Tag: Balloons

  • Missile Traceː ರಷ್ಯಾದ 6 ಬಲೂನ್‌ಗಳನ್ನು ಹೊಡೆದುರುಳಿಸಿದ ಉಕ್ರೇನ್ ಸೇನೆ

    Missile Traceː ರಷ್ಯಾದ 6 ಬಲೂನ್‌ಗಳನ್ನು ಹೊಡೆದುರುಳಿಸಿದ ಉಕ್ರೇನ್ ಸೇನೆ

    ಕೀವ್: ಉಕ್ರೇನ್ (Ukraine) ರಾಜಧಾನಿಯ ವಾಯುನೆಲೆಯ ಮೇಲೆ ಹಾರಾಟ ನಡೆಸುತ್ತಿದ್ದ ರಷ್ಯಾದ (Russia) 6 ಸ್ಪೈ ಬಲೂನ್‌ಗಳನ್ನು (Balloons) ಉಕ್ರೇನ್ ಸೇನೆ ಹೊಡೆದುರುಳಿಸಿದೆ.

    ಬಲೂನ್‌ನಿಂದ ವಿಚಕ್ಷಣ ಸಾಧನಗಳು ಹೊರಬರುತ್ತಿದ್ದವು. ಇದರಿಂದ ಉಕ್ರೇನ್ ಸೇನೆ (Ukraine Military) ಎಚ್ಚರಿಕೆ ನೀಡಿದ ಹೊರತಾಗಿಯೂ ಬಲೂನ್‌ಗಳು ರಾಜಧಾನಿಯ ಮೇಲೆ ಹಾರಾಟ ನಡೆಸುತ್ತಿದ್ದವು. ಹಾಗಾಗಿ ಹೊಡೆದುರುಳಿಸಲಾಗಿದೆ ಎಂದು ಉಕ್ರೇನ್ ಮಿಲಿಟರಿ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾರದಲ್ಲಿ 4ನೇ ಕಾರ್ಯಾಚರಣೆ – ಮತ್ತೊಂದು ಹಾರುವ ವಸ್ತುವನ್ನು ಹೊಡೆದುರುಳಿಸಿದ ಅಮೆರಿಕ

    ಉಕ್ರೇನ್ ವಾಯುನೆಲೆಯ ಮೇಲೆ ದಾಳಿ ಮಾಡುವುದು ಈ ಬಲೂನ್ ಹಾರಾಟದ ಹಿಂದಿನ ಉದ್ದೇಶವಾಗಿತ್ತು ಎಂದು ಹೇಳಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ರಾತ್ರೋ ರಾತ್ರಿ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ!

    ರಷ್ಯಾ ತನ್ನ ಡ್ರೋನ್‌ಗಳ (Drone) ದಾಸ್ತಾನನ್ನು ರಕ್ಷಿಸುವ ಸಲುವಾಗಿ ಮುಂದಿನ ದಾಳಿಯಲ್ಲಿ ಬಲೂನ್‌ಗಳನ್ನು ಬಳಸಬಹುದು ಎಂದು ವಾಯುಪಡೆಯ ವಕ್ತಾರ ಯೂರಿ ಇಹ್ನಾತ್ ಈ ಹಿಂದೆಯೇ ಹೇಳಿದ್ದರು. ಅದರಂತೆ ರಷ್ಯಾ ಒರ್ಲಾನ್-10 (Orlan-10 Drone) ನಂತಹ ಡ್ರೋನ್‌ಗಳನ್ನು ಈಗ ಮಿತವಾಗಿ ಬಳಸುತ್ತಿದೆ ಎಂದು ಹೇಳಲಾಗಿದೆ.

    ಇತ್ತೀಚೆಗಷ್ಟೇ ಅಮೆರಿಕದ ವಾಯುನೆಲೆಯ ಮೇಲೆ ಹಾರಾಟ ನಡೆಸುತ್ತಿದ್ದ ಚೀನಾದ ಬೇಹುಗಾರಿಕಾ ಬಲೂನ್‌ವೊಂದನ್ನು ಅಮೆರಿಕ ಫೈಟರ್ ಜೆಟ್‌ಗಳು ಹೊಡೆದುರುಳಿಸಿದ್ದವು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೋದಿ ಭದ್ರತೆಯಲ್ಲಿ ಲೋಪ – ಹೆಲಿಕಾಪ್ಟರ್ ಪಕ್ಕವೇ ಕಪ್ಪು ಬಲೂನ್‍ಗಳ ಹಾರಾಟ

    ಮೋದಿ ಭದ್ರತೆಯಲ್ಲಿ ಲೋಪ – ಹೆಲಿಕಾಪ್ಟರ್ ಪಕ್ಕವೇ ಕಪ್ಪು ಬಲೂನ್‍ಗಳ ಹಾರಾಟ

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿಗೆ ಪಂಜಾಬ್‍ನಲ್ಲಿ ಭದ್ರತಾ ಲೋಪದ ಬಳಿಕ ಇದೀಗ ಮತ್ತೊಮ್ಮೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ಇದೇ ರೀತಿ ಘಟನೆ ನಡೆದಿದೆ.

    ಅಲ್ಲೂರಿ ಸೀತಾರಾಮ ರಾಜು ಅವರ 125ನೇ ಜನ್ಮದಿನದಂದು ಪ್ರಧಾನಿ ಮೋದಿ ಆಂಧ್ರಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮೋದಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಕಪ್ಪು ಬಲೂನ್‍ಗಳನ್ನು ಹಾರಿ ಬಿಡಲಾಗಿತ್ತು. ಮೋದಿ ಕಾರ್ಯಕ್ರಮದ ಹೊರಭಾಗದಲ್ಲಿ ಈ ಬಲೂನ್‍ಗಳನ್ನು ಹಾರಿ ಬಿಡಲಾಗಿದೆ. ಹಾರಿಬಿಟ್ಟ ದೊಡ್ಡ ಗಾತ್ರದ ಬಲೂನ್‍ಗಳು ಆಗಸದಲ್ಲಿ ತೇಲಾಡಿದೆ. ಕಾರ್ಯಕ್ರಮದ ಮುಗಿಸಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಟೇಕ್ ಆಫ್ ಆಗುತ್ತಿದ್ದಂತೆ ಪ್ರತಿಭಟನಾಕಾರರು ಹಾರಿಬಿಟ್ಟ ಬಲೂನ್ ಅಡ್ಡಬಂದಿದೆ. ಆದರೆ ಪೈಲೆಟ್ ಸಮಯಪ್ರಜ್ಞೆಯಿಂದ ಬಹುದೊಡ್ಡ ಅಪಾಯ ತಪ್ಪಿದೆ. ಇದು ಪ್ರಧಾನಿ ಮೋದಿ ಭದ್ರತಾ ವಿಚಾರದಲ್ಲಿ ನಡೆದ ಅತೀ ದೊಡ್ಡ ಲೋಪ ಎಂದು ಆಕ್ರೋಶ ಕೇಳಿಬರುತ್ತಿದೆ. ಇದನ್ನೂ ಓದಿ: ಭಾರೀ ಭದ್ರತಾ ಲೋಪ – ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ

    ಮೋದಿ ಕಾರ್ಯಕ್ರಮದ ಹೊರಭಾಗದಲ್ಲಿ ಹಾಗೂ ಮೋದಿ ಹೆಲಿಕಾಪ್ಟರ್ ಮೂಲಕ ತೆರಳುವ ಮಾರ್ಗದಲ್ಲಿ ಪ್ರತಿಭಟನೆ ವೇಳೆ ಬಲೂನ್ ಹಾರಿಬಿಟ್ಟು ಭದ್ರತಾ ಲೋಪವೆಸಗಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಇದೀಗ ಒಂದು ವರ್ಷದಲ್ಲಿ ಎರಡನೇ ಬಾರಿಗೆ ಲೋಪವಾದಂತಾಗಿದೆ. ಇದನ್ನೂ ಓದಿ: ರಾಹುಲ್ ಗಾಂಧಿ ಫೇಕ್ ವೀಡಿಯೋ ವೈರಲ್ – ಬಿಜೆಪಿ ಶಾಸಕರ ವಿರುದ್ಧ ಎಫ್‍ಐಆರ್

    ಈ ಹಿಂದೆ 2022ರ ಜನವರಿ ತಿಂಗಳಿನಲ್ಲಿ ಬಟಿಂಡಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ತೆರಳಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿತ್ತು. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿತ್ತು. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈಓವರ್‌ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]