ಉಡುಪಿಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಮಳೆಯ ಆರ್ಭಟಕ್ಕೆ ಎಲ್ಲಾ ನದಿಗಳು ತುಂಬಿ ಹರಿಯುತ್ತಿವೆ. ಬೈಂದೂರಿನ ಸೌಪರ್ಣಿಕಾ ನದಿ, ನದಿಯ ತೊರೆ, ಕವಲುಗಳು, ತೀರದ ಪ್ರದೇಶಗಳು ಜಲಾವೃತಗೊಂಡಿದೆ.
ಪಶ್ಚಿಮಘಟ್ಟದ ತಪ್ಪಲು ಕೊಲ್ಲೂರು ಘಾಟಿ ಪ್ರದೇಶದಲ್ಲೂ ನಿರಂತರ ಮಳೆಯಿಂದಾಗಿ ಸೌಪರ್ಣಿಕಾ ನದಿ ಪಾತ್ರದ ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಪಡುಕೋಣೆ, ಮರವಂತೆ ಭಾಗದಲ್ಲಿ ನೆರೆನೀರು ಮನೆಗಳಿಗೆ ನುಗ್ಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಸದ್ಯ ಮಳೆ ಕಡಿಮೆಯಾದ ನಂತರ ಸಹಜ ಸ್ಥಿತಿಗೆ ಬಂದಿವೆ.ಇದನ್ನೂ ಓದಿ:ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಇಸ್ರೇಲ್ ತಯಾರಿ
– ರಿಷಬ್, ಪ್ರಶಾಂತ್ ನೀಲ್, ಪ್ರಮೋದ್ ಕುಟುಂಬ ಜೊತೆ ದೇವರ ದರ್ಶನ
ಉಡುಪಿ: ಕೊಲ್ಲೂರು ಮೂಕಾಂಬಿಕೆ (Kollur Mookambika Temple) ದೇವಿಯ ದರ್ಶನಕ್ಕೆ ನಟ ಜೂ.ಎನ್‌ಟಿಆರ್ (Junior NTR) ಕುಟುಂಬ ಆಗಮಿಸಿದೆ. ಕರಾವಳಿ ಜಿಲ್ಲೆ ಉಡುಪಿ (Udupi) ಎರಡನೇ ದಿನದ ಪ್ರವಾಸದಲ್ಲಿರುವ ತಾರಕ್ ರಾಮ್ ಮಧ್ಯಾಹ್ನ ಮಹಾಪೂಜೆ ಸಂದರ್ಭಗಳಲ್ಲಿ ದೇವಸ್ಥಾನಕ್ಕೆ ಆಗಮಿಸಿ ತಾಯಿ ಕೊಲ್ಲೂರಮ್ಮನ ದರ್ಶನ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರು ದೇಗುಲದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಕೆಜಿಎಫ್ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ನೀಲ್ ಕುಟುಂಬವೂ ಜೊತೆಯಾಯಿತು. ಲಾಫಿಂಗ್ ಬುದ್ಧ ನಟ ಪ್ರಮೋದ್ ಶೆಟ್ಟಿ ಸಹ ಜೊತೆಗೆ ಬಂದು ದೇವರ ದರ್ಶನ ಮಾಡಿದರು. ನಾಲ್ಕು ಕುಟುಂಬಗಳು ಕೊಲ್ಲೂರಿನಲ್ಲಿ ಜೊತೆಯಾಗಿ ಬಂದು ದರ್ಶನ ಪಡೆದು ಪ್ರಸಾದ ಸ್ವೀಕಾರ ಮಾಡಿದರು. ಇದನ್ನೂ ಓದಿ: ಚಿತ್ರರಂಗದಲ್ಲಿ ಬಾಲಯ್ಯ ಹಾಫ್ ಸೆಂಚುರಿ – ತಲೈವಾ ಗ್ರೇಟ್ ವಿಶ್!
ನಾಲ್ಕು ದಶಕದ ನಂತರ ಜೂ.ಎನ್‌ಟಿಆರ್ ತಾಯಿ ಶಾಲಿನಿ ನಂದಮೂರಿ ಕರಾವಳಿಗೆ ಬಂದಿದ್ದಾರೆ. ಪತ್ನಿ ಲಕ್ಷ್ಮಿ ಪ್ರಣತಿ, ಪ್ರಗತಿ ರಿಷಬ್, ಪ್ರಶಾಂತ್ ನೀಲ್, ಲಿಖಿತಾ ನೀಲ್ ಮೂಕಾಂಬಿಕೆಯ ದರ್ಶನ ಮಾಡಿ ಪ್ರಾಂಗಣದಲ್ಲಿರುವ ಗುಡಿಗಳಿಗೆ ಭೇಟಿ ಕೊಟ್ಟು ಪ್ರಸಾದ ಸ್ವೀಕರಿಸಿದರು. ಕೊಲ್ಲೂರು ಆಡಳಿತದಿಂದ ನಟರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಇದನ್ನೂ ಓದಿ: ಕೈದಿ ನಂಬರ್ ಆಯ್ತು.. ಈಗ ದರ್ಶನ್ ಧರಿಸಿದ್ದ ಟೀ ಶರ್ಟ್ ಟ್ರೆಂಡ್
ರಿಷಬ್ ಜೊತೆ ಗೆಳೆತನ ಓಡಾಟ ಮಾಡುತ್ತಿರೋದರಿಂದ ಕಾಂತಾರ ಫ್ರೀಕ್ವೆಲ್‌ನಲ್ಲಿ ತಾರಕ್ ನಟಿಸುತ್ತಾರಾ ಎಂಬ ಪ್ರಶ್ನೆ ಓಡಾಡುತ್ತಿದೆ. ಇದಕ್ಕೆ ಉತ್ತರಿಸಿದ ಅವರು, ರಿಷಬ್ ಶೆಟ್ಟಿ ಅವರೇ ಈ ಬಗ್ಗೆ ಪ್ಲಾನ್ ಮಾಡಬೇಕು. ಅವರು ಏನು ಪ್ಲಾನ್ ಮಾಡಿದರೂ ನಾನು ರೆಡಿ ಎಂದರು. ದೇವಸ್ಥಾನದಲ್ಲಿ ಆ ವಿಚಾರ ನಾನು ಮಾತನಾಡುವುದಿಲ್ಲ. ಪ್ರಮೋದ್ ಶೆಟ್ಟಿ ನಟನೆಯ ಲಾಫಿಂಗ್ ಬುದ್ಧ ಸಿನಿಮಾ ನೋಡುತ್ತೇನೆ. ಲಾಫಿಂಗ್ ಬುದ್ಧ ಯಶಸ್ಸಿಗೆ ಪ್ರಮೋದ್ ಶೆಟ್ಟಿಗೆ ರಿಷಬ್ ಅಭಿನಂದಿಸಿದರು. ಇದನ್ನೂ ಓದಿ: ನಾನು ಪವರ್ ಗ್ರೂಪ್‌ನಲ್ಲಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ – ಹೇಮಾ ಕಮಿಷನ್ ವರದಿಗೆ ಮೋಹನ್‌ಲಾಲ್ ರಿಯಾಕ್ಷನ್
ಉಡುಪಿ: ನಮಗೆ ಫ್ರೀ ಬಸ್ ಬೇಡ, ಹೆಚ್ಚುವರಿ ಬಸ್ಸುಗಳನ್ನು ಹಳ್ಳಿಯಲ್ಲಿ ಓಡಿಸಿ ಸಹಾಯ ಮಾಡಿ ಎಂದು ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ (Student Protest) ಮಾಡಿದ ಘಟನೆ ಉಡುಪಿ (Udupi) ಜಿಲ್ಲೆಯಲ್ಲಿ ನಡೆದಿದೆ.
ಸರಿಯಾದ ಸಮಯಕ್ಕೆ ಓಡುವ ಹೆಚ್ಚುವರಿ ಬಸ್ಸುಗಳನ್ನು ಕೊಡಿ. ನಾವು ಪಾಸ್ ಮಾಡಿಸುತ್ತೇವೆ. ಹಣಕೊಟ್ಟು ಪ್ರಯಾಣ ಮಾಡುತ್ತೇವೆ ಎಂದು ಏರು ಧ್ವನಿಯಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನ ವಿದ್ಯಾರ್ಥಿನಿ ಕೆಎಸ್‌ಆರ್‌ಟಿಸಿ ಅಧಿಕಾರಿ (KSRTC Officer) ಮುಂದೆ ಸಮಸ್ಯೆ ತೋಡಿಕೊಂಡಿದ್ದಾಳೆ. ಎಬಿವಿಪಿ (ABVP) ನೇತೃತ್ವದಲ್ಲಿ ಕುಂದಾಪುರದಲ್ಲಿ (Kundapura) ಪ್ರತಿಭಟನೆ ನಡೆದ ಸಂದರ್ಭ ತಮಗಾಗುವ ಬಸ್ ಸಮಸ್ಯೆಗಳ ವಿರುದ್ಧ ಸರ್ಕಾರದ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿದರು. ಉಚಿತ ಬಸ್ಸಿನಿಂದಾಗಿ ವಿದ್ಯಾರ್ಥಿಗಳು ಅಲೆದಾಡುವಂತಾಗಿದೆ. ಬೆಳಗ್ಗೆ, ಸಂಜೆ ಬಸ್ಸಿನಲ್ಲಿ ಸೀಟ್ ಸಿಗುವುದಿಲ್ಲ. ಸರಿಯಾದ ಸಮಯಕ್ಕೆ ಮನೆ ತಲುಪುವುದು ಕಷ್ಟವಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚುವರಿ ಬಸ್ಸುಗಳನ್ನು ಓಡಿಸಿ ಸಹಾಯ ಮಾಡಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ
ಈ ಕುರಿತು ವಿದ್ಯಾರ್ಥಿನಿಯೊಬ್ಬಳು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ವೀಡಿಯೋ ವೈರಲ್ ಆಗಿದೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರ ಕೊಡಿ. ಅವರ ಸಮಸ್ಯೆಯನ್ನು ಕೇಳಿ, ಅದಕ್ಕೆ ಏನು ಪರಿಹಾರ ಕೊಡುತ್ತೀರಿ ಕೊಡಿ. ವಿದ್ಯಾರ್ಥಿಗಳಿಗೆ ಸಮಸ್ಯೆಯಾದರೆ ಅವರೊಂದಿಗೆ ಶಾಸಕನಾಗಿ ನಾನು ಕೂಡ ಮಕ್ಕಳೊಂದಿಗೆ ಪ್ರತಿಭಟನೆಯಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಎಚ್ಚರಿಸಿದರು. ಇದನ್ನೂ ಓದಿ: ಮೋದಿ 3.0 ಯುಗಾರಂಭಕ್ಕೆ ಕ್ಷಣಗಣನೆ – ರಾಷ್ಟ್ರಪತಿ ಭವನಕ್ಕೆ ಮೂರು ಹಂತದ ಭದ್ರತೆ!
ಒಂದು ವಾರದ ಒಳಗೆ ಸಮಸ್ಯೆ ಬಗೆಹರಿಸದೆ ಇದ್ದರೆ ರಸ್ತೆ ತಡೆ ಮಾಡಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಸಿದರು. ವಿದ್ಯಾರ್ಥಿಗಳ ಮನವಿಗೆ ಗೌರವಿಸಿ ಮೇಲಧಿಕಾರಿಗಳಿಗೆ ತಾಲೂಕಿನ ಸಮಸ್ಯೆಯನ್ನು ತಲುಪಿಸಿ ಎಂದು ಸೂಚಿಸಿದರು. ಇದನ್ನೂ ಓದಿ: ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಖರ್ಗೆ
ಉಡುಪಿ: ನನ್ನ ಮನಸ್ಸಿಗೆ ಆಗಿರುವ ನೋವು, ಆಘಾತ ಇನ್ನೂ ಕಡಿಮೆಯಾಗಿಲ್ಲ. ನಾನು ಈ ಕ್ಷಣದವರೆಗೆ ತಟಸ್ಥವಾಗಿದ್ದೇನೆ. ನಾಡಿದ್ದು ಹೋಗಿ ಬಿಜೆಪಿಗೆ (BJP) ಮತ ಹಾಕುತ್ತೇನೆ ಎಂದು ಉಡುಪಿ ಜಿಲ್ಲೆಯ ಬೈಂದೂರು (Baindur) ಶಾಸಕ ಸುಕುಮಾರ ಶೆಟ್ಟಿ (Sukumar Shetty) ತಿಳಿಸಿದರು.
ಟಿಕೆಟ್ ತಪ್ಪಿದ ಶಾಸಕರು ಒಂದೋ ಪಕ್ಷಾಂತರ ಮಾಡಿದ್ದಾರೆ. ಇಲ್ಲ ಪಕ್ಷದ ನಿಯಮವನ್ನು ಒಪ್ಪಿ ಅಭ್ಯರ್ಥಿಗಳ ಜೊತೆ ಗೆಲುವಿಗಾಗಿ ಹೋರಾಟವನ್ನು ನಡೆಸುತ್ತಿದ್ದಾರೆ. ಕರಾವಳಿ ಜಿಲ್ಲೆಯ ಪೈಕಿ ಸುಕುಮಾರ ಶೆಟ್ಟಿ ಮಾತ್ರ ವಿಭಿನ್ನ ನಿಲುವನ್ನ ತಳೆದಿದ್ದಾರೆ. ಬೇಸರವನ್ನು ಇನ್ನು ಉಳಿಸಿಕೊಂಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಸುಕುಮಾರಶೆಟ್ಟಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡುವ ಸಣ್ಣ ಮನುಷ್ಯ ನಾನಲ್ಲ. ಎದುರಾಳಿ ಪಕ್ಷದ ಜೊತೆ ಕೈಜೋಡಿಸಿದ್ದೇನೆ ಎಂದು ಆರೋಪಿಸುವವರು ಕೀಳು ಮನಸ್ಸಿನವರು. ಪಕ್ಷಾಂತರ ಪಕ್ಷವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ಹೇಳಿದರು.
ಹಿರಿಯ ನಾಯಕರ ಮೇಲೆ ಗೌರವ ಇದೆ. ಆದರೆ ಪಕ್ಷಕ್ಕೆ ನನ್ನ ಅಭ್ಯರ್ಥಿತನ ಬೇಡವಾಗಿದೆ. ಹಾಗಾಗಿ ನಾನು ಯಾವುದೇ ಪ್ರಚಾರ ಸಭೆ, ರಾಲಿಗಳಲ್ಲಿ ಭಾಗಿ ಆಗಿಲ್ಲ ಯಾವ ಕಾರಣಕ್ಕೆ ನನಗೆ ಟಿಕೆಟ್ ಕೊಡಲಿಲ್ಲ ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಮೋದಿ, ಶಾ, ನಡ್ಡಾ, ಸಿಎಂ ಬಂದ್ರು ಸುಕುಮಾರ್ ಶೆಟ್ಟಿ ಬಂದಿಲ್ಲ: ಕರಾವಳಿ ಜಿಲ್ಲೆ ಉಡುಪಿಯ (Udupi) ಚುನಾವಣಾ (Election) ಕದನ ಕುತೂಹಲ ಕೆರಳಿಸಿದೆ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಪೈಕಿ 4 ಕಡೆ ಈ ಬಾರಿ ಹೊಸ ಅಭ್ಯರ್ಥಿಗಳು ನಾಲ್ವರು ಹಾಲಿ ಶಾಸಕರ ಪೈಕಿ ಬೈಂದೂರು ಶಾಸಕರು ತಟಸ್ಥವಾಗಿದ್ದಾರೆ. ಟಿಕೆಟ್ ತಪ್ಪಿದ ಬೇಸರದಿಂದ ಸುಕುಮಾರಶೆಟ್ಟಿ ಇನ್ನೂ ಹೊರ ಬಂದಿಲ್ಲ. ಚುನಾವಣಾ ಪ್ರಚಾರ ನಡೆಸುತ್ತಿಲ್ಲ ಯಾವುದೇ ಸಭೆಗೂ ಶಾಸಕ ಸುಕುಮಾರ ಶೆಟ್ಟಿ ಬರುತ್ತಿಲ್ಲ.
ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ ಜಿಲ್ಲೆಯ 13 ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ಎಲ್ಲಾ ಶಾಸಕರು, ಅಭ್ಯರ್ಥಿಗಳು ಭಾಗವಹಿಸಬೇಕಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಸುಕುಮಾರಶೆಟ್ಟಿ ಗೈರಾಗಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ವತಃ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರಕ್ಕೆ ಬಂದು ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆ ಪರ ಮತಯಾಚನೆ ಮಾಡಿದ್ದಾರೆ. ಈ ರೋಡ್ ಶೋದಲ್ಲೂ ಶಾಸಕ ಸುಕುಮಾರ ಶೆಟ್ಟಿ ಭಾಗಿಯಾಗಿಲ್ಲ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ ಮೆಗಾ ರೋಡ್ ಶೋ – ಯಾವ ಸಮಯದಲ್ಲಿ ಎಲ್ಲಿ? ಯಾವ ರಸ್ತೆಯಲ್ಲಿ ಸಂಚಾರ?
ಸುಮಾರು 20,000 ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ವೇಳೆ ಜಮಾಯಿಸಿದ್ದರು. ಈ ಕಾರ್ಯಕ್ರಮದಿಂದಲೂ ಶಾಸಕ ಶೆಟ್ಟಿ ದೂರ ಉಳಿದಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಬಂದಾಗಲೂ ಕರೆ ಮಾಡಿದ್ದರು. ಅದಕ್ಕೂ ಸುಕುಮಾರ್ ಶೆಟ್ಟಿ ಪೂರಕವಾಗಿ ಸ್ಪಂದನೆ ಮಾಡಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ಕೊಡುವ ಸಂದರ್ಭವು ಸುಕುಮಾರಶೆಟ್ಟಿ ಭೇಟಿಯಾಗದೆ ಸಬೂಬು ಹೇಳಿದ್ದರು.
ರಾಜ್ಯದ ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ 4 ಬಾರಿ ಫೋನ್ ಕರೆ ಮಾಡಿ ಚುನಾವಣಾ ಓಡಾಟದಲ್ಲಿ ಭಾಗಿ ಆಗುವಂತೆ ಅಭ್ಯರ್ಥಿ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರು. ಇದಕ್ಕೂ ಸುಕುಮಾರ ಶೆಟ್ಟಿ ಒಪ್ಪಿಲ್ಲ. ಬಿ.ವೈ ರಾಘವೇಂದ್ರ ರಾಜ್ಯದ ಸಚಿವರು ಆರ್ ಎಸ್ ಎಸ್, ಸಂಘ ಪರಿವಾರದ ಮುಖಂಡರು ಮನವೊಲಿಸಿದರು ಸುಕುಮಾರಶೆಟ್ಟಿ ಕರಗಿಲ್ಲ. ಇದನ್ನೂ ಓದಿ: ರೋಡ್ ಶೋನಲ್ಲಿ ಸರ್ಕಾರದ ಸಾಧನೆ, ಬೆಂಗಳೂರು ಕೊಡುಗೆಗಳ ಉಲ್ಲೇಖದ ಫ್ಲೆಕ್ಸ್ ಅಳವಡಿಕೆ
ಉಡುಪಿ: ಬಿಜೆಪಿಯಲ್ಲಿ ಒಬ್ಬ ಕಾರ್ಯಕರ್ತನಿಗೂ ಅವಕಾಶ ಇದೆ ಎಂಬ ದೊಡ್ಡ ಸಂದೇಶವನ್ನು ವರಿಷ್ಠರು ಕರ್ನಾಟಕಕ್ಕೆ (Karnataka) ರವಾನೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಐದು ಹಾಲಿ ಶಾಸಕರ ಬದಲು ನಾಲ್ಕು ಹೊಸ ಮುಖಕ್ಕೆ ಅವಕಾಶ ಕೊಡುವ ಮೂಲಕ ಇದು ಕಾರ್ಯಕರ್ತರ ಪಕ್ಷ ಎಂದು ಕಾಂಗ್ರೆಸ್‌ಗೂ (Congress) ಟಾಂಗ್ ನೀಡಿದೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸುಕುಮಾರ ಶೆಟ್ಟಿಗೆ ಜಾಗಕ್ಕೆ 39 ವರ್ಷದ ಗುರುರಾಜ್ ಶೆಟ್ಟಿ ಗಂಟಿಹೊಳೆ (Gururaj Shetty Gantihole) ಅವರಿಗೆ ಬಿಜೆಪಿ (BJP) ಮಣೆ ಹಾಕಿದೆ. ಪಕ್ಷದ ಪ್ರಮುಖರು, ಸಂಘ ಪರಿವಾರದ ಹಿರಿಯರು, ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿಯಾಗಿರುವ ಗುರುರಾಜ್ ಗಂಟಿಹೊಳೆ ಹೆಸರು ಈಗ ಬೈಂದೂರು ಕ್ಷೇತ್ರದಲ್ಲಿ ಸಂಚಲನ ಮೂಡಿಸಿದೆ.
ಗುರುರಾಜ್ ಅವರ ಹುಟ್ಟೂರು ಬೈಂದೂರು (Baindur) ತಾಲೂಕು ಉಪ್ಪುಂದದ ಗಂಟಿಹೊಳೆ. ಗುರುರಾಜ್ ಶೆಟ್ಟಿ ಆರಂಭಿಕ ಶಿಕ್ಷಣವನ್ನು ಪೂರೈಸುವಾಗಲೇ ರಾಷ್ಟ್ರೀಯ ಸ್ವಯಂ ಸೇವಕ (RSS) ಸಂಘದ ಉಪ್ಪುಂದ ನಿತ್ಯ ಶಾಖೆಗೆ ಹೋಗುತ್ತಿದ್ದರು. ನಂತರ ಉನ್ನತ ಶಿಕ್ಷಣಕ್ಕಾಗಿ ಮಂಗಳೂರಿನತ್ತ ಮುಖ ಮಾಡಿ ಸಂಘನಿಕೇತನದಲ್ಲಿ ಬೆಳೆದರು. ಪತ್ರಿಕೋದ್ಯಮದಲ್ಲಿ ಎಂ.ಎ ಪೂರೈಸಿದ ನಂತರ 10 ವರ್ಷಗಳ ಕಾಲ ಆರ್‌ಎಸ್‌ಎಸ್‌ನ ಪೂರ್ಣಾವಧಿ ಕಾರ್ಯಕರ್ತರಾಗಿ ಓಡಾಡಿದರು. ಇದನ್ನೂ ಓದಿ: ಗುರುವಿನ ಋಣ ತೀರಿಸಲು ರಾಜಕೀಯ ನಿವೃತ್ತಿ ಘೋಷಿಸಿದ ಹಾಲಾಡಿ ಶ್ರೀನಿವಾಸ ಶೆಟ್ಟಿ
ಈ ದೇಶಕ್ಕಾಗಿ ಕೆಟ್ಟದನ್ನು ನಾನೇ ಮೆಟ್ಟಿ ನಿಲ್ಲುತ್ತೇನೆ ಎಂದು ಶಪಥ ಮಾಡಿದ ಗುರುರಾಜ್ ಶೆಟ್ಟಿ ಗಂಟಿಹೊಳೆ ಕಾಲಿಗೆ ಚಪ್ಪಲಿ ಹಾಕುವುದಿಲ್ಲ. ಸಂಘಟನೆ ಒಳಗೆ ಬರಿಗಾಲ ಸಂತ ಎಂದೇ ಫೇಮಸ್ ಆಗಿದ್ದಾರೆ. ಪೂರ್ಣಾವಧಿ ಕಾರ್ಯಕರ್ತನಾಗಿ ಮಡಿಕೇರಿಯ ಉಳಿದುಕೊಂಡಿದ್ದ ಇವರು ನಂತರ ಬೆಳ್ತಂಗಡಿಗೆ ಬಂದು, ಸಂಘದ ಕಾರ್ಯಕ್ಕೆ ಮುಡಿಪಾಗಿಟ್ಟರು. ಸಂಘಟನೆಯಲ್ಲಿ ತಾಲೂಕು, ಜಿಲ್ಲಾ ಜವಾಬ್ದಾರಿಗಳು ನಿಭಾಯಿಸಿದ್ದಾರೆ. ನಾಗಪುರದಲ್ಲಿ ಒಟಿಸಿ ಕ್ಯಾಂಪ್ ಮುಗಿಸಿ ಶಿಕ್ಷಣ ಪೂರೈಸಿ ಬಂದ ಗುರುರಾಜ್ ಗೆ 3 ವರ್ಷ ಉಡುಪಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಂತರ 3 ವರ್ಷ ಬಿಜೆಪಿ ಉಪಾಧ್ಯಕ್ಷ ಹುದ್ದೆ ಸಿಕ್ಕಿತ್ತು.
ಈ ಮಧ್ಯೆ ಉದ್ಯಮದತ್ತ ಹೊರಳಿ ನೂರಾರು ಜನರಿಗೆ ಉದ್ಯೋಗ ಕೊಟ್ಟರು. ಉದ್ಯಮ ವಿಸ್ತರಿಸಲು ಪ್ರಯತ್ನಿಸಿ ಸೋತರು. ಮಣಿಪುರ (Manipura) ಭಾಗದ ಮಕ್ಕಳಿಗೆ ವಿದ್ಯಾಭ್ಯಾಸದ ಕೊರತೆಯಿತ್ತು. ಆ ಮಕ್ಕಳಿಗೆ ಹಣವಿಲ್ಲ ಎಂಬ ಕಾರಣಕ್ಕೆ ವಿದ್ಯಾಭ್ಯಾಸ ನಿಲ್ಲಿಸಬೇಡಿ ಎಂದು ಭರವಸೆ ನೀಡಿದರು. ಆ ಮಕ್ಕಳನ್ನು ಬೈಂದೂರಿಗೆ ಕರೆತಂದು ಮಣಿಪುರ ನೂರಾರು ಮಕ್ಕಳಿಗೆ ವಿದ್ಯಾಭ್ಯಾಸ ನೀಡಿದ್ದಾರೆ.
ಅಖಿಲ ಭಾರತ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯನಾಗಿ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ, ತೆಲಂಗಾಣ, ರಾಜ್ಯಗಳ ಜವಾಬ್ದಾರಿ ವಹಿಸಿಕೊಂಡಿದ್ದರು. ಎರಡು ಪುಸ್ತಕ ಬರೆದಿದ್ದಾರೆ. ನೂರಾರು ಆರ್‌ಎಸ್‌ಎಸ್ (RSS) ಶಾಖೆ ತೆರೆದು ಸಂಘಟನೆ ಮಾಡಿದ್ದಾರೆ. 2013 ಮತ್ತು 2018ರಲ್ಲಿಯೇ ಶಾಸಕರಾಗುವ ಆಯ್ಕೆಗಳು ಇತ್ತು. ಪಕ್ಷ ಸಂಘಟನೆಯೇ ಎಲ್ಲಕ್ಕಿಂತ ಮಿಗಿಲು ಎಂಬ ಕಾರಣಕ್ಕೆ ಬೈಂದೂರಿನ ಪ್ರತಿ ಹಳ್ಳಿ ಹಳ್ಳಿಗೂ ಸಂಚರಿಸಿ ಕಾರ್ಯಕರ್ತರನ್ನು ಗುರುತಿಸಿ, ಪ್ರಮುಖರನ್ನು ಹುರಿದುಂಬಿಸಿ ಬಿಜೆಪಿಯನ್ನು ಚಿಗುರಿಸಿದ್ದಾರೆ ಎಂದು ಗುರುರಾಜ್ ಶೆಟ್ಟಿ ಗಂಟಿಹೊಳೆ ಬಗ್ಗೆ ಆಪ್ತ ಪ್ರವೀಣ್ ಮಾಹಿತಿ ನೀಡಿದರು.
ಉಡುಪಿ: ಚಲಿಸುತ್ತಿದ್ದ ಬಸ್ಸಿನಲ್ಲಿದ್ದ ದಂಪತಿ ಪ್ರಯಾಣದ ನಡುವೆ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿರುವ ಘಟನೆ ಉಡುಪಿಯ ಬೈಂದೂರಲ್ಲಿ ನಡೆದಿದೆ. ಅಸ್ವಸ್ಥರನ್ನು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಸೇರಿಸಿ ನಂತರ ಉಡುಪಿ ಜಿಲ್ಲಾ ಸರ್ಕಾರಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡು ಮೂಲದ, ಉಡುಪಿಯ ಅಂಲಪಾಡಿ ಸಮೀಪ ನೆಲೆಸಿರುವ ರಾಜಕುಮಾರ್ ಮತ್ತು ಸಂಗೀತಾ ವಿಷ ಕುಡಿದ ದಂಪತಿಗಳು. ರಾಜಕುಮಾರ್ ತಮಿಳಿನಲ್ಲಿ ಡೆತ್ ನೋಟ್ ಬರೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ರಾಜಕುಮಾರ್ ಹಾಗೂ ಸಂಗೀತ ಮಗುವಿನ ಜೊತೆ ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದರು. ದೇವರ ದರ್ಶನ ಪಡೆದು, ಅನ್ನ ಪ್ರಸಾದ ಸ್ವೀಕರಿಸಿದ ನಂತರ ಕೊಲ್ಲೂರು ಮಂಗಳೂರು ಬಸ್ ಏರಿದ್ದರು. ಬಸ್ ಹತ್ತಿದ ನಂತರವೋ ಬಸ್ ಏರುವ ಮುನ್ನ ವಿಷ ಸೇವಿಸಿದ್ದರೋ ಸರಿಯಾಗಿ ಮಾಹಿತಿಯಿಲ್ಲ. ಪತಿ, ಪತ್ನಿ ಸೀಟಿನಲ್ಲಿ ನರಳಾಡುತ್ತಿರುವುದನ್ನು ಮೊದಲು ನಿರ್ವಾಹಕ ಗಮನಿಸಿದ್ದರು.
ನಿರ್ವಾಹಕ ತಕ್ಷಣ ಚಾಲಕ ಇಕ್ಬಾಲ್ ಗಮನಕ್ಕೆ ತಂದಿದ್ದಾರೆ. ಚಾಲಕ ಬಸ್ಸನ್ನು ನಿಲ್ಲಿಸದೆ ನೇರ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತಂದಿದ್ದಾರೆ. ತಕ್ಷಣ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.
ಬಸ್ ಚಾಲಕ ಇಕ್ಬಾಲ್ ಮತ್ತು ನಿರ್ವಾಹಕ ಸತೀಶ್ ಸಮಯಪ್ರಜ್ಞೆಗೆ ವೈದ್ಯರು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಒಂದೂವರೆ ವರ್ಷದ ಮಗುವಿಗೂ ವಿಷ ಕುಡಿಸಿರುವ ಸಾಧ್ಯತೆಯಿದ್ದು, ಮಗುವನ್ನು ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿ: ಬೈಂದೂರು ತಾಲೂಕು ಜೋಡಮಕ್ಕಿ ಬಾಬು ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 13 ಮಂದಿ ಮೇಲೆ ಎಫ್‍ಐಆರ್ ದಾಖಲಾಗಿದೆ. ಮಂಗಳವಾರ ಸಂಜೆ ಬೈಂದೂರು ತಾಲೂಕಿನ ನೇರಳಕಟ್ಟೆ ಎಂಬಲ್ಲಿನ ರಸ್ತೆ ಬದಿಯಲ್ಲಿ ಬಾಬು ಶೆಟ್ಟಿ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ ಕಳೆದುಕೊಂಡಿದ್ದರು. ಸಂಶಯವಿರುವ 13 ಮತ್ತು ಇತರೆ ಮಂದಿಯ ಮೇಲೆ ಎಫ್‍ಐಆರ್ ದಾಖಲಾಗಿದೆ.
ಬಾಬು ಶೆಟ್ಟಿ ಅವರನ್ನು ಮಾತುಕತೆಗೆ ಕರೆಸಿ ನಿರ್ಜನ ಪ್ರದೇಶದಲ್ಲಿ ದುಷ್ಕರ್ಮಿಗಳು ಇರಿದು, ಕೊಚ್ಚಿ ಕೊಲೆ ಮಾಡಿದ್ದರು ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಕಂಡ್ಲೂರು ಪೊಲೀಸರು ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದರು. ತನಿಖೆ ಆರಂಭಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಮೂಲಗಳಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಕೊಲೆಯಾದ ಬಾಬು ಶೆಟ್ಟಿ ಅಕ್ಕ ಮತ್ತು ಬಾವನ ಜಮೀನಿನ ಕುಮ್ಕಿಗೆ (ಸ್ವಂತ ಜಮೀನಿಗೆ ತಾಗಿಕೊಂಡಿರುವ ಸರ್ಕಾರಿ ಜಾಗ) ಸಂಬಂಧಿಸಿದಂತೆ ವ್ಯಾಜ್ಯವಿತ್ತು. ಮಂಗಳವಾರ ಈ ವಿಚಾರದಲ್ಲೇ ಜಗಳವಾಗಿ, ಸೇರಿದ್ದ ಗುಂಪು ಬಾಬು ಶೆಟ್ಟಿಗೆ ಹಲ್ಲೆ ಮಾಡಿ ಕೊಂದಿರುವ ಸಾಧ್ಯತೆಯಿದೆ. ಹೀಗಂತ ಆರೋಪಿಸಿ ಬಾಬು ಶೆಟ್ಟಿಯ ಸಹೋದರ ಪ್ರಕಾಶ್ ಶೆಟ್ಟಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು 13 ಮಂದಿಯನ್ನು ಆರೋಪಿಗಳೆಂದು ಕೇಸು ದಾಖಲಿಸಿಕೊಂಡಿದ್ದಾರೆ.
ಸ್ಥಳೀಯ ರಾಜೇಶ್ ಮಾತನಾಡಿ, ಈ ಘಟನೆಯ ಬಳಿಕ ಭಯದ ವಾತಾವರಣ ಶುರುವಾಗಿದೆ. ಇಲ್ಲಿ ರಸ್ತೆಯಿಲ್ಲ, ದಾರಿದೀಪ ಇಲ್ಲ. ಅಲ್ಲಲ್ಲಿ ಮನೆಗಳು ಇರುವುದರಿಂದ ಓಡಾಟ ಕೂಡ ಕಷ್ಟಕರ ಪರಿಸ್ಥಿತಿಯಾಗಿದೆ. ಪೊಲೀಸರು, ಜನಪ್ರತಿನಿಧಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದರು.
ಘಟನಾ ಸ್ಥಳಕ್ಕೆ ಶಾಸಕ ಸುಕುಮಾರ ಶೆಟ್ಟಿ ಬೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಎಎಸ್‍ಪಿ ಹರಿರಾಮ್ ರಫ್ ಆಂಡ್ ಟಫ್ ಆಫೀಸರ್. ಅವರು ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಗ್ರಾಮಸ್ಥರು ಪೊಲೀಸರಿಗೆ ಪೂರ್ಣ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.
ಸಂಬಂಧಿ ಭಾಸ್ಕರ್ ಮಾತನಾಡಿ, ಬಾಬು ಶೆಟ್ಟಿ ಶ್ರಮ ಜೀವಿ. ಕೃಷಿ ಚಟುವಟಿಕೆಗಳ ಜೊತೆ ಟೆಂಪೋವನ್ನಿಟ್ಟುಕೊಂಡು ಬಾಡಿಗೆ ಮಾಡುತ್ತಿದ್ದರು. ಇನ್ನಿತರ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. 15 ಸೆಂಟ್ಸ್ ಜಮೀನಿನ ವಿಚಾರದ ತಕರಾರು ಪರಿಹರಿಸಲು ಹೋಗಿ ಜಗಳವಾಗಿದೆ. ಯಾರು ಹೀಗೆ ಮಾಡಿದ್ದಾರೆ ಎಂಬೂದು ಗೊತ್ತಾಗುತ್ತಿಲ್ಲ. ಪೊಲೀಸರಿಗೆ ಸಣ್ಣಪುಟ್ಟ ಮಾಹಿತಿಗಳನ್ನು ನೀಡಿದ್ದೇವೆ ಎಂದು ಹೇಳಿದರು.