Tag: Bangalore Chalo

  • ವೇತನಕ್ಕೆ ಆಗ್ರಹಿಸಿ ಖಾಸಗಿ ಐಟಿಐ ಒಕ್ಕೂಟದಿಂದ ಬೆಂಗಳೂರಿಗೆ ಪಾದಯಾತ್ರೆ

    ವೇತನಕ್ಕೆ ಆಗ್ರಹಿಸಿ ಖಾಸಗಿ ಐಟಿಐ ಒಕ್ಕೂಟದಿಂದ ಬೆಂಗಳೂರಿಗೆ ಪಾದಯಾತ್ರೆ

    ಹುಬ್ಬಳ್ಳಿ: ಸಿಬ್ಬಂದಿ ವೇತನ ಅನುದಾನಕ್ಕೆ ಒತ್ತಾಯಿಸಿ ಖಾಸಗಿ ಐಟಿಐ ಸಂಘಟನೆಯಿಂದ ಬೆಂಗಳೂರು ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ.

    ಸಂಘಟನೆ ನೂರಾರು ಸದಸ್ಯರು ವಿವಿಧ ಬೇಡಿಕೆಗೆ ಆಗ್ರಹಿಸಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ನಗರದ ಮೂರುಸಾವಿರ ಮಠದಿಂದ ಆರಂಭಗೊಂಡಿರುವ ಈ ಪಾದಯಾತ್ರೆ ಒಟ್ಟು 15 ದಿನಗಳ ಕಾಲ ನಡೆಯಲಿದೆ. ಮಾರ್ಗ ಮಧ್ಯೆ ವಿವಿಧ ಜಿಲ್ಲೆಯ ಸಿಬ್ಬಂದಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಇದನ್ನೂ ಓದಿ: ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

    ಈ ಬಗ್ಗೆ ಮಾತನಾಡಿದ ಒಕ್ಕೂಟದ ರಾಜ್ಯ ಸಂಚಾಲಕ ಪ್ರದೀಪ್, ಸರ್ಕಾರ ಈ ಹಿಂದೆ ಐಟಿಐ ಕಾಲೇಜುಗಳಿಗೆ ಹಾಗೂ ಸಿಬ್ಬಂದಿಗೆ ನೀಡುತ್ತಿದ್ದ ಅನುದಾನವನ್ನು ನಿಲ್ಲಿಸಿದೆ. ಇದರಿಂದ ನೂರಾರು ಕುಟುಂಬಗಳು ಬೀದಿಗೆ ಬಂದಿವೆ. ಈ ಪಾದಯಾತ್ರೆ ಬೆಂಗಳೂರು ತಲುಪುವುದರೊಳಗಾಗಿ ಸರ್ಕಾರ ನಮ್ಮ ಬೇಡಿಕೆಯನ್ನು ಪೂರೈಸಬೇಕು. ಇಲ್ಲದಿದ್ದರೆ ಬೆಂಗಳೂರಿನಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮೈಕ್ರೋಸಾಫ್ಟ್ ಸಿಇಒ ಪುತ್ರ ನಿಧನ!

  • ಇಂದು, ನಾಳೆ ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ

    ಇಂದು, ನಾಳೆ ಬೆಂಗ್ಳೂರಿಗೆ ಟ್ರಾಫಿಕ್ ಬಿಸಿ

    ಬೆಂಗಳೂರು: ಇಂದು ಮತ್ತು ನಾಳೆ ಅಂದರೆ ಬುಧವಾರ ಸಿಲಿಕಾನ್ ಸಿಟಿಯಲ್ಲಿ ಪ್ರಯಾಣಿಕರಿಗೆ, ವಾಹನ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.

    ಕರ್ನಾಟಕದಲ್ಲಿ ಸಂಪೂರ್ಣ ಮದ್ಯ ನಿಷೇಧಕ್ಕೆ ಆಗ್ರಹಿಸಿ ಸುಮಾರು 2 ಸಾವಿರ ಮಹಿಳೆಯರಿಂದ ಬೆಂಗಳೂರು ಚಲೋ ಕಾರ್ಯಕ್ರಮ ನಡೆಯಲಿದೆ. ಚಿತ್ರದುರ್ಗದ ಕ್ರೀಡಾಂಗಣದಲ್ಲಿ ಜನವರಿ 19ರಂದು ಮಹಿಳೆಯರು ಕಾಲ್ನಡಿಗೆ ಜಾಥಾ ಆರಂಭಿಸಿದ್ದರು. ಇಂದು ಬೆಂಗಳೂರು ನಗರಕ್ಕೆ ಬರಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಟ್ರಾಫಿಕ್ ಉಂಟಾಗುವ ಸಾಧ್ಯತೆ ಇದೆ.

    ಪ್ರತಿಭಟನಾ ಮಹಿಳೆಯರು ಇಂದು ರಾತ್ರಿಯಿಡೀ ಕಾಲ್ನಡಿಗೆ ಜಾಥಾ ಮಾಡಲಿದ್ದು, ನೈಸ್‍ರೋಡ್, ಜಾಲಹಳ್ಳಿ, ಗೊರಗುಂಟೆಪಾಳ್ಯ ಹಾಗೂ ಯಶವಂತಪುರ, ಮಾರ್ಗವಾಗಿ ಮಲ್ಲೇಶ್ವರಂ ಗ್ರೌಂಡ್ ನಲ್ಲಿ ರಾತ್ರಿ ಪ್ರತಿಭಟನಾಕಾರರು ತಂಗಲಿದ್ದಾರೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರತಿಭಟನೆಕಾರರು ಕಾಲ್ನಡಿಗೆ ಜಾಥದ ಮೂಲಕ ಬರುವುದರಿಂದ ಬೆಂಗಳೂರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.

    ಬುಧವಾರ ಮಲ್ಲೇಶ್ವರಂನಿಂದ ಕಾಲ್ನಡಿಗೆಯಲ್ಲಿ ವಿಧಾನಸೌಧಕ್ಕೆ ಜಾಥಾ ಹೋಗಿ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಈ ಮಾರ್ಗಗಳಲ್ಲಿ ಟ್ರಾಫಿಕ್ ಉಂಟಾಗಲಿದ್ದು, ವಾಹನ ಸವಾರರಿಗೆ ತೊಂದರೆ ಆಗುವ ಸಾದ್ಯತೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv