Tag: Bairagi Cinema

  • ಬೈರಾಗಿಗಾಗಿ ಹಾಡಿದ ಶಿವಣ್ಣ ಮತ್ತು ಶರಣ್  : ಸಿಂಗಲ್ ಶಾಟ್ ಹಾಡಿಗೆ ಸಖತ್ ಸ್ಟೆಪ್ಸ್

    ಬೈರಾಗಿಗಾಗಿ ಹಾಡಿದ ಶಿವಣ್ಣ ಮತ್ತು ಶರಣ್ : ಸಿಂಗಲ್ ಶಾಟ್ ಹಾಡಿಗೆ ಸಖತ್ ಸ್ಟೆಪ್ಸ್

    ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ಬೈರಾಗಿ  ಚಿತ್ರದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಹಾಡು ಶಿವರಾಜ್‌ಕುಮಾರ್ ಮತ್ತು ಶರಣ್ ಕಂಠಸಿರಿಯಲ್ಲಿ ಮೂಡಿಬಂದಿರೋದು ವಿಶೇಷ. ‘ವಜ್ರಕಾಯ’ ಬಳಿಕ ಶಿವಣ್ಣನ ಸಿನಿಮಾಕ್ಕೆ ಶರಣ್ ದನಿಗೂಡಿಸಿದ್ದಾರೆ. ಪ್ರಮೋದ್ ಮರವಂತೆ ಸಾಹಿತ್ಯವಿರುವ ‘ಸಂಡೆ ಮಂಡೆ ಎವೆರಿಡೇ, ಲವ್ವಿಗಿಲ್ಲ ಹಾಲಿಡೇ…’ ಎಂಬ ಹಾಡು ಸಿಂಗಲ್ ಶಾಟ್’ನಲ್ಲಿ ಶೂಟ್ ಮಾಡಿರುವುದು ಮತ್ತೊಂದು ವಿಶೇಷ. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು

    ‘ರಿದಮ್ ಆಫ್ ಶಿವಪ್ಪ’ ಕಾನ್ಸೆಪ್ಟ್‌’ನಡಿ ಮೂಡಿಬಂದಿರುವ ಈ ಹಾಡಿಗೆ ಇಡೀ ‘ಬೈರಾಗಿ’ ತಂಡ ಹೆಜ್ಜೆ ಹಾಕಿದ್ದು, ದೇವನಹಳ್ಳಿ ಬಳಿಯಿರುವ ನೂತನ ಮಾಲ್’ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮುರಳಿ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ‘ನಖರನಖ’ ಹಾಡಿಗೆ ಆ್ಯಂಥೋನಿ ದಾಸ್ ದನಿಗೂಡಿಸಿದ್ದರು. ಇದೀಗ ‘ಸಂಡೆ-ಮಂಡೆ’ ಹಾಡು ಶಿವಣ್ಣ-ಶರಣ್ ದನಿಯಲ್ಲಿ ಮೂಡಿಬಂದಿದ್ದು ಜೆ.ಪಿ ಮ್ಯೂಸಿಕ್ ಯೂಟ್ಯೂಬ್ ಚಾನಲ್’ನಲ್ಲಿ ರಿಲೀಸ್ ಆಗಿದೆ. ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಹಿಟ್ಸ್ ದಾಖಲಾಗಿ ಟ್ರೆಂಡಿಂಗ್’ನಲ್ಲಿದೆ. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ

    ವಿಜಯ್ ಮಿಲ್ಟನ್‌ ನಿರ್ದೇಶನವಿರುವ ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್, ಅನು ಪ್ರಭಾಕರ್, ಅಂಜಲಿ, ಯಶ ಶಿವಕುಮಾರ್, ಚಿಕ್ಕಣ್ಣ ಮೊದಲಾದವರ ತಾರಾದಂಡೇ ಇದೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ‘ಬೈರಾಗಿ’ಗೆ ಬಂಡವಾಳ ಹೂಡಿದ್ದಾರೆ.

  • ಶಿವರಾಜ್ ಕುಮಾರ್ ಎದುರು ಅಖಾಡಕ್ಕೆ ಇಳಿದ ಡಾಲಿ ಧನಂಜಯ್

    ಶಿವರಾಜ್ ಕುಮಾರ್ ಎದುರು ಅಖಾಡಕ್ಕೆ ಇಳಿದ ಡಾಲಿ ಧನಂಜಯ್

    ಗರು ಸಿನಿಮಾದ ನಂತರ ಮತ್ತೆ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ಎದುರಾಗಿದ್ದಾರೆ. ವಿಜಯ್ ಮಿಲ್ಟನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಬೈರಾಗಿ ಸಿನಿಮಾದಲ್ಲಿ ಸೆಂಚ್ಯುರಿ ಸ್ಟಾರ್ ಮತ್ತು ಡಾಲಿ ಸೆಣಸಲಿದ್ದಾರೆ. ಇಂದು ಈ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಇದೊಂದು ಪಕ್ಕಾ ಮಾಸ್ ಸಿನಿಮಾ ಎನ್ನುವುದನ್ನು ಟ್ರೇಲರ್ ಖಚಿತ ಪಡಿಸುತ್ತದೆ. ಇದನ್ನೂ ಓದಿ : ಮಿಷನ್ ಇಂಪಾಸಿಬಲ್ ಚಿತ್ರದಲ್ಲಿ ರಿಷಭ್ ಶೆಟ್ಟಿ: ತಾಪ್ಸಿ ಪನ್ನು ನಾಯಕಿ

    ಶಿವರಾಜ್ ಕುಮಾರ್ ಇಲ್ಲಿ ವಿಶೇಷ ಪಾತ್ರ ನಿರ್ವಹಿಸಿದ್ದಾರೆ. ಹುಲಿಬಣ್ಣದ ಮುಖಹೊತ್ತು ರೌಡಿಗಳನ್ನು ಸೆರೆ ಬಡಿಯುವಂತಹ ದೃಶ್ಯಗಳು ಟ್ರೇಲರ್ ನಲ್ಲಿ ಹೇರಳವಾಗಿವೆ. ಡಾಲಿ ಪಾತ್ರದ ಬಗ್ಗೆ ಸದ್ಯಕ್ಕೆ ಏನೂ ಹೇಳದೇ ಇದ್ದರೂ, ಅದೊಂದು ಖಳನಾಯಕನ ಕ್ಯಾರೆಕ್ಟರ್ ಎನ್ನಲಾಗುತ್ತಿದೆ.   ಇದನ್ನೂ ಓದಿ : ಹಿಂದಿ ಆಯ್ತು, ಇದೀಗ ಮರಾಠಿಯಲ್ಲೂ ಕನ್ನಡದ ದಿಯಾ

    ಬೈರಾಗಿಯ ಮತ್ತೊಂದು ವಿಶೇಷ ಅಂದರೆ, ನಾಲ್ವರು ನಾಯಕರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವರಾಜ್ ಕುಮಾರ್ ಜತೆ ಹಿರಿಯ ನಟ ಶಶಿಕುಮಾರ್, ದಿಯಾ ಸಿನಿಮಾದ ಪೃಥ್ವಿ ಅಂಬರ್ ಮತ್ತು ಡಾಲಿ ಧನಂಜಯ್. ಪೃಥ್ವಿ ಅಂಬರ್ ಮತ್ತು ಧನಂಜಯ್ ನೆಗೆಟಿವ್ ರೀತಿಯ ಪಾತ್ರ ಮಾಡಿದ್ದರೆ, ಶಶಿಕುಮಾರ್ ಅವರು ಪೊಲೀಸ್ ಅಧಿಕಾರಿಯ ಪಾತ್ರ. ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    ಟಗರು ಸಿನಿಮಾದ ಹಿಟ್ ನಂತರ ಡಾಲಿ ಮತ್ತು ಶಿವರಾಜ್ ಕುಮಾರ್ ಒಂದಾಗಿದ್ದಾರೆ. ಅಲ್ಲದೇ, ಇದೊಂದು ಮಾಸ್ ಸಿನಿಮಾವಾಗಿದ್ದರಿಂದ ಪಾತ್ರಗಳು ಕೂಡ ಅಷ್ಟೇ ಪವರ್ ಫುಲ್ ಆಗಿರುತ್ತವೆ. ಈ ಸಿನಿಮಾದಲ್ಲಿ ಇಬ್ಬರ ಕಾಳಗ ಹೇಗಿರಲಿದೆ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು.