Tag: Balaji Manohar

  • ಜನವರಿ 27ಕ್ಕೆ ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ಬಿಡುಗಡೆ

    ಜನವರಿ 27ಕ್ಕೆ ಮಂಸೋರೆ ನಿರ್ದೇಶನದ ‘19.20.21’ ಚಿತ್ರದ ಟ್ರೈಲರ್ ಬಿಡುಗಡೆ

    ವಿಭಿನ್ನ ಶೈಲಿಯ ಸಿನಿಮಾ ಮೂಲಕ ಸಿನಿ ಪ್ರೇಕ್ಷಕರ ಮನಗೆದ್ದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ಮಂಸೋರೆ (Mansore) ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ‘19.20.21’. ಟೈಟಲ್ ಮೂಲಕವೇ ಕ್ಯೂರಿಯಾಸಿಟಿ ಹುಟ್ಟಿಸಿರುವ ಈ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಟೀಸರ್ ಝಲಕ್ ಬಿಡುಗಡೆಯಾಗಿದ್ದು ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ.

    ‘19.20.21’ ಚಿತ್ರದ ಕ್ಯೂರಿಯಾಸಿಟಿ ಹೊತ್ತ ಟೀಸರ್ ಝಲಕ್ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ನಿರ್ದೇಶಕ ಮಂಸೋರೆ ಪ್ರೇಕ್ಷಕರಿಗೆ ಮತ್ತೊಂದು ಪ್ರಬಲವಾದ ವಿಚಾರವನ್ನು ತಮ್ಮದೇ ಆದ ಸಿನಿಮ್ಯಾಟಿಕ್ ಶೈಲಿಯಲ್ಲಿ ಹೇಳ ಹೊರಟಿದ್ದಾರೆ ಅನ್ನೋದಕ್ಕೆ ಟೀಸರ್ ಸಾಕ್ಷಿಯಾಗಿದೆ. ಪ್ರಾಮಿಸಿಂಗ್ ಆಗಿ ಮೂಡಿ ಬಂದಿರೋ ಟೀಸರ್ ಸಿನಿ ಪ್ರೇಕ್ಷಕರಿಂದಲೂ ಮೆಚ್ಚುಗೆಗೆ ಪಾತ್ರವಾಗಿದೆ. ಟೀಸರ್ ನೊಂದಿಗೆ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ರಿವೀಲ್ ಮಾಡಿದ್ದು ಇದೇ ತಿಂಗಳ 27ರಂದು ಟ್ರೇಲರ್ (trailer) ಬಿಡುಗಡೆಯಾಗುತ್ತಿದೆ.  ಇದನ್ನೂ ಓದಿ: ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಹೆಣೆದ ಕಥೆ ಚಿತ್ರದಲ್ಲಿದ್ದು, ಸೋಶಿಯಲ್ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ. ರಂಗಭೂಮಿ ಕಲಾವಿದ ಶೃಂಗ ಬಿ. ವಿ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಳಿದಂತೆ ಬಾಲಾಜಿ ಮನೋಹರ್ (Balaji Manohar), ಸಂಪತ್, ಎಂ.ಡಿ ಪಲ್ಲವಿ (MD Pallavi), ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಚಿತ್ರದಲ್ಲಿದೆ.

    19.20.21’ ಚಿತ್ರವನ್ನು ಯಲ್ಲಾಪುರ, ಧಾರವಾಡ, ಮಂಗಳೂರು, ಕುಂದಾಪುರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಶಿವು ಬಿ. ಕೆ. ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದ್ದು, ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ ‘19.20.21’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಸ್ಯಾಂಡಲ್ ವುಡ್ ಕ್ವೀನ್

    ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಕೊಟ್ಟ ಸ್ಯಾಂಡಲ್ ವುಡ್ ಕ್ವೀನ್

    ಮೋಹಕ ತಾರೆ ನಟಿ ರಮ್ಯಾ ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ತಮ್ಮ ಸಂಸ್ಥೆಯ ಚೊಚ್ಚಲ ನಿರ್ಮಾಣದ ಸಿನಿಮಾದ ಹೊಸ ಹೊಸ ಲುಕ್ ಗಳನ್ನು ಅವರು ರಿಲೀಸ್ ಮಾಡಿದ್ದಾರೆ. ಆಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಮೂಲಕ ನಿರ್ಮಾಣ ಮಾಡುತ್ತಿರುವ ಚೊಚ್ಚಲ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಇದೀಗ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. ವಿಜಯದಶಮಿ ವೇಳೆ ಘೋಷಣೆ ಆಗಿದ್ದ ಈ ಸಿನಿಮಾ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ಮುಗಿಸಿಕೊಂಡಿದೆ.

    ರಾಜ್‌ ಬಿ ಶೆಟ್ಟಿ ಈ ಸಿನಿಮಾ ನಿರ್ದೇಶನ ಮಾಡುವುದರ ಜತೆಗೆ ಮುಖ್ಯಭೂಮಿಕೆಯಲ್ಲಿಯೂ ನಟಿಸಿದ್ದಾರೆ. ಸಿರಿ ರವಿಕುಮಾರ್‌ ನಾಯಕಿಯಾಗಿದ್ದಾರೆ. ಇನ್ನುಳಿದಂತೆ ಬಾಲಾಜಿ ಮನೋಹರ್‌, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆಪಿ ತುಮ್ಮಿನಾಡ್‌, ಗೋಪಾಲ್‌ಕೃಷ್ಣ ದೇಶಪಾಂಡೆ ಇನ್ನುಳಿದ ತಾರಾಗಣದಲ್ಲಿದ್ದಾರೆ. ಇದನ್ನೂ ಓದಿ:ವಿನ್ನರ್‌ ಘೋಷಣೆಗೆ ಕೌಂಟ್‌ಡೌನ್‌, ಯಾರ ಕೈ ಸೇರಲಿದೆ ಬಿಗ್ ಬಾಸ್ ಟ್ರೋಫಿ?

    ಪ್ರವೀಣ್‌ ಶ್ರೀಯಾನ್‌ ಛಾಯಾಗ್ರಹಣ ಮತ್ತು ಸಂಕಲನದ ಜವಾಬ್ದಾರಿ ಹೊತ್ತರೆ, ಮಿಧುನ್‌ ಮುಕುಂದನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಒಂದು ಪ್ರಬುದ್ಧ ಲವ್‌ಸ್ಟೋರಿ. ಒಂದು ಭಾವುಕ ಪ್ರಯಾಣ. ಈ ಭಾವುಕ ಜರ್ನಿ ಹೇಗಿರಲಿದೆ ಎಂಬುದನ್ನು ಹೇಳಲೆಂದೇ ಇತ್ತೀಚೆಗೆ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆ ಆಗಿತ್ತು. ಇದೀಗ ಇದೇ ಚಿತ್ರದ ಒಂದಷ್ಟು ಎಕ್ಸ್‌ಕ್ಲೂಸಿವ್‌ ಫೋಟೋಗಳು ಇಲ್ಲಿವೆ.

    Live Tv
    [brid partner=56869869 player=32851 video=960834 autoplay=true]

  • ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

    ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

    ನ್ನಡ ಚಿತ್ರರಂಗವನ್ನು ತಮ್ಮ ವಿಭಿನ್ನ ಆಲೋಚನೆಗಳ ಮೂಲಕವೇ ಬೆಳಗಿದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಚಿತ್ರರಂಗ ಒಂದೇ ಬಿಂದುವಿನ ಸುತ್ತ ಗಿರಕಿ ಹೊಡೆಯುತ್ತಿದ್ದ ಕಾಲದಲ್ಲಿಯೇ ಹೊಸ ಸಾಧ್ಯತೆಗಳ ಬ್ರಹ್ಮಾಂಡವನ್ನೇ ಬಿಚ್ಚಿಟ್ಟವರು ಪುಟ್ಟಣ್ಣ ಕಣಗಾಲ್. ಇದರೊಂದಿಗೆ ಪರಭಾಷಾ ಚಿತ್ರರಂಗದ ಮಂದಿಯೇ ಬೆರಗಾಗುವಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಕಣಗಾಲರ ಪ್ರಯೋಗಶೀಲತೆಗೆ ಕಥಾ ಸಂಗಮ ಕಿರೀಟವಿದ್ದಂತೆ. ಇದೀಗ ಈಗಿನ ತಲೆಮಾರಿನ ಕ್ರಿಯಾಶೀಲ ನಿರ್ದೇಶಕ ರಿಷಬ್ ಶೆಟ್ಟಿ ಆ ಕಿರೀಟಕ್ಕೆ ಮತ್ತೊಂದು ಗರಿ ಮೂಡಿಸುವಂತಹ ಪ್ರಯತ್ನ ಮಾಡಿದ್ದಾರೆ. ಅದರ ಫಲವಾಗಿ ರೂಪುಗೊಂಡಂತಿರುವ ಹೊಸ `ಕಥಾ ಸಂಗಮ’ ಡಿಸೆಂಬರ್ 6ರಂದು ಬಿಡುಗಡೆಯಾಗುತ್ತಿದೆ.

    ಶ್ರೀದೇವಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ಹೆಚ್.ಕೆ ಪ್ರಕಾಶ್, ಪ್ರದೀಪ್ ಎನ್ ಆರ್ ಮತ್ತು ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ ಕಥಾ ಸಂಗಮವೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅಷ್ಟಕ್ಕೂ ರಿಷಬ್ ಶೆಟ್ಟಿ ಒಂದು ಸಿನಿಮಾ ನಿರ್ದೇಶನಕ್ಕಿಳಿದರೆಂದರೆ ಅಲ್ಲೇನೋ ಹೊಸತನ ಇದ್ದೇ ಇರುತ್ತದೆ ಎಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಎಂಬ ಚಿತ್ರವನ್ನವರು ರೂಪಿಸಿದ್ದ ರೀತಿಯೇ ಅವರೆಂತಹ ಭಿನ್ನ ನಿರ್ದೇಶಕ ಎಂಬುದಕ್ಕೆ ಸ್ಪಷ್ಟ ಸಾಕ್ಷಿ. ಈ ಕಥಾ ಸಂಗಮದಲ್ಲಂತೂ ಅವರು ಕನ್ನಡ ಚಿತ್ರರಂಗದ ಘನತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಂತಹ ಪ್ರಯತ್ನ ಮಾಡಿದ್ದಾರೆ. ಎಪ್ಪತ್ತರ ದಶಕದಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ್ದ ಚಿತ್ರದಲ್ಲಿ ನಾಲ್ಕು ಕಥೆಗಳನ್ನು ಹೇಳಿದ್ದರು. ರಿಷಬ್ ಶೆಟ್ಟರು ಈ ಕಥಾ ಸಂಗಮದಲ್ಲಿ ಏಳು ಕಥೆಗಳನ್ನು ಹೇಳಿದ್ದಾರೆ. ಇಲ್ಲಿ ಏಳು ಜನ ನಿರ್ದೇಶಕರು, ಏಳು ಮಂದಿ ಛಾಯಾಗ್ರಾಹಕರು ಮತ್ತು ಏಳು ಜನ ಸಂಗೀತ ನಿರ್ದೇಶಕರು ಸೇರಿ ಈ ಸಿನಿಮಾವನ್ನು ನಿರ್ವಹಿಸಿದ್ದಾರೆ. ರಿಷಬ್ ಶೆಟ್ಟಿ ಅದರ ಸೂತ್ರ ಹಿಡಿದು ಮುನ್ನಡೆಸಿದ್ದಾರೆ. ಈ ಸಿನಿಮಾಗೀಗ ಸೆನ್ಸಾರ್ ಮಂಡಳಿ ಕಡೆಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

    ಈ ಮೂಲಕ ಒಂದೇ ಸಿನಿಮಾದಲ್ಲಿ ಏಳು ಸಿನಿಮಾ ನೋಡುವ ಸದಾವಕಾಶ ಪ್ರೇಕ್ಷಕರಿಗೆ ಸಿಕ್ಕಿದೆ. ಕ್ರೈಂ, ಸಸ್ಪೆನ್ಸ್ ಥ್ರಿಲ್ಲರ್ ಸೇರಿದಂತೆ ಹಲವು ಬಗೆಯ ಕಥೆಗಳನ್ನು ಒಂದೇ ಸಿನಿಮಾದಲ್ಲಿ ಕಣ್ತುಂಬಿಕೊಳ್ಳುವ ಅಪರೂಪದ ಕ್ಷಣಗಳು ಹತ್ತಿರವಾಗುತ್ತಿವೆ. ನಿರ್ದೇಶಕ ರಿಷಬ್ ಶೆಟ್ಟಿ ಸದಾ ಸಿನಿಮಾ ಧ್ಯಾನದಲ್ಲಿಯೇ ತಲ್ಲೀನರಾಗಿರುವವರು. ಕಥಾ ಸಂಗಮದಂತಹ ಗುಂಗೀಹುಳ ಅವರ ಮನಸ್ಸು ಹೊಕ್ಕು ಕೆಲಸ ಶುರುವಿಟ್ಟುಕೊಂಡಿದ್ದದ್ದು ವರ್ಷಗಳ ಹಿಂದೆ. ನಂತರ ಪಟ್ಟು ಬಿಡದೇ ಏಳು ಮಂದಿ ಪ್ರತಿಭಾವಂತರನ್ನು ಹುಡುಕಿ, ಚೆಂದದ ಕಥೆಗಳನ್ನು ಆಯ್ಕೆ ಮಾಡಿಕೊಂಡು ಈ ರಿಸ್ಕಿ ಸಾಹಸಕ್ಕೆ ಕೈ ಹಾಕಿದ್ದರು. ಪುಟ್ಟಣ್ಣ ಕಣಗಾಲರ ಸ್ಫೂರ್ತಿಯಿಂದಲೇ ತಯಾರಾದ ಈ ಸಿನಿಮಾವನ್ನು ಅವರಿಗೇ ಅರ್ಪಿಸುವ ಮೂಲಕ ಗೌರವ ತೋರಿಸಲಾಗಿದೆ. ಕಣಗಾಲರ ಕೀರ್ತಿಯನ್ನು ಮತ್ತಷ್ಟು ಮಿರುಗಿಸುವಂತೆಯೇ ಈ ಸಿನಿಮಾ ಮೂಡಿ ಬಂದಿದೆ ಅನ್ನೋದು ಈಗಾಗಲೇ ಸ್ಪಷ್ಟಗೊಂಡಿದೆ.

    ಕಥಾ ಸಂಗಮದ ಮೂಲಕ ಕಿರಣ್ ರಾಜ್ ಕೆ, ಶಶಿಕುಮಾರ್ ಪಿ, ಚಂದ್ರಜಿತ್ ಎಲಿಯಪ್ಪ, ರಾಹುಲ್ ಪಿ.ಕೆ, ಜೈ ಶಂಕರ್, ಕರಣ್ ಅನಂತ್, ಜಮದಗ್ನಿ ಮನೋಜ್ ಎಂಬ ಏಳು ಮಂದಿ ಪ್ರತಿಭಾವಂತ ನಿರ್ದೇಶಕರನ್ನು ರಿಷಬ್ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ರಿಷಬ್ ಶೆಟ್ಟಿ, ಹರಿಪ್ರಿಯಾ, ರಾಜ್ ಬಿ ಶೆಟ್ಟಿ, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ, ಯಜ್ಞಾ ಶೆಟ್ಟಿ, ಪ್ರಕಾಶ್ ಬೆಳವಾಡಿ, ಬಾಲಾಜಿ ಮನೋಹರ್ ಮುಂತಾದವರು ಈ ಏಳೂ ಕಥೆಗಳ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಏಳೂ ಕಥೆಗಳ ಪ್ರತೀ ಪಾತ್ರಗಳೂ ಅದೆಷ್ಟು ಭಿನ್ನವಾಗಿವೆ ಅನ್ನೋದಕ್ಕೆ ಮೊನ್ನೆ ಬಿಡುಗಡೆಗೊಂಡಿರೋ ಟ್ರೇಲರ್‍ನಲ್ಲಿ ಸಾಕ್ಷಿಗಳಿವೆ. ವಾರದೊಪ್ಪತ್ತಿನಲ್ಲಿಯೇ ಕಥಾ ಸಂಗಮ ಪ್ರೇಕ್ಷಕರೆದುರು ತೆರೆದುಕೊಳ್ಳಲಿದೆ.

     

  • ತಡ ಮಾಡುತ್ತಲೇ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಶ್ರೀಮನ್ನಾರಾಯಣ!

    ತಡ ಮಾಡುತ್ತಲೇ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಶ್ರೀಮನ್ನಾರಾಯಣ!

    ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಚಿತ್ರ ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗುತ್ತಿದೆ. ರಕ್ಷಿತ್ ಶೆಟ್ಟಿ ಅವರ ಹುಟ್ಟುಹಬ್ಬದಂದು ಬಿಡುಗಡೆಯಾಗಿದ್ದ ಟೀಸರ್ ಮೂಲಕ ಇದರ ಕಥೆಯ ಮಜಾ ಏನೆಂಬುದು ಎಲ್ಲರಿಗೂ ತಿಳಿದು ಹೋಗಿದೆ. ಆದರೆ ಈ ಚಿತ್ರ ಸುದೀರ್ಘ ಕಾಲವನ್ನು ತೆಗೆದುಕೊಂಡು ಚಿತ್ರೀಕರಣಗೊಂಡಿದೆ, ತಡವಾಗಿದೆ ಎಂಬೆಲ್ಲ ಕೊರಗು ಅಭಿಮಾನಿಗಳಲ್ಲಿ ಇದ್ದೇ ಇದೆ. ಆದರೆ ಹೀಗೆ ತಡ ಮಾಡಿಯೇ ಶ್ರೀಮನ್ನಾರಾಯಣ ಸಾರ್ವಕಾಲಿಕ ದಾಖಲೆಯೊಂದರ ರೂವಾರಿಯಾಗಿದ್ದಾನೆ!

    ಅಷ್ಟಕ್ಕೂ ಅವನೇ ಶ್ರೀಮನ್ನಾರಾಯಣ ಚಿತ್ರ ಇಷ್ಟೊಂದು ತಡವಾಗಿ ರೂಪುಗೊಳ್ಳಲು ಕಾರಣವೇನು ಅಂತೊಂದು ಪ್ರಶ್ನೆ ಹಾಗೇ ಉಳಿದು ಹೋಗಿತ್ತು. ಇದಕ್ಕೆ ಉತ್ತರ ಹುಡುಕುತ್ತಾ ಹೋದರೆ ಮಜವಾದ ಉತ್ತರಗಳೇ ಎದುರುಗೊಳ್ಳುತ್ತವೆ!

    ಅಂದಹಾಗೆ ಅವನೇ ಶ್ರೀಮನ್ನಾರಾಯಣ ಚಿತ್ರದ ಕಥೆ ಎಂಬತ್ತರ ದಶಕದಲ್ಲಿ ನಡೆಯುವಂಥಾದ್ದೆಂಬ ಸುಳಿವು ಈಗಾಗಲೇ ಸಿಕ್ಕಿದೆ. ಈ ಕಾಲ ಘಟ್ಟವನ್ನು ಮರು ಸೃಷ್ಟಿಸೋದೇನು ಸಲೀಸಿನ ಕೆಲಸವಲ್ಲ. ಅದನ್ನು ಮತ್ತೆ ಸೃಷ್ಟಿಸೋದಕ್ಕಾಗಿ ಚಿತ್ರತಂಡ ಭಾರೀ ರಿಸ್ಕು ತೆಗೆದುಕೊಂಡಿದೆ. ಸಾಮಾನ್ಯವಾಗಿ ಒಂದು ಚಿತ್ರಕ್ಕೆ ಎರಡ್ಮೂರು ಸೆಟ್ ಹಾಕಿದರೆ ಅದೇ ಹೆಚ್ಚು. ಆದರೆ ಅವನೇ ಶ್ರೀಮನ್ನಾರಾಯಣ ಚಿತ್ರದ ಬಹುಪಾಲು ಚಿತ್ರೀಕರಣ ಸೆಟ್‍ನಲ್ಲಿಯೇ ನಡೆದಿದೆ. ಇದಕ್ಕೆಂದೇ ಬರೋಬ್ಬರಿ ಇಪ್ಪತ್ತು ಸೆಟ್‍ಗಳನ್ನು ಹಾಕಲಾಗಿತ್ತಂತೆ!

    ಹೀಗೆ ಸೆಟ್ ಹಾಕಿ ಚಿತ್ರೀಕರಿಸಿರೋದರಿಂದಲೇ ಇಡೀ ಚಿತ್ರ ರಿಚ್ ಆಗಿ ಮೂಡಿ ಬಂದಿದೆಯಂತೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ ತಮಿಳು, ಹಿಂದಿ, ತೆಲುಗು, ಮಲೆಯಾಳಂನಲ್ಲಿಯೂ ಬಿಡುಗಡೆಯಾಗಲಿದೆ. ಇನ್ನುಳಿದಂತೆ ಈ ಚಿತ್ರಕ್ಕೆ ಅತೀ ಹೆಚ್ಚು ದಿನ ಚಿತ್ರೀಕರಣಗೊಂಡ ಚಿತ್ರವೆಂಬ ಗರಿಯೂ ಮೂಡಿಕೊಂಡಿದೆ. ಅವನೇ ಶ್ರೀಮನ್ನಾರಾಯಣಕ್ಕಾಗಿ ಇನ್ನೂರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಎಂಭತ್ತರ ದಶಕವನ್ನು ಮತ್ತೆ ಸೃಷ್ಟಿಸೋ ಕಾಯಕ ಈ ಇನ್ನೂರು ದಿನವೂ ನೆರವೇರಿದೆ. ಹೀಗೆ ತಡ ಮಾಡಿಕೊಂಡೇ ಈ ಚಿತ್ರ ದಾಖಲೆಯ ರೂವಾರಿಯಾಗಿ ಬಿಟ್ಟಿದೆ.