Tag: Balanna

  • Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ

    Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ

    ನ್ನಡ ಸಿನಿಮಾ ರಂಗದ ಮೇರುನಟ ಡಾ.ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗುತ್ತಾ? ಇಂತಹ ಆತಂಕದ ಮಾಹಿತಿಯನ್ನು ಡಾ.ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಹೊರಹಾಕಿದ್ದಾರೆ. ಈ ಕುರಿತು ಅವರು ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ಯಾವುದೇ ಕಾರಣಕ್ಕೂ ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲಿರುವ ಯಜಮಾನರ (ವಿಷ್ಣುವರ್ಧನ್) ಸಮಾಧಿಯನ್ನು ನೆಲಸಮ ಮಾಡುವುದಕ್ಕೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.

    ಅಭಿಮಾನ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಯ ಜಾಗದ ಕುರಿತು ಕಳೆದ ಹದಿಮೂರು ವರ್ಷಗಳಿಂದ ವಿವಾದ ಕೋರ್ಟ್ ನಲ್ಲಿದೆ. ಹಾಗಾಗಿ ಹಿರಿಯ ನಟ ಬಾಲಣ್ಣ ಕುಟುಂಬ ಹಾಗೂ ವಿಷ್ಣು ಅಭಿಮಾನಿಗಳ ನಡುವೆ ತಿಕ್ಕಾಟವೂ ಹಲವು ವರ್ಷಗಳಿಂದ ನಡೆಯುತ್ತಾ ಬಂದಿದೆ. ಕೋರ್ಟ್ ನಲ್ಲಿರುವ ಕೇಸ್ ಅಂತಿಮ ಹಂತಕ್ಕೆ ತಲುಪಿದ್ದು, ಬಾಲಣ್ಣ ಕುಟುಂಬದವರು ವಿಷ್ಣು ಸಮಾಧಿಯನ್ನು ನೆಲಸಮ ಮಾಡುವಂತೆ ಮಾನ್ಯ ನ್ಯಾಯಾಲಯಕ್ಕೆ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಷಯವನ್ನೇ ವೀರಕಪುತ್ರ ಶ್ರೀನಿವಾಸ್ ತಮ್ಮ ವಿಡಿಯೋದಲ್ಲಿ ಹಂಚಿಕೊಂಡಿದ್ದಾರೆ.

    ವೀರಕಪುತ್ರ ಶ್ರೀನಿವಾಸ್ ವಿಡಿಯೋದಲ್ಲಿ ಹೇಳಿದಂತೆ, ‘ಬಾಲಣ್ಣ ಕುಟುಂಬದವರಾದ ಕಾರ್ತಿಕ್ ಯಜಮಾನರ ಪುಣ್ಯಭೂಮಿಗೆ ಸಾಕಷ್ಟು ತೊಂದರೆ ಕೊಡುತ್ತಿದ್ದಾರೆ. ವಿಷ್ಣುವರ್ಧನ್ ಕುಟುಂಬದವರಿಗೆ ಈ ಜಾಗವೇ ಇಷ್ಟವಿಲ್ಲವೆಂದು ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅಭಿಮಾನಿಗಳು ಪುಣ್ಯಭೂಮಿಗೆ ಕಾಲಿಡದಂತೆ ಪೊಲೀಸ್ ಠಾಣೆಗೆ ದೂರು ನೀಡುತ್ತಾರೆ. ಇಲ್ಲಿಗೆ ನೂರು ಜನರೂ ಬರುವುದಿಲ್ಲ ಎಂದು ಸುಳ್ಳುಗಳನ್ನು ಹರಡುತ್ತಿದ್ದಾರೆ. ಹೀಗೆಯೇ ಸುಳ್ಳು ಹೇಳಿದರೆ, ನಾವೂ ಕೂಡ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಹಾಗಂತ ಅಭಿಮಾನ ಸ್ಟುಡಿಯೋದ ಜಾಗ, ಅವರ ಪಿತ್ರಾರ್ಜಿತ ಆಸ್ತಿಲ್ಲ. ಸರಕಾರ ನೀಡಿದ್ದು. ಈ ಕುರಿತು ನಾವೂ ಹೋರಾಟ ಮಾಡುತ್ತೇವೆ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

    ಮುಂದುವರೆದು ಮಾತನಾಡಿರುವ ಶ್ರೀನಿವಾಸ್, ‘ವಿಷ್ಣುವರ್ಧನ್ ಪುಣ್ಯಭೂಮಿಗೆ ಕೇಳುತ್ತಿರುವುದು ಕೇವಲ ಹತ್ತು ಗುಂಟೆ ಜಾಗ. ಈ ಹಿಂದೆ ಬಾಲಣ್ಣ ಕುಟುಂಬದವರು ಜಿಲ್ಲಾಧಿಕಾರಿಗಳ ಎದುರು ಹತ್ತು ಗುಂಟೆ ಜಾಗ ಕೊಡುವುದಾಗಿ ಹೇಳಿದ್ದರು. ಪತ್ರವನ್ನೂ ಕೊಟ್ಟಿದ್ದರು. ಈಗ ಬೇರೆ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ನಾವು ಪುಣ್ಯಭೂಮಿಯನ್ನು ಉಳಿಸಿಕೊಳ್ಳಲು ಎಂತಹ ಹೋರಾಟಕ್ಕೂ ಸಿದ್ಧ. ಈ ಕುರಿತು ಬೃಹತ್ ಪ್ರತಿಭಟನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ’ ಎಂದು ಹೇಳಿದ್ದಾರೆ.

    ಇದೇ ವಿಷಯವಾಗಿ ವಿಷ್ಣುವರ್ಧನ್ ಅಳಿಯ ಅನಿರುದ್ಧ ಕೂಡ ವಿಡಿಯೋ ಸಂದೇಶವೊಂದನ್ನು ಕಳುಹಿಸಿದ್ದು, ‘ಅಭಿಮಾನ ಸ್ಟುಡಿಯೋದಲ್ಲೇ ಸಮಾಧಿ ಇರಬೇಕು ಎನ್ನುವುದು ನಮ್ಮ ಕುಟುಂಬದ ಆಸೆ. ಅಭಿಮಾನಿಗಳಿಗೆ ಪೂಜೆ ಸಲ್ಲಿಸಲು, ಅಲ್ಲಿಗೆ ಭೇಟಿ ನೀಡಲು ಬಾಲಣ್ಣ ಕುಟುಂಬ ಅನುಮತಿ ಕೊಡಬೇಕು. ಯಾವುದೇ ಕಾರಣಕ್ಕೂ ನೆಲಸಮ ಮಾಡುವಂತಹ ನಿರ್ಧಾರ ತಗೆದುಕೊಳ್ಳಬಾರದು. ನಮ್ಮ ಕುಟುಂಬ ಕೂಡ ಈ ವಿಷಯದಲ್ಲಿ ಅಭಿಮಾನಿಗಳ ಜೊತೆ ಇರುತ್ತದೆ’ ಎಂದು ಅವರು ಹೇಳಿದ್ದಾರೆ.

    ಅಭಿಮಾನಿ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿಯನ್ನು ಉಳಿಸಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಮತ್ತು ವಿಷ್ಣುವರ್ಧನ್ ಕುಟುಂಬ ಪಣತೊಟ್ಟಿದೆ. ಆದರೆ, ಬಾಲಣ್ಣ ಕುಟುಂಬ ಇದಕ್ಕೆ ಅವಕಾಶ ಕೊಡುತ್ತಾ? ಮತ್ತು ಕೋರ್ಟ್ ಈ ಕುರಿತು ಯಾವ ರೀತಿಯ ತೀರ್ಪು ಕೊಡಬಹುದು ಎನ್ನುವ ಕುತೂಹಲ ಎಲ್ಲರದ್ದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಾ.ವಿಷ್ಣುವರ್ಧನ್ ಅವರಿಗೆ ನಟ ಬಾಲಣ್ಣ ಕುಟುಂಬ ಮಾಡಿದ ಅವಮಾನ ಬಿಚ್ಚಿಟ್ಟ ಅನಿರುದ್ಧ

    ಡಾ.ವಿಷ್ಣುವರ್ಧನ್ ಅವರಿಗೆ ನಟ ಬಾಲಣ್ಣ ಕುಟುಂಬ ಮಾಡಿದ ಅವಮಾನ ಬಿಚ್ಚಿಟ್ಟ ಅನಿರುದ್ಧ

    ಹಿರಿಯ ನಟ ಬಾಲಣ್ಣ ಅವರ ಕುಟುಂಬ ಡಾ.ವಿಷ್ಣುವರ್ಧನ್, ಭಾರತಿ ವಿಷ್ಣುವರ್ಧನ್ ಅವರನ್ನು ಅವಮಾನಿಸಿತಾ? ಹೌದು ಎನ್ನುತ್ತಾರೆ ನಟ ಹಾಗೂ ವಿಷ್ಣುವರ್ಧನ್ ಅಳಿಯ ಅನಿರುದ್ಧ. ಈ ಕುರಿತು ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ಉದ್ಘಾಟನೆ ಆಗುತ್ತಿರುವ ಈ ಹೊತ್ತಿನಲ್ಲಿ ಅವರು ಹಾಕಿದ ಪೋಸ್ಟ್ ಸಂಚಲನ ಮೂಡಿಸಿದೆ. ಪರ ವಿರೋಧಕ್ಕೂ ಕಾರಣವಾಗಿದೆ.

    ಅನಿರುದ್ಧ ಅವರು ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆಯುತ್ತಾ, ‘ಅಭಿಮಾನ ಸ್ಟುಡಿಯೋದಲ್ಲಿ ಅಭಿಮಾನಿಗಳು ಪೂಜೆ ಇತ್ಯಾದಿ ಮಾಡಿಕೊಂಡು ಬರಲಿ, ನಮಗೆ ಯಾವತ್ತೂ ಅಭ್ಯಂತರ ಇರಲಿಲ್ಲ, ಇರೋದೂ ಇಲ್ಲ. ಇದ್ದಿದ್ದಿರೆ ಅಭಿಮಾನಿಗಳಿಗೆ ಇಷ್ಟು ವರ್ಷ ಪೂಜೆ ಇತ್ಯಾದಿ ಮಾಡಿಕೊಂಡು ಬರೋದಕ್ಕೆ ಅವಕಾಶಾನೇ ಸಿಗುತ್ತಿರಲಿಲ್ಲ, ಹಾಗೇನೆ ನಾವು ಯಾವತ್ತೂ ಕೂಡ ಸಮಾಧಿ ತೆರವು ಆಗೋದಕ್ಕೆ ಬಯಸಲಿಲ್ಲ, ಬಯಸೋದೂ ಇಲ್ಲ. ಆದರೆ ಬಾಲಣ್ಣರವರ ಕುಟುಂಬದವರ ಅಪೇಕ್ಷೆ ಈಗ ಏನು? 10 ಗುಂಟೆ ಅವತ್ತು ಯಾಕೆ ಕೊಡಲಿಲ್ಲ? ಆರೂವರೆ ವರ್ಷಗಳು ಕೇಳಿ, ಕೇಳಿ, ಎಷ್ಟೇ, ಹೇಗೆೇ ಪ್ರಯತ್ನ ಪಟ್ಟರೂ, ಆಗ ಅವರು ಮನಸ್ಸು ಮಾಡಲಿಲ್ಲ, ಅಪ್ಪಾವರನ್ನ, ಅಮ್ಮಾವರನ್ನ ಅವಮಾನ ಮಾಡಿದ್ದಾರೆ. ಕೊನೆಗೆ ಸರಕಾರನೇ ಬೇರೆ ಕಡೆ ಮಾಡಿ ಅಂತ ಹೇಳಿದ ಮೇಲೆ ನಾವು ನಿರ್ಧಾರ ತೆಗೆದುಕೊಳ್ಳಬೇಕಾಯಿತು. ತುಂಬಾ ನೊಂದುಕೊಂಡಿದ್ದೇವೆ, ಸಾಕಷ್ಟು ಸಂಘರ್ಷಗಳನ್ನು ಎದುರಿಸಿದ್ದೇವೆ, ಹೋರಾಡಿದ್ದೇವೆ. ನಮ್ಮ ಪ್ರಯತ್ನಗಳ ಬಗ್ಗೆ, ಶ್ರಮ, ಶ್ರದ್ಧೆ, ಪ್ರೀತಿ, ಕಾಳಜಿ ಬಗ್ಗೆ ದಯಮಾಡಿ ಪ್ರಶ್ನೆಗಳನ್ನು ಎತ್ತಬೇಡಿ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮಕ್ಕಾಗಿ ಮತ್ತೆ ಜೊತೆಯಾದ ಬಿಗ್ ಬಾಸ್ ಸ್ಪರ್ಧಿಗಳು

    ಮುಂದುವರೆದು ಬರೆಯುತ್ತಾ, ‘ಸರಕಾರ ಈಗಾಗಲೆ ಮೈಸೂರಲ್ಲಿ ಸ್ಮಾರಕ ಮಾಡಾಗಿದೆ…ಅಲ್ಲಿ ಅಪ್ಪಾವರ ಅಸ್ಥಿಯನ್ನು ಪೂಜಾವಿಧಿಯಿಂದ ಇಟ್ಟು ಅದರ ಮೇಲೆ ಪ್ರತಿಮೆಯನ್ನು ಸ್ಥಾಪಿಸಿದ್ದೇವೆ…ಇದೇ ತಿಂಗಳು 29ಕ್ಕೆ, ಭಾನುವಾರ ಲೋಕಾರ್ಪಣೆ ಆಗಲಿದೆ. ನಾವೂ ಅಲ್ಲಿ ಅತ್ಯಂತ ಶ್ರದ್ಧೆಯಿಂದ ನಮ್ಮ ನಮನಗಳನ್ನು ಸಲ್ಲಿಸುತ್ತೆವೆ. ಅಭಿಮಾನಿಗಳೇ! ಈ ಸ್ಮಾರಕ ನಿಮಗಾಗಿ, ನಿಮಗೋಸ್ಕರ, ಯಾವುದೇ ಕಹಿ ಭಾವನೆಗಳು ಇಟ್ಟುಕೊಳ್ಳದೇ, ಬಂದು ಸಂಭ್ರಮಿಸಿ, ಅಪ್ಪಾವರಗೆ ತಮ್ಮ ನಮನಗಳನ್ನು , ಶ್ರದ್ಧಾಂಜಲಿಯನ್ನು ಸಲ್ಲಿಸಿ’ ಎಂದು ಅವರು ಹೇಳಿದ್ದಾರೆ.

    ಡಾ.ವಿಷ್ಣುವರ್ಧನ್ ಅವರ ಸ್ಮಾರಕವೂ ಅಭಿಮಾನಿ ಸ್ಟುಡಿಯೋದಲ್ಲಿಯೇ ಆಗಬೇಕು ಎನ್ನುವುದು ಅಸಂಖ್ಯಾತ ಅಭಿಮಾನಿಗಳ ಆಸೆಯಾಗಿತ್ತು. ಆದರೆ, ಮೈಸೂರಿಗೆ ಅದು ಸ್ಥಳಾಂತರಗೊಂಡಿದೆ. ಈ ಸಂದರ್ಭದಲ್ಲಿ ಸಮಾಧಿಯನ್ನೇ ಕಿತ್ತಹಾಕಬೇಕು ಎಂದು ಬಾಲಣ್ಣ ಕುಟುಂಬಸ್ಥರು ಕೋರ್ಟ್ ಮೊರೆ ಹೋಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಸಮಾಧಿ ಆ ಸ್ಥಳದಲ್ಲಿ ಇರಬೇಕಾ? ಅಥವಾ ಬೇಡವಾ ಎನ್ನುವುದು ನಿರ್ಧಾರವಾಗಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k