ನೆಲಮಂಗಲ: ದಿ.ಹಿರಿಯ ನಟಿ, ತಾಯಿ ಲೀಲಾವತಿ ಅವರ ಸ್ಮರಣಾರ್ಥ ಮಠದ ಮಕ್ಕಳ ಅನ್ನ ದಾಸೋಹ ಸಂಗ್ರಹ ಸೇವೆಗೆ ನೆರವಾಗುವ ನಿಟ್ಟಿನಲ್ಲಿ ನಟ ವಿನೋದ್ ರಾಜ್ (Actor Vinod Raj) ಅವರು ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.
ಬೆಂಗಳೂರು (Bengaluru) ಹೊರವಲಯದ ನೆಲಮಂಗಲ (Nelamangala) ತಾಲೂಕಿನ ಸೋಲದೇವನಹಳ್ಳಿಯ ತೋಟದಲ್ಲಿ ಬಾಗಲಕೋಟೆಯ ಮಹಾಂತ ಮಂದಾರ ಮಠ ಬನಹಟ್ಟಿ ಪೂಜ್ಯ ಶ್ರೀ ಮಹಾಂತ ದೇವರು ಸ್ವಾಮೀಜಿ ಅವರಿಗೆ ಮಾರುತಿ ಕಂಪನಿಯ ಕಾರನ್ನು ಹಸ್ತಾಂತರ ಮಾಡಿ ನೆರವಾಗಿದ್ದಾರೆ.ಇದನ್ನೂ ಓದಿ: ಅಂಬರೀಶ್‌ಗೆ ಕರ್ನಾಟಕ ರತ್ನ ನೀಡಿ- ಅಭಿಮಾನಿಗಳಿಂದ ಮನವಿ
ಈ ಮೊದಲು ಸ್ಥಳೀಯವಾಗಿ ಲೀಲಾವತಿ ಅವರ ಹೆಸರಿನಲ್ಲಿ ಸಾರ್ವಜನಿಕ ಆಸ್ಪತ್ರೆ, ಪಶು ಚಿಕಿತ್ಸಾಲಯ, ರಸ್ತೆ ರಿಪೇರಿ ಇನ್ನಿತರ ಕೆಲಸ ಕಾರ್ಯಗಳ ಮೂಲಕ ಸಮಾಜಕ್ಕೆ ತನ್ನದೇ ರೀತಿಯಲ್ಲಿ ಸಹಾಯ ಮಾಡುತ್ತ ಬಂದಿರುವ ವಿನೋದ್ ರಾಜ್ ಇದೀಗ ಮಕ್ಕಳ ಅನ್ನ ದಾಸೋಹ ಸಂಗ್ರಹಕ್ಕೆ ನೆರವಾಗುವ ನಿಟ್ಟಿನಲ್ಲಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದೇ ವೇಳೆ ಕಾರಿಗೆ ದೃಷ್ಟಿ ತೆಗೆದು, ನಿಂಬೆ ಹಣ್ಣು ಒಡೆದು ಶ್ರೀಗಳು ಕಾರು ಚಾಲನೆ ಮಾಡಿದರು. ಈ ಮೂಲಕ ಜನರ ಮೆಚ್ಚುಗೆಗೆ ನಟ ವಿನೋದ್ ರಾಜ್ ಸಾಕ್ಷಿಯಾಗಿದ್ದಾರೆ.
ಬಾಗಲಕೋಟೆ: ಜಿಲ್ಲೆಯ ಬನಹಟ್ಟಿಯಲ್ಲಿ (Banahatti) ಕೆಹೆಚ್‌ಡಿಎಸಿ ನೇಕಾರರು ಕೈಗೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆ (Weavers’ protest) ಗುರುವಾರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನಾ ನಿರತ ನೇಕಾರರು ಬನಹಟ್ಟಿ ಪಟ್ಟಣದ ಭಾಂಗಿ ವೃತ್ತದ ಮುಖ್ಯ ರಸ್ತೆಯನ್ನು ಬಂದ್ ಮಾಡಿ, ರಸ್ತೆಯಲ್ಲಿಯೇ ಜಂತರದ ಮೂಲಕ ನೂಲು ಸುತ್ತಿ, ಅಲ್ಲಿಯೇ ಉಪಹಾರ ಸೇವಿಸಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಬಿಎಸ್‌ವೈಗೆ ಮತ್ತೊಂದು ಸಂಕಷ್ಟ- 2020ರ ಕೇಸ್‌ಗೆ ಮತ್ತೆ ಜೀವ
ನೇಕಾರ ಮುಖಂಡ ಶಿವಲಿಂಗ ಟರ್ಕಿ ಮಾತನಾಡಿ, ದೇಶದ ಜನರ ಮಾನಮುಚ್ಚುವ ನೇಕಾರರು ಇಂದು ಬೀದಿಗೆ ಬಿದ್ದು, ರಸ್ತೆಯಲ್ಲಿಯೇ ಉಪಹಾರ ಮಾಡುವಂತಾಗಿದ್ದು, ಶೋಚನಿಯ ಸ್ಥಿತಿಯಾಗಿದೆ.
ಎಂಟು ದಿನ ಕಳೆದರೂ ಯಾವೊಬ್ಬ ಜನಪ್ರತಿನಿಧಿ ಬಾರದೇ ನಿರ್ಲಕ್ಷ್ಯ ತೋರಿಸುತ್ತಿರುವುದು ನೇಕಾರರ ಮೇಲೆ ಆಗುತ್ತಿರುವ ಅನ್ಯಾಯವಾಗಿದೆ. ಮುಂದಿನ ದಿನಗಳಲ್ಲಿ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು ಎಂಬ ಎಚ್ಚರಿಕೆಯನ್ನು ಅವರು ನೀಡಿದರು.
ರಸ್ತೆ ಬಂದ್ ಆಗಿದ್ದರಿಂದ ಬೈಕ್ ಸವಾರರು ಸೇರಿದಂತೆ ವಾಹನ ಸವಾರರು ಬೇರೆ ದಾರಿಗಳತ್ತ ಸಾಗುವ ದೃಶ್ಯ ಸಾಮಾನ್ಯವಾಗಿತ್ತು. ಅನೇಕ ನೇಕಾರರು ಘೋಷಣೆಗಳನ್ನು ಕೂಗಿ ಸರ್ಕಾರ ಮತ್ತು ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದರು.
ಚಂದ್ರಯಾನ 3 (Chandrayaan 3) ಯೋಜನೆ ಬಗ್ಗೆ ನಟ ಪ್ರಕಾಶ್ ರಾಜ್ (Prakash Raj) ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅವರ ಈ ಟ್ವೀಟ್ ಭಾರೀ ವೈರಲ್ ಆಗಿತ್ತು. ಜೊತೆಗೆ ಅನೇಕರು ಅದಕ್ಕೆ ಆಕ್ಷೇಪವನ್ನೂ ವ್ಯಕ್ತ ಪಡಿಸಿದ್ದರು. ಇಡೀ ಭಾರತವೇ ಹೆಮ್ಮೆ ಪಡುತ್ತಿರುವಾಗ ಪ್ರಕಾಶ್ ರಾಜ್ ಈ ರೀತಿ ವ್ಯಂಗ್ಯ ಮಾಡುವುದು ಸರಿಯಲ್ಲ ಎಂದು ಹಲವರು ಬುದ್ದಿವಾದ ಹೇಳಿದ್ದರು. ನೆಗೆಟಿವ್ ಕಾಮೆಂಟ್ ಹೆಚ್ಚಾದ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿದ್ದರು ಪ್ರಕಾಶ್ ರಾಜ್. ಹಾಸ್ಯ ಪ್ರಜ್ಞೆ ಇಲ್ಲದವರು ಎಂದು ಟೀಕಿಸಿದ್ದರು.
ಈ ಬೆಳವಣಿಗೆಯ ನಡುವೆಯೇ ಚಂದ್ರಯಾನ ಮತ್ತು ಭಾರತೀಯ ವಿಜ್ಞಾನಿಗಳನ್ನು ಅವಮಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ (Banahatti) ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ವಿರುದ್ದ ದೂರು (Complaint) ದಾಖಲಾಗಿದೆ. ಹಿಂದು ಸಂಘಟನೆ ಮುಖಂಡ ನಂದು ಗಾಯಕವಾಡ ಹಾಗೂ ಇತರರಿಂದ ದೂರು ಸಲ್ಲಿಸಿದ್ದಾರೆ. ನಮ್ಮ ಹೆಮ್ಮೆಯ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಫೋಸ್ಟ್ ಮಾಡಿ ಪ್ರಕಾಶ್ ರಾಜ್ ತಮ್ಮ ವಿಕೃತಿ ಮೆರೆದಿದ್ದಾರೆ. ಅವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನ ಬಂಧಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ. ಇಸ್ರೋ ಕಳುಹಿಸಿರುವ ಚಂದ್ರಯಾನ ನೌಕೆಯಿಂದ ಭಾರತದ ಶಕ್ತಿಯನ್ನು ಇಮ್ಮಡಿಗೊಳಿಸಿದ್ದಾರೆ. ಈ ಬಗ್ಗೆ ನಮ್ಮ ವಿಜ್ಞಾನಿಗಳನ್ನ ಎಲ್ಲರೂ ಹೊಗಳುತ್ತಿರುವಾಗ. ಪ್ರಕಾಶ್ ರಾಜ್ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ. ಅವರ ವಿರುದ್ದ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.
ನಿನ್ನೆಯಷ್ಟೇ ಸ್ಪಷ್ಟನೆ ನೀಡಿದ್ದ ಪ್ರಕಾಶ್ ರಾಜ್
ಚಂದ್ರಯಾನ-3 (Chandrayaan-3) ಕುರಿತಂತೆ ಟ್ವೀಟ್ (Tweet) ಮಾಡಿ ವಿವಾದ (Controversy) ಮೈಮೇಲೆ ಎಳೆದುಕೊಂಡಿದ್ದ ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರಾಜ್ ಮತ್ತೊಂದು ಟ್ವೀಟ್ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ, ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ, ಬಾಲಿಶವಾಗಿ ವರ್ತಿಸುವುದನ್ನ ನಿಲ್ಲಿಸಿ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್ ವಾಲಾ’ ಫೋಟೋ ಹಾಕಿದ್ದ ಅವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ ಪ್ರಕಾಶ್ ರೈ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಪ್ರಕಾಶ್ ರೈ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದಾರೆ.
ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಪ್ರಕಾಶ್ ರಾಜ್, ʻದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಉಲ್ಲೇಖಿಸಿದ್ದು ನಮ್ಮ ಕೇರಳದ ಚಾಯ್‌ವಾಲಾರನ್ನ ವಿಜೃಂಭಿಸುವ ಆರ್ಮ್‌ಸ್ಟ್ರಾಂಗ್ ಕಾಲದ ಜೋಕ್. ಟ್ರೋಲಿಗರ ಕಣ್ಣಿಗೆ ಕಾಣಿಸಿದ ಚಾಯ್‌ವಾಲಾ ಯಾರು? ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ. ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿʼ ಎಂದು ಸ್ಪಷ್ಟನೆ ನೀಡಿದ್ದಾರೆ.
ಬಾಗಲಕೋಟೆ: ಮೂರು ಮಕ್ಕಳಿಗೆ ವಿಷವುಣಿಸಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ. ಮೂರು ಮಕ್ಕಳು ಸಾವನ್ನಪ್ಪಿದ್ದು, ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಾನಿ (13), ಶಂಕರ್ (9), ಸುಹಾಸಿನಿ (7) ಮೃತ ಮಕ್ಕಳು. ಮಕ್ಕಳಿಗೆ ವಿಷ ನೀಡಿದ ತಾಯಿ ಭಾಗೀರಥಿ ಚಿಕ್ಕಯ್ಯ ಮಠದಳನ್ನು ಮಹಲಿಂಗಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಗೀರಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಮೂರು ವರ್ಷಗಳ ಹಿಂದೆ ಮಠದ ಆಸ್ತಿ ವಿಚಾರವಾಗಿ ಭಾಗೀರಥಿ ಪತಿಯ ಕೊಲೆಯಾಗಿತ್ತು. ಅಂದಿನಿಂದ ಭಾಗೀರಥಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಹೇಳಲಾಗುತ್ತಿದೆ. ಇದೀಗ ಮಕ್ಕಳನ್ನು ಕೊಂದ ಭಾಗೀರಥಿ ವಿಷ ಸೇವನೆ ಮಾಡಿದ್ದಾಳೆ ಎನ್ನಲಾಗಿದೆ. ಆದ್ರೆ ಪ್ರಕರಣಕ್ಕೆ ನೈಜ ಕಾರಣ ತಿಳಿದು ಬಂದಿಲ್ಲ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಭಾಗೀರಥಿ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಂದ ಮಾಹಿತಿ ಕಲೆ ಹಾಕುವಲ್ಲಿ ನಿರತರಾಗಿದ್ದಾರೆ.