Tag: Banavasi

  • ಒಂದೇ ಕಿವಿ, ಕಾಲು, ಅರ್ಧ ಹೊಟ್ಟೆ! – ಈ ಗಣಪನ ವಿಶೇಷವೇನು?

    ಒಂದೇ ಕಿವಿ, ಕಾಲು, ಅರ್ಧ ಹೊಟ್ಟೆ! – ಈ ಗಣಪನ ವಿಶೇಷವೇನು?

    ಣೇಶ ಚತುರ್ಥಿಯನ್ನು ದೇಶದೆಲ್ಲೆಡೆ ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಅದರಂತೆ ಗಣೇಶನೂ ಸಹ ವಿಶ್ವ ಆರಾಧ್ಯನಾಗಿದ್ದು, ಒಂದೊಂದು ಭಾಗಗಳಲ್ಲಿ ಒಂದೊಂದು ವಿಶೇಷತೆಯಲ್ಲಿ ನೆಲೆಸಿದ್ದಾನೆ. ಅದರಂತೆ ಬನವಾಸಿಯ ಮಧುಕೇಶ್ವರ ದೇವಸ್ಥಾನದಲ್ಲಿ (Banavasi Madhukeshwara Temple) ಅರ್ಧ ಗಣಪತಿಯನ್ನು (Half Ganesha idol) ಪ್ರತಿಷ್ಠಾಪಿಸಲಾಗಿದೆ. ಈ ವಿಗ್ರಹ ತನ್ನದೇ ಆದ ವಿಶೇಷತೆ ಹೊಂದಿದೆ. 

    ಇದು ನೋಡಲು ಭಗ್ನಗೊಂಡ ಗಣಪತಿಯ ವಿಗ್ರಹದಂತೆ ಕಾಣುತ್ತದೆ. ಆದರೆ, ಇದು ಭಗ್ನ ವಿಗ್ರಹವಲ್ಲ. ಬದಲಾಗಿ, ಗಣಪತಿಯ ಪತ್ನಿಯರಾದ ಸಿದ್ಧಿ – ಬುದ್ಧಿಯನ್ನು ಮೂರ್ತಿಯ ಭಾಗದಿಂದ ತೆಗೆಯುವ ಮೂಲಕ ಗಣೇಶನನ್ನು ಬ್ರಹ್ಮಚಾರಿಯನ್ನಾಗಿ ತೋರಿಸಲಾಗಿದೆ. ಗಣಪತಿಯ ಪತ್ನಿಯರಾದ ಸಿದ್ಧಿ – ಬುದ್ಧಿಯನ್ನು ಕಾಶಿಯ ಕಾಲಭೈರವನ ಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾದರೆ, ಗಣಪತಿಯ ಬ್ರಹ್ಮಚಾರಿ ಭಾಗವನ್ನು ಬನವಾಸಿಯಲ್ಲಿ ಪ್ರತಿಷ್ಠಾನೆಯನ್ನು ಮಾಡಲಾಗಿದೆ. 

    ಗಣಪತಿ ಅಂದರೆ ನೆನಪಿಗೆ ಬರೋದೆ ಆನೆ ಸೊಂಡಿಲಿನ ಮುಖ. ನಾಲ್ಕು ಕೈ, ಎರಡು ದೊಡ್ಡದಾದ ಕಿವಿ. ಆದರೆ ಇಲ್ಲಿ ಸಂಪೂರ್ಣ ಭಿನ್ನವಾಗಿರುವ ಗಣಪನನ್ನು ನಾವು ಕಾಣಬಹುದಾಗಿದೆ. ಇಲ್ಲಿರೋ ಗಣಪತಿಗೆ ಸೊಂಡಿಲು, ಮುಖ, ಹೊಟ್ಟೆಭಾಗ ಎಲ್ಲವೂ ಅರ್ಧವಾದರೆ, ಒಂದು ಕಿವಿ, ಒಂದು ಕಾಲು ಹಾಗೂ ಎರಡು ಕೈಗಳಷ್ಟೇ ಇವೆ. ಇದು ಯಾವುದೋ ವಿದೇಶಿ ದಾಳಿಕೋರರ ದಾಳಿಯಿಂದ ತುತ್ತಾದ ದೇವರ ಮೂರ್ತಿಯಲ್ಲ. ಬದಲಿಗೆ ಈ ಪುರಾತನ ಕಟ್ಟಡದಲ್ಲಿರೋ ಈ ಗಣಪತಿ ಇರೋದು ಹೀಗೆ. ಇಲ್ಲಿರೋ ವಿಘ್ನ ವಿನಾಯಕನ ವಿಶೇಷತೆಯೇ ಅಂತಹದ್ದು. 

    ಭಕ್ತರಿಗೆ ಸದಾ ಕಾಲ ಗಣಪನ ದರ್ಶನ ಭಾಗ್ಯ

    ಇಲ್ಲಿ ಗಣಹೋಮದಂತಹ ಹೋಮ-ಹವನಗಳಿಂದ ಹಿಡಿದು ಕುಂಕುಮಾರ್ಚನೆವರೆಗೆ ಮಾಡಲಾಗುವ ಸರ್ವಸೇವೆಗಳನ್ನು ಮಾಡಲಾಗುತ್ತದೆ. ಆದರೆ ಈ ದೇವಾಲಯದಲ್ಲಿ ಏಕಕಾಲದ ಪೂಜೆ ಮಾತ್ರ ಜರುಗುತ್ತವೆ. ಬೆಳಿಗ್ಗೆ ಮಡಿಯಲ್ಲಿ ಪ್ರಥಮ ವಂದಿತನಿಗೆ ಪೂಜೆ ಮಾಡಿ ಬಾಗಿಲು ಹಾಕಿದರೆ, ಮತ್ತೆ ತೆರೆಯುವುದು ಮಾರನೇ ದಿವಸ ಬೆಳಿಗ್ಗೆಯೇ. ಆದರೆ ಇಲ್ಲಿ ಗರ್ಭಗುಡಿಗೆ ಬಾಗಿಲಿಲ್ಲವಾದ್ದರಿಂದ ದರ್ಶನ ಯಾವಾಗ ಬೇಕಿದ್ದರೂ ಸಾಧ್ಯವಾಗುತ್ತೆ.

    ಒಟ್ಟಿನಲ್ಲಿ ಈಶ್ವರ ಅರ್ಧನಾರೀಶ್ವರ ಎಂಬ ಹೆಸರು ಪಡೆದಿದ್ದರೆ, ಬನವಾಸಿಯ ಈ ಗಣಪ ಅರ್ಧ ಶರೀರದ ಗಣಪತಿ ಎಂಬ ಹೆಸರಿಗೆ ಪಾತ್ರನಾಗಿ ಅರಸಿ ಬಂದ ಭಕ್ತರ ಹರಸುತ್ತಿದ್ದಾನೆ.

  • ಕೊಲೆಗೈದು ಗೋಣಿ ಚೀಲದಲ್ಲಿ ಶವ ಹಾಕಿ ಎಸೆದು ಹೋಗಿದ್ದ ಆರೋಪಿಗಳು ಅರೆಸ್ಟ್

    ಕೊಲೆಗೈದು ಗೋಣಿ ಚೀಲದಲ್ಲಿ ಶವ ಹಾಕಿ ಎಸೆದು ಹೋಗಿದ್ದ ಆರೋಪಿಗಳು ಅರೆಸ್ಟ್

    ಕಾರವಾರ: ಹಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆಗೈದು ಶವವನ್ನು ಗೋಣಿ ಚೀಲದಲ್ಲಿ ತುಂಬಿ ಎಸೆದು ಹೋಗಿದ್ದ ಮೂವರು ಆರೋಪಿಗಳನ್ನು ಬನವಾಸಿ (Banavas) ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿಗಳು ಹಣಕ್ಕಾಗಿ ಕೊಲೆಗೈದು ಬಳಿಕ ಕೊರ್ಲಕಟ್ಟಾ – ವಡ್ಡಿನಕೊಪ್ಪ ರಸ್ತೆಯ ಅರಣ್ಯದಲ್ಲಿ ಶವವನ್ನು ಎಸೆದು ಹೋಗಿದ್ದರು.

    ಬಂಧಿತ ಆರೋಪಿಗಳನ್ನು ಹಾನಗಲ್‍ನ (Hangal) ಗೆಜ್ಜೆಹಳ್ಳಿಯ ಕಿರಣ್ ಸುರಳೇಶ್ವರ (23), ನಿರಂಜನ ಗೋವಿಂದಪ್ಪ ತಳವಾರ (19) ಹಾಗೂ ಗುಡ್ಡಪ್ಪ ಕೊಟಪ್ಪ ತಿಳುವಳ್ಳಿ (19) ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ಹಣಕ್ಕಾಗಿ ಕೊಲೆ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಚೈತ್ರಾ ಡೀಲ್ ಕೇಸ್; ನನ್ನ ಹೆಸರು ಬಂದಿರೋದು ಬೇಸರವಾಗಿದೆ- ವಜ್ರದೇಹಿ ಮಠದ ಸ್ವಾಮೀಜಿ

    ಆರೋಪಿಗಳು ಅದೇ ಗ್ರಾಮದ ಅಶೋಕ್ ಉಪ್ಪಾರ್ (55) ಎಂಬಾತನನ್ನು ಮೂರು ದಿನಗಳ ಹಿಂದೆ ಕೊಲೆ ಮಾಡಿದ್ದರು. ಬಳಿಕ ಗುರುತು ಸಿಗದಂತೆ ಶವವನ್ನು ಗೋಣಿ ಚೀಲದಲ್ಲಿ ತುಂಬಿ ಅರಣ್ಯ ಪ್ರದೇಶದಲ್ಲಿ ಎಸೆದು ಹೋಗಿದ್ದರು. ಆರೋಪಿಗಳಿಂದ ಸ್ವಿಪ್ಟ್, ಕ್ರೇಟಾ ಕಾರ್ ಹಾಗೂ ಒಂದು ಬೈಕ್‍ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಶಿರಸಿ ಡಿಎಸ್‍ಪಿ ಕೆ.ಎಲ್.ಗಣೇಶ ಮಾರ್ಗದರ್ಶನದಲ್ಲಿ ಸಿ.ಪಿ.ಐ ರಾಮಚಂದ್ರ ನಾಯಕ್, ಬನವಾಸಿ ಠಾಣೆ ಪಿ.ಎಸ್.ಐ ಚಂದ್ರಕಲಾ ಪತ್ತಾರ, ಸುನೀಲ್ ಕುಮಾರ್ ಬಿ.ವೈ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: 3 ದಿನಗಳ ಆಸ್ಪತ್ರೆ ನಾಟಕ ಬಂದ್ – ಆಸ್ಪತ್ರೆಯಿಂದ ಚೈತ್ರಾ ಕುಂದಾಪುರ ಡಿಸ್ಚಾರ್ಜ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಶಾಲಾ ವಾಹನ ಅಪಘಾತ – ಓರ್ವ ಮಹಿಳೆ ಸಾವು

    ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಪ್ರತ್ಯೇಕ ಶಾಲಾ ವಾಹನ ಅಪಘಾತ – ಓರ್ವ ಮಹಿಳೆ ಸಾವು

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಬನವಾಸಿ (Banavasi) ಮತ್ತು ಯಲ್ಲಾಪುರ (Yallapura) ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ಅಜಾಗರೂಕತೆಯಿಂದ ಶಾಲಾ ವಾಹನ ಅಪಘಾತಕ್ಕೀಡಾಗಿದ್ದು, ವೃದ್ಧೆಯೊಬ್ಬರು ಸಾವಪ್ಪಿದ್ದಾರೆ.

    ಬನವಾಸಿ ಹೆದ್ದಾರಿಯಲ್ಲಿ ಶಾಲಾ ಬಸ್ ಪಲ್ಟಿ – ಮಹಿಳೆ ಸಾವು
    ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವೃದ್ಧೆಯೊಬ್ಬರು ಮೃತಪಟ್ಟಿದ್ದು, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು 7 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಅಪಘಾತ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಬುಗುಡಿಕೊಪ್ಪದ ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿ 766E ರಲ್ಲಿ ಈ ಘಟನೆ ನಡೆದಿದೆ.

    ದುರಂತದಲ್ಲಿ ಕಸ್ತೂರಮ್ಮ (60) ಅವರು ಸಾವನ್ನಪ್ಪಿದ್ದು, ಗಾಯಾಳುಗಳನ್ನು ಬನವಾಸಿಯ ಪ್ರಾಥಮಿಕ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಗೆ ರವಾನೆ ಮಾಡಲಾಗಿದೆ. ರಾಣಿ ಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರದ ಶಾಲೆಯವರು, ರಾಣಿ ಬೆನ್ನೂರಿನ ಸಿದ್ಧಾರೂಢ ನಗರದಿಂದ ಶಿರಸಿಯತ್ತ ಮಕ್ಕಳನ್ನು ಪ್ರವಾಸಕ್ಕೆ ಕರೆತರುತ್ತಿದ್ದರು. ಈ ವೇಳೆ ಚಾಲಕನ ಅತಿವೇಗದ ಚಾಲನೆಯಿಂದಲೇ ಘಟನೆ ಸಂಭವಿಸಿದ್ದು, ಇದೀಗ ಈ ಸಂಬಂಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ

    ಮತ್ತೊಂದೆಡೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರ ಅರೆಬೈಲು ಘಟ್ಟದಲ್ಲಿ ಕೆಟ್ಟು ನಿಂತಿದ್ದ ಟ್ಯಾಂಕರ್‍ಗೆ ಶಾಲಾ ವಾಹ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿದಂತೆ ಸುಮಾರು 15 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಗುಜರಾತ್ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ- ಟಿಕೆಟ್ ನಿರಾಕರಿಸಿದ್ದಕ್ಕೆ ಆಪ್ ಸೇರಿದ ಶಾಸಕ

    ಹುಬ್ಬಳ್ಳಿಯ ಸೈಂಟ್ ಅಂಥೋನಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹುಬ್ಬಳಿಯಿಂದ ಅಂಕೋಲಾ ಮಾರ್ಗವಾಗಿ ಸುಂಕಸಾಳದತ್ತ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಘಟ್ಟದಲ್ಲಿ ಓವರ್ ಟೇಕ್ ಮಾಡಲು ಹೋಗಿ ಕೆಟ್ಟು ನಿಂತಿದ್ದ ಟ್ಯಾಂಕರ್‌ಗೆ ಡಿಕ್ಕಿಹೊಡೆದಿದೆ. ಇದರ ಪರಿಣಾಮ ಬಸ್ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಉತ್ತರ ಕನ್ನಡದಲ್ಲಿ ಉತ್ತರೋತ್ತರ ಅಭಿವೃದ್ಧಿ ಮಾಡೋರು ಯಾರು..?

    ಉತ್ತರ ಕನ್ನಡದಲ್ಲಿ ಉತ್ತರೋತ್ತರ ಅಭಿವೃದ್ಧಿ ಮಾಡೋರು ಯಾರು..?

    ಗೋವಾ, ಬೆಳಗಾವಿ, ಧಾರವಾಡ, ಉಡುಪಿ ಜಿಲ್ಲೆಗಳೊಂದಿಗೆ ತನ್ನ ಗಡಿಯನ್ನ ಹಂಚಿಕೊಂಡಿದೆ ಉತ್ತರ ಕನ್ನಡ ಜಿಲ್ಲೆ. ಹಚ್ಚ ಹಸುರಿನ ಸೀರೆಯುಟ್ಟು ಸದಾ ಮದುವಣಗಿತ್ತಿಯಂತೆ ಕಂಗೊಳಿಸೋ ಈ ಜಿಲ್ಲೆಗೆ ಅರಬ್ಬೀ ಸಮುದ್ರ ಕಿರೀಟಕ್ಕೊಂದು ಗರಿ ಇಟ್ಟಂತೆ. ರವೀಂದ್ರ ನಾಥರಿಗೆ ಗೀತಾಂಜಲಿ ಬರೆಯೋದಕ್ಕೆ ಸ್ಪೂರ್ತಿ ನೀಡಿದ್ದು ಕಾರವಾರದ ಕಡಲ ತೀರವಂತೆ. ಆದ್ರೆ, ಅಭಿವೃದ್ಧಿ ಅನ್ನೋ ವಿಚಾರ ಬಂದಾಗ ಮಾತ್ರ ಉತ್ತರ ಕನ್ನಡ ಜಿಲ್ಲೆ ನಿರುತ್ತರವಾಗಿ ಬಿಡುತ್ತದೆ. ಸಮೃದ್ಧವಾದ ನೈಸರ್ಗಿಕ ಸಂಪನ್ಮೂಲ ಜಿಲ್ಲೆಯ ಪ್ಲಸ್ ಪಾಯಿಂಟ್ ಆಗಿದ್ರೂ ಕೈಗೆಟುಕದೇ ಇರೋ ಅಭಿವೃದ್ಧಿಯೇ ಈ ಜಿಲ್ಲೆಗೆ ತಟ್ಟಿದ ಮಹಾನ್ ಶಾಪ. ಇಂತಿಪ್ಪ ಉತ್ತರ ಕನ್ನಡ ಜಿಲ್ಲೆಯಲ್ಲೀಗ ಚುನಾವಣೆ ರಂಗು ರಂಗೇರಿದೆ.

    ಹಸಿರ ಕಾನನದ ನಡುವೆ ರಮ್ಯ ತಾಣಗಳ ವೈಭವ
    ಉತ್ತರ ಕರ್ನಾಟಕಕ್ಕೆ ಹೋಗೋರು ಬನವಾಸಿಗೆ ಹೋಗಿಲ್ಲ ಅಂದ್ರೆ ನಿಮ್ಮ ಪ್ರವಾಸ ಪರಿಪೂರ್ಣವಾಗೋಕೆ ಸಾಧ್ಯಾನೇ ಇಲ್ಲ. ಮಹಾಕವಿ ಪಂಪನೇ ವರ್ಣಿಸಿರುವಂತೆ ಆರಂಕುಶ ವಿಟ್ಟೊಡಂ ನೆನೆವುದೆನ್ನ ಮನ ಬನವಾಸಿ ದೇಶಮಂ ಅಂತಾ ಈ ಸ್ಥಳವನ್ನು ಮನಬಿಚ್ಚಿ ವರ್ಣಿಸಿದ್ದಾನೆ.

    ಇನ್ನು ಬೇಲೆಕೇರಿಯ ಅದಿರು ನಾಪತ್ತೆ ಪ್ರಕರಣವನ್ನು ಯಾರಾದ್ರೂ ಮರೆಯೋದುಂಟೇ..? ಬೇಲೆಕೇರಿ ಅತ್ಯಂತ ಹಳೆಯ ಹಾಗೂ ಸುಂದರ ಬಂದರು. ಉತ್ತರ ಕನ್ನಡದ ಭಟ್ಕಳ ವಿಜಯನಗರ ಸಾಮ್ರಾಜ್ಯದ ಅವಧಿಯಲ್ಲಿ ಹೆಬ್ಬಾಗಿಲಾಗಿತ್ತಂತೆ. ಭಯೋತ್ಪಾದಕ ಚಟುವಟಿಕೆಗಳು ಈ ಊರಿಗೆ ಕಪ್ಪು ಮಸಿ ಬಳೀತಾದ್ರೂ ಇಂದಿಗೂ ಭಟ್ಕಳ ಶಾಂತ ಸಮುದ್ರದಂತೆ ಕಂಗೊಳಿಸುತ್ತದೆ.

    ಕಾರವಾರದಿಂದ ಕೇವಲ 40 ಕಿಲೋಮೀಟರ್ ದೂರದಲ್ಲಿದೆ ದಾಂಡೇಲಿ. ಸಿಂಥೇರಿ ರಾಕ್ಸ್, ನಾಗಝರಿ ವ್ಯಾಲಿ, ಕಾವಲಾ ಕೇವ್ಸ್ ಹಗೆ ದಾಂಡೇಲಿಯಲ್ಲಿ ನೋಡೋದಕ್ಕೆ ಅನೇಕ ಸ್ಥಳಗಳಿವೆ. ಅರಣ್ಯದಲ್ಲಿರೋ ವಸತಿ ಗೃಹದಲ್ಲಿ ಉಳಿದುಕೊಂಡು ಪ್ರವಾಸವನ್ನ ಕೂಲಾಗಿ ಅನುಭವಿಸಬಹುದು.

    ಕಾರವಾರದಿಂದ ಸರಿ ಸುಮಾರು 60 ಕಿಲೋಮೀಟರ್ ದೂರದಲ್ಲಿರೋ ಪುಣ್ಯ ಕ್ಷೇತ್ರವೇ ಗೋಕರ್ಣ. ಶಿವನ ಆತ್ಮಲಿಂಗದ ಒಂದು ತುಣುಕು ಇಲ್ಲಿದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಈ ಕ್ಷೇತ್ರ ವಾರಣಾಸಿಯಷ್ಟೇ ಪವಿತ್ರ ಅನ್ನೋದು ಭಕ್ತರ ಅಂಬೋಣ. ಇನ್ನುಳಿದಂತೆ ಕಾರವಾರ ಸಮುದ್ರ ತೀರ, ಶಿರಸಿಯ ಮಾರಿಕಾಂಬ ದೇವಾಲಯ, ಶ್ಯಾಮಲೆಯ ತಟದಲ್ಲಿರೋ ಸೊಂದಾ ಮಠ, ಹಾಗೆಯೇ ಪ್ರಸಿದ್ಧ ಪ್ರವಾಸೀ ತಾಣವಾಗಿರೋ ಯಾಣ ಕೂಡಾ ನೋಡುಗರನ್ನ ಸೂಜಿಗಲ್ಲಿನಂತೆ ಸೆಳೆಯುತ್ತೆ.

    ದಕ್ಷಿಣ ಕನ್ನಡದಲ್ಲಿ ತೆಂಕು ತಿಟ್ಟು, ಉತ್ತರ ಕನ್ನಡದಲ್ಲಿ ಬಡಾ ಬಡಗುತಿಟ್ಟಿನ ತಾಳ ಮೇಳ..!
    ಯಕ್ಷಗಾನದಲ್ಲಿ ತೆಂಕು ತಿಟ್ಟು, ಬಡಗು ತಿಟ್ಟು ಹಾಗೂ ಬಡಾ ಬಡಗುತಿಟ್ಟು ಅನ್ನೋ ಪ್ರಬೇಧಗಳಿವೆ. ಇದ್ರಲ್ಲಿ ಉತ್ತರ ಕನ್ನಡದವರು ಬಡಾ ಬಡಗು ತಿಟ್ಟನ್ನಾಡುತ್ತಾರೆ. ಕೆರೆಮನೆ ಶಿವರಾಮ ಹೆಗಡೆ, ಕೆರೆಮನೆ ಮಹಾಬಲ ಹೆಗಡೆ, ಕೆರೆಮನೆ ಶಂಭು ಹೆಗಡೆ, ಕೊಂಡದಕುಳಿ ರಾಮಚಂದ್ರ ಹೆಗಡೆ, ಶೇಣಿ ಗೋಪಾಲಕೃಷ್ಣ ಭಟ್ ಹೀಗೆ ಉತ್ತರಕನ್ನಡ ಘಟಾನುಘಟಿ ಯಕ್ಷಕರ್ಮಿಗಳ ತವರೂರು. ಇಂದಿಗೂ ಮನೋರಂಜನೆಗಾಗಿ ಸಿನಿಮಾ, ಟಿವಿ ಮಾಧ್ಯಮಗಳಿದ್ರೂನೂ ಉತ್ತರ ಕನ್ನಡದ ಮಂದಿ ಮಾತ್ರ ಯಕ್ಷಗಾನವನ್ನ ತಮ್ಮ ಉಸಿರಲ್ಲಿ ಉಸಿರಾಗಿಸ್ಕೊಂಡಿದ್ದಾರೆ.

    ಉತ್ತರ ಕನ್ನಡದಲ್ಲಿ ಉತ್ತರವೇ ಇಲ್ಲದ ಪ್ರಶ್ನೆಗಳು ಹಲವಾರು..!
    ಇಷ್ಟೆಲ್ಲಾ ವೈಶಿಷ್ಟ್ಯತೆಗಳ ನಡುವೆ ಉತ್ತರ ಕನ್ನಡದಲ್ಲಿ ಈ ಬಾರಿ ಅತೀ ಹೆಚ್ಚು ಸದ್ದು ಮಾಡಿದ್ದು ಪರೇಶ್ ಮೇಸ್ತಾ ಸಾವು. ಇದು ದೊಡ್ಡ ಮಟ್ಟದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ಪರಿಣಾಮ ಬೀರೋ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇನ್ನು, ಅಭಿವೃದ್ಧಿ ಹಾಗೂ ಉತ್ತರ ಕನ್ನಡ ಒಂದು ರೀತಿಯಲ್ಲಿ ಎಣ್ಣೆ ಸೀಗೆ ಇದ್ದಂತೆ. ಅಭಿವೃದ್ಧಿ ಅನ್ನೋದನ್ನ ನೋಡಿಯೇ ಕಾಲವಾಗಿದೆ. ಹಾಗಾದ್ರೆ, ಕ್ಷೇತ್ರವಾರು ಲೆಕ್ಕಾಚಾರಗಳು, ಕಳೆದ ಬಾರಿಯ ಫಲಿತಾಂಶ ಹಾಗೂ ಈ ಬಾರಿಯ ಕ್ಯಾಂಡಿಡೇಟ್ ಗಳ ವಿವರಗಳನ್ನು ನೋಡೋಣ ಬನ್ನಿ.

    ಕಾರವಾರ ಈ ಬಾರಿ ಯಾರ ಪಾಲಿನ ವರ..?

    ಕರ್ನಾಟಕದ ಏಕೈಕ ಅಣು ವಿದ್ಯುತ್ ಸ್ಥಾವರ ಕೈಗಾ ಕಾರವಾರದಲ್ಲಿದೆ. ಕರ್ನಾಟಕದ ಎರಡನೇ ಅತೀ ಪ್ರಮುಖ ಬಂದರೂ ಕೂಡಾ ಹೌದು. ಇಲ್ಲಿನ ಜನ ಪಕ್ಷ ನೋಡೋರೇ ಅಲ್ಲ. ಯಾವ ವ್ಯಕ್ತಿ ಸೂಕ್ತ, ಯಾರ ವರ್ಚಸ್ಸು ಇಲ್ಲಿ ವರ್ಕೌಟ್ ಆಗುತ್ತೋ ಅವರಿಗೇ ಇಲ್ಲಿನ ಮತದಾರ ಜೈ ಅಂತಾನೆ. 2013ರಲ್ಲಿ ಕಾಂಗ್ರೆಸ್ ನಿಂದ ಬಿಜೆಪಿಗೆ ಜಂಪ್ ಆಗಿದ್ದ ಆನಂದ್ ಅಸ್ನೋಟಿಕರ್ ಇಲ್ಲಿ ಮಕಾಡೆ ಮಲಗಿದ್ರು. ಈ ಬಾರಿ ಆಸ್ನೋಟಿಕರ್ ಜೆಡಿಎಸ್ ನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಜೆಡಿಎಸ್ ಇಲ್ಲಿ ಇದ್ದೂ ಇಲ್ಲದಂತಿದ್ರೂ ಆಸ್ನೋಟಿಕರ್ ಹೆಸರು ಸ್ವಲ್ಪ ಮಟ್ಟಿಗೆ ಪರಿಗಣಿತಗೊಳ್ಬೋದು. ಇನ್ನುಳಿದಂತೆ ಬಿಜೆಪಿಯಿಂದ ರೂಪಾಲಿ ನಾಯ್ಕ್, ಕಾಂಗ್ರೆಸ್ ನಿಂದ ಸತೀಶ್ ಸೈಲ್ ಕೃಷ್ಣ ಕಣದಲ್ಲಿದ್ದಾರೆ. ಸೋ ಇಲ್ಲಿ ಮತದಾರ ಯಾರಿಗೆ ಜೈ ಅಂತಾನೆ ಅನ್ನೋದೇ ಸದ್ಯದ ಕುತೂಹಲ.

    ಕುಮಟಾದಲ್ಲಿ ಗೆಲುವಿನ ತಮಟೆ ಹೊಡೆಯೋರು ಯಾರು..?
    ಕುಮಟಾ ಹೊನ್ನವರ ಕ್ಷೇತ್ರದ ಹಾಲಿ ಶಾಸಕಿ ಶಾರದಾ ಮೋಹನ ಶೆಟ್ಟಿ. ಈ ಬಾರಿಯೂ ಇವರೇ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ. ಜೆಡಿಎಸ್ ನಿಂದ ಜಿಲ್ಲಾ ಪಂಚಾಯತ್ ಸದಸ್ಯ ಪ್ರದೀಪ್ ನಾಯ್ಕ್ ಬಿರುಸಿನ ಪ್ರಚಾರ ನಡೆಸ್ತಾ ಇದ್ದಾರೆ. 2013ರಲ್ಲಿ ಜೆಡಿಎಸ್ ನಿಂದ ಕಂಟೆಸ್ಟ್ ಮಾಡಿ ಕೇವಲ 420 ಮತಗಳಿಂದ ಸೋಲು ಕಂಡಿದ್ದ ದಿನಕರ್ ಶೆಟ್ಟಿ ಈ ಬಾರಿ ಭಾಜಪಾದ ಹುರಿಯಾಳು. ಕಳೆದ ಬಾರಿ ಶಾರದ ಮೋಹನ್ ಶೆಟ್ಟಿ 36,756 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ರು. ಜೆಡಿಎಸ್ ನ ದಿನಕರ್ ಕೇಶವ್ ಶೆಟ್ಟಿ 36,336 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತರಾಗ್ಬೇಕಾಯ್ತು.

    ಭಟ್ಕಳದಲ್ಲಿ ಗೆಲುವಿನ ಅಟ್ಟಕ್ಕೇರೋರು ಯಾರು..?
    ಕಳೆದ ಬಾರಿ ಪಕ್ಷೇತರವಾಗಿ ನಿಂತು ಗೆದ್ದು ಬೀಗಿದ್ದ ಮಂಕಾಳ ವೈದ್ಯ ಈ ಬಾರಿ ಕಾಂಗ್ರೆಸ್ ನಿಂದ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸುನಿಲ್ ನಾಯ್ಕ್ ಈ ಬಾರಿ ಬಿಜೆಪಿಯ ಕಟ್ಟಾಳು. ಜೆಡಿಎಸ್ ಇನಾಯಿತುಲ್ಲಾ ಷಾ ಬಂದ್ರಿಯವರಿಗೆ ಟಿಕೆಟ್ ಕೊಡೋದಕ್ಕೆ ಬಯಸಿದ್ರೂ ಕೊನೆಗೆ ಯಾರನ್ನೂ ಕಣಕ್ಕಿಳಿಸದೆ ಸೈಲೆಂಟಾಗಿದೆ.

    ಹಳಿಯಾಳದಲ್ಲಿ ಗೆಲುವಿನ ಹಳಿಯಲ್ಲಿ ಓಡೋರು ಯಾರು..?
    ಹಳಿಯಾಳ ಕ್ಷೇತ್ರ ಸಚಿವ ಆರ್.ವಿ ದೇಶಪಾಂಡೆಯವ್ರ ಸಾಮ್ರಾಜ್ಯ. 1983ರಿಂದ ಸತತ ಆರು ಎಲೆಕ್ಷನ್ ಗೆದ್ದಿರೋ ದೇಶಪಾಂಡೆಗೆ ಇಲ್ಲಿ ಸೋಲಿನ ರುಚಿ ತೋರಿಸೋರು ಯಾರು ಇಲ್ಲ ಅನ್ನೋ ಪರಿಸ್ಥಿತಿ ಇತ್ತು. ಆದ್ರೆ, 2008ರಲ್ಲಿ ಜೆಡಿಎಸ್ ನಿಂದ ಕಣಕ್ಕಿಳಿಸಿದ್ದ ಸುನಿಲ್ ಹೆಗಡೆ ದೇಶಪಾಂಡೆಯವ್ರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್ ಹಾಕಿದ್ರು. ಆದ್ರೆ, 2013ರಲ್ಲಿ ಮತ್ತೆ ದೇಶಪಾಂಡೆ ಗೆಲುವಿನ ನಗೆ ಬೀರಿದ್ರು. ಈಗ ಇಬ್ಬರೂ ಮತ್ತೆ ಮುಖಾಮುಖಿಯಾಗ್ತಿದ್ದಾರೆ. ಜೆಡಿಎಸ್ ನಿಂದ ಕೆ. ರಮೇಶ್ ಈ ಬಾರಿ ಕಣದಲ್ಲಿದ್ದಾರೆ.

    ಶಿರಸಿಯಲ್ಲಿ ಯಾರ ಶಿರಕ್ಕೆ ಗೆಲುವಿನ ಮುಕುಟ..?
    ಬಿಜೆಪಿಯಿಂದ ಶಿರಸಿಯನ್ನು ಹೇಗಾದ್ರೂ ಮಾಡಿ ಕಸಿಯಲೇಬೇಕು ಅನ್ನೋ ಪಣಕ್ಕೆ ಬಿದ್ದಿವೆ ಕಾಂಗ್ರೆಸ್ ಹಾಗೂ ಜೆಡಿಎಸ್. 1999ರಿಂದಲೂ ಇಲ್ಲಿ ಬಿಜೆಪಿಯದ್ದೇ ಅಬ್ಬರ. ವಿಶ್ವೇಶ್ವರ ಹೆಗಡೆ ಕಾಗೇರಿ ಇಲ್ಲಿ ಬಿಜೆಪಿಯ ಪ್ರಬಲ ಅಭ್ಯರ್ಥಿ. ದಿ.ರಾಮಕೃಷ್ಣ ಹೆಗಡೆ ಕುಟುಂಬದ ಶಶಿಭೂಷಣ ಹೆಗಡೆ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದು ಕದನ ಕಣ ಕುತೂಹಲ ಮೂಡಿಸಿದೆ. ಹೀಗಾಗಿ, ಶಿರಸಿ ಹವ್ಯಕರ ಮತ ಬ್ಯಾಂಕ್ ಒಡೆದು ಹೋಗುವ ಸಾಧ್ಯತೆ ದಟ್ಟವಾಗಿದೆ. ದಿ.ಎಸ್ ಬಂಗಾರಪ್ಪ ಅವ್ರ ದೂರದ ಸಂಬಂಧಿ ಭೀಮಣ್ಣ ನಾಯ್ಕ್ ಕೂಡಾ ಕಣದಲ್ಲಿದ್ದು ಈ ಬಾರಿ ಘಟಾನುಘಟಿ ನಾಯಕ್ರ ಸಂಬಂಧಿಕರದ್ದೇ ಚರ್ಚೆ ಶಿರಸಿಯಲ್ಲಿ ಜೋರಾಗಿದೆ.

    ಯಲ್ಲಾಪುರದ ಅರಸ ಯಾರಾಗ್ತಾರೆ..?
    ಯಲ್ಲಾಪುರದ ಜನರಿಗೆ ಬಿಜೆಪಿ ಫೆವರೇಟ್ ಅನ್ನೋದು ಸದ್ಯಕ್ಕಿರೋ ಟ್ರೆಂಡ್. ಯಾಕಂದ್ರೆ ಇಲ್ಲಿ ಜನಪ್ರತಿನಿಧಿಗಳು ಯಾರಾಗ್ಬೇಕು ಅನ್ನೋದನ್ನ ನಿರ್ಧರಿಸೋರೇ ಹವ್ಯಕ ಬ್ರಾಹ್ಮಣ, ಲಿಂಗಾಯತ ಹಾಗೂ ನಾಮಧಾರಿಗಳು. ಆದ್ರೆ, 2013ರಲ್ಲಿ ಈ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಹೋಗಿತ್ತು. ಹಾಲಿ ಶಾಸ್ ಕಾಂಗ್ರೆಸ್ ನ ಶಿವರಾಮ ಹೆಬ್ಬಾರ್ ಈ ಬಾರಿಯೂ ಕಣದಲ್ಲಿದ್ದಾರೆ. ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ತೆನೆ ಹೊತ್ತಿದ್ದ ರವೀಂದ್ರನಾಥ್ ಈ ಬಾರಿ ಜೆಡಿಎಸ್ ನಿಂದ ಪೈಪೋಟಿ ಕೊಡೋಕೆ ನಿಂತಿದ್ದಾರೆ. ಇನ್ನು ಬಿಜೆಪಿಯಿಂದ ವಿಎಸ್ ಪಾಟೀಲ್ ರಣಕಣಕ್ಕೆ ಧುಮುಕಿದ್ದಾರೆ. ಆದ್ರೆ, ಮತದಾರ ಈ ಬಾರಿ ಯಾರಿಗೆ ಕೃಪಾಕಟಾಕ್ಷ ತೋರ್ತಾನೆ ಅನ್ನೋದಕ್ಕೆ ಮೇ 15ರವರೆಗೆ ಕಾಯ್ಲೇಬೇಕು.