Tag: Bandipora

  • Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ –  ಇಬ್ಬರು ಉಗ್ರರ ಎನ್‌ಕೌಂಟರ್

    Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

    ಶ್ರೀನಗರ: ಜಮ್ಮು ಕಾಶ್ಮೀರದ (Jammu and Kashmir) ಬಂಡಿಪೋರಾ (Bandipora) ಜಿಲ್ಲೆಯ ಗುರೆಜ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆಯಲ್ಲಿ (LoC) ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು (Terrorists) ಭದ್ರತಾ ಪಡೆ ಹೊಡೆದುರುಳಿಸಿದೆ.

    ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್‌ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಉಕ್ರೇನ್ ರಷ್ಯಾ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದ ಅಮೆರಿಕ

    ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಭಯೋತ್ಪಾದನಾ ನಿಗ್ರಹ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಹೋಟೆಲ್, ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಶಾಕ್ – ಸ್ಮೋಕಿಂಗ್ ಝೋನ್ ಇರದಿದ್ರೆ ಲೈಸನ್ಸ್ ರದ್ದು

  • ಭಯೋತ್ಪಾದಕರ ಅಡಗುತಾಣವನ್ನು ಉಡೀಸ್ ಮಾಡಿದ ಭದ್ರತಾ ಪಡೆ

    ಭಯೋತ್ಪಾದಕರ ಅಡಗುತಾಣವನ್ನು ಉಡೀಸ್ ಮಾಡಿದ ಭದ್ರತಾ ಪಡೆ

    ಶ್ರೀನಗರ: ಜಮ್ಮು-ಕಾಶ್ಮೀರದ ಬಂಡಿಪೋರಾದ ನಾಡಿಹಾಲ್ ಪ್ರದೇಶದಲ್ಲಿ ಅಕ್ರಮವಾಗಿ ವಾಸ ಹೊಂದಿದ್ದ ಭಯೋತ್ಪಾದಕರ ಅಡಗುತಾಣಗಳನ್ನು ಭದ್ರತಾ ಪಡೆ ನಾಶ ಪಡಿಸಿದೆ.

    ಬಂಡಿಪೋರಾದ ನಾಡಿಹಾಲ್ ಪ್ರದೇಶದಲ್ಲಿ ಭದ್ರತಾ ಪಡೆ ಭಯೋತ್ಪಾದಕರ ಅಡಗುತಾಣವನ್ನು ನಾಶಪಡಿಸಿದ ಡ್ರೋನ್ ದೃಶ್ಯಾವಳಿಗಳು ಲಭ್ಯವಾಗಿದೆ. ಈ ವೀಡಿಯೋದಲ್ಲಿ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿ ಭದ್ರತಾ ಪಡೆ ಸ್ಫೋಟಕಗಳ ಮೂಲಕ ನಾಶ ಮಾಡಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಸರಣಿ ಸ್ಫೋಟ- ಇಬ್ಬರು ಲಷ್ಕರ್ ಉಗ್ರರು ಅರೆಸ್ಟ್

    ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಸ್ಫೋಟಗಳ ಹಿಂದೆ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಸಂಘಟನೆಯ ಕೈವಾಡವಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕ ಬಳಿಕ ನಿನ್ನೆ ಇಬ್ಬರನ್ನು ಬಂಧಿಸಲಾಗಿತ್ತು. ಆ ಬಳಿಕ ಹೆಚ್ಚಿನ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಪ್ರಮುಖ ಆರೋಪಿಗಾಗಿ ಭದ್ರತಾ ಪಡೆ ಹುಡುಕಾಟ ನಡೆಸುತ್ತಿದೆ. ಈ ನಡುವೆ ಈ ಡ್ರೋನ್ ದೃಶ್ಯಾವಳಿಗಳು ವೈರಲ್ ಆಗುತ್ತಿದೆ. ಇದನ್ನೂ ಓದಿ: ಬೆದರಿಕೆ ಕರೆ ಬಗ್ಗೆ ಪೊಲೀಸರಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ: ಉದಯಪುರ ಟೈಲರ್ ಪುತ್ರರು

    Live Tv

  • ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಗುಂಡಿನ ಚಕಮಕಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    ಶ್ರೀನಗರ: ಭಾನುವಾರದಿಂದ ಜಮ್ಮು-ಕಾಶ್ಮೀರದ ಬಂಡಿಪೊರಾದಲ್ಲಿ ಭಾರತೀಯ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಒಟ್ಟು ಇಬ್ಬರು ಉಗ್ರರು ಭದ್ರತಾ ಪಡೆಯ ಗುಂಡೇಟಿಗೆ ಬಲಿಯಾಗಿದ್ದಾರೆ.

    ಭಾನುವಾರ ಲಾದಾರ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿತ್ತು. ಹಾಗೆಯೇ ಇಂದು ಬೆಳಗ್ಗೆ ಇನ್ನೋರ್ವ ಉಗ್ರ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಉಗ್ರರು ಕಾಶ್ಮೀರದಲ್ಲಿ ಅಡಗಿ ಕುಳಿತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆ ಭದ್ರತಾ ಪಡೆ ಸಿಬ್ಬಂದಿ ಹುಡುಕಾಟ ಕಾರ್ಯಾಚರಣೆ ಆರಂಭಿಸಿದರು. ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಕಾಳಗ ಶುರುವಾಯ್ತು.

    ಈ ಸಂಬಂಧ ಚೀನಾರ್ ಕಾಪ್ಸ್- ಇಂಡಿಯನ್ ಆರ್ಮಿ ಟ್ವೀಟ್ ಮಾಡಿ, ಹತ್ಯೆಗೈದ ಉಗ್ರರಿಂದ ಶಸ್ತ್ರಾಸ್ತ್ರಗಳು ಹಾಗೂ ಯುದ್ಧಕ್ಕೆ ಬಳಸುವ ಕೆಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

    ನ. 7ರಂದು ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ರಾಹುಲ್ ಸುಳಗೇಕರ್(22) ಯೋಧ ಜಮ್ಮುವಿನ ಪುಂಚ್ ಪ್ರದೇಶದಲ್ಲಿ ರಾತ್ರಿ ಉಗ್ರರ ಜೊತೆಗೆ ನಡೆದ ಕಾಳಗದಲ್ಲಿ ವೀರಮರಣ ಹೊಂದಿದ್ದರು. ಗುರುವಾರ ರಾತ್ರಿ ಜಮ್ಮುವಿನ ಪೂಂಚ್ ವಲಯದಲ್ಲಿ ನಡೆದ ಅಪರೇಷನ್ ಟೆರರ್ ಕಾರ್ಯಾಚರಣೆಯಲ್ಲಿ ರಾಹುಲ್ ಅವರು ಭಾಗಿಯಾಗಿದ್ದರು. ಈ ವೇಳೆ ಉಗ್ರರು ಹಾಗೂ ಭಾರತೀಯ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿತ್ತು. ದಾಳಿ ಪ್ರತಿದಾಳಿಯಲ್ಲಿ ಉಗ್ರರ ವಿರುದ್ಧ ಹೋರಾಡುವಾಗ ರಾಹುಲ್ ಅವರು ವೀರ ಮರಣವನ್ನಪ್ಪಿದ್ದರು. ಶನಿವಾರ ಸಕಲ ಸರ್ಕಾರಿ, ಸೇನಾ ಗೌರವದೊಂದಿಗೆ ರಾಹುಲ್ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯ್ತು.