Tag: Balehonnur Police Station

  • ಮಲೆನಾಡಿನಲ್ಲಿ ಮಳೆಗೆ 4ನೇ ಬಲಿ – ಮರ ಬಿದ್ದು ವ್ಯಕ್ತಿ ಸಾವು

    ಮಲೆನಾಡಿನಲ್ಲಿ ಮಳೆಗೆ 4ನೇ ಬಲಿ – ಮರ ಬಿದ್ದು ವ್ಯಕ್ತಿ ಸಾವು

    ಚಿಕ್ಕಮಗಳೂರು: ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಾವಿನ ಸಂಖ್ಯೆ 4ಕ್ಕೇರಿದೆ. ಬೈಕ್‌ನಲ್ಲಿ ಹೋಗುತ್ತಿದ್ದಾಗ ಮರಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ಎನ್.ಆರ್.ಪುರ (NR Pura) ತಾಲೂಕಿನ ಎಲೆಕಲ್ ಘಾಟಿ ಬಳಿ ನಡೆದಿದೆ.

    ಮೃತ ವ್ಯಕ್ತಿಯನ್ನು ಬಾಳೆಹೊನ್ನೂರು (Balehonnur) ಸಮೀಪದ ಬಿಳುಕೊಪ್ಪ (Bilukoppa) ಮೂಲದ ಅನಿಲ್ ಪಾಯ್ಸ್ (55) ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ಪ್ರಭಾಸ್ ನಟನೆಯ ‘ದಿ ರಾಜಾಸಾಬ್’ ಚಿತ್ರದ ಟೀಸರ್ ಬಿಡುಗಡೆ

    ಮೃತ ಅನಿಲ್ ಬೈಕ್‌ನಲ್ಲಿ ಬಾಳೆಹೊನ್ನೂರಿಗೆ ಹೋಗುತ್ತಿದ್ದರು. ಈ ವೇಳೆ ಎಲೆಕಲ್ ಘಾಟಿ ಬಳಿ ಹೋಗುವಾಗ ಭಾರೀ ಗಾಳಿ-ಮಳೆಗೆ ಮರ ಬಿದ್ದಿದ್ದು, ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಬಾಳೆಹೊನ್ನೂರು ಪಿಎಸ್‌ಐ ರವೀಶ್ ಭೇಟಿ ನೀಡಿ, ಅಗ್ನಿಶಾಮಕ ವಾಹನದಲ್ಲೇ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಿದ್ದರು. ಆದರೆ ತಲೆಗೆ ಭಾರೀ ಪೆಟ್ಟು ಬಿದ್ದ ಪರಿಣಾಮ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

    ಈ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೂ ಮುನ್ನ ಸಿಡಿಲು ಬಡಿದು ಇಬ್ಬರು ಹಾಗೂ ಮರಬಿದ್ದು ಓರ್ವ ಸಾವನ್ನಪ್ಪಿದ್ದರು.ಇದನ್ನೂ ಓದಿ: ಶಾಲಾ ವಾಹನಗಳಲ್ಲಿ ನಿಮ್ಮ ಮಕ್ಕಳನ್ನು ಕಳಿಸೋ ಮುನ್ನ ಎಚ್ಚರ!

  • ಚಿಕ್ಕಮಗಳೂರು | ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ವ್ಯಕ್ತಿ ಆತ್ಮಹತ್ಯೆ

    ಚಿಕ್ಕಮಗಳೂರು | ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿ ವ್ಯಕ್ತಿ ಆತ್ಮಹತ್ಯೆ

    – ಪುತ್ರಿ ಬಳಿ ಅಮ್ಮ ಎಲ್ಲಿ ಎಂದು ಕೇಳಿದಕ್ಕೆ ಮನನೊಂದು ಕೃತ್ಯ

    ಚಿಕ್ಕಮಗಳೂರು: ಶಾಲೆಯಲ್ಲಿ ಮಗಳ ಜೊತೆ ಅಮ್ಮ ಎಲ್ಲಿ ಎಂದು ಕೇಳುತ್ತಾರೆ ಎಂದು ಮನನೊಂದ ವ್ಯಕ್ತಿಯೊಬ್ಬ ತನ್ನ 7 ವರ್ಷದ ಮಗಳು ಸೇರಿ ಒಂದೇ ಮನೆಯಲ್ಲಿದ್ದ ಮೂವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು(Chikkamagaluru) ತಾಲೂಕಿನ ಖಾಂಡ್ಯಾ(Khandya) ಸಮೀಪದ ಮಾಗಲು ಗ್ರಾಮದಲ್ಲಿ ನಡೆದಿದೆ.

    ಅತ್ತೆ ಜ್ಯೋತಿ(50), ನಾದಿನಿ ಸಿಂಧು(26), ಮಗಳು ಖುಷಿ(7) ಮೃತ ದುರ್ದೈವಿಗಳು. ಮಾಗಲು ಗ್ರಾಮದ ರತ್ನಾಕರ್ ಎಂಬವನು ನಾಡಬಂದೂಕಿನಿಂದ ಮೂವರನ್ನು ಭೀಕರ ಹತ್ಯೆ ಮಾಡಿ, ಆತನೂ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರತ್ನಾಕರ್ ಹೆಂಡತಿ ಬಿಟ್ಟು ಹೋಗಿದ್ದರಿಂದ ಮನನೊಂದು ಈ ದುಷ್ಕೃತ್ಯ ನಡೆಸಿದ್ದಾನೆ. ಇದನ್ನೂ ಓದಿ: ಯತ್ನಾಳ್ ಒಬ್ಬರೇ ಹಿಂದುತ್ವದ ನಾಯಕರಲ್ಲ: ಎಸ್ ಮುನಿಸ್ವಾಮಿ

    ಶಾಲೆಯಲ್ಲಿ ಸಹಪಾಠಿಗಳು ನಿಮ್ಮ ಅಮ್ಮ ಎಲ್ಲಿ ಎಂದು ಕೇಳುತ್ತಾರೆ ಎಂದು ಅಪ್ಪ ರತ್ನಾಕರ್ ಬಳಿ ಮಗಳು ಅಳಲು ತೋಡಿಕೊಂಡಿದ್ದಳು. ಇದರಿಂದ ಮನನೊಂದಿದ್ದ ರತ್ನಾಕರ್ ಮಂಗಳವಾರ ರಾತ್ರಿ 10 ಗಂಟೆ ವೇಳೆಗೆ ಮನೆಗೆ ತೆರಳಿ, ಅತ್ತೆ, ನಾದಿನಿ ಹಾಗೂ ಮಗಳನ್ನು ನಾಡಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಇದನ್ನೂ ಓದಿ: ʻಕೈʼ ಶಾಸಕ ತುರವಿಹಾಳ ಪುತ್ರ, ಸಹೋದರನಿಂದ ಮೊಲ ಬೇಟೆ, ಮಾರಕಾಸ್ರ್ತಹಿಡಿದು ಮೆರವಣಿಗೆ

    ಹತ್ಯೆಯ ಬಳಿಕ ರತ್ನಾಕರ್, ಸೆಲ್ಫಿ ವಿಡಿಯೋ ಮಾಡಿ ಸಂಸಾರದ ನೋವನ್ನು ತೋಡಿಕೊಂಡಿದ್ದಾನೆ. ನನ್ನ ಹೆಂಡತಿ ಮೋಸ ಮಾಡಿ ಹೋಗಿ 2 ವರ್ಷ ಆಯ್ತು. ಮಗಳನ್ನು ಬೇಡ ಅಂತ ಬಿಟ್ಟು ಹೋಗಿದ್ದಾಳೆ. ಈಗ ಶಾಲೆಯಲ್ಲಿ ನನ್ನ ಮಗಳಿಗೆ ಆಕೆಯ ಸ್ನೇಹಿತರು ನಿನ್ನ ಅಮ್ಮ ಎಲ್ಲಿ ಎಂದು ಕೇಳುತ್ತಾರೆ. ಮಗಳು ಆಲ್ಬಂನಿಂದ ಅಮ್ಮನ ಫೋಟೋ ತೆಗೆದುಕೊಂಡು ಹೋಗಿ ಈಕೆಯೇ ನನ್ನ ಅಮ್ಮ ಅಂತ ತೋರಿಸಿದ್ದಾಳೆ ಎಂದು ವಿಡಿಯೋದಲ್ಲಿ ರತ್ನಾಕರ್ ನೋವನ್ನು ವ್ಯಕ್ತಪಡಿಸಿದ್ದಾನೆ.

    ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನು ಅದೇ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಲ್ಲಿ ಮೃತ ಸಿಂಧು ಗಂಡ ಅವಿನಾಶ್ ಕಾಲಿಗೂ ಗುಂಡೇಟು ತಗುಲಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕಲಬುರಗಿ ನಗರವನ್ನು ಸ್ಮಾರ್ಟ್ ಸಿಟಿಯಾಗಿಸಲು ಶಾಸಕರು, ಅಧಿಕಾರಿಗಳೊಂದಿಗೆ ಪ್ರಿಯಾಂಕ್ ಖರ್ಗೆ ಚರ್ಚೆ

    ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ(Balehonnur Police Station) ಪ್ರಕರಣ ದಾಖಲಾಗಿದೆ.