Tag: balarama

  • ಕೋಟಿ ಕೋಟಿ ಒಡೆಯ ಅಯೋಧ್ಯೆ ಬಾಲರಾಮ – ಒಂದು ತಿಂಗಳಲ್ಲಿ 25 ಕೋಟಿ ಸಂಗ್ರಹ

    ಕೋಟಿ ಕೋಟಿ ಒಡೆಯ ಅಯೋಧ್ಯೆ ಬಾಲರಾಮ – ಒಂದು ತಿಂಗಳಲ್ಲಿ 25 ಕೋಟಿ ಸಂಗ್ರಹ

    ಅಯೋಧ್ಯೆ: ಬಾಲರಾಮನ ಮಂದಿರಕ್ಕೆ (Ayodhya Ram Mandir)  25 ಕೆಜಿ ಚಿನ್ನ (Gold) ಮತ್ತು ಬೆಳ್ಳಿಯ ಆಭರಣ ಸೇರಿದಂತೆ ಸುಮಾರು 25 ಕೋಟಿ ರೂ. ದೇಣಿಗೆ ಬಂದಿದೆ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

    ಈ ಬಗ್ಗೆ ರಾಮಮಂದಿರ ಟ್ರಸ್ಟ್‌ನ ಅಧಿಕಾರಿ ಪ್ರಕಾಶ್ ಗುಪ್ತಾ ಮಾತನಾಡಿ, 25 ಕೋಟಿ ರೂ. ಮೊತ್ತದಲ್ಲಿ ಚೆಕ್‍ಗಳು, ಡ್ರಾಫ್ಟ್‌ಗಳು ಮತ್ತು ದೇವಸ್ಥಾನದ ಟ್ರಸ್ಟ್‌ನ ಕಚೇರಿಯಲ್ಲಿ ಠೇವಣಿ ಮಾಡಿದ ನಗದು ಮತ್ತು ಪೆಟ್ಟಿಗೆಗಳಲ್ಲಿ ಹಾಕಲಾದ ಕಾಣಿಕೆ ಸೇರಿದೆ. ಇನ್ನೂ ಟ್ರಸ್ಟ್‌ನ ಬ್ಯಾಂಕ್ ಖಾತೆಗಳಲ್ಲಿ ನೇರವಾಗಿ ಮಾಡಿದ ಆನ್‍ಲೈನ್ ವಹಿವಾಟಿನ ಬಗ್ಗೆ ನಮಗೆ ತಿಳಿದಿಲ್ಲ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಜನಸಾಗರ- ರಾಮಲಲ್ಲಾನ ದರ್ಶನಕ್ಕೆ ಓಡೋಡಿ ಬರುತ್ತಿರೋ ಭಕ್ತರು

    ಜನವರಿ 23 ರಿಂದ ಒಟ್ಟು 60 ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆದಿದ್ದಾರೆ. ರಾಮಭಕ್ತರ ಶ್ರದ್ಧೆ ಎಷ್ಟರಮಟ್ಟಿಗಿದೆ ಎಂದರೆ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಬಳಸಲಾಗದಷ್ಟು ಬೆಳ್ಳಿ ಮತ್ತು ಚಿನ್ನದಿಂದ ಮಾಡಿದ ವಸ್ತುಗಳನ್ನು ರಾಮಲಲ್ಲಾಗೆ ದಾನ ಮಾಡುತ್ತಿದ್ದಾರೆ. ಇಷ್ಟಾದರೂ ಭಕ್ತರ ಭಕ್ತಿಯನ್ನು ಪರಿಗಣಿಸಿ ರಾಮಮಂದಿರ ಟ್ರಸ್ಟ್ ಚಿನ್ನಾಭರಣ, ಪಾತ್ರೆ, ಸಾಮಗ್ರಿಗಳನ್ನು ಸ್ವೀಕರಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

    ಇನ್ನೂ ರಾಮನವಮಿಯಂದು 50 ಲಕ್ಷ ಜನ ಭಕ್ತರು ಸೇರುವ ಸಾಧ್ಯತೆ ಇದೆ. ಆ ಸಮಯದಲ್ಲಿ ದೇಣಿಗೆ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇದೆ. ಈ ವೇಳೆ ಭಕ್ತರು ನೀಡಿದ ಕಾಣಿಕೆಯನ್ನು ಎಣಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಾಲ್ಕು ಸ್ವಯಂಚಾಲಿತ ಹೈಟೆಕ್ ಯಂತ್ರಗಳನ್ನು ಸ್ಥಾಪಿಸಿದೆ ಎಂದು ಅವರು ತಿಳಿಸಿದ್ದಾರೆ.

    ರಶೀದಿಗಳನ್ನು ನೀಡಲು ಟ್ರಸ್ಟ್‌ನಿಂದ ಹತ್ತಾರು ಗಣಕೀಕೃತ ಕೌಂಟರ್‌ಗಳನ್ನು ಮಾಡಲಾಗಿದೆ. ರಾಮಮಂದಿರ ಟ್ರಸ್ಟ್‌ನಿಂದ ದೇವಾಲಯದ ಆವರಣದಲ್ಲಿ ಹೆಚ್ಚುವರಿ ಕಾಣಿಕೆ ಪೆಟ್ಟಿಗೆಗಳನ್ನು ಇರಿಸಲಾಗುತ್ತಿದೆ. ಶೀಘ್ರದಲ್ಲೇ ರಾಮಮಂದಿರದ ಆವರಣದಲ್ಲಿ ದೊಡ್ಡ ಮತ್ತು ಸುಸಜ್ಜಿತ ಎಣಿಕೆ ಕೊಠಡಿಯನ್ನು ನಿರ್ಮಿಸಲಾಗುತ್ತದೆ. ಇನ್ನೂ ರಾಮಲಲ್ಲಾಗೆ ಉಡುಗೊರೆಯಾಗಿ ಸ್ವೀಕರಿಸಿದ ಚಿನ್ನ ಮತ್ತು ಬೆಳ್ಳಿ ಆಭರಣಗಳು ಮತ್ತು ಅಮೂಲ್ಯ ವಸ್ತುಗಳ ಮೌಲ್ಯಮಾಪನ ಮತ್ತು ಅವುಗಳ ನಿರ್ವಹಣೆಗೆ ಭಾರತ ಸರ್ಕಾರದ ಟಂಕಸಾಲೆಗೆ ಹಸ್ತಾಂತರಿಸಲಾಗಿದೆ ಎಂದು ರಾಮಮಂದಿರ ಟ್ರಸ್ಟ್‌ನ ಟ್ರಸ್ಟಿ ಅನಿಲ್ ಮಿಶ್ರಾ ಹೇಳಿದ್ದಾರೆ.

    ರಾಮಮಂದಿರದ ದೇಣಿಗೆ, ಕೊಡುಗೆಗಳು, ಚೆಕ್‍ಗಳು, ಡ್ರಾಫ್ಟ್‌ಗಳು ಮತ್ತು ನಗದು ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಎಸ್‍ಬಿಐ ತೆಗೆದುಕೊಳ್ಳುತ್ತದೆ. ದೇಣಿಗೆ ನೀಡಿದ ಹಣವನ್ನು ಪ್ರತಿದಿನ ಎರಡು ಪಾಳಿಗಳಲ್ಲಿ ಎಣಿಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಆಸನಗಳು ಬಹುತೇಕ ಭರ್ತಿ – ಬೆಂಗಳೂರು ಟು ಅಯೋಧ್ಯೆ ವಿಮಾನ ಪ್ರಯಾಣಕ್ಕೆ ಭರ್ಜರಿ ಸ್ಪಂದನೆ

  • ರಾಮ ವಿಗ್ರಹ ಇಂದು ಆಯ್ಕೆ: ಕರ್ನಾಟಕದ ಕಲಾವಿದರ ಕೈಚಳಕ ಗೆಲ್ಲುತ್ತಾ ಮನ..?

    ರಾಮ ವಿಗ್ರಹ ಇಂದು ಆಯ್ಕೆ: ಕರ್ನಾಟಕದ ಕಲಾವಿದರ ಕೈಚಳಕ ಗೆಲ್ಲುತ್ತಾ ಮನ..?

    ಅಯೋಧ್ಯೆ: ನೂತನವಾಗಿ ನಿರ್ಮಾಣವಾಗಿರುವ ಅಯೋಧ್ಯೆಯ ಶ್ರೀರಾಮ ಮಂದಿರದ (Ayodhya Ram Mandir) ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಯಾಗುವ ಮೂರ್ತಿ ಯಾವುದು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ. ಈಗಾಗಲೇ 3 ಮೂರ್ತಿಗಳ ಕೆತ್ತನೆ ಕಾರ್ಯ ಮುಗಿದಿದ್ದು, ಇಂದು ಮತದಾನ ಪ್ರಕ್ರಿಯೆ ಮೂಲಕ ಆಯ್ಕೆ ನಡೆಯಲಿದೆ. ಇದರಲ್ಲಿ ಬಹುಮತ ಸಿಗುವ ಮೂರ್ತಿ ಮಂದಿರದ ಗರ್ಭಗುಡಿ ಸೇರಲಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಸದಸ್ಯರು ಅತ್ಯುತ್ತಮ ಮೂರ್ತಿಯನ್ನು ಆಯ್ಕೆ ಮಾಡಲಿದ್ದಾರೆ.

    ಕರ್ನಾಟಕದ ಇಬ್ಬರು, ರಾಜಸ್ಥಾನದ ಒಬ್ಬರು!: ಶ್ರೀರಾಮನ ಮೂರ್ತಿಯ ಕೆತ್ತನೆಯ ಜವಾಬ್ದಾರಿಯನ್ನು ಮೂವರಿಗೆ ವಹಿಸಲಾಗಿತ್ತು. ಇವರಲ್ಲಿ ಇಬ್ಬರು ಶಿಲ್ಪಿಗಳು ಕರ್ನಾಟಕದವರು, ಇನ್ನೊಬ್ಬರು ರಾಜಸ್ಥಾನದವರು. ಮೈಸೂರಿನ ಅರುಣ್‌ ಯೋಗಿರಾಜ್‌, ಬೆಂಗಳೂರಿನ ಜಿ.ಎಲ್‌ ಭಟ್‌ ಹಾಗೂ ರಾಜಸ್ಥಾನದ ಸತ್ಯನಾರಾಯಣ ಪಾಂಡೆ ಅವರು ಈಗಾಗಲೇ ಮೂರ್ತಿ ಕೆತ್ತನೆ ಕಾರ್ಯ ಮುಗಿಸಿದ್ದಾರೆ. ಈ ಮೂರು ಮೂರ್ತಿಗಳಲ್ಲಿ ಅತ್ಯುತ್ತಮ ವಿನ್ಯಾಸ ಎಂದು ಟ್ರಸ್ಟ್‌ ಸದಸ್ಯರು ಪರಿಗಣಿಸುವ ಒಂದು ಮೂರ್ತಿ ರಾಮಮಂದಿರದ ಗರ್ಭಗುಡಿಯಲ್ಲಿ ಜನವರಿ 22ರಂದು ಪ್ರತಿಷ್ಠಾಪನೆಯಾಗಲಿದೆ. ಇನ್ನುಳಿದ ಎರಡು ಮೂರ್ತಿಯನ್ನು ರಾಮ ದೇಗುಲದ ಆವರಣದಲ್ಲಿಯೇ ಇಡುವುದಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಹೇಳಿದೆ. ಬಿಲ್ಲು ಬಾಣ ಹಿಡಿದಿರುವ ರಾಮನ ಮೂರ್ತಿ ಕೆತ್ತನೆಗೆ 6 ತಿಂಗಳು ಬೇಕಾಯಿತು ಎಂದು ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಹೇಳಿದ್ದಾರೆ.

    5 ವರ್ಷದ ಬಾಲ ರಾಮನ ವಿಗ್ರಹ: 5 ವರ್ಷದ ಬಾಲರಾಮನ ಮುಗ್ಧತೆಯನ್ನು ಬಿಂಬಿಸುವ ವಿಗ್ರಹವನ್ನು ನಿರ್ಮಾಣ ಮಾಡಲು ಹೇಳಿದ್ದೆವು. 51 ಇಂಚು ಎತ್ತರದ ವಿಗ್ರಹದಲ್ಲಿ ದೈವಿಕತೆ ಹಾಗೂ ಮಗುವಿನಂತಹ ಮುಗ್ಧತೆ ಇರುವ ವಿಗ್ರಹವನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡುವುದಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಕಾರ್ಯದರ್ಶಿ ಚಂಪತ್ ರೈ ಹೇಳಿದ್ದರು. ಇದನ್ನೂ ಓದಿ: ಅಯೋಧ್ಯೆಯ ಬಾಲ ರಾಮನ ಮೂರ್ತಿಗೆ ಬಳಸಿದ್ದು ಮೈಸೂರಿನ ಕೃಷ್ಣ ಶಿಲೆ

    ದೇವಾಲಯದ ನಿರ್ಮಾಣ, ಸಿದ್ಧತೆ ಪರಿಶೀಲನೆ : ಶ್ರೀರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ರಾಮಜನ್ಮಭೂಮಿ ಪಥ ಹಾಗೂ ದೇಗುಲ ಸಂಕೀರ್ಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸಂಪೂರ್ಣ ಪರಿಶೀಲನೆ ನಡೆಸಿದರು.

  • ಮೈಸೂರು ದಸರಾ ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ಮೈಸೂರು ದಸರಾ ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

    ನವದೆಹಲಿ: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ (Balarama Elephant) ಭಾನುವಾರ ಸಾವಿಗೀಡಾಯಿತು. ದಸರಾ ಆನೆ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.

    “ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ” ಎಂದು ಮೋದಿ ಕನ್ನಡದಲ್ಲೇ ಟ್ವೀಟ್‌ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

    ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್ ಬಲರಾಮ ಆನೆ (67) ಭಾನುವಾರ ಸಾವನ್ನಪ್ಪಿತು. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿತ್ತು. ಇದರಿಂದ ಆನೆ ಆಹಾರ, ನೀರು ಸೇವಿಸಲು ಆಗದಂತಹ ಸ್ಥಿತಿ ಉಂಟಾಗಿತ್ತು. ಪರಿಣಾಮವಾಗಿ ಬಲರಾಮ ಆನೆ ನಿತ್ರಾಣಗೊಂಡಿತ್ತು. ಆನೆಗೆ ಶಿಬಿರದಲ್ಲೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನೆ ಮೃತಪಟ್ಟಿತು.

    ಬಲರಾಮ ಆನೆ ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಬರೋಬ್ಬರಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಖ್ಯಾತಿ ಗಳಿಸಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಎಂದು ಗಮನ ಸೆಳೆದಿತ್ತು. ಬಲರಾಮ ಆನೆ ಮೇಲೆ ಜನರಲ್ಲಿ ವಿಶೇಷ ಪ್ರೀತಿ ಇತ್ತು. ಇದನ್ನೂ ಓದಿ: ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದ ಮೋದಿ

  • ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

    ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ

    ಮೈಸೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ದಸರಾ (Mysuru Dasara) ಗಜಪಡೆಯ ಮಾಜಿ ಕ್ಯಾಪ್ಟನ್ ಬಲರಾಮ (Balarama Elephant) ಆನೆ (67) ಸಾವನ್ನಪ್ಪಿದೆ.

    ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮ ಆನೆಯ ಬಾಯಿಯಲ್ಲಿ ಹುಣ್ಣಾಗಿತ್ತು. ಇದರಿಂದ ಆನೆ ಆಹಾರ, ನೀರು ಸೇವಿಸಲು ಆಗದಂತಹ ಸ್ಥಿತಿ ಉಂಟಾಗಿತ್ತು. ಪರಿಣಾಮವಾಗಿ ಬಲರಾಮ ಆನೆ ನಿತ್ರಾಣಗೊಂಡಿತ್ತು. ಆನೆಗೆ ಶಿಬಿರದಲ್ಲೇ ಪಶುವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಆನೆ ಮೃತಪಟ್ಟಿದೆ. ಇದನ್ನೂ ಓದಿ: ಕಿಚ್ಚ ಸುದೀಪ್‌ ಕಿಚ್ಚು ಕಾಂಗ್ರೆಸ್‌ ಕಚೇರಿಯನ್ನೇ ಸುಟ್ಟು ಹಾಕ್ತಿದೆ: ಪ್ರತಾಪ್ ಸಿಂಹ

    ಬಲರಾಮ ಆನೆ ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಬರೋಬ್ಬರಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಖ್ಯಾತಿ ಗಳಿಸಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಎಂದು ಗಮನ ಸೆಳೆದಿತ್ತು. ಬಲರಾಮ ಆನೆ ಮೇಲೆ ಜನರಲ್ಲಿ ವಿಶೇಷ ಪ್ರೀತಿ ಇತ್ತು.

  • ದಸರಾ ಆನೆ ಬಲರಾಮನಿಗೆ ಗುಂಡೇಟು – ಫೈರಿಂಗ್‌ ಮಾಡಿದ್ದ ವ್ಯಕ್ತಿ ಬಂಧನ

    ದಸರಾ ಆನೆ ಬಲರಾಮನಿಗೆ ಗುಂಡೇಟು – ಫೈರಿಂಗ್‌ ಮಾಡಿದ್ದ ವ್ಯಕ್ತಿ ಬಂಧನ

    ಮೈಸೂರು: ದಸರಾ (Mysuru dasara) ಆನೆ ಬಲರಾಮನಿಗೆ (Elephant Balarama) ಬಂದೂಕಿನಿಂದ ಗುಂಡು ಹೊಡೆದಿದ್ದ ಜಮೀನೊಂದರ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

    ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್‌ ಎಂಬಾತ ಸಿಂಗಲ್‌ ಬ್ಯಾರಲ್‌ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದ. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು ಹೊಕ್ಕಿ ಗಾಯಗೊಂಡಿತ್ತು. ಇದನ್ನೂ ಓದಿ: ಬಸ್ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಮಚ್ಚು ತೋರಿಸಿದ ಪ್ರಕರಣ – ದಂಪತಿ ವಿರುದ್ಧ ರೌಡಿಶೀಟರ್ ಕೇಸ್ ಹಾಕಿ ಅರೆಸ್ಟ್

    ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಸದ್ಯ ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಲರಾಮ‌ ಚೇತರಿಸಿಕೊಂಡಿದ್ದಾನೆ. ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪದಡಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬಂದೂಕು, ಕಾರ್ಟ್ರಿಜ್‌ನ್ನು ವಶಪಡಿಸಿಕೊಳ್ಳಲಾಗಿದೆ. ಜಮೀನು ಮಾಲೀಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈಗ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

    ಬಲರಾಮ ಆನೆ ಮೈಸೂರು ದಸರಾ ಮಹೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಿತ್ತು. 14 ಬಾರಿ ಚಿನ್ನದ ಅಂಬಾರಿಯನ್ನು ದಸರಾ‌ ಮೆರವಣಿಗೆಯಲ್ಲಿ ಹೊತ್ತಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಹೆಚ್ಚಾಗ್ತಿದೆ ನಕಲಿ ವೈದ್ಯರ ಹಾವಳಿ – ಸಾವಿರಕ್ಕೂ ಹೆಚ್ಚು ಡೂಪ್ಲಿಕೇಟ್ ಡಾಕ್ಟರ್ಸ್!

    Live Tv
    [brid partner=56869869 player=32851 video=960834 autoplay=true]