Tag: bandh

  • ಮಂಗಳವಾರ ಬೆಂಗಳೂರು ಬಂದ್ ಇರುತ್ತಾ? – ಕನ್ನಡ ಸಂಘಟನೆಗಳಿಂದ ತಟಸ್ಥ ಧೋರಣೆ

    ಮಂಗಳವಾರ ಬೆಂಗಳೂರು ಬಂದ್ ಇರುತ್ತಾ? – ಕನ್ನಡ ಸಂಘಟನೆಗಳಿಂದ ತಟಸ್ಥ ಧೋರಣೆ

    ಬೆಂಗಳೂರು: ಕಾವೇರಿ ನೀರಿನ ವಿಚಾರವಾಗಿ ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಕರ್ನಾಟಕ ರಾಜ್ಯ ರೈತ ಸಂಘಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ (Kuruburu Shanthakumar) ನೇತೃತ್ವದಲ್ಲಿ ಜಲ ಸಂರಕ್ಷಣಾ ಸಮಿತಿಯಿಂದ (Water Conservation Committee) ಮಂಗಳವಾರ ಬಂದ್‌ಗೆ ಕರೆ ನೀಡಲಾಗಿದ್ದು, ಕನ್ನಡ ಪರ ಸಂಘಟನೆಗಳು (Pro-Kannada Organization) ಈ ವಿಚಾರವಾಗಿ ತಟಸ್ಥ ಧೋರಣೆ ತಾಳಿವೆ.

    ಮಂಗಳವಾರ ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ಪ್ರವೀಣ್ ಶೆಟ್ಟಿ (Praveen Shetty) ಬಣ ಹೇಳಿದೆ. ಸದ್ಯಕ್ಕೆ ಕನ್ನಡ ಸಂಘಟನೆಗಳಿಂದ ಮಂಗಳವಾರ ಬಂದ್ ಬಗ್ಗೆ ಬೆಂಬಲವಿಲ್ಲ. ಬೇರೆ ದಿನಾಂಕದಂದು ಬಂದ್ ಘೋಷಣೆಯಾಗಬೇಕಿತ್ತು. ಮಂಗಳವಾರ ಕರೆ ನೀಡಿದ್ದು ಬಹಳ ಬೇಗ ಆಯ್ತು. ಎಲ್ಲರನ್ನೂ ಒಟ್ಟುಗೂಡಿಸಲು ಕಷ್ಟ ಆಗಬಹುದು ಎಂದು ಕನ್ನಡ ಸಂಘಟನೆಗಳ ಮುಖಂಡರು ಹೇಳುತ್ತಿದ್ದಾರೆ. ಇದನ್ನೂ ಓದಿ: ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ

    ಈ ಕುರಿತು ಕರವೇ ನಾರಾಯಣಗೌಡ ಬಣ, ಕರವೇ ಪ್ರವೀಣ್ ಶೆಟ್ಟಿ ಬಣ, ಕರವೇ ಶಿವರಾಮೇಗೌಡ ಬಣ, ಸೇರಿ ಹಲವು ಕನ್ನಡಪರ ಸಂಘಟನೆಗಳಿಂದ ಬಂದ್ ಬಗ್ಗೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

    ಕಾವೇರಿ, ಹೇಮಾವತಿ ನೀರಿಗಾಗಿ ಮಂಗಳವಾರ ಕೆಆರ್ ಪೇಟೆ ಬಂದ್

    ಮಂಡ್ಯ: ಕಾವೇರಿ (Cauvery) ಮತ್ತು ಹೇಮಾವತಿ (Hemavati) ನೀರಿಗಾಗಿ ಸೆಪ್ಟೆಂಬರ್ 26ರಂದು ಕೆಆರ್ ಪೇಟೆ (KR Pete) ಬಂದ್‌ಗೆ (Bandh) ಕರೆ ನೀಡಲಾಗಿದೆ.

    ಕಾವೇರಿ ನೀರಿನ ಜೊತೆಗೆ ಹೇಮಾವತಿ ನೀರು ಉಳಿವಿಗಾಗಿ ಬಂದ್‌ಗೆ ಕರೆ ನೀಡಲಾಗಿದೆ. ರೈತ, ಕನ್ನಡ, ದಲಿತ, ಪ್ರಗತಿಪರ ಸಂಘಟನೆಗಳು ಬದ್‌ಗೆ ಕರೆ ನೀಡಿವೆ. ಈ ಬಂದ್‌ಗೆ ಜೆಡಿಎಸ್ ಹಾಗೂ ಬಿಜೆಪಿಯೂ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಗೋಮಾಂಸ ಸಾಗಾಟ ಮಾಡುತ್ತಿದ್ದ ಕಾರಿಗೆ ಬೆಂಕಿ ಹಚ್ಚಿದ ಶ್ರೀರಾಮ ಸೇನೆ

    ಕೆಆರ್ ಪೇಟೆ ಭಾಗದಲ್ಲಿ ಉಪಯೋಗಕ್ಕೆ ಸಿಗುವುದು ಹೇಮಾವತಿ ನೀರು. ಕೆಆರ್‌ಎಸ್ ಡ್ಯಾಂನಲ್ಲಿ ನೀರು ಖಾಲಿಯಾದರೆ ಹೇಮಾವತಿಯಿಂದ ನೀರು ಬಿಡುಗಡೆಯಾಗಲಿದೆ. ಆಗ ಎರಡೂ ಡ್ಯಾಂನ ನೀರು ಖಾಲಿಯಾಗುವ ಆತಂಕ ಎದುರಾಗಿದೆ. ಹೀಗಾಗಿ ಎರಡು ಡ್ಯಾಂ ನೀರು ರಕ್ಷಣೆಗೆ ಆಗ್ರಹಿಸಿ ಕೆಆರ್ ಪೇಟೆ ಬಂದ್‌ಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ಬಂದ್ ಮಾಡಿದರೆ ಬ್ರ್ಯಾಂಡ್‌ ಬೆಂಗಳೂರಿಗೆ ಧಕ್ಕೆ – ಡಿಕೆಶಿ ಹೇಳಿಕೆಗೆ ಆಕ್ರೋಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ ಹೋರಾಟಕ್ಕೆ ಬೆಂಬಲಿಸಿ ಮಂಡ್ಯ ಚಿತ್ರಮಂದಿರಗಳು ಬಂದ್

    ಕಾವೇರಿ ಹೋರಾಟಕ್ಕೆ ಬೆಂಬಲಿಸಿ ಮಂಡ್ಯ ಚಿತ್ರಮಂದಿರಗಳು ಬಂದ್

    ಕಾವೇರಿ ನದಿ ನೀರು ಹೋರಾಟಕ್ಕೆ ಸಂಬಂಧಿಸಿದಂತೆ ಇಂದು ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ (Cauvery Protest) ಮಂಡ್ಯ ಥಿಯೇಟರ್ (theater) ಮಾಲೀಕರು ಕೂಡ ಬೆಂಬಲ ಸೂಚಿಸಿದ್ದಾರೆ. ಚಿತ್ರಮಂದಿರಗಳನ್ನು ಬಂದ್ ಮಾಡುವ ಮೂಲಕ ಹೋರಾಟಕ್ಕೆ ಇಳಿದಿದ್ದಾರೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಮಾಡಿದರೆ, ರಾಜ್ಯಾದ್ಯಂತ ಚಿತ್ರಮಂದಿರಗಳು ಕೂಡ ಬಂದ್ ಆಗಲಿವೆ.

    ಸ್ಯಾಂಡಲ್ ವುಡ್ ನಟ ನಟಿಯರು ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯ (Mandya) ಭಾಗದ ರೈತರ ಪರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರೆ, ನಟ ಅಭಿಷೇಕ್ ಅಂಬರೀಶ್ (Abhishek Ambarish) ನೇರವಾಗಿ ರೈತರ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

    ಕಾವೇರಿ (Cauvery) ಹೋರಾಟಕ್ಕೆ ಸಂಬಂಧಿಸಿದಂತೆ ಈ ಹಿಂದೆ ಅಂಬರೀಶ್ ಅವರು ತಮ್ಮ ಕೇಂದ್ರ ಮಂತ್ರಿ ಸ್ಥಾನವನ್ನೇ ತ್ಯಜಿಸಿದ್ದರು. ನಂತರ ಮಂಡ್ಯದ ಎಂಪಿ ಆಗಿರುವ ನಟಿ ಸುಮಲತಾ ಅಂಬರೀಶ್ ಕೂಡ ಹಲವು ದಿನಗಳಿಂದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಇದೀಗ ಅವರ ಪುತ್ರ ಅಭಿಷೇಕ್ ಕೂಡ ನೇರವಾಗಿ ಹೋರಾಟಕ್ಕೆ ಇಳಿಸಿದ್ದಾರೆ.

    ನಟ, ಯುವರಾಜಕಾರಣಿ ನಟ ನಿಖಿಲ್ ಕುಮಾರ್, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿರೋ ನಿಖಿಲ್, ‘ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ’ ಎಂದಿದ್ದಾರೆ.

     

    ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ರಾಜ್ಯದಲ್ಲಿ ನೀರಿನ ಕೊರತೆ ಇದೆ ಮಳೆ ಕೈಕೊಟ್ಟಿದೆ. ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರಕಾರ ಏಕಪಕ್ಷೀಯವಾಗಿ ನೀರು ಹರಿಸಿದ್ದು ಅಕ್ಷಮ್ಯ. ಬ್ರಿಟೀಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರಕಾರವೇ ಮುಂದುವರಿಸಿದೆ ಎಂದು ಬರೆದುಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ಬಂದ್

    ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ಬಂದ್

    ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಹುಲಿಸಂರಕ್ಷಿತಾರಣ್ಯ ಬಂಡೀಪುರದಲ್ಲಿ (Bandipura) ಇಂದು (ಬುಧವಾರ) ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ.

    ಇಂದು (ಸೆ.20) ಸಫಾರಿ ಪಾಯಿಂಟ್ ಮೇಲುಕಾಮನಹಳ್ಳಿಯಲ್ಲಿ ಬಂಡೀಪುರದ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಬಂಡೀಪುರದ ಅರಣ್ಯ ಸಿಬ್ಬಂದಿ ಸೇವೆ, ಸಾಧನೆ ಸ್ಮರಿಸಿ ಗೌರವ ಸಲ್ಲಿಕೆ ಮಾಡಲಾಗುತ್ತದೆ. ಇದನ್ನೂ ಓದಿ: ಹಾಲಶ್ರೀ ಬಂಧಿಸಲು ಅರ್ಚಕರ ವೇಷದಲ್ಲಿ ಫೀಲ್ಡ್‌ಗಿಳಿದಿದ್ದ ಅಧಿಕಾರಿಗಳು!

    ಈ ವೇಳೆ ಬಂಡೀಪುರದ ಬಹುತೇಕ ಎಲ್ಲಾ ಸಿಬ್ಬಂದಿ ಕೂಡ ಪಾಲ್ಗೊಳ್ಳುತ್ತಾರೆ. ಅರಣ್ಯ ಸಿಬ್ಬಂದಿಗಳಿಗೆ ಮೊದಲ ಬಾರಿಗೆ ಗೌರವ ಕೊಡಲು ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಿರುವ ಕುರಿತು ಬಂಡೀಪುರ ಹುಲಿಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ಕೊಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಧ್ಯರಾತ್ರಿಯಿಂದ್ಲೇ ಬಂದ್ ಬಿಸಿ- ಸೋಮವಾರ ಆಟೋ, ಟ್ಯಾಕ್ಸಿ ಸಿಗೋದು ಅನುಮಾನ

    ಮಧ್ಯರಾತ್ರಿಯಿಂದ್ಲೇ ಬಂದ್ ಬಿಸಿ- ಸೋಮವಾರ ಆಟೋ, ಟ್ಯಾಕ್ಸಿ ಸಿಗೋದು ಅನುಮಾನ

    ಬೆಂಗಳೂರು: ಸೋಮವಾರ ಬೆಂಗಳೂರು ಭಾಗಶಃ ಬಂದ್ ಆಗುವ ಸಂಭವ ಇದೆ. ಕಾರಣ ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದೆ.

    ಇಂದು ಮಧ್ಯರಾತ್ರಿಯಿಂದ್ಲೇ ಬಂದ್ ಬಿಸಿ ಶುರುವಾಗಿದೆ, ಆಟೋ, ಟ್ಯಾಕ್ಸಿ, ಗೂಡ್ಸ್, ಖಾಸಗಿ ಬಸ್ ಸೇರಿ ವಿವಿಧ ಮಾದರಿಯ ಖಾಸಗಿ ಸಾರಿಗೆಯ ವಾಹನಗಳು ರಸ್ತೆಗೆ ಇಳಿಯಲ್ಲ. ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಒಕ್ಕೂಟ ಆಯೋಜಿಸಿದೆ. ಬಂದ್ ಯಶಸ್ಸಿಗಾಗಿ ಒಕ್ಕೂಟ ಪಣತೊಟ್ಟಿದೆ. ಇದನ್ನೂ ಓದಿ: ಭಾರತ ಎಂಬ ಮರುನಾಮಕರಣವನ್ನು ವಿರೋಧಿಸುವವರು ದೇಶ ತೊರೆಯಬಹುದು: ಬಿಜೆಪಿ ಎಂಪಿ

    ಬೆಂಗಳೂರಿನ ಕಲಾಸಿಪಾಳ್ಯ ಖಾಸಗಿ ಬಸ್ ನಿಲ್ದಾಣದ ಒಂದರಲ್ಲೇ  250ಕ್ಕೂ ಹೆಚ್ಚು ಬಸ್ ಸ್ತಬ್ದವಾಗಲಿದೆ. ಕೇವಲ ಬೆಂಗಳೂರು ಮಾತ್ರವಲ್ಲದೇ ನೆರೆಯ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಇದರ ಪರಿಣಾಮ ಬೆಂಗಳೂರು ಜನಜೀವನದ ಮೇಲೆ ಸ್ವಲ್ಪ ಮಟ್ಟಿಗೆ ಬೀರುವ ಸಂಭವ ಇದೆ. ಇದನ್ನೂ ಓದಿ: ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ, ಹೋರಾಟ ಮಾಡೋದು ನೌಕರರ ಹಕ್ಕು: ರಾಮಲಿಂಗಾ ರೆಡ್ಡಿ

    ಏನೆಲ್ಲಾ ಇರಲ್ಲ?: ಆಟೋ, ಖಾಸಗಿ ಟ್ಯಾಕ್ಸಿ, ಏರ್‌ಪೋರ್ಟ್ ಟ್ಯಾಕ್ಸಿ, ಶಾಲೆಗಳ ಖಾಸಗಿ ವಾಹನ, ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಇರಲ್ಲ.
    ಖಾಸಗಿ ಬಸ್ ಎಫೆಕ್ಟ್ ಎಲ್ಲಿ?: ಬೆಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ ಹಾಗೂ ಬಳ್ಳಾರಿಯಲ್ಲಿ ಖಾಸಗಿ ಬಸ್ ಎಫೆಕ್ಟ್ ಬೀಳಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

    ‘ಶಕ್ತಿ’ ವಿರೋಧಿಸಿ ಕರ್ನಾಟಕ ಬಂದ್ – ಖಾಸಗಿ ಸಾರಿಗೆ ಒಕ್ಕೂಟದ ಜೊತೆಗಿನ ಸಭೆ ವಿಫಲ

    ಬೆಂಗಳೂರು: ಶಕ್ತಿ ಯೋಜನೆ (Shakti Scheme) ಜಾರಿಯಾಗಿದ್ದರಿಂದ ಮಹಿಳೆಯರೇನೋ ಪುಲ್ ಖುಷ್ ಆಗಿದ್ದಾರೆ. ಆದರೆ ಖಾಸಗಿ ಸಾರಿಗೆ ಸಂಘಟನೆಗಳು ಹಾಗೂ ಸರ್ಕಾರದ ಜಟಾಪಟಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಸೋಮವಾರ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಮುಖ್ಯಮಂತ್ರಿಗಳು ಕರೆದ ಸಭೆಯನ್ನು ಕೆಲ ಖಾಸಗಿ ಸಾರಿಗೆ ಸಂಘಟನೆಗಳು ಬಹಿಷ್ಕರಿಸಿವೆ. ಜೊತೆಗೆ ಸರ್ಕಾರಕ್ಕೆ ಮತ್ತೊಮ್ಮೆ ಬೆಂಗಳೂರು ಬಂದ್ (Bengaluru Bandh) ಅಥವಾ ಕರ್ನಾಟಕ ಬಂದ್ (Karnataka Bandh) ಮಾಡುವ ಎಚ್ಚರಿಕೆ ನೀಡಿವೆ.

    ಶಕ್ತಿ ಯೋಜನೆ ಜಾರಿ ಆದ ನಂತರ ಖಾಸಗಿ ಸಾರಿಗೆ ಉದ್ಯಮಕ್ಕೆ ಎದುರಾದ ಸಂಕಷ್ಟಗಳ ಕುರಿತಂತೆ ಆಗಾಗ್ಗೆ ಆಕ್ರೋಶ ವ್ಯಕ್ತವಾಗುತ್ತಿತ್ತು. ಇದರ ಗಂಭೀರತೆ ಅರಿತ ಸಚಿವ ರಾಮಲಿಂಗಾರೆಡ್ಡಿ ಹಲವು ಸುತ್ತಿನ ಮಾತುಕತೆ ಸಹ ನಡೆಸಿದ್ದರು. ಆದರೆ ಯಾವುದಕ್ಕೂ ತಾರ್ಕಿಕ ಅಂತ್ಯ ಸಿಗದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತತ್ವದಲ್ಲಿ ನಡೆದ ಸಭೆಯಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಸದಸ್ಯರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ.

    ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಸಹ ಸಭೆಯಲ್ಲಿ ಭಾಗಿ ಆಗಿದ್ದರು. ಆದರೆ ಈ ಸಭೆಗೆ ಬಂದ್‌ಗೆ ಕರೆಕೊಟ್ಟಿದ್ದ ಖಾಸಗಿ ಸಾರಿಗೆ ಸಂಘಟನೆಗಳ ಅಧ್ಯಕ್ಷ ಹಾಗೂ ಖಾಸಗಿ ಬಸ್ ಸಂಘಟನೆಯ ಅಧ್ಯಕ್ಷ ನಟರಾಜಶರ್ಮಾ, ಪೀಸ್ ಆಟೋ ಅಸೋಸಿಯೇಷನ್‌ನ ರಾಘು, ರಾಧಾಕೃಷ್ಣ ಹೊಳ್ಳ ಸಂಘಟನೆಯವರು ಸಿಎಂ ಸಭೆಯನ್ನು ಬಹಿಷ್ಕರಿಸಿದರು.

    ಈ ಬಗ್ಗೆ ಮಾತನಾಡಿದ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ ಶರ್ಮಾ, ಸಾರಿಗೆ ಸಚಿವರ ಆಶ್ವಾಸನೆ ಮೇರೆಗೆ ಬಂದ್ ವಾಪಾಸ್ ಪಡೆದಿದ್ದೆವು. ಆದರೆ ಹೋರಾಟಕ್ಕೆ ಬೆಂಬಲ ಸೂಚಿಸದ ಸಂಘಟನೆಗಳನ್ನು ಸಭೆಗೆ ಕರೆಯಲಾಗಿದೆ. ಸಾರಿಗೆ ಅಡಿಷನಲ್ ಕಮೀಷನರ್, ಹೇಮಂತ್ ಕುಮಾರ್ ಸಂಘಗಳನ್ನು ಒಡೆಯೋ ಕೆಲಸ ಮಾಡುತ್ತಾರೆ. ಹೇಮಂತ್ ಕುಮಾರ್ ವರ್ಗಾವಣೆಗೆ ಕಮಿಷನರ್‌ಗೆ ಮನವಿ ಮಾಡಿದ್ದೇವೆ. ಸಿಎಂ ಸಭೆಗೆ 32 ಸಂಘಟನೆಗಳು ಬಹಿಷ್ಕರಿಸಿದ್ದೇವೆ. ಸಿಎಂ ಸಭೆಯನ್ನು ತುಚ್ಚವಾಗಿ ನೋಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು. ಇನ್ನೂ 10 ದಿನ ಕಾಲಾವಕಾಶವಿದ್ದು ಅಷ್ಟರೊಳಗೆ ಮತ್ತೆ ಎಲ್ಲಾ ಸಂಘಟನೆಗಳು ಸೇರಿ ಸಭೆ ಕರೆಯಬೇಕು. ಇಲ್ಲದಿದ್ದರೆ ಹೋರಾಟದ ದಾರಿ ಹಿಡಿಯುತ್ತೇವೆ. ಸೆಪ್ಟೆಂಬರ್ 1 ರಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ ದಿನಾಂಕ ಪ್ರಕಟಿಸುತ್ತೇವೆ ಎಂದರು.

    ಸೋಮವಾರದ ಸಿಎಂ ಸಭೆಯಲ್ಲಿ ಭಾಗವಹಿಸಿದ ಆದರ್ಶ್ ಆಟೋ ಹಾಗೂ ಟ್ಯಾಕ್ಸಿ ಚಾಲಕರ ಸಂಘದ ಸಭೆಯಲ್ಲಿ ಭಾಗಿಯಾದ ಮಂಜುನಾಥ್ ಮಾತನಾಡಿ, ಆಟೋ ಅಸೋಸಿಯೇಷನ್‌ನ ಬೇಡಿಕೆಗೆ ಮನವಿ ಮಾಡಿದ್ದೇವೆ. 30 ರವರೆಗೆ ಗಡವು ನೀಡಲಾಗಿದೆ. ಬೇಡಿಕೆ ಈಡೇರದೇ ಇದ್ದರೆ ಮತ್ತೆ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಇನ್ಮುಂದೆ ಲಗೇಜ್‌ಗಳನ್ನು ಸಾಗಿಸಲು ರಸ್ತೆಗಿಳಿಯಲಿದೆ KSRTC ಲಾರಿ

    ಒಟ್ಟಿನಲ್ಲಿ ಸಿಎಂ ಆಶ್ವಾಸನೆಗೆ ಕೆಲ ಒಕ್ಕೂಟಗಳು ಸಮ್ಮತ ವ್ಯಕ್ತಪಡಿಸಿದರೆ ಇನ್ನೂ ಕೆಲವು ಸಂಘಟನೆಗಳು ವಿರೋಧಿಸಿವೆ. ಯಾವಾಗ ಈ ಭರವಸೆಗಳು ಕಾರ್ಯರೂಪಕ್ಕೆ ಬರುತ್ತದೆ ಅನ್ನೋದನ್ನು ಕಾದು ನೋಡಬೇಕಿದೆ. ಇಲ್ಲದಿದ್ದರೆ ಸಾರಿಗೆ ಒಕ್ಕೂಟಗಳು ಮತ್ತೆ ಹೋರಾಟದ ಹಾದಿ ತುಳಿಯುವುದು ಪಕ್ಕ. ಇದನ್ನೂ ಓದಿ: ದಶಪಥ ಹೆದ್ದಾರಿಯಲ್ಲಿ ಓಡಾಡುವವರೇ ಎಚ್ಚರ – ಇಂದು ಕಾವೇರಿಗಾಗಿ ರೈತರಿಂದ ಬೃಹತ್ ಪ್ರತಿಭಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೂನ್ 5 ರಿಂದ ಕನ್ನಡ ಸಿನಿಮಾಗಳ ಶೂಟಿಂಗ್ ಬಂದ್

    ಜೂನ್ 5 ರಿಂದ ಕನ್ನಡ ಸಿನಿಮಾಗಳ ಶೂಟಿಂಗ್ ಬಂದ್

    ಸ್ಯಾಂಡಲ್ ವುಡ್ (Sandalwood) ಅಂಗಳದಿಂದ ಆಘಾತಕಾರಿ ಸುದ್ದಿಯೊಂದು ಬಂದಿದೆ. ಜೂನ್ 5 ರಿಂದ ಸ್ಯಾಂಡಲ್ ವುಡ್ ಶಟ್ ಡೌನ್ (Shut down) ಆಗಲಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಹೊರಾಂಗಣ ಚಿತ್ರೀಕರಣ ಕಾರ್ಮಿಕರ ಸಂಘವು ಒತ್ತಾಯಿಸಿದ್ದು, ಈ ಬೇಡಿಕೆಗಳಿಗಾಗಿಯೇ ಚಿತ್ರೀಕರಣಕ್ಕೆ ಬ್ರೇಕ್ ಹಾಕುವುದಾಗಿ ಸಂಘದ ಅಧ್ಯಕ್ಷ ಎ.ಹೆಚ್. ಭಟ್ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

    ಸಂಬಳ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘವು ಚಿತ್ರೋದ್ಯಮದ ಮುಂದೆ ಇಟ್ಟಿದೆ. ಆ ಬೇಡಿಕೆ ಈಡೇರುವವರೆಗೂ ಚಿತ್ರೀಕರಣದಲ್ಲಿ ಭಾಗಿಯಾಗದಂತೆ ನಿರ್ಧರಿಸಲಾಗಿದೆ. ಕಳೆದ ಮೂರು ವರ್ಷಗಳಿಂದಲೂ ಈ ಬೇಡಿಕೆಗಳನ್ನು ಇಡುತ್ತಾ ಬಂದಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಬಂದ್ ಮಾಡುವಂತಹ ನಿರ್ಧಾರವನ್ನು ಸಂಘ ತಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

    ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಂಘ ಆಗ್ರಹಿಸಿದೆ. ಒಂದು ವೇಳೆ ತಮ್ಮ ಬೇಡಿಕೆಯನ್ನು ಈಡೇರಿಸದೇ ಹೋದರೆ ಜೂನ್ 5 ರಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳದಂತೆ ತನ್ನ ಸದಸ್ಯರಿಗೆ ಸಂಘ ಸೂಚಿಸಿದೆ. ನಿರ್ಮಾಪಕರಿಂದ ತಮಗೆ ಅನೇಕ ರೀತಿಯಲ್ಲಿ ಮೋಸವಾಗುತ್ತಿದೆ ಎಂದು ಸಂಘವು ಆರೋಪಿಸಿದೆ.

  • ಕೇತುಗ್ರಸ್ಥ ಸೂರ್ಯಗ್ರಹಣ – ಘಾಟಿಸುಬ್ರಮಣ್ಯ ದೇವಾಲಯ, ಶ್ರೀ ಭೋಗನಂದೀಶ್ವರನ ಆಲಯ ಬಂದ್

    ಕೇತುಗ್ರಸ್ಥ ಸೂರ್ಯಗ್ರಹಣ – ಘಾಟಿಸುಬ್ರಮಣ್ಯ ದೇವಾಲಯ, ಶ್ರೀ ಭೋಗನಂದೀಶ್ವರನ ಆಲಯ ಬಂದ್

    ಚಿಕ್ಕಬಳ್ಳಾಪುರ: ಇಂದು ಕೇತು ಗ್ರಸ್ತ ಸೂರ್ಯಗ್ರಹಣ (Solar eclipse) ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಶ್ರೀ ಕ್ಷೇತ್ರ ಘಾಟಿಸುಬ್ರಮಣ್ಯಸ್ವಾಮಿ (Ghati Subramanya) ದೇವಾಲಯ ಹಾಗೂ ನಂದಿಬೆಟ್ಟದ ತಪ್ಪಲಿನ ಶ್ರೀ ಭೋಗನಂದೀಶ್ವರ (Bhoga Nandishwara Gudi) ದೇವಾಲಯವನ್ನು ಬಂದ್ ಮಾಡಲಾಗುತ್ತಿದೆ.

    ಈ ಕುರಿತಂತೆ ಘಾಟಿಸುಬ್ರಮಣ್ಯಸ್ವಾಮಿ ದೇವಾಲಯ ಕಾರ್ಯ ನಿರ್ವಾಹಕಾಧಿಕಾರಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದು, ಕೇತು ಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ಶ್ರೀ ಘಾಟಿಸುಬ್ರಮಣ್ಯಸ್ವಾಮಿ ದರ್ಶನಕ್ಕೆ ಬೆಳಗ್ಗೆ 10:30ರವರೆಗೆ ಮಾತ್ರ ಅವಕಾಶವಿದೆ. ತದನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತಿದೆ. ಗ್ರಹಣದ ನಂತರ ರಾತ್ರಿ 7:45ಕ್ಕೆ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಇರಲಿದೆ. ಇಂದು ಬೆಳಗ್ಗೆ 6:30 ರಿಂದಲೇ ದೇವರಿಗೆ ಅಭಿಷೇಕ ವಿಶೇಷ ಪೂಜಾ ಕೈಂಕರ್ಯಗಳು ಪ್ರಾರಂಭವಾಗಿದ್ದು, 08:00ಕ್ಕೆ ಮಹಾಮಂಗಳಾರತಿ ನೆರವೇರಿಸಲಾಗುವುದು. ಇನ್ನೂ ದೀಪಾವಳಿ ಹಬ್ಬ ಸೂರ್ಯ ಗ್ರಹಣದ ನಿಮಿತ್ತ ಬೆಳಗ್ಗೆಯೇ ದೇವಾಲಯಕ್ಕೆ ಭಕ್ತರ ದಂಡು ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಮತ್ತೆ ಉದ್ವಿಗ್ನ – ಹರ್ಷನ ಮನೆ ಮುಂದೆ ಲಾಂಗು, ಮಚ್ಚು ಹಿಡಿದು ಓಡಾಟ

    ಮತ್ತೊಂದೆಡೆ 27 ವರ್ಷಗಳ ನಂತರ ದೀಪಾವಳಿಯಂದು ಕೇತುಗ್ರಸ್ಥ ಸೂರ್ಯಗ್ರಹಣ ಸಂಭವಿಸುತ್ತಿರುವುದರಿಂದ ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟದ ತಪ್ಪಲಿನ ಶ್ರೀ ಭೋಗನಂದೀಶ್ವರ ದೇವಾಲಯದ ಬಾಗಿಲು ಬಂದ್ ಮಾಡಲಾಗುತ್ತಿದೆ. ಜೊತೆಗೆ ನಂದಿಗಿರಿಧಾಮದ ಮೇಲಿನ ಶ್ರೀ ಯೋಗನಂದೀಶ್ವರನ ಆಲಯದ ಬಾಗಿಲನ್ನು ಸಹ ಮುಚ್ಚಲಾಗುತ್ತಿದೆ. ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿದ್ದು, ತದನಂತರ ದೇವಾಲಯದ ಬಾಗಿಲು ಕ್ಲೋಸ್ ಮಾಡಲಾಗುತ್ತದೆ ಎಂದು ದೇವಾಲಯದ ಕಾರ್ಯನಿರ್ವಹಕಾಧಿಕಾರಿ ನಾಗರಾಜ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇನ್ನೂ ಗ್ರಹಣ ಮುಗಿದ ನಂತರವೂ ಇಂದು ದೇವಾಲಯದ ಬಾಗಿಲು ತೆರಯುವುದಿಲ್ಲ. ಬದಲಾಗಿ ನಾಳೆ ಎಂದಿನಂತೆ ಬೆಳಗ್ಗೆ 7 ಗಂಟೆ ನಂತರ ತೆರೆಯಲಾಗುವುದು. ಇದನ್ನೂ ಓದಿ: ದುಷ್ಕರ್ಮಿಗಳಿಂದ ಭಯ ಹುಟ್ಟಿಸೋ ಪ್ರಕರಣ- ನಮಗೆ ಸೂಕ್ತ ರಕ್ಷಣೆ ಬೇಕು: ಹರ್ಷ ಸಹೋದರಿ

    Live Tv
    [brid partner=56869869 player=32851 video=960834 autoplay=true]

  • ಕೇತುಗ್ರಸ್ಥ ಸೂರ್ಯ ಗ್ರಹಣ – ಅ. 25ರಂದು ಶ್ರೀ ಕ್ಷೇತ್ರ ಘಾಟಿ ದೇವಾಲಯ ಬಂದ್

    ಕೇತುಗ್ರಸ್ಥ ಸೂರ್ಯ ಗ್ರಹಣ – ಅ. 25ರಂದು ಶ್ರೀ ಕ್ಷೇತ್ರ ಘಾಟಿ ದೇವಾಲಯ ಬಂದ್

    ಚಿಕ್ಕಬಳ್ಳಾಪುರ: ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ (Solar Eclipse) ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಶ್ರೀ ಕ್ಷೇತ್ರ ಘಾಟಿಸುಬ್ರಮಣ್ಯಸ್ವಾಮಿ ದೇವಾಲಯವನ್ನು (GhatiSubramanyaswamy Temple) ಬಂದ್ (Bandh) ಮಾಡಲಾಗುತ್ತಿದೆ.

    ಈ ಕುರಿತಂತೆ ದೇವಾಲಯ ಕಾರ್ಯ ನಿರ್ವಾಹಕಾಧಿಕಾರಿ ಪ್ರಕಟಣೆ ನೀಡಿದ್ದು, ಅಕ್ಟೋಬರ್ 25ರ ಮಂಗಳವಾರ ಸಂಭವಿಸುವ ಕೇತು ಗ್ರಸ್ತ ಸೂರ್ಯಗ್ರಹಣ ಹಿನ್ನಲೆ ಶ್ರೀ ಘಾಟಿಸುಬ್ರಮಣ್ಯಸ್ವಾಮಿ ದರ್ಶನಕ್ಕೆ ಬೆಳಗ್ಗೆ 10:30 ರವರೆಗೆ ಮಾತ್ರ ಅವಕಾಶ ನೀಡಲಾಗಿದ್ದು, ತದನಂತರ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ಇದನ್ನೂ ಓದಿ: ಬಾರ್ ಗಲಾಟೆಯಲ್ಲಿ ಪ್ರಭಾವಿ ವ್ಯಕ್ತಿಯ ಮಗನಿಂದ ಹಲ್ಲೆಗೊಳಗಾದ ಯುವಕ ಸಾವು

    ಗ್ರಹಣದ ನಂತರ ರಾತ್ರಿ 7.45ಕ್ಕೆ ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ಅಂದು ಬೆಳಗ್ಗೆ 6:30ಕ್ಕೆ ಅಭಿಷೇಕ ಪ್ರಾರಂಭವಾಗುತ್ತದೆ ಹಾಗೂ ಮಹಾಮಂಗಳಾರತಿಯನ್ನು ಬೆಳಗ್ಗೆ 08:00 ಕ್ಕೆ ನೆರವೇರಿಸಲಾಗುತ್ತದೆ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ – ಬಳ್ಳಾರಿಯಲ್ಲಿ ರಾಹುಲ್ ಮತದಾನ

    Live Tv
    [brid partner=56869869 player=32851 video=960834 autoplay=true]