Tag: bajpe

  • ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಮುಸ್ಲಿಂ ಹೆಡ್‌ಕಾನ್ಸ್‌ಟೇಬಲ್‌ ಭಾಗಿ?

    – ಹಿಂದೂ ಸಂಘಟನೆಗಳಿಂದ ಗಂಭೀರ ಆರೋಪ
    – ನಿರಾಯುಧನಾಗಿ, ಒಬ್ಬಂಟಿಯಾಗಿ ಇರುವಂತೆ ವಾರ್ನ್ ಮಾಡಿದ್ದ ಕಾನ್‌ಸ್ಟೇಬಲ್‌

    ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ನಡುವೆ ಹತ್ಯೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯ ಮುಸ್ಲಿಂ ಹೆಡ್ ಕಾನ್ಸ್‌ಟೇಬಲ್‌ ಕೈವಾಡ ಇದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

    ಸುಹಾಸ್ ಶೆಟ್ಟಿ ಹತ್ಯೆಯಾದ ಕ್ಷಣದಿಂದ ದಿನಕ್ಕೊಂದು ಅನುಮಾನ, ಆಯಾಮಗಳು ಹುಟ್ಟುತ್ತಲೇ ಇದೆ. ಮೊದಲಿಗೆ ರಿವೇಂಜ್‌ಗಾಗಿ ಫಾಝಿಲ್ ತಮ್ಮ ಆದಿಲ್ ಮೆಹರೂಫ್ ಸುಫಾರಿ ಕೊಟ್ಟು ಹತ್ಯೆ ನಡೆಸಿದ್ದಾನೆಂದು ಆರೋಪಿಗಳ ಬಂಧನ ವೇಳೆ ಬೆಳಕಿಗೆ ಬಂದಿತ್ತು. ಬಳಿಕ ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಭಾಗಿಯಾಗಿದೆ ಎಂಬ ಅನುಮಾನ ಹುಟ್ಟಿಕೊಂಡಿದ್ದವು. ಇದೀಗ ಹತ್ಯೆಯಲ್ಲಿ ಪೊಲೀಸರು ಕೈ ಜೋಡಿಸಿದ್ದಾರೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಗೂ ಮುನ್ನ ಭರ್ಜರಿ ಪಾರ್ಟಿ ಮಾಡಿದ್ದ ಆರೋಪಿಗಳು!

    ಆರಂಭದಿಂದಲೂ ಸುಹಾಸ್ ತಾಯಿ ಬಜಪೆ ಪೊಲೀಸರೇ ನಮ್ಮ ಮಗನನ್ನು ಸಾಯುವಂತೆ ಮಾಡಿದ್ದಾರೆಂದು ಎಂದು ಹೇಳುತ್ತಿದ್ದರು. ಇದೀಗ ಹಲವಾರು ಸ್ಫೋಟಕ ವಿಚಾರಗಳು ಬಹಿರಂಗಗೊಂಡಿದ್ದು, ಸದ್ಯ ಪ್ರಕರಣದ ತನಿಖೆಯನ್ನು ಎನ್‌ಐಎಗೆ ನೀಡುವಂತೆ ಒತ್ತಾಯ ಹೆಚ್ಚಾಗಿದೆ.

    ಹಿಂದೂ ಸಂಘಟನೆಗಳ ಆರೋಪ ಏನು?
    ಸುಹಾಸ್ ಹತ್ಯೆಯಲ್ಲಿ ಬಜಪೆ (Bajpe) ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್‌ ರಶೀದ್ ನೇರವಾಗಿ ಭಾಗಿಯಾಗಿದ್ದಾರೆ ಎನ್ನುವ ಶಂಕೆ ಹೆಚ್ಚಾಗಿದೆ. ಸುಹಾಸ್ ಶೆಟ್ಟಿ ಬಜಪೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಈ ವ್ಯಾಪ್ತಿಗೆ ಬರುವ ಬಜಪೆ ಪೊಲೀಸ್ ಠಾಣೆ ಪೊಲೀಸರು ಆಗಾಗ ಸುಹಾಸ್ ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದ್ದರು. ಅದರಲ್ಲೂ ಠಾಣೆಯ ಕಾನ್ಸ್‌ಟೇಬಲ್‌ ರಶೀದ್ ಪದೇ ಪದೇ ಕರೆದು ಸಾಕಷ್ಟು ಕಿರುಕುಳ ನೀಡುತ್ತಿದ್ದರು. ಕಳೆದ ಒಂದು ವಾರದ ಹಿಂದೆ ಕುಡುಪು ಎಂಬಲ್ಲಿ ಅಶ್ರಫ್ ಎಂಬಾತನ ಗುಂಪು ಹತ್ಯೆ ನಡೆದ ದಿನವೂ ರಶೀದ್ ಸುಹಾಸ್ ಶೆಟ್ಟಿಯನ್ನು ಬಜಪೆ ಠಾಣೆಗೆ ಕರೆಸಿ ನೀನು ಯಾವುದೇ ಮಾರಕಾಸ್ತ್ರಗಳನ್ನು ಇಡಬೇಡ, ನಿನ್ನ ಜೊತೆ ಯಾರೂ ಯುವಕರು ಇರಬಾರದು, ಹೆಚ್ಚಿಗೆ ಓಡಾಡಬೇಡ ಎಂದು ಎಚ್ಚರಿಕೆ ನೀಡಿದ್ದರು. ಹೀಗಾಗಿ ಸುಹಾಸ್ ಶೆಟ್ಟಿಯ ಚಲನವಲನಗಳನ್ನು ಗಮನಿಸುತ್ತಿದ್ದ ಹೆಡ್ ಕಾನ್ಸ್‌ಟೇಬಲ್‌ ರಶೀದ್ ಹಂತಕರಿಗೆ ಸುಹಾಸ್ ಬರುವ ಹಾಗೂ ನಿರಾಯುಧನಾಗಿ ಇದ್ದಾನೆ ಎನ್ನುವ ಮಾಹಿತಿ ನೀಡಿದ್ದಾರೆಂದು ವಿಎಚ್‌ಪಿ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಮತ್ತು ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಕೆ.ಟಿ.ಉಲ್ಲಾಸ್ ಆರೋಪ ಮಾಡಿದ್ದಾರೆ.

    ಹಿಂದೂ ಸಂಘಟನೆಗಳ ಆರೋಪಕ್ಕೆ ಪುಷ್ಟಿ ನೀಡುವಂತೆ ಸುಹಾಸ್ ಹತ್ಯೆಯ ತನಿಖೆಯಿಂದ ಈ ರಶೀದ್‌ ಅವರನ್ನು ದೂರ ಇಡಲಾಗಿದೆ. ಹೀಗಾಗಿ ರಶೀದ್ ಅವರನ್ನು ತನಿಖೆ ನಡೆಸಬೇಕೆಂದು ಹಿಂದೂ ಸಂಘಟನೆ ಒತ್ತಾಯಿಸಿದೆ. ಎನ್‌ಐಎ ತನಿಖೆಯಾದರೆ ರಶೀದ್ ಸೇರಿ ಎಲ್ಲರ ತನಿಖೆಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ಸುಹಾಸ್ ಶೆಟ್ಟಿ ಹತ್ಯೆಗೆ 50 ಲಕ್ಷ ಫಂಡಿಂಗ್‌ – ಪ್ರಭಾವಿ ಮುಸ್ಲಿಮರ ಬ್ಯಾಂಕ್ ಖಾತೆ ಮೇಲೆ ಕಣ್ಣು!

  • ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ

    ಸುಹಾಸ್ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡುವಂತೆ ಕುಟುಂಬಸ್ಥರ ಆಗ್ರಹ

    ಮಂಗಳೂರು: ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ನಡೆದಿದೆ. ಮಗನ ಸಾವಿನಿಂದ ಕಂಗೆಟ್ಟಿರುವ ಕುಟುಂಬಸ್ಥರು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ (NIA) ನೀಡುವಂತೆ ಆಗ್ರಹಿಸಿದ್ದಾರೆ.

    ಮಂಗಳೂರಿನಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ಪ್ರಕರಣ ಭೇದಿಸಿರುವ ಮಂಗಳೂರಿನ ಪೊಲೀಸರು 8 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ‌ ಬಳಿಕ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದು

     

     

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ನಡೆಸಿದ ಎಲ್ಲಾ ಆರೋಪಿಗಳಿಗೆ ಮರಣದಂಡನೆ ನೀಡಬೇಕೆಂದು ತಾಯಿ ಸುಲೋಚನ ಶೆಟ್ಟಿ ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಲ್ಲಿ ನಮಗೆ ನಂಬಿಕೆ ಇಲ್ಲ. ಹೀಗಾಗಿ ಎನ್‌ಐಎ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಮ್ಮ ಮಗನಿಗೆ ಪೊಲೀಸರು ತೊಂದರೆ ಕೊಟ್ಟಿದ್ದಾರೆ. ಈ ರೀತಿ ಆಗಲು ಬಜ್ಪೆ ಪೊಲೀಸರೇ ಕಾರಣ, ಅವರೂ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ. ಕೆಲ ದಿನಗಳಿಂದ ಪೊಲೀಸರು ಕಿರುಕುಳ ಹೆಚ್ಚಿಸಿದ್ದು, ವಾಹನವನ್ನು ತಪಾಸಣೆ ಮಾಡುತ್ತಿದ್ದರು. ಏನಾದರೂ ನಾವು ಹೇಳಿದಂತೆ ಕೇಳದಿದ್ದರೆ ಕಾಲಿಗೆ ಗುಂಡು ಹಾಕುತ್ತೇವೆ ಎಂದು ಹೆದರಿಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಸತತ 10ನೇ ಬಾರಿ ಕದನ ವಿರಾಮ ಉಲ್ಲಂಘಿಸಿದ ಪಾಕ್‌ – ತಕ್ಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆ

    ಇನ್ನು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ಮಾತನಾಡಿ, ಕೆಲವರು ನನ್ನ ಮಗನನ್ನು ರೌಡಿ ಶೀಟರ್ ಎಂದು ಬಿಂಬಿಸುತ್ತಿದ್ದಾರೆ. ಅವನು ರೌಡಿಶೀಟರ್ ಆಗಿದ್ದರೆ ನಮ್ಮ ಮನೆ ಹೀಗೆ ಇರುತ್ತಿತ್ತಾ? ನನ್ನ ಪತ್ನಿಗೆ ಕ್ಯಾನ್ಸರ್ ಚಿಕಿತ್ಸೆ ನೀಡಲು ಪರದಾಡುತ್ತಿದ್ದೇವೆ. ನಮ್ಮ ಹೆಸರಿನಲ್ಲಿ ಸಾಲ ಮಾಡಿ ಅವನ ವ್ಯವಹಾರಕ್ಕೆ ಸಹಾಯ ಮಾಡಿದ್ದೆ. ಮಂಗಳೂರಿನಲ್ಲಿ ಮರಳಿನ ವ್ಯವಹಾರ ಮಾಡುತ್ತಿದ್ದ. ಮನೆಗೆ ಆಧಾರ ಸ್ಥಂಭವಾಗಿದ್ದ ಮಗನನ್ನು ಕಳೆದುಕೊಂಡ ನಮಗೆ ನ್ಯಾಯ ಬೇಕಾಗಿದೆ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಅವರ ಮನೆಯ ಆಧಾರ ಸ್ತಂಭವೇ ಕುಸಿದು ಬಿದ್ದಂತಾಗಿದೆ. ಹಿಂದುತ್ವಕ್ಕಾಗಿ ಕೆಲಸ ಮಾಡುತ್ತಿದ್ದ ಸುಹಾಸ್ ಶೆಟ್ಟಿ ತನ್ನ ಗುಡಿಸಲಿನಂತಿರುವ ಮನೆಯಲ್ಲೇ ತಂದೆ ತಾಯಿಯೊಂದಿಗೆ ಇದ್ದು, ಆದಷ್ಟು ಬೇಗ ಹೊಸ ಮನೆ ಕಟ್ಟಿ ಮದುವೆಯಾಗಬೇಕು ಎಂದುಕೊಂಡಿದ್ದ. ಆದರೆ ವಿಧಿಯಾಟವೇ ಬೇರೆ ಆಗಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬರ್ಬರವಾಗಿ ಹತ್ಯೆ ಆಗಿದ್ದಾನೆ. ಇದನ್ನೂ ಓದಿ: ಶಿವಾನಂದ್ ಪಾಟೀಲ್ ವಿಚಾರ ಹೈಕಮಾಂಡ್ ಗಮನಕ್ಕೆ ತರುತ್ತೇನೆ: ಎಂ.ಬಿ.ಪಾಟೀಲ್

    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಮೃತ ಸುಹಾಸ್ ಶೆಟ್ಟಿ ತಾಯಿ ಆಗ್ರಹಿಸಿದ್ದು, ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಭಾರತ-ಪಾಕ್‌ ಉದ್ವಿಗ್ನತೆ ನಡುವೆ ಪಾಕ್‌ ರೇಂಜರ್‌ನನ್ನ ಬಂಧಿಸಿದ ಬಿಎಸ್‌ಎಫ್‌

  • Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ

    Mangaluru | ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಸಾರ್ವಜನಿಕವಾಗಿ ಸುಹಾಸ್ ಶೆಟ್ಟಿ ಹತ್ಯೆ

    -ಗುದ್ದಿದ ರಭಸಕ್ಕೆ ಸಲೂನ್‌ ಶಾಪ್‌ಗೆ ನುಗ್ಗಿದ ಕಾರು

    ಮಂಗಳೂರು: ಬಜ್ಪೆ ಕಿನ್ನಿಪದವು (Bajpe Kinnipadavu) ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty)  ಸ್ನೇಹಿತರೊಂದಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಟೆಂಪೋ ಗುದ್ದಿಸಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ.

    ಸುಹಾಸ್ ಶೆಟ್ಟಿ ಬರುತ್ತಿದ್ದ ಇನ್ನೋವಾ ಕಾರನ್ನು ಮೀನಿನ ಟೆಂಪೋ ಹಾಗೂ ಒಂದು ಸ್ವಿಫ್ಟ್ ಕಾರು ಹಿಂಬಾಲಿಸಿಕೊಂಡು ಬಂದಿತ್ತು. ನಂತರ ಮೀನಿನ ಟೆಂಪೋವನ್ನು ಸುಹಾಸ್ ಇದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆಸಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇನ್ನೋವಾ ಕಾರು ಸಲೂನ್‌ಗೆ ನುಗ್ಗಿದೆ. ಬಳಿಕ ಸ್ವಿಫ್ಟ್ ಕಾರಿನಲ್ಲಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಾರ್ವಜನಿಕ ರಸ್ತೆಯಲ್ಲೇ ಸುಹಾಸ್‌ನನ್ನು ಬರ್ಬರವಾಗಿ ಕೊಲೆಗೈದು ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ

    ಘಟನೆ ಬಳಿಕ ಸುಹಾಸ್‌ನನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ಬಳಿಕ ಆಸ್ಪತ್ರೆ ಮುಂಭಾಗ ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಅಲ್ಲದೇ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಭರತ್ ಶೆಟ್ಟಿ ಕೂಡ ಆಗಮಿಸಿದ್ದಾರೆ. ಸದ್ಯ ಸುಹಾಸ್ ಪೋಷಕರು ಬೆಳ್ತಂಗಡಿಯಲ್ಲಿದ್ದಾರೆ. ಸುಹಾಸ್ ಶೆಟ್ಟಿ ಸ್ಥಳೀಯವಾಗಿ ಸಾಕಷ್ಟು ಕಾರ್ಯಕರ್ತರನ್ನು ಹೊಂದಿದ್ದ. ಇದನ್ನೂ ಓದಿ: ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯ – ಕೇಂದ್ರ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ

    ಘಟನೆ ಬಳಿಕ ಮಂಗಳೂರಿನ ಹಲವೆಡೆ ಪೊಲೀಸರು ನಾಕಾ ಬಂದಿ ಹಾಕಿದ್ದಾರೆ. ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಇಡೀ ಗಸ್ತು ತಿರುಗಲು ಸೂಚನೆ ನೀಡಲಾಗಿದೆ. ಅಲ್ಲದೇ ಮಂಗಳೂರು ನಗರಕ್ಕೆ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಪ್ರೇಮ ವಿವಾಹವಾದ ಹಿಂದೂ, ಮುಸ್ಲಿಮ್‌ ಜೋಡಿ – ಈಗ ರಕ್ಷಣೆಗೆ ಪೊಲೀಸರ ಮೊರೆ

    ಘಟನೆ ಸಂಬಂಧ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಮಾಧ್ಯಮಗಳೊಂದಿಗೆ ಮಾತನಾಡಿ, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ. ರಾತ್ರಿ 8:30ರ ಸುಮಾರಿಗೆ ರೌಡಿಶೀಟರ್ ಸುಹಾಸ್ ಶೆಟ್ಟಿ ಮೇಲೆ ಹಲ್ಲೆ ಆಗಿದೆ. ಇನ್ನೋವಾ ಕಾರಿನಲ್ಲಿ ಬರುತ್ತಿದ್ದ ಸುಹಾಸ್ ಶೆಟ್ಟಿಯನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್ ಶೆಟ್ಟಿ ಸಾವನಪ್ಪಿದ್ದಾರೆ. ಸುಹಾಸ್ ಜೊತೆ ಇದ್ದ ಸ್ನೇಹಿತರಿಗೂ ಗಾಯವಾಗಿದೆ. ದುಷ್ಕರ್ಮಿಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು. ಪ್ರತಿಕಾರದ ಹತ್ಯೆ ಎಂಬುದು ತನಿಖೆ ಬಳಿಕ ತಿಳಿಯಲಿದೆ ಎಂದರು. ಇದನ್ನೂ ಓದಿ: ಯುದ್ಧ ಭೀತಿ – ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 10 ದಿನ ಮದರಸಾ ಬಂದ್!

    ಸುಹಾಸ್ ಶೆಟ್ಟಿ ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ನಡೆದಿತ್ತು. ಈ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದ ಸುಹಾಸ್ ಶೆಟ್ಟಿಗೆ ಜೈಲಿನಿಂದ ಹೊರ ಬಂದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ. ಇದನ್ನೂ ಓದಿ: Bengaluru | ಮಳೆಗೆ ಆಟೋದ ಮೇಲೆ ಬಿದ್ದ ಮರ – ಚಾಲಕ ಸಾವು

  • ಅಮೆರಿಕದಲ್ಲಿ ಮಂಗಳೂರು ದಂಪತಿಯ ಬರ್ಬರ ಹತ್ಯೆ

    ಅಮೆರಿಕದಲ್ಲಿ ಮಂಗಳೂರು ದಂಪತಿಯ ಬರ್ಬರ ಹತ್ಯೆ

    – ಮಗಳ ಮಾಜಿ ಪ್ರಿಯಕರನಿಂದ ಗುಂಡು
    – ಪೊಲೀಸ್ ಕಾರ್ಯಾಚರಣೆಯಲ್ಲಿ ಆರೋಪಿ ಬಲಿ

    ಮಂಗಳೂರು: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಮಂಗಳೂರಿನ ಬಜ್ಪೆ ಮೂಲದ ದಂಪತಿಯನ್ನು ದುಷ್ಕರ್ಮಿಯೊಬ್ಬ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ.

    ಸಿಲಿಕಾನ್ ವ್ಯಾಲಿಯ ಟೆಕ್ ಎಕ್ಸಿಕ್ಯೂಟಿವ್, ನರೇನ್ ಪ್ರಭು ಮತ್ತು ರಾಯನ್ ಸಿಕ್ವೇರಾ ಪ್ರಭು ಎನ್ನುವ ದಂಪತಿಯನ್ನು ಪುತ್ರಿ ರಾಶೇಲ್‍ಳ ಮಾಜಿ ಪ್ರಿಯಕರ ಮಿರ್ಜಾ ಟಾಟ್ಲರ್ ಶೂಟ್ ಮಾಡಿ ಕೊಂದಿದ್ದಾನೆ.

    ನಡೆದಿದ್ದೇನು?: ಮೂಲತಃ ಮಂಗಳೂರಿನ ಬಜ್ಪೆ ನಿವಾಸಿ ರಾಯನ್ ಸಿಕ್ವೇರಾ ಕುಟುಂಬ ಮುಂಬೈನ ಬಾಂದ್ರಾದಲ್ಲಿ ನೆಲೆಸಿತ್ತು. ಆದ್ರೆ ಮಗಳು ಅಮೆರಿಕಾದಲ್ಲಿದ್ದಳು. ಹೀಗಾಗಿ ಮಗಳನ್ನು ನೋಡಲೆಂದು ನರೇನ್ ಪ್ರಭು ಹಾಗೂ ರಾಯನ್ ಸಿಕ್ವೇರಾ ಅಮೆರಿಕಕ್ಕೆ ತೆರಳಿದ್ದರು. ಅಂತೆಯೇ ಸ್ಯಾನ್ ಜೋಸ್‍ನಲ್ಲಿರುವ ಮನೆಯಲ್ಲಿದ್ದ ವೇಳೆ ಮನೆಗೆ ನುಗ್ಗಿದ ಮಿರ್ಜಾ ಟಾಟ್ಲರ್, ಮೊದಲು ರಾಶೆಲ್ ತಂದೆ ಮೇಲೆ ಗುಂಡು ಹಾರಿಸಿದ್ದು, ಬಳಿಕ ಹೊರ ಬಂದ ತಾಯಿಯ ಮೇಲೂ ಗುಂಡು ಹಾರಿಸಿ ಕೊಲೆಗೈದಿದ್ದಾನೆ. ಅಲ್ಲದೇ ಅಲ್ಲೆ ಇದ್ದ ರಾಶೆಲ್‍ಳ 13 ವರ್ಷದ ತಮ್ಮನನ್ನು ಒತ್ತೆಯಾಳಾಗಿ ಇರಿಸಿಕೊಂಡ. ಬಳಿಕ ತಮ್ಮನ ಫೋನ್‍ನಿಂದ ಮಾಜಿ ಪ್ರಿಯತಮೆ ರಾಶೆಲ್‍ಗೆ ಫೋನ್ ಮಾಡಿದ್ದನು.

    ಇದರಿಂದ ಆತಂಕಗೊಂಡ ರಾಶೆಲ್ ಪೊಲಿಸರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಬಂದ ಸಂದರ್ಭ ಪೊಲೀಸರಿಗೂ ಗುಂಡು ಹಾರಿಸಲು ಯತ್ನಿಸಿದ್ದ. ಆರೋಪಿ ಸುಮಾರು 2 ಗಂಟೆ ಪೊಲೀಸರನ್ನು ಸತಾಯಿಸಿದ್ದಾನೆ. ಕೊನೆಗೆ ಶರಣಾಗಲು ಒಪ್ಪದ ಮಿರ್ಜಾ ಟಾಟ್ಲರ್‍ನನ್ನು ಕಿಟಕಿ ಮೂಲಕ ಶೂಟ್ ಮಾಡಿ ಪೊಲೀಸರು ಹತ್ಯೆ ಮಾಡಿದ್ದಾರೆ. ಸದ್ಯ ರಾಯನ್ ಸಿಕ್ವೇರಾ ಅವರ ತಾಯಿಯ ಮನೆ ಮಂಗಳೂರಿನಲ್ಲಿ ಸಾವಿನ ಸುದ್ದಿ ಇಂದು ಗೊತ್ತಾಗಿ ನೀರಸ ಮೌನ ಆವರಿಸಿದೆ.

    ಪೊಲೀಸರ ಪ್ರಕಾರ ಮಿರ್ಜಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ. ಮೇ ನಾಲ್ಕರಂದು ಈ ಘಟನೆ ನಡೆದಿದ್ದು, ಈ ವೇಳೆ ಮನೆಯಲ್ಲಿ ರಾಶೆಲ್ ಇರಲಿಲ್ಲ ಎನ್ನುವ ವಿಚಾರ ತಿಳಿದುಬಂದಿದೆ.