Tag: Banaras

  • ‘ಬನಾರಸ್’ ಬಳಿಕ ಮತ್ತೊಂದು ಚಿತ್ರ ಒಪ್ಪಿಕೊಂಡ ಝೈದ್ ಖಾನ್

    ‘ಬನಾರಸ್’ ಬಳಿಕ ಮತ್ತೊಂದು ಚಿತ್ರ ಒಪ್ಪಿಕೊಂಡ ಝೈದ್ ಖಾನ್

    ಯತೀರ್ಥ ನಿರ್ದೇಶನದಲ್ಲಿ ಮೂಡಿ ಬಂದ ಬನಾರಸ್ (Banaras) ಸಿನಿಮಾ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ (Zaid Khan) ಗೆ ಭರ್ಜರಿ ಓಪನಿಂಗ್ ತರಲಿದೆ ಎಂದು ಅಂದಾಜಿಸಲಾಗಿತ್ತು. ಈ ಸಿನಿಮಾ ಮೂಲಕ ಝೈದ್ ಖಾನ್ ಭಾರತೀಯ ಸಿನಿಮಾ ರಂಗದಲ್ಲಿ, ಅದರಲ್ಲೂ ಕನ್ನಡ ಮತ್ತು ಬಾಲಿವುಡ್ ನಲ್ಲಿ ಸಖತ್ ಹೆಸರು ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದಾವುದೂ ಆಗಲಿಲ್ಲ.

    ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೂ, ವ್ಯಾಪಾರ ದೃಷ್ಟಿಯಿಂದ ಈ ಸಿನಿಮಾ ಗೆಲ್ಲಲಿಲ್ಲ. ಜೊತೆಗೆ ಝೈದ್ ಖಾನ್ ಗೆ ಹೇಳಿಕೊಳ್ಳುವಂತಹ ಬ್ರೇಕ್ ಕೂಡ ನೀಡಲಿಲ್ಲ. ಹಾಗಾಗಿ ಇದೀಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಚುನಾವಣೆ ಸಮಯದಲ್ಲಿ ಅಪ್ಪನ ಸಹಾಯಕ್ಕೆ ನಿಂತಿದ್ದ ಝೈದ್, ಇದೀಗ ಮತ್ತೊಂದು ಚಿತ್ರಕ್ಕೆ (New Movie) ಒಪ್ಪಿಗೆ ನೀಡಿದ್ದಾರೆ. ಸದ್ಯದಲ್ಲೇ ಮಾಹಿತಿಯನ್ನೂ ನೀಡಲಿದ್ದಾರಂತೆ. ಇದನ್ನೂ ಓದಿ:ಮಹಾಭಾರತ ಸಿನಿಮಾ ಮಾಡುವ ಕನಸಿನ ಯೋಜನೆ ಬಗ್ಗೆ ರಾಜಮೌಳಿ ಮಾಸ್ಟರ್‌ ಪ್ಲ್ಯಾನ್

    ಈ ಹೊಸ ಸಿನಿಮಾವನ್ನು ರುದ್ರನಾಗ್ (Rudranag) ಎನ್ನುವವರು ನಿರ್ದೇಶನ ಮಾಡಲಿದ್ದು, ಇದೊಂದು ಪಕ್ಕಾ ಕಮರ್ಷಿಯನ್ ಎಂಟರ್ ಟೈನ್ಮೆಂಟ್ ಸಿನಿಮಾ ಎಂದು ಹೇಳಲಾಗುತ್ತಿದೆ. ಅಂದುಕೊಂಡಂತೆ ಆಗಿದ್ದರೆ ರುದ್ರಾನಾಗ್ , ಯುವರಾಜ್ ಕುಮಾರ್ ಜೊತೆ ಸಿನಿಮಾ ಮಾಡಬೇಕಿತ್ತು. ಆದರೆ, ಅದು ಸಾಧ್ಯವಾಗಲಿಲ್ಲ. ಅಂದು ಸಾಧ್ಯವಾಗದೇ ಇರುವ ಕನಸನ್ನು ಇಂದು ಝೈದ್ ಖಾನ್ ಮೂಲಕ ಈಡೇರಿಸಿಕೊಳ್ಳುತ್ತಿದ್ದಾರೆ.

    ಈ ಸಿನಿಮಾ ಇನ್ನೂ ಆರಂಭಿಕ ಹಂತದಲ್ಲೇ ಇದ್ದು, ಚುನಾವಣೆಯಿಂದಾಗಿ ಝೈದ್ ಅವರೇ ಆಸಕ್ತಿ ತೋರಲಿಲ್ಲವಂತೆ. ಚುನಾವಣೆ ಮುಗಿದಿರುವುದರಿಂದ ಸದ್ಯದಲ್ಲೇ ನಿರ್ದೇಶಕರೊಂದಿಗೆ ಚರ್ಚೆ ಮಾಡುವುದಾಗಿ ಮಾಧ್ಯಮಗಳ ಜೊತೆ ಅವರು ಹೇಳಿಕೊಂಡಿದ್ದಾರೆ.

  • ಮೊದಲ ಹೆಜ್ಜೆಯಲ್ಲೇ ಭರವಸೆಯ ಛಾಪು ಮೂಡಿಸಿದ ಝೈದ್ ನಟನೆ

    ಮೊದಲ ಹೆಜ್ಜೆಯಲ್ಲೇ ಭರವಸೆಯ ಛಾಪು ಮೂಡಿಸಿದ ಝೈದ್ ನಟನೆ

    ಝೈದ್ ಖಾನ್ (Zaid Khan) ಹಾಗೂ ಸೋನಲ್ ಮೊಂತೆರೋ (Sonal Montero) ನಟನೆಯ  ಬನಾರಸ್ ಸಿನೆಮಾ ಸಾಕಷ್ಟು ಕ್ರೇಜ್ ಗಳೊಂದಿಗೆ ಬಿಡುಗಡೆಗೊಂಡು, ಕನ್ನಡವೂ ಸೇರಿದಂತೆ ಪಂಚ ಭಾಷೆಯಲ್ಲೂ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ತಿದೆ. ನಿರ್ದೇಶಕ ಜಯತೀರ್ಥ (Jayathirtha) ಬನಾರಸ್ ಗೆ (Banaras) ಆಕ್ಷನ್ ಕಟ್ ಹೇಳ್ತಿದ್ದಾರೆ ಅಂದಾಗ ಹೆಚ್ಚಾಗಿದ್ದ ಕುತೂಹಲ ಮೂಡಿಕೊಳ್ಳೋದು ಸಹಜ. ಈ ಚಿತ್ರಕ್ಕೆ ಝೈದ್ ಖಾನ್ ನಾಯಕರಾಗ್ತಿದ್ದಾರೆ ಅಂದಾಗ ಚರ್ಚೆ ಬೇರೆಯದ್ದೇ ಮಟ್ಟಕ್ಕೆ ತಲುಪಿತ್ತು. ಯಾಕಂದ್ರೆ, ಹಣವಿದ್ದವರಿಗೆ ಈ ಸಿನೆಮಾಗಳೆಲ್ಲ ಶೋಕಿಗಾಗಿ, ಹಣದ ಬಲ ಪ್ರದರ್ಶನದಲ್ಲಿ ಸಿನೆಮಾ ಮುಗಿದು ಹೋಗತ್ತೆ ಅನ್ನೋ ಬೇರೆಯದ್ದೇ ತರಹದ ಮಾತುಗಳು, ವಿಮರ್ಶೆಗಳು ಕೇಳಿಬಂದಿದ್ದವು. ಜೊತೆಗೆ ಬಾಯ್ಕಾಟ್ ಬನಾರಸ್ ಎಂಬ ವಿರೋಧಗಳ ಕೂಗು ಸಹ ಜೋರಾಗಿನೇ ಇತ್ತು. ಆದ್ರೆ ಇವರೆಲ್ಲರ ಮಾತನ್ನ, ನಂಬಿಕೆಯನ್ನ, ವಿರೋಧ ಗಳನ್ನ ಗೆದ್ದು ಝೈದ್ ತಾನೊಬ್ಬ ಅದ್ಭುತ ನಟನೆಂಬುದನ್ನ ಪ್ರೂವ್ ಮಾಡಿದ್ದಾರೆ.

    ಈಗ ಪಂಚ ಭಾಷೆಗಳಲ್ಲೂ ತೆರೆಕಂಡು ಮಿನುಗುತ್ತಿರುವ ಬನಾರಸ್ ಬಗೆಗಿನ ಪಾಸಿಟಿವ್ ಮಾತುಗಳೇ ಸಿನೆಮಾದ ಮಿಂಚಿನ ಓಟಕ್ಕೆ ನಾಂದಿ ಹಾಡಿವೆ. ಕರ್ನಾಟಕದಲ್ಲಂತೂ ಬನಾರಸ್ ನೋಡಿದ ಸಿನಿಪ್ರಿಯರಿಗೆ ಝೈದ್ ನಟನೆ ನುರಿತ ಕಲಾವಿದನಂತೆ ಕಾಣಿಸಿದೆ. ಹಾಗಾಗಿಯೇ ಝೈದ್ ನಟನೆಯನ್ನ ಮೆಚ್ಚಿ ಕೊಂಡಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣವಾಗಿದ್ದು ಬಹುಶಃ ಝೈದ್ ಸಿನೆಮಾ ರಂಗಕ್ಕೆ ಪಾದಾರ್ಪಣೆ ಮಾಡುವ ಮೊದಲು ವಹಿಸಿದ್ದ ಶ್ರಮ, ಶ್ರದ್ದೆಯೇ. ಶ್ರೀಮಂತರ ಮನೆಯಿಂದ ಯಾರೇ ಸಿನಿಮಾ ರಂಗಕ್ಕೆ ಬಂದರೂ ಕೂಡಾ ಅದೊಂದು ತೆರೆನಾದ ಚಿಕಿತ್ಸಕ ನೋಟ ಅವರತ್ತ ನೆಟ್ಟಿರುವುದು ಸಹಜ.  ಹಣಬಲ ಒಂದರಿಂದಲೇ ಅಂಥವರು ಜಯಿಸಿಕೊಳ್ಳಲು ಹವಣಿಸುತ್ತಿದ್ದಾರೆ ಎಂಬಂತಹ ವಿಮರ್ಶೆಗಳೂ ಮೊದಲು ಝೈದ್ ಖಾನ್ ಬಗ್ಗೆಯೂ  ಇದ್ದದ್ದು ಸುಳ್ಳಲ್ಲ. ಆದ್ರೆ ಸಿನೆಮಾ ನೋಡಿದ ಮೇಲಂತು ಝೈದ್ ಓರ್ವ ಭರವಸೆಯ ನಟ, ಬನಾರಸ್ ನಾಯಕನಾಗಿ ಆತ ಅದ್ಭುತವಾಗಿ ನಟಿಸಿದ್ದಾರೆಂಬ ಮೆಚ್ಚುಗೆ ಪ್ರೇಕ್ಷಕರ ಕಡೆಯಿಂದಲೇ ವ್ಯಾಪಕವಾಗಿ ಕೇಳಿ ಬರುತ್ತಿದೆ.

    ಈ ಹಿಂದೆ ಝೈದ್ ಬಗ್ಗೆ ಸ್ಟಾರ್ ನಟರೊಬ್ಬರು ಬನಾರಸ್ ಸಿನೆಮಾವನ್ನ ನೋಡಿ,  ಝೈದ್ ಖಾನ್ ಈಗಾಗಲೇ ಮೂರ್ನಾಲಕ್ಕು ಸಿನಿಮಾ ಮಾಡಿದ್ದಾರೇನೋ ಅಂತ ಫೀಲ್ ಆಗುವಂತೆ ನಟಿಸಿದ್ದಾರೆಂದೂ ಹೇಳಿದ್ದರು. ಬನಾರಸ್ ಅನ್ನು ಕಣ್ತುಂಬಿಕೊಂಡ ಪ್ರತಿಯೊಬ್ಬರಿಗೂ ದರ್ಶನ್ ಹೇಳಿರೋದು ಅಕ್ಷರಶಃ ನಿಜವೆನ್ನಿಸಿದಂತೆ ನಟಿಸಿದ್ದಾರೆ ಝೈದ್. ಇದನ್ನೂ ಓದಿ: ಕನ್ನಡತಿ ಅನುಷಾ ಶೆಟ್ಟಿ ಜೊತೆ ತೆಲುಗು ಸ್ಟಾರ್ ನಾಗಶೌರ್ಯ ಮದುವೆ

    ಸದ್ಯ ಬನಾರಸ್ ಪ್ರಭೆ  ಕರ್ನಾಟಕದ ಉದ್ದಗಲಕ್ಕೂ ಹಬ್ಬಿದ್ದು,  ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಇದೇ ಖುಷಿಯಲ್ಲಿ ಝೈದ್ ಸಿನಿಮಾ ಮಂದಿರಗಳಿಗೆ ಭೇಟಿ ನೀಡಿ ಅಭಿಮಾನಿಗಳೊಂದಿಗೆ ಸಿನೆಮಾ ನೋಡಿ ಅವರ ಪ್ರತಿಕ್ರಿಯೆಯನ್ನು ಎಂಜಾಯ್ ಮಾಡ್ತಿದ್ದಾರೆ.ಈ ಮೂಲಕ ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಲ್ಲೂ ಪ್ರೇಕ್ಷಕ ವರ್ಗವೇ ನಿರ್ಧರಿಸಿದಂತೆ  ಚಿತ್ರರಂಗಕ್ಕೆ ಝೈದ್ ಖಾನ್  ಒಂದೊಳ್ಳೆ ಭರವಸೆಯ ನಟನೆಂಬುದನ್ನ ಮೊದಲ ಸಿನೆಮಾದಲ್ಲೇ ಒಪ್ಪಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಝೈದ್ ಖಾನ್ ಜೊತೆ `ಬನಾರಸ್’ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    ಝೈದ್ ಖಾನ್ ಜೊತೆ `ಬನಾರಸ್’ ವೀಕ್ಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

    ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ಪುತ್ರ ಝೈದ್ ಖಾನ್ (Zaid Khan) ನಾಯಕ ನಟನಾಗಿ ನಟಿಸಿರೋ ಬನಾರಸ್ ಸಿನಿಮಾ ವೀಕ್ಷಣೆ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗಷ್ಟೇ ತೆರೆಕಂಡ ಈ ಸಿನಿಮಾ ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಕೇಳಿ ಬರುತ್ತಿದ್ದು, ಬನಾರಸ್ (Banaras) ಹವಾ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಇದರಿಂದಾಗಿ ಸಹಜವಾಗಿಯೇ ಸಿನಿಮಾ (Cinema) ಭರ್ಜರಿ ಕಲೆಕ್ಷನ್ ಸಹ ಮಾಡುತ್ತಿದೆ. ಇದನ್ನೂ ಓದಿ: ಝೈದ್ ಖಾನ್ ನಟನೆಯ ‘ಬನಾರಸ್’ : ಬಾಕ್ಸಾಫೀಸ್ ನಲ್ಲೂ ಭರ್ಜರಿ ಭರಾಟೆ

    ಹೊಸ ನಟನೊಬ್ಬನ ಸಿನಿಮಾವೊಂದು ಮೊದಲ ದಿನದ ಪ್ರಮಾಣದಲ್ಲೇ ಭರ್ಜರಿ ಕಲೆಕ್ಷನ್ ಮಾಡಿದ್ದು, ಸಿನಿಮಾ ರಂಗದಲ್ಲಿ ಹೊಸ ಭರವಸೆ ಮೂಡಿಸಿದೆ. ಕೇವಲ ಬಾಕ್ಸ್ ಆಫೀಸಿನಲ್ಲಿ ದಾಖಲೆ ಮಾತ್ರವಲ್ಲ, ಝೈದ್ ನಟನೆಗೂ ನೋಡುಗರು ಫಿದಾ ಆಗಿದ್ದಾರೆ. ಕನ್ನಡಕ್ಕೆ ಮತ್ತೋರ್ವ ಹೊಸ ಪ್ರತಿಭೆ ಸಿಕ್ಕಿದ್ದಾನೆ ಎಂದು ಕೊಂಡಾಡಿದ್ದಾರೆ. ಝೈದ್ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ಇತರ ಭಾಷೆಯ ನೋಡುಗರಿಗೂ ಇಷ್ಟವಾಗಿದ್ದಾರೆ. ಇದನ್ನೂ ಓದಿ: ಟಿಕೆಟ್ ದರ ಇಳಿಕೆ – `ಗಂಧದಗುಡಿ’ ಚಿತ್ರ ವೀಕ್ಷಿಸುವ ಪ್ರೇಕ್ಷಕರಿಗೆ ಬಂಪರ್ ಆಫರ್

    ಸಿನಿಮಾ ವೀಕ್ಷಣೆ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಸಹ ಬನಾರಸ್ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. `ಝೈದ್ ಖಾನ್ ಹಾಗೂ ಸೋನಲ್‌ ಮಾಂಟೇರೋ (Sonal Monteiro) ಅಭಿನಯದ ಬನಾರಸ್ ಚಿತ್ರ ವೀಕ್ಷಿಸಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದೇನೆ. ನೈಜತೆಯಿಂದ ಕೂಡಿದ ಪಾತ್ರಗಳು, ಸ್ವಾರಸ್ಯಕರವಾದ ಕತೆಯನ್ನು ಒಳಗೊಂಡಿರುವ ಸದಭಿರುಚಿಯ ಚಲನಚಿತ್ರವಿದು. ಇಂತಹ ಚಿತ್ರಗಳ ಸಂಖ್ಯೆ ನೂರಾಗಲಿ, ಚಿತ್ರರಂಗ ಬೆಳೆಯಲಿ, ಚಿತ್ರತಂಡ ಬೆಳೆಯಲಿ. ಎಲ್ಲರಿಗೂ ಒಳಿತಾಗಲಿ ಎಂದು ಶುಭ ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಝೈದ್ ಖಾನ್ ನಟನೆಯ ‘ಬನಾರಸ್’ : ಬಾಕ್ಸಾಫೀಸ್ ನಲ್ಲೂ ಭರ್ಜರಿ ಭರಾಟೆ

    ಝೈದ್ ಖಾನ್ ನಟನೆಯ ‘ಬನಾರಸ್’ : ಬಾಕ್ಸಾಫೀಸ್ ನಲ್ಲೂ ಭರ್ಜರಿ ಭರಾಟೆ

    ಝೈದ್ ಖಾನ್ ನಾಯಕನಾಗಿ ನಟಿಸಿರೋ ಬನಾರಸ್ ಸಿನಿಮಾ ನಿನ್ನೆಯಷ್ಟೇ ರಿಲೀಸ್ ಆಗಿದೆ. ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ಕೇಳಿ ಬರುತ್ತಿದ್ದು, ಬನಾರಸ್ ಪ್ರಭೆ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಹೀಗಾಗಿ ಸಹಜವಾಗಿಯೇ ಸಿನಿಮಾದ ಒಟ್ಟಾರೆ ಕಲೆಕ್ಷನ್ ಬಗ್ಗೆ ಎಲ್ಲರ ಚಿತ್ತ ಕದಲಿಕೊಂಡಿದೆ. ಈ ಬಗ್ಗೆ ಇದೀಗ ಚಿತ್ರತಂಡದ ಕಡೆಯಿಂದಲೇ ಅಧಿಕೃತ ಮಾಹಿತಿ ಹೊರ ಬಿದ್ದಿದೆ.

    ಅದರನ್ವಯ ಹೇಳೋದಾದರೆ, ಬನಾರಸ್ ಮೊದಲ ದಿನದ ಕಲೆಕ್ಷನ್ ಮೂರು ಕೋಟಿ ಮೀರಿಕೊಂಡಿದೆ. ಮೊದಲ ದಿನವೇ ಸಿನಿಮಾ ನೋಡಿದವರ ಬಾಯಿಂದ ಬಾಯಿಗೆ ಸದಭಿಪ್ರಾಯ ಹಬ್ಬಿಕೊಳ್ಳುತ್ತಿರೋದರಿಂದ, ಎರಡನೇ ದಿನ ಆ ಮೊತ್ತ ದುಪ್ಪಟ್ಟಾಗುವ ನಿರೀಕ್ಷೆಗಳಿವೆ. ಒಟ್ಟಾರೆಯಾಗಿ ಜಯತೀರ್ಥ ನಿರ್ದೇಶನದ ಬನಾರಸ್ ಕಥೆ ಸೇರಿದಂತೆ ಎಲ್ಲ ದಿಕ್ಕಿನಿಂದಲೂ ಮೆಚ್ಚುಗೆ ಪಡೆದುಕೊಂಡಿದೆ. ಝೈದ್ ಖಾನ್ ನಟನೆಯನ್ನೂ ಕೂಡಾ ಪ್ರೇಕ್ಷಕರು ಕೊಂಡಾಡಲಾರಂಭಿಸಿದ್ದಾರೆ. ಇದನ್ನೂ ಓದಿ:`ಅವತಾರ್ 2′ ಟ್ರೈಲರ್‌ ಟ್ರೆಂಡಿಂಗ್‌ ಬೆನ್ನಲ್ಲೇ ಚಿತ್ರತಂಡದ ವಿರುದ್ಧ ಕನ್ನಡಿಗರು ಗರಂ

    ಹೊಸ ನಟನೊಬ್ಬನ ಸಿನಿಮಾವೊಂದು ಮೊದಲ ದಿನ ಈ ಪ್ರಮಾಣದಲ್ಲಿ ದುಡ್ಡು ಮಾಡಿದ್ದು ನಿಜಕ್ಕೂ ಸಿನಿಮಾ ರಂಗದಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಕೇವಲ ಬಾಕ್ಸ್ ಆಫೀಸಿನಲ್ಲಿ ದಾಖಲೆ ಮಾತ್ರವಲ್ಲ, ಝೈದ್ ನಟನೆಗೂ ನೋಡುಗರು ಫಿದಾ ಆಗಿದ್ದಾರೆ. ಕನ್ನಡಕ್ಕೆ ಮತ್ತೋರ್ವ ಹೊಸ ಪ್ರತಿಭೆ ಸಿಕ್ಕಿದ್ದಾನೆ ಎಂದು ಕೊಂಡಾಡಿದ್ದಾರೆ. ಝೈದ್ ಕೇವಲ ಕನ್ನಡದಲ್ಲಿ ಮಾತ್ರವಲ್ಲ, ಇತರ ಭಾಷೆಯ ನೋಡುಗರಿಗೂ ಇಷ್ಟವಾಗಿದ್ದಾರೆ ಎನ್ನುವುದು ವಿಶೇಷ.

    Live Tv
    [brid partner=56869869 player=32851 video=960834 autoplay=true]

  • ಒಂದು ಸಾವಿರ ಚಿತ್ರಮಂದಿರಗಳಲ್ಲಿ ಝೈದ್ ಖಾನ್ ನಟನೆಯ ‘ಬನಾರಸ್’ ನಾಳೆ ರಿಲೀಸ್

    ಒಂದು ಸಾವಿರ ಚಿತ್ರಮಂದಿರಗಳಲ್ಲಿ ಝೈದ್ ಖಾನ್ ನಟನೆಯ ‘ಬನಾರಸ್’ ನಾಳೆ ರಿಲೀಸ್

    ಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ (Zaid Khan) ನಟನೆಯ ‘ಬನಾರಸ್’ (Banaras) ಸಿನಿಮಾ ನಾಳೆ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರತಂಡ ಕನ್ನಡದ ಜೊತೆ ಜೊತೆಗೆ ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗಿನಲ್ಲೂ ಈ ಸಿನಿಮಾ ರಿಲೀಸ್ (Release) ಆಗುತ್ತಿರುವುದು ವಿಶೇಷ. ನಟನೊಬ್ಬನ ಮೊದಲ ಸಿನಿಮಾ ಈ ಪ್ರಮಾಣದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು ಎನ್ನುವುದು ದಾಖಲೆ.

    ಜಯತೀರ್ಥ (Jayathirtha) ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಅಂದುಕೊಂಡಂತೆ ಆಗಿದ್ದರೆ ಕೇವಲ ಕನ್ನಡದಲ್ಲಿ ಮಾತ್ರ ಬಿಡುಗಡೆ ಆಗಬೇಕಿತ್ತು. ನಿರ್ದೇಶಕರು ಕೇವಲ ಇದು ಕನ್ನಡ ಸಿನಿಮಾ ಎಂದೇ ಸ್ಕ್ರಿಪ್ಟ್ ಮಾಡಿದ್ದರು. ಆದರೆ, ಸಿನಿಮಾ ಶೂಟ್ ಮಾಡ್ತಾ ಮಾಡ್ತಾ ಪ್ಯಾನ್ ಇಂಡಿಯಾ ಚಿತ್ರವಾಗಿ ಬದಲಾಯಿತು ಎನ್ನುತ್ತಾರೆ ಜಯತೀರ್ಥ. ಝೈದ್ ಖಾನ್ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿಯೇ ಸಿನಿಮಾ ರಂಗಕ್ಕೆ ಲಾಂಚ್ ಆಗುತ್ತಿದ್ದಾರೆ. ಇದನ್ನೂ ಓದಿ:ಅಂದು ಅಪ್ಪ, ಇಂದು ಅಪ್ಪು: ಕರ್ನಾಟಕ ರತ್ನ ಪ್ರಶಸ್ತಿಗೆ ರಾಘಣ್ಣ ಪ್ರತಿಕ್ರಿಯೆ

    ಕನ್ನಡದಲ್ಲಿ 180ಕ್ಕೂ ಹೆಚ್ಚು ಥಿಯೇಟರ್ ನಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದ್ದರೆ, ಹಿಂದಿಯಲ್ಲಿ 500 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ. ತಮಿಳು ಮತ್ತು ತೆಲುಗಿನಲ್ಲಿ ತಲಾ 150 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಾಗುತ್ತಿದೆ. ಮಲಯಾಳಂನಲ್ಲೂ 50ಕ್ಕೂ ಅಧಿಕ ಚಿತ್ರಮಂದಿರಗಳು ಸಿಕ್ಕಿವೆ ಅಂತೆ. ಹಾಗಾಗಿ ಸಾವಿರಾರು ಚಿತ್ರಮಂದಿರಗಳಲ್ಲಿ ನಾಳೇ ಬನಾರಸ್ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಸಹಜವಾಗಿಯೇ ಚಿತ್ರತಂಡಕ್ಕೆ ಪ್ರೇಕ್ಷಕರು ಸಿನಿಮಾ ಹೇಗೆ ಸ್ವೀಕರಿಸುತ್ತಾರೆ ಎಂದು ನಿರೀಕ್ಷಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯೋತ್ಸವದಂದು ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ‘ಬನಾರಸ್’ ಹೀರೋ

    ರಾಜ್ಯೋತ್ಸವದಂದು ಗಡಿನಾಡಿನಲ್ಲಿ ಕನ್ನಡದ ಕಂಪು ಹರಡಿದ ‘ಬನಾರಸ್’ ಹೀರೋ

    ರ್ನಾಟಕದ ಬಹುಭಾಗಗಳಲ್ಲಿ ಯಶಸ್ವಿಯಾಗಿ ರೋಡ್ ಶೋಗಳನ್ನು ನಡೆಸಿದ್ದ ಬನಾರಸ್ ಹೀರೋ ಝೈದ್ ಖಾನ್  (Zaid Khan) ಇದೀಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ. ವಿಶೇಷವೆಂದರೆ, ಸದಾ ಭಾಷೆ ಮತ್ತು ಗಡಿ ವಿವಾದದಿಂದ ಸದ್ದು ಮಾಡುವ ಬೆಳಗಾವಿಯ ನೆಲದಲ್ಲಿಯೇ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ ನಿಮಿತ್ತವಾಗಿ ಬೆಳಗಾವಿಗೆ ಬಂದಿಳಿದ ಝೈದ್ ಖಾನ್ ಅವರಿಗೆ ಬೆಳಗಾವಿ ಸೀಮೆಯ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಯ್ತು. ಈ ಸಂದರ್ಭದಲ್ಲಿ ಕನ್ನಡಪರ ಹೋರಾಟಗಾರರಾದ ಮನ್ಸೂರ್, ಕನ್ನಡ ರಕ್ಷಣಾ ವೇದಿಕೆಯ ರಾಜು ಕಲ್ಲೂರ್ ಮುಂತಾದವರು ಹಾಜರಿದ್ದರು.

    ಆ ನಂತರದಲ್ಲಿ ಬೆಳಗಾವಿ ಜಿಲ್ಲೆಯ ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅರವತ್ತೇಳನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿಯೂ ಬನಾರಸ್ ಹೀರೋ ಝೈದ್ ಖಾನ್ ಅವರಿಗೆ ಗೌರವ ಲಭಿಸಿತ್ತು. ಆ ಕಾರ್ಯಕ್ರಮದ ವೇದಿಕೆಗೆ ಝೈದ್‌ರನ್ನು ಪ್ರೀತಿಯಿಂದ ಬರಮಾಡಿಕೊಂಡು, ಸನ್ಮಾನಿಸಲಾಯಿತು. ಅದಾದ ಬಳಿಕ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯ ಕನ್ನಡ ಪರ ಸಂಘಟನೆಗಳು ಬೃಹತ್ ಪಾದಯಾತ್ರೆಯನ್ನು ಆರಂಭಿಸಿದ್ದವು. ಅದರಲ್ಲಿಯೂ ಝೈದ್ ಖಾನ್ ಉತ್ಸಾಹದಿಂದ ಹೆಜ್ಜೆ ಹಾಕಿದರು.

    ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ನಿಜಕ್ಕೂ ಭಿನ್ನವಾಗಿ ನೆರವೇರಿದೆ. ಇದೇ ಸಂದರ್ಭದಲ್ಲಿ ಈ ಸೀಮೆಯ ಕನ್ನಡಪರ ಮನಸುಗಳೆಲ್ಲ ಒಂದುಗೂಡಿ ಹತ್ತು ಸಾವಿರ ಮೀಟರ್ ಕನ್ನಡ ಧ್ವಜ ಪ್ರದರ್ಶನ ನಡೆಸಿ ಗಿನ್ನಿಸ್ ದಾಖಲೆ ಬರೆಯಲಾಯ್ತು. ಈ ಕಾರ್ಯಕ್ರಮದ ನೇತೃತ್ವವನ್ನು ಕಿರಣ್ ಮಾಳೆನವರ್ ಮತ್ತು ಸುನೀಲ್ ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಬನಾರಸ್ ಹೀರೋ ಝೈದ್ ಖಾನ್ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಗಡಿನಾಡು ಕನ್ನಡ ಸಂಘದ ಅಧ್ಯಕ್ಷರಾದ ಸೈಯದ್ ಮನ್ಸೂರ್, ಪ್ರಸಿದ್ಧ ವಕೀಲರಾದ ತೌಫಿಕ್ ಮೊಯಿನುದ್ದೀನ್, ಡಾ. ಆಸಿಫ್ ಮೊಕಾಶಿ, ಸಂತೋಷ್ ಕಾಮತ್, ಕನ್ನಡ ಸೇನೆಯ ರಾಜು ಹಾಗೂ ಹುಬ್ಬಳಿಯ ಯುವ ನಾಯಕ ರಶೀದ್ ಹಾಗೂ ಆಯೂಬ್ ಉಪಸ್ಥಿತರಿದ್ದರು.

    ಬೆಳಗಾವಿ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಅಕ್ಷರಶಃ ಕಂಗೊಳಿಸಿತ್ತು. ಅದೆಲ್ಲದರಲ್ಲಿಯೂ ಬನಾರಸ್ ನಾಯಕ ನಟ ಝೈದ್ ಖಾನ್ ಭಾಗಿಯಾಗಿದ್ದು ನಿಜವಾದ ವಿಶೇಷ. ಈ ಸಂದರ್ಭದಲ್ಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪತ್ರಿಕಾಗೋಷ್ಟಿ ನಡೆಸಲಾಯ್ತು. ಅದರಲ್ಲಿ ಬನಾರಸ್ ಹೀರೋ ಝೈದ್ ಖಾನ್ ಮತ್ತು ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

    ಇದೇ ಹೊತ್ತಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಅದ್ದೂರಿ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಝೈದ್ ಖಾನ್‌ರನ್ನು ಆಹ್ವಾನಿಸಲಾಗಿತ್ತು. ಝೈದ್ ಕನ್ನಡತನದ ಮೇಲಿನ ಪ್ರೀತಿಯಿಂದಲೇ ಅದರಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದ ನೇತೃತ್ವವನ್ನು ವಾಜೀದ್ ಅಹ್ಮದ್ ಹಿರೇಗುಡಿ, ಕನ್ನಡ ಪರ ಹೋರಾಟಗಾರ ಮಹಾಂತೇಶ್ ರಂಗತಿಮಠ ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರು ವಹಿಸಿಕೊಂಡಿದ್ದರು.

    ಬೆಳಗಾವಿಯಲ್ಲಿ ನಡೆದ ಇಷ್ಟೆಲ ಕಾರ್ಯಕ್ರಮಗಳ ಮೂಲಕ ಬನಾರಸ್ ಹೀರೋ ಝೈದ್ ಖಾನ್ ಕನ್ನಡದ ಕಂಪು ಪಸರಿಸುವ ಕಾರ್ಯ ನಡೆಸಿದರು. ಅತ್ಯಂತ ಅಚ್ಚುಕಟ್ಟಾಗಿ ನಡೆದ ಈ ಎಲ್ಲ ಕಾರ್ಯಕ್ರಮಗಳ ಉಸ್ತುವಾರಿಯನ್ನು ಗಡಿನಾಡು ಕನ್ನಡ ಸಂಘದ ಅಧ್ಯಕ್ಷರಾದ ಸೈಯದ್ ಮನ್ಸೂರ್, ಕನ್ನಡ ಸೇನೆಯ ರಾಜು ಕೋಲಾರ, ಪ್ರಸಿದ್ಧ ವಕೀಲರಾದ ತೌಫಿಕ್ ಮೊಯಿನುದ್ದೀನ್, ಅಯೂಬ್ ಪಾರ್ಕನಳ್ಳಿ, ಡಾ,. ಆಸಿಫ್ ಮೊಕಾಶಿ, ಸಂತೋಷ್ ಕಾಮತ್, ಇಷಾಕ್ ನಿಪ್ಪಾಣಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ ರಶೀದ್  ಮುಂತಾದವರು ವಹಿಸಿಕೊಂಡಿದ್ದರು. ಇದೆಲ್ಲದರ ಮೇಲುಸ್ತುವಾರಿಯನ್ನು ರಾಹುಲ್ ಗಾಂಧಿ ಸಾರಥ್ಯದ ಭಾರತ್ ಜೋಡೋ ಯಾತ್ರೆಯ ಉಸ್ತುವಾರಿ ಹೊತ್ತಿದ್ದ  ಡಾ ಶಕೀಲ್ ನವಾಜ್ ಹೊತ್ತು, ಸಮರ್ಥವಾಗಿ ನೆರವೇರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಿಂದ ಮೈಸೂರಿನವರೆಗೆ ಝೈದ್ ಸಾರಥ್ಯದಲ್ಲಿ ‘ಬನಾರಸ್’ ಯಾತ್ರೆ

    ಬೆಂಗಳೂರಿನಿಂದ ಮೈಸೂರಿನವರೆಗೆ ಝೈದ್ ಸಾರಥ್ಯದಲ್ಲಿ ‘ಬನಾರಸ್’ ಯಾತ್ರೆ

    ಝೈದ್ ಖಾನ್ ನಾಯಕನಾಗಿ ನಟಿಸಿರುವ ಬನಾರಸ್ (Banaras) ಚಿತ್ರ ಬಿಡುಗಡೆಗೆ ಇನ್ನು ಐದು ದಿನ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ತೆರೆಗಾಣಲಿದೆ. ಇದುವರೆಗೂ ಅತ್ಯಂತ ವ್ಯವಸ್ಥಿತವಾಗಿ ಪ್ಯಾನಿಂಡಿಯಾ ಮಟ್ಟದಲ್ಲಿ ಬನಾರಸ್ ಅನ್ನು ಮುನ್ನೆಲೆಗೆ ತರಲಾಗಿದೆ. ಇದೀಗ ಕಡೇಯ ಕ್ಷಣಗಳಲ್ಲಿ ಸಂಚಲನ ಮೂಡಿಸುವ ಸಲುವಾಗಿ ಝೈದ್ ಊರಿಂದೂರಿಗೆ ಬನಾರಸ್ ಯಾತ್ರ ಆರಂಭಿಸಿದ್ದಾರೆ.

    ಬೆಂಗಳೂರಿ (Bangalore) ನಿಂದ ಹೊರಟ ಬನಾರಸ್ ಯಾತ್ರೆ ಆ ನಂತರದಲ್ಲಿ ಮೈಸೂರ್ (Mysore) ರಸ್ತೆಯತ್ತ ಸಾಗಿ ಬಂದು, ಗಾಳಿ ಆಂಜನೇಯ ದೇವಸ್ಥಾನಕ್ಕೆ ಝೈದ್ ತೆರಳಿ ವಂದಿಸಿದ ತರುವಾಯ ರಾಜರಾಜೇಶ್ವರಿನಗರ, ಕೆಂಗೇರಿ ಹಾದಿಯಲ್ಲಿ ಮುಂದುವರೆಯಿತು. ಅಂಚೆಪುರ, ಕಂಬಿಪಾಳ್ಯ ಮಾರ್ಗವಾಗಿ ಸಾಗಿದ ಈ ಬೃಹತ್ ಬನಾರಸ್ ಯಾತ್ರೆ ಬಿಡದಿಯ ಶಶಿ ತಟ್ಟೆ ಇಡ್ಲಿ ಹೊಟೇಲಿನ ಬಳಿ ಜಮಾವಣೆಗೊಂಡಿತ್ತು. ಅಲ್ಲಿಯೇ ಝೈದ್ ಖಾನ್, ಬೆಂಬಲಿಸಿದ ಎಲ್ಲರೊಂದಿಗೂ ತಿಂಡಿ ಮುಗಿಸಿಕೊಂಡವರೇ ರಾಮನಗರ ಜಿಲ್ಲೆಯತ್ತ ಪಯಣ ಬೆಳೆಸಿದ್ದರು. ಅಲ್ಲಿಯೂ ಅಪಾರ ಪ್ರಮಾಣದಲ್ಲಿ ಪ್ರೇಕ್ಷಕರು, ಅಭಿಮಾನಿಗಳ ಸಮ್ಮುಖದಲ್ಲಿ ಬನಾರಸ್ ಪ್ರಚಾರದ ನಿಮಿತ್ತವಾಗಿ ರೋಡ್ ಶೋ ನಡೆಸಲಾಯಿತು. ಇದನ್ನೂ ಓದಿ:ವಿರಹ ಮುಂದುವರೆಯಲಿ ಎಂದು ದಿವ್ಯಾ ಉರುಡುಗ ಕಾಲೆಳೆದ ಕಿಚ್ಚ

    ಆ ಬಳಿಕ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನಕ್ಕೂ ಝೈದ್ ದರ್ಶನ ಪಡೆದುಕೊಂಡರು. ನಂತರ ಬನಾರಸ್ ಯಾತ್ರೆ ಚೆನ್ನಪಟ್ಟಣಕ್ಕೆ ತೆರಳಿತ್ತು. ಅಲ್ಲಿ ಅದ್ದೂರಿಯಾಗಿ ರೋಡ್ ಶೋ ನೆರವೇರಿತು. ಝೈದ್ ಅಲ್ಲಿಯೂ ದೇವಸ್ಥಾನ ಮತ್ತು ದರ್ಗಾಗಳಿಗೆ ಭೇಟಿ ನೀಡಿದರು. ಅಲ್ಲೇ ಒಂದು ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹೊಸಾ ಕಚೇರಿಯೊಂದರ ಆರಂಭ ಸಮಾರಂಭದಲ್ಲಿ ಭಾಗಿಯಾದರು. ಚನ್ನಪಟ್ಟಣದಲ್ಲಿಯೇ ಮಧ್ಯಾಹ್ನದ ಊಟ ಮುಗಿಸಿಕೊಂಡು ಮತ್ತೆ ಬನಾರಸ್ ಯಾತ್ರೆಗೆ ಚಾಲನೆ ಸಿಕ್ಕಿತ್ತು.

    ಮದ್ದೂರಿನಿಂದ ಹಾದು ಹೋಗಿ ಮಂಡ್ಯಕ್ಕೆ ತೆರಳಿ ಅಲ್ಲಿಯೂ ಝೈದ್ ಸಾರಥ್ಯದಲ್ಲಿ ರೋಡ್ ಶೋ ನಡೆಯಿತು. ಅಲ್ಲಿನ ದೇವಸ್ಥಾನ ದರ್ಗಾಗಳಿಗೂ ಭೇಟಿಯಿತ್ತ ಝೈದ್ ಒಂದು ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಐದು ಗಂಟೆ ಸುಮಾರಿಗೆ ಶ್ರೀರಂಗಪಟ್ಟಣಕ್ಕೆ ತೆರಳಿ ಅಲ್ಲಿಂದ ಸೀದಾ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಹೋಗಿ, ತಾಯಿಯ ಆಶೀರ್ವಾದ ಪಡೆದುಕೊಂಡ ಬಳಿಕ ಮೈಸೂರು ನಗರದಲ್ಲಿ ಅದ್ದೂರಿಯಾಗಿ ರೋಡ್ ಶೋ ನಡೆದಿದೆ. ಬಳಿಕ ೮.೩೦ರ ಸುಮಾರಿಗೆ ಒಂದು ಸುತ್ತಿನ ಬೆಂಗಳೂರು-ಮೈಸೂರು ಯಾತ್ರೆ ಮುಗಿಸಿಕೊಂಡಿರುವ ಝೈದ್ ತಮ್ಮ ತಂಡ, ಅಭಿಮಾನಿಗಳೊಂದಿಗೆ ಬೆಂಗಳೂರಿಗೆ ಮರಳಿದ್ದಾರೆ. ಹೀಗೆ ಬನಾರಸ್ ಯಾತ್ರೆ ಹೋದಲ್ಲೆಲ್ಲ ಜನಜಂಗುಳಿ ನೆರೆದು ಝೈದ್‌ರನ್ನು ಸ್ವಾಗತಿಸಿದ್ದಾರೆ. ಈ ಪ್ರತಿಕ್ರಿಯೆ ಚಿತ್ರ ತಂಡಕ್ಕೆ ಹೊಸಾ ಭರವಸೆ ತಂದುಕೊಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • ಹುಬ್ಬಳ್ಳಿಯಲ್ಲಿ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮ

    ಹುಬ್ಬಳ್ಳಿಯಲ್ಲಿ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾದ ಪ್ರಿರಿಲೀಸ್ ಕಾರ್ಯಕ್ರಮ

    ಶಾಸಕ ಜಮೀರ್ ಅಹ್ಮದ್‌ಖಾನ್ ಅವರ ಪುತ್ರ ಝೈದ್‌ ಖಾನ್ (Zaid Khan) ನಾಯಕನಾಗಿ ನಟಿಸಿರುವ ಬಹುನಿರೀಕ್ಷಿತ ಚಿತ್ರ ಬನಾರಸ್. ಬೆಲ್ ಬಾಟಂ ಖ್ಯಾತಿಯ ಜಯತೀರ್ಥ (Jayathirtha) ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಬಿಡುಗಡೆ ಪೂರ್ವ ಮನರಂಜನಾ (ಪ್ರೀರಿಲೀಸ್ ಇವೆಂಟ್) (Prerelease) ಕಾರ್ಯಕ್ರಮ ಶನಿವಾರ ಸಂಜೆ ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು.

    ಈಗಾಗಲೇ ತನ್ನ ಸುಂದರ ಹಾಡುಗಳು ಹಾಗೂ ಟ್ರೈಲರ್ ಮೂಲಕ ಜನಪ್ರಿಯವಾಗಿರುವ ಬನಾರಸ್ (Banaras) ಚಿತ್ರದ ಈ ವರ್ಣರಂಜಿತ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ವಿನೋದ್ ಪ್ರಭಾಕರ್, ನೆನಪಿರಲಿ ಪ್ರೇಮ್, ವಿ.ನಾಗೇಂದ್ರ ಪ್ರಸಾದ್, ನಿರ್ದೇಶಕ ಜಯತೀರ್ಥ ಸೇರಿದಂತೆ ಚಿತ್ರರಂಗದ ಹಲವಾರು ಪ್ರಮುಖರು ಭಾಗವಹಿಸಿದ್ದರು. ಸತತ ಮೂರು ಗಂಟೆಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ನಡೆದ ವಿವಿಧ ಮನಮೋಹಕ ನೃತ್ಯ-ಗಾಯನಗಳನ್ನು  ನೆರೆದಿದ್ದ ಜನತೆ ತದೇಕಚಿತ್ತದಿಂದ ವೀಕ್ಷಿಸಿದರು. ಇದನ್ನೂ ಓದಿ:ದೇವರು ಮೆಚ್ಚೋದಿಲ್ಲ ಎಂದು ಸಾನ್ಯ ವಿರುದ್ಧ ರಾಂಗ್ ಆದ ಸಂಬರ್ಗಿ

    ನಂತರ ನಾಯಕನಟ ಜೈದ್‌ಖಾನ್ ಮಾತನಾಡುತ್ತ ‘ಇಂದು ನನ್ನ ಜೀವನದಲ್ಲಿ  ತುಂಬಾ ದೊಡ್ಡ ದಿನ, ನನ್ನ ಜೀವನದ ಇಬ್ಬರು ದೊಡ್ಡ ಶಕ್ತಿಗಳು ಇಲ್ಲಿ ಬಂದಿದ್ದಾರೆ. ನನಗೆ ಅಣ್ಣನ ಸಮಾನರಾದ ದರ್ಶನ್ ಹಾಗೂ  ನನ್ನಪ್ಪ, ಅವರು ಇದೇ ಮೊದಲಬಾರಿಗೆ ನನ್ನ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದಾರೆ. ಅಪ್ಪನಿಗೆ ಈ ವೇದಿಕೆಯ ಮೇಲೆ ಭರವಸೆ ನೀಡುತ್ತೇನೆ. ಅಪ್ಪಾ, ನೀವು ತಲೆತಗ್ಗಿಸುವ ಕೆಲಸ ಎಂದೂ ಮಾಡಲ್ಲ. ಇವತ್ತು ನಾನಿಲ್ಲಿ ನಿಂತಿದ್ದೇನೆ ಎಂದರೆ ಅದಕ್ಕೆ ನನ್ನಪ್ಪನೇ ಕಾರಣ. ಅಲ್ಲದೆ ದರ್ಶನಣ್ಣ ನನಗೆ ಮೊದಲಿಂದಲೂ ತುಂಬಾ ಸಪೋರ್ಟ್ ಮಾಡುತ್ತಿದ್ದಾರೆ. ಇನ್ನು ಬನಾರಸ್ ಚಿತ್ರದ ಬಗ್ಗೆ ಹೇಳುವುದಾದರೆ ಇದರಲ್ಲಿ ತುಂಬಾನೇ ವಿಶೇಷತೆಗಳಿವೆ. ಚಿತ್ರಕ್ಕಾಗಿ ನಾನು ತುಂಬಾನೇ ಕಷ್ಟಪಟ್ಟಿದ್ದೇನೆ. ಜಯತೀರ್ಥ ಅವರು ಒಂದು ಅದ್ಭುತ ಚಿತ್ರವನ್ನು ನನಗಾಗಿ ಮಾಡಿ ಕೊಟ್ಟಿದ್ದಾರೆ. ನ.೪ರಂದು ಚಿತ್ರ ದೇಶಾದ್ಯಂತ ಬಿಡುಗಡೆಯಾಗುತ್ತಿದೆ, ಸಿನಿಮಾ ಜನರ ಮನಸನ್ನು ಗೆದ್ದೇಗೆಲ್ಲುತ್ತೆ ಎಂಬ ಭರವಸೆಯಿದೆ. ಚಿತ್ರ ನೋಡಿ ಹರಸಿ’ ಎಂದು ಕೇಳಿಕೊಂಡರು.

    ಬನಾರಸ್ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಹೀಗೆ ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತಯಾರಾಗಿರುವ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತಿಲಕ್‌ರಾಜ್ ಬಲ್ಲಾಳ್ ಅವರು ಬಹುಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ಪಂಚರಂಗಿ ಖ್ಯಾತಿಯ ಸೋನಲ್ ಮೊಂತೇರೋ (Sonal Montero) ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ. ಸುಜಯ್ ಶಾಸ್ತ್ರಿ,  ದೇವರಾಜ್, ಅಚ್ಯುತ್ ಕುಮಾರ್, ಸಪ್ನಾ ರಾಜ್, ಬರ್ಖತ್ ಅಲಿ ಮುಂತಾದವರು ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಈ ಚಿತ್ರಕ್ಕಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿರುವ ಬನಾರಸ್ ಚಿತ್ರ ನವೆಂಬರ್ ೪ರಂದು ದೇಶಾದ್ಯಂತ ೫ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ವಾರಾಣಸಿಯಲ್ಲಿ ಗಂಗಾರತಿ ಮಾಡಿದ ‘ಬನಾರಸ್’ ಹೀರೋ ಝೈದ್ ಖಾನ್

    ವಾರಾಣಸಿಯಲ್ಲಿ ಗಂಗಾರತಿ ಮಾಡಿದ ‘ಬನಾರಸ್’ ಹೀರೋ ಝೈದ್ ಖಾನ್

    ಗಂಗೆಯ ತಟದಲ್ಲಿ ತೆರೆದುಕೊಳ್ಳುವ ಅದ್ಭುತ ಪ್ರೇಮಕಥಾನಕದ ಚಿತ್ರ ಬನಾರಸ್ (Banaras). ಆ ಕಥೆಗೂ ಭಾರತದಲ್ಲಿ ಪೂಜ್ಯನೀಯ ಸ್ಥಾನ ಪಡೆದುಕೊಂಡಿರುವ ತಾಯಿ ಗಂಗೆಗೂ ಅವಿನಾಭಾವ ನಂಟಿದೆ. ಬಹುಶಃ ಬರಿಗಣ್ಣಿಗೆ ಕಾಣದ, ಮನಸಿಗಷ್ಟೇ ತಾಕುವ ಆ ಸೆಳೆತದಿಂದಲೋ ಏನೋ… ನಾಯಕ ಝೈದ್ ಖಾನ್ (Zaid Khan) ಮತ್ತು ನಾಯಕಿ ಸೋನಲ್ ಮೊಂತೆರೊ ಅವರನ್ನು ಮತ್ತೆ ಮಾಯಗಂಗೆ ತನ್ನತ್ತ ಸೆಳೆದುಕೊಂಡಿದ್ದಾಳೆ. ಇದೀಗ ಬೇರೆ ರಾಜ್ಯಗಳ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಝೈದ್ ಖಾನ್ ಸೋನಲ್ ಜೊತೆಗೂಡಿ ವಾರಾಣಸಿಗೆ (Varanasi) ತೆರಳಿದ್ದಾರೆ. ಸ್ವತಃ ಗಂಗಾರತಿ (Gangarathi)ಯಲ್ಲಿ ಪಾಲ್ಗೊಂಡು ಗಂಗಾ ಮಾತೆಗೆ ನಮಿಸಿದ್ದಾರೆ!

    ಈಗೊಂದಷ್ಟು ದಿನಗತಳಿಂದ ಝೈದ್ ಖಾನ್ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಬಿಡುವಿರದೆ ಸುತ್ತುತ್ತಿದ್ದಾರೆ. ಬನಾರಸ್ ಬಿಡುಗಡೆಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿರುವ ಈ ಹೊತ್ತಿನಲ್ಲಿ, ಎಲ್ಲವೂ ಸಾರ್ಥಕ್ಯ ಕಾಣುವಂತೆ ಮಾಡಲು ಶ್ರಮಿಸುತ್ತಿದ್ದಾರೆ. ಗಮನೀಯ ಅಂಶವೆಂದರೆ, ಈ ಹಾದಿಯಲ್ಲಿ ಸಿಗುವ ಧಾರ್ಮಿಕ ಕ್ಷೇತ್ರಗಳಿಗೆಲ್ಲ ಝೈದ್ ಜಾತಿ ಮತಗಳ ಹಂಗಿಲ್ಲದೆ ಭೇಟಿ ನೀಡಿ ಭಕ್ತಿಯಿಂದ ನಮಿಸುತ್ತಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಜೋಡಿಯೀಗ ಪ್ರಚಾರ ಕಾರ್ಯದ ನಿಮಿತ್ತವಾಗಿಯೇ ವಾರಾಣಸಿಗ ಅಂಗಳ ತಲುಪಿಕೊಂಡಿದೆ. ಇಲ್ಲಿಯೇ ಒಂದಷ್ಟು ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಈ ಸಂದರ್ಭದಲ್ಲಿ ಝೈದ್ ಖಾನ್ ಮತ್ತು ಸೋನಲ್ ಮೊಂತೇರೋ ಗಂಗಾರತಿಯಲ್ಲಿ ಪಾಲ್ಗೊಂಡರು. ವಿಧಿವಿಧಾನಗಳಿಗೆ ತಕ್ಕುದಾಗಿ ಅದರಲ್ಲಿ ಪಾಲ್ಗೊಂಡು ಭಕ್ತಿ ಭಾವದಲ್ಲಿ ಮಿಂದೆದ್ದಿದ್ದಾರೆ. ಅದಾದ ನಂತರದಲ್ಲಿ ವಾರಾಣಸಿಯಲ್ಲಿ ನಡೆಯುತ್ತಿರುವ ಪ್ರಪ್ರಥಮ ಮಣಿಕರ್ಣಿಕಾ ಫಿಲಂ ಫೆಸ್ಟಿವಲ್‌ನಲ್ಲಿಯೂ ಬನಾರಸ್ ಜೋಡಿ ಭಾಗಿಯಾಗಿದೆ. ಆ ಕಾರ್ಯಕ್ರಮವನ್ನು ಬಾಲಿವುಡ್‌ನ ಹಿರಿಯ ನಟ ಸಂಜಯ್ ಮಿಶ್ರಾ ಉದ್ಘಾಟಿಸಿದ್ದಾರೆ. ಬಳಿಕ ಬಲು ಪ್ರೀತಿಯಿಂದ ಅವರೇ ಖುದ್ದಾಗಿ ಬನಾರಸ್ ಜೋಡಿಯನ್ನು ಸನ್ಮಾನಿಸಿದ್ದಾರೆ. ಒಟ್ಟಾರೆ ಚಿತ್ರದ ಬಗ್ಗೆ ಒಳ್ಳೆ ಮಾತುಗಳನ್ನಾಡಿ, ಗೆಲುವಾಗಲೆಂದು ಹಾರೈಸಿದ್ದಾರೆ.

    ಇದು ನಿಜಕ್ಕೂ ನಾಯಕ ನಟ ಝೈದ್ ಖಾನ್ ಪಾಲಿಗೆ ಸ್ಮರಣೀಯ ಅನುಭವ. ಯಾಕೆಂದರೆ, ಪ್ರಚಾರದ ಹಾದಿಯಲ್ಲಿ ಎಲ್ಲ ಒಳಿತುಗಳೂ ತಾನೇತಾನಾಗಿ ಅವರನ್ನು ಅರಸಿಕೊಂಡು ಬರುತ್ತಿವೆ. ಯಾವ ವಿರೋಧಾಭಾಸ, ಟೀಕೆ ಟಿಪ್ಪಣಿಗಳಿಗೂ ತಲೆ ಕೆಡಿಸಿಕೊಳ್ಳದೆ, ನಾನಿರೋದೇ ಹೀಗೆಂಬಂಥಾ ಮನಃಸ್ಥಿತಿಯಿಂದ ಮುಂದುವರೆಯುತ್ತಿರುವ ಝೈದ್ ಎಲ್ಲರಿಗೂ ಹಿಡಿಸಿದ್ದಾರೆ. ಜಾತಿ ಮತಗಳಾಚೆಗೆ ಈ ಹುಡುಗ ನಮಮ್ಮವನೆಂಬಂಥಾ ಬೆಚ್ಚಗಿನ ಭಾವವನ್ನು ಎಲ್ಲರೊಳಗೂ ಬೇರೂರಿಸುತ್ತಿದ್ದಾರೆ. ಇದುವೇ ಅಮೋಘ ಗೆಲುವಾಗಿ ಅವರ ಕೈಹಿಡಿಯೋದರಲ್ಲಿ ಯಾವ ಸಂದೇಹವೂ ಇಲ್ಲ. ಮತ್ತೆ ಚಿತ್ರೀಕರಣದ ಬಳಿಕ ಗಂಗೆಯ ಸಾಂಗತ್ಯ ಸಿಕ್ಕ ಖುಷಿಯಲ್ಲಿಯೇ ಝೈದ್, ಬನಾರಸ್ ಪ್ರಚಾರ ಕಾರ್ಯವನ್ನು ಮತ್ತಷ್ಟು ಬಿರುಸಾಗಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ನಟ ಝೈದ್ ಖಾನ್, ಸೋನಲ್ ಮೊಂಥೆರೋ

    ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ನಟ ಝೈದ್ ಖಾನ್, ಸೋನಲ್ ಮೊಂಥೆರೋ

    ಮ್ಮ ನಟನೆಯ ಬನಾರಸ್ ಸಿನಿಮಾ ರಿಲೀಸ್ ಗೆ ಬೆನ್ನಲ್ಲೇ ಝೈದ್ ಖಾನ್ (Zaid Khan) ಹಾಗೂ ಸೋ‌ನಲ್ ಮೊಂಥೆರೋ (Sonal Menthero) ತಿರುಪತಿ ತಿಮ್ಮಪ್ಪನ (Tirupati) ದರ್ಶನ ಪಡೆದಿದ್ದಾರೆ. ಅಲ್ಲದೇ, ನೆಲ್ಲೂರ್ ದರ್ಗಾಕ್ಕೆ ಭೇಟಿ ಕೊಟ್ಟಿದ್ದಾರೆ. ಬಳಿಕ ಮಾಧ್ಯಮದವರೊಟ್ಟಿಗೆ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡು, ಒಂದೊಳ್ಳೆ ಸಿನಿಮಾ ಕೊಟ್ಟಿರುವ ಹೆಮ್ಮೆ ನಮ್ಮದು ಎಂದಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

    ಬನಾರಸ್ (Banaras) ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಇದೇ ಹೊತ್ತಿನಲ್ಲಿ ಅತ್ತ ಝೈದ್ ಖಾನ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವಾಗಲೇ, ಇತ್ತ ಬಿಡುಗಡೆಗೆ ಬೇಕಿರುವಂಥಾ ತಯಾರಿಯೂ ತೀವ್ರವಾಗಿಯೇ ಶುರುವಾಗಿದೆ. ಇಂಥಾ ವಾತಾವರಣದಲ್ಲಿ ಬನಾರಸ್ ಚಿತ್ರತಂಡದ ಕಡೆಯಿಂದ ಖುಷಿಯ ಸಂಗತಿಯೊಂದು ಹೊರಬಿದ್ದಿದೆ. ಕೇರಳದಲ್ಲಿ ಪ್ರಖ್ಯಾತ ವಿತರಣಾ ಸಂಸ್ಥೆಯಾಗಿರುವ ಮಲಕುಪ್ಪಡಮ್, ಬನಾರಸ್‌ನ ವಿತರಣಾ ಹಕ್ಕುಗಳನ್ನು ಪಡೆದುಕೊಂಡಿದೆ. ಈಗಾಗಲೇ ಕೇರಳದಲ್ಲಿ ದೊಡ್ಡ ಹೆಸರು ಮಾಡಿರುವ ಸದರುಇ ಸಂಸ್ಥೆ ಹಲವಾರು ಹಿಟ್ ಸಿನಿಮಾಗಳನ್ನು ಕೇರಳದಲ್ಲಿ ಬಿಡುಗಡೆಗೊಳಿಸಿದೆ. ಆದ್ದರಿಂದಲೇ ಕೇರಳದ ತುಂಬೆಲ್ಲ ಬನಾರಸ್ ಬಗೆಗೀಗ ಬೇರೆಯದ್ದೇ ದಿಕ್ಕಿನಲ್ಲಿ ನಿರೀಕ್ಷೆ ಮೂಡಿಕೊಂಡಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

    ಈ ವಿಚಾರವನ್ನು ಖುದ್ದು ಆ ಸಂಸ್ಥೆಯೇ ಅಧಿಕೃತವಾಗಿ ಘೋಶಿಸಿಕೊಂಡಿದೆ. ದೇಶಾದ್ಯಂತ ಉದ್ಯಮಿಯಾಗಿ ದೊಡ್ಡ ಹೆಸರು ಮಾಡಿರುವ ಥಾಮಸ್ ಆಂಟೋನಿ, ತೋಮಿಚನ್ ಮುಪಕುಪ್ಪದಮ್ ಎಂದೇ ಹೆಸರುವಾಸಿಯಾಗಿರುವವರು. ಅವರು ಉದ್ಯಮಿಯಾಗಿದ್ದುಕೊಂಡೇ ಮಲಕುಪ್ಪಡಮ್ ಫಿಲಂಸ್ ಮೂಲಕ ಹಲವಾರು ಚಿತ್ರಗಳನ್ನು ನಿಮರ್ಠಾಣ ಮಾಡಿದ್ದಾರೆ. ಅದರೊಂದಿಗೇ ಮಲಕುಪ್ಪಡಮ್ ರಿಲೀಸ್ ಸಂಸ್ಥೆಯ ಮೂಲಕ ಹಲವಾರು ಸಿನಿಮಾಗಳ ವಿತರಕರಾಗಿಯೂ ಯಶಸ್ವಿಯಾಗಿದ್ದಾರೆ. ಎಲ್ಲ ರೀತಿಯಲ್ಲಿಯೂ ಗುಣಮಟ್ಟ ಹೊಂದಿರುವ ಚಿತ್ರಗಳ ವಿತರಣಾ ಹಕ್ಕುಗಳನ್ನು ಖರೀದಿಸೋದು ಈ ಸಂಸ್ಥೆಯ ಹೆಚ್ಚುಗಾರಿಕೆ. ಆದ್ದರಿಂದಲೇ, ಈ ಸಂಸ್ಥೆ ಒಂದು ಚಿತ್ರದ ವಿತರಣಾ ಹಕ್ಕುಗಳನ್ನು ಖರೀದಿಸಿತೆಂದರೆ, ಆ ಚಿತ್ರದ ಬಗ್ಗೆ ತಾನೇ ತಾನಾಗಿ ನಿರೀಕ್ಷೆ ಮೂಡಿಕೊಳ್ಳುತ್ತದೆ.

    ಈವತ್ತಿಗೂ ಆಯ್ಕೆಯಲ್ಲಿ ಗುಣಮಟ್ಟ ಕಾಯ್ದುಕೊಂಡಿರುವ ಈ ಸಂಸ್ಥೆ, ಆ ಮಾನದಂಡಗಳ ಆಧಾರದಲ್ಲಿಯೇ ಬನಾರಸ್ ಅನ್ನು ಆರಿಸಿಕೊಂಡಿದೆ. ವಿಶೇಷವೆಂದರೆ, ಈ ಸಂಸ್ಥೆಯ ಮುಖ್ಯಸ್ಥರು ಬನಾರಸ್ ಮೂಡಿ ಬಂದಿರುವ ರೀತಿ ಕಂಡು ಥ್ರಿಲ್ ಆಗಿದ್ದಾರೆ. ಆ ಮೆಚ್ಚುಗೆಯಿಂದಲೇ ದೊಡ್ಡ ಮೊತ್ತಕ್ಕೆ ಬನಾರಸ್ ವಿತರಣಾ ಹಕ್ಕುಗಳನ್ನು ಖರೀದಿಸಿದ್ದಾರೆ. ಇದೇ ನವೆಂಬರ್ ನಾಲಕ್ಕರಂದು ವಿಶಾಲ ಕೇರಳಕ್ಕೆ ಅತ್ಯಂತ ವ್ಯವಸ್ಥಿತವಾಗಿ ಬನಾರಸ್ ಹಬ್ಬಿಕೊಳ್ಳಲಿದೆ. ಈ ವಿದ್ಯಮಾನ ಒಂದಿಡೀ ಬನಾರಸ್ ಚಿತ್ರತಂಡವನ್ನು ಥ್ರಿಲ್ ಆಗಿಸಿದೆ. ಹೊಸಾ ಹೀರೋನ ಚಿತ್ರವೊಂದು ಇಷ್ಟು ದೊಡ್ಡ ಮೊತ್ತದ ವ್ಯವಹಾರ ನಡೆಸಿರೋದೊಂದು ದಾಖಲೆ ಎಂಬುದರಲ್ಲಿ ಎರಡು ಮಾತಿಲ್ಲ. ಇದರಿಂದಾಗಿ ನವನಾಯಕ ಝೈದ್ ಖಾನ್ ಪಾಲಿಗೂ ಹೊಸಾ ಭರವಸೆ, ಹುರುಪು ಮೂಡಿಕೊಂಡಂತಾಗಿದೆ.

    Live Tv
    [brid partner=56869869 player=32851 video=960834 autoplay=true]