Tag: bajarangdal

  • ಡಿ.17-26 ರವರೆಗೆ ದತ್ತಜಯಂತಿ- ಆಗಮಿಸಲಿದ್ದಾರೆ 20 ಸಾವಿರ ಭಕ್ತರು

    ಡಿ.17-26 ರವರೆಗೆ ದತ್ತಜಯಂತಿ- ಆಗಮಿಸಲಿದ್ದಾರೆ 20 ಸಾವಿರ ಭಕ್ತರು

    ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋನ ಪರ್ವತಗಳ ಸಾಲು ಮುಳ್ಳಯ್ಯನಗಿರಿ (Mullayanagiri) ತಪ್ಪಲಿನ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಡಿಸೆಂಬರ್ 26 ರಂದು ದತ್ತಜಯಂತಿ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ರಂಗನಾಥ ತಿಳಿಸಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರ್ಷ ದತ್ತ ಜಯಂತಿಯನ್ನು (Datta Jayanti 2023) ನಾಡ ಉತ್ಸವನ್ನಾಗಿ ಆಚರಿಸಲಾಗುವುದು. ಡಿಸೆಂಬರ್ 17 ರಂದು ಸ್ಕಂದ ಪಂಚಮಿ ದಿನ ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲಾ ಧಾರಣೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗ್ರಹಣ ಮೋಕ್ಷದ ನಂತರ ಶುದ್ಧೀಕರಣ- ಬಹುತೇಕ ದೇಗುಲಗಳು ಓಪನ್

     

    ಜಿಲ್ಲಾದ್ಯಂತ ಡಿ. 24 ರಿಂದ 26ರವರೆಗೆ ದತ್ತಜಯಂತಿ ಉತ್ಸವ ನಡೆಯಲಿದ್ದು, ಈ ವರ್ಷ ದತ್ತಜಯಂತಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ತೀರ್ಮಾನಿಸಿದೆ. ದತ್ತಜಯಂತಿ ಉತ್ಸವ ಪ್ರಯುಕ್ತ ಡಿ.24 ರಂದು ದತ್ತಪೀಠದಲ್ಲಿ ಅನಸೂಯ ಜಯಂತಿ ನಡೆಯಲಿದೆ. ಜಯಂತಿ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ಸಾವಿರಾರು ಮಹಿಳೆಯರು ನಗರದಲ್ಲಿ ಸಂಕೀರ್ತನಾ ಯಾತ್ರೆ ನಡೆಸಲಿದ್ದಾರೆ. ನಗರದ ಬೋಳರಾಮೇಶ್ವರ ದೇವಾಲಯದಿಂದ ಮೆರವಣಿಗೆ ಹೊರಟು ಮುಖ್ಯ ರಸ್ತೆಯಲ್ಲಿ ಸಾಗಿ ಪಾಲಿಟೆಕ್ನಿಕ್ ವೃತ್ತದಿಂದ ವಾಹನಗಳಲ್ಲಿ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆಯಲಿದ್ದಾರೆ ಎಂದು ಹೇಳಿದರು.

    ಮರುದಿನ ಡಿಸೆಂಬರ್ 25ರ ಬೆಳಗ್ಗೆ ದತ್ತಪೀಠದಲ್ಲಿ ದತ್ತ ಹೋಮ, ರುದ್ರ ಹೋಮ ನಡೆಯಲಿದೆ. ಇದೇ ದಿನ ಮಧ್ಯಾಹ್ನ ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯುವುದು. ನಗರದ ಕಾಮಧೇನು ಗಣಪತಿ ದೇವಾಲಯ ಆವರಣದಿಂದ ಆರಂಭವಾಗುವ ಯಾತ್ರೆ ಮುಖ್ಯರಸ್ತೆಯಲ್ಲಿ ಸಾಗಿ, ಸಂಜೆ ಆಜಾದ್ ವೃತ್ತದಲ್ಲಿ ಧಾರ್ಮಿಕ ಸಭೆ ನಡೆಯಲಿದೆ ಎಂದರು.

    ದತ್ತಪೀಠದಲ್ಲಿ ಡಿ.26 ರಂದು ದತ್ತಜಯಂತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 20 ಸಾವಿರ ಭಕ್ತರು ಆಗಮಿಸಿ ದತ್ತಪಾದುಕೆಗಳ ದರ್ಶನ ಪಡೆಯಲಿದ್ದಾರೆ ಎಂದು ರಂಗನಾಥ ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡಿ- ವಿಹಿಂಪ, ಬಜರಂಗದಳ ಮನವಿ

    – ಹಿಂದೂ ಅಂಗಡಿಗಳ ಮುಂದೆ ಭಗವಾಧ್ವಜ

    ಮಂಗಳೂರು: ಮಂಗಳಾದೇವಿ ದೇವಸ್ಥಾನದ (Mangaladevi Temple) ನವರಾತ್ರಿ ಉತ್ಸವದಲ್ಲಿ ಧರ್ಮ ದಂಗಲ್ ಆರಂಭವಾಗಿದೆ.

    ಹಿಂದೂ ಸಂಘಟನೆಗಳ ವಿರೋಧದ ನಡುವೆಯೂ ಮುಸ್ಲಿಂ ವ್ಯಾಪಾರಿಗಳಿಗೆ ದ.ಕ ಜಿಲ್ಲಾಡಳಿತ ಅವಕಾಶ ನೀಡಿದೆ. ಹೀಗಾಗಿ ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ಮಾಡುವಂತೆ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಇದನ್ನೂ ಓದಿ: ಒರಿಜಿನಲ್ ಅಂತ ಸಿಎಂ ಇಬ್ರಾಹಿಂ ಬೋರ್ಡ್ ಹಾಕಿಕೊಳ್ಳಲಿ: ಹೆಚ್‍ಡಿಕೆ

    ಜಾತ್ರೋತ್ಸವದಲ್ಲಿ ವಿಶ್ವಹಿಂದೂಪರಿಷತ್-ಬಜರಂಗದಳ ಕಾರ್ಯಕರ್ತರು ಹಿಂದೂ ವ್ಯಾಪಾರಿಗಳ ಅಂಗಡಿಗಳ ಮುಂದೆ ಭಗವಾಧ್ವಜ ಅಳವಡಿಸಿದ್ದಾರೆ. ವಿಎಚ್‍ಪಿ ಮುಖಂಡ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಹಿಂದೂ ವ್ಯಾಪಾರಿಗಳ ಅಂಗಡಿ ಗುರುತುಗಾಗಿ ಭಗವಾಧ್ವಜ ಹಾಕಿದ್ದಾರೆ.

    ದೇವಸ್ಥಾನದ ಆಸು-ಪಾಸಿನಲ್ಲಿ ಹಿಂದೂಗಳಿಗೆ ಅವಕಾಶ ನೀಡಬೇಕು. ಹಿಂದೂ ದೇವರನ್ನು ನಂಬದ, ಮೂರ್ತಿ ಪೂಜೆ ವಿರೋಧಿಗಳಿಗೆ ನಮ್ಮ ಉತ್ಸವದಲ್ಲಿ ಅವಕಾಶ ಇಲ್ಲ. ನಮ್ಮ ದೇವಸ್ಥಾನದಲ್ಲಿ ವ್ಯಾಪಾರ ಮಾಡೋದು ಹಿಂದೂ ವ್ಯಾಪಾರಿಗಳ ಹಕ್ಕು. ಮುಸ್ಲಿಂ ವ್ಯಾಪಾರಿಗಳೂ ಈಗ ಕೈಗೆ ನೂಲು, ಶಾಲು ಹಾಕಿ ವ್ಯಾಪಾರ ಮಾಡುತ್ತಾರೆ. ಅದಕ್ಕಾಗಿ ಗುರುತಿಗಾಗಿ ಹಿಂದೂ ವ್ಯಾಪಾರಸ್ಥರ ಅಂಗಡಿಗಳ ಮುಂದೆ ಭಗವಾಧ್ವಜ ಹಾಕಿದ್ದೇವೆ ಎಂದು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಡುಪಿಯಲ್ಲಿ ಪ್ರಚೋದನಕಾರಿ ಭಾಷಣ – ಶರಣ್ ಪಂಪ್‍ವೆಲ್ ವಿರುದ್ಧ ಕೇಸ್

    ಉಡುಪಿಯಲ್ಲಿ ಪ್ರಚೋದನಕಾರಿ ಭಾಷಣ – ಶರಣ್ ಪಂಪ್‍ವೆಲ್ ವಿರುದ್ಧ ಕೇಸ್

    ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಇಬ್ಬರು ಹಿಂದೂ ಮುಖಂಡರ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ.

    ವಿಶ್ವ ಹಿಂದೂ ಪರಿಷತ್ ಮುಖಂಡ (VHP) ಶರಣ್ ಪಂಪ್ ವೆಲ್ (Sharan Pumpwell) ಹಾಗೂ ಬಜರಂಗದಳ (Bajarang Dal) ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲಾಗಿದೆ. ಉಡುಪಿ ಕಾಲೇಜಿನಲ್ಲಿ ನಡೆದ ವೀಡಿಯೋ ವಿವಾದದ ವಿರುದ್ಧ ಕೃಷ್ಣಮಠ ಸಮೀಪದ ಪಾಕಿರ್ಂಗ್ ಏರಿಯಾದಲ್ಲಿ ಗುರುವಾರ ವಿಹೆಚ್‍ಪಿ ಪ್ರತಿಭಟನಾ ಸಭೆ ನಡೆಸಿತ್ತು. ಈ ವೇಳೆ ಮಾತನಾಡಿದ್ದ ಈ ಇಬ್ಬರು ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಕೇದಾರನಾಥ ಮಾರ್ಗದಲ್ಲಿ ಭಾರಿ ಭೂಕುಸಿತ – ಹಲವರ ಸಮಾಧಿ ಶಂಕೆ

    ಸೌಟು ಪೊರಕೆ ಹಿಡಿಯುವ ಕೈಗಳು ನ್ಯಾಯಕ್ಕಾಗಿ, ಮನೆಯ ಮಕ್ಕಳ ರಕ್ಷಣೆಗಾಗಿ ತಲವಾರು, ಕತ್ತಿಗಳನ್ನ ಹಿಡಿಯಿರಿ ಎಂದು ಶರಣ್ ಪಂಪ್ ವೆಲ್ ಕರೆ ನೀಡಿದ್ದರು. ಬಳಿಕ ಉಡುಪಿ (Udupi) ಕಾಲೇಜಿನ ಪ್ರಕರಣವನ್ನು ಉಲ್ಲೇಖಿಸಿ ದಿನೇಶ್ ಮೆಂಡನ್ ಸಹ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಇಬ್ಬರ ವಿರುದ್ಧ ಉಡುಪಿ ನಗರ ಠಾಣಾ ಎಸ್‍ಐ ಪುನೀತ್ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಣಿಪುರ ಸಂಘರ್ಷ – ಪೊಲೀಸ್ ಅಧಿಕಾರಿಯನ್ನು ಕೊಂದು ಶಸ್ತ್ರಾಸ್ತ್ರಗಳನ್ನು ದೋಚಿದ ಕಿಡಿಗೇಡಿಗಳು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹನುಮಾನ್ ಚಾಲೀಸಾ ಪಠಿಸಿ ಕಾಂಗ್ರೆಸ್‍ಗೆ ಕೇಸರಿ ಪಡೆ ಸೆಡ್ಡು

    ಹನುಮಾನ್ ಚಾಲೀಸಾ ಪಠಿಸಿ ಕಾಂಗ್ರೆಸ್‍ಗೆ ಕೇಸರಿ ಪಡೆ ಸೆಡ್ಡು

    ಬೆಂಗಳೂರು: ಕಾಂಗ್ರೆಸ್ ಪಕ್ಷ (Congress) ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ (Bajarangdal)ನಿಷೇಧದ ಪ್ರಸ್ತಾಪ ಮಾಡಿರೋದಕ್ಕೆ ಬಿಜೆಪಿ (BJP) ಯವರ ಜೊತೆ ಹಿಂದೂ ಸಂಘಟನೆಗಳು ಕೂಡ ಸಿಡಿದೆದ್ದಿವೆ. ಕಾಂಗ್ರೆಸ್ ವಿರುದ್ಧ ದೇಶದ ವಿವಿಧೆಡೆ ಪ್ರತಿಭಟನೆಗಳನ್ನು ನಡೆಸತೊಡಗಿದೆ.

    ಮಲ್ಲೇಶ್ವರಂನ ರಾಮ ದೇಗುಲದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ನೇತೃತ್ವದಲ್ಲಿ ಹನುಮಾನ್ ಚಾಲಿಸಾ (Hanuman Chalisa) ಪಾರಾಯಣ ಮಾಡಿ ಕಾಂಗ್ರೆಸ್‍ಗೆ ಸೆಡ್ಡು ಹೊಡೆದರು. ಬಿಜೆಪಿಯವರಿಗೆ ಹನುಮಾನ್ ಚಾಲೀಸಾ ಹೇಳಲು ಬರುತ್ತಾ ಎಂದು ಸುರ್ಜೆವಾಲಾ ಹಾಕಿದ್ದ ಸವಾಲ್‍ಗೆ ತಿರುಗೇಟು ಕೊಟ್ಟರು. ಇದನ್ನೂ ಓದಿ: ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 4 ಕೋಟಿ 5 ಲಕ್ಷ ರೂ. ವಶ

    ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೀದರ್, ರಾಮನಗರ, ಮಂಡ್ಯ, ಉಡುಪಿ, ತುಮಕೂರು, ಚಿಕ್ಕಮಗಳೂರು, ಉಡುಪಿ, ಯಾದಗಿರಿ ಸೇರಿ ರಾಜ್ಯದ ವಿವಿಧೆಡೆ ಬಜರಂಗದಳದ ಕಾರ್ಯಕರ್ತರು ಹನುಮಾನ್ ಚಾಲೀಸಾ ಪಾರಾಯಣ ಮಾಡಿ, ಪ್ರತಿಭಟನೆ ಮಾಡಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಬರಲು ಬಿಡಲ್ಲ ಎಂದು ಶಪಥ ಮಾಡಿದ್ದಾರೆ. ಮನೆ ಮನೆಗೆ ತೆರಳಿ ಕಾಂಗ್ರೆಸ್‍ಗೆ ಮತ ಹಾಕಬೇಡಿ ಎಂದು ಮನವಿ ಮಾಡಿದ್ದಾರೆ.

    ಈ ಮಧ್ಯೆ, ಗಾಳಿ ಆಂಜನೇಯ ದೇಗುಲದಲ್ಲಿ ಹನುಮಾನ್ ಚಾಲೀಸ್ ಪಠಣಕ್ಕೆ ಮುಂದಾದ ಕಾರ್ಯಕರ್ತರಿಗೆ, ನೀವು ಪಠಣ ಮಾಡುವುದಾದರೆ ಮಾಡಿ. ಆದರೆ ವೀಡಿಯೋ ಚಿತ್ರೀಕರಣಕ್ಕೆ ಅವಕಾಶವಿಲ್ಲ. ದೇವಾಲಯದ ಒಳಗೆ ರಾಜಕೀಯ ತರಬೇಡಿ ಎಂದು ಆಡಳಿತ ಮಂಡಳಿ ಖಡಕ್ಕಾಗಿ ಹೇಳಿತು. ಹೀಗಾಗಿ ದೇಗುಲದ ಮುಂಭಾಗವೇ ಹಿಂದೂ ಕಾರ್ಯಕರ್ತರು ಹನುಮಾನ್ ಚಾಲಿಸಾ ಪಠಿಸಿದ್ರು. ಮಧ್ಯಪ್ರದೇಶದ ಜಬಲ್ಪುರದಲ್ಲಿ ಕಾಂಗ್ರೆಸ್ ಕಚೇರಿಗೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ದಾಂಧಲೆ ನಡೆಸುವ ದೃಶ್ಯಗಳು ವೈರಲ್ ಆಗಿವೆ.

     

  • ಕಾಂಗ್ರೆಸ್‍ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ: ಅಶೋಕ್ ಕಿಡಿ

    ಕಾಂಗ್ರೆಸ್‍ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ: ಅಶೋಕ್ ಕಿಡಿ

    ರಾಮನಗರ: ಬಜರಂಗದಳ (Bajaranagdal) ವನ್ನು ಬ್ಯಾನ್ ಮಾಡುತ್ತೇವೆ ಎಂಬ ಕಾಂಗ್ರೆಸ್ ಪ್ರಣಾಳಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಸಚಿವ ಆರ್.ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

    ಇಂದು ಕನಕಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಾನು ಬಜರಂಗದಳದ ಸದಸ್ಯ, ಕಾಂಗ್ರೆಸ್ (Congress) ನಾಯಕರಿಗೆ ಧಮ್ಮಿದ್ರೆ, ತಾಕತ್ತಿದ್ರೆ ಕ್ರಮ ಜರುಗಿಸಲಿ ನೋಡೋಣ ಅಂತ ಸವಾಲೆಸೆದರು. ಕಾಂಗ್ರೆಸ್ ನವರು ಆಂಜನೇಯನ ಬಾಲಕ್ಕೆ ಬೆಂಕಿ ಹಚ್ಚಿದ್ದಾರೆ, ಆ ಆಂಜನೇಯ ಬಾಲಕ್ಕೆ ಬೆಂಕಿ ಹತ್ತಿದಾಗ ಲಂಕೆಯನ್ನು ಸುಟ್ಟಂತೆಯೇ ಕಾಂಗ್ರೆಸ್ ಹಚ್ಚಿರುವ ಬೆಂಕಿ ಆ ಪಕ್ಷವನ್ನೇ ಅಗ್ನಿಗಾಹುತಿ ಮಾಡಲಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ:ಹೆಣ್ಣು ಸಿಗದ ಯುವಕರಿಗೆ ಮದುವೆ ಭಾಗ್ಯ – ಹುಬ್ಬೇರಿಸಿ ನೋಡುವಂತೆ ಪ್ರಣಾಳಿಕೆ ಘೋಷಿಸಿದ ಅಭ್ಯರ್ಥಿಗಳು

    ಸಿದ್ದರಾಮಯ್ಯ (Siddaramaiah) ಅವರು ಮೊದಲಿನಿಂದಲೂ ಕುಂಕುಮವನ್ನು ವಿರೋಧ ಮಾಡ್ತಾರೆ. ಟಿಪ್ಪು ಸುಲ್ತಾನ್ ಅವರನ್ನು ಓಲೈಕೆ ಮಾಡಿಕೊಳ್ಳುತ್ತಾರೆ. ಹಿಂದೂ ವಿರೋಧಿ ಭಾವನೆಯನ್ನು ಕಾಂಗ್ರೆಸ್ ಮಾಡಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಎಲ್ಲ ಕಡೆ ಪ್ರತಿಭಟನೆ ನಡೆಯುತ್ತಿದೆ. ಇದೇ ಕಾರಣಕ್ಕೆ ಎಲ್ಲಾ ಕಡೆ ಹನುಮಾನ್ ಚಾಲಿಸಾ (Hanuman Chalisa) ಪಠಣೆ ಮಾಡಲಾಗುತ್ತದೆ. ಕಾಂಗ್ರೆಸ್ ದೇಶದಲ್ಲಿ ಸರ್ವನಾಶವಾಗುತ್ತದೆ. ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಇದೆಲ್ಲವೂ ಕಾಂಗ್ರೆಸ್ ಗೆ ವ್ಯತಿರಿಕ್ತವಾಗುತ್ತದೆ. ಇದೆಲ್ಲವನ್ನೂ ನೋಡಿದ್ರೆ ಹಿಂದೂ ವಿರೋಧಿ ಕಾಂಗ್ರೆಸ್ ಅನ್ನೋದು ಗೊತ್ತಾಗುತ್ತದೆ ಎಂದರು.

    ಹಿಂದೆ ಅಖಂಡ ಶ್ರೀನಿವಾಸ್ (Akhanda SrinivasMurthy) ಮನೆಗೆ ಬೆಂಕಿ ಹಚ್ಚಲಾಗಿತ್ತು. ಆ ಟೈಮ್ ನಲ್ಲಿ ಏನಾಯ್ತು ಅಂತ ಎಲ್ಲರಿಗೂ ಗೊತ್ತು. ಅತಿ ಹೆಚ್ಚು ಮತಗಳಿಂದ ಅಖಂಡ ಶ್ರೀನಿವಾಸ ಮೂರ್ತಿ ಗೆದ್ದಿದ್ದರು. ಅಖಂಡ ಶ್ರೀನಿವಾಸ ಮೂರ್ತಿ ಒಬ್ಬ ದಲಿತ. ಅದಕ್ಕಾಗಿ ಆ ಭಾಗದ ಎಲ್ಲಾ ಮುಲ್ಲಾಗಳು ಬಂದು ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಅದಕ್ಕಾಗಿಯೇ ಶ್ರೀನಿವಾಸ್‍ಗೆ ಟಿಕೆಟ್ ಕೈತಪ್ಪಿತ್ತು. ಯಾರು ಬೆಂಕಿ ಹಚ್ಚಿದ್ದಾರೆ ಅವರೆಲ್ಲ ಚೆನ್ನಾಗಿದ್ದಾರೆ. ಕಾಂಗ್ರೆಸ್ ಹಿಂದೂ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ರು.

  • ಹನುಮ ಭಕ್ತ ಬಜರಂಗದಳದವರು ಸಿಡಿದು ನಿಂತ್ರೆ ಬೇರು ಸಮೇತ ಕಿತ್ತೋಗ್ತೀರಿ: ಬೊಮ್ಮಾಯಿ

    ಹನುಮ ಭಕ್ತ ಬಜರಂಗದಳದವರು ಸಿಡಿದು ನಿಂತ್ರೆ ಬೇರು ಸಮೇತ ಕಿತ್ತೋಗ್ತೀರಿ: ಬೊಮ್ಮಾಯಿ

    ಧಾರವಾಡ: ಬಜರಂಗದಳ (Bajarangdal) ದವರು ನಮ್ಮ ಹನುಮನ ಭಕ್ತರು. ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ‌ (Shankar Patil Munenakoppa) ಪರ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ನವಲಗುಂದಕ್ಕೆ ಇದು ಬಂಡಾಯ ನಾಡು ಎಂದು ಕರೆದರು. ಈ ಭಾಗದಲ್ಲಿ ಮಹದಾಯಿ ನೀರು ಬಂದಿರಲಿಲ್ಲ, ರೈತರ ಮೇಲೆ ಗುಂಡು ಹಾಕಿದ ಸರ್ಕಾರ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಮಹದಾಯಿ (Mayadayi) ನೀರನ್ನು ಮಲಪ್ರಭೆಗೆ ತಂದು ನೀರು ಕೊಡಲು ಅಡ್ಡ ಹಾಕಿದ್ದ ಕಾಂಗ್ರೆಸ್, ಸೋನಿಯಾ ಗಾಂಧಿ ಅವರು ಗೋವಾ (Goa) ದಲ್ಲಿ ಹೋಗಿ ಹನಿ ನೀರು ಕೊಡಲ್ಲ ಎಂದಿದ್ರು ಎಂದರು.

    ಮನಮೋಹನ್ ಸಿಂಗ್ (Manamohan Singh) ಅವರು ನಮಗೆ ನೀರು ಕೊಡಲು ಟ್ರಿಬುನಲ್ ಮಾಡಿದ್ರು, ಸಿದ್ದರಾಮಯ್ಯ ಸರ್ಕಾರ ಗೋಡೆ ಕಟ್ಟಿದ್ರು, ಒಂದು ಕೋಟಿ ಖರ್ಚು ಮಾಡಿ ನಾವು ಕೆನಲ್ ಕಟ್ಟಿದೆವು, ಗೋಡೆ ಕಟ್ಟಿದೆವು ಎಂದ ಸಿಎಂ, ಇದೇ ನವಲಗುಂದ ತಾಲೂಕಿನಲ್ಲಿ ಹೆಣ್ಣು ಮಕ್ಕಳ ಮೇಲೆ ಲಾಠಿ ಹೊಡೆದವರಿಗೆ ಮತ ಹಾಕ್ತಿರಾ ಎಂದು ಪ್ರಶ್ನೆ ಮಾಡಿದರು. ಮೋದಿ ಅವರು ನಮಗೆ ಮಹದಾಯಿಗಾಗಿ ಅನುಮತಿ ಕೊಟ್ಡಿದ್ದಾರೆ. ನಾವು ಟೆಂಡರ್ ಮಾಡಿದ್ದೇವೆ, ಕೆಲಸ ಆರಂಭ ಆಗಲಿದೆ ಎಂದ ಬೊಮ್ಮಾಯಿ, ಈಗಾಗಲೇ ನಾನು ಒಂದು ಸಾವಿರ ಕೋಟಿ ಕೊಟ್ಟಿದ್ದೇನೆ. ಎರಡು ವರ್ಷದಲ್ಲಿ ಕಾಮಗಾರಿ ಮಾಡ್ತೇವೆ ಎಂದರು.

    ಗ್ಯಾರಂಟಿ ಕೊಡುತ್ತಾರೆ ಕಾಂಗ್ರೆಸ್ ನವರು, ಮೋದಿ (Narendra Modi) ಅವರ ಅಕ್ಕಿ ಅದು, ಎಲ್ಲ ಗ್ಯಾರಂಟಿ ಮೇ 10ವರೆಗೆ, ಅದರ ನಂತರ ಗಳಗಂಟಿ ಎಂದ ಸಿಎಂ, ಮೀಸಲಾತಿ ಹೆಚ್ಚಳ ಮಾಡಿದೆ. ನಮ್ಮ ದುಡಿಯುವ ಜನರಿಗೆ ಮೀಸಲಾತಿ ಕೊಟ್ಟಿದ್ದೇವೆ, ನಮ್ಮ ಎದುರಿಗೆ ಅವರು ವಿರೋಧ ಮಾಡಿ ಕೋರ್ಟ್‍ಗೆ ಹೋಗಿದ್ದಾರೆ ಎಂದರು. ಇದನ್ನೂ ಓದಿ: ಮೋದಿಗೆ ಎಷ್ಟು ಬೈತಿರೋ ಅಷ್ಟು ಕಮಲ ಅರಳುತ್ತೆ: ಕಾಂಗ್ರೆಸ್‍ಗೆ ಅಮಿತ್ ಶಾ ತಿರುಗೇಟು

    ನಾವು ಬಜರಂಗದಳ ಬ್ಯಾನ್ ಮಾಡುತ್ತೇವೆ ಅಂತಾರೆ, ಭಯೋತ್ಪಾದನೆ ಮಾಡಿದ ಪಿಎಫ್‍ಐಗೆ ಅವರು ಕೇಸ್ ವಾಪಸ್ ಪಡೆದರು, ಬಜರಂಗದಳದವರು ನಮ್ಮ ಹನುಮನ ಭಕ್ತರು, ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗ್ತೀರಿ ಎಂದ ಸಿಎಂ, ರಾಮನ ದೇವಸ್ಥಾನ ಆಗುತ್ತಿದೆ. ಸಬ್ ಕಾ ವಿಕಾಸ ನಾವು ಮಾಡುತ್ತೇವೆ. ಮನೆ ಮನೆಗೆ ಹೋಗಿ ಮೇ 10 ಕ್ಕೆ ಮುನೇನಕೊಪ್ಪ ಅವರಿಗೆ ಮತ ಹಾಕುವಂತೆ ಹೇಳಿ, ಬಹಳ ಜನ ಮಾತನಾಡುತ್ತಾರೆ. ಆದರೆ ಜಗದೇಕ ಮಲ್ಲ ಮುನೇನಕೊಪ್ಪ, 25 ಸಾವಿತ ಮತದಿಂದ ಗೆಲ್ಲಿಸಿ ಎಂದು ಕೇಸರಿ ಶಾಲು ತಿರುವಿಸಿ ಬಜರಂಗಿ ಎಂದು ಘೋಷಣೆ ಹಾಕಿದರು. ಇದೇ ವೇಳೆ ಕುರುಬ ಸಮುದಾಯದಿಂದ ಸಿಎಂಗೆ ಕಂಬಳಿ ಹೊದಿಸಿ ಸನ್ಮಾನ ಮಾಡಿದರು. ಸಿಎಂಗೆ ಟಗರು ಮರಿ ಕೊಟ್ಟ ನಂತರ ಅದಕ್ಕೆ ಕೈಯಲ್ಲಿ ಹಿಡಿದು ಸಿಎಂ ಮುತ್ತಿಟ್ಟರು ಎಂದರು.

  • ಮಂಗಳೂರಿನಲ್ಲಿ 150 ಮಂದಿಗೆ ತ್ರಿಶೂಲ ಹಂಚಿದ ವಿಹೆಚ್‍ಪಿ!

    ಮಂಗಳೂರಿನಲ್ಲಿ 150 ಮಂದಿಗೆ ತ್ರಿಶೂಲ ಹಂಚಿದ ವಿಹೆಚ್‍ಪಿ!

    – ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳ ನಡುವೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಆಯುಧ ಪೂಜೆಯಂದು ಶಸ್ತ್ರಾಸ್ತ್ರಗಳನ್ನು ಹಂಚಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

    ಮಂಗಳೂರಿನ ಕದ್ರಿಯಲ್ಲಿರುವ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಹಿಂದೂಪರ ಸಂಘಟನೆಯಿಂದ ತ್ರಿಶೂಲ ದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಹರಿತದ ಕತ್ತಿಯನ್ನು ಹಂಚಲಾಗಿದೆ. 150 ಮಂದಿಗೆ ತ್ರಿಶೂಲ ಹಂಚಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಲಸಿಕೆ ಪಡೆಯದೇ ಓಡಾಟ ನಡೆಸುವವರ ಮೇಲೆ ನಿಗಾ

    ತ್ರಿಶೂಲ ದೀಕ್ಷೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೆ ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ಆರಂಭವಾಗಿದೆ. ತ್ರಿಶೂಲ ನೆಪದಲ್ಲಿ ಹರಿತದ ಕತ್ತಿಯನ್ನು ನೀಡಿ ಶಸ್ತ್ರ ಹಿಡಿಯಲು ಪ್ರೇರಣೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪತಿಯನ್ನು ಕೊಂದು ಸೂಟ್‍ಕೇಸ್‍ನಲ್ಲಿ ಸಾಗಿಸಿದಳು

    ಇತ್ತೀಚೆಗೆ ಸುರತ್ಕಲ್ ಮತ್ತು ಮೂಡಬಿದಿರೆಯಲ್ಲಿ ಅನೈತಿಕ ಪೊಲೀಸ್‍ಗಿರಿ ಪ್ರಕರಣ ವರದಿ ಆಗಿತ್ತು. ಅನೈತಿಕ ಪೊಲೀಸ್‍ಗಿರಿಯನ್ನು ಖುದ್ದು ಸಿಎಂ ಬಸವರಾಜ ಬೊಮ್ಮಾಯಿಯವರೇ ಆಕ್ಷನ್-ರಿಯಾಕ್ಷನ್ ಎಂದು ಹೇಳಿ ಬಹಿರಂಗವಾಗಿ ಸಮರ್ಥಿಸಿಕೊಂಡಿದ್ದರು. ಇದನ್ನೂ ಓದಿ: ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

  • ದತ್ತ ಪೀಠಕ್ಕೆ ಶೀಘ್ರವೇ ಹಿಂದೂ ಅರ್ಚಕರನ್ನು ನೇಮಿಸಿ- ಸಿಎಂಗೆ ಬಜರಂಗದಳ ಮನವಿ

    ದತ್ತ ಪೀಠಕ್ಕೆ ಶೀಘ್ರವೇ ಹಿಂದೂ ಅರ್ಚಕರನ್ನು ನೇಮಿಸಿ- ಸಿಎಂಗೆ ಬಜರಂಗದಳ ಮನವಿ

    ಚಿಕ್ಕಮಗಳೂರು/ಬೆಂಗಳೂರು: ದತ್ತ ಪೀಠಕ್ಕೆ ಶೀಘ್ರವೇ ಹಿಂದೂ ಅರ್ಚಕರನ್ನು ನೇಮಕ ಮಾಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಜರಂಗದಳದಿಂದ ಇಂದು ಮನವಿ ಸಲ್ಲಿಸಲಾಯಿತು.

    ಚಿಕ್ಕಮಗಳೂರಿನ ದತ್ತ ಪೀಠವು ಹಿಂದಿನ ಹಲವು ದಶಕಗಳಿಂದ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದ್ದು ದುರದೃಷ್ಟವಶಾತ್ ಅಲ್ಲಿ ಮುಸ್ಲಿಂ ಮೌಲ್ವಿಗಳು ಪೂಜೆ ಸಲ್ಲಿಸುತ್ತಿದ್ದು, ಪ್ರಸ್ತುತ ಹೈಕೋರ್ಟ್ ತೀರ್ಪಿನ ಪ್ರಕಾರ ಮೌಲ್ವಿಗಳ ನೇಮಕಾತಿಯನ್ನು ರದ್ದುಪಡಿಸಲಾಗಿದೆ. ಕಳೆದ ಹಲವಾರು ವರ್ಷಗಳಿಂದ ಹಿಂದೂ ಸಮಾಜವು ಈ ಒಂದು ಅಪೇಕ್ಷೆಯನ್ನು ಮುಂದಿಟ್ಟುಕೊಂಡು ಹೋರಾಟವನ್ನು ನಡೆಸುತ್ತಾ ಬಂದಿದೆ.

    ಹೈಕೋರ್ಟಿನ ಈ ತೀರ್ಪು ಹಿಂದೂ ಸಮಾಜದಲ್ಲಿ ಸಂತಸವನ್ನು ತಂದಿದೆ ಹಾಗೂ ಹಿಂದೂ ಸಮಾಜದ ನಂಬಿಕೆಗಳಿಗೆ ಬೆಲೆ ಸಿಕ್ಕಂತಾಗಿದೆ. ನ್ಯಾಯಾಲಯದ ಈ ತೀರ್ಪು ಹಿಂದೂ ಸಮಾಜದ ಗೆಲುವಾಗಿದೆ. ನ್ಯಾಯಾಲಯವು ನೀಡಿದ ತೀರ್ಪಿನಂತೆ ತಾವು ತಕ್ಷಣ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸಬೇಕು. ಅಲ್ಲದೆ ಡಿಸೆಂಬರ್ 18 ರಂದು ದತ್ತ ಜಯಂತಿಯ ಪ್ರಯುಕ್ತ ನಡೆಯುವ 3 ದಿನದ ಕಾರ್ಯಕ್ರಮಕ್ಕೆ ಸಂಪೂರ್ಣ ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆ ನಡೆಸಲು ಅನುವು ಮಾಡಿಕೊಡಬೇಕು. ತಾವು ಕೂಡ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಸಿಎಂಗೆ ಸಲ್ಲಿಸಿರುವ ಮನವಿಯಲ್ಲಿ ಬಜರಂಗದಳ ರಾಜ್ಯ ಸಂಚಾಲಕ ಕೆ.ಆರ್ ಸುನಿಲ್ ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ರಘು ಸಕಲೇಶಪುರ ಮತ್ತು ಮುರಳಿ ಕೃಷ್ಣ ಹಸಂತಡ್ಕ ಅವರುಗಳು ಜೊತೆಗಿದ್ದರು. ಇದನ್ನೂ ಓದಿ: ದತ್ತಪೀಠದಲ್ಲಿ ಮುಜಾವರ್ ನೇಮಕ ರದ್ದು – ಮತ್ತೆ ಸರ್ಕಾರದ ಅಂಗಳಕ್ಕೆ ಚೆಂಡು

    ಕೋರ್ಟ್ ತೀರ್ಪು:
    ವಿವಾದಿತ ಬಾಬಾಬುಡೆನ್‍ಗಿರಿಯ ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ನೇಮಕ ಮಾಡಿದ್ದ ಆದೇಶವನ್ನು ಕಳೆದ 7 ದಿನಗಳ ಹಿಂದೆ ಹೈಕೋರ್ಟ್ ರದ್ದು ಮಾಡಿದೆ. 2018ರ ಮಾರ್ಚ್ 19ರಂದು ದತ್ತಾತ್ರೇಯ ಪೀಠದ ಪೂಜೆಗೆ ಮೌಲ್ವಿ ಸೈಯದ್ ಗೌಸ್ ಮೊಹಿದ್ದೀನ್‍ರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಿಸಿತ್ತು. ಇದನ್ನು ಪ್ರಶ್ನಿಸಿ ಸಂವರ್ಧನಾ ಸಮಿತಿ ಕೋರ್ಟ್ ಮೊರೆ ಹೋಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ನೇತೃತ್ವದ ನ್ಯಾಯಪೀಠ, ಮೌಲ್ವಿ ನೇಮಕಾತಿಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಈ ಪ್ರಕರಣವನ್ನು ಹೊಸದಾಗಿ ಪರಿಗಣಿಸಿ ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಿ ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಮಂಗಳೂರಲ್ಲಿ ಶಾಶ್ವತವಾಗಿ NIA ಕಚೇರಿ ಸ್ಥಾಪಿಸಲು ಕೇಂದ್ರಕ್ಕೆ ಬಜರಂಗದಳ ಮನವಿ

    ಮಂಗಳೂರಲ್ಲಿ ಶಾಶ್ವತವಾಗಿ NIA ಕಚೇರಿ ಸ್ಥಾಪಿಸಲು ಕೇಂದ್ರಕ್ಕೆ ಬಜರಂಗದಳ ಮನವಿ

    – ಕರಾವಳಿಯಲ್ಲಿಯ ಭಯೋತ್ಪಾದನಾ ಚಟುವಟಿಕೆಗಳ ಸರಿಯಾದ ತನಿಖೆಗೆ ಆಗ್ರಹ

    ಬೆಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಅವರ ಇನ್ನಷ್ಟು ಹೆಚ್ಚಿನ ತನಿಖೆಗೆ ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ ಎನ್‍ಐಎ ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಕೆ.ಆರ್ ಸುನಿಲ್ ಒತ್ತಾಯಿಸಿದ್ದಾರೆ.

    ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರ ಅಬ್ದುಲ್ ರಹಿಮಾನ್ ಬಾಷಾ ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ನಂಟು ಇರುವ ಶಂಕೆಯಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಷಾ ಅವರ ಮಾಸ್ತಿಕಟ್ಟೆಯಲ್ಲಿರುವ ಮನೆಗೂ ಎನ್‍ಐಎ ತಂಡ ದಾಳಿ ನಡೆಸಿ ದಿನವಿಡೀ ತನಿಖೆ ನಡೆಸಿತ್ತು. ಈ ವಿದ್ಯಾಮಾನದಿಂದ ಇಡೀ ಜಿಲ್ಲೆ ಹಾಗೂ ರಾಜ್ಯ ಆತಂಕಕ್ಕೆ ಒಳಗಾಗಿದೆ. ಅಲ್ಲದೆ ಐಸಿಸ್ ಉಗ್ರ ಸಂಘಟನೆಗೆ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಬಾಷಾ ಅವರ ಕಿರಿಯ ಮಗ ಅಮ್ಮರ್ ಅಬ್ದುಲ್ ರೆಹಮಾನ್ ನ್ನು ವಶಕ್ಕೆ ಪಡೆದು ತೆರಳಿದ್ದರು.

    ಬಂಧಿತ ಆರೋಪಿ ಅಮ್ಮರ್ ರೆಹಮಾನ್ ಬಗ್ಗೆ ವಿಶೇಷ ತನಿಖೆ ನೆಡೆಸಬೇಕು. ಆತನ ಜೊತೆ ಕೈ ಜೋಡಿಸಿದವರ ಮತ್ತು ಆತನ ನಂಟಿನ ಬಗ್ಗೆ ಪತ್ತೆ ಹಚ್ಚಬೇಕು. ಏಕೆಂದರೆ ಕಳೆದ ಕೆಲವು ವರ್ಷಗಳಿಂದ ದೇಶದ ಯಾವುದೇ ಮೂಲೆಯಲ್ಲಿ ಉಗ್ರರ ಬಂಧನವಾದರೂ ಆ ಉಗ್ರರ ಜೊತೆಗೆ ಮಂಗಳೂರಿನ ನಂಟು ಕಂಡುಬರುತ್ತದೆ ಎಂದು ಸುನಿಲ್ ಆಗ್ರಹಿಸಿದ್ದಾರೆ.

    ನಿನ್ನೆ ಎನ್‍ಐಎ ದಾಳಿ ನಡೆಸಿದ ಬಾಷಾ ಅವರ ಮನೆ ಸೊಸೆ ಮತಾಂತರಕೊಂಡ ಹಿಂದೂ ಯುವತಿಯಾಗಿದ್ದು, ಆಕೆಯು ಸಹ ಕ್ರೋನಿಕಲ್ ಪೌಂಡೇಶನ್ ಎನ್ನುವ ಇನ್ ಸ್ಟ್ರಾಗ್ರಾಮ್ ಪೇಜ್ ನಲ್ಲಿ ಐಸಿಸ್ ಪರ ಅಜೆಂಡಾ ಹರಡುತ್ತಿದ್ದ ಆರೋಪ ಕೇಳಿ ಬಂದಿದೆ. ಇದು ಒಂದು ಲವ್ ಜಿಹಾದ್ ಪ್ರಕರಣ ಹಿಂದೂ ಯುವತಿಯರನ್ನು ಪ್ರೀತಿಯ ಹೆಸರಲ್ಲಿ ಮದುವೆಯಾಗಿ ಮತಾಂತರ ಮಾಡಿ ಉಗ್ರ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಾ ಇದ್ದಾರೆ ಈ ಬಗ್ಗೆಯೂ ತನಿಖೆಯಾಗಬೇಕು. ಇದನ್ನೂ ಓದಿ: ಉಗ್ರರ ಜೊತೆ ನಂಟು ಶಂಕೆ – ಮಾಜಿ ಶಾಸಕ ಇದಿನಬ್ಬ ಮಗನ ಮನೆ ಮೇಲೆ ಎನ್‍ಐಎ ದಾಳಿ

    ಭಟ್ಕಳ ಸಹೋದರರು ಇಲ್ಲಿಯೇ ನಂಟು ಹೊಂದಿದ್ದರು. ರಿಯಾಜ್ ಭಟ್ಕಳ್ ತೊಕ್ಕೊಟ್ಟಿನಲ್ಲಿ ಸಿಕ್ಕಿಬಿದ್ದ ಸಂದರ್ಭ ಬಾಂಬ್ ತಯಾರಿಯಯಲ್ಲಿ ತೊಡಗಿಕೊಂಡ ವ್ಯಕ್ತಿಯೊಬ್ಬನನ್ನ ಮುಕ್ಕಚೇರಿಯಿಂದ ಬಂಧಿಸಲಾಗಿತ್ತು. ಕಳೆದ ಹಲವು ವರ್ಷಗಳಿಂದ ಪಕ್ಕದ ರಾಜ್ಯ ಕೇರಳದ ಬಹುತೇಕ ಮುಸ್ಲಿಂ ಯುವಕರು ಸಿರಿಯಾ ಐಸಿಸ್ ಸಂಘಟನೆ ಸೇರಿದ್ದು ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಕ್ಷಣ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ತನಿಖೆ ನಡೆಸಬೇಕು. ಅಲ್ಲದೆ ಮಂಗಳೂರಿನಲ್ಲಿ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಉಗ್ರರ ಪರ ಗೋಡೆಬರಹ ಬರೆದ ಶಂಕಿತ 3 ಉಗ್ರರ ಬಂಧನವಾಗಿತ್ತು. ಈ ಬಗ್ಗೆ ಕೂಡ ತನಿಖೆ ಆಗಬೇಕು. ಮತ್ತು ಇಲ್ಲಿನ ಸ್ಥಳೀಯರು ಅಂತಹವರಿಗೆ ಸಹಕಾರ ನೀಡುತ್ತಿರುವ ಬಗ್ಗೆ ಸಾಕಷ್ಟು ಅನುಮಾನ ಗಳಿದ್ದು ಆ ವ್ಯಕ್ತಿಗಳನ್ನು ಕೂಡ ಪತ್ತೆ ಹಚ್ಚಿ ಬಂಧಿಸಬೇಕು.

    ಜಾಗತಿಕ ಮಟ್ಟದಲ್ಲಿ ಬೇರೂರಿರುವ ಭಯೋತ್ಪಾದನೆ ಚಟುವಟಿಕೆಯು ಕರಾವಳಿ ಜಿಲ್ಲೆಗಳಲ್ಲಿ ನೆಲೆಕಾಣಲು ಪ್ರಯತ್ನಿಸುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಆಮೂಲಾಗ್ರ ತನಿಖೆ ನಡೆಸಬೇಕೆಂದು ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ ಎನ್‍ಐಎ ಕಚೇರಿಯನ್ನು ಸ್ಥಾಪಿಸಬೇಕು ಎಂದು ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಕೆ.ಆರ್.ಸುನೀಲ್ ಆಗ್ರಹಿಸಿದ್ದಾರೆ.

  • ಯುವಕ-ಯುವತಿಯರ ತಂಡದ ಅಸಹ್ಯ ವರ್ತನೆ

    ಯುವಕ-ಯುವತಿಯರ ತಂಡದ ಅಸಹ್ಯ ವರ್ತನೆ

    – ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

    ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಸಹ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಪ್ರತ್ಯೇಕ ಕೋಮಿನ ಯುವಕ-ಯುವತಿಯರ ತಂಡವನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಪುತ್ತೂರಿನ ಪ್ರವಾಸಿ ತಾಣವಾಗಿರುವ ಬಿರುಮಲೆ ಗುಡ್ಡದಲ್ಲಿ ಈ ತಂಡ ಅಸಭ್ಯವಾಗಿ ವರ್ತಿಸುತ್ತಿದೆ ಎನ್ನುವ ದೂರು ಭಜರಂಗದಳಕ್ಕೆ ದೊರೆತಿದೆ. ಈ ದೂರು ದೊರೆತ ಹಿನ್ನೆಲೆಯಲ್ಲಿ ಭಜರಂಗದಳ ಕಾರ್ಯಕರ್ತರು ಈ ತಂಡವನ್ನು ಈ ವಿಚಾರವಾಗಿ ಪ್ರಶ್ನಿಸಿದ್ದು, ಬಳಿಕ ಸಾರ್ವಜನಿಕ ಸ್ಥಳದಲ್ಲಿ ಅಸಹ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಪ್ರತ್ಯೇಕ ಕೋಮಿನ ಯುವಕ-ಯುವತಿಯರ ತಂಡವನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಪೊಲೀಸರು ಎಲ್ಲರನ್ನೂ ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದ್ದು, ಬಳಿಕ ತಂಡಕ್ಕೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಎರಡು ಕೋಮಿನ ಜನ ಪುತ್ತೂರು ನಗರ ಪೊಲೀಸ್ ಠಾಣೆಯ ಬಳಿ ಜಮಾಯಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಬೀಸಿ ಎರಡು ಗುಂಪುಗಳನ್ನು ಚದುರಿಸಿದ್ದಾರೆ.