Tag: Ballari District Hospital

  • ಬಳ್ಳಾರಿ ಸಿಸೇರಿಯನ್‌ ದುರಂತ: ಇಂದು ಮತ್ತೊಬ್ಬ ಬಾಣಂತಿ ಸಾವು!

    ಬಳ್ಳಾರಿ ಸಿಸೇರಿಯನ್‌ ದುರಂತ: ಇಂದು ಮತ್ತೊಬ್ಬ ಬಾಣಂತಿ ಸಾವು!

    • ಮೃತ ಬಾಣಂತಿಯರ ಸಂಖ್ಯೆ 5ಕ್ಕೇರಿಕೆ!

    ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿನ ಸರಣಿ ಮುಂದುವರಿದಿದೆ. ಬಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್‌ (Caesarean) ಮಾಡಿಸಿಕೊಂಡ ಬಳಿಕ ಮತ್ತೋರ್ವ ಬಾಣಂತಿ ಇಂದು ಸಾವನ್ನಪ್ಪಿದ್ದಾರೆ.

    ಸುಮಯಾ (25) ಮೃತ ಬಾಣಂತಿ. ಈಕೆ ಕಳೆದ 23 ದಿನಗಳಿಂದ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು (ಡಿ.5) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಪೈಕಿ ಮೃತ ಬಾಣಂತಿಯರ ಸಂಖ್ಯೆ 5ಕ್ಕೇರಿದೆ.

    ಸಿಸೇರಿಯನ್‌ ಮಾಡಿಸಿಕೊಂಡ ಬಳಿಕ ಸುಮಯಾ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ನವೆಂಬರ್ 12 ರಂದು ಸುಮಾಯ ಅವರನ್ನ ಬಿಮ್ಸ್‌ಗೆ ರವಾನೆ ಮಾಡಲಾಗಿತ್ತು. ಈ ನಡುವೆ ಕಿಡ್ನಿ ವೈಫಲ್ಯವಾಗಿ ಸತತ ಡಯಾಲಿಸಿಸ್ ಮಾಡಲಾಗ್ತಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ 23 ದಿನಗಳ ಬಳಿಕ ಸುಮಯಾ ಸಾವನ್ನಪ್ಪಿದ್ದಾರೆ.

    ಆರೋಗ್ಯವಾಗಿದ್ದ ಹಸುಗೂಸು ಏಕಾಏಕೀ ಸಾವು!:
    ಗುರುವಾರ (ಡಿ.5) ಮಧ್ಯಾಹ್ನ ಬಿಮ್ಸ್ ಆಸ್ಪತ್ರೆಯಲ್ಲೇ ನವಜಾತ ಶಿಶುವೊಂದು ಸಾವನ್ನಪ್ಪಿತ್ತು. ಹೆರಿಗೆ ಬಳಿಕ ಆರೋಗ್ಯವಾಗಿದ್ದ ಮಗು ಏಕಾಏಕೀ ಮೃತಪಟ್ಟಿತ್ತು. ಈ ಬೆನ್ನಲ್ಲೇ ಓರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

    ಐವಿ ದ್ರಾವಣ ಪೂರೈಕೆ ಕಂಪನಿ ವಿರುದ್ಧ ಕೇಸ್‌ಗೆ ತಾಕೀತು:
    ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಪೂರೈಕೆ ಮಾಡಿರುವ ಕಂಪನಿ ವಿರುದ್ಧ ಪ್ರಕರಣ ದಾಖಲಿಸಲು ಒಂದು ದಿನದ ಹಿಂದೆಯಷ್ಟೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಔಷಧಿ ನಿಯಂತ್ರಣ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಐವಿ ದ್ರಾವಣದ 22 ಬ್ಯಾಚ್‌ಗಳು ಸ್ಟಾಂಡರ್ಡ್ ಕ್ವಾಲಿಟಿ ಹೊಂದಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಕಂಪನಿಯ ವಿರುದ್ಧ ಕೇಸ್ ದಾಖಲಿಸಿ ಎಂದು ಸೂಚಿಸಿದ್ದರು. ಈ ಬೆನ್ನಲ್ಲೇ ದುರಂತ ಸಂಭವಿಸಿದೆ.

  • ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು – ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ: ಜನಾಕ್ರೋಶ

    ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು – ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ: ಜನಾಕ್ರೋಶ

    ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಇಡೀ ಜಿಲ್ಲೆಯ ಜನರ ನಿದ್ದೆಗೆಡಿಸಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ. ಇತ್ತ 15 ದಿನಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ರೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed) ನಾಪತ್ತೆಯಾಗಿದ್ದಾರೆ. ಇದರಿಂದ ಸಚಿವರ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ.

    ಬಳ್ಳಾರಿಯ (Ballary) ಜಿಲ್ಲಾ ಆಸ್ಪತ್ರೆಯಲ್ಲಿ ಇಲ್ಲಿಯವರೆಗೂ ಐವರು ಬಾಣಂತಿಯರು ಸಾವನ್ನಪ್ಪಿದ್ದು, ಅನಾರೋಗ್ಯದ ಕಾರಣದಿಂದಲೇ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಕೈತೊಳೆದುಕೊಂಡಿದ್ದಾರೆ. ಇನ್ನೊಂದು ಕಡೆ ಜಿಲ್ಲೆಯ ಜನಪ್ರತಿನಿಧಿಗಳು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಕೂಡ ಎಚ್ಚರಿಸಿಲ್ಲ. ಇಷೆಲ್ಲಾ ಆದರೂ ಕೂಡ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.ಇದನ್ನೂ ಓದಿ: ಬಾರ್ ಲೈಸೆನ್ಸ್ ನೀಡಲು 20 ಲಕ್ಷಕ್ಕೆ ಬೇಡಿಕೆ ಆರೋಪ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ನ.9 ರಂದು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸರೀನ್ ಹೆರಿಗೆ ಬಳಿಕ ನಂದಿನಿ, ಲಲಿತಮ್ಮ, ರೋಜಾ ಹಾಗೂ ಮುಸ್ಕಾನ್ ಎನ್ನುವ ನಾಲ್ವರು ಬಾಣಂತಿಯರ ಸಾವಾಗಿತ್ತು. ಒಂದೇ ಬಾರಿಗೆ ಸಿಜೇರಿಯನ್‌ಗೆ ಒಳಗಾಗಿದ್ದ ಬಾಣಂತಿಯರ ಮರಣದ ಬಳಿಕವೂ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಇದೀಗ ಮತ್ತೋರ್ವ ಬಾಣಂತಿಯ ಸಾವಾಗಿದೆ.

    15 ದಿನಗಳ ಅಂತರದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೇ ನಿನ್ನೆ (ನ.27) ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಿಎಸ್‌ಪುರ ಗ್ರಾಮದ 20 ವರ್ಷದ ಮಹಾಲಕ್ಷ್ಮಿಗೆ ನಾರ್ಮಲ್ ಹೆರಿಗೆ ಮಾಡಲಾಗಿತ್ತು. ಆದರೆ ಹೆರಿಗೆ ಬಳಿಕ ತೀವ್ರ ರಕ್ತಸ್ರಾವ ಹಾಗೂ ನಂಜಾಗಿ ಬಾಣಂತಿ ಸಾವನ್ನಪ್ಪಿದ್ದಾಳೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

    ಇದಕ್ಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವಲ್ಲದೇ ಬೇರೇನೂ ಅಲ್ಲ. ಇನ್ನೂ ಜಿಲ್ಲೆಯಲ್ಲಿ ಸರಣಿ ಬಾಣಂತಿಯರ ಸಾವು ಸಂಭವಿಸುತ್ತಿದ್ದರೂ ಉಸ್ತುವಾರಿ ಸಚಿವ ಜಮೀರ್ ಮಾತ್ರ ಜಿಲ್ಲೆ ಕಡೆ ಮುಖ ಮಾಡಿಲ್ಲ. ಕೇವಲ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎನ್ನುವ ಸಂದೇಶವನ್ನ ಕಳಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ. ಒಟ್ಟಿನಲ್ಲಿ ಬಾಣಂತಿಯರ ಸಾವಿಗೆ ಅಸಲೀ ಕಾರಣ ಬಟಾಬಯಲಾಗಬೇಕಿದೆ.ಇದನ್ನೂ ಓದಿ: 4ನೇ ಬಾರಿಗೆ ಜಾರ್ಖಂಡ್‌ ಸಿಎಂ ಆಗಿ ಇಂದು ಹೇಮಂತ್‌ ಸೊರೆನ್‌ ಪ್ರಮಾಣ ವಚನ ಸ್ವೀಕಾರ

  • ಬಳ್ಳಾರಿಯಲ್ಲಿ ಮುಂದುವರಿದ ಸರಣಿ ಸಾವು – ಬಿಮ್ಸ್‌ನಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವು

    ಬಳ್ಳಾರಿಯಲ್ಲಿ ಮುಂದುವರಿದ ಸರಣಿ ಸಾವು – ಬಿಮ್ಸ್‌ನಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವು

    ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಮುಂದುವರಿದಿದ್ದು, ವೈದ್ಯರ (Doctors) ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಾಪಕವಾಗಿದೆ.

    ಇತ್ತೀಚೆಗಷ್ಟೇ ಜಿಲ್ಲಾಸ್ಪತ್ರೆಯಲ್ಲಿ ಸಿಸೇರಿಯನ್‌ (Caesarean) ಮಾಡಿಸಿಕೊಂಡ ಬಳಿಕ ಮೂವರು ಬಾಣಂತಿಯರು (Pregnant) ಸಾವನ್ನಪ್ಪಿದ್ದರು. ಸೋಮವಾರ (ನ.25) ರಾತ್ರಿ ಹೊಸಪೇಟೆ ಮೂಲದ ಮುಸ್ಕಾನ್ (22) ಮಂಗಳವಾರ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಪ್ರತಿಭಟನೆ ವೇಳೆ ಹಿಂದೂ ವಕೀಲನ ಹತ್ಯೆ – ಮತ್ತೆ ಭುಗಿಲೆದ್ದ ಆಕ್ರೋಶ

    ಕೂಡ್ಲಿಗೆ ತಾಲೂಕಿನ ಹಾಲಸಾಗರ ಗ್ರಾಮದ ಮಹಾಲಕ್ಷ್ಮಿ (20) ಸಾವಿಗೀಡಾದ ಮಹಿಳೆ. ಭಾನುವಾರ ನಾರ್ಮಲ್ ಹೆರಿಗೆಯಾಗಿದ್ದ (ಸಾಮಾನ್ಯ ಹೆರಿಗೆ) ಮಹಾಲಕ್ಷ್ಮೀಗೆ ಗಂಡು ಮಗುವಿಗೆ ಜನಿಸಿತ್ತು. ಇದನ್ನೂ ಓದಿ: ನನ್ನ ಪ್ರೀತಿಯ RCBಗೆ…: ತಂಡದಿಂದ ಕೈಬಿಟ್ಟ ಆರ್‌ಸಿಬಿಗೆ ಸಿರಾಜ್‌ ಭಾವುಕ ವಿದಾಯ

    ಹೆರಿಗೆ ಬಳಿಕ ಮಹಾಲಕ್ಷ್ಮಿ ಆರೋಗ್ಯದಲ್ಲಿ ಏರುಪೇರಾಗಿತ್ತು, ಹೀಗಾಗಿ ಐಸಿಯುನಲ್ಲಿ ಇಟ್ಟು ಮೂರು ದಿನ ಚಿಕಿತ್ಸೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಹಾಲಕ್ಷ್ಮಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಗೆ ಕರೆತರುವ ಮುನ್ನ ಮಹಾಲಕ್ಷ್ಮಿ ಚೆನ್ನಾಗಿದ್ದಳು ಎಂದು ದೂರಿದ್ದಾರೆ. ಇದನ್ನೂ ಓದಿ: ಟ್ರಕ್‌ಗೆ ಸ್ಕಾರ್‌ಪಿಯೊ ಡಿಕ್ಕಿ – ಭೀಕರ ಅಪಘಾತಕ್ಕೆ ಐವರು ವೈದ್ಯರ ದುರ್ಮರಣ

    ಈ ಕುರಿತು ಬಿಮ್ಸ್ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಮಹಾಲಕ್ಷ್ಮಿಗೆ ಅನಿಮಿಯಾ ಇತ್ತು, ಮೊದಲು ಅವರು ಕೂಡ್ಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು, ಅಲ್ಲಿ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ನಾವು ಮೊದಲೇ ತಿಳಿಸಿದ್ವಿ, ಅಲ್ಲದೇ ನಮ್ಮ ಪ್ರಯತ್ನ ನಾವು ಮಾಡಿದ್ದೇವೆ ಎಂದು ಬಿಮ್ಸ್ ನಿರ್ದೇಶಕ ನಿರ್ದೇಶಕ ಗಂಗಾಧರ ಗೌಡ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.