ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಾಲಯ ಜು.29 ಹಾಗೂ 30 ರಂದು ಬಂದ್ ಆಗಲಿದೆ.
ದೇವಾಲಯಕ್ಕೆ ತೆರಳುವ ಒಂದು ಕಡೆ ರಸ್ತೆ ಪಕ್ಕದ ಪ್ಯಾರಪಿಟ್ ವಾಲ್ ಕುಸಿದಿರುವ ಕಾರಣ ಲೋಕೋಪಯೋಗಿ ಇಲಾಖೆ ದುರಸ್ತಿ ಕಾರ್ಯವನ್ನು ಎರಡು ದಿನಗಳ ಕಾಲ ನಡೆಸಲಿದೆ. ಇದರಿಂದ ಬೆಟ್ಟದ ಮೇಲಿರುವ ದೇವಾಲಯ ತೆರೆಯುವುದಿಲ್ಲ. ಅಲ್ಲದೇ ಈ ಎರಡೂ ದಿನ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಪ್ರವಾಸಿಗರು ಹಾಗೂ ಭಕ್ತರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಮವದ್ ಗೋಪಾಲಸ್ವಾಮಿಯ ದರ್ಶನ ಪಡೆದು, ಪ್ರಸಾದ ತಿಂದು ಹೋಗುತ್ತಿದೆ ಒಂಟಿ ಸಲಗ – ಎಲ್ಲರಿಗೂ ಅಚ್ಚರಿಯೋ ಅಚ್ಚರಿ!
– ಇನ್ಮುಂದೆ ಪ್ರತಿ ವರ್ಷ ಸುಲಭವಾಗಿ ನಡೆಯಲಿದೆ ಹುಲಿ ಗಣತಿ, ಕ್ಯಾಪ್ಚರ್ ಕಾರ್ಯ
ಚಾಮರಾಜನಗರ: ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ಬಂಡೀಪುರದ ಪ್ರಾಕೃತಿಕ ಸೌಂದರ್ಯಕ್ಕೆ ಮನ ಸೋಲದವರೇ ಇಲ್ಲ. ಇಂತಹ ಹುಲಿ ಸಂರಕ್ಷಿತ ಅರಣ್ಯದಲ್ಲಿ ಹುಲಿಗಳ ಕುರಿತು ರಿಸರ್ಚ್ ನಡೆಸಬೇಕಿದರೆ ಅರಣ್ಯಾಧಿಕಾರಿಗಳು ಪಡಬಾರದ ಪರಿಪಾಟಿಲು ಪಡುತ್ತಿದ್ದರು. ಆದರೆ, ಆ ಸಂಕಷ್ಟಕ್ಕೆ ಈಗ ಬ್ರೇಕ್ ಬಿದ್ದಿದೆ.
ಬಂಡೀಪುರ ಈ ಹೆಸರು ಕೇಳಿದ್ರೆ ಸಾಕು ಪ್ರಾಣಿ ಪ್ರಿಯರು ಹಾಗೂ ಪರಿಸರವಾದಿಗಳ ಮೊಗದಲ್ಲಿ ಮಂದಹಾಸ ಮೂಡುತ್ತದೆ. ಯಾಕಂದ್ರೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿರುವ ಈ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್‌ನ ಪ್ರಕೃತಿಯ ಸೌಂದರ್ಯದ ವರ್ಚಸ್ಸೆ ಅಂತಹದ್ದು. ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ರಾಜ್ಯದಲ್ಲೇ ಅತಿ ಹೆಚ್ಚು ಆನೆ ಮತ್ತು ಚಿರತೆಗಳನ್ನ ಹೊಂದಿರುವ ಟೈಗರ್ ರಿಸರ್ವ್ ಫಾರೆಸ್ಟ್ ಇದು. ಇಂತಹ ಖ್ಯಾತಿ ಪಡೆದ ಬಂಡೀಪುರದಲ್ಲಿ ಹುಲಿಯ ಗಣತಿ ಕಾರ್ಯ ಅಥವಾ ಯಾವುದಾದ್ರು ವ್ಯಾಘ್ರದ ಕುರಿತು ರಿಸರ್ಚ್ ಮಾಡ್ಬೇಕಿದ್ರೆ ದೂರದ ಬೆಂಗಳೂರಿನ ಕೇಂದ್ರ ಕಚೇರಿಗೆ ತೆರಳಬೇಕಿತ್ತು. ಇದರಿಂದ ಅರಣ್ಯಾಧಿಕಾರಿಗಳಿಗೆ ಭಾರೀ ಸಂಕಷ್ಟ ಎದುರಾಗುತ್ತಿತ್ತು. ಈಗ ಇದಕ್ಕೊಂದು ಪರಿಹಾರ ಸಿಕ್ಕಿದೆ. ಇನ್ನು ಕೆಲವೇ ದಿನಗಳಲ್ಲಿ ಬಂಡೀಪುರದ ಮೇಲುಕಾಮನಹಳ್ಳಿಯಲ್ಲಿ ಟೈಗರ್ ರಿಸರ್ಚ್ ಸೆಲ್ ಆರಂಭಗೊಳ್ಳಲಿದೆ.
ಬಂಡೀಪುರ ಸೇರಿದಂತೆ ರಾಜ್ಯದಲ್ಲಿ ಬಿಳಿಗಿರಿ ಟೈಗರ್ ರಿಸರ್ವ್, ಭದ್ರ ಟೈಗರ್ ರಿಸರ್ವ್ ನಾಗರಹೊಳೆ ಟೈಗರ್ ರಿಸರ್ವ್ ಫಾರೆಸ್ಟ್‌ಗಳಿವೆ. ರಾಜ್ಯ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದು ಟೈಗರ್ ರಿಸರ್ಚ್ ಎಂಡ್ ಮಾನಿಟರಿಂಗ್ ಸೆಲ್‌ನ ಅನಿವಾರ್ಯತೆ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ವರದಿ ನೀಡಲಾಗಿತ್ತು. ಈ ವರದಿ ಆಧಾರದ ಮೇಲೆ ರಾಜ್ಯದ ಎಲ್ಲಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಟೈಗರ್ ಸೆಲ್ ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದರ ಮೊದಲ ಹಂತವಾಗಿ ಬಂಡೀಪುರದಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿದೆ. ಇನ್ನು ಕೆಲ ದಿನಗಳಲ್ಲೇ ನೂತನ ಟೈಗರ್ ರಿಸರ್ಚ್ ಎಂಡ್ ಮಾನಿಟರಿಂಗ್ ಸೆಲ್ ಲೋಕಾರ್ಪಣೆಗೊಳ್ಳಲಿದೆ. ಇದರಿಂದ ಬಂಡೀಪುರದಲ್ಲಿ ಪ್ರತಿಯೊಂದು ಹುಲಿಯ ಮಾನಿಟರಿಂಗ್ ಮಾಡಬಹುದು. ವರ್ಷದಿಂದ ವರ್ಷಕ್ಕೆ ಎಷ್ಟು ಹುಲಿಗಳ ಸಂಖ್ಯೆ ಹೆಚ್ಚಾಗಿದೀಯಾ ಅಥವಾ ಕಡಿಮೆ ಆಗಿದ್ಯಾ ಎಂಬುದರ ನಿಖರ ಮಾಹಿತಿ ದೊರೆಯಲಿದೆ. ಇದರ ಜೊತೆಗೆ ಕ್ಯಾಪ್ಚರಿಂಗ್ ಕಾರ್ಯ ಹಾಗೂ ಯಾವುದಾದ್ರು ಹುಲಿಯ ಮೇಲೆ ರಿಸರ್ಚ್ ಅನ್ನು ಸಹ ಇಲ್ಲೇ ಮಾಡಬಹುದಾಗಿದೆ.
ಸದ್ಯ ರಾಜ್ಯ ಸರ್ಕಾರದ ಈ ನಡೆಯಿಂದ ಮುಂಬರುವ ಕಾಡುಪ್ರಾಣಿಗಳ ಕುರಿತಾದ ನಿಖರ ಹಾಗೂ ಸ್ಪಷ್ಟ ಮಾಹಿತಿ ಸಿಗಲಿದೆ, ಇದರ ಜೊತೆಗೆ ಇನ್ನೂ ಅಧಿಕವಾಗಿ ವನ್ಯಮೃಗಗಳನ್ನ ಅಧ್ಯಯನ ಮಾಡಬಹುದಾಗಿದೆ.
ಚಾಮರಾಜನಗರ: ಬಂಡೀಪುರದಲ್ಲಿ (Bandipur) ಗಂಡು ಹುಲಿ (Tiger) ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ.
ಸುಮಾರು 8 ರಿಂದ 9 ವರ್ಷದ ಗಂಡು ಹುಲಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಓಂಕಾರ ವಲಯದ ಶ್ರೀಕಂಠಪುರ ಗುಡ್ಡದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಮೇಲೆ ಬಾಂಬ್ ಸ್ಫೋಟ – 7 ಮಂದಿ ದುರ್ಮರಣ
ಚಾಮರಾಜನಗರ: ಗಡಿನಾಡು ಚಾಮರಾಜನಗರದಲ್ಲಿ ‘ಸೇವ್ ಬಂಡೀಪುರ’ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಬಂಡೀಪುರ ನೈಟ್ ಬ್ಯಾನ್ ತೆರವು ಮಾಡದಂತೆ ಅನ್ನದಾತರು ಆಗ್ರಹಿಸಿದ್ದಾರೆ.
ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ವನ್ಯಮೃಗಗಳ ಪ್ರಾಣಕ್ಕೆ ಸಂಚಕಾರ ಎದುರಾಗಲಿದೆ. ತಡರಾತ್ರಿ ಕಾಡು ಪ್ರಾಣಿಗಳ ಬೇಟೆ, ಮಾಂಸಕ್ಕಾಗಿ ಶಿಕಾರಿ ಹಾಗೂ ಸ್ಮಗ್ಲಿಂಗ್ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ನೈಟ್ ಬ್ಯಾನ್ ತೆರವು ಮಾಡದಂತೆ ರೈತರ ಆಗ್ರಹಿಸಿದ್ದಾರೆ.
ಬಂಡೀಪುರ ಉಳಿಸಿ ಎಂದು ಅಭಿಯಾನವನ್ನು ರೈತರು ಶುರು ಮಾಡಿದ್ದಾರೆ. ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆ ವರೆಗೆ ರಾತ್ರಿ ಸಂಚಾರಕ್ಕೆ ನಿರ್ಬಂಧವಿದೆ. ಸುಪ್ರೀಂ ಕೋರ್ಟ್ ಗೈಡ್‌ಲೈನ್ಸ್ ಪ್ರಕಾರ ನೈಟ್ ಬ್ಯಾನ್ ಜಾರಿಯಲ್ಲಿದೆ. ಆದರೆ, ನೈಟ್ ಬ್ಯಾನ್ ತೆರವಿಗೆ ಸಂಸದೆ ಪ್ರಿಯಾಂಕಾ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿಯಿಂದ ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತಿದೆ. ಸಂಸದೆ ಪ್ರಿಯಾಂಕಾ ಮಾತಿಗೆ ಮಣಿದು ನೈಟ್ ಬ್ಯಾನ್‌ಗೆ ತಡೆ ಒಡ್ಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಪ್ರತಿಭಟನೆ ನಡೆಸುತ್ತಿದೆ.
ನಗರದ ಭುವನೇಶ್ವರಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರು ಧರಣಿ ಕುಳಿತಿದ್ದಾರೆ.
ಸೇವ್ ಬಂಡಿಪುರ ಅಭಿಯಾನ ಜೋರಾಗ್ತಿದ್ದು, ಇಂದು ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ವಯನಾಡಿನ ಹಾಲಿ ಮತ್ತು ಮಾಜಿ ಸಂಸದರ ಒತ್ತಡದ ಕಾರಣ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುವು ಮಾಡಿಕೊಡಲು ಕಾಂಗ್ರೆಸ್ ಮುಂದಾಗ್ತಿದೆ. ಇದನ್ನು ತಡೆಯಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ.
ಚಾಮರಾಜನಗರ: ಬಂಡೀಪುರದಲ್ಲಿ ಒಂಟಿ ಸಲಗವೊಂದು (Elephant) ರಸ್ತೆಗೆ ಇಳಿದ ಪರಿಣಾಮ ಸುಮಾರು 3-4 ಕಿಲೋ ಮೀಟರ್ ಟ್ರಾಫಿಕ್ ಜಾಮ್ (Traffic Jam )ಉಂಟಾಗಿದೆ.
ವೀಕೆಂಡ್ ಹಿನ್ನೆಲೆ ತಮಿಳುನಾಡಿನ ಊಟಿ ಮೂಲಕ ಕರ್ನಾಟಕಕ್ಕೆ ಬರುತ್ತಿರುವ ಪ್ರಯಾಣಿಕರು ಗಜರಾಜನ ಕಾಟಕ್ಕೆ ಹೈರಣಾಗಿದ್ದಾರೆ. ರಾತ್ರಿ 9 ಗಂಟೆಗೆ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಇನ್ನೂ ಹೆಚ್ಚಾಗಿದೆ.
ಇತ್ತೀಚೆಗೆ ತರಕಾರಿ ವಾಹನಗಳಿಗಾಗಿ ಗಜರಾಜ ಆಗಾಗ ರಸ್ತೆಗಿಳಿಯುತ್ತಿದ್ದ. ಅದನ್ನೇ ಅಭ್ಯಾಸ ಮಾಡಿಕೊಂಡು ಈಗ ರಸ್ತೆಯಲ್ಲೇ ನಿಂತು ವಾಹನ ಸವಾರರಿಗೆ ಆತಂಕ ಮೂಡಿಸಿದ್ದಾನೆ.
ಅರಣ್ಯ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾಡಾನೆಯನ್ನು ರಸ್ತೆಯಿಂದ ಪಕ್ಕಕ್ಕೆ ಸರಿಸಲು ಹರಸಾಹಸಪಡುತ್ತಿದ್ದಾರೆ.
ಬೆಂಗಳೂರು: ಬಂಡೀಪುರ (Bandipur) ಅರಣ್ಯದಲ್ಲಿ ರಾತ್ರಿ ಸಂಚಾರ ಇಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡುವ ಪರವಾಗಿ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿಯವರು ಇತ್ತೀಚೆಗೆ ಮಾತಾಡಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದಲೂ ಪ್ರಿಯಾಂಕಾ ಗಾಂಧಿ ಅವರ ನಿಲುವಿಗೆ ಬೆಂಬಲ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯ ರಾತ್ರಿ 9 ಗಂಟೆವರೆಗೆ ಮಾತ್ರ ರಾತ್ರಿ ಸಂಚಾರಕ್ಕೆ ಅವಕಾಶ ಇದೆ. ಅದು ಹೊರತುಪಡಿಸಿ ರಾತ್ರಿ 9 ಗಂಟೆ ನಂತರ 2 ಬಸ್‌ಗಳ ಮಾತ್ರ ಸಂಚಾರಕ್ಕೆ ಅವಕಾಶ ಕೊಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಹೊರತುಪಡಿಸಿ ಆಸ್ಪತ್ರೆ ಸೇರಿ ಎಮರ್ಜೆನ್ಸಿ ಇದ್ದರೆ ಅದಕ್ಕೂ ಅವಕಾಶ ಮಾಡಿಕೊಡಲಾಗಿದೆ. ಉಳಿದಂತೆ ವನ್ಯಜೀವಿ ಸಂರಕ್ಷಣೆ ಹಿನ್ನಲೆ ರಾತ್ರಿ ಸಂಚಾರಕ್ಕೆ ಅವಕಾಶ ಇಲ್ಲ. ಹೀಗಾಗಿ ರಾತ್ರಿ ಸಂಚಾರ ಸಾಧ್ಯವಿಲ್ಲ. ಈ ಬಗ್ಗೆ ನಮ್ಮ ನಾಯಕರಿಗೆ ಏನಾದರೂ ಮಾಹಿತಿ ಅಗತ್ಯವಿದ್ದರೆ ಮನವರಿಕೆ ಮಾಡುತ್ತೇನೆ ಎಂದಿದ್ದಾರೆ.
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ (Gundlupet) ತಾಲೂಕಿನ ಬಂಡೀಪುರದಲ್ಲಿ (Bandipur Safari) ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಒಂದಲ್ಲ, ಎರಡಲ್ಲ, ಐದು ಹುಲಿಗಳ ದರ್ಶನವಾಗಿದೆ. ಹೊಸ ವರ್ಷದ ಮುನ್ನಾ ದಿನ ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ.
ಮೈಸೂರು: ಮಾಧ್ಯಮಗಳ ಜೊತೆ ಮಾತನಾಡುವಾಗ ಗದ್ದಲ ಮಾಡುತ್ತಿದ್ದ ಕಾರ್ಯಕರ್ತರ ಮೇಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಹೊಡೆಯಲು ಮುಂದಾದ ಪ್ರಸಂಗ ಇಂದು ನಡೆದಿದೆ.
ಸಿದ್ದರಾಮಯ್ಯನವರು ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಸಿದ್ದರಾಮಯ್ಯ ಸುತ್ತಲು ನಿಂತಿದ್ದ ನಾಯಕರು, ಕಾರ್ಯಕರ್ತರು ಮಾತನಾಡಿ ಗದ್ದಲ ಮಾಡುತ್ತಿದ್ದರು. ಕಾರ್ಯಕರ್ತ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯುತ್ತಿದ್ದಾಗ ಗರಂ ಆದ ಸಿದ್ದರಾಮಯ್ಯ ಜೋರು ಧ್ವನಿಯಲ್ಲಿ ಗದರಿ, ನಾಲಗೆ ಕಚ್ಚಿ ಕೈ ಎತ್ತಿದ್ದಾರೆ. ಇದನ್ನೂ ಓದಿ: ದೇವೇಗೌಡರು ನನ್ನ ಸೊಕ್ಕು ಮುರಿಯುತ್ತೇನೆ ಎಂದಿದ್ದು ಸರಿಯೇ – ಜಮೀರ್ ಹೇಳಿಕೆಯನ್ನ ಖಂಡಿಸಿದ್ದಕ್ಕೆ ಸಿಎಂ ತಿರುಗೇಟು
ನಾಗೇಂದ್ರ ಅವರನ್ನ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದ್ದಾರೆ. ಉಪಚುನಾವಣೆಯ ಬಳಿಕ ನೋಡೋಣಾ ಎಂದು ಹೇಳಿದ್ದೇನೆ. ಅದನ್ನೇ ಪುನಾರಚನೆಎಂದು ಹೇಳಬೇಡಿ. ಸಂಪುಟ ಪುನಾರಚನೆ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದರು.
ಬೆಂಗಳೂರು/ ಚಾಮರಾಜನಗರ: ಕೇರಳ ಸರ್ಕಾರ (Kerala Government), ಕಾಂಗ್ರೆಸ್ ಹೈಕಮಾಂಡ್ (Congress High Command) ಲಾಬಿಗೆ ಮಣಿದು ಬಂಡೀಪುರ (Bandipur) ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಾ ಎಂಬ ಪ್ರಶ್ನೆ ಎದ್ದಿದೆ.
ಹೌದು. ಕಳೆದ ವಯನಾಡು ಲೋಕಸಭಾ ಚುನಾವಣೆಯಲ್ಲಿ (Wayanad By Election ) ರಾಹುಲ್ ಗಾಂಧಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡುವ ಬಗ್ಗೆ ಭರವಸೆ ನೀಡಿದ್ದರು. ಈಗ ಪ್ರಿಯಾಂಕಾ ಗಾಂಧಿ ಈ ಭರವಸೆ ನೀಡಿದ್ದಾರೆ. ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಅನುಮತಿ ನೀಡುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಪ್ರತಿಕ್ರಿಯಿಸಿದ್ದಾರೆ.
ಈ ವಿಚಾರದ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪ್ರತಿನಿಧಿಗಳು ನನ್ನ ಬಳಿ ಬಂದು ಮಾತಾಡಿದ್ದಾರೆ. ಎರಡು ಸರ್ಕಾರಗಳನ್ನ ಕರೆಸಿ ಕುಳಿತುಕೊಂಡು ಮಾತುಕತೆ ಮಾಡುತ್ತೇವೆ. ರಾಜ್ಯದ ಹಿತವನ್ನು ಕಾಪಾಡಿಕೊಂಡು, ಜನರ ಹಿತವನ್ನು ಕಾಪಾಡಿಕೊಂಡು ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಯದುವೀರ್ ವಿರೋಧ:
ವಯನಾಡ್ ಉಪಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ನಮ್ಮ ರಾಜ್ಯದ ನೈಸರ್ಗಿಕ ಸಂಪತ್ತಾದ ಬಂಡಿಪುರ ಅಭಯಾರಣ್ಯದ ಮಧ್ಯೆ ಹಾದು ಹೋಗುವ ಎನ್‌ಎಚ್ 766 ರ ರಾತ್ರಿ ಪ್ರಯಾಣ ನಿಷೇಧವನ್ನು ತೆಗೆದುಹಾಕುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಅವರು ಇತ್ತೀಚೆಗೆ ಕೇರಳದಲ್ಲಿ ನೀಡಿರುವ ಹೇಳಿಕೆಯು ಬೇಜವಾಬ್ದಾರಿ ಮತ್ತು ಖಂಡನೀಯವಾಗಿದೆ. ಇದನ್ನೂ ಓದಿ: ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ಕೊಡಿ: ಸರ್ಕಾರಕ್ಕೆ ಮುಸ್ಲಿಂ ಸಮುದಾಯ ಬೇಡಿಕೆ
ಬಂಡೀಪುರದ ನೈಸರ್ಗಿಕ ಸೌಂದರ್ಯ ಮತ್ತು ಪರಿಸರ ವೈವಿಧ್ಯತೆಯು ಅದರೊಳಗೆ ಅಭಿವೃದ್ಧಿ ಹೊಂದುತ್ತಿರುವ ವಿವಿಧ ಪ್ರಭೇದಗಳ ವನ್ಯಜೀವಿಗಳಿಗೆ ಸೇರಿದ ಸಂಪತ್ತು. ಈ ಅಭಯಾರಣ್ಯದ ಮೂಲಕ ರಾತ್ರಿ ಪ್ರಯಾಣಕ್ಕೆ ಅವಕಾಶ ನೀಡುವುದರಿಂದ ವನ್ಯಜೀವಿಗಳಿಗೆ ಅಪಾಯವಿದೆ ಮತ್ತು ಮಾನವ-ವನ್ಯಜೀವಿ ಸಂಘರ್ಷಕ್ಕೆ ಇದು ಎಡೆ ಮಾಡಿಕೊಡುತ್ತದೆ. ಬೇರೆ ರಾಜ್ಯದಲ್ಲಿನ ಚುನಾವಣಾ ಲಾಭಕ್ಕಾಗಿ ಕರ್ನಾಟಕದ ವನ್ಯಜೀವಿಗಳಿಗೆ ಧಕ್ಕೆ ತರುವುದು ಸಮಂಜಸವಲ್ಲ. ನಮ್ಮ ಸರ್ಕಾರವು ಈ ಪರಿಸರ ವಲಯಗಳ ರಕ್ಷಣೆಯ ನಿಟ್ಟಿನಲ್ಲಿ ಯಾವುದೆ ರಾಜಿ ಮಾಡಿಕೊಳ್ಳದೆ ರಕ್ಷಿಸಬೇಕಾಗಿದೆ ಎಂದು ಮೈಸೂರು ಸಂಸದ ಯದುವೀರ್ ಒಡೆಯರ್ ಪೋಸ್ಟ್ ಮಾಡಿದ್ದಾರೆ.
ವಯನಾಡ್ ಉಪಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ನಮ್ಮ ರಾಜ್ಯದ ನೈಸರ್ಗಿಕ ಸಂಪತ್ತಾದ ಬಂಡಿಪುರ ಅಭಯಾರಣ್ಯದ ಮಧ್ಯೆ ಹಾದು ಹೋಗುವ ಎನ್‌ಎಚ್ 766 ರ ರಾತ್ರಿ ಪ್ರಯಾಣ ನಿಷೇಧವನ್ನು ತೆಗೆದುಹಾಕುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇತ್ತೀಚೆಗೆ ಕೇರಳದಲ್ಲಿ ನೀಡಿರುವ ಹೇಳಿಕೆಯು ಬೇಜವಾಬ್ದಾರಿ ಮತ್ತು ಖಂಡನೀಯವಾಗಿದೆ.
ಏನಿದು ಪ್ರಕರಣ?
ಹುಲಿ, ಆನೆ, ಕಾಡೆಮ್ಮೆ ಸೇರಿದಂತೆ ಅಳಿವಿನಂಚಿನಲ್ಲಿರುವ ಪ್ರಾಣಿಗಳು ಅಪಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ 2009ರಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 212 ಮತ್ತು 69 ರಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರವನ್ನು ನಿಷೇಧಿಸಿ ಚಾಮಾರಾಜನಗರ ಜಿಲ್ಲಾ ಆಡಳಿತ ಆದೇಶ ಹೊರಡಿಸಿತ್ತು. ವಾಹನಗಳ ಸಂಚಾರ ನಿಷೇಧವನ್ನು ರದ್ದುಪಡಿಸದಂತೆ ಕರ್ನಾಟಕ ಹೈಕೋರ್ಟ್ 2010ರಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ.
ಕೇರಳ ಸರ್ಕಾರ ಈ ಹಿಂದೆ ಸಾಕಷ್ಟು ಬಾರಿ ನಿಷೇಧ ತೆರವುಗೊಳಿಸುವಂತೆ ರಾಜ್ಯ ಸರ್ಕಾರವನ್ನು ಕೇಳಿಕೊಂಡಿತ್ತು. ಕೇರಳದ ಲಾಬಿಗೆ ರಾಜ್ಯ ಸರ್ಕಾರ ಮಣಿದಿರಲಿಲ್ಲ. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಜೆಡಿಎಸ್ ಸರ್ಕಾರ ಇದ್ದಾಗ ಬಂಡೀಪುರದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಚಿಂತನೆ ನಡೆದಿತ್ತು. ಇದಕ್ಕೆ ಪರಿಸರವಾದಿಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ರಾತ್ರಿ ಸಂಚಾರ ನಿಷೇಧಕ್ಕೂ ಮುನ್ನ ಅಂದ್ರೆ 2004-09ರ ಅವಧಿಯಲ್ಲಿ ಬಂಡಿಪುರ ಅರಣ್ಯ ಪ್ರದೇಶದಲ್ಲಿ 86 ಪ್ರಾಣಿಗಳು ಅಪಘಾತಕ್ಕೆ ಬಲಿಯಾಗಿತ್ತು. ರಾತ್ರಿ ಸಂಚಾರ ನಿಷೇಧ ಬಳಿಕ 2010-18ರ ಅವಧಿಯಲ್ಲಿ 17 ಪ್ರಾಣಿ ಮೃತಪಟ್ಟಿದ್ದವು. ಒಟ್ಟಿನಲ್ಲಿ ರಾತ್ರಿ ವಾಹನ ಸಂಚಾರ ನಿಷೇಧದ ಬಳಿಕ ಅಪಘಾತದಲ್ಲಿ ಸತ್ತ ಪ್ರಾಣಿಗಳ ಸಂಖ್ಯೆ ಇಳಿಕೆಯಾಗಿತ್ತು. ಕೇರಳ ಸರ್ಕಾರದ ಬೇಡಿಕೆಯ ಹಿಂದೆ ಟಿಂಬರ್ ಮಾಫಿಯಾದ ಕೈವಾಡವಿದೆ ಎಂಬ ಆರೋಪವೂ ಕೇಳಿ ಬಂದಿದೆ.
ಚಾಮರಾಜನಗರ: ಬೈಕ್ ಸವಾರನೊಬ್ಬ (Bike Rider) ಕಾಡಾನೆಗಳ ದಾಳಿಯಿಂದ (Wild Elephant Attack) ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಬಂಡೀಪುರದಲ್ಲಿ (Bandipur) ನಡೆದಿದೆ.
ಬಂಡೀಪುರ – ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಊಟಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರನಿಗೆ ಕಾಡಾನೆ ಎದುರಾಗಿದ್ದು, ಏಕಾಏಕಿ ದಾಳಿ ನಡೆಸಲು ಮುಂದಾಗಿದೆ. ಇದರಿಂದ ಗಾಬರಿಗೊಂಡ ಬೈಕ್ ಸವಾರ ಬೈಕ್ ಬಿಟ್ಟು ಕಾಡಿನತ್ತ ಓಡುವಾಗ ಮತ್ತೆ ಕಾಡಾನೆಗಳ ಹಿಂಡಿನೊಳಗೆ ಸಿಲುಕಿದ್ದಾನೆ. ಇದನ್ನೂ ಓದಿ: ಮಂಡ್ಯ To ಇಂಡಿಯಾ ಉದ್ಯೋಗ ಮೇಳ ಯಶಸ್ವಿ – 1,100 ಮಂದಿಗೆ ಉದ್ಯೋಗ