Tag: Bandipur

  • ಹುಲಿ ದಾಳಿಗೆ ಕುರಿಗಾಹಿ ಬಲಿ

    ಹುಲಿ ದಾಳಿಗೆ ಕುರಿಗಾಹಿ ಬಲಿ

    ಚಾಮರಾಜನಗರ: ಹುಲಿ ದಾಳಿಗೆ (Tiger Attack) ಕುರಿಗಾಹಿಯೊಬ್ಬ (Shepherd) ಬಲಿಯಾದ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ (Bandipur) ವ್ಯಾಪ್ತಿಯ ಹಾಡಿನಕಣಿವೆ ಬಳಿ ನಡೆದಿದೆ.

    ಬಸವ (50) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಇವರು ಬುಡಕಟ್ಟು ಜೇನುಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ಕಾಡಂಚಿನಲ್ಲಿ ಇವರ ಮೃತದೇಹ ಅರ್ಧಂಬರ್ಧ ತಿಂದ ಸ್ಥಿತಿಯಲ್ಲಿ ದೊರೆತಿದೆ. ಬಸವ ಕುರಿ ಮೇಯಿಸಲು ಹೋಗಿದ್ದು, ಹಾಡಿಯ ಪಕ್ಕದಲ್ಲಿ ಕುರಿ ಮೇಯಿಸುತ್ತಿದ್ದರು. ಈ ವೇಳೆ ಹುಲಿ ದಾಳಿ ಮಾಡಿದೆ. ಇದನ್ನೂ ಓದಿ: ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ – ಮಹಿಳೆ ದಾರುಣ ಸಾವು

    ಹುಲಿ ಅರ್ಧ ಕಿಮೀ ದೂರ ಕುರಿಗಾಹಿಯನ್ನು ಎಳೆದೊಯ್ದಿದೆ. ಸ್ಥಳದಲ್ಲಿ ಬಂಡೀಪುರ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಮೃತದೇಹ ಕಾಡಿನಿಂದ ಹೊರತರಲೂ ಅಧಿಕಾರಿಗಳು ಮುಂದಾಗಿದ್ದಾರೆ. ಬಂಡೀಪುರದ ಕುಂದುಕೆರೆ ಅರಣ್ಯ ವಲಯದಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಶಂಕೆ

  • ಮಹಿಳೆ ಬಲಿ ಪಡೆದಿದ್ದ ಹುಲಿ ಸೆರೆ

    ಮಹಿಳೆ ಬಲಿ ಪಡೆದಿದ್ದ ಹುಲಿ ಸೆರೆ

    ಚಾಮರಾಜನಗರ: ಹುಲಿ (Tiger) ದಾಳಿಗೆ ಮಹಿಳೆ (Woman) ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡೀಪುರದ (Bandipur) ಅರಣ್ಯಾಧಿಕಾರಿಗಳು ಮಿಡ್‌ನೈಟ್ ಆಪರೇಷನ್ ನಡೆಸಿ ಹುಲಿಯನ್ನು ಸೆರೆ ಹಿಡಿಯುವಲ್ಲಿ ಸಫಲರಾಗಿದ್ದಾರೆ.

    ಸೆರೆಸಿಕ್ಕ ಹುಲಿ ಮಹಿಳೆಯ ಮೇಲೆ ದಾಳಿ ನಡೆಸಿ ಆಕೆಯನ್ನು ಬಲಿ ಪಡೆದಿತ್ತು. ಮಹಿಳೆ ಮಾತ್ರವಲ್ಲದೇ ಈ ಹುಲಿ ಎರಡು ಜಾನುವಾರುಗಳನ್ನೂ ಕೊಂದಿತ್ತು. ಹುಲಿ ಸೆರೆಹಿಡಿಯುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅಧಿಕಾರಿಗಳ ಸಭೆ ನಡೆಸಿ ಶೀಘ್ರವೇ ಹುಲಿ ಸೆರೆಗೆ ಸೂಚಿಸಿದ್ದರು. ಇದೀಗ ಬಂಡೀಪುರದ ಅರಣ್ಯಾಧಿಕಾರಿಗಳ ಹಾಗೂ ಗ್ರಾಮಸ್ಥರ ನಿದ್ದೆಗೆಡಿಸಿದ ಹುಲಿಯನ್ನು ರಾತ್ರಿ ಕಾರ್ಯಾಚರಣೆ ಮೂಲಕ ಸೆರೆಹಿಡಿದಿದ್ದಾರೆ. ಇದನ್ನೂ ಓದಿ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ಈ ಹುಲಿ ಮೈಸೂರು (Mysuru) ಜಿಲ್ಲೆಯ ನಂಜನಗೂಡು (Nanjangud) ತಾಲೂಕಿನ ಬಳ್ಳೂರ್ ಹುಂಡಿ ಬಳಿ ಮಹಿಳೆಯೊಬ್ಬರನ್ನು ಬಲಿ ಪಡೆದಿತ್ತು. ರಾತ್ರಿ 2 ಗಂಟೆ ಸಮಯದಲ್ಲಿ ಅಧಿಕಾರಿಗಳು ಹುಲಿಯನ್ನು ಸೆರೆಹಿಡಿದಿದ್ದಾರೆ. ಸುಮಾರು 10 ವರ್ಷ ವಯಸ್ಸಿನ ಹುಲಿ ಸೆರೆಯಾಗಿದೆ. ಜಾನುವಾರು ಮಾಂಸ ತಿನ್ನಲು ಕಳೆದ ಎರಡು ದಿನದಿಂದ ಜಾನುವಾರು ಸತ್ತ ಸ್ಥಳದ ಬಳಿ ಹುಲಿಯ ಚಲನವಲನ ಪತ್ತೆಯಾಗಿತ್ತು. ಕ್ಯಾಮೆರಾ ಟ್ರ್ಯಾಪ್‌ನಲ್ಲೂ ಹುಲಿಯ ಚಲನವಲನ ಪತ್ತೆಯಾಗಿತ್ತು. ರಾತ್ರಿ ಬೋನಿನೊಳಗೆ ಸಿಬ್ಬಂದಿ ಇರಿಸಿ, ಮರೆಮಾಚಿ ನೈಟ್ ಆಪರೇಷನ್ ಮಾಡಲಾಗಿದೆ. ಪಶುವೈದ್ಯ ವಾಸೀಂ ಮಿರ್ಜಾ ಹಾಗೂ ಸಿಬ್ಬಂದಿಯನ್ನು ಅಧಿಕಾರಿಗಳು ಬೋನಿನೊಳಗೆ ಇರಿಸಿದ್ದರು. ರಾತ್ರಿ ಜಾನುವಾರು ಕೊಂದ ಸ್ಥಳಕ್ಕೆ ಮಾಂಸ ತಿನ್ನಲು ಹುಲಿ ಬಂದ ವೇಳೆ ವೈದ್ಯರು ಬೋನಿನಲ್ಲೇ ಕುಳಿತು ಅರವಳಿಕೆ ಚುಚ್ಚುಮದ್ದು ಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್

    ಜನರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಸೆರೆಯಾಗಿದೆ. ಹುಲಿ ಸೆರೆಗೆ 200 ಸಿಬ್ಬಂದಿ, 3 ಆನೆ, ಕ್ಯಾಮೆರಾ ಟ್ರ‍್ಯಾಪ್, ಡ್ರೋನ್ ಬಳಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಬಂಡೀಪುರ ಅರಣ್ಯದ ಹೆಡಿಯಾಲ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಹುಲಿ ಸೆರೆಯಿಂದ ಕಾಡಂಚಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಹಿಡಿದ ಹುಲಿಯನ್ನು ಅಧಿಕಾರಿಗಳು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಬಿಟ್ಟಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ರೇಪ್ ಮಾಡಲು ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ 40 ವರ್ಷ ಜೈಲು ಶಿಕ್ಷೆ

  • ಅರಣ್ಯ ಸಿಬ್ಬಂದಿ, ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಓರ್ವ ಗುಂಡೇಟಿಗೆ ಬಲಿ

    ಅರಣ್ಯ ಸಿಬ್ಬಂದಿ, ಬೇಟೆಗಾರರ ನಡುವೆ ಗುಂಡಿನ ಚಕಮಕಿ – ಓರ್ವ ಗುಂಡೇಟಿಗೆ ಬಲಿ

    ಚಾಮರಾಜನಗರ: ಬೇಟೆಗಾರರು ಹಾಗೂ ಅರಣ್ಯ ಇಲಾಖೆ (Forest Department) ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಬೇಟೆಗಾರ ಗುಂಡೇಟಿಗೆ ಬಲಿಯಾದ ಘಟನೆ ಬಂಡೀಪುರದ  (Bandipur) ಮದ್ದೂರು ಅರಣ್ಯ ವಲಯದಲ್ಲಿ ನಡೆದಿದೆ.

    ಗುಂಡೇಟಿಗೆ ಬಲಿಯಾದ ಬೇಟೆಗಾರನನ್ನು ಭೀಮನಬೀಡು ಗ್ರಾಮದ ಮನು (35) ಎಂದು ಗುರುತಿಸಲಾಗಿದೆ. ಸುಮಾರು 10 ಮಂದಿ ಬೇಟೆಗಾರರು ಅರಣ್ಯ ವಲಯದಲ್ಲಿ ಕಡವೆಯನ್ನು ಭೇಟೆಯಾಡಿ ಮಾಂಸ ಕೊಂಡೊಯ್ಯುತ್ತಿದ್ದರು. ಈ ಸಮಯದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಅವರನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಬೇಟೆಗಾರರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿದಾಳಿ ನಡೆಸಿದಾಗ ಬೇಟೆಗಾರನಿಗೆ ಗುಂಡು ತಗುಲಿದ್ದು ಆತ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ದೇಶದಲ್ಲಿ ಫಸ್ಟ್‌ – ಶಂಕಿತ ಉಗ್ರರ ಕಾಲಿಗೆ ಜಿಪಿಎಸ್‌ ಬಳೆ

    ಘಟನೆ ನಡೆದ ಬಳಿಕ ಉಳಿದ ಬೇಟೆಗಾರರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಉದ್ಯೋಗದ ಆಸೆಗೆ ಬಿದ್ದು ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕನ ರಕ್ಷಣೆ

  • ಮೋದಿ ಇಡೀ ವಿಶ್ವಕ್ಕೆ ಹುಲಿ: ಈಶ್ವರಪ್ಪ

    ಮೋದಿ ಇಡೀ ವಿಶ್ವಕ್ಕೆ ಹುಲಿ: ಈಶ್ವರಪ್ಪ

    ಶಿವಮೊಗ್ಗ: ಬಂಡೀಪುರದಲ್ಲಿ (Bandipur) ನರೇಂದ್ರ ಮೋದಿ (Narendra Modi) ಅವರಿಗೆ ಹುಲಿ (Tiger) ಕಾಣಲಿಲ್ಲ ಎಂದು ವಿಪಕ್ಷಗಳು ಟೀಕಿಸುತ್ತಿವೆ. ಆದರೆ ಮೋದಿ ಇಡೀ ವಿಶ್ವಕ್ಕೆ ಹುಲಿ. ಅಂತಹ ಹುಲಿಯ ನೇತೃತ್ವದಲ್ಲಿ ದೇಶ ಸಾಗುತ್ತಿರುವುದು ನಮ್ಮ ಪುಣ್ಯ ಎಂದು ಶಿವಮೊಗ್ಗದಲ್ಲಿ (Shivamogga) ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (K.S. Eshwarappa) ಹೇಳಿದ್ದಾರೆ.

    ಟೀಕೆ ಮಾಡುವುದು ಬಿಟ್ಟರೆ ಕಾಂಗ್ರೆಸ್‍ನವರಿಗೆ ಏನು ಗೊತ್ತಿಲ್ಲ. ಹುಲಿ ಕಾಣಲಿಲ್ಲ ಎನ್ನುವುದಕ್ಕೂ ಟೀಕೆ, ಅಕಸ್ಮಾತ್ ಒಂದು ಹುಲಿ ಕಂಡಿದ್ದರೆ ಒಂದೇ ಕಾಣಿಸಿದೆ ಎಂದು ಟೀಕೆ ಮಾಡುತ್ತಿದ್ದರು. ಟೀಕೆಯಲ್ಲೇ ಅವರ ಜೀವನ ಕಳೆಯುತ್ತಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ನಾಲ್ಕು ಬಾರಿ ಗೆದ್ದರೂ ಮಂತ್ರಿಯೇ ಆಗದ ಮಹಾರಾಜ!

    ರಾಜ್ಯಕ್ಕೆ ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi), ಉಕ್ಕಿನ ಮನುಷ್ಯ ಗೃಹ ಮಂತ್ರಿ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಬಂದು ಹೋಗುತ್ತಿದ್ದಾರೆ. ರಾಷ್ಟ್ರದ ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ರಾಜ್ಯಕ್ಕೆ ಬರುತ್ತಿರುವುದು ಕಾಂಗ್ರೆಸ್‍ನವರಿಗೆ ಭಯ ತಂದಿದೆ. ರಾಷ್ಟ್ರೀಯ ನಾಯಕರು ಬಂದು ಹೋಗುವುದಕ್ಕೂ ಟೀಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಯಾವುದೇ ಲಕ್ಷಣಗಳಿಲ್ಲ ಹಾಗಾಗಿ ಟೀಕೆಯಲ್ಲಿ ತೊಡಗಿದ್ದಾರೆ ಎಂದು ಚಾಟಿ ಬೀಸಿದ್ದಾರೆ.

    ಇವರಿಗೆ ನಾಯಕರೇ ಇಲ್ಲ, ಅವರ ಮುಖ ನೋಡಿದ್ರೆ ವೋಟ್ ಬರುತ್ತದೆಯೇ ಎನ್ನುತ್ತಾರೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯವರ ಮುಖ ತೋರಿಸಿ ಜನರ ಬಳಿ ವೋಟ್ ಕೇಳಲಿ ನಮ್ಮ ಅಭ್ಯಂತರ ಇಲ್ಲ. ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಬರುತ್ತಾರೆ ಎಂದು ಕೋಲಾರ ಕಾರ್ಯಕ್ರಮವನ್ನು 3 ಬಾರಿ ಮುಂದೆ ಹಾಕಿದ್ದಾರೆ. ನಿಮಗೆ ನಾಯಕರುಗಳೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ದೇಶ ಹಾಗೂ ವಿಶ್ವ ಮೆಚ್ಚಿದ ನಾಯಕರು ಬಿಜೆಪಿಯಲ್ಲಿ (BJP) ಇದ್ದಾರೆ ಅದಕ್ಕಾಗಿ ನಾವು ಅವರನ್ನು ಕರೆಸುತ್ತೇವೆ. ವಿಶ್ವ ನಾಯಕ ನರೇಂದ್ರ ಮೋದಿ ಅವರು ನಮ್ಮ ನಾಯಕರಾಗಿರುವುದು ನಮ್ಮ ಹೆಮ್ಮೆ. ಯಡಿಯೂರಪ್ಪ (B.S Yediyurappa), ಬೊಮ್ಮಾಯಿ (Basavaraj Bommai) ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರ ಮೆಚ್ಚುಗೆ ಇದೆ. ರಾಜ್ಯದಲ್ಲಿ ಬಿಜೆಪಿಗೆ ಈ ಬಾರಿ ಪೂರ್ಣ ಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

    ರಾಜ್ಯದ 224 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಹಾಕಲಾಗುತ್ತದೆ. ಈಗಾಗಲೇ 224 ಕ್ಷೇತ್ರದ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ನಡೆದಿದೆ. ಒಂದೊಂದು ಕ್ಷೇತ್ರಕ್ಕೆ ಮೂರು ಹೆಸರು ಪಟ್ಟಿಯಲ್ಲಿ ಕಳುಹಿಸಿಕೊಟ್ಟಿದ್ದಾರೆ. ಕೇಂದ್ರದ ಚುನಾವಣಾ ಸಮಿತಿಯವರು ಕುಳಿತು ಚರ್ಚೆ ಮಾಡಿದ್ದಾರೆ. ಸೋಮವಾರ ಸಂಜೆ 170 ರಿಂದ 180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಈ ದೇಶದಲ್ಲಿ ಆರ್‍ಎಸ್‍ಎಸ್ (RSS) ಇಲ್ಲದಿದ್ದರೆ ಹಿಂದುಗಳು ಉಳಿಯುತ್ತಿರಲಿಲ್ಲ. ಆರ್‍ಎಸ್‍ಎಸ್ ಪ್ರಜಾಪ್ರಭುತ್ವ ಉಳಿಸಿದೆ. ಸಂವಿಧಾನಕ್ಕೆ ಒಳ್ಳೆಯ ಹೆಸರು ತಂದಿದೆ, ಎಲ್ಲರಿಗೂ ಮೀಸಲಾತಿಯಲ್ಲಿ ನ್ಯಾಯ ದೊರಕಿಸಿದೆ.ಸಿದ್ದರಾಮಯ್ಯ ಆರ್‍ಎಸ್‍ಎಸ್ ಟೀಕೆ ಮಾಡುವುದನ್ನು ಬಿಡದಿದ್ದರೆ ಕಾಂಗ್ರೆಸ್ ನಿರ್ನಾಮ ಆಗಲಿದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ

  • ಹಿಡಿದು ಮಾರಿಬಿಡಬಹುದೆಂಬ ಭಯಕ್ಕೆ ಹುಲಿ ಗುಹೆಯಲ್ಲಿ ಅಡಗಿರಬಹುದು: ಮೋದಿ ಸಫಾರಿಗೆ ಸಿದ್ದು ವ್ಯಂಗ್ಯ

    ಹಿಡಿದು ಮಾರಿಬಿಡಬಹುದೆಂಬ ಭಯಕ್ಕೆ ಹುಲಿ ಗುಹೆಯಲ್ಲಿ ಅಡಗಿರಬಹುದು: ಮೋದಿ ಸಫಾರಿಗೆ ಸಿದ್ದು ವ್ಯಂಗ್ಯ

    ಬೆಂಗಳೂರು: ಮೋದಿ ಸಫಾರಿ ಕುರಿತು ವರದಿಯೊಂದನ್ನು ಉಲ್ಲೇಖಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವ್ಯಂಗ್ಯವಾಗಿ ಟ್ವೀಟ್ (Tweet) ಮಾಡಿದ್ದಾರೆ.

    ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭಾನುವಾರ ಬಂಡೀಪುರಕ್ಕೆ (Bandipur) ಆಗಮಿಸಿದ್ದಾರೆ. ಈ ವೇಳೆ 22 ಕಿಲೋಮೀಟರ್ ಸಫಾರಿ (Safari) ನಡೆಸಿ ಬಂಡೀಪುರದ ಪ್ರಾಣಿ ಪಕ್ಷಿಗಳನ್ನು ವೀಕ್ಷಣೆ ಮಾಡಿದರು. ಇದನ್ನು ಓದಿ: ದೇಶದಲ್ಲಿ ಇದೆ 3167 ಹುಲಿಗಳು – ಪ್ರಕೃತಿಯನ್ನು ರಕ್ಷಿಸುವುದು ಭಾರತೀಯ ಸಂಸ್ಕೃತಿಯ ಭಾಗ: ಮೋದಿ 

    ಮೋದಿ ಸಫಾರಿ ವೇಳೆ ಹುಲಿ ಗೋಚರಿಸಲಿಲ್ಲ ಎಂದು ತಿಳಿಸುವ ಮಾಧ್ಯಮ ವರದಿಯನ್ನು ಸಿದ್ದರಾಮಯ್ಯ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.

    ಹಿಡಿದು ಮಾರಿಬಿಡುತ್ತಾರೆ ಎನ್ನುವ ಭಯಕ್ಕೆ ಯಾವ ಗುಹೆಯೊಳಗೆ ಅಡಗಿ ಕುಳಿತಿದೆಯೋ ಅಯ್ಯೋ ಪಾಪ. ಇನ್ನು ಕೆಲವೇ ದಿನಗಳಲ್ಲಿ ಬಂಡೀಪುರ ಉಳಿಸಿ ಎಂಬ ಅಭಿಯಾನವನ್ನು ಕನ್ನಡಿಗರು ಶುರು ಮಾಡುವಂತೆ ಆಗದಿರಲಿ. ಅದೇ ನೀವು ಕರುನಾಡಿಗೆ ಮಾಡುವ ದೊಡ್ಡ ಉಪಕಾರ ಎಂದು ಬರೆದು ನರೇಂದ್ರ ಮೋದಿಯವರಿಗೆ ಟ್ಯಾಗ್ (Tag) ಮಾಡಿದ್ದಾರೆ. ಇದನ್ನು ಓದಿ: ಕಾಡಿಗೆ ಸಫಾರಿ ಹೋದಾಗ ಸಫಾರಿ ಡ್ರೆಸ್‌ನಲ್ಲಿ ಇರಬೇಕು – ಹೆಚ್‌ಡಿಕೆಗೆ ಅಶ್ವಥ್ ನಾರಾಯಣ್ ತಿರುಗೇಟು

  • ಬಂಡೀಪುರದಲ್ಲಿ ಮೋದಿ ಸಫಾರಿ – ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ

    ಬಂಡೀಪುರದಲ್ಲಿ ಮೋದಿ ಸಫಾರಿ – ಪ್ರಕೃತಿ ಸೌಂದರ್ಯ ಸವಿದ ಪ್ರಧಾನಿ

    ಚಾಮರಾಜನಗರ: ಹುಲಿ ಯೋಜನೆಯ (Project Tiger) ಸುವರ್ಣ ಮಹೋತ್ಸವದ ಆಚರಣೆಗಾಗಿ ಬಂಡೀಪುರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ‌ ಮೋದಿ (PM Narendra Modi) ಅವರು ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶದಲ್ಲಿ (Bandipur Tiger Reserve) ಸಫಾರಿ ನಡೆಸಿದ್ದಾರೆ.

    ಮೈಸೂರಿನಿಂದ ಬೆಳಗ್ಗೆ ಮೇಲುಕಾಮನಹಳ್ಳಿ ಹೆಲಿಪ್ಯಾಡ್‌ಗೆ ಬಂದಿಳಿದ ಮೋದಿ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳಾದ ಮುರುಳಿ, ಸುಬ್ರಮಣ್ಯ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ‌ ಡಿ.ಎಸ್. ರಮೇಶ್ ಅವರಿಂದ ಸ್ವಾಗತ ಕೋರಿದರು. ಬೆಳಗ್ಗೆ 7:35ರ ವೇಳೆಗೆ ಬಂಡೀಪುರ ಕ್ಯಾಂಪಸ್‌ಗೆ ತಲುಪಿದ ಮೋದಿ ಅವರು ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

    7:50ಕ್ಕೆ ತೆರೆದ ಜೀಪ್‌ನಲ್ಲಿ (ಮಹೀಂದ್ರಾ ಬೊಲೆರೊ ಕ್ಯಾಂಪರ್) ಸುಮಾರು 2 ಗಂಟೆ (22 ಕಿ.ಮೀ) ಸಫಾರಿ ಮಾಡಿದರು. ಈ ವೇಳೆ ಅರಣ್ಯದಲ್ಲಿ ಪ್ರಧಾನಿ ಸಂಚರಿಸಿ ಸೌಂದರ್ಯ ಸವಿದರು. ಇದನ್ನೂ ಓದಿ: ವಿಕಲಚೇತನ ಕಾರ್ಯಕರ್ತನೊಂದಿಗೆ ಸೆಲ್ಫಿ ಕ್ಲಿಕ್ಕಿಸಿದ ಮೋದಿ

    ಪ್ರಧಾನಿ ಮೋದಿ ಅವರೊಂದಿಗೆ ದೆಹಲಿಯಿಂದ ಬಂದಿದ್ದ ಏಮ್ಸ್ ವೈದ್ಯರ ತಂಡ, ಎಡಿಜಿಪಿ ಅಲೋಕ್ ಕುಮಾರ್, ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಎಸ್ ಪಿ ಪದ್ಮನಿ ಸಾಹು ಸೇರಿದಂತೆ ಜಿಲ್ಲೆಯ ಅಧಿಕಾರಿಗಳು, ಜಿಲ್ಲಾ ಆರೋಗ್ಯ‌ ಇಲಾಖೆಯ ವೈದ್ಯರ ತಂಡ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ‌ಇದ್ದರು. ಮೋದಿ ಅವರಿದ್ದ ವಾಹನದ ಜೊತೆಗೆ ಅಂಬುಲೆನ್ಸ್‌ ಸೇರಿದಂತೆ ಒಂಬತ್ತು ವಾಹನಗಳು ಸಾಗಿದ್ದವು.

     

    ಅರಣ್ಯದ ಕಚ್ಚಾ ರಸ್ತೆಯಲ್ಲೇ ಸಾಗಿ ಬೆಳಗ್ಗೆ 9:50ಕ್ಕೆ ಕೆಕ್ಕನಹಳ್ಳ ಚೆಕ್ ಪೋಸ್ಟ್‌ಗೆ ಮೋದಿ ತಲುಪಿದರು. ಅಲ್ಲಿಂದ ತಮ್ಮ ವಾಹನದಲ್ಲಿ ಹೆದ್ದಾರಿಯಲ್ಲೇ 5 ಕಿ.ಮೀ. ಸಾಗಿ ತಮಿಳುನಾಡಿನ ಮಧುಮಲೈ ಹುಲಿಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಮೋದಿ ತೆರಳಿದರು. ಇಲ್ಲಿ ಆನೆಗಳಿಗೆ ಕಬ್ಬನ್ನು ತಿನ್ನಿಸಿದರು. ಏಷ್ಯಾದ ಪ್ರಥಮ ಆನೆ ಕ್ಯಾಂಪ್ ತೆಪ್ಪಕಾಡಿನಲ್ಲಿ ಮೋದಿ‌ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೊಮ್ಮ ಮತ್ತು ಬೆಳ್ಳಿ ದಂಪತಿಯನ್ನು ಭೇಟಿಯಾದ ಬಳಿಕ ನೀಲಗಿರಿಸ್ ಹೆಲಿಪ್ಯಾಡ್‌ನಿಂದ ಮೈಸೂರಿನತ್ತ ಹೊರಟರು.

  • ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

    ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

    ಮೈಸೂರು/ ಚಾಮರಾಜನಗರ: ಹುಲಿ ಯೋಜನೆ (Project Tiger) ಘೋಷಣೆಯಾಗಿ ಇಂದಿಗೆ 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಹೆಲಿಕಾಪ್ಟರ್‌ ಮೂಲಕ ಬಂಡೀಪುರಕ್ಕೆ (Bandipur) ಆಗಮಿಸಿದ್ದಾರೆ.

    ಶನಿವಾರವೇ ಮೈಸೂರಿಗೆ ಆಗಮಿಸಿದ್ದ ಮೋದಿ ಇಂದು ಬಂಡೀಪುರದಲ್ಲಿ ಸಫಾರಿ ನಡೆಸಲಿದ್ದಾರೆ.  ಸಫಾರಿ ನಡೆಸಿದ ಬಳಿಕ ತಮಿಳುನಾಡಿನ ಮಧುಮಲೈ ಅರಣ್ಯಕ್ಕೂ ಭೇಟಿ ಕೊಡಲಿದ್ದಾರೆ. ಹೀಗಾಗಿ ಮಧುಮಲೈ ಅರಣ್ಯದಲ್ಲೂ ಭರ್ಜರಿ ಸಿದ್ದತೆ ನಡೆದಿದೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ನಂದಿನಿ ಬ್ರ್ಯಾಂಡ್ ಬಗ್ಗೆ‌ ಹರಿದಾಡುತ್ತಿರುವ ಸುದ್ದಿ ಸುಳ್ಳು: KMF ಸ್ಪಷ್ಟನೆ

    22 ಕಿ.ಮೀ. ಸಫಾರಿ ನಡೆಸಿ ಗಡಿಭಾಗದ ಕೆಕ್ಕನಹಳ್ಳ ಚೆಕ್‍ಪೋಸ್ಟ್ ಮೂಲಕ ತಮಿಳುನಾಡಿನ ಮಧುಮಲೈ ಅರಣ್ಯಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ತೆರಳಲಿದ್ದಾರೆ. ಬೆಳಗ್ಗೆ 9:35ಕ್ಕೆ ಆನೆ ಶಿಬಿರದಲ್ಲಿ `ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೊಮ್ಮ-ಬೆಳ್ಳಿ ದಂಪತಿಗೆ ಅಭಿನಂದಿಸಲಿದ್ದಾರೆ. ಬಳಿಕ ತೆಪ್ಪಕಾಡಿನಲ್ಲಿ ದೇಶದ 12 ಹುಲಿಸಂರಕ್ಷಿತ ಪ್ರದೇಶದ ಹುಲಿ ಯೋಜನೆ ನಿರ್ದೇಶಕರೊಡನೆ ಸಂವಾದ ನಡೆಸಲಿದ್ದಾರೆ.

    ಬೆಳಗ್ಗೆ 11 ಗಂಟೆಗೆ ಮೈಸೂರಿಗೆ ವಾಪಸ್‌ ಆಗಲಿದ್ದು ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಲಿರುವ ಹುಲಿ ಯೋಜನೆಯ ಸುವರ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ 2022ರ ಹುಲಿ‌ ಸಮೀಕ್ಷೆ ವರದಿ ಹಾಗೂ 50ನೇ ವರ್ಷಾಚರಣೆಗೆ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 12:40ಕ್ಕೆ ದೆಹಲಿಗೆ ವಾಪಸ್‌ ಆಗಲಿದ್ದಾರೆ.

  • ಕಾಡಾನೆ ರಕ್ಷಿಸಿದ ಬಂಡೀಪುರದ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

    ಕಾಡಾನೆ ರಕ್ಷಿಸಿದ ಬಂಡೀಪುರದ ಅರಣ್ಯ ಸಿಬ್ಬಂದಿ, ವೈದ್ಯರ ಕಾರ್ಯಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

    ಚಾಮರಾಜನಗರ: ವಿದ್ಯುತ್‌ ತಂತಿಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಕಾಡಾನೆಗೆ ಸೂಕ್ತ ಚಿಕಿತ್ಸೆ ನೀಡಿ ಉಪಚರಿಸಿದ್ದ ಬಂಡೀಪುರ (Bandipur) ಅರಣ್ಯ ಸಿಬ್ಬಂದಿ ಹಾಗೂ ವೈದ್ಯರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಜಮೀನಿಗೆ ತಂತಿ ಬೇಲಿಗೆ ಅಕ್ರಮವಾಗಿ ಹಾಯಿಸಿದ್ದ ವಿದ್ಯುತ್ ತಗುಲಿ ಕಾಡಾನೆ ಅಸ್ವಸ್ಥಗೊಂಡಿದ್ದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಜಮೀನೊಂದರಲ್ಲಿ ನಡೆದಿತ್ತು. ಸತತ 10 ಗಂಟೆಗಳ ಕಾಲ ಚಿಕಿತ್ಸೆ ಬಳಿಕ ಆನೆ ಚೇತರಿಸಿಕೊಂಡಿತ್ತು. ಬಳಿಕ ಆನೆಯನ್ನು ಮತ್ತೆ ಕಾಡಿಗೆ ಬಿಡಲಾಗಿತ್ತು. ಇದನ್ನೂ ಓದಿ: ಬುದ್ಧ, ಅಂಬೇಡ್ಕರ್, ಸ್ವಾಮಿ ವಿವೇಕಾನಂದರ ಭಾವಚಿತ್ರದೊಂದಿಗೆ ಸೈಲೆಂಟ್ ಸುನಿ – ರಾರಾಜಿಸುತ್ತಿವೆ ಕಟೌಟ್

    ಆನೆಗೆ ಚಿಕಿತ್ಸೆ ನೀಡಿ ಉಪಚರಿಸಿ ಕಾಡಿಗೆ ಬಿಟ್ಟಿದ್ದ ವೈದ್ಯರು ಹಾಗೂ ಬಂಡೀಪುರ ಅರಣ್ಯಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಸಿಂಗ್ ಟ್ವೀಟ್ ಮಾಡಿದ್ದರು. ಅರಣ್ಯ ಸಚಿವರ ಟ್ವೀಟ್‌ನ್ನು ರೀ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಇದನ್ನು ನೋಡಿ ಸಂತೋಷವಾಯಿತು. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗೆ ಅಭಿನಂದನೆಗಳು. ನಮ್ಮ ಜನರಲ್ಲಿ ಇಂತಹ ಸಹಾನುಭೂತಿ ಇರುವುದು ಶ್ಲಾಘನೀಯ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಅಕ್ರಮ ವಶದಲ್ಲಿರುವ ತೀರ್ಥಹಳ್ಳಿಯ ಸಾಫ್ಟ್‌ವೇರ್‌ ಇಂಜಿನಿಯರ್; ಬಿಡುಗಡೆಗೆ ಗೃಹ ಸಚಿವ ಶತಪ್ರಯತ್ನ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶವಿಲ್ಲ – ಪ್ರವಾಸಿಗರಿಗೆ ಕಾಟೇಜ್ ಕೊಡದಿರಲು ನಿರ್ಧಾರ

    ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅವಕಾಶವಿಲ್ಲ – ಪ್ರವಾಸಿಗರಿಗೆ ಕಾಟೇಜ್ ಕೊಡದಿರಲು ನಿರ್ಧಾರ

    ಚಾಮರಾಜನಗರ: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಬಂಡೀಪುರದಲ್ಲಿ (Bandipur) ಅರಣ್ಯ ಇಲಾಖೆಗೆ ಸೇರಿದ ಕಾಟೇಜ್, ಗೆಸ್ಟ್‌ಹೌಸ್ ಹಾಗೂ ರೂಮ್‌ಗಳಲ್ಲಿ ಕೊಠಡಿಗಳಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧಿಸಲಾಗಿದೆ. ಆದರೆ ಎಂದಿನಂತೆ ಸಫಾರಿ ಇರಲಿದೆ.

    ಹೊಸ ವರ್ಷದ ಮೋಜು, ಮಸ್ತಿ ಹೆಸರಿನಲ್ಲಿ ಪರಿಸರಕ್ಕೆ ಧಕ್ಕೆಯಾಗಬಾರದೆಂಬ ಕಾರಣಕ್ಕೆ ವಾಸ್ತವ್ಯ ನಿರ್ಬಂಧಿಸಿರುವ ಅರಣ್ಯ ಇಲಾಖೆ ಖಾಸಗಿ ರೆಸಾರ್ಟ್‌ಗಳಲ್ಲೂ ಡಿಜೆ ಹಾಕುವಂತಿಲ್ಲ, ಪಾರ್ಟಿಗಳನ್ನು ಜೋರಾಗಿ ಆಯೋಜನೆ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಪ್ರವಾಸಿಗರು ಮಾಸ್ಕ್ (Mask) ಧರಿಸಿ ಕೋವಿಡ್ (Covid19) ಮಾರ್ಗಸೂಚಿ ಪಾಲಿಸುತ್ತ ಸಫಾರಿ (Safari) ಮಾಡಬಹುದು ಎಂದು ಬಂಡೀಪುರ ಡಿಸಿಎಫ್ ರಮೇಶ್‌ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ವರ್ಷಾಚರಣೆ; ದಶಪಥ ಹೆದ್ದಾರಿಯ ರಾಮನಗರ- ಚನ್ನಪಟ್ಟಣ ಬೈಪಾಸ್ ಬಂದ್

    ಇನ್ನೂ ಹೊಸ ವರ್ಷಕ್ಕೂ ಮುನ್ನಾ ದಿನ ಸಫಾರಿಗೆ ಬಂಡೀಪುರಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ನಾಳೆಯು ಹೆಚ್ಚಿನ ಪ್ರಮಾಣದ ಪ್ರವಾಸಿಗರು ಬರುವ ನಿರೀಕ್ಷೆ ಇದೆ‌. ಇನ್ನೊಂದೆಡೆ ನಾಳೆ ಮಲೆ ಮಹದೇಶ್ವರ ಬೆಟ್ಟಕ್ಕೆ ಒಂದು ಲಕ್ಷ ಜನರು ಬರುವ ನಿರೀಕ್ಷೆಯಿದ್ದು, ಮಲೆ ಮಹದೇಶ್ವರ ಬೆಟ್ಟದಲ್ಲೂ ರೂಂಗಳ ಮುಂಗಡ ಬುಕ್ಕಿಂಗ್ ಇರುವುದಿಲ್ಲ. ಮೊದಲು ಬಂದವರಿಗೆ ಆದ್ಯತೆಯ ಮೇರೆಗೆ ಕೊಠಡಿ ಕೊಡಲಾಗುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ: ಅಮಿತ್‌ ಶಾ

    Live Tv
    [brid partner=56869869 player=32851 video=960834 autoplay=true]

  • ಬಂಡೀಪುರದಲ್ಲಿ ಅವಳಿ ಮರಿಗಳಿಗೆ ಜನ್ಮ ಕೊಟ್ಟ ಕಾಡಾನೆ

    ಬಂಡೀಪುರದಲ್ಲಿ ಅವಳಿ ಮರಿಗಳಿಗೆ ಜನ್ಮ ಕೊಟ್ಟ ಕಾಡಾನೆ

    ಚಾಮರಾಜನಗರ: ಕಾಡಾನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿರುವುದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದಲ್ಲಿ ಕಂಡುಬಂದಿದೆ.

    ಮೂರ್ಕೆರೆ ದಾರಿಯಲ್ಲಿ ಈ ಕಾಡಾನೆ ತನ್ನ ಎರಡು ಮರಿಗಳೊಂದಿಗೆ ಕಾಣಿಸಿಕೊಂಡಿದೆ. ಸಾಮಾನ್ಯವಾಗಿ ಆನೆಗಳು ಅವಳಿ ಮರಿಗಳಿಗೆ ಜನ್ಮ ನೀಡುವುದು ಅಪರೂಪವಾಗಿದ್ದು, ಬಂಡೀಪುರ ಅರಣ್ಯದಲ್ಲಿ ಇದೇ ಪ್ರಥಮ ಎಂದು ಹೇಳಲಾಗ್ತಿದೆ. ಇದನ್ನೂ ಓದಿ: ಬಂಧಿತರು ಅಮಾಯಕರಾದ್ರೆ, ಠಾಣೆ ಮೇಲೆ ದಾಂಧಲೆ ಮಾಡಿದವ್ರು ಶಾಂತಿಪ್ರಿಯರೇ: ರೇಣುಕಾಚಾರ್ಯ ಪ್ರಶ್ನೆ

    ಹುಲಿ, ಹಂದಿ, ಕುರಿ, ನಾಯಿ ಸೇರಿದಂತೆ ಇತರ ಪ್ರಾಣಿಗಳು ಅವಳಿ ಮರಿ ಹಾಕುವುದು ಸಾಮಾನ್ಯ. ಆದರೆ ಆನೆಗಳು ಅವಳಿ ಮರಿಗಳಿಗೆ ಜನ್ಮ ನೀಡುವುದು ತೀರಾ ಅಪರೂಪವಾಗಿದೆ. ಇಂತಹ ಅಪರೂಪದ ಘಟನೆಗೆ ಬಂಡೀಪುರ ಸಾಕ್ಷಿಯಾಗಿದೆ.

    File:Bandipur National Park, Karnataka, Nature.jpg - Wikimedia Commons

    ಆನೆಗಳು 22 ರಿಂದ 23 ತಿಂಗಳ ಕಾಲ ಗರ್ಭ ಧರಿಸಿರುತ್ತವೆ. ನವಜಾತ ಆನೆ ಮರಿ 90 ರಿಂದ 100 ಕೆಜಿ ತೂಕ ಇರುತ್ತೆ ಎಂದು ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ. ಇದನ್ನೂ ಓದಿ: ತಾಯಿಯಾಗುತ್ತಿದ್ದಾರೆ ಚಂದ್ರನ ರಾಣಿ ಶ್ರಿಯಾ ಸರನ್