Tag: Bandhan

  • ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    ಜಾನಿ ಮಾಸ್ಟರ್ ಬಂಧನ: ಠಾಣೆ ಮುಂದೆ ಪತ್ನಿ ಹೈಡ್ರಾಮಾ

    ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿತ್ತು. ಐಎಫ್‍ ಆರ್‍ ಆಗುತ್ತಿದ್ದಂತೆಯೇ ಜಾನಿ ಮಾಸ್ಟರ್ (Jani Master) ತಲೆಮರೆಸಿಕೊಂಡಿದ್ದರು. ಅವರ ಬಂಧನಕ್ಕೆ ತಂಡ ರಚನೆ ಮಾಡಲಾಗಿತ್ತು. ಗೋವಾದಲ್ಲಿ ತಲೆಮರೆಸಿಕೊಂಡಿದ್ದ ಜಾನಿಯನ್ನು ಹೈದ್ರಾಬಾದ್ ಪೊಲೀಸರು ಬಂಧನ ಮಾಡಿದ್ದಾರೆ. ಈ ವಿಷ್ಯ ಗೊತ್ತಾಗುತ್ತಿದ್ದಂತೆಯೇ ಜಾನಿ ಮಾಸ್ಟರ್ ಪತ್ನಿ ಆಯೇಷಾ (Ayesha) ಪೊಲೀಸ್ ಸ್ಟೇಶನ್ ಗೆ ಬಂದು ಗಂಡನ ಬಂಧನದ ಬಗ್ಗೆ ವಿಚಾರಿಸಿದ್ದಾರೆ.  ನನ್ನ ಗಂಡನನ್ನು ನೋಡಬೇಕು ಅಂತ ಹೈಡ್ರಾಮಾ ಮಾಡಿದ್ದಾರೆ.

    ಜಾನಿ ಮಾಸ್ಟರ್ ವಿರುದ್ಧ ಹೈದರಾಬಾದ್‌ನಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ರಾಯದುರ್ಗ ಪೊಲೀಸ್‌ ಸ್ಟೇಷನ್‌ನಲ್ಲಿ ದೂರು ದಾಖಲಿಸಿದ್ದಾರೆ. ಆತ ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಈಗ ಜಾನಿ ಮಾಸ್ಟರ್‌ ಅರೆಸ್ಟ್‌ ಮಾಡಿದ್ದಾರೆ. ಈ ಪ್ರಕರಣವನ್ನು ನರಸಿಂಗಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

    ಇತ್ತೀಚೆಗಷ್ಟೇ ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ (Sexual Assault) ನೀಡಿದ್ದಾರೆ ಎಂದು 21 ವರ್ಷದ ಯುವತಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜಾನಿ ಮಾಸ್ಟರ್ ಕೆಲವು ದಿನಗಿಳಿಂದ ನನಗೆ ಕಿರುಕುಳ ನೀಡುತ್ತಿದ್ದರು. ಹೊರಾಂಗಣ ಚಿತ್ರೀಕರಣ ವೇಳೆ, ದೈಹಿಕ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದರು. ಯುವತಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿತ್ತು.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅವರ ಈ ಸುದ್ದಿ ಟಾಲಿವುಡ್‌ನಲ್ಲಿ ಸಂಚಲನ ಮೂಡಿಸುತ್ತಿದೆ. ಜಾನಿ ತನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಹಿಳಾ ನೃತ್ಯ ನಿರ್ದೇಶಕಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಯದುರ್ಗಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಾನಿ ಮಾಸ್ಟರ್ ಅನೇಕ ಸ್ಟಾರ್ ಹೀರೋ ಚಿತ್ರಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಅನೇಕ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಧೀ, ಡ್ಯಾನ್ಸ್‌ ಶೋ ಮೂಲಕ ಪರಿಚಯವಾದ ಜಾನಿ ಮಾಸ್ಟರ್‌ ಈಗ ಟಾಲಿವುಡ್‌ನಲ್ಲಿ ಸ್ಟಾರ್ ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದಾರೆ. ಟಾಲಿವುಡ್‌ ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ, ಹಿಂದಿಯ ಅನೇಕ ಸಿನಿಮಾಗಳಿಗೆ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಆದರೆ ಇದೀಗ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ ಮೂಡಿಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿವೆ.

    ಜಾನಿ ವಿರುದ್ಧ ಕ್ರಮಕ್ಕೆ ವಾಣಿಜ್ಯ ಮಂಡಳಿ ನಿರ್ಧಾರ:

    ಜಾನಿ ಮಾಸ್ಟರ್‌ ಪೂರ್ತಿ ಹೆಸರು ಶಾಯಿಕ್‌ ಜಾನಿ ಭಾಷಾ. ಇತ್ತೀಚೆಗೆ ನಡೆದ ಎಪಿ ಚುನಾವಣೆಯಲ್ಲಿ ಜನಸೇನಾ ಪಕ್ಷದ ಸ್ಟಾರ್ ಪ್ರಚಾರಕರಾಗಿ ಜಾನಿ ಕೆಲಸ ಮಾಡಿದ್ದರು. ಆದರೆ, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಜಾನಿ ಮಾಸ್ಟರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಜನಸೇನಾ ಹೇಳಿಕೆ ಬಿಡುಗಡೆ ಮಾಡಿದೆ. ಮತ್ತೊಂದೆಡೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕೂಡಾ ಜಾನಿ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧವಾಗಿದೆ ಎಂದು ತಿಳಿದುಬಂದಿದೆ.

  • ‘ಕೆಜಿಎಫ್ 2’ ಕಳಪೆ ಸಿನಿಮಾ ಎಂದಿದ್ದ ನಟ, ವಿಮರ್ಶಕ ಕಮಲ್ ಖಾನ್ ಅರೆಸ್ಟ್

    ‘ಕೆಜಿಎಫ್ 2’ ಕಳಪೆ ಸಿನಿಮಾ ಎಂದಿದ್ದ ನಟ, ವಿಮರ್ಶಕ ಕಮಲ್ ಖಾನ್ ಅರೆಸ್ಟ್

    ದಾ ವಿವಾದಗಳ ಮೂಲಕವೇ ಫೇಮಸ್ ಆಗುತ್ತಿರುವ ಬಾಲಿವುಡ್ ನಟ, ಸ್ವಯಂ ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 2020ರಲ್ಲಿ ರಾಹುಲ್ ಕನ್ವಾಲ್ ಎನ್ನುವವರ ವಿರುದ್ಧ ದ್ವೆಷಪೂರ್ಣ ಟ್ವಿಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಕಮಾಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

    ಶಿವಸೇನಾ ಪಕ್ಷದ ಸದಸ್ಯರಾಗಿರುವ ರಾಹುಲ್ ಕನ್ವಾಲ್ ವಿರುದ್ಧ 2020ರಲ್ಲಿ ಕಮಾಲ್, ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದ್ದರಂತೆ. ಆಗ ರಾಹುಲ್, ಮುಂಬೈನ ಮಲಾಡ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಆಗ ಕಮಾಲ್ ದೇಶದಲ್ಲಿ ಇರದೇ ಇರುವ ಕಾರಣಕ್ಕಾಗಿ ಬಂಧನ ಸಾಧ್ಯವಾಗಿರಲಿಲ್ಲ. ಇದೀಗ ಕಮಾಲ್, ಮುಂಬೈ ಏರ್ ಪೋರ್ಟಿಗೆ ಬರುತ್ತಿದ್ದಂತೆಯೇ ಪೊಲೀಸರು ಬಂಧಿಸಿದ್ದಾರೆ.  ಇದನ್ನೂ ಓದಿ: ಆರ್ಯವರ್ಧನ್ ಗುರೂಜಿಯವರಲ್ಲಿ ಅಪ್ಪನ ಪ್ರೀತಿ ಕಂಡೆ: ರೂಪೇಶ್ ಭಾವುಕ

    ಕನ್ನಡದ ಕೆಜಿಎಫ್ 2, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾವನ್ನು ಜಗತ್ತೇ ಹೊಗಳುತ್ತಿದ್ದಾಗ ಇವು ಕಳಪೆ ಸಿನಿಮಾಗಳು, ಇಂತಹ ಸಿನಿಮಾಗಳನ್ನು ಹೊಗಳುತ್ತಿರುವವರಿಗೆ ತಲೆ ಸರಿ ಇಲ್ಲ ಎನ್ನುವಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು ಕಮಾಲ್. ಅಲ್ಲದೇ, ತಮ್ಮ ಜೀವನದ ಅನೇಕ ಖಾಸಗಿ ಸಂಗತಿಗಳನ್ನು ಕಮಾಲ್ ಬರೆದುಕೊಂಡು ಸುದ್ದಿ ಆಗುತ್ತಿದ್ದರು. ಇದೀಗ ಬಂಧನವಾಗಿ ಸುದ್ದಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವ ಪಾರ್ವತಿ ವೇಷಧಾರಿ ಪ್ರತಿಭಟನೆ: ಕಲಾವಿದರನ್ನು ಬಂಧಿಸಿದ ಅಸ್ಸಾಂ ಪೊಲೀಸ್

    ಶಿವ ಪಾರ್ವತಿ ವೇಷಧಾರಿ ಪ್ರತಿಭಟನೆ: ಕಲಾವಿದರನ್ನು ಬಂಧಿಸಿದ ಅಸ್ಸಾಂ ಪೊಲೀಸ್

    ಸ್ಸಾಂನಲ್ಲಿ ಶಿವ ಪಾರ್ವತಿ ವೇಷ ಹಾಕಿಕೊಂಡು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿರಿಂಚಿ ಬೋರಾ ಅವರನ್ನು ಅಲ್ಲಿ ಪೊಲೀಸರು ಬಂಧಿಸಿದ್ದಾರೆ. ತೈಲ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳಿಗಾಗಿ ಈ ಬಿರಿಂಚಿ ತನ್ನ ಸ್ನೇಹಿತೆಗೆ ಪಾರ್ವತಿ ವೇಷ ಹಾಕಿಸಿ, ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು. ಆ ಪ್ರತಿಭಟನೆಗೆ ಧಾರ್ಮಿಕ ಮುಖವಾಡ ಹಾಕಿ, ಬಂಧಿಸಲಾಗಿದೆ ಎನ್ನಲಾಗುತ್ತಿದೆ.

    ಅಗತ್ಯ ವಸ್ತುಗಳು ಬೆಲೆ ಏರಿಕೆಯಾಗುತ್ತಿವೆ. ಬಡವರಿಗೆ ಅವುಗಳನ್ನು ಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರಕಾರದ ವಿರುದ್ಧ ನಾನು ಪ್ರತಿಭಟಿಸುತ್ತೇನೆ. ಆ ಪ್ರತಿಭಟನೆಯಲ್ಲಿ ಎಲ್ಲರೂ ಭಾಗಿಯಾಗಿ ಎಂದು ಬಿರಿಂಚಿ ಪೋಸ್ಟ್ ಮಾಡಿದ್ದ. ಹಲವರು ಈ ಪ್ರತಿಭಟನೆಯಲ್ಲಿ ಭಾಗಿ ಕೂಡ ಆಗಿದ್ದರು. ಈ ಸಂದರ್ಭದಲ್ಲಿ ಪಾರ್ವತಿ ಮತ್ತು ಶಿವ ಜಗಳ ಮಾಡಿದಂತೆ ಅಣಕು ಪ್ರದರ್ಶನ ನಡೆಸಿದ್ದಾರೆ. ಇದೇ ಆ ಹುಡುಗನಿಗೆ ಮುಳುವಾಗಿದೆ. ಇದನ್ನೂ ಓದಿ:ಟ್ವೀಟರ್‌ನಲ್ಲಿ ಯಶ್ ಹೆಸರು ಟ್ರೇಂಡಿಂಗ್: ಯಶ್ 19ನೇ ಚಿತ್ರದ ಅಪ್‌ಡೇಟ್ ಇಲ್ಲಿದೆ

    ಶಿವ ಮತ್ತು ಪಾರ್ವತಿಯ ಜಗಳವನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂದು ಆರೋಪಿಸಿ, ಬಿರಿಂಚಿ ಬೋರಾನನ್ನು ಬಂಧಿಸಲಾಗಿದೆ. ಈ ಕುರಿತಂತೆ ಅಸ್ಸಾಂನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಅದು ಕಲೆಯ ಮೂಲಕ ಅಭಿವ್ಯಕ್ತಿ. ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿಲ್ಲ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುರುವಾರವೂ ರಾಮನಗರ ಬಂದ್, ಶಾಲಾ ಕಾಲೇಜಿಗೆ ರಜೆ

    ಗುರುವಾರವೂ ರಾಮನಗರ ಬಂದ್, ಶಾಲಾ ಕಾಲೇಜಿಗೆ ರಜೆ

    ರಾಮನಗರ: ದೆಹಲಿಯ ಫ್ಲ್ಯಾಟ್‍ನಲ್ಲಿ ಪತ್ತೆಯಾದ 8.59 ಕೋಟಿ ಅಕ್ರಮ ಹಣ ಪತ್ತೆ ಪ್ರಕರಣ ಸಂಬಂಧ ನಿನ್ನೆ ರಾತ್ರಿ ಅರೆಸ್ಟ್ ಆಗಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ರನ್ನು ಸೆಪ್ಟೆಂಬರ್ 13ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ ದೆಹಲಿ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶ ಪ್ರಕಟವಾಗುತ್ತಿದಂತೆ ರಾಮನಗರದಲ್ಲಿ ಆಕ್ರೋಶ ಭುಗಿಲೆದಿದ್ದು, ನಾಳೆ ರಾಮನಗರ ಬಂದ್‍ಗೆ ಕರೆ ನೀಡಲಾಗಿದೆ.

    ರಾಮನಗರದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿರುವ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ  ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆಯೂ ರಸ್ತೆ ತಡೆ ನಡೆಯಸುವ ಸಾಧ್ಯತೆ ಇರುವುದರಿಂದ ಪೊಲೀಸರು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಎಸ್‍ಪಿ ಹಾಗೂ ಹೆಚ್ಚುವರಿ ಎಸ್‍ಪಿ, ಡಿವೈಎಸ್‍ಪಿ, 2 ಸಿಆರ್ ಪಿಎಫ್ ತುಕಡಿ ಸೇರಿದಂತೆ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಇಂದು ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರಿಗೆ ಸಂಜೆ ವೇಳೆಗೆ ಪ್ರತಿಭಟನೆ ಸ್ಥಗಿತಗೊಳಿಸಿ ತೆರಳುವಂತೆ ಎಸ್‍ಪಿ ಸೂಚನೆ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದರು.

    ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ನಾಳೆ 1 ಲಕ್ಷ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಅಲ್ಲದೇ ವಿಧಾನಸೌಧ ಮುತ್ತಿಗೆ ಹಾಕಲು ಕೂಡ ತೀರ್ಮಾನ ತೆಗೆದುಕೊಂಡಿದ್ದಾರೆ. 9 ದಿನಗಳ ಕಾಲ ಡಿಕೆಶಿ ಅವರು ಜಾರಿ ನಿರ್ದೇಶನಾಲಯದ ವಶದಲ್ಲಿ ಇರುವುದರಿಂದ 9 ದಿನಗಳು ನಿರಂತರವಾಗಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿಗಳು ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.