Tag: Bakrid

  • ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

    ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

    – ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಹಬ್ಬ

    ಶ್ರೀನಗರ: ದೇಶಾದ್ಯಂತ ಮುಸ್ಲಿಂ (Muslims) ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್‌ (Eid Al Adha) ಹಬ್ಬ ಆಚರಿಸುತ್ತಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶದ ಸಂಭಾಲ್‌, ಪಾಟ್ನಾದ ಗಾಂಧಿ ಮೈದಾನ, ನವದೆಹಲಿ, ಬೆಂಗಳೂರು ಸೇರಿದಂತೆ ವಿವಿಧೆಡೆ ಶಾಂತಿಯುವಾಗಿ ನಮಾಜ್‌ ಮಾಡುವ ಮೂಲಕ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ. ವಿಶೇಷವೆಂದರೆ ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷಪೀಡಿತವಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ (Sonwar) ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.

    ಬಕ್ರೀದ್‌ ಹಿನ್ನೆಲೆ ಏನು?
    ಪುಣ್ಯ ಸಂಪಾದಿರುವ ರಂಜಾನ್ ತಿಂಗಳ ಉಪವಾಸದ ಬಳಿಕ ‘ಈದ್ ಉಲ್ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ತ್ಯಾಗದ ಪ್ರತೀಕ ʻಬಕ್ರೀದ್‌ʼ

    ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ. ಇದನ್ನೂ ಓದಿ: ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

    ಮನೆ ಮನೆಗಳಲ್ಲಿ ಹಬ್ಬದೂಟ:
    ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ

    ಜಾನುವಾರು ಬಲಿ ನೀಡುವ ಆಚರಣೆ:
    ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.

    ಅಲ್ಲಾಹುನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

    ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.

    ಹಜ್ ಯಾತ್ರೆ:
    ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ 9ರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್ ಮಾಸದಲ್ಲೂ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.

  • ತ್ಯಾಗದ ಪ್ರತೀಕ ʻಬಕ್ರೀದ್‌ʼ

    ತ್ಯಾಗದ ಪ್ರತೀಕ ʻಬಕ್ರೀದ್‌ʼ

    ಮುಸ್ಲಿಂ ಬಾಂಧವರು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ, ಅಚಲ ದೈವ ಭಕ್ತಿ ಹಾಗೂ ಅವರ ಪುತ್ರ ಹಜರತ್‌ ಇಸ್ಮಾಯಿಲ್‌ ಅವರ ದೈಬ ಭಕ್ತಿಯನ್ನು ಸಂಕೇತಿಸುವ ಹಬ್ಬವೇ ‘ಈದುಲ್ ಅದ್‌ಹಾʼ. ಭಾರತದಲ್ಲಿ ಈ ಹಬ್ಬವನ್ನು ಮುಸ್ಲಿಂ (Muslims) ಬಾಂಧವರ ಪವಿತ್ರ ಬಕ್ರೀದ್‌ (Bakrid Festival) ಎಂದು ಆಚರಿಸುತ್ತಾರೆ. ಈ ಬಾರಿ ಜೂನ್‌ 07 ರಂದು (ಇಂದು) ದೇಶದಾದ್ಯಂತ ಮುಸ್ಲಿಮರು ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

    ಪುಣ್ಯ ಸಂಪಾದಿರುವ ರಂಜಾನ್‌ (Ramdhan) ತಿಂಗಳ ಉಪವಾಸದ ಬಳಿಕ ‘ಈದ್‌ ಉಲ್‌ ಫಿತ್ರ್‌’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್‌ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್‌’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.

    ramzan

    ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ.

    ಮನೆ ಮನೆಗಳಲ್ಲಿ ಹಬ್ಬದೂಟ:
    ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ.

    ಜಾನುವಾರು ಬಲಿ ನೀಡುವ ಆಚರಣೆ:
    ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್‌’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.

    Bakrid

    ಅಲ್ಲಾಹುನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

    ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.

    Bakrid

    ಹಜ್ ಯಾತ್ರೆ:
    ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ 9ರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್‌ ಮಾಸದಲ್ಲೂ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.

  • ಎಲ್ಲರಲ್ಲೂ ಮನುಷ್ಯತ್ವ, ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ: ಸಿಎಂ ಸಿದ್ದರಾಮಯ್ಯ

    ಎಲ್ಲರಲ್ಲೂ ಮನುಷ್ಯತ್ವ, ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ: ಸಿಎಂ ಸಿದ್ದರಾಮಯ್ಯ

    – ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ

    ಬೆಂಗಳೂರು: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದರು.

    ಅವರು ಇಂದು ಬಕ್ರೀದ್ (Bakrid) ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

    ಈ ಸಂದರ್ಭದಲ್ಲಿ ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು, ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು ಎಂದರು.

    ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲಾ ಧರ್ಮಗಳೂ ಎಳಿಗೆಯಾಗುತ್ತದೆ ಎಂದು ಹೇಳಿದರು.  ಇದನ್ನೂ ಓದಿ: ದರ್ಶನ್‌ ಗ್ಯಾಂಗ್‌ ಅಂದರ್‌ – ಹಾಸ್ಯ ನಟ ಚಿಕ್ಕಣ್ಣಗೆ ನೋಟಿಸ್‌

    ಸರ್ವ ಧರ್ಮ ಸಮನ್ವಯದಲ್ಲಿ, ಸಂವಿಧಾನದಲ್ಲಿ (Constitution) ಸರ್ಕಾರ ನಂಬಿಕೆ ಇಟ್ಟಿದೆ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ ಎಂದು ಭರವಸೆ ನೀಡಿದರು.

    ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರನ್ನು ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮೊದಲಾದವರು ಉಪಸ್ಥಿತರಿದ್ದರು.

     

  • ಬಕ್ರೀದ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯಗೆ ಅಮಾಮ್ ಟೋಪಿ ಹಾಕಿ ಸನ್ಮಾನ

    ಬಕ್ರೀದ್ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯಗೆ ಅಮಾಮ್ ಟೋಪಿ ಹಾಕಿ ಸನ್ಮಾನ

    -ಎಲ್ಲರಲ್ಲೂ ಸಹಿಷ್ಣುತೆ ಬರಬೇಕು ಎಂದ ಸಿಎಂ

    ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ (Eidga Maidan Chamarajpet) ನಡೆದ ಬಕ್ರೀದ್ (Bakrid ) ಹಬ್ಬದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಪಾಲ್ಗೊಂಡಿದ್ದರು. ಈ ವೇಳೆ ಮುಸಲ್ಮಾನ ಮುಖಂಡರು ಸಿಎಂಗೆ ಅಮಾಮ್ ಟೋಪಿ ಹಾಕಿ ಹಾಗೂ ಶಾಲನ್ನು ಹೊದಿಸಿ ಸನ್ಮಾನ ಮಾಡಿದ್ದಾರೆ.

    ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಎಂ, ನೀವೆಲ್ಲರೂ ಮನುಕುಲಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿದ್ದೀರಿ. ಈ ಸಮಯದಲ್ಲಿ ನಾನು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರುತ್ತೇನೆ. ಸಮಾಜದಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರ ರೀತಿ ಬಾಳಬೇಕು. ಇದು ಬಹುತ್ವದ ದೇಶ, ಎಲ್ಲಾ ಭಾಷೆ ಹಾಗೂ ಧರ್ಮಕ್ಕೆ ಸಮಾನತೆ ಕೊಡುವ ದೇಶ. ಮನುಷ್ಯತ್ವ ಬಹಳ ದೊಡ್ಡ ಎಲ್ಲರಲ್ಲೂ ಸಹಿಷ್ಣುತೆ ಬರಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳೆಯಬೇಕು. ಆಗ ರಾಷ್ಟ್ರ ಹಾಗೂ ಸಮಾಜದ ಏಳಿಗೆ ಸಾಧ್ಯವಾಗಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

    ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು. ನಾವು ಯಾವುದೇ ರೀತಿಯ ತಾರತಮ್ಯವನ್ನು ಮಾಡುವುದಿಲ್ಲ. ರಾಜ್ಯದ 7 ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದು. ಈ ಕೆಲಸವನ್ನು ನಾವು ತಾರತಮ್ಯ ಇಲ್ಲದೇ ಮಾಡುತ್ತೇವೆ. ಅಲ್ಪಸಂಖ್ಯಾತರನ್ನು ಸಮಾನರಾಗಿ ನೋಡುವ ಮನೋಭಾವ ನಮ್ಮದು. ಈ ವರ್ಷ ಒಳ್ಳೆಯ ಮಳೆ ಹಾಗೂ ಬೆಳೆಯಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

    ಈ ವೇಳೆ ಸಚಿವ ಜಮೀರ್ ಅಹಮದ್ ಹಾಗೂ ಮುಸಲ್ಮಾನ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಟಿಡಿಪಿಯ ಸೂಪರ್‌ ಸಿಕ್ಸ್‌ ಗ್ಯಾರಂಟಿ ಘೋಷಣೆ ಜಾರಿಗೆ ಬೇಕು 60 ಸಾವಿರ ಕೋಟಿ!

  • ತಿರುಪತಿಯಲ್ಲಿ ದೇವರ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

    ತಿರುಪತಿಯಲ್ಲಿ ದೇವರ ದರ್ಶನಕ್ಕೆ 3 ಕಿ.ಮೀ.ವರೆಗೆ ಸರತಿ ಸಾಲು

    ತಿರುಮಲ: ಶನಿವಾರ, ಭಾನುವಾರದ ರಜೆ ಹಾಗೂ ಸೋಮವಾರ ಬಕ್ರೀದ್ ರಜೆ ಹಿನ್ನೆಲೆಯಲ್ಲಿ ತಿರುಮಲದ ವೆಂಕಟೇಶ್ವರ ಸ್ವಾಮಿಯ (Venkateswara Temple, Tirumala) ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಿದ್ದಾರೆ.

    ಶನಿವಾರ ಮತ್ತು ಭಾನುವಾರ ಭಾರೀ ಜನದಟ್ಟಣೆ ಕಂಡುಬಂದಿದ್ದು, ಭಕ್ತಾದಿಗಳು ದೇವರ ದರ್ಶನಕ್ಕಾಗಿ ಸುಮಾರು 3 ಕಿ.ಮೀ.ವರೆಗೂ ಸರತಿ ಸಾಲಿನಲ್ಲಿ ನಿಂತಿದ್ದರು. ಇದನ್ನೂ ಓದಿ: ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ – ಸ್ನೇಹಿತನ ಮಾತು ಕೇಳಿ ಶೆಡ್‌ನಲ್ಲಿ ಎಲೆಕ್ಟ್ರಿಕ್‌ ಶಾಕ್‌ ನೀಡಿ ಸಿಕ್ಕಿಬಿದ್ದ

     

    ಚುನಾವಣೆ ಮುಕ್ತಾಯ, ವಾರಾಂತ್ಯ ರಜೆ, ಬಹುತೇಕ ಪರೀಕ್ಷೆಗಳು ಮುಗಿದಿರುವುದು ಜೊತೆ ಬಕ್ರೀದ್‌ ರಜೆಯೂ (Bakrid) ಸೇರಿದ್ದರಿಂದ ತಿರುಪತಿಗೆ ಹೆಚ್ಚಿನ ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸೋಮವಾರವೂ ಈ ದಟ್ಟಣೆ ಮುಂದುವರಿಯುವ ಸಾಧ್ಯತೆಯಿದೆ.

  • ತ್ಯಾಗ ಬಲಿದಾನಗಳ ಸಂಕೇತ ʻಬಕ್ರೀದ್‌ʼ

    ತ್ಯಾಗ ಬಲಿದಾನಗಳ ಸಂಕೇತ ʻಬಕ್ರೀದ್‌ʼ

    ಮುಸ್ಲಿಂ ಬಾಂಧವರು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನಗಳ ನೆನಪಿನಲ್ಲಿ ಆಚರಿಸುವ ಹಬ್ಬವೇ ‘ಈದುಲ್ ಅದ್‌ಹಾʼ. ಭಾರತದಲ್ಲಿ ಈ ಹಬ್ಬವನ್ನು ಮುಸ್ಲಿಂ ಬಾಂಧವರ ಪವಿತ್ರ ಬಕ್ರೀದ್‌ ಎಂದು ಆಚರಿಸುತ್ತಾರೆ. ಈ ಬಾರಿ ಜೂನ್‌ 17ರಂದು (ಇಂದು) ದೇಶದಾದ್ಯಂತ ಮುಸ್ಲಿಮರು ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

    ಪುಣ್ಯ ಸಂಪಾದಿರುವ ರಂಜಾನ್‌ ತಿಂಗಳ ಉಪವಾಸದ ಬಳಿಕ ‘ಈದ್‌ ಉಲ್‌ ಫಿತ್ರ್‌’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್‌ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್‌’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.

    ಸಾಂರ್ಭಿಕ ಚಿತ್ರ

    ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ.

    ನಮಾಜ್ ಬಳಿಕ ಪರಸ್ಪರ ಶುಭಾಶಯ ತಿಳಿಸಿ, ಗೆಳೆಯರ ಮತ್ತು ಸಂಬಂಧಿಕರ ಮನೆಗೆ ಭೇಟಿ ನೀಡುವರು. ಯಾವುದಾದರೂ ಕಾರಣದಿಂದ ಕೋಪಿಸಿಕೊಂಡಿರುವರು ಕೂಡ ದ್ವೇಷವನ್ನು ಮರೆತು ಶುಭಾಶಯ ವಿನಿಮಯ ಮಾಡುವರು. ವ್ಯಕ್ತಿಗಳು, ಕುಟುಂಬಗಳ ನಡುವೆ ಬಾಂಧವ್ಯ ಬೆಳೆಯಲು ಹಬ್ಬ ನೆರವಾಗುತ್ತದೆ.

    ಮನೆ ಮನೆಗಳಲ್ಲಿ ಹಬ್ಬದೂಟ:
    ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ.

    ಜಾನುವಾರು ಬಲಿ ನೀಡುವ ಆಚರಣೆ:
    ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್‌’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.

    ಅಲ್ಲಾಹನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

    ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.

    ಹಜ್ ಯಾತ್ರೆ:
    ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ ಒಂಬತ್ತರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್‌ ಮಾಸದಲ್ಲಿ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.

  • ಬಕ್ರೀದ್ ಸ್ಪೆಷಲ್ ಶೀರ್ ಖುರ್ಮಾ ಮಾಡುವ ವಿಧಾನ

    ಬಕ್ರೀದ್ ಸ್ಪೆಷಲ್ ಶೀರ್ ಖುರ್ಮಾ ಮಾಡುವ ವಿಧಾನ

    ಕ್ರೀದ್ (Bakrid) ಅಥವಾ ಈದ್ ಅಲ್-ಅಧಾವು ಇಸ್ಲಾಮಿಕ್ ಸಂಸ್ಕೃತಿಯಲ್ಲಿ ಆಚರಣೆಯ ಹಬ್ಬವಾಗಿದೆ. ಈ ವರ್ಷ ಇದನ್ನು ಜೂನ್ 17ರ ಸೋಮವಾರದಂದು ಆಚರಿಸಲಾಗುತ್ತದೆ. ಈ ದಿನದಂದು ಸ್ನೇಹಿತರು ಮತ್ತು ಕುಟುಂಬದವರು ಸಾಂಪ್ರದಾಯಿಕ ಭೋಜನಕ್ಕೆ ಸೇರುತ್ತಾರೆ. ಖಾರದ ಭಕ್ಷ್ಯ ಗಳ ಜೊತೆಗೆ ಸಿಹಿತಿಂಡಿಗಳು ಕೂಡ ಹಬ್ಬದ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಬಕ್ರೀದ್ ಸ್ಪೆಷಲ್ ಶೀರ್ ಖುರ್ಮಾ (Sheer Khurma) ಮಾಡುವ ಸರಳ ಹಾಗೂ ಸಿಂಪಲ್ ರೆಸಿಪಿ ಇಲ್ಲಿದೆ.

    ಬೇಕಾಗುವ ಪದಾರ್ಥಗಳು:
    ಸೆವಾಯ್ (ಶ್ಯಾವಿಗೆ)- 50 ಗ್ರಾಂ
    ಹಾಲು- 1 ಲೀ
    ತುಪ್ಪ- 40 ಗ್ರಾಂ
    ಗೋಡಂಬಿ- 20 ಗ್ರಾಂ
    ಬಾದಾಮಿ- 20 ಗ್ರಾಂ
    ಪಿಸ್ತಾ- 10 ಗ್ರಾಂ
    ಚರೋಲಿ- 10 ಗ್ರಾಂ
    ಖಾರಕ್ (ಒಣಗಿದ ಖರ್ಜೂರ)- 20 ಗ್ರಾಂ
    ಒಣದ್ರಾಕ್ಷಿ- 20 ಗ್ರಾಂ
    ಗಸಗಸೆ ಬೀಜಗಳು- 10 ಗ್ರಾಂ
    ತೆಂಗಿನಕಾಯಿ ತುರಿ- 50 ಗ್ರಾಂ
    ಸಕ್ಕರೆ- 120 ಗ್ರಾಂ
    ಏಲಕ್ಕಿ ಪುಡಿ- 1 ಟೀಸ್ಪೂನ್
    ಕೇಸರಿ- 1 ಚಿಟಿಕೆ

    ಮಾಡುವ ವಿಧಾನ:
    * ಗೋಡಂಬಿ, ಬಾದಾಮಿ, ಪಿಸ್ತಾ ಮತ್ತು ಒಣಗಿದ ಖರ್ಜೂರವನ್ನು ಸಣ್ಣ ಸಣ್ಣ ತುಂಡುಗಳಾಗಿ ಕತ್ತರಿಸಿ. ಒಣದ್ರಾಕ್ಷಿ ಮತ್ತು ಚರೋಲಿ ಹಾಗೇ ಇರಲಿ.
    * ಏಲಕ್ಕಿ ಕಾಳುಗಳನ್ನು ಬಾಣಲೆಯಲ್ಲಿ ಸ್ಲಲ್ಪ ಟೋಸ್ಟ್ ಮಾಡಿ ಪುಡಿಮಾಡಿ. ಉತ್ತಮವಾದ ಸ್ಟ್ರೈನರ್ ಮೂಲಕ ಶೋಧಿಸಿಕೊಳ್ಳಿ.
    * ಬಾಣಲೆಯಲ್ಲಿ 20 ಗ್ರಾಂ ತುಪ್ಪವನ್ನು ಬಿಸಿ ಮಾಡಿ ಮತ್ತು ಎಲ್ಲಾ ಒಣಗಿದ ಹಣ್ಣುಗಳು, ಗಸಗಸೆ ಮತ್ತು ತುರಿದ ತೆಂಗಿನಕಾಯಿಯನ್ನು ಕಡಿಮೆ ಉರಿಯಲ್ಲಿ ಸುಮಾರು 2 ನಿಮಿಷಗಳ ಕಾಲ ಗೋಲ್ಡನ್ ಕಲರ್ ಬರುವವರೆಗ ಹುರಿಯಿರಿ. ನಂತರ ಪ್ಯಾನ್‍ನಿಂದ ತೆಗೆದು ಪಕ್ಕಕ್ಕೆ ಇರಿಸಿ.
    * ಇತ್ತ 20 ಗ್ರಾಂ ಹೆಚ್ಚು ತುಪ್ಪ ಸೇರಿಸಿ ಮತ್ತು ಶ್ಯಾವಿಗೆಯನ್ನು ಸುಮಾರು 4 ನಿಮಿಷಗಳ ಕಾಲ ಫ್ರೈ ಮಾಡಿ.
    * ಈಗ ಅದೇ ಬಾಣಲೆಗೆ ಹಾಲು ಹಾಕಿ ಕುದಿಸಿ. ಒಂದು ಚಿಕ್ಕ ಬಟ್ಟಲಿನಲ್ಲಿ ಸುಮಾರು 2 ಚಮಚ ಉಗುರುಬೆಚ್ಚಗಿನ ಹಾಲನ್ನು ಸ್ಕೂಪ್ ಮಾಡಿ ಒಂದು ಚಿಟಿಕೆ ಕೇಸರಿ ಸೇರಿಸಿ.
    * ಹಾಲು ಕುದಿಯುತ್ತಿದ್ದಂತೆಯೇ ಸೇವಾಯಿ ಮತ್ತು ಹುರಿದ ಒಣ ಹಣ್ಣುಗಳ ಜೊತೆಗೆ ಸಕ್ಕರೆಯನ್ನೂ ಸೇರಿಸಿ. ಹಾಲು ಸ್ವಲ್ಪ ದಪ್ಪವಾಗುವವರೆಗೆ ಎಲ್ಲವನ್ನೂ ಒಟ್ಟಿಗೆ 6 ರಿಂದ 8 ನಿಮಿಷಗಳ ಕಾಲ ಕುದಿಸಿ. ಕುಡಿಯಲು ಸಾಧ್ಯವಾಗುವಷ್ಟರ ಮಟ್ಟಿಗೆ ಕುದಿಸಿ.
    * ನಂತರ ಪುಡಿಮಾಡಿದ ಏಲಕ್ಕಿ ಸೇರಿಸಿ. ಇನ್ನು ಬಾಣಲೆಯಿಂದ ಪಾತ್ರೆಗೆ ತೆಗೆದು ಹಾಕುವ ಸುಮಾರು 2 ನಿಮಿಷಗಳ ಮೊದಲು, ನೆನೆಸಿದ ಕೇಸರಿ ಸೇರಿಸಿ ಸರ್ವ್ ಮಾಡಿ.

  • ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

    ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

    ತುಮಕೂರು: ಅಲ್ಲಾನ (Allah) ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಬಂದಿದೆ. ನಿಮ್ಮ ಆಶೀರ್ವಾದದಿಂದ ನಾನು ಗೃಹಸಚಿವನಾಗಿದ್ದೇನೆ. ಆ ದೇವರ ಆಶೀರ್ವಾದ ಇಲ್ಲದೇ ಇದ್ದರೆ ನಾನು ಶಾಸಕನಾಗುತ್ತಿರಲಿಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ (G.Parameshwara) ಹೇಳಿದ್ದಾರೆ.

    ಗುರುವಾರ ಮುಸ್ಲಿಂ ಭಾಂಧವರ ಬಕ್ರಿದ್ (Bakrid) ಹಬ್ಬದ ಹಿನ್ನೆಲೆಯಲ್ಲಿ ಕೊರಟಗೆರೆ (Koratagere) ಪಟ್ಟಣದ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂ (Muslim) ಬಾಂಧವರಿಗೆ ಶುಭ ಕೋರಿದರು. ಈ ವೇಳೆ ಧಾರ್ಮಿಕ ಮುಖಂಡರು ಪರಮೇಶ್ವರ್ ಅವರಿಗೆ ಟೋಪಿ ಧಾರಣೆ ಮಾಡಿ ಸಿಎಂ ಆಗಲಿ ಎಂದು ಶುಭಹಾರೈಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಪಕ್ಷ ನಾಯಕರ ಶಕ್ತಿ ಪ್ರದರ್ಶನ – ಜುಲೈ 13, 14ಕ್ಕೆ ಸಭೆ

    ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಬಕ್ರಿದ್ ಹಬ್ಬ ತ್ಯಾಗ ಬಲಿದಾನದ ಸಂಕೇತ. ಅಲ್ಲಾ ಬೇರೆ ಬೇರೆ ರೀತಿಯಲ್ಲಿ ಪರೀಕ್ಷೆ ಮಾಡುತ್ತಾನಂತೆ. ತನ್ನ ಮಗನನ್ನೂ ಬಲಿ ಕೊಡಬೇಕು ಎನ್ನುವ ತ್ಯಾಗ ದೊಡ್ಡದು. ರಂಜಾನ್ ವೇಳೆ ಇಲ್ಲಿಗೆ ಬಂದಿದ್ದೆ. ಆಗ ಚುನಾವಣೆ ಇತ್ತು. ಈ ಸಂದರ್ಭ ನಾನು ಬಂದು ಮತ ಕೇಳಿದ್ದೆ. ನನ್ನನ್ನು ಗೆಲ್ಲಿಸಿದ್ದೀರಿ ಎಂದರು. ಇದನ್ನೂ ಓದಿ: ಅಕ್ಕಿಗೆ ಕಲ್ಲು ಹಾಕಿದ್ರಿ, ಈಗ ಹಣ ಕೊಡೋದ್ರಲ್ಲೂ ಜನ್ರ ಮನಸ್ಸು ಕೆಡಿಸ್ಬೇಡಿ: ಹೆಚ್‌ಕೆ ಪಾಟೀಲ್

    ಮಹಮ್ಮದ್ ಇಬ್ರಾಹಿಂ ತನ್ನ ಮಗನನ್ನೇ ಅಲ್ಲಾನಿಗೆ ಬಲಿ ಕೊಟ್ಟಿದ್ದ. ಅಂತಹ ಮಹಾನ್ ಬಲಿದಾನದ ಸಂಕೇತ ಬಕ್ರಿದ್. ಎಲ್ಲರಿಗೂ ಶುಭಕಾಮನೆ ಹೇಳಿದ್ದೇನೆ. ಭಾರತ ಶಾಂತಿ ನಂಬಿದ ದೇಶ. ಸಂವಿಧಾನದಲ್ಲೇ ಅದನ್ನು ಅಳವಡಿಸಿಕೊಂಡಿದ್ದೇವೆ ಎಂದರು. ಈ ಬಾರಿಯ ಚುನಾವಣೆಯಲ್ಲಿ (Election) ಕಾಂಗ್ರೆಸ್‌ಗೆ ಮುಸ್ಲಿಂ ಬಾಂಧವರ ಬಹುಪಾಲು ಮತದ ವಿಚಾರವಾಗಿ ಮಾತನಾಡಿದ ಅವರು, ಎಲ್ಲೋ ಒಂದುಕಡೆ ಮುಸ್ಲಿಮರಿಗೆ ಹಿಂದಿನ ಸರ್ಕಾರದಿಂದ ಆತಂಕ ಇತ್ತು. ಭಯದ ವಾತಾವರಣ ಇತ್ತು. ಅದೆಲ್ಲವನ್ನೂ ಬಿಟ್ಟು ಕಾಂಗ್ರೆಸ್‌ಗೆ ಮತಹಾಕಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯಗೆ ನೋಟಿಸ್

    ಕಾಂಗ್ರೆಸ್ ಜ್ಯಾತ್ಯಾತೀತ ಪಕ್ಷ. ಹಾಗಾಗಿ ಅವರು ನಮ್ಮ ಜೊತೆ ನಿಂತಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ. ಅಭಿವೃದ್ಧಿಯ ಜೊತೆಗೆ ಶಾಂತಿ ಕಾಪಡಬೇಕಿದೆ. ಗೃಹ ಸಚಿವನಾಗಿ ಶಾಂತಿ ಕಾಪಾಡುವ ಕೆಲಸ ಮಾಡುತ್ತೇನೆ. ದ್ವೇಷ ಸಾಧಿಸಲು ಹೋಗುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ – ಯಾವ ದೇವಾಲಯದ ಆದಾಯ, ಖರ್ಚು ಎಷ್ಟು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ʻಸೀತಾ ರಾಮಂʼ ಚಿತ್ರದ ಲುಕ್‌ ಮೂಲಕ ಈದ್‌ ಹಬ್ಬಕ್ಕೆ ಫ್ಯಾನ್ಸ್‌ಗೆ ಶುಭಕೋರಿದ ರಶ್ಮಿಕಾ

    ʻಸೀತಾ ರಾಮಂʼ ಚಿತ್ರದ ಲುಕ್‌ ಮೂಲಕ ಈದ್‌ ಹಬ್ಬಕ್ಕೆ ಫ್ಯಾನ್ಸ್‌ಗೆ ಶುಭಕೋರಿದ ರಶ್ಮಿಕಾ

    ಶ್ಮಿಕಾ ಮಂದಣ್ಣ ಈಗ ಪಂಚಭಾಷಾ ನಟಿಯಾಗಿ ಮಿಂಚ್ತಿದ್ದಾರೆ. ಕನ್ನಡದ `ಕಿರಿಕ್ ಪಾರ್ಟಿ’ ಚಿತ್ರದಿಂದ ವೃತ್ತಿ ಜೀವನ ಪ್ರಾರಂಭಿಸಿದ ರಶ್ಮಿಕಾ ಸದ್ಯ ಪಂಚಭಾಷಾ ನಟಿಯಾಗಿ ಗುರುತಿಸಿಕೊಳ್ತಿದ್ದಾರೆ. ಇದೀಗ ಈದ್ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ರಶ್ಮಿಕಾ ಗಿಫ್ಟ್ ನೀಡಿದ್ದಾರೆ. ಈದ್ ಹಬ್ಬಕ್ಕೆ ಶುಭಕೋರುವ ಮೂಲಕ ತಮ್ಮ ಮುಂದಿನ ಚಿತ್ರ `ಸೀತಾ ರಾಮಂ’ ಲುಕ್ ರಿವೀಲ್ ಮಾಡಿದ್ದಾರೆ.

    ನ್ನಡ, ಸೌತ್ ಸಿನಿಮಾ, ಬಾಲಿವುಡ್‌ನಲ್ಲಿ ನಟಿಸಿದ ಮೇಲೆ ಮಲಯಾಳಂನತ್ತ ರಶ್ಮಿಕಾ ಮುಖ ಮಾಡಿದ್ದಾರೆ. ದುಲ್ಕರ್ ಸಲ್ಮಾನ್‌ಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಸದ್ಯ ಈದ್ ಹಬ್ಬದ ಪ್ರಯುಕ್ತ ಫ್ಯಾನ್ಸ್‌ಗೆ ಗಿಫ್ಟ್ ನೀಡಿದ್ದಾರೆ. ರೆಡ್ ಕಲರ್ ಹಿಜಬ್ ಧರಿಸಿ ಸಲಾಮ್ ಮಾಡಿರುವ ಪೋಸ್ಟರ್ ಶೇರ್ ಮಾಡುವ ಮೂಲಕ ಫ್ಯಾನ್ಸ್‌ಗೆ ರಶ್ಮಿಕಾ ವಿಶ್ ಮಾಡಿದ್ದಾರೆ. ಇದನ್ನೂ ಓದಿ:ಟ್ವೀಟರ್‌ನಲ್ಲಿ ಯಶ್ ಹೆಸರು ಟ್ರೇಂಡಿಂಗ್: ಯಶ್ 19ನೇ ಚಿತ್ರದ ಅಪ್‌ಡೇಟ್ ಇಲ್ಲಿದೆ

    `ಸೀತಾ ರಾಮಂ’ ರಾಘವ ಪುಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿದ್ದು, ದುಲ್ಕರ್ ಸಲ್ಮಾನ್‌ಗೆ ರಶ್ಮಿಕಾ ಮತ್ತು ಮೃಣಾಲ್ ಠಾಕೂರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಸಿನಿಮಾ ಆಗಸ್ಟ್ 5ಕ್ಕೆ ತೆರೆಗೆ ಅಪ್ಪಳಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಈದ್‌ನಲ್ಲಿ 1 ದಿನ ಹಸು ತಿನ್ನದಿದ್ರೆ ನೀವು ಸಾಯಲ್ಲ; ಗೋಹತ್ಯೆ ಮಾಡದೇ ಬಕ್ರೀದ್‌ ಆಚರಿಸೋಣ – ಮುಸ್ಲಿಮರಿಗೆ ಅಜ್ಮಲ್‌ ಕರೆ

    ಈದ್‌ನಲ್ಲಿ 1 ದಿನ ಹಸು ತಿನ್ನದಿದ್ರೆ ನೀವು ಸಾಯಲ್ಲ; ಗೋಹತ್ಯೆ ಮಾಡದೇ ಬಕ್ರೀದ್‌ ಆಚರಿಸೋಣ – ಮುಸ್ಲಿಮರಿಗೆ ಅಜ್ಮಲ್‌ ಕರೆ

    ಗುವಾಹಟಿ: ಈ ಬಾರಿ ಬಕ್ರೀದ್‌ ಆಚರಣೆ ವೇಳೆ ಹಿಂದೂಗಳ ಭಾವನೆಯನ್ನು ಗೌರವಿಸೋಣ. ಗೋವುಗಳ ಹತ್ಯೆ ಮಾಡದಿರೋಣ ಎಂದು ಅಸ್ಸಾಂ ಸಂಸದ ಹಾಗೂ ಆಲ್‌ ಇಂಡಿಯಾ ಯುನೈಟೆಡ್‌ ಡೆಮೊಕ್ರಾಟಿಕ್‌ ಫ್ರಂಟ್‌ (ಎಐಯುಡಿಎಫ್‌) ಮುಖ್ಯಸ್ಥ ಮೌಲಾನಾ ಬದ್ರುದ್ದಿನ್‌ ಅಜ್ಮಲ್‌ ಅವರು ಮುಸ್ಲಿಮರಲ್ಲಿ ಮನವಿ ಮಾಡಿದ್ದಾರೆ.

    ಆರ್‌ಎಸ್‌ಎಸ್‌ನ (ರಾಷ್ಟ್ರೀಯ ಸ್ವಯಂಸೇವಕ ಸಂಘ) ಕೆಲವರು ಹಿಂದೂ ರಾಜ್ ಮಾಡಲು ಪ್ರಯತ್ನಿಸುವ ಮೂಲಕ ಹಿಂದೂಸ್ತಾನವನ್ನು ಕೊನೆಗೊಳಿಸಲು ಬಯಸಿದ್ದಾರೆ. ಅವರ ಕನಸಿನಲ್ಲಿಯೂ ಹಿಂದೂ ರಾಜ್ ಎಂದಿಗೂ ನಿಜವಾಗುವುದಿಲ್ಲ. ಅವರು ಈ ದೇಶದಲ್ಲಿ ಮುಸ್ಲಿಮರು ಮತ್ತು ಹಿಂದೂಗಳ ನಡುವಿನ ಏಕತೆಯನ್ನು ಒಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಕ್ರೀದ್‌ ಆಚರಣೆ; ಪ್ರಾಣಿ ಬಲಿಗೆ ಹಲವು ನಿರ್ಬಂಧ – ಸರ್ಕಾರದ ಮಾರ್ಗಸೂಚಿಯಲ್ಲೇನಿದೆ?

    ಈದ್‌ನಲ್ಲಿ ಒಂದು ದಿನ ಹಸು ತಿನ್ನದಿದ್ದರೆ ನೀವು ಸಾಯುವುದಿಲ್ಲ. ಈ ಹಬ್ಬವನ್ನು ನಾವು ಹಿಂದೂ ಸಹೋದರರೊಂದಿಗೆ ಆಚರಿಸೋಣ. ನಮ್ಮ ಪೂರ್ವಜರೆಲ್ಲರೂ ಹಿಂದೂಗಳು. ಇಸ್ಲಾಂನಲ್ಲಿ ಮೌಲ್ಯಗಳಿರುವುದರಿಂದ ಅವರು ಧರ್ಮಕ್ಕೆ ಬಂದಿದ್ದಾರೆ. ಏಕೆಂದರೆ ಅದು ವಿಶೇಷ ಗುಣಗಳನ್ನು ಹೊಂದಿದೆ. ಇಸ್ಲಾಂ ಇತರ ಧರ್ಮಗಳ ಭಾವನೆಗಳನ್ನು ಗೌರವಿಸುತ್ತದೆ ಎಂದು ತಿಳಿಸಿದ್ದಾರೆ.

    ಸಾಂರ್ಭಿಕ ಚಿತ್ರ

    ಭಾರತ ವೈವಿಧ್ಯಮಯ ಸಮುದಾಯಗಳು, ಜನಾಂಗೀಯ ಗುಂಪುಗಳು ಮತ್ತು ಧರ್ಮಗಳ ಜನರ ದೇಶವಾಗಿದೆ. ಭಾರತದ ಹೆಚ್ಚಿನ ನಿವಾಸಿಗಳು ಸನಾತನ ಮೇಲೆ ನಂಬಿಕೆಯಿಟ್ಟವರು. ಸನಾತನ ಧರ್ಮ, ಹಸು ಪ್ರಾಣಿ ಎಂದು ಗೌರವಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಶಿರಚ್ಛೇದನದ ಬೆದರಿಕೆ – ಯುಪಿಯಲ್ಲಿ ಆರೋಪಿ ಅರೆಸ್ಟ್

    ನೂಪುರ್‌ ಶರ್ಮಾ ವಿವಾದ ಕುರಿತು ಮಾತನಾಡಿ, ಮುಸ್ಲಿಮರು ಈ ಬಗ್ಗೆ ಪ್ರತಿಕ್ರಿಯಿಸಬಾರದು. ಬದಲಿಗೆ, ದೇವರು ನೂಪುರ್ ಶರ್ಮಾ ಅವರಂತಹವರಿಗೆ ಬುದ್ದಿಯನ್ನು ನೀಡಬೇಕೆಂದು ಪ್ರಾರ್ಥಿಸಬೇಕು. ಶಿರಚ್ಛೇದ ಮಾಡುತ್ತೇನೆ ಎನ್ನುವುದು ಮೂರ್ಖತನದ ಪರಮಾವಧಿ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]