Tag: Bangalore

  • ನೀವು ನಿಜಕ್ಕೂ ಕನ್ನಡಿಗರಾ – ಸಿದ್ದರಾಮಯ್ಯರಿಂದ ಮೋದಿಗೆ ಐದು ಸವಾಲು

    ನೀವು ನಿಜಕ್ಕೂ ಕನ್ನಡಿಗರಾ – ಸಿದ್ದರಾಮಯ್ಯರಿಂದ ಮೋದಿಗೆ ಐದು ಸವಾಲು

    ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಸವಾಲ್ ಹಾಕಿದ್ದಾರೆ.

    `ನೀವು ಕನ್ನಡಿಗರಾ’ ಎಂದು ಪ್ರಶ್ನಿಸಿದ ಸಿಎಂ, ಪ್ರಧಾನಿ ಮೋದಿಗೆ ನೀವು ಕನ್ನಡಿಗರಾದರೆ ಈ ಐದು ಕೆಲಸ ಮಾಡಿ ತೋರಿಸಿ ಅಂತ ಸವಾಲೊಡ್ಡಿದ್ದಾರೆ.

    ಸವಾಲ್‍ಗಳೇನು?:
    1. ನಾಡಭಾಷೆ, ನಾಡಧ್ವಜ, ನಾಡಗೀತೆ ಒಪ್ಪಿಕೊಳ್ಳಿ. ನಾಡಧ್ವಜಕ್ಕೆ ಅಂಗೀಕಾರ ನೀಡಿ.
    2. ಹಿಂದಿ ಹೇರಿಕೆ ಕೈ ಬಿಡಿ, ಕನ್ನಡಕ್ಕೆ ಪ್ರಾಮುಖ್ಯತೆ ಕೊಡಿ.
    3. ಮಹದಾಯಿ ಸಮಸ್ಯೆ ಬಗೆಹರಿಸಲು ಮೂರು ರಾಜ್ಯಗಳ ಸಭೆ ಕರೆಯಿರಿ.
    4. ರಾಷ್ಟ್ರೀಕೃತ ಬ್ಯಾಂಕುಗಳ ಪ್ರವೇಶ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಿ.
    5. ಒಬ್ಬನೇ ಒಬ್ಬ ಮುಸ್ಲಿಂ, ಕ್ರಿಶ್ಚಿಯನ್‍ಗೆ ಟಿಕೆಟ್ ನೀಡದೆ ನಿಮಗೆ ನಿಜವಾದ ಕನ್ನಡಿಗರಾಗಲು ಸಾಧ್ಯವೇ?

    ಪ್ರಶ್ನೆ:
    1 ಕನ್ನಡಿಗನಾಗುವುದೆಂದರೆ…
    ಈ ನೆಲದ ಶರಣರು, ಸಂತರು, ದಾಸರು, ಸೂಫಿಗಳು ಹುಟ್ಟುಹಾಕಿದ ಸೌಹಾರ್ದ ಪರಂಪರೆಯನ್ನು ಗೌರವಿಸುವುದು. ಒಬ್ಬನೇ ಒಬ್ಬ ಮುಸ್ಲಿಮ್, ಕ್ರಿಶ್ಚಿಯನ್‍ಗೆ ಚುನಾವಣೆಯಲ್ಲಿ ಟಿಕೆಟ್ ನೀಡದೆ ನಿಮಗೆ ನಿಜವಾದ ಕನ್ನಡಿಗರಾಗಲು ಸಾಧ್ಯವೇ? ಎಂದು ಮೊದಲನೇ ಸವಾಲ್ ಹಾಕಿದ್ದಾರೆ.

    2. ಕನ್ನಡಿಗನಾಗುವುದೆಂದರೆ….
    ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆ. ರಾಷ್ಟ್ರೀಕೃತ ಬ್ಯಾಂಕುಗಳ ಪ್ರವೇಶ ಪರೀಕ್ಷೆಯನ್ನು ಕನ್ನಡಿಗರಿಗೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡಿ ಕನ್ನಡಿಗರಾಗುವಿರಾ?

    3. ಕನ್ನಡಿಗನಾಗುವುದೆಂದರೆ…
    ನೆಲ,ಜಲ,ಭಾಷೆಯ ರಕ್ಷಣೆಗೆ ಬದ್ಧವಾಗಿರುವುದು. ಮಹದಾಯಿ ನೀರು ಹಂಚಿಕೆ ವಿವಾದ ಬಗೆಹರಿಸಲು ಮೂರು ರಾಜ್ಯಗಳ ಸಭೆ ಕರೆದು ಕನ್ನಡಿಗರಾಗುವಿರಾ?

    4. ಕನ್ನಡಿಗನಾಗುವುದೆಂದರೆ…
    ಬಲತ್ಕಾರದ ಹಿಂದಿ ಹೇರಿಕೆಯನ್ನು ಕೈಬಿಡುವುದು, ಕನ್ನಡಕ್ಕೆ ಪ್ರಾಮುಖ್ಯ ಕೊಡುವುದು. ಕನ್ನಡಿಗರಾಗಲು ಸಿದ್ಧರಿದ್ದೀರಾ?

    5. ಕನ್ನಡಿಗನೆಂದು ಘೋಷಿಸಿಕೊಂಡ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ. ಕನ್ನಡಿಗನಾಗುವುದೆಂದರೆ….
    ನಾಡಭಾಷೆ, ನಾಡಗೀತೆ, ನಾಡಧ್ವಜವನ್ನು ಒಪ್ಪಿಕೊಳ್ಳುವುದು. ಕರ್ನಾಟಕದ ನಾಡಧ್ವಜಕ್ಕೆ ಅಂಗೀಕಾರ ನೀಡಿ, ನಿಜವಾದ ಕನ್ನಡಿಗರಾಗುವಿರಾ? ಎಂದು ಐದು ಸವಾಲ್ ಹಾಕಿದ್ದು, ಪ್ರಶ್ನೆ ಮಾಡಿದ್ದಾರೆ.

    ಈ ರೀತಿ ಸವಾಲ್ ಹಾಕಿ, ಪ್ರಶ್ನಿಸಿ ಪ್ರಧಾನಿ ಮೋದಿ ಅವರಿಗೆ ಟ್ವೀಟ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪ್ರತೀ ಟ್ವೀಟ್ ನಲ್ಲೂ #AnswerMadiModi ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

  • ಬೆಳ್ಳಂಬೆಳಗ್ಗೆ 85 ಲಕ್ಷ ರೂ. ಹಣ ಜಪ್ತಿ ಮಾಡಿದ ಐಟಿ ಅಧಿಕಾರಿಗಳು

    ಬೆಳ್ಳಂಬೆಳಗ್ಗೆ 85 ಲಕ್ಷ ರೂ. ಹಣ ಜಪ್ತಿ ಮಾಡಿದ ಐಟಿ ಅಧಿಕಾರಿಗಳು

    ಬೆಂಗಳೂರು: ದಾಖಲೆಯಿಲ್ಲದೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 85 ಲಕ್ಷ ಹಣವನ್ನ ಆದಾಯ ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಬೆಂಗಳೂರು ಹೊರವಲಯ ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದ ಜಾಸ್ ಟೋಲ್ ಬಳಿ ನಡೆದಿದ್ದು, ಇಂದು ಬೆಳ್ಳಂಬೆಳಗ್ಗೆ ಖಚಿತ ಮಾಹಿತಿಯ ಮೇರೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆಗ ಮಹಿಂದ್ರಾ ಎಕ್ಸ್ ಯುವಿ ಕಾರಿನಲ್ಲಿದ್ದ ಬರೋಬ್ಬರಿ 85 ಲಕ್ಷ ಹಣ ಪತ್ತೆಯಾಗಿದ್ದು, ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದಿದ್ದಾರೆ.

    ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ, ಶಿವಮೊಗ್ಗ ಜಿಲ್ಲೆಗೆ ಈ ಕಾರು ಹೋಗುತ್ತಿತ್ತು ಎನ್ನಲಾಗಿದೆ. ಆದಾಯ ತೆರಿಗೆಗೆ ವಂಚಿಸಿ ಹಣ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಸದ್ಯ ಕಾರು ಹಾಗೂ ಚಾಲಕನನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಸಪ್ತಪದಿ ತುಳಿಯಲು ಸಿದ್ಧರಾದ ಬಿಗ್ ಬಾಸ್ ಸ್ಪರ್ಧಿ

    ಸಪ್ತಪದಿ ತುಳಿಯಲು ಸಿದ್ಧರಾದ ಬಿಗ್ ಬಾಸ್ ಸ್ಪರ್ಧಿ

    ಬೆಂಗಳೂರು: ರಿಯಾಲಿಟಿ ಶೋ ಬಿಗ್ ಬಾಸ್ 3ನೇ ಸೀಸನ್ ನಲ್ಲಿ ಸ್ಪರ್ಧಿಯಾಗಿದ್ದ ನಟಿ ಗೌತಮಿ ಗೌಡ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆ.

    ಗೌತಮಿ ಗೌಡ ಖಾಸಗಿ ವಾಹಿನಿಯ ಒಂದು ಧಾರಾವಾಹಿಯ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದ್ದರು. ಆ ಧಾರಾವಾಹಿಯ ಮೂಲಕವೇ ಖ್ಯಾತಿ ಪಡೆದಿದ್ದರು. ನಂತರ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಆದ ಬಿಗ್ ಬಾಸ್ ನ ಸ್ಪರ್ಧಿಯಾಗಿದ್ದರು.

    ಈಗ ಗೌತಮಿ ಗೌಡ ತಾವು ಪ್ರೀತಿಸುತ್ತಿದ್ದ ಹುಡುಗನ ಜೊತೆ ಸಪ್ತಪದಿ ತುಳಿಯಲು ಸಿದ್ಧರಾಗಿದ್ದಾರೆ. ಗೌತಮಿ ಕೆಲವು ವರ್ಷಗಳಿಂದ ಜಾರ್ಜ್ ಕ್ರಿಸ್ಟಿ ಅವರನ್ನು ಪ್ರೀತಿಸುತ್ತಿದ್ದರು. ನಂತರ ಇವರ ಎರಡು ಕುಟುಂಬದವರು ಒಪ್ಪಿ ಗುರು-ಹಿರಿಯರು ಸೇರಿ ಇತ್ತೀಚೆಗೆಷ್ಟೆ ಗೌತಮಿ ಗೌಡ ಹಾಗು ಜಾರ್ಜ್ ಕ್ರಿಸ್ಟಿ ಅವರ ನಿಶ್ಚಿತಾರ್ಥವನ್ನು ಮಾಡಿದ್ದಾರೆ.

    ಗೌತಮಿ ಗೌಡ ತಾವು ಪ್ರೀತಿಸಿದ ಹುಡುಗನ ಜೊತೆ ಮದುವೆಯಾಗುವ ಖುಷಿಯಲ್ಲಿದ್ದಾರೆ. ನಿಶ್ಚಿತಾರ್ಥದ ಫೋಟೋಗಳನ್ನು ತಮ್ಮ ಇನ್ಸ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿ ಸಂತಸವನ್ನು ಹಂಚಿಕೊಂಡಿದ್ದಾರೆ. ಗೌತಮಿಗೌಡ ಅವರು ಕಿರುತೆರೆ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

  • ರಾತ್ರೋರಾತ್ರಿ ಬಂತು 1 ಕಾಲ್ – `ನಟ ಸಾರ್ವಭೌಮ’ ನಿಗೆ ಡಿಂಪಲ್ ಕ್ವೀನ್ ಗ್ರೀನ್ ಸಿಗ್ನಲ್!

    ರಾತ್ರೋರಾತ್ರಿ ಬಂತು 1 ಕಾಲ್ – `ನಟ ಸಾರ್ವಭೌಮ’ ನಿಗೆ ಡಿಂಪಲ್ ಕ್ವೀನ್ ಗ್ರೀನ್ ಸಿಗ್ನಲ್!

    ಬೆಂಗಳೂರು: ದರ್ಶನ್, ಸುದೀಪ್, ಪುನೀತ್, ಮತ್ತು ಶ್ರೀಮುರಳಿ ನಾಯಕರ ಜೊತೆ ಅಭಿನಯಿಸಿದ್ದ ಡಿಂಪಲ್ ಕ್ವೀನ್ ರಚಿತಾ ರಾಮ್ ಈಗ ಮತ್ತೊಮ್ಮ ಪುನೀತ್ ರಾಜ್‍ಕುಮಾರ್ ಜೊತೆ ಅಭಿನಯಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮಾಡುತ್ತಿರುವ `ನಟ ಸಾರ್ವಭೌಮ’ ಸಿನಿಮಾದ ನಾಯಕಿ ಪಾತ್ರಕ್ಕೆ ಮಹಾರಾಷ್ಟ್ರದ ಹುಡುಗಿ ಪ್ರಿಯಾಂಕಾ ಜ್ವಾಲಕರ್ ಆಯ್ಕೆಯಾಗಿದ್ದರು. ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಪ್ರಿಯಾಂಕಾರನ್ನ ಚಿತ್ರತಂಡ ಕೈಬಿಟ್ಟಿತ್ತು. ಆದರೆ ಈಗ `ನಟ ಸಾರ್ವಭೌಮ’ ಸಿನಿಮಾಗೆ ರಚಿತಾ ರಾಮ್ ಆಯ್ಕೆಯಾಗಿದ್ದಾರೆ.

    `ನಟ ಸಾರ್ವಭೌಮ’ ಸಿನಿಮಾದ ಮುಹೂರ್ತ ಮುಗಿದ ಮೇಲೆ ಮಾರನೇ ದಿನ ರಾತ್ರೋರಾತ್ರಿ ಬಂದ ಒಂದೇ ಒಂದು ಫೋನ್ ಕಾಲ್ ಸಿನಿಮಾಗಾಗಿ ರಚಿತಾ ರಾಮ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ರಾತ್ರಿ ಸುಮಾರು 10.30 ಕ್ಕೆ ರಾಕ್‍ಲೈನ್ ವೆಂಕಟೇಶ್ ಅವರು ರಚಿತಾ ರಾಮ್ ಗೆ ಫೋನ್ ಮಾಡಿ ಚಿತ್ರದ ಆಫರ್ ಕೊಟ್ಟಿದ್ದಾರೆ. ನಂತರ ರಚಿತಾ ರಾಮ್ ಕೂಡಲೇ ಒಪ್ಪಿಗೆ ಸೂಚಿಸಿದ್ದಾರೆ.

    ಈಗಾಗಲೇ ರಚಿತಾ ರಾಮ್ `ಬುಲ್ ಬುಲ್’, `ಅಂಬರೀಶ’, `ರನ್ನ’, `ರಥಾವರ’ ಮತ್ತು `ಭರ್ಜರಿ’ ಅಂತಹ ಸಾಲು ಸಾಲು ಹಿಟ್ ಸಿನಿಮಾಗಳನ್ನು ಮಾಡಿದ್ದಾರೆ. ಈಗ ಸದ್ಯಕ್ಕೆ ನೀನಾಸಂ ಸತೀಸ್ ಅಭಿನಯದ `ಅಯೋಗ್ಯ’, `ಉಪ್ಪಿ ರುಪಿ’ ಮತ್ತು `ಸೀತಾ ರಾಮ ಕಲ್ಯಾಣ’ ಸಿನಿಮಾಗಳ ಜೊತೆಗೆ `ನಟ ಸಾರ್ವಭೌಮ’ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

  • ಬಿಜೆಪಿ ಜೊತೆ ಹೋದ್ರೆ ಎಚ್ಡಿಕೆಗೆ ಮನೆಯಿಂದಲೇ ಬಹಿಷ್ಕಾರ- ಎಚ್‍ಡಿ ದೇವೇಗೌಡ

    ಬಿಜೆಪಿ ಜೊತೆ ಹೋದ್ರೆ ಎಚ್ಡಿಕೆಗೆ ಮನೆಯಿಂದಲೇ ಬಹಿಷ್ಕಾರ- ಎಚ್‍ಡಿ ದೇವೇಗೌಡ

    ಬೆಂಗಳೂರು: ಒಂದು ವೇಳೆ ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿ ಕುಮಾರಸ್ವಾಮಿ ಬಿಜೆಪಿ ಜೊತೆ ಹೋದರೆ ಆತನನ್ನು ಮನೆಯಿಂದಲೇ ಬಹಿಷ್ಕಾರ ಹಾಕುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಹೇಳಿದ್ದಾರೆ.

    ಎನ್‍ಡಿ ಟಿವಿ ಮುಖ್ಯಸ್ಥ ಪ್ರಣಯ್ ರಾಯ್ ನಡೆಸಿದ ಸಂದರ್ಶನದಲ್ಲಿ ಅವರು, 2006ರಲ್ಲಿ ಬಿಜೆಪಿ ಜೊತೆ ಸರ್ಕಾರ ನಡೆಸಿದ ತಪ್ಪಿನಿಂದ ಕುಮಾರಸ್ವಾಮಿ ಪಾಠ ಕಲಿತಿದ್ದಾನೆ. ಸಾರ್ವಜನಿಕ ಭಾಷಣದಲ್ಲೂ ಈ ಬಗ್ಗೆ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾನೆ. ನಾನು ತಪ್ಪು ಮಾಡಿದೆ, ನನ್ನ ತಂದೆ ಆರೋಗ್ಯ ಕೂಡಾ ಹಾಳಾಯ್ತು, ಅವರು ಸಂಕಟ ಅನುಭವಿಸಿದ್ರು. ನಾನು ಮತ್ತೆ ಆ ತಪ್ಪು ಮಾಡಲ್ಲ ಅಂತ ಹೇಳಿದ್ದಾನೆ ಎಂದು ಎಚ್‍ಡಿಡಿ ತಿಳಿಸಿದರು.

    ಕಾಂಗ್ರೆಸ್ ಈಗಿನ ಚುನಾವಣಾ ವಾತಾವರಣವನ್ನು ಹಾಳು ಮಾಡಲು ಯತ್ನಿಸುತ್ತಿದೆ. ಎರಡೂ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಪ್ರಾದೇಶಿಕ ಪಕ್ಷವನ್ನು ಬಳಸಿ ಎಸೆಯುತ್ತಿವೆ. ಶಿವಸೇನೆ ಯಾಕೆ ಹೊರಬಂತು. ಚಂದ್ರಬಾಬು ನಾಯ್ಡು ಯಾಕೆ ಹೊರಬಂದರು. ಬಿಜೆಪಿಯಿಂದ ಬೆಂಬಲ ಪಡೆಯುವ ಪರಿಸ್ಥಿತಿ ಬರಲ್ಲ. ಕುಮಾರಸ್ವಾಮಿಗೆ ತಂದೆಯ ಆರೋಗ್ಯ ಎಲ್ಲಕ್ಕಿಂತ ಮುಖ್ಯವಾಗಿದೆ ಎಂದ್ರು.

    ಒಂದು ವೇಳೆ ಬಿಜೆಪಿ ಜೊತೆ ಕುಮಾರಸ್ವಾಮಿ ಹೋದರೆ ಅವನು ನನ್ನ ಮಗನೇ ಅಲ್ಲ. ನಮ್ಮ ಕುಟುಂಬದಿಂದಲೇ ಕುಮಾರಸ್ವಾಮಿಗೆ ಬಹಿಷ್ಕಾರ ಹಾಕುತ್ತೇನೆ. ನನ್ನ ಅನುಮತಿ ಇಲ್ಲದೇ ಕಾಂಗ್ರೆಸ್ ಜೊತೆಗೂ ಹೋಗುವಂತಿಲ್ಲ ಎಂದು ಎಚ್.ಡಿ. ದೇವೇಗೌಡ ಖಡಕ್ ಮಾತನ್ನು ಆಡಿದ್ದಾರೆ.

  • ಮೂರು ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಟಾಪರ್: ಟಾಪರ್ ಲಿಸ್ಟ್ ಇಲ್ಲಿದೆ

    ಮೂರು ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಟಾಪರ್: ಟಾಪರ್ ಲಿಸ್ಟ್ ಇಲ್ಲಿದೆ

     ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸ್ವಾತಿ(ಎಡ), ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಅಂಕಿತಾ(ಬಲ)

    ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮೂರು ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

    ಕಲಾವಿಭಾಗದಲ್ಲಿ ಇಬ್ಬರು, ವಾಣಿಜ್ಯ ವಿಭಾಗದಲ್ಲಿ ಇಬ್ಬರು ಹಾಗೂ ವಿಜ್ಞಾನ ವಿಭಾಗದಲ್ಲಿ ಒಬ್ಬರು ಪ್ರಥಮ ಸ್ಥಾನ ಪಡೆದಿದ್ದಾರೆ.

    ಕಲಾ ವಿಭಾಗದಲ್ಲಿ ಎಂದಿನಂತೆ ಬಳ್ಳಾರಿ ಕೊಟ್ಟೂರಿನ ಇಂದು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಈ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೊದಲ ಮೂರು ಸ್ಥಾನಗಳನ್ನು ಪಡೆದಿರುವುದು ವಿಶೇಷ. ಸ್ವಾತಿ ಎಸ್ 595 ಅಂಕ, ರಮೇಶ್ 593 ಅಂಕ, ಕಾವ್ಯಂಜಲಿ ಗೊರವರ 588 ಅಕಗಳನ್ನು ಪಡೆದಿದ್ದಾರೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ: ಶೇ.59.56 ವಿದ್ಯಾರ್ಥಿಗಳು ಪಾಸ್, ದಕ್ಷಿಣ ಕನ್ನಡ ಫಸ್ಟ್

    ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ಟಾಪರ್ ಆಗಿದ್ದಾರೆ. ಮಲ್ಲೇಶ್ವರಂ ವಿದ್ಯಾಮಂದಿರ ಕಾಲೇಜಿನ ವರ್ಷಿಣಿ ಎಂ ಭಟ್ ಮತ್ತು ರಾಜಾಜಿನಗರ ಎಎಸ್‍ಸಿ ಪಿಯು ಕಾಲೇಜಿನ ಅಮೃತಾ ಎಸ್‍ಆರ್ 595 ಅಂಕಗಳನ್ನು ಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಪೂರ್ವಿಕಾ 594 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

    ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಬಸವೇಶ್ವರ ನಗರದ ವಿವಿಎಸ್ ಸರ್ದಾರ್ ಪಟೇಲ್ ಕಾಲೇಜಿನ ಕೃತಿ ಮುಟ್ಟಗಿ 597 ಅಂಕಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹಾಸನದ ಮಾಸ್ಟರ್ಸ್ ಪಿಯು ಕಾಲೇಜಿನ ಮೋಹನ್ ಎಸ್‍ಎಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಗೋವಿಂದದಾಸ ಪಿಯು ಕಾಲೇಜಿನ ಅಂಕಿತಾ ಪಿ 595 ಅಂಕಗಳಿಸುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನಿಂಗ್, ಮರು ಮೌಲ್ಯಮಾಪನಕ್ಕೆ ಶುಲ್ಕ ಎಷ್ಟು?

    ಒಟ್ಟು 408421 ವಿದ್ಯಾರ್ಥಿಗಳು ಪಾಸ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ಸಿಕ್ಕಿದೆ. ಉಡುಪಿ, ಕೊಡಗು ಕ್ರಮವಾಗಿ ಎರಡು, ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದರೆ, ಚಿಕ್ಕೋಡಿಗೆ ಕೊನೆ ಸ್ಥಾನ ಸಿಕ್ಕಿದೆ. 52.30% ಬಾಲಕರು, 67.11% ಬಾಲಕಿಯರು ತೇರ್ಗಡೆಯಾಗಿದ್ದಾರೆ.

    ದಕ್ಷಿಣ ಕನ್ನಡ ಮೊದಲ ಸ್ಥಾನ.-91.49%
    ಉಡುಪಿ ಎರಡನೇ ಸ್ಥಾನ-90.67%
    ಕೊಡಗು ಮೂರನೇ ಸ್ಥಾನ-83.94%
    ಚಿಕ್ಕೋಡಿ ಕೊನೆಸ್ಥಾನ -52.20%

     


  • ನಟಿ ಸಾಹೇರ್ ಅಫ್ಜಾ ಜೊತೆ ಕಾಪ್ಟರ್ ನಲ್ಲಿ ‘ನಟಭಯಂಕರ’ ಪ್ರಥಮ್

    ನಟಿ ಸಾಹೇರ್ ಅಫ್ಜಾ ಜೊತೆ ಕಾಪ್ಟರ್ ನಲ್ಲಿ ‘ನಟಭಯಂಕರ’ ಪ್ರಥಮ್

    ಬೆಂಗಳೂರು: ಬಿಗ್ ಬಾಸ್ ಪ್ರಥಮ್ ಅಂದರೆ ಸದಾ ಸುದ್ದಿಯಲ್ಲಿರುತ್ತಾರೆ. ಈಗ ನಟಿಯೊಬ್ಬರ ಜೊತೆ ಕಾಪ್ಟರ್ ನಲ್ಲಿ ಓಡಾಡುತ್ತಿದ್ದಾರೆ.

    ಪ್ರಥಮ್ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿರುವ `ನಟ ಭಯಂಕರ’ ಚಿತ್ರಕ್ಕಾಗಿ ಕಾಪ್ಟರ್ ಬಳಕೆ ಮಾಡುತ್ತಿದ್ದಾರೆ. ಈಗಾಗಲೇ ಮೈಸೂರಿನಲ್ಲಿ ಶೂಟಿಂಗ್ ಶುರುವಾಗಿದ್ದು, ಪ್ರಥಮ್ ಜೊತೆಯಲ್ಲಿ ನಟಿ ಸಹೇರಾ ಆಫ್ಟಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

    ನಟಿ ಸಾಹೇರ್ ಅಫ್ಜಾ ಬಾಲಿವುಡ್‍ಗೆ ಎಂಟ್ರಿ ಕೊಡುತ್ತಿದ್ದ ಹಾಗೆ ಸ್ಯಾಂಡಲ್ ವುಡ್ ನಲ್ಲಿ ಆಫರ್ ಗಳ ಸುರಿಮಳೆಯನ್ನು ಪಡೆದಿದ್ದಾರೆ. ಸಾಹೇರ್ ಅಫ್ಜಾ ಸ್ಯಾಂಡಲ್ ವುಡ್ ನಲ್ಲಿ ಬೀಗ ಸಿನಿಮಾದಿಂದ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈಗ ಕನ್ನಡದಲ್ಲಿ 3 ಸಿನಿಮಾಗಳ ಬಂಪರ್ ಆಫರ್ ಪಡೆದಿದ್ದು, ಸಿನಿಮಾಗೆ ಸಹಿ ಹಾಕುತ್ತಿದ್ದಂತೆ ಶೂಟಿಂಗ್‍ನಲ್ಲಿ ಪಾಲ್ಗೊಂಡಿದ್ದಾರೆ.

    ಸದ್ಯಕ್ಕೆ ಒಳ್ಳೆ ಹುಡುಗ ಪ್ರಥಮ್ ಜೊತೆ `ನಟ ಭಯಂಕರ’ ಸಿನಿಮಾದ ಶೂಟಿಂಗ್ ನಲ್ಲಿ ಸಾಹೇರ್ ಅಫ್ಜಾ ಭಾಗಿಯಾಗಿದ್ದಾರೆ. ಈ ಬಗ್ಗೆ ಪ್ರಥಮ್ `ನಟ ಭಯಂಕರ ಚಿತ್ರೀಕರಣ ಶುರುವಾಗಿದೆ. ಸಖತ್ತಾಗಿ ನಡೆಯುತ್ತಿದೆ’ ಎಂದು ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಜೊತೆಗೆ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ.

  • ವಿಮಾನ ಕುಸಿಯುತ್ತಿದ್ದಾಗ ಎಲ್ಲಾ ಮುಗೀತು ಅಂದ್ಕೊಂಡೆ – ಹುಬ್ಬಳ್ಳಿ ಘಟನೆ ಬಗ್ಗೆ ರಾಹುಲ್ ಮಾತು

    ವಿಮಾನ ಕುಸಿಯುತ್ತಿದ್ದಾಗ ಎಲ್ಲಾ ಮುಗೀತು ಅಂದ್ಕೊಂಡೆ – ಹುಬ್ಬಳ್ಳಿ ಘಟನೆ ಬಗ್ಗೆ ರಾಹುಲ್ ಮಾತು

    -ಕೈಲಾಸ ಯಾತ್ರೆಗೆ ಪರ್ಮೀಷನ್ ಕೊಡಿ

    ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬದಲಾಗಿದ್ದಾರೆ. ಈ ಮಾತು ಯಾಕೆಂದರೆ ಎರಡು ವಾರ ಕೈಲಾಸ ಮತ್ತು ಮಾನಸ ಸರೋವರ ಯಾತ್ರೆ ಹೋಗುವುದಕ್ಕೆ ರಾಹುಲ್ ಗಾಂಧಿ ಕಾರ್ಯಕರ್ತರ ಅನುಮತಿ ಕೇಳಿದ್ದಾರೆ.

    ಈ ಹಿಂದೆ ವಿದೇಶಕ್ಕೆ ಸೈಲೆಂಟಾಗಿ ವಾರಗಟ್ಟಲೇ ಹೋಗಿ ಬರುತ್ತಿದ್ದ ರಾಹುಲ್ ವಿವಾದಕ್ಕೆ ತುತ್ತಾಗ್ತಿದ್ದರು. ಭಾನುವಾರ ದೆಹಲಿಯಲ್ಲಿ ನಡೆದ ಜನಾಕ್ರೋಶ ಸಮಾವೇಶದಲ್ಲಿ ರಾಹುಲ್ ಜನರ ಅನುಮತಿ ಕೇಳಿದ್ದು, ನಾಲ್ಕೈದು ದಿನಗಳ ಹಿಂದೆ ಹುಬ್ಬಳ್ಳಿಗೆ ತೆರಳುವಾಗ ವಿಶೇಷ ವಿಮಾನದಲ್ಲಿ ಜೀವಭಯ ಎದುರಿಸಿದ ಬಗ್ಗೆ ಮೊದಲ ಬಾರಿಗೆ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ಹುಬ್ಬಳ್ಳಿಗೆ ಬಂದಾಗ ನಿಜವಾಗಿಯೂ ಆಗಿದ್ದೇನು?

    ವಿಮಾನ ಹಠಾತ್ತನೇ 8 ಸಾವಿರ ಅಡಿ ಕೆಳಗೆ ಕುಸಿದಾಗ ಎಲ್ಲಾ ಮುಗಿದು ಹೋಯ್ತು ಅಂದುಕೊಂಡೆ. ಆ ಕ್ಷಣದಲ್ಲೇ ಕೈಲಾಸ ಮತ್ತು ಮಾನಸ ಸರೋವರ ಯಾತ್ರೆಗೆ ನಿರ್ಧರಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಮುಗಿದ ಮೇಲೆ ಯಾತ್ರೆ ಹೋಗುತ್ತೀನಿ ಎಂದು ಅನುಮತಿ ಕೊಡಿ ಅಂತಾ ಕೇಳಿಕೊಂಡಿದ್ದಾರೆ.

    ಇದೇ ಗುರುವಾರ ರಾಹುಲ್ ಗಾಂಧಿ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಯುಕ್ತ ಕರಾವಳಿ ಕರ್ನಾಟಕಕ್ಕೆ ಪ್ರಚಾರಕ್ಕೆ ಆಗಮಿಸಿದ್ದರು. ರಾಹುಲ್ ಗಾಂಧಿ ಅವರು ವಿಶೇಷ ವಿಮಾನದಲ್ಲಿ ದೆಹಲಿಯಿಂದ ಹುಬ್ಬಳ್ಳಿಗೆ ಹೊರಟಿದ್ದರು. ಆದರೆ ವಿಮಾನದ ಲ್ಯಾಂಡಿಂಗ್ ವೇಳೆ ಸಮಸ್ಯೆ ಕಾಣಿಸಿಕೊಂಡಿದ್ದು, ವಿಮಾನ ದಿಢೀರನೇ ಎಡಭಾಗಕ್ಕೆ ವಾಲಿತ್ತು. ವೇಗವಾಗಿ ಆಗಸದಿಂದ ಕೆಳಗಿಳಿಯುತ್ತಿರುವಂತೆ ತೊಂದರೆ ಉಂಟಾಗಿತ್ತು.

  • ಕ್ರಿಶ್ಚಿಯನ್ ಸಂಪ್ರದಾಯದಂತೆ ಮದ್ವೆಯಾದ ಮೇಘನಾ ರಾಜ್, ಚಿರಂಜೀವಿ ಸರ್ಜಾ!

    ಕ್ರಿಶ್ಚಿಯನ್ ಸಂಪ್ರದಾಯದಂತೆ ಮದ್ವೆಯಾದ ಮೇಘನಾ ರಾಜ್, ಚಿರಂಜೀವಿ ಸರ್ಜಾ!

    ಬೆಂಗಳೂರು: ಸ್ಯಾಂಡಲ್‍ವುಡ್ ನ ಮೊತ್ತೊಂದು ತಾರಾ ಜೋಡಿ ಮೇಘನಾ ರಾಜ್ ಚಿರಂಜೀವಿ ಸರ್ಜಾ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಬೆಂಗಳೂರಿನ ಕೋರಮಂಗಲದ ಹೊಸೂರು ರಸ್ತೆಯ ಸೇಂಟ್ ಆ್ಯಂಥೋನೀಸ್ ಫೈರಿ ಚರ್ಚ್ ನಲ್ಲಿ ಇಂದು ಮಧ್ಯಾಹ್ನ ಮೇಘನಾ ಚಿರಂಜೀವಿ ಸರ್ಜಾ ಪರಸ್ಪರ ಉಂಗುರ ಬದಲಾಯಿಸಿಕೊಂಡು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆಯಾಗಿದ್ದಾರೆ.

    ಕಪ್ಪು ಬಿಎಂಡಬ್ಲ್ಯೂ ಕಾರಿನಲ್ಲಿ ಮೇಘನಾ ಹಾಗೂ ಬಿಳಿ ಕಾರಿನಲ್ಲಿ ಚಿರಂಜೀವಿ ಸರ್ಜಾ ಚರ್ಚ್ ಗೆ ಆಗಮಿಸಿದ್ದರು. ಮೇಘನಾ ಪ್ಯೂರ್ ವೈಟ್ ಗೌನ್ ತೊಟ್ಟಿದ್ದು, ಚಿರಂಜೀವಿ ಸರ್ಜಾ ಅವರು ಬ್ಲ್ಯಾಕ್ ಸೂಟ್ ತೊಟ್ಟಿದ್ದರು.

    ಚರ್ಚ್ ಫಾದರ್ ಸಮ್ಮುಖದಲ್ಲಿ ಪ್ರೇಯರ್ ಮಾಡಿ ಎರಡು ಕುಟುಂಬಸ್ಥರು ಪ್ರೇಯರ್ ನಲ್ಲಿ ಭಾಗಿಯಾಗಿದ್ದರು. ನಂತರ ಇಬ್ಬರು ಪ್ರಮಾಣ ವಚನ ನೀಡಿ ಬೈಬಲ್ ಮುಟ್ಟಿ ವಧು ವರರು ಮದ್ವೆಗೆ ಸಂಪೂರ್ಣ ಒಪ್ಪಿಗೆ ನೀಡಿದ್ದರು. ಬಳಿಕ ಮೇಘನಾ ಚಿರುಗೆ ರಿಂಗ್ ತೊಡಿಸಿದ್ದಾರೆ. ಚಿರು ಮೇಘನಾಗೆ ಚೈನ್ ಹಾಕಿದ್ದಾರೆ. ಮೇಘನಾ ಗೌನ್ ಧರಿಸಿ ಮಿಂಚಿದ್ರೆ ಚಿರು ಸೂಟ್ ಧರಿಸಿ ಕಂಗೊಳಿಸಿದ್ದಾರೆ.

    ಎರಡೂ ಕುಟುಂಬಗಳಿಗೆ ಸಿನಿಮಾ ನಂಟಿರುವುದರಿಂದ ಅನೇಕ ತಾರೆಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಹತ್ತಿರದ ಸಂಬಂಧಿಕರನ್ನ ಮಾತ್ರ ಆಹ್ವಾನಿಸಲಾಗಿತ್ತು.

    ವಧು ವರರ ಜೊತೆ ಚಿತ್ರರಂಗದ ತಾರೆಯರಾದ ಹಿರಿಯ ನಟಿ ತಾರಾ, ಅರ್ಜುನ್ ಸರ್ಜಾ, ಧ್ರುವ ಸರ್ಜಾ, ಐಶ್ವರ್ಯ ಸರ್ಜಾ, ಪ್ರಜ್ವಲ್ ದೇವರಾಜ್ ಬಂದಿದ್ದರು. ಮೇಘನಾ ತಾಯಿ ಪ್ರಮೀಳಾ ಜೋಷಾಯ್ ಕ್ಯಾಥೋಲಿಕ್ ಪಂಗಡಕ್ಕೆ ಸೇರಿದವರಾದ್ದರಿಂದ ತಾಯಿ ಕಡೆಯ ಸಂಪ್ರದಾಯದಂತೆ ಇಂದು ಮದುವೆ ನಡೆದಿದೆ. ಮೇ 2 ರಂದು ಅರಮನೆ ಮೈದಾನದಲ್ಲಿ ಮತ್ತೊಮ್ಮೆ ಹಿಂದೂ ಸಂಪ್ರದಾಯದ ಇಬ್ಬರ ಪ್ರಕಾರ ವಿವಾಹ ನಡೆಯಲಿದೆ.

  • ನಾಳೆ ದ್ವಿತೀಯ ಪಿಯುಸಿ ಫಲಿತಾಂಶ – 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

    ನಾಳೆ ದ್ವಿತೀಯ ಪಿಯುಸಿ ಫಲಿತಾಂಶ – 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

    ಬೆಂಗಳೂರು: ನಾಳೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಯ ನಂತರ ಪಿಯುಸಿ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳುತ್ತದೆ.

    ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಚಿವರ ಬದಲು ಪಿಯುಸಿ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಮೂಲಕ ನಾಳೆ ಸುಮಾರು 6 ಲಕ್ಷ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ ಎಂದು ಪಿಯುಸಿ ಬೋರ್ಡ್ ನಿಂದ ಮಾಹಿತಿ ಲಭ್ಯವಾಗಿದೆ.

    ಪಿಯುಸಿ ಫಲಿತಾಂಶ ಪ್ರಕಟವಾಗುವ ವೆಬ್ ಸೈಟ್:

    1. http://www.pue.kar.nic.in

    2. http://karresults.nic.in

    3. http://puc.kar.nic.in