ಬಳ್ಳಾರಿ: ವಿಜಯನಗರ (Vijayanagar) ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ (Hampi) ವಿರೂಪಾಕ್ಷ ದೇವಾಲಯದ (Virupaksha Temple) ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ.
ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದೆ. ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ. ಬೇರೆ ದಾರಿಯಿಲ್ಲದೇ ಪ್ರವಾಸಿಗರು ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ.ಇದನ್ನೂ ಓದಿ: ಮುನಿಯಪ್ಪ ಸಿಎಂ ಆದ್ರೆ ನಾನೂ ಸಂತೋಷ ಪಡ್ತೇನೆ: ಪರಮೇಶ್ವರ್
ಮಳೆ ಬಂದಾಗ ನೀರು ಹೊರಹೋಗುವ ವ್ಯವಸ್ಥೆ ಮಾಡಬೇಕಿದ್ದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ.
ಬಳ್ಳಾರಿ: ಡ್ರೈವರ್, ಕಂಡಕ್ಟರ್ ಬೆಂಕಿ ನಂದಿಸುತ್ತಿದ್ದರು, ನಾವು 5 ಸೆಕೆಂಡ್‌ಲ್ಲಿ ಜೀವ ಉಳಿಸಿಕೊಂಡೆವು ಎಂದು ಕರ್ನೂಲ್ ಬಸ್ ಅಪಘಾತದಲ್ಲಿ (Karnool Bus Fire) ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕ ಆಕಾಶ್ ಭಯಾನಕ ದೃಶ್ಯವನ್ನು ಬಿಚ್ಚಿಟ್ಟಿದ್ದಾರೆ.
`ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನಾನು ಗುರುವಾರ (ಅ.23) ರಾತ್ರಿ 10:30ಕ್ಕೆ ಹೈದರಾಬಾದ್‌ನಲ್ಲಿ ಬಸ್ ಹತ್ತಿ, ಬೆಂಗಳೂರಿಗೆ ಹೊರಟಿದ್ದೆವು. ಮಧ್ಯರಾತ್ರಿ 2:35ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ನಾವೆಲ್ಲ ಮಲಗಿಕೊಂಡಿದ್ದೆವು. ಆಗ ಬೈಕ್ ಡಿಕ್ಕಿ ಹೊಡೆದ ಶಬ್ದವೊಂದು ಕೇಳಿಸಿತು. ಆ ಶಬ್ದಕ್ಕೆ ಪಕ್ಕದಲ್ಲಿದ್ದ ಅಂಕಲ್ ಒಬ್ಬರು ನಮ್ಮನ್ನು ಎಬ್ಬಿಸಿದ್ದರು. ಎದ್ದು ನೋಡಿದಾಗ ಬಸ್ಸಿನ ಎಡಗಡೆ ಭಾಗ ಹಾಗೂ ರಸ್ತೆಯ ಮೇಲೆ ಬೆಂಕಿ ಹೊತ್ತಿಕೊಂಡಿತ್ತು. ಡೀಸೆಲ್ ಚೆಲ್ಲಿತ್ತಾ? ಪೆಟ್ರೋಲ್ ಚೆಲ್ಲಿತ್ತಾ? ಗೊತ್ತಿಲ್ಲ. ನಮಗೆ ಹೊರಬರೋಕೆ ಕೇವಲ 5 ಸೆಕೆಂಡ್ ಮಾತ್ರ ಇತ್ತು. ಆ ಸಮಯದಲ್ಲಿ ಡ್ರೈವರ್ ಹಾಗೂ ಕಂಡಕ್ಟರ್ ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದರು. ಅವರೇನಾದರೂ ಎಬ್ಬಿಸಿದ್ರೆ ಹೆಚ್ಚಿನ ಜನ ಆಚೆ ಬರಬಹುದಿತ್ತು ಎಂದು ಹೇಳಿದರು.ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ
ನಮ್ಮನ್ನು ಎಬ್ಬಿಸಿದ ಅಂಕಲ್ ಡ್ರೈವರ್ ಸೀಟಿನ ಪಕ್ಕದ ಕಿಟಿಕಿಯಿಂದ ಆಚೆ ಹೋದರು. ನಾನು ಆ ಕಿಟಕಿಯನ್ನು ಕೈಯಿಂದ ಒಡೆದು, ಕಾಲಿಂದ ಒದ್ದು ಗಾಜು ಬಿಳಿಸಿ ಆಚೆ ಬಂದೆ. ನನ್ನ ಜೊತೆ ಮೂವರು ಆಚೆ ಬಂದರು. ಹೊರಗಡೆ ಬಂದ 5 ರಿಂದ 10 ಸೆಕೆಂಡ್‌ನಲ್ಲಿ ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಯಿತು. ಆ ಸಮಯದಲ್ಲಿ ನಾವು ಯಾರಿಗೂ ಸಹಾಯ ಮಾಡುವ ಸ್ಥಿತಿಯಲ್ಲಿರಲಿಲ್ಲ. ಇದನ್ನೆಲ್ಲ ನೋಡಿದರೆ ನಮಗೆ ಪುನರ್ಜನ್ಮ ಸಿಕ್ಕಿದಂತಾಗಿದೆ ಎಂದರು.
ಏನಿದು ಅವಘಡ?
ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅವಘಡ ಸಂಭವಸಿದೆ. ದುರಂತದಲ್ಲಿ 23 ಮಂದಿ ಪ್ರಯಾಣಿಕರು ಪಾರಾದರೂ 19 ಮಂದಿ ಜೀವಂತವಾಗಿ ಸುಟ್ಟು ಹೋಗಿದ್ದಾರೆ. ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದವು. ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಈಗ ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ. ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್ ಗುದ್ದಿದ್ದಾಗ ಏನಾಯ್ತು?
ಕೊಪ್ಪಳ: ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಹೆಚ್ಚುತ್ತಿದ್ದು, ಭ್ರಷ್ಟ್ರಾಚಾರಕ್ಕೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಲಂಚಗುಳಿತನ ಹಾಗೂ ಅನೇಕ ವರ್ಷದಿಂದ ಇಲ್ಲೇ ಬೀಡುಬಿಟ್ಟ ಅಧಿಕಾರಿಗಳನ್ನು ವರ್ಗಾಯಿಸಿ ಕ್ರಮಕೈಗೊಳ್ಳಲು ಬಸವರಾಜ ರಾಯರೆಡ್ಡಿ (Basavaraj Rayareddy) ಅವರು ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದಾರೆ.
ತುಂಗಭದ್ರಾ ನದಿ, ಹಿರೇಹಳ್ಳದಲ್ಲಿ ಮರಳು ಅಕ್ರಮ ಅವ್ಯಾಹತವಾಗಿದೆ. ನಿಯಂತ್ರಣ ಅಸಾಧ್ಯ ಎಂಬಂತಾಗಿದೆ. ಹಿರೇಹಳ್ಳದಲ್ಲಿನ ಅಕ್ರಮ ಕುರಿತು ಮಾಧ್ಯಮಗಳಲ್ಲಿ ವರದಿ ಆಗುತ್ತಲೇ ಎಚ್ಚೆತ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಬೂದಗುಂಪಾ, ಕೆರೆಹಳ್ಳಿ, ಬಂಡಿ ಹರ್ಲಾಪುರ ಭಾಗದಲ್ಲಿ ಅಕ್ರಮ ಗ್ರಾನೈಟ್ ಗಣಿಗಾರಿಕೆ ನಡೆಯುತ್ತಿದೆ. ಈ ಬಗ್ಗೆ ದಾಖಲಾದ ದೂರು ಆಧರಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹೆಚ್ಚುವರಿ ನಿರ್ದೇಶಕ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿ, ವರದಿ ಸಲ್ಲಿಸಿದೆ.ಇದನ್ನೂ ಓದಿ: ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ
ಇನ್ನೂ ಕುಕನೂರು ತಾಲೂಕಿನ ತಳಕಲ್ ಗ್ರಾಮದ 9.4 ಎಕರೆ ಬೆಣ್ಣಿಕೆರೆಯಲ್ಲಿ ಹೂಳು ತೆರವು ಮಾಡಲಾಗಿದೆ. ಇದರಲ್ಲಿ ಮೊದಲು ಹೂಳು ಮಾರಾಟ ಮಾಡಿ, ರಾಜಧನ ಪಾವತಿಗೆ ಸೂಚಿಸಲಾಗಿದೆ. ಬಳಿಕ ಆದೇಶ ಮಾರ್ಪಡಿಸಿ ಹೂಳನ್ನು ಮಾರಾಟ ಮಾಡದಂತೆ ಆದೇಶಿಸಲಾಗಿದೆ. ಈ ಮೂಲಕ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ತನಿಖೆ ವೇಳೆ ದೃಢಪಟ್ಟಿದೆ. ಈ ಸಂಬಂಧ ಇಲಾಖೆ ನಿರ್ದೇಶಕರಿಗೆ ವರದಿ ಸಲ್ಲಿಕೆಯಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗಿದೆ.
ಹಲವು ವರ್ಷದಿಂದ ಬೀಡು ಬಿಟ್ಟ ಅಧಿಕಾರಿಗಳು:
ಕೊಪ್ಪಳ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಹಲವು ವರ್ಷಗಳಿಂದ ಬೀಡು ಬಿಟ್ಟಿದ್ದಾರೆ. ಕಿರಿಯ ಅಭಿಯಂತರ ನವೀನ್ ಕುಮಾರ್ (12 ವರ್ಷ), ಅಧೀಕ್ಷಕ ಮಲ್ಲಿಕಾರ್ಜುನ (9 ವರ್ಷ), ಪ್ರಥಮ ದರ್ಜೆ ಸಹಾಯಕ ಹರೀಶ ಬಿ.ಜಿ. (18 ವರ್ಷ), ಪ್ರಥಮ ದರ್ಜೆ ಸಹಾಯಕಿ ತ್ರಿವೇಣಿ ಬಸವರಾಜ (9 ವರ್ಷ), ದ್ವಿತಿಯ ದರ್ಜೆ ಸಹಾಯಕಿ ಸುಕನ್ಯಾ ಹೊಸಮನಿ (5 ವರ್ಷ), ಭೂ ವಿಜ್ಞಾನಿಗಳಾದ ಸನಿತ್ ಸಿ. (3 ವರ್ಷ), ನಾಗರಾಜ ಈ. (2 ವರ್ಷ), ಕಿರಿಯ ಅಭಿಯಂತರರಾದ ಸಂಪ್ರಿತಾ ಹಿರೇಮಠ 3 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ. ಎಲ್ಲರೂ ಭ್ರಷ್ಟಾಚಾರಕ್ಕೆ ಸಹಕಾರ ನೀಡುತ್ತಿದ್ದಾರೆಂದು ದೂರುಗಳು ಸಲ್ಲಿಕೆಯಾಗಿವೆ. ಇನ್ನು ಕಳೆದ ಐದು ತಿಂಗಳ ಹಿಂದೆ ಹಿರಿಯ ಭೂವಿಜ್ಞಾನಿಯಾಗಿ ಬಂದಿರುವ ಪುಷ್ಪಲತಾ ಕವಲೂರು ಅವರು ನಿಯಮಾವಳಿ ಪಾಲಿಸಿದ ಕಾರಣ ಕ್ರಮಕ್ಕೆ ಪತ್ರ ಬರೆಯಲಾಗಿದೆ.
ಕಾರ್ಯಪಡೆ ರಚನೆಗೆ ಆಗ್ರಹ:
ಗಣಿಗಾರಿಕೆ ಅಕ್ರಮ ಕುರಿತು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸಿಎಂಗೆ ಪತ್ರ ಬರೆದಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ 85 ಕಿ.ಮೀ. ತುಂಗಭದ್ರಾ ನದಿ ಹರಿಯುತ್ತಿದ್ದು, ಅಪಾರ ಮರಳು ಗಣಿ ಇದೆ. ನಿತ್ಯ 100&150 ಟ್ರಿಪ್ ಮರಳು, ಜಲ್ಲಿ ನೆರೆ ಜಿಲ್ಲೆಗಳಿಗೆ ಅನಧಿಕೃತವಾಗಿ ಸಾಗುತ್ತಿವೆ. ಇದರಿಂದ ಸರ್ಕಾರಕ್ಕೆ ಅಪಾರ ರಾಜಧನ ನಷ್ಟವಾಗುತ್ತಿದೆ. ಇಲಾಖೆ ಅಧಿಕಾರಿಗಳು ಶಾಮೀಲಾಗಿ ಭ್ರಷ್ಟಾಚಾರ ನಡೆಸುತ್ತಿರುವ ಬಗ್ಗೆ ದೂರು ಸಲ್ಲಿಕೆಯಾಗಿವೆ. 200ಕ್ಕೂ ಹೆಚ್ಚು ಜನ ಮರಳು ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ. ಇದರಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳಬೇಕು. ಕಾನೂನು ಅರಿವು ಇಲ್ಲದೇ ಕೆಳ ಹಂತದ ಅಧಿಕಾರಿಗಳ ಮಾತಿನಂತೆ ಅಕ್ರಮ ದಂಧೆಗೆ ಸಹಕರಿಸುತ್ತಿರುವ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಸೇರಿ ಇತರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: 7 ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು – ಹೆಚ್ಚು ಮಾತ್ರೆ ಸೇವಿಸಿದ್ದರಿಂದ ಮೃತಪಟ್ಟಿರೋ ಶಂಕೆ
ಬಳ್ಳಾರಿ: 5.20 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿದ ಘಟನೆ ಹೊಸಪೇಟೆ (Hosapete) ಹೊರವಲಯದಲ್ಲಿ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.
ಖದೀಮರು ಮೃತ ಗಂಗಾಧರ್ ಹೆಸರಲ್ಲಿ 5.20 ಕೋಟಿ ರೂ. ಇನ್ಶೂರೆನ್ಸ್ ಮಾಡಿಸಿದ್ದರು. ಈ ಹಣವನ್ನು ಪಡೆಯುವ ಆಸೆಯಿಂದಾಗಿ ಕೊಲೆಗೆ ಸಂಚು ಹೂಡಿದ್ದರು. ಮೊದಲು ಕೊಲೆ ಮಾಡಿ, ಬಳಿಕ ಹೊಸಪೇಟೆ ಹೊರವಲಯದ ಜಂಬುನಾಥ ಹಳ್ಳಿಗೆ ಹೋಗುವ ರಸ್ತೆಗೆ ಕರೆತಂದಿದ್ದರು. ಸೆಕೆಂಡ್ ಹ್ಯಾಂಡ್ ಎಕ್ಸೆಲ್ ಬೈಕ್‌ನ್ನು ಬಾಡಿಗೆಗೆ ತಂದು, ಅದರ ಮೇಲೆ ಕೂರಿಸಿ ಕಾರಿನಿಂದ ಗುದ್ದಿಸಿದ್ದರು. ಅಪಘಾತವೆಂದು ಬಿಂಬಿಸುವಂತೆ ಮಾಡಿ, ಪರಾರಿಯಾಗಿದ್ದರು.
ಈ ಕುರಿತು ಮೃತನ ಪತ್ನಿ ಹೊಸಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಪಘಾತವಾದರೆ ಬೈಕ್ ಬೀಗ ಗಾಡಿಯಲ್ಲಿರಬೇಕು ಇಲ್ಲ, ಕೆಳಗೆ ಬಿದ್ದಿರಬೇಕು. ಆದರೆ ಬೀಗ ಸೈಡ್ ಬ್ಯಾಗ್‌ನಲ್ಲಿದೆ ಎಂದು ಅನುಮಾನಗೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದ 24 ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ ಕೃತ್ಯಕ್ಕೆ ಬಳಸಿದ ಕಾರು, ಬೈಕ್‌ನ್ನು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: 2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, ಹೌಸ್‌ಫುಲ್ ಶೋಗಳ ಈ ಅದ್ಭುತ ಪಯಣ: ಜನತೆಗೆ ರಿಷಬ್ ಕೃತಜ್ಞತೆ
ಕಲಬುರಗಿ: ಬಳ್ಳಾರಿಯ ಶಿರಗುಪ್ಪದಲ್ಲಿ ಆಯೋಜನೆಗೊಂಡಿದ್ದ ಹಿಂದೂ ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗಲು ಹೊರಟಿದ್ದ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ (Siddalinga Swamiji) ಬಳ್ಳಾರಿ (Ballary) ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಬುಧವಾರ ಬೆಳಗ್ಗೆ ಶಿರಗುಪ್ಪದಲ್ಲಿ ಹಿಂದೂ ಮಹಾಗಣಪತಿಯ ಪೂಜೆಗೆ ಹೊರಟಿದ್ದ ಸ್ವಾಮೀಜಿಗೆ ಬಳ್ಳಾರಿ ಪ್ರವೇಶಕ್ಕೆ ನಿಷೇಧ ಹೇರಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರ ಆದೇಶ ಪ್ರಕಾರ ಸೆಪ್ಟೆಂಬರ್ 3ರಿಂದ 10 ವರೆಗೆ 8 ದಿನಗಳವರೆಗೆ ಸಿದ್ದಲಿಂಗ ಸ್ವಾಮೀಜಿಗೆ ಬಳ್ಳಾರಿ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್‌ಗೆ ʻಕರ್ನಾಟಕ ರತ್ನʼ..?
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಗಳಾದ ದರ್ಶನ್ (Actor Darshan) ಸೇರಿದಂತೆ ಐವರು ಆರೋಪಿಗಳ ಜೈಲು ಸ್ಥಳಾಂತರ ಕೋರಿರುವ ಅರ್ಜಿ ವಿಚಾರಣೆಯನ್ನು ಸಿಸಿಎಚ್ 57ನೇ ಕೋರ್ಟ್ ಸೆ.2ಕ್ಕೆ ಮುಂದೂಡಿದೆ.
ನಟ ದರ್ಶನ್ ಬಳ್ಳಾರಿ ಜೈಲಿಗೆ, ಜಗದೀಶ್ ಮತ್ತು ಲಕ್ಷ್ಮಣ್ ಶಿವಮೊಗ್ಗ ಜೈಲಿಗೆ, ನಾಗರಾಜ್ ಕಲಬುರಗಿ ಜೈಲಿಗೆ, ಪ್ರದೂಷ್ ಬೆಳಗಾವಿ ಜೈಲಿಗೆ ಶಿಫ್ಟ್ ಮಾಡುವಂತೆ ಹಾಗೂ ಪವಿತ್ರಾ ಗೌಡ ಮತ್ತು ಅನುಕುಮಾರ್ ಪರಪ್ಪನ ಅಗ್ರಹಾರ ಜೈಲಿನಲ್ಲೇ ಉಳಿಯುವಂತೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಈ ವಿಚಾರವಾಗಿ ದರ್ಶನ್, ಲಕ್ಷಣ್, ನಾಗರಾಜ್ ಹಾಗೂ ಪ್ರದೂಷ್ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಕೇಸ್‌ಲ್ಲಿ SIT ತನಿಖೆಗೆ ಸಮಯ ನಿಗದಿ ಮಾಡಿಲ್ಲ: ಪರಮೇಶ್ವರ್
ನಟ ದರ್ಶನ್ ಪರ ವಕೀಲರು, ಪ್ರಕರಣದ ಟ್ರಯಲ್ ಅತೀ ಶೀಘ್ರದಲ್ಲಿ ಪ್ರಾರಂಭವಾಗುತ್ತಿದೆ. ಅಲ್ಲದೇ ಬಳ್ಳಾರಿಗೆ ಶಿಫ್ಟ್ ಮಾಡಿದ್ರೆ ವಕೀಲರ ಭೇಟಿ ಅಸಾಧ್ಯ. ಪ್ರತಿ ಬಾರಿ ವಿಚಾರಣೆಗೆ ಹಾಜರುಪಡಿಸಲು ಸಾಧ್ಯವಾಗುವುದಿಲ್ಲ. ಜೊತೆಗೆ ದರ್ಶನ್ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಬಳ್ಳಾರಿ ಜೈಲಿಗೆ ಹೋಗಿ ಮಗನನ್ನು ನೋಡಲು ಅವರಿಗೆ ಕಷ್ಟವಾಗುತ್ತದೆ ಎಂದಿದ್ದಾರೆ. ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ಮ್ಯಾನ್ಯುಯಲ್ ಪ್ರಕಾರ ಯಾವುದೇ ಅವಕಾಶ ನೀಡುತ್ತಿಲ್ಲ, ಚಳಿಗಾಲವಿದೆ ಹೀಗಾಗಿ ದಿಂಬು, ಬ್ಲ್ಯಾಂಕೇಟ್ ನೀಡಲು ಅವಕಾಶ ಕೊಡಿ. ಜೊತೆಗೆ ಹೆಚ್ಚುವರಿ ಬಟ್ಟೆ, ನೈಟ್ ಡ್ರೆಸ್ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಸದ್ಯ ಸಿಸಿಎಚ್ 57ನೇ ಕೋರ್ಟ್‌ನಲ್ಲಿ ನಟ ದರ್ಶನ್ ಸೇರಿ ಇತರರನ್ನು ಬೇರೆ ಜೈಲಿಗೆ ಸ್ಥಳಾಂತರ ಅರ್ಜಿ ಹಾಗೂ ದಿಂಬು, ಬೆಡ್‌ಶೀಟ್ ಕೋರಿರುವ ಅರ್ಜಿಯನ್ನು ಸೆ.2ಕ್ಕೆ ಮುಂದೂಡಿದ್ದಾರೆ.
ಇನ್ನೂ ಸಿಸಿಎಚ್ 64ನೇ ಕೋರ್ಟ್‌ನಲ್ಲಿ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಪವಿತ್ರಗೌಡ ಪರ ಹಿರಿಯ ವಕೀಲ ಬಾಲನ್ ವಾದ ಮಂಡಿಸಿ, ಪವಿತ್ರಗೌಡ ವಿರುದ್ಧ ಆರೋಪಪಟ್ಟಿಯನ್ನು ಬಿಎನ್‌ಎಸ್ ಬದಲು ಸಿಆರ್‌ಪಿಸಿ ಅಡಿಯಲ್ಲಿ ಸಲ್ಲಿಕೆ ಮಾಡಿದ್ದಾರೆ. ಇದು ಕಾನೂನು ಬಾಹಿರವಾಗಿರುವುದರಿಂದ ಕಡ್ಡಾಯ ಜಾಮೀನಿಗೆ ನಮ್ಮ ಕಕ್ಷಿದಾರರು ಅರ್ಹರು, ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಕೋರಿದ್ದಾರೆ.
ಬಳ್ಳಾರಿ: ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಒಳ ಹರಿವು ಹೆಚ್ಚಳವಾಗಿದ್ದರಿಂದ ಜಲಾಶಯದಿಂದ ನದಿಗೆ 1,17,057 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ತುಂಗಭದ್ರಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಸದ್ಯ ತುಂಗಭದ್ರಾ ಜಲಾಶಯಕ್ಕೆ 1,15,722 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಪಾರ ಪ್ರಮಾಣದ ನೀರು ಹರಿದು ಬರ್ತಿರೋದ್ರಿಂದ ಜಲಾಶಯದಿಂದ ನದಿಗೆ 1,17,057 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.
ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್ ಮಾಡಿರುವುದರಿಂದ ಬಳ್ಳಾರಿ-ಗಂಗಾವತಿ ಸಂಪರ್ಕ ಕಲ್ಪಿಸುವ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಬಳ್ಳಾರಿ-ಗಂಗಾವತಿ ಸಂಪರ್ಕ ಕಡಿತಗೊಂಡಿದೆ. ಮತ್ತೊಂದೆಡೆ ಕಂಪ್ಲಿ ಪಟ್ಟಣದ ನದಿ ತೀರದ ಮೀನುಗಾರರ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನದಿ ಪಾತ್ರದ ಜನ, ಜಾನುವಾರು ನದಿ ತೀರಕ್ಕೆ ತೆರಳದಂತೆ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ.
ಬಳ್ಳಾರಿ: ರಸ್ತೆ ಬದಿ ನಿಂತಿದ್ದ ಲಾರಿಗೆ KSRTC ಬಸ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿರುಗುಪ್ಪ (Siraguppa) ತಾಲೂಕಿನ ಬೈರಾಪುರ ಕ್ರಾಸ್ (Bairapura Cross) ಬಳಿ ನಡೆದಿದೆ.
ಮೃತರಿಬ್ಬರು ಮಂತ್ರಾಲಯ (Mantralaya) ರಾಯರ ದರ್ಶನಕ್ಕೆ ಬಂದಿದ್ದರು. ರಾಯರ ದರ್ಶನ ಮುಗಿಸಿ ಮಸ್ಕಿಯಿಂದ (Maski) ಬೆಂಗಳೂರಿಗೆ (Bengaluru) ಸರ್ಕಾರಿ ಬಸ್ಸಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಗಾಯಾಳುಗಳನ್ನು ಸಿರುಗುಪ್ಪ ತಾಲೂಕಾಸ್ಪತ್ರೆ ಹಾಗೂ ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ನವದೆಹಲಿ: ಉಡಾನ್ ಯೋಜನೆಯಡಿ (Udan Scheme) ಬಳ್ಳಾರಿ ಹಾಗೂ ಕೋಲಾರ ಏರ್‌ಸ್ಟ್ರಿಪ್‌ಗಳಲ್ಲಿ (ಮಿನಿ ಏರ್‌ಪೋರ್ಟ್) ಸಣ್ಣ ವಿಮಾನಗಳ ಕಾರ್ಯಾಚರಣೆಗಾಗಿ (20 ಸೀಟುಗಳಿಗಿಂತ ಕಡಿಮೆ) ಬಿಡ್‌ಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ (Ministry of Civil Aviation) ತಿಳಿಸಿದೆ.
ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಕೇಳಿರುವ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಮುರಳಿಧರ್ ಮೊಹೊಲ್ (Murlidhar Mohol), ಈ ವಿಮಾನ ನಿಲ್ದಾಣಗಳ ಆರಂಭಕ್ಕೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವನ್ನು ಕೋರಲಾಗಿದೆ. ಜೊತೆಗೆ, ಭೂಮಿಯ ಲಭ್ಯತೆಯನ್ನು ಖಚಿತಪಡಿಸುವಂತೆ ತಿಳಿಸಲಾಗಿದೆ. ರಾಜ್ಯ ಸರ್ಕಾರವು ಉಚಿತವಾಗಿ ಭೂಮಿ ಒದಗಿಸಬೇಕು ಎಂದಿದ್ದಾರೆ. ಇದನ್ನೂ ಓದಿ: 17,000 ಕೋಟಿ ಬ್ಯಾಂಕ್ ಲೋನ್ ವಂಚನೆ ಕೇಸ್ – ಇಡಿ ವಿಚಾರಣೆಗೆ ಹಾಜರಾದ ಅನಿಲ್ ಅಂಬಾನಿ
ಈ ನಿಲ್ದಾಣದಲ್ಲಿ ಆರಂಭಿಕ ಹಂತದಲ್ಲಿ ಸಣ್ಣ ವಿಮಾನಗಳ ಕಾರ್ಯಾಚರಣೆ ಮಾಡಲಾಗುವುದು. ಆ ಭೂಮಿಯಲ್ಲಿ ಮುಂದೆ ನಿಲ್ದಾಣದ ವಿಸ್ತರಣೆಗೆ ಅವಕಾಶವೂ ಇರಬೇಕು. ಅಂತಹ ಜಾಗ ಗುರುತಿಸುವಂತೆ ಸೂಚಿಸಲಾಗಿದೆ. ರಾಯಚೂರು, ಕುಶಾಲನಗರ ಹಾಗೂ ಹಾಸನದಲ್ಲಿ ಏರ್‌ಸ್ಟ್ರಿಪ್‌ಗಳ ನಿರ್ಮಾಣಕ್ಕೆ ಯಾವುದೇ ಬಿಡ್ ಸ್ವೀಕಾರ ಆಗಿಲ್ಲ ಎಂದು ಸ್ಟಷ್ಟಪಡಿಸಿದ್ದಾರೆ.
ಬಳ್ಳಾರಿ: ಕಳೆದ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬಳ್ಳಾರಿ (Ballary) ಜಿಲ್ಲೆಯ ಸಿರುಗುಪ್ಪ (Siraguppa) ತಾಲೂಕಿನ ರಾವಿಹಾಳ್ ಗ್ರಾಮದಲ್ಲಿ ನಡೆದಿದೆ.
ಗುರುವಾರ ಏಕಾಏಕಿ ಕಾಣೆಯಾಗಿದ್ದ ಬಾಲಕ ಸಿರಿ ಆಟವಾಡಲು ಹೋಗಿ ಬಾವಿಯಲ್ಲಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಬಾಲಕ ಕಾಣೆಯಾದಾಗ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತೀವ್ರ ಹುಡುಕಾಟ ನಡೆಸಿದ್ದರು.
ಶುಕ್ರವಾರ ಸಂಜೆ ಗ್ರಾಮಸ್ಥರು ಬಾವಿಯಲ್ಲಿ ಶವ ತೇಲುವುದನ್ನು ಗಮನಿಸಿದ್ದರು. ಬಳಿಕ ಶವ ಹೊರತೆಗೆದಾಗ ಬಾಲಕ ಸಿರಿ ಎನ್ನೋದು ಗೊತ್ತಾಗಿದೆ. ಸದ್ಯ ಬಾಲಕನ ಶವ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾವಿಗೆ ಎತ್ತರದ ತಡೆಗೋಡೆಗಳು ಇಲ್ಲದಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ.