Tag: Bangalore

  • ದುನಿಯಾ ವಿಜಯ್ ಅರೆಸ್ಟ್: ಬೀದಿಯಲ್ಲಿ ‘ಭೀಮ’ನ ಬಂಧನ

    ದುನಿಯಾ ವಿಜಯ್ ಅರೆಸ್ಟ್: ಬೀದಿಯಲ್ಲಿ ‘ಭೀಮ’ನ ಬಂಧನ

    ನ್ನಡದ ಹೆಸರಾಂತ ನಟ ದುನಿಯಾ ವಿಜಯ್ ಅರೆಸ್ಟ್ (Arrest) ಆಗಿದ್ದಾರೆ. ಬೆಂಗಳೂರಿನ ವಿನೋವಾ ನಗರದಲ್ಲಿ ನಡುರಸ್ತೆಯಲ್ಲೇ ಪೊಲೀಸರು ದುನಿಯಾ ವಿಜಯ್ ಕೈಗೆ ಬೇಡಿ ತೋಡಿಸಿಕೊಂಡು ಕರೆದುಕೊಂಡು ಹೋಗಿದ್ದಾರೆ. ಬೆಂಗಳೂರಿನ ವಿನೋವಾ ರಸ್ತೆಯಲ್ಲಿ ವಿಜಯ್ ಕಂಡು ಬಹುತೇಕರು ಗಾಬರಿಗೊಂಡಿದ್ದರು. ವಿಜಯ್ ಮೈ ತುಂಬಾ ರಕ್ತ ಬೇರೆ ಹರಿದಿದ್ದರಿಂದ ಏನಾಯಿತು ಎಂದೆಲ್ಲ ವಿಚಾರಿಸಿದ್ದರು. ಆಮೇಲೆ ಅದು ಶೂಟಿಂಗ್ ಸನ್ನಿವೇಶ ಎಂದು ಗೊತ್ತಾಗಿ ನಿಟ್ಟುಸಿರಿಟ್ಟರು.

    ಹೌದು, ದುನಿಯಾ ವಿಜಯ್ ನಟಿಸಿ, ನಿರ್ದೇಶನ ಮಾಡುತ್ತಿರುವ ಭೀಮ (Bhima) ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಅದರಲ್ಲೂ ಕ್ಲೈಮ್ಯಾಕ್ಸ್ ದೃಶ್ಯವನ್ನು ವಿಜಯ್ ಶೂಟ್ ಮಾಡುತ್ತಿದ್ದಾರೆ. ನಡು ರಸ್ತೆಯಲ್ಲಿ ವಿಜಯ್ ಅವರನ್ನು ಅರೆಸ್ಟ್ ಮಾಡಿಕೊಂಡು ಹೋಗುವ ದೃಶ್ಯ ಅದಾಗಿದೆ. ಈ ಮೂಲಕ ಭೀಮ ಸಿನಿಮಾದ ಕ್ಲೈಮ್ಯಾಕ್ಸ್ ಏನಾಗಿರಲಿದೆ ಎನ್ನುವ ಸಣ್ಣದೊಂದು ಸುಳಿವೂ ಸಿಕ್ಕಿದೆ.

    ವಿಜಯ್ ಮಗಳ ಎಂಟ್ರಿ

    ದುನಿಯಾ ವಿಜಯ್ (Duniya Vijay) ಈಗಾಗಲೇ ನಟ, ನಿರ್ದೇಶಕನಾಗಿ ಸೈ ಎನಿಸಿಕೊಂಡಿದ್ದಾರೆ. ಭೀಮನಾಗಿ ಅಬ್ಬರಿಸಲು ಸಜ್ಜಾಗಿರುವ ಬೆನ್ನಲ್ಲೇ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ಸಿನಿ ದುನಿಯಾಗೆ ಇಬ್ಬರು ಪುತ್ರಿಯರನ್ನು ವಿಜಯ್ ಪರಿಚಯಿಸುತ್ತಿದ್ದಾರೆ.

    ದುನಿಯಾ ವಿಜಯ್ ಅವರ ಇಬ್ಬರು ಹೆಣ್ಣು ಮಕ್ಕಳು ಸಿನಿಮಾರಂಗ ಪ್ರವೇಶಿಸೋದು ಖಚಿತ. ಇದನ್ನ ಸ್ವತಃ ವಿಜಯ್ ಅನೌನ್ಸ್ ಮಾಡಿದ್ದಾರೆ. ಆದರೆ ನೀವು ಗೆಸ್ ಮಾಡಿದಂತೆ ಕಿರಿ ಮಗಳು ಮೋನಿಷಾ (Monisha) ಅಲ್ಲ. ಬದಲಿಗೆ ಹಿರಿಯ ಮಗಳು ಮೋನಿಕಾ (Monica) ಮೊದಲು ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಮೋನಿಕಾ ವಿಜಯ್ ಅವರ ಎಜುಕೇಷನ್ ಕಂಪ್ಲೀಟ್ ಆಗಿದೆ. ರಿಸೆಂಟ್ ಆಗಿ ಮುಂಬೈನಲ್ಲಿ ಆ್ಯಕ್ಟಿಂಗ್ ಕೋರ್ಸ್ ಸಹ ಮುಗಿಸಿ ಬಂದಿದ್ದಾರೆ. ಮುಂಬೈನ ಅನುಪಮ್ ಖೇರ್ (Anupam Kher) ನಟನಾ ಶಾಲೆಯಲ್ಲಿ ತರಬೇತಿ ಪಡೆದು ಬಂದಿರುವ ಮೋನಿಕಾ, ಸದ್ಯ ಬೆಂಗಳೂರಿನಲ್ಲಿ ಕಲಾತಂಡವೊಂದರ ಜೊತೆ ಕೆಲಸ ಮಾಡ್ತಿದ್ದಾರೆ.

    ಹಾಗಾಗಿ ಹಿರಿ ಮಗಳು ಮೋನಿಕಾ ಸಿನಿಮಾ ಎಂಟ್ರಿಗೆ ತಯಾರಾಗಿದ್ದು, ಶೀಘ್ರದಲ್ಲೇ ಸಿನಿಮಾ ಅನೌನ್ಸ್ ಆಗುವ ನಿರೀಕ್ಷೆಯಿದೆ. ಆದ್ರೆ ಕಿರಿ ಮಗಳು ಮೋನಿಷಾ ಇನ್ನೂ ಎಜುಕೇಷನ್ ಮಾಡ್ತಿದ್ದು, ಈಗ ಹೆಚ್ಚಿನ ಶಿಕ್ಷಣಕ್ಕಾಗಿ ವಿದೇಶಕ್ಕೆ ಹೋಗ್ತಿದ್ದಾರಂತೆ. ಜೊತೆಗೆ ಮೋನಿಷಾ ಸಹ ಆ್ಯಕ್ಟಿಂಗ್ ಟ್ರೈನಿಂಗ್ ಪಡೆದುಕೊಳ್ಳಲಿದ್ದು, ಅದು ಮುಗಿದು ವಾಪಸ್ ಆದ ಬಳಿಕವಷ್ಟೇ ಮೋನಿಷಾ ಬಣ್ಣದ ಜಗತ್ತಿಗೆ ಬರಲಿದ್ದಾರೆ.

     

    ವಿಜಯ್ ಅವರ ಇಬ್ಬರು ಮಕ್ಕಳಿಗೂ ಈಗಾಗಲೇ ತುಂಬಾ ಆಫರ್ಸ್ ಬಂದಿದೆ. ಆದರೆ ಶಿಕ್ಷಣಕ್ಕೆ ತೊಂದರೆಯಾಗಬಾರದು ಅನ್ನೋ ಕಾರಣಕ್ಕೆ ಇಷ್ಟು ದಿನ ನಟನೆಗೆ ಬರೋದನ್ನ ಮುಂದೂಡಲಾಗಿತ್ತು. ಆದ್ರೀಗ ಹಿರಿ ಮಗಳು ಸಿನಿಮಾ ಮಾಡೋ ಉದ್ದೇಶದಿಂದಲೇ ಸಕಲ ತಯಾರಿ ಮುಗಿಸಿದ್ದಾಳೆ. ಹೀಗಾಗಿ ಮೋನಿಕಾ ಲಾಂಚ್ ಮಾಡೋಕೆ ಇದು ಸೂಕ್ತ ಸಮಯ ಎಂದು ವಿಜಯ್ ನಿರ್ಧರಿಸಿದ್ದಾರಂತೆ. ಸದ್ಯ ಮೋನಿಕಾ ಚೊಚ್ಚಲ ಸಿನಿಮಾಗೆ ಅದ್ಭುತ ಸ್ಕ್ರಿಪ್ಟ್ ಕೂಡ ರೆಡಿಯಿದ್ದು, ಒಂದೊಳ್ಳೆ ಸಮಯ ನೋಡ್ಕೊಂಡು ಸಿನಿಮಾ ಶುರು ಮಾಡುವ ಪ್ಲ್ಯಾನ್‌ನಲ್ಲಿದ್ದಾರೆ. ಇನ್ನು ಹಿರಿಯ ಮಗಳ ಮೊದಲ ಸಿನಿಮಾಗೆ ಸ್ವತಃ ದುನಿಯಾ ವಿಜಯ್ ಅವರೇ ಆ್ಯಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ.

  • ಬೆಳಗ್ಗೆ 11ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಳಗ್ಗೆ 11ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್  ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ (Bangalore) ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ (Ravindra Kalakshetra) ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.

    ಓಡೋಡಿ ಬಂದ ಮೊಮ್ಮಗ, ಸೊಸೆ

    ಅಗಲಿದ ಹಿರಿಯ ಚೇತನ ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು (Anu) ಮತ್ತು ಲೀಲಾವತಿ (Leelavati) ಮೊಮ್ಮಗ  ಯುವರಾಜ್ (Yuvraj) ಆಗಮಿಸಿದ್ದಾರೆ. ನಿನ್ನೆ ರಾತ್ರಿಯೇ ಅವರು ಚೆನ್ನೈನಿಂದ ಹೊರಟು ನೆಲಮಂಗಲ ತಲುಪಿ, ಇಂದು ಅಂತಿಮ ದರ್ಶನ ಪಡೆದಿದ್ದಾರೆ.

     

    ವಿನೋದ್ ರಾಜ್ (Vinod Raj) ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.

  • ರಜನಿ ಪತ್ನಿಗೆ ಸಂಕಷ್ಟ: ಕೋರ್ಟಿಗೆ ಹಾಜರಾಗಲು ಸೂಚನೆ

    ರಜನಿ ಪತ್ನಿಗೆ ಸಂಕಷ್ಟ: ಕೋರ್ಟಿಗೆ ಹಾಜರಾಗಲು ಸೂಚನೆ

    ಮಿಳು ನಾಡಿನ ಹೆಸರಾಂತ ನಟ ರಜನಿಕಾಂತ್ (Rajinikanth) ಅವರ ಪತ್ನಿ ಲತಾ (Lata) ಅವರಿಗೆ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿ (Court)ಗೆ ಹಾಜರಾಗಬೇಕು ಎಂದು ಬೆಂಗಳೂರಿನ (Bangalore) 1ನೇ ಎಸಿಎಂಎಂ ನ್ಯಾಯಾಲಯ ತಿಳಿಸಿದೆ. ಲತಾ ಅವರ ಮೇಲಿರೋದು ಜಾಮೀನು ರಹಿತ ಪ್ರಕರಣ ಆಗಿದ್ದರಿಂದ ಖುದ್ದಾಗಿ ಹಾಜರಾಗಬೇಕೆಂದು ವಕೀಲರು ಮನವಿ ಮಾಡಿದ್ದರು.

    ಪುತ್ರಿ ಸೌಂದರ್ಯ ನಿರ್ದೇಶನದ ಕೊಚಾಡಿಯನ್ ಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಲತಾ ಅವರು ಮೇಲೆ ಐಪಿಸಿ 463 ಅಡಿ ಕೇಸ್ ದಾಖಲಾಗಿತ್ತು. ಕೊಚಾಡಿಯನ್ ಬಿಡುಗಡೆಗೆ ಸಂಬಂಧಿಸಿದಂತೆ ಎರಡು ಕಂಪೆನಿಗಳ ಜೊತೆ ಒಪ್ಪಂದವಾಗಿತ್ತು. ಮೀಡಿಯಾ ಒನ್ ಕಂಪನಿ ಪರವಾಗಿ ಲತಾ ಶ್ಯೂರಿಟಿ ನೀಡಿದ್ದರು. ಸಿನಿಮಾ ಲಾಸ್ ಆದ ಹಿನ್ನೆಲೆಯಲ್ಲಿ ನಷ್ಟ ತುಂಬಿ ಕೊಡುವಲ್ಲಿ ಲತಾ ವಿಫಲರಾಗಿದ್ದಾರೆ ಎಂದು ದೂರು ದಾಖಲಾಗಿತ್ತು.

    ಚಿತ್ರಕ್ಕೆ ನಷ್ಟವಾದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ 2015ರ ಮೇ 30ರಂದು ಎಫ್.ಐ.ಆರ್ ದಾಖಲಾಗಿತ್ತು. ಈಗ ಕೋರ್ಟ್ ಖುದ್ದು ಹಾಜರಾಗಲು ಆದೇಶ ನೀಡಿದೆ. ಕೋರ್ಟಿಗೆ ಲತಾ ಅವರು ಬರೋದು ಇದೀಗ ಅನಿವಾರ್ಯವಾಗಿದೆ.

  • ಶಿವರಾಜ್ ಕುಮಾರ್ ಭೇಟಿಯಾದ ತೆಲುಗು ನಟ ನಾನಿ

    ಶಿವರಾಜ್ ಕುಮಾರ್ ಭೇಟಿಯಾದ ತೆಲುಗು ನಟ ನಾನಿ

    ಮ್ಮ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ  (Bangalore)ಬಂದಿಳಿದಿರುವ ತೆಲುಗಿನ ಖ್ಯಾತ ನಟ ನಾನಿ, ಇಂದು ಬೆಳಗ್ಗೆ ಶಿವರಾಜ್ ಕುಮಾರ್ (Shivaraj Kumar)ಅವರನ್ನು ಭೇಟಿ ಮಾಡಿದ್ದಾರೆ. ಕೆಲ ಹೊತ್ತು ಶಿವಣ್ಣ ಜೊತೆ ಮಾತನಾಡಿದ ನಾನಿ, ತಮ್ಮ ಸಿನಿಮಾದ ಕುರಿತಾಗಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ತಮ್ಮ ಸಿನಿಮಾಗೆ ಸಹಕರಿಸಲು ಕೇಳಿಕೊಂಡಿದ್ದಾರಂತೆ.

    ನಾನಿ ಮತ್ತು ಮೃಣಾಲ್ ಠಾಕೂರ್ ನಟನೆಯ ‘ಹಾಯ್ ನಾನ್ನ’ ಸಿನಿಮಾದ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಕೆಲದಿನಗಳ ಹಿಂದೆ ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ರಶ್ಮಿಕಾ, ವಿಜಯ್ ದೇವರಕೊಂಡ ಅವರ ಖಾಸಗಿ ಫೋಟೋ ಬಳಸಿದ್ದಕ್ಕೆ ಅಭಿಮಾನಿಗಳು ಗರಂ ಆಗಿದ್ದರು. ಈ ವಿಚಾರವಾಗಿ ನಟ ನಾನಿ (Nani) ಪ್ರತಿಕ್ರಿಯಿಸಿ, ಫ್ಯಾನ್ಸ್‌ಗೆ ಕ್ಷಮೆ ಕೇಳಿದ್ದಾರೆ.

    ಆ ರೀತಿ ಆಗಿದ್ದು ದುರದೃಷ್ಟಕರ. ಏನಾಯಿತು ಎಂಬುದು ಗೊತ್ತಾಗುವುದರೊಳಗೆ ಫೋಟೋ ಕಣ್ಮರೆ ಆಯಿತು. ನಾವೆಲ್ಲರೂ ಆಪ್ತ ಸ್ನೇಹಿತರು. ಹೀಗೆಲ್ಲ ಆಗುವುದು ಸಹಜ ಎಂಬುದನ್ನು ರಶ್ಮಿಕಾ (Rashmika Mandanna) ಮತ್ತು ವಿಜಯ್ ದೇವರಕೊಂಡ (Vijay Devarakonda) ಅರ್ಥ ಮಾಡಿಕೊಳ್ಳಲಿದ್ದಾರೆ. ಒಂದು ವೇಳೆ ಯಾರಿಗಾದರೂ ನಿಜವಾಗಿಯೂ ನೋವಾಗಿದ್ದರೆ ನಾನು ಮತ್ತು ನನ್ನ ತಂಡದವರು ಕ್ಷಮೆ ಕೇಳುತ್ತೇವೆ ಎಂದು ಸಂದರ್ಶನವೊಂದರಲ್ಲಿ ನಾನಿ ಹೇಳಿದ್ದಾರೆ.

    ಸಿನಿಮಾ ಇವೆಂಟ್‌ನ ಹಿಂದೆ ಸಾಕಷ್ಟು ಜನರು ಕೆಲಸ ಮಾಡುತ್ತಾರೆ. ಈ ರೀತಿ ಆಗಬಾರದಿತ್ತು. ಹೀಗೆ ಮಾಡಿದ್ದು ಯಾರು ಅಂತ ತಿಳಿಯಲು ಪ್ರಯತ್ನಿಸಿದೆವು. ಆದರೆ ಆ ಕೆಲಸ ಮಾಡಿದವರು ಈಗಾಗಲೇ ಭಯಬಿದ್ದಿದ್ದರು. ನಾವು ಸುಮ್ಮನಾದೆವು. ಇಬ್ಬರ ಫೋಟೋ ಹಾಕಿ ಸಾಹಸ ಮಾಡಲು ಇದು ಗಾಸಿಪ್ ವೆಬ್‌ಸೈಟ್ ಅಲ್ಲ ಎಂದಿದ್ದಾರೆ ನಾನಿ ಮಾತನಾಡಿದ್ದಾರೆ.

    ನಾನಿ (Nani) ಚಿತ್ರದ ಪ್ರಮೋಷನ್‌ಗಾಗಿ ಪ್ರಿ ರಿಲೀಸ್ ಕಾರ್ಯಕ್ರಮವೊಂದರಲ್ಲಿ ರಶ್ಮಿಕಾ- ವಿಜಯ್ ದೇವರಕೊಂಡ ಮಾಲ್ಡೀವ್ಸ್ ಫೋಟೋವನ್ನ ತಮ್ಮ ಚಿತ್ರ ಪ್ರಚಾರಕ್ಕೆ ಬಳಸಿಕೊಂಡಿದ್ದರು. ವಿಜಯ್-ರಶ್ಮಿಕಾ ಮಾಲ್ಡೀವ್ಸ್‌ಗೆ ಜೊತೆಯಾಗಿ ಹೋಗಿರಲಿಲ್ಲ, ಆದರೆ ಫೋಟೋವನ್ನು ಬೇರೇ ಬೇರೇ ಸಮಯದಲ್ಲಿ ಇಬ್ಬರೂ ಹಂಚಿಕೊಂಡಿದ್ದರು. ಆದರೆ ಇಬ್ಬರೂ ಒಟ್ಟಿಗೆ ಮಾಲ್ಡೀವ್ಸ್‌ಗೆ ಹೋಗಿದ್ದಾರೆ ಎಂದೇ ಅಭಿಮಾನಿಗಳು ಊಹಿಸಿದ್ದರು.

     

    ಈಗ ಅದೇ ಫೋಟೋವನ್ನು ಬಳಸಿಕೊಂಡು ನಾನಿ ಟೀಮ್ ಗಿಮಿಕ್ ಮಾಡಿತ್ತು. ಚಿತ್ರದ ಪ್ರಿ-ರಿಲೀಸ್ ಕಾರ್ಯಕ್ರಮದಲ್ಲಿ ಇಬ್ಬರ ಫೋಟೋ ಅಕ್ಕ-ಪಕ್ಕ ಇಟ್ಟು ಬಿತ್ತರ ಮಾಡಲಾಗಿತ್ತು. ಸಿನಿಮಾಗಾಗಿ ಬೇರೇ ಅವರ ವೈಯಕ್ತಿಕ ವಿಚಾರವನ್ನ ಬಳಕೆ ಮಾಡೋದು ಅದೆಷ್ಟರ ಮಟ್ಟಿಗೆ ಸರಿ ಎಂದು ಫ್ಯಾನ್ಸ್ ಪ್ರಶ್ನೆ ಮಾಡಿದ್ದರು. ನಾನಿ ಟೀಮ್, ರಶ್ಮಿಕಾ ಮತ್ತು ವಿಜಯ್‌ಗೆ ಕ್ಷಮೆ ಕೇಳಲೇಬೇಕು ಎಂದು ಫ್ಯಾನ್ಸ್ ಪಟ್ಟು ಹಿಡಿದಿದ್ದರು. ಹಾಗಾಗಿ ಇದೀಗ ನಟ ನಾನಿ ಈ ಕುರಿತು ಕ್ಷಮೆ ಕೇಳಿದ್ದಾರೆ.

  • ಪೂಜಾ ಗಾಂಧಿ ಕೈ ಹಿಡಿಯಲಿರೋ ಹುಡುಗ ವಿಜಯ್

    ಪೂಜಾ ಗಾಂಧಿ ಕೈ ಹಿಡಿಯಲಿರೋ ಹುಡುಗ ವಿಜಯ್

    ಹಿಂದೆ ನಿಶ್ಚಾತಾರ್ಥ ಮುರಿದು ಬಿದ್ದ ಕಾರಣದಿಂದಾಗಿ ಮದುವೆಯನ್ನೇ (Wedding) ಮರೆತಿದ್ದ ಪೂಜಾ ಗಾಂಧಿ (Pooja Gandhi), ಇದೀಗ ಎಲ್ಲ ಕಹಿ ಘಟನೆಗಳನ್ನು ಮರೆತು ಮತ್ತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ರಂಗದಿಂದಲೂ ದೂರವಿರುವ ಪೂಜಾ, ಕನ್ನಡ ಕಲಿಕೆಯ ಕಾರಣದಿಂದಾಗಿ ಸಖತ್ ಸುದ್ದಿಯಾಗಿದ್ದರು. ಇದೀಗ ಮದುವೆ ವಿಚಾರದಲ್ಲಿ ಮತ್ತೆ ಸುದ್ದಿಗೆ ಬಂದಿದ್ದಾರೆ.

    ಮಳೆ ಹುಡುಗಿ ಎಂದೇ ಖ್ಯಾತಿಯ ಆಗಿರುವ ಪೂಜಾ ಗಾಂಧಿ ನಾಳೆ ಮದುವೆ ಆಗುತ್ತಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅವರ ಆಪ್ತರು ಹೇಳುವಂತೆ ನಾಳೆ ಉದ್ಯಮಿ ಜೊತೆ ಅವರು ಮಂತ್ರ ಮಾಂಗಲ್ಯ (Mantra Mangalya)ಮಾದರಿಯಲ್ಲಿ ಮದುವೆ ಆಗುತ್ತಿದ್ದಾರೆ ಎನ್ನಲಾಗಿತ್ತು. ಅದೀಗ ಎಲ್ಲವೂ ನಿಜವಾಗಿದೆ. ಸ್ವತಃ ಪೂಜಾ ಗಾಂಧಿಯವರೆ ಮಾಧ್ಯಮಗಳಿಗೆ ತಮ್ಮ ಮದುವೆ ಕುರಿತಾಗಿ ಪತ್ರ ಬರೆದಿದ್ದಾರೆ.

    ಬೆಂಗಳೂರಿನ ಯಲಹಂಕದಲ್ಲಿ ಈ ಮದುವೆ ನಡೆಯುತ್ತಿದ್ದು, ಉದ್ಯಮಿ ಹಾಗೂ ಅವರಿಗೆ ಕನ್ನಡ ಕಲಿಸಿರುವ ವಿಜಯ್ ಘೋರ್ಪಡೆ (Vijay Ghorpade) ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಡುತ್ತಿದ್ದಾರೆ. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರು ಎಂದು ಹೇಳಲಾಗುತ್ತಿದೆ.

     

    ಈಗಾಗಲೇ ಪೂಜಾ ತಮ್ಮ ಆಪ್ತರಿಗೆ ಕರೆ ಮಾಡಿ, ಮದುವೆ ಆ‍ಹ್ವಾನ ನೀಡಿದ್ದಾರೆ. ಮದುವೆ ಅತ್ಯಂತ ಸರಳವಾಗಿ ನಡೆಯುವುದರಿಂದ ಕೇವಲ ಹಸ್ತಾಕ್ಷರದಲ್ಲಿ ಆಮಂತ್ರಣ ಪತ್ರಿಕೆಯನ್ನು ರೆಡಿ ಮಾಡಿ, ಆಪ್ತರಿಗೆ ಕಳುಹಿಸಿದ್ದಾರೆ. ಮುಂಗಾರು ಮಳೆ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದಾಗಿ ಈ ಹುಡುಗಿ ಇದೀಗ ಕನ್ನಡದವರೇ ಆಗಿದ್ದಾರೆ.

  • ಡೀಪ್‌ಫೇಕ್ ಎಫೆಕ್ಟ್ : ಸಹಾಯವಾಣಿ ತೆರೆದ ಬೆಂಗಳೂರು ಪೊಲೀಸರು

    ಡೀಪ್‌ಫೇಕ್ ಎಫೆಕ್ಟ್ : ಸಹಾಯವಾಣಿ ತೆರೆದ ಬೆಂಗಳೂರು ಪೊಲೀಸರು

    ಟಿಯರಾದ ರಶ್ಮಿಕಾ ಮಂದಣ್ಣ (Rashmika Mandanna), ಕತ್ರಿನಾ ಕೈಫ್‍, ಕಾಜೋಲ್ ಸೇರಿದಂತೆ ಅನೇಕ ಕಲಾವಿದರ ಮತ್ತು ಸಾಮಾನ್ಯ ಮಹಿಳೆಯರ ಡೀಪ್‌ಫೇಕ್ (DeepFake)  ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತಿವೆ. ಡೀಪ್‌ಫೇಕ್ ಕಾಟಕ್ಕೆ ಬೇಸತ್ತ ಪ್ರತಿಯೊಬ್ಬರೂ ದುರುಳರಿಗೆ ಅತೀ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದನ್ನು ಕೂಡಲೇ ತಡೆಗಟ್ಟಬೇಕು ಎನ್ನುವ ಆಗ್ರಹ ಕೂಡ ಮಾಡಿದ್ದರು.

    ಇದೀಗ ಬೆಂಗಳೂರು (Bangalore) ಪೊಲೀಸರು (Police) ಡೀಪ್‌ಫೇಕ್ ವಿರುದ್ಧ ತೊಡೆತಟ್ಟಿದ್ದಾರೆ. ಇಂತಹ ವಿಡಿಯೋಗಳಿಂದ ನೀವು ಸಂಕಷ್ಟಕ್ಕೆ ಸಿಲುಕಿದ್ದರೆ, ಸಹಾಯವಾಣಿಗೆ (Help Line) ಕರೆ ಮಾಡುವಂತೆ ಮನವಿ ಮಾಡಿದ್ದಾರೆ. ಕರೆ ಮಾಡಬೇಕಾದ ಹೆಲ್ಪ್ ಲೈನ್ ನಂಬರ್ ಕೂಡ ನೀಡಿದ್ದಾರೆ. ಯಾರಾದರೂ ಅಂತಹ ವಿಡಿಯೋಗಳಿಂದ ನೊಂದಿದ್ದೀರಾ? 1930 ಸಂಖ್ಯೆಗೆ ಕರೆ ಮಾಡಬಹುದು.

    ಏನಿದು ಡೀಪ್‌ಫೇಕ್‌ ತಂತ್ರಜ್ಞಾನ?

    ಒಬ್ಬರ ದೇಹಕ್ಕೆ ಇನ್ನೊಬ್ಬರ ತಲೆಯನ್ನು ಜೋಡಿಸಿ ಎಡಿಟಿಂಗ್‌ ಮಾಡುತ್ತಿದ್ದ ಫೋಟೋ, ವೀಡಿಯೋಗಳು ಸಾಮಾನ್ಯವಾಗಿದ್ದವು. ಇವು ಎಡಿಟಿಂಗ್‌ ಆಗಿರುವ ಫೋಟೋ/ವೀಡಿಯೋ ಎಂಬುದು ನೋಡಿದಾಕ್ಷಣ ತಿಳಿಯುತ್ತಿತ್ತು. ಇಲ್ಲವೇ ಸ್ವಲ್ಪವಾದರೂ ಅನುಮಾನ ಮೂಡುತ್ತದೆ. ಆದರೆ ಡೀಪ್‌ಫೇಕ್‌ ತಂತ್ರಜ್ಞಾನದಲ್ಲಿ ಆ ಯಾವುದೇ ಅನುಮಾನ ಬರುವುದಿಲ್ಲ. ಆ ರೀತಿ ಫೋಟೋ/ವೀಡಿಯೋ ಎಡಿಟ್‌ ಮಾಡಲಾಗುತ್ತದೆ. ವ್ಯಕ್ತಿಯ ದೇಹ ಮತ್ತು ಮುಖಕ್ಕೆ ಕೊಂಚವೂ ವ್ಯತ್ಯಾಸ ಇಲ್ಲದಂತೆ ವೀಡಿಯೋಗಳನ್ನ ಸೃಷ್ಟಿಸಲಾಗುತ್ತದೆ. ವೀಡಿಯೋ ನೋಡಿದರೆ ‘ಇದು ಬೇರೆ ಯಾರೂ ಅಲ್ಲ.. ಅವರೇ’ ಎನ್ನುವಷ್ಟು ನಿಖರತೆಯಿಂದ ಕೂಡಿರುತ್ತದೆ.

     

    ಎಐ (ಕೃತಕ ಬುದ್ದಿಮತ್ತೆ) ಮಷಿನ್‌ ಲರ್ನಿಂಗ್‌ ಸಹಾಯದಿಂದ ಮಾರ್ಫಿಂಗ್‌ ವೀಡಿಯೋ, ಫೋಟೋ ಸೃಷ್ಟಿಸುವುದಕ್ಕೆ ಡೀಪ್‌ಫೇಕ್‌ ಎಂದು ಕರೆಯಲಾಗುತ್ತದೆ. ಒಬ್ಬ ವ್ಯಕ್ತಿಯಂತೆಯೇ ಸೇಮ್‌ ಟು ಸೇಮ್‌ ಡೂಪ್‌ ಸೃಷ್ಟಿಸಬಹುದು. ವೀಡಿಯೋ/ಫೋಟೋ ನೋಡಿದಾಗ ಇದು ಅಸಲಿಯೇ ಅಥವಾ ನಕಲಿಯೇ ಎಂಬುದು ತಿಳಿಯುವುದೇ ಇಲ್ಲ. ಈ ತಂತ್ರಜ್ಞಾನ ಬಳಸಿ ಯಾರನ್ನು ಬೇಕಾದರೂ ಸ್ಕ್ರೀನ್‌ ಮೇಲೆ ತೋರಿಸಬಹುದು. ಹಿಂದಿ, ಇಂಗ್ಲಿಷ್‌ ಅಷ್ಟೇ ಬರುವ ವ್ಯಕ್ತಿ ಕನ್ನಡದಲ್ಲಿ ಮಾತನಾಡಿದಂತೆಯೂ, ಹಾಡಿದಂತೆಯೂ ತೋರಿಸಬಹುದು. ಕೆಲವೊಮ್ಮೆ ಈ ತಂತ್ರಜ್ಞಾನ ಲಾಭದಾಯಕ ಎನಿಸುತ್ತದೆ. ಆದರೆ ಅಷ್ಟೇ ದುರ್ಬಳಕೆ ಕೂಡ ಆಗುತ್ತಿದೆ. ಅದಕ್ಕೆ ಉತ್ತಮ ಉದಾಹರಣೆ ರಶ್ಮಿಕಾ ಮಂದಣ್ಣ ಪ್ರಕರಣ.

    ಈ ತಂತ್ರಜ್ಞಾನ ಉಚಿತ, ವ್ಯಾಪಕವಾಗಿ ಲಭ್ಯವಿದೆ. ಯಾವುದೇ ತಾಂತ್ರಿಕ ಪರಿಣತಿಯ ಅಗತ್ಯವಿಲ್ಲ. ಈ ಅಪ್ಲಿಕೇಶನ್‌ಗಳು ಬಳಕೆದಾರರಿಗೆ, ಚಿತ್ರಗಳನ್ನು ಡಿಜಿಟಲ್‌ ಸಹಾಯದಿಂದ ತೆಗೆದುಹಾಕಲು ಅಥವಾ ಅಶ್ಲೀಲ ವೀಡಿಯೊಗಳಲ್ಲಿ ಅವರ ಮುಖಗಳನ್ನು ಸೇರಿಸಲು ಅನುಮತಿಸುತ್ತದೆ. ಗಾಯಕ ಟೇಲರ್ ಸ್ವಿಫ್ಟ್ ಮತ್ತು ನಟಿ ಎಮ್ಮಾ ವ್ಯಾಟ್ಸನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಡೀಪ್‌ಫೇಕ್ ತಂತ್ರಜ್ಞಾನದ ಸಂತ್ರಸ್ತರಾಗಿದ್ದಾರೆ. ಡಚ್ ಎಐ ಕಂಪನಿ ಸೆನ್ಸಿಟಿಯ ಅಧ್ಯಯನದ ಪ್ರಕಾರ, ಆನ್‌ಲೈನ್‌ನಲ್ಲಿ ಸುಮಾರು 96% ಡೀಪ್‌ಫೇಕ್ ವೀಡಿಯೋಗಳು ಅಶ್ಲೀಲತೆಯಿಂದ ಕೂಡಿವೆ. ಅವುಗಳಲ್ಲಿ ಹೆಚ್ಚಿನವು ಮಹಿಳೆಯರನ್ನೇ ಚಿತ್ರಿಸಿವೆ ಎಂದಿದೆ.

    ಡೀಪ್‌ಫೇಕ್‌ ಅಪರಾಧಕ್ಕೆ ಶಿಕ್ಷೆ ಏನು?
    ಡೀಪ್‌ಫೇಕ್ ಸೈಬರ್‌ ಅಪರಾಧಕ್ಕೆ ಸಂಬಂಧಿಸಿದಂತೆ ಭಾರತ ಕಾನೂನಿನಲ್ಲಿ ಸ್ಪಷ್ಟವಾದ ವ್ಯಾಖ್ಯಾನ ಇಲ್ಲ. ಆದರೆ ಈ ಅಪರಾಧದ ವಿರುದ್ಧ ಇತರ ಹಲವಾರು ಕಾನೂನು ಕ್ರಮಗಳನ್ನು ಬಳಸಿಕೊಳ್ಳಬಹುದು.

    * ಐಟಿ ಕಾಯಿದೆ: ಮಾಹಿತಿ ತಂತ್ರಜ್ಞಾನ ಕಾಯಿದೆ 2000 ಸೆಕ್ಷನ್‌ 66ರ ಪ್ರಕಾರ, ಐಡೆಂಟಿಫಿಕೇಷನ್‌ ಥೆಫ್ಟ್‌ (ಗುರುತು ಕಳವು) ಮಾಡಿ ಅದನ್ನು ಅನ್ಯ ಉದ್ದೇಶಗಳಿಗೆ ಬಳಸಿದರೆ ಅದಕ್ಕೆ 3 ವರ್ಷ ಜೈಲು ಶಿಕ್ಷೆ. ಜೊತೆಗೆ 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

    * ಐಟಿ ಕಾಯಿದೆ ಸೆಕ್ಷನ್‌ 66ಇ ಪ್ರಕಾರ, ಖಾಸಗಿ ಹಕ್ಕು ಉಲ್ಲಂಘನೆಗಾಗಿ 3 ವರ್ಷ ಜೈಲು ಮತ್ತು 2 ಲಕ್ಷದ ವರೆಗೆ ದಂಡ ವಿಧಿಸಲಾಗುವುದು.

    * ಹಕ್ಕುಸ್ವಾಮ್ಯ ಕಾಯಿದೆ, 1957: ಕಾಯಿದೆಯ ಸೆಕ್ಷನ್ 51 ವಿಶೇಷ ಹಕ್ಕನ್ನು ಹೊಂದಿರುವ ಇನ್ನೊಬ್ಬ ವ್ಯಕ್ತಿಗೆ ಸೇರಿದ ಯಾವುದೇ ಆಸ್ತಿಯನ್ನು ಬಳಸಿದಾಗ ಹಕ್ಕುಸ್ವಾಮ್ಯ ಕಾಯಿದೆಯ ಉಲ್ಲಂಘನೆಯಾಗಿದೆ.

    * ಭಾರತೀಯ ದಂಡ ಸಂಹಿತೆ ಸೆಕ್ಷನ್‌ 153ಎ (ಧರ್ಮ, ಜಾತಿ ಮತ್ತಿತರ ಹೆಸರಿನಲ್ಲಿ ನಿಂದನೆ) ಮತ್ತು 295ಎ (ಉದ್ದೇಶಪೂರ್ವಕವಾಗಿ ಅಪಮಾನಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಬಹುದು.

    * ಕಾಪಿ ರೈಟ್‌ ಕಾಯಿದೆ 1957ರ ಸೆಕ್ಷನ್‌ 16ರ ಪ್ರಕಾರ ವೀಡಿಯೋ ದುರ್ಬಳಕೆ ಮಾಡಿಕೊಂಡರೆ 3 ವರ್ಷ ಜೈಲು, 2 ಲಕ್ಷ ರೂ. ದಂಡ ವಿಧಿಸಬಹುದು.

  • ಪತಿಯ ಆಟ ನೋಡಲು ಬೆಂಗಳೂರಿಗೆ ಬಂದಿಳಿದ ಅನುಷ್ಕಾ

    ಪತಿಯ ಆಟ ನೋಡಲು ಬೆಂಗಳೂರಿಗೆ ಬಂದಿಳಿದ ಅನುಷ್ಕಾ

    ದೇ ನವೆಂಬರ್ 12 ರಂದು ಬೆಂಗಳೂರಿನ (Bangalore) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಕ್ರಿಕೆಟ್ (Cricket) ಪಂದ್ಯಾವಳಿಯನ್ನು ವೀಕ್ಷಿಸುವುದಕ್ಕಾಗಿ ಬಾಲಿವುಡ್ ನಟಿ, ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಪತ್ನಿ ಅನುಷ್ಕಾ ಶರ್ಮಾ ಬೆಂಗಳೂರಿಗೆ ಆಗಮಿಸಿದ್ದಾರೆ. ಸದ್ಯ ಅವರು ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ.

    ನೆದರ್ ಲ್ಯಾಂಡ್ಸ್ ವಿರುದ್ಧ ಭಾರತವು ಅಂದು ಆಡಲಿದ್ದು, ಜೊತೆಗೆ ವಿರಾಟ್ ಕೊಹ್ಲಿ 50ನೇ ಶತಕವನ್ನು ಬಾರಿಸಬಹುದು ಎನ್ನುವ ನಿರೀಕ್ಷೆ ಕೂಡ ಇದೆ. ಹೀಗಾಗಿ ಕಡ್ಡಾಯವಾಗಿ ಅನುಷ್ಕಾ (Anushka Sharma) ಈ ಪಂದ್ಯವನ್ನು ವೀಕ್ಷಿಸುವುದಕ್ಕಾಗಿ ಬಂದಿದ್ದಾರೆ. ಮೊನ್ನೆಯಷ್ಟೇ ವಿರಾಟ್ ಕೊಹ್ಲಿ 49ನೇ ಸೆಂಚ್ಯುರಿ ಬಾರಿಸಿ, ಸಚಿನ್ ದಾಖಲೆಯನ್ನು ಮುರಿದಿದ್ದಾರೆ.

     

    ಈಗಾಗಲೇ ಭಾರತವು ಎಂಟು ಪಂದ್ಯಗಳನ್ನು ಆಡಿದ್ದು, ಇದು ಕೊನೆಯ ಪಂದ್ಯವಾಗಿದೆ. ಈಗಾಗಲೇ ಭಾರತವು ಒಟ್ಟು ಎಂಟು ಪಂದ್ಯಗಳನ್ನು ಗೆದ್ದಿದೆ. ಒಂಬತ್ತನೆ ಪಂದ್ಯವನ್ನೂ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ಕ್ರಿಕೆಟ್ ಪ್ರೇಮಿಗಳದ್ದು. ಈಗಾಗಲೇ ಅಂದಿನ ಎಲ್ಲ ಟಿಕೆಟ್ ಸೋಲ್ಡ್ ಔಟ್ ಆಗಿವೆ.

  • ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಅಕ್ಷಮ್ಯ: ಜೆಡಿಎಸ್ ಆಕ್ರೋಶ

    ಕೆಪಿಎಸ್‌ಸಿ ಪರೀಕ್ಷೆಯಲ್ಲಿ ತಾಳಿ, ಕಾಲುಂಗುರ ತೆಗೆಸಿದ್ದು ಅಕ್ಷಮ್ಯ: ಜೆಡಿಎಸ್ ಆಕ್ರೋಶ

    ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ (KPSC Exam) ವೇಳೆ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿರುವ ಪರೀಕ್ಷೆ ವ್ಯವಸ್ಥೆ ಮತ್ತು ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡಿರುವ ಜೆಡಿಎಸ್ (JDS) ಇಂತಹ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದೆ.

    ಪೋಸ್ಟ್‌ನಲ್ಲೇನಿದೆ?
    ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ (Mangalasutra), ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ?

    ಕಲಬುರಗಿಯಲ್ಲಿ (Kalaburagi) ಭಾನುವಾರ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಒಂದೆಡೆ ಗೃಹಲಕ್ಷ್ಮಿ ಎನ್ನುವ ರಾಜ್ಯ ಸರ್ಕಾರ, ಇನ್ನೊಂದೆಡೆ ಅದೇ ಗೃಹಲಕ್ಷ್ಮಿಯರ ಸೌಭಾಗ್ಯ ಮತ್ತು ಸಾಂಸ್ಕೃತಿಕ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ? ಇದನ್ನೂ ಓದಿ: ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ

    ಇಷ್ಟಕ್ಕೂ ಪರೀಕ್ಷಾ ಸಿಬ್ಬಂದಿಗೆ ಮಹಿಳಾ ಅಭ್ಯರ್ಥಿಗಳ ತಾಳಿ, ಕಾಲುಂಗುರ ತೆಗೆಸುವಂತೆ ಆದೇಶ ಕೊಟ್ಟವರು ಯಾರು? ಅವರಿಗೆ ಅಷ್ಟೊಂದು ಸೂಕ್ಷ್ಮಪ್ರಜ್ಞೆಯ ಕೊರತೆಯೇ? ಪರೀಕ್ಷೆಗೆ ಮೊದಲೇ ಆ ಮಹಿಳೆಯರಿಗೆ ಅದೆಷ್ಟು ಮಾನಸಿಕ ಆಘಾತ ಉಂಟಾಗುತ್ತದೆ ಎಂಬ ಅರಿವು ಬೇಡವೇ? ಪರೀಕ್ಷಾ ನಿಯಮಗಳ ಪಟ್ಟಿಯಲ್ಲಿ ಕಾಲುಂಗುರ, ಮಂಗಳಸೂತ್ರ ತೆಗೆಯಬೇಕು ಎನ್ನುವ ಸೂಚನೆಯೇ ಇರಲಿಲ್ಲ ಎನ್ನುತ್ತಾರೆ ಪರೀಕ್ಷಾರ್ಥಿಗಳು. ಹಾಗಾದರೆ ಪರೀಕ್ಷಾ ಕೇಂದ್ರಕ್ಕೆ ಬಂದ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರವನ್ನು ಬಲವಂತವಾಗಿ ತೆಗೆಸಿದ್ದು ದುರ್ನಡತೆಯ ಪರಮಾವಧಿ.

    ಕೆಪಿಎಸ್‌ಸಿ ಹಾಗೂ ರಾಜ್ಯ ಸರ್ಕಾರ ಕೂಡಲೇ ನೊಂದ ಮಹಿಳೆಯರಿಗೆ ಕ್ಷಮೆ ಯಾಚಿಸಬೇಕು ಹಾಗೂ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಜೆಡಿಎಸ್ ಸರ್ಕಾರವನ್ನು ಆಗ್ರಹಿಸಿದೆ. ಇದನ್ನೂ ಓದಿ: ಬಾಗಿಲಿಲ್ಲದ ದೇವಾಲಯಕ್ಕೆ ನುಗ್ಗಿ ಕಾಣಿಕೆ ಡಬ್ಬಿ, 100 ಘಂಟೆಗಳನ್ನು ದೋಚಿದ ಕಳ್ಳರು

  • ನಾಪತ್ತೆಯಾಗಿರೋ 3 ಬೀದಿ ನಾಯಿಗಳಿಗಾಗಿ ತೀವ್ರ ಹುಡುಕಾಟ – ಹುಡುಕಿ ಕೊಟ್ಟವರಿಗೆ 35 ಸಾವಿರ ಬಹುಮಾನ!

    ನಾಪತ್ತೆಯಾಗಿರೋ 3 ಬೀದಿ ನಾಯಿಗಳಿಗಾಗಿ ತೀವ್ರ ಹುಡುಕಾಟ – ಹುಡುಕಿ ಕೊಟ್ಟವರಿಗೆ 35 ಸಾವಿರ ಬಹುಮಾನ!

    ಬೆಂಗಳೂರು: ನಗರದ ಕುಮಾರಪಾರ್ಕ್ (Kumarapark) ಬಳಿ ನಾಪತ್ತೆಯಾಗಿರುವ 3 ಬೀದಿ ನಾಯಿಗಳಿಗಾಗಿ (Stray Dog) ಭಾರೀ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದ ನಾಯಿಗಳ ಪತ್ತೆಗೆ 4 ತಂಡಗಳಿಂದ ತೀವ್ರ ಶೋಧ ನಡೆಸಲಾಗುತ್ತಿದೆ. ನಾಪತ್ತೆಯಾದ ನಾಯಿಗಳನ್ನು ಹುಡುಕಿ ಕೊಟ್ಟವರಿಗೆ ಬರೋಬ್ಬರಿ 35 ಸಾವಿರ ರೂ. ಬಹುಮಾನ ಘೋಷಿಸಲಾಗಿದೆ.

    ಹೌದು, ಕುಮಾರಪಾರ್ಕ್ ಬಳಿ ಕಳೆದ 10 ವರ್ಷದಿಂದ ಇದ್ದ ಈ 3 ಬೀದಿ ನಾಯಿಗಳನ್ನು ವಕೀಲೆ ವಿಪ್ಲವಿ ಮಹೇಂದ್ರ ಅವರು ಪೋಷಣೆ ಮಾಡುತ್ತಿದ್ದರು. ಸದ್ಯ ವಿಪ್ಲವಿ ಮಹೇಂದ್ರ ಇಂಗ್ಲೆಂಡ್‌ನಲ್ಲಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ಅವರ ಕಚೇರಿ ಸಿಬ್ಬಂದಿಯಿಂದ ನಾಯಿಗಳ ಪೋಷಣೆ ಮಾಡಲಾಗುತ್ತಿತ್ತು. ವಿಶೇಷವೆಂದರೆ ಈ 3 ನಾಯಿಗಳಿಂದ ಈ ಪ್ರದೇಶದಲ್ಲಿ ಅಪರಾಧ ಕೃತ್ಯಗಳಿಗೆ ಬ್ರೇಕ್ ಬಿದ್ದಿತ್ತು. ಆದರೆ ಅಕ್ಟೋಬರ್ 4 ರಿಂದ 20 ರ ನಡುವೆ ಲೋಬಿ, ದಂತ, ರಿಬಾ ಹೆಸರಿನ ಈ 3 ನಾಯಿಗಳು ಕಣ್ಮರೆಯಾಗಿವೆ. ಇದನ್ನೂ ಓದಿ: ನಿಧಿ ನಿಕ್ಷೇಪ ತೋರಿಸುವುದಾಗಿ 16 ಲಕ್ಷ ರೂ. ನಾಮ – ವಂಚಿತರಿಂದ ಜ್ಯೋತಿಷಿಯ ಕಿಡ್ನಾಪ್

    ವಕೀಲೆ ವಿಪ್ಲವಿ ಮಹೇಂದ್ರ

    ಕಾಣೆಯಾದ ಬೀದಿ ನಾಯಿಗಳಿಗಾಗಿ ಭಾರೀ ಶೋಧ:
    ಇದೀಗ ಕಣ್ಮರೆಯಾಗಿರುವ 3 ಬೀದಿ ನಾಯಿಗಳಿಗಾಗಿ ಭಾರೀ ಹುಡುಕಾಟ ನಡೆಸಲಾಗುತ್ತಿದೆ. ಈ ಬಗ್ಗೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕಚೇರಿ ಸಿಬ್ಬಂದಿ ಪ್ರಕರಣ ದಾಖಲಿಸಿದ್ದಾರೆ. ಕಾಣೆಯಾದ ನಾಯಿಗಳ ಪತ್ತೆಗೆ 4 ತಂಡಗಳಿಂದ ಶೋಧ ನಡೆಸಲಾಗುತ್ತಿದೆ. ಬೀದಿ ನಾಯಿಗಳ ಪೋಷಣೆ ಮಾಡುತ್ತಿದ್ದ ವಿಪ್ಲವಿ ಮಹೇಂದ್ರ ಅವರಿಂದಲೂ ಪ್ರತ್ಯೇಕ ತಂಡ ರಚಿಸಿ ಹುಡುಕಾಟ ನಡೆಸಲಾಗುತ್ತಿದೆ. ಒಂದೊಂದು ತಂಡದಲ್ಲಿ ಇಬ್ಬರು ವ್ಯಕ್ತಿಗಳಿಂದ ಶೋಧ ಕಾರ್ಯ ನಡೆಯುತ್ತಿದೆ.

    ಪ್ರತಿ ದಿನ 11 ಗಂಟೆಗಳ ಕಾಲ ನಾಯಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಟೀಂಗಳು ಮೆಜೆಸ್ಟಿಕ್ ಸುತ್ತಮುತ್ತ 2 ದಿನ, ಗೂಡ್ಸ್ ಶೆಡ್ ರಸ್ತೆಯಲ್ಲಿ 3 ದಿನ ಹುಡುಕಾಡಿದೆ. ಕಾಣೆಯಾದ ನಾಯಿಗಳು ಎಲೆಕ್ಟ್ರಾನಿಕ್ ಸಿಟಿಯಲ್ಲಿವೆ ಎಂದು ಸ್ಥಳೀಯರು ಫೋಟೋ ಕಳುಹಿಸಿದ್ದರು. ಈ ಹಿನ್ನೆಲೆ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ನಾಯಿಗಳಿಗಾಗಿ ಭಾರೀ ಹುಡುಕಾಟ ನಡೆಸಲಾಗುತ್ತಿದೆ. ವಿದೇಶದಲ್ಲಿರುವ ವಿಪ್ಲವಿ ಮಹೇಂದ್ರ ಕೂಡಾ ಈ ಟೀಂಗಳೊಂದಿಗೆ ಸಂಪರ್ಕದಲ್ಲಿದ್ದಾರೆ. ಇದನ್ನೂ ಓದಿ: ಕೆಪಿಎಸ್‍ಸಿ ಪರೀಕ್ಷೆಗೆ ತಾಳಿ, ಕಾಲುಂಗುರ ತೆಗೆಸಿ ಸಿಬ್ಬಂದಿ ಯಡವಟ್ಟು – ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು

  • Breaking: ದರ್ಶನ್ ಹೊಸ ಚಿತ್ರಕ್ಕೆ ಇಂದು ಸದ್ದಿಲ್ಲದೇ ಮುಹೂರ್ತ

    Breaking: ದರ್ಶನ್ ಹೊಸ ಚಿತ್ರಕ್ಕೆ ಇಂದು ಸದ್ದಿಲ್ಲದೇ ಮುಹೂರ್ತ

    ಹೆಸರಾಂತ ನಿರ್ದೇಶಕ ಮಿಲನ ಪ್ರಕಾಶ್, ಚಾಲೇಂಜಿಂಗ್ ಸ್ಟಾರ್ ದರ್ಶನ್ (Darshan) ಗಾಗಿ ಒಂದು ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಲವು ತಿಂಗಳಿಂದ ಹರಿದಾಡುತ್ತಿತ್ತು. ಅದೀಗ ನಿಜವಾಗಿದೆ. ಇಂದು ಬೆಂಗಳೂರಿನ ದೊಡ್ಡ ಮಹಾ ಗಣಪತಿ ದೇವಸ್ಥಾನದಲ್ಲಿ ದರ್ಶನ್ ಅವರ ಹೊಸ ಸಿನಿಮಾದ (New Cinema) ಮಹೂರ್ತ ಸದ್ದಿಲ್ಲದೇ ನಡೆದಿದೆ. ಈ ಸಿನಿಮಾಗೆ ತಾತ್ಕಾಲಿಕವಾಗಿ ‘ಡಿ-57 ‘ ಎಂದು ಹೆಸರಿಟ್ಟು ಮಹೂರ್ತ ಮಾಡಲಾಗಿದೆ.

    ಮಿಲನ ಪ್ರಕಾಶ್ (Milan Prakash) ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಅಜನೀಶ್ ಲೋಕನಾಥ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕೆ ಇರಲಿದೆ, ವೈಷ್ಣೋ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗಲಿದೆ. ಈ ನಡುವೆ ಮತ್ತೊಂದು ಸುದ್ದಿ ಗಾಂಧಿ ನಗರದಲ್ಲಿ ಜೋರಾಗಿಯೇ ಕೇಳಿ ಬರುತ್ತಿದೆ. ದರ್ಶನ್ ಮತ್ತು ಸುದೀಪ್ ಕಾಂಬಿನೇಷನ್ ನ  ದಿಗ್ಗಜರು 2 ಸಿನಿಮಾ ಬಗ್ಗೆ ಚರ್ಚೆ ನಡೆಯುತ್ತಿದೆ. ಮತ್ತೆ ಇಬ್ಬರು ಜೊತೆಯಾಗಿ ನಟಿಸುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

    ಸುದೀಪ್ – ದರ್ಶನ್ ಇಬ್ಬರಿಗೂ ಆಪ್ತರಾಗಿರೋ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ (Rockline Venkatesh) ಸಾರಥ್ಯದಲ್ಲಿ ದಿಗ್ಗಜರು 2 ಸಿನಿಮಾ ಬರುತ್ತಾ? ಇಬ್ಬರನ್ನೂ ಜೊತೆಯಾಗಿಸಿ ಸಿನಿಮಾ ಮಾಡ್ತಾರಾ? ಎಂಬ ಕೌತುಕ ಸ್ಯಾಂಡಲ್‌ವುಡ್ ಅಂಗಳದಲ್ಲಿ ಗುಸು ಗುಸು ಚರ್ಚೆ ಶುರುವಾಗಿದೆ.

    ಜ್ಯೂ.ಅಂಬರೀಶ್ – ಜ್ಯೂ.ವಿಷ್ಣುವರ್ಧನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ದರ್ಶನ್- ಸುದೀಪ್ (Sudeep) ಮತ್ತೆ ಒಂದೇ ವೇದಿಕೆಯಲ್ಲಿ ಜೊತೆಯಾಗಿರೋದು ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದೆ. ಈ ಹಿಂದೆ ಅಂಬರೀಶ್ 60ನೇ ವರ್ಷದ ಬರ್ತ್‌ಡೇ ಕಾರ್ಯಕ್ರಮದಲ್ಲಿ ಕುಚಿಕು ಕುಚಿಕು ಡ್ಯಾನ್ಸ್ ಮಾಡಿ ಕಿಚ್ಚ-ದಚ್ಚು ಗಮನ ಸೆಳೆದಿದ್ದರು.

     

    2012ರಲ್ಲಿ ದರ್ಶನ್ ನಟನೆಯ ‘ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ಸಂಪೂರ್ಣ ಸಹಕರಿಸಿದ್ದ ಕಿಚ್ಚ. ದರ್ಶನ್ ಈ ಚಿತ್ರಕ್ಕೆ ಹಿನ್ನೆಲೆ ಧ್ವನಿ ನೀಡಿದ್ದರು. ಮುಂದೆ ಒಂದೊಳ್ಳೆ ಘಳಿಗೆ ಬಂದರೆ ಒಟ್ಟಿಗೆ ಆಕ್ಟ್ ಮಾಡೋದಾಗಿ ಇಬ್ಬರು ಹೇಳಿದ್ರು. ಅಂಬಿ ಇದ್ದಿದ್ರೆ ಇಷ್ಟೊತ್ತಿಗಾಗ್ಲೇ ಸುದೀಪ್-‌ ದರ್ಶನ್ ಒಂದಾಗುತ್ತಿದ್ದರು. ಇದೀಗ ಇಬ್ಬರನ್ನೂ ಒಂದಾಗಿಸೋ ಪ್ರಯತ್ನಗಳು ಜಾರಿಯಲ್ಲಿವೆ ಎನ್ನಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]