್ತೆಗೆ ಗುಂಡು ಹಾರಿಸಿದ ರೇಪ್‌ ಆರೋಪಿ

    ಜಾಮೀನಿನ ಮೇಲೆ ಹೊರಗೆ ಬಂದು ಸಂತ್ರಸ್ತೆಗೆ ಗುಂಡು ಹಾರಿಸಿದ ರೇಪ್‌ ಆರೋಪಿ

    ನವದೆಹಲಿ: ಅತ್ಯಾಚಾರ ಆರೋಪಿಯೊಬ್ಬ ಜಾಮೀನಿನ ಮೇಲೆ ಜೈಲಿಂದ ಹೊರಗೆ ಬಂದು ಸಂತ್ರಸ್ತೆಯ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.

    ಅಬುಜೈರ್ ಶಫಿ (30) ಎಂಬಾತನ ವಿರುದ್ಧ ಗುಂಡಿನ ದಾಳಿಗೊಳಗಾದ ಮಹಿಳೆ ಕಳೆದ ವರ್ಷ ನಗರದ ವಸಂತ ವಿಹಾರ್‌ ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಆತನನ್ನು ಪೊಲೀಸರು ಬಂಧಿಸಿದ್ದರು. ಇತ್ತೀಚೆಗೆ ಆತ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಳಿಕ ಸಂತ್ರಸ್ತೆಯನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ. ಆದರೆ ಮಹಿಳೆ ಆತನೊಂದಿಗೆ ಮಾತನಾಡಲು ನಿರಾಕರಿಸಿದ್ದಳು ಇದೇ ಕಾರಣಕ್ಕೆ ಆತ ಹಾಗೂ ಆತನ ಸಹಚರರು ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್‌ಗೆ ಶಿಕ್ಷೆ ಬೆನ್ನಲ್ಲೇ ಪೆನ್‌ಡ್ರೈವ್‌ ಹಂಚಿದವರಿಗೆ ಶುರುವಾಯ್ತು ನಡುಕ!

    ಗುಂಡೇಟಿನಿಂದ ಮಹಿಳೆಯ ಎದೆಗೆ ಗಾಯವಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ. ಮಹಿಳೆಯ ಹೇಳಿಕೆ ಆಧರಿಸಿ, ಅಬುಜೈರ್ ಶಫಿ ಮತ್ತು ಅವನ ಸಹಚರ ಅಮನ್ ಶುಕ್ಲಾನನ್ನು ಪೊಲೀಸರು ಬಂಧಿಸಿದ್ದಾರೆ.

    ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಪೊಲೀಸರು, ಮಹಿಳೆ ಆಟೋದಲ್ಲಿ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 109(1) (ಕೊಲೆ ಯತ್ನ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಗೆಲಸದಾಕೆ ಮೇಲೆ ಅತ್ಯಾಚಾರ ಕೇಸ್ – ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ