Tag: Bangalore

  • ಮಾಸ್ಟರ್ ಶೆಫ್ ಇಂಡಿಯಾದ ಟಾಪ್ ಲಿಸ್ಟ್ ನಲ್ಲಿ ಬೆಂಗಳೂರಿನ ಕರಕುಶಲ ಉದ್ಯಮಿ ಹರೀಶ್

    ಮಾಸ್ಟರ್ ಶೆಫ್ ಇಂಡಿಯಾದ ಟಾಪ್ ಲಿಸ್ಟ್ ನಲ್ಲಿ ಬೆಂಗಳೂರಿನ ಕರಕುಶಲ ಉದ್ಯಮಿ ಹರೀಶ್

    ಮಾಸ್ಟರ್ ಶೆಫ್ ಇಂಡಿಯಾ 2023ರ (Master Chef India) ಸ್ಪರ್ಧೆಯಲ್ಲಿ ಬೆಂಗಳೂರಿನ ಕರಕುಶಲ ಉದ್ಯಮಿ ಭಾಗಿಯಾಗಿದ್ದಾರೆ. ಜೊತೆಗೆ ಟಾಪ್ 12 ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ. ಹರೀಶ್ (Harish ClosePet)  ನಡೆಸುತ್ತಿರುವುದು ʻಇಟ್ಸಿ ಬಿಟ್ಸಿʼ ಅನ್ನೋ ಕರಕುಶಲ ವಸ್ತುಗಳ ಮಳಿಗೆಯ ಸರಣಿಯ ಜೊತೆಗೆ ಬಿಡುವಿದ್ದಾಗ ಮಗಳಿಗೆ ಲಂಚ್‌ ಬಾಕ್ಸ್‌ಗೆ ಹಾಕಿಕೊಡಲು ಸರಳವಾದ ವೈವಿಧ್ಯಮಯ ಅಡುಗೆ ಮಾಡುವುದನ್ನು ರೂಢಿಸಿಕೊಂಡಿದ್ದರಂತೆ. ಈ ಹವ್ಯಾಸವೇ ಬೆಂಗಳೂರಿನ ಈ ಉದ್ಯಮಿಯನ್ನು ಸೋನಿ ಟಿವಿಯ ʻಮಾಸ್ಟರ್‌ ಶೆಫ್‌ ಇಂಡಿಯಾʼ ಅಡುಗೆ ಸ್ಪರ್ಧೆಯ ಟಾಪ್‌ 12ಸ್ಪರ್ಧಿಗಳಲ್ಲಿ ಒಬ್ಬರಾಗಿ ಆಯ್ಕೆ ಮಾಡಿದೆ.

    ಹರೀಶ್‌ ಕ್ಲೋಸ್‌ಪೇಟ್‌ ಅವರೇ ಇಂತಹ ಒಂದು ಅಪರೂಪದ ಸಾಧನೆ ಮಾಡಿರುವ ಕನ್ನಡಿಗ. ಅನೇಕ ಸುತ್ತುಗಳ ಕಠಿಣ ಆಡಿಷನ್‌ಗಳ ನಂತರ ಮಾಸ್ಟರ್‌ ಶೆಫ್‌ ಇಂಡಿಯಾ ಟಾಪ್‌ -12 ರಲ್ಲಿ ಆಯ್ಕೆಯಾಗಿ ಬೆಂಗಳೂರಿನ ಹೆಸರಿಗೆ ಇನ್ನೊಂದು ಗರಿ ಮೂಡಿಸಿದ್ದಾರೆ. ತಮ್ಮ ಬಿಡುವಿಲ್ಲದ ಕೆಲಸ ಕಾರ್ಯವಿದ್ದರೂ, ಬಿಡುವಿದ್ದಾಗ ಮಗಳ ಕಾಲೇಜು ಲಂಚ್‌ಬಾಕ್ಸ್‌ಗಾಗಿ ಹರೀಶ್ ಅಡುಗೆ ಮಾಡಿ ಕಳಿಸುತ್ತಿದ್ದರಂತೆ. ಹಾಗೆಯೇ ಅಡುಗೆ ಮಾಡುವಾಗಿ ಇದನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಬಿಡುವ ಐಡಿಯಾ ಬಂತು. 2022 ರಲ್ಲಿ ʻಹ್ಯಾರಿಸ್‌ ಲಂಚ್‌ಬಾಕ್ಸ್‌ʼ ಅನ್ನೋ ಸೋಷಿಯಲ್‌ ಮೀಡಿಯಾ ಖಾತೆ ಶುರುಮಾಡಿದರು. ಮಗಳ ಊಟದ ಡಬ್ಬಿಗೆ ಮಾಡಿ ಕಳಿಸುತ್ತಿದ್ದ ಅಡುಗೆಗಳನ್ನ ಚಿತ್ರೀಕರಿಸಿ ಅಪ್ ಲೋಡ್ ಮಾಡುತ್ತಿದ್ದರಂತೆ. ಹರೀಶ್‌ ಅವರು ತಯಾರಿಸುತ್ತಿದ್ದ ವಿವಿಧ ಪಾಕಗಳು, ಅವುಗಳ ವೈಶಿಷ್ಟ್ಯತೆ ಹಾಗೂ ಸರಳತೆಯಿಂದಾಗಿ ಗಮನ ಸೆಳೆದಿವೆ.

    ಉದ್ಯಮ ಸಂಬಂಧಿ ಪ್ರವಾಸಕ್ಕೆ ಹೋದಾಗ ದೇಶ ವಿದೇಶಗಳಲ್ಲಿ ಸವಿಯುವ ಅಡುಗೆ ಮಾಡುವ ವಿಧಾನ ತಿಳಿದುಕೊಂಡೇ ಬರುತ್ತಿದ್ದರಂತೆ. ಅದನ್ನು ತಮ್ಮದೇ ವಿಧಾನದಲ್ಲಿ ಪ್ರಯೋಗಿಸುತ್ತಿದ್ದರು. ಇದು ಹೊಸದೊಂದು ಪಾಕಲೋಕದ ಬಾಗಿಲು ತೆರೆಯಬಲ್ಲದು ಎಂದು ಆಗ ಅವರೂ ಊಹಿಸಿರಲಿಲ್ಲವಂತೆ. ಜೊತೆಗೆ ತಂದೆ ಮಗಳ ಬಾಂಧವ್ಯವೂ ವೀಕ್ಷಕರಿಗೆ ಇಷ್ಟವಾಗಿದೆ. ಕಡಿಮೆ ಅವಧಿಯಲ್ಲಿ ʻಹ್ಯಾರಿಸ್‌ ಲಂಚ್‌ಬಾಕ್ಸ್‌ʼ ವೈರಲ್‌ ಆಯಿತು. ಹರೀಶ್‌ ಕ್ಲೋಸ್‌ಪೇಟ್ ಸೋನಿ ಟಿವಿಯ ʻಮಾಸ್ಟರ್‌ ಶೆಫ್‌ʼ ಪ್ರಕಟಣೆ ಹೊರಬಿದ್ದಾಗ ಆಡಿಷನ್‌ ಕೊಟ್ಟು ಒಂದು ಕೈ ನೋಡೇಬಿಡೋಣ ಅಂತ ನಿರ್ಧರಿಸಿದರಂತೆ. ಅಲ್ಲಿ ವಿವಿಧೆಡೆ ಪಂಚತಾರಾ ಹೊಟೆಲ್‌ಗಳಲ್ಲಿ ಮಾಡುವಂಥ ಅಡುಗೆ ಕಲಿತವರು ಬರುತ್ತಾರೆ ಎಂಬುದು ಅವರಿಗೆ ಗೊತ್ತಿತ್ತು. ಆದರೂ ಧೈರ್ಯ ಮಾಡಿ ಮಗಳು, ಪತ್ನಿ ಹಾಗೂ ಕಂಪನಿಯ ನೌಕರರ ಬೆಂಬಲದೊಂದಿಗೆ ಮುನ್ನುಗಿದರು. ಅಚ್ಚರಿ ಎಂಬಂತೆ ಅನೇಕ ಕಠಿಣ ಸವಾಲುಗಳ ನಡುವೆ ಟಾಪ್‌ 12 ಕ್ಕೆ ಆಯ್ಕೆ ಆಗಿ ಇತಿಹಾಸ ನಿರ್ಮಿಸಿದ್ದಾರೆ.

    ʻಅಡುಗೆ ಮಾಡುವಾಗ ಯಾವುದನ್ನೂ ಅಳೆದು ಅಳೆದು ಹಾಕಬಾರದು. ಅಡುಗೆಯನ್ನು ಖುಷಿಯಿಂದ ಮಾಡಬೇಕು. ಜೊತೆಗೆ ಪ್ರೀತಿಯಿಂದ ಮಾಡುವ ಅಡುಗೆಗೆ ರುಚಿ ಜಾಸ್ತಿ. ಅದೇ ನನ್ನ ಯಶಸ್ಸಿನ ಗುಟ್ಟು ʼ ಎನ್ನುತ್ತಾರೆ ಹರೀಶ್‌ ಕ್ಲೋಸ್‌ಪೇಟ್‌. ಇತರ ಸ್ಪರ್ಧಿಗಳ ನಡುವೆ ವೀಕ್ಷಕರು  ಹೆಚ್ಚು ಹೆಚ್ಚು ಓಟ್‌ ಮಾಡಿದರೆ ಅಂತಿಮ ಸುತ್ತಿನವರೆಗೂ ಹೋಗುವ ಅವಕಾಶ ಸಿಗುತ್ತದೆ. ಕರ್ನಾಟಕದ ವೀಕ್ಷಕರು ಕಾರ್ಯಕ್ರಮ ನೋಡಿ ಓಟ್‌ ಮಾಡಿ ಬೆಂಬಲಿಸುತ್ತಾರೆ ಎಂಬ ನಂಬಿಕೆ ತನಗಿದೆ ಎನ್ನುವುದು ಹರೀಶ್ ಮಾತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗಳೂರಿನಲ್ಲಿ ನಾಳೆ ಚಿತ್ರೋದ್ಯಮ ಬಂದ್: ಥಿಯೇಟರ್ ತೆರೆಯೋದಿಲ್ಲ

    ಬೆಂಗಳೂರಿನಲ್ಲಿ ನಾಳೆ ಚಿತ್ರೋದ್ಯಮ ಬಂದ್: ಥಿಯೇಟರ್ ತೆರೆಯೋದಿಲ್ಲ

    ಕಾವೇರಿ ನದಿ ನೀರು ವಿಚಾರವಾಗಿ ಹೋರಾಟ ಮಾಡುತ್ತಿರುವ ರೈತರ ಪರ ನಿಲ್ಲಲು ಕರ್ನಾಟಕ ಚಲನಚಿತ್ರ ವಾಣಿಜ್ಯ (Film Chamber) ಮಂಡಳಿ ನಿರ್ಧರಿಸಿದೆ. ನಾಳೆ ನಡೆಯುತ್ತಿರುವ ಬೆಂಗಳೂರು (Bangalore) ಬಂದ್ ಗೆ ಬೆಂಬಲವನ್ನೂ ನೀಡಿರುವ ವಾಣಿಜ್ಯ ಮಂಡಳಿಯು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೂ ಚಿತ್ರಮಂದಿರಗಳು ತೆರೆಯುವುದಿಲ್ಲ. ಬೆಂಗಳೂರಿನಲ್ಲಿ ಯಾವುದೇ ಸಿನಿಮಾ ಚಿತ್ರೀಕರಣ ಕೂಡ ಇರುವುದಿಲ್ಲ ಎಂದಿದ್ದಾರೆ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಮ್. ಸುರೇಶ್.

    ಕಾವೇರಿ ವಿಚಾರ  (Cauvery Protest) ಗಂಭೀರವಾದ ವಿಚಾರ. ಇದಕ್ಕಾಗಿ ನಮ್ಮ ಸಂಪೂರ್ಣ ಬೆಂಬಲ ಇರುತ್ತೆ. ಚಿತ್ರರಂಗದ ಎಲ್ಲಾ ಅಂಗ ಸಂಸ್ಥೆಗಳ ಜೊತೆ ಚರ್ಚೆ ಮಾಡಬೇಕು. ಕಲಾವಿದರನ್ನು ಭೇಟಿ ಮಾಡಬೇಕು. ಸಮಯದ ಅಭಾವ ತುಂಬಾ ಇದೆ. ಹೀಗಾಗಿ ರೂಪುರೇಷೆಯನ್ನು ಸಾಯಂಕಾಲ ತಿಳಿಸುತ್ತೇವೆ. ರೈತರ ಸಮಸ್ಯೆ ಇದು. ನೀರಿನ ಸಮಸ್ಯೆಗೆ ಸ್ಪಂದಿಸೋದು ನಮ್ಮ ಕರ್ತವ್ಯ. ಸರ್ಕಾರಕ್ಕೆ ಮನದಟ್ಟು ಆಗಬೇಕಂದ್ರೆ ಸಮಯಾವಕಾಶ ಬೇಕು ಎಂದಿದ್ದಾರೆ.

    ನಾಳೆಯ ಬೆಂಗಳೂರು ಬಂದ್ ಗೆ ಬೆಂಬಲವನ್ನೂ ಸೂಚಿಸಿರುವ ವಾಣಿಜ್ಯ ಮಂಡಳಿ, ಬೆಂಗಳೂರು ಸಿಟಿಯಲ್ಲಿ ಶೂಟಿಂಗ್ ನಡೆಯುವುದಿಲ್ಲ. ಬೆಂಗಳೂರು ಬಿಟ್ಟು ಹೊರಗೆ ಶೂಟಿಂಗ್ ಮಾಡ್ತಿರೋರಿಗೆ ತೊಂದರೆ ಇಲ್ಲ. ನಡ ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗು ಚಿತ್ರಮಂದಿರಗಳನ್ನ ಬಂದ್ ಮಾಡ್ತೀವಿ ಎಂದಿದ್ದಾರೆ ಅಧ್ಯಕ್ಷರು.

    ರಾಜ್ಯದಲ್ಲಿ ವರುಣ ಕೃಪೆಯಿಲ್ಲದೆ ಕಾವೇರಿ ನೀರಿನ ಪ್ರಮಾಣ ಇಳಿಕೆಯಾಗಿದೆ ಈ ನಡುವೆ ತಮಿಳುನಾಡಿಗೆ ನೀರನ್ನು ಹರಿಯಲು ಬಿಟ್ಟಿದ್ದು ರಾಜ್ಯದ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ವಿವಿಧ ರೈತ ಹಾಗೂ ಸಂಘಟನೆಗಳು ಹೋರಾಟ ನಡೆಸುತಿದ್ದು, ಕಾವೇರಿ ಹೋರಾಟಕ್ಕೆ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಹಿರಿಯ ನಟಿ ಎಂ.ಲೀಲಾವತಿ ಇಳಿದಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಮನೆಯಲ್ಲಿ ಮಾತನಾಡಿದ ಅವರು, ಕಾವೇರಿ ನಮ್ಮದು ಎಂದು ರೈತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ‘ನಾನು ಸಹ ಕಾವೇರಿ ಹೋರಾಟಕ್ಕೆ ಹೊರಡುವೆ ನಮ್ಮ ಜಲ, ನಮ್ಮ ನೆಲ, ನಮ್ಮ ನುಡಿ, ಎಲ್ಲಾ ಕನ್ನಡಕೊಸ್ಕರ. ಕಾವೇರಿ ನೀರಿಗಾಗಿ ನಾನು ಹೋರಾಟಕ್ಕೆ ಬರುವೆ’ ಎಂದಿದ್ದಾರೆ. ನೆಲಮಂಗಲದ ಮನೆಯಿಂದ ಮಂಡ್ಯ ಪ್ರತಿಭಟನೆ ಸ್ಥಳಕ್ಕೆ ಮಗ ವಿನೋದ್ ರಾಜ್ ಜೊತೆಗೆ ಹೊರಟಿದ್ದಾರೆ.

     

    ಕಾವೇರಿ ಹೋರಾಟ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಚಿತ್ರರಂಗದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಸಾಥ್ ನೀಡುತ್ತಿಲ್ಲ ಎನ್ನುವ ಕೂಗು ಎದ್ದಿದೆ. ಈ ಬೆನ್ನಲ್ಲೇ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಕಾವೇರಿ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮಾತನಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕನ್ನಡ ಚಿತ್ರೋದ್ಯಮದಲ್ಲಿ ಹಣ ತೊಡಗಿಸಿದ ಪ್ರಿನ್ಸ್ ಮಹೇಶ್ ಬಾಬು

    ಕನ್ನಡ ಚಿತ್ರೋದ್ಯಮದಲ್ಲಿ ಹಣ ತೊಡಗಿಸಿದ ಪ್ರಿನ್ಸ್ ಮಹೇಶ್ ಬಾಬು

    ತೆಲುಗು ಸಿನಿಮಾ ರಂಗದ ಖ್ಯಾತ ನಟ ಮಹೇಶ್ ಬಾಬು (Mahesh Babu), ಕನ್ನಡ ಚಿತ್ರೋದ್ಯಮದಲ್ಲಿ ಹಣ ಹೂಡಲಿದ್ದಾರೆ. ಈಗಾಗಲೇ ತೆಲುಗು ಚಿತ್ರೋದ್ಯಮದಲ್ಲಿ ಮಲ್ಟಿಪ್ಲೆಕ್ಸ್ (Multiplex) ಚಿತ್ರಮಂದಿರಗಳಿಗೆ ಬಂಡವಾಳ ಹಾಕಿರುವ ಮಹೇಶ್ ಬಾಬು, ಈಗ ಆ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳನ್ನು ಕರ್ನಾಟಕದಲ್ಲೂ ತೆರೆಯಲಿದ್ದಾರೆ.

    ಬೆಂಗಳೂರಿನ ಗಾಂಧಿನಗರದಲ್ಲಿರುವ ಚಿತ್ರಮಂದಿರಗಳಿಗೆ ಸಾಕಷ್ಟು ಬೇಡಿಕೆ ಇದೆ. ಇವುಗಳನ್ನೇ ಪ್ರಮುಖ ಚಿತ್ರಮಂದಿರಗಳು ಎಂದು ಹೇಳಲಾಗುತ್ತಿದೆ. ಈ ಜಾಗದಲ್ಲೇ ಪ್ರಿನ್ಸ್ ಮಹೇಶ್ ಬಾಬು ಅವರ ಎ.ಎಂ.ಬಿ ಮಲ್ಟಿಪ್ಲೆಕ್ಸ್  ಚಿತ್ರಮಂದಿರಗಳು ಕಾರ್ಯರಂಭ ಮಾಡಲಿವೆ. ಈ ಹಿಂದೆ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಐದು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತಿದೆ. ಇದೇ ಕಟ್ಟದಲ್ಲೇ ಚಿತ್ರಮಂದಿರಗಳು ಇರಲಿವೆ.

     

    ಕನ್ನಡ ಸಿನಿಮಾ ರಂಗದ ಅನೇಕ ನಟರು ಚಿತ್ರೋದ್ಯಮದಲ್ಲಿ ಹಣವನ್ನು ತೊಡಗಿಸಿಲ್ಲ. ಆದರೆ ತಮಿಳು ಮತ್ತು ತೆಲುಗಿನಲ್ಲಿ ಅನೇಕ ನಟರು ಬಂಡವಾಳವನ್ನು ನಾನಾ ರೂಪದಲ್ಲಿ ಚಿತ್ರೋದ್ಯಮದಲ್ಲೇ ತೊಡಗಿಸಿದ್ದಾರೆ. ಕರ್ನಾಟಕದಲ್ಲಿಯ ಈ ಕೊರತೆಯನ್ನು ಮನಗಂಡಿದ್ದ ಮಹೇಶ್ ಬಾಬು, ತಾವೇ ಹಣ ಹೂಡಲು ಮುಂದಾಗಿದ್ದಾರೆ. ಇನ್ನೂ ಕೆಲವೇ ತಿಂಗಳಲ್ಲಿ ಈ ಚಿತ್ರಮಂದಿರಗಳು ತಮ್ಮ ಪ್ರದರ್ಶನವನ್ನು ಶುರು ಮಾಡಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಂಬಳ’ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಅನುಷ್ಕಾ ಶೆಟ್ಟಿ

    ‘ಕಂಬಳ’ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಅನುಷ್ಕಾ ಶೆಟ್ಟಿ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ (Ashok Kumar Rai) ನೇತೃತ್ವದಲ್ಲಿ ನಡೆಯಲಿರುವ ಕರಾವಳಿ ಜಾನಪದೀಯ ಕ್ರೀಡೆ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರನ್ನು ಆಹ್ವಾನಿಸಲಾಗಿದೆ. ಈ ಬಾರಿ ಕಂಬಳವನ್ನು (Kambala) ಬೆಂಗಳೂರಿನಲ್ಲಿ ಆಯೋಜನೆ ಮಾಡಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ  ಈ ಕ್ರೀಡೆ ನಡೆಯಲಿದೆ.

    ಇದೇ ನವೆಂಬರ್ 25 ಮತ್ತು 26ರಂದು ಕಂಬಳವನ್ನು ಆಯೋಜನೆ ಮಾಡಿದ್ದು, ದಕ್ಷಿಣದ ತಾರೆ ಅನುಷ್ಕಾ ಶೆಟ್ಟಿ ಅವರಿಗೆ ಆಹ್ವಾನ ನೀಡಲಾಗಿದೆ. ಅವರು ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತ ಸಿನಿಮಾ ರಂಗದಲ್ಲಿ ಅಪಾರ ಅಭಿಮಾನಿಗಳನ್ನೂ ಹೊಂದಿರುವ ಮತ್ತು ಮಂಗಳೂರು ಮೂಲದವರು ಆಗಿರುವ ಕಾರಣದಿಂದಾಗಿ ಅನುಷ್ಕಾ ಅವರನ್ನು ಆಹ್ವಾನಿಸಲಾಗಿದೆ.

     

    ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಆಯೋಜನೆಯಾಗಿದ್ದು, ಇದಕ್ಕಾಗಿ ಭಾರೀ ಸಿದ್ಧತೆ ಕೂಡ ಮಾಡಲಾಗುತ್ತಿದೆ. ರಾಜಧಾನಿಗೆ ಬರಲು ಕಂಬಳದ ಕೋಣಗಳು ಕೂಡ ರೆಡಿಯಾಗತ್ತಿವೆ. ಮಂಗಳೂರಿನಿಂದ ಬೆಂಗಳೂರಿಗೆ ಬರಲಿರುವ ಕಂಬಳ ಕೋಣಗಳು, ಇಲ್ಲಿನ ಜನರಿಗೆ ಸಖತ್ ಮನರಂಜನೆ ಕೂಡ ನೀಡಲಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸುದೀಪ್ ಹುಟ್ಟುಹಬ್ಬ: ಮನೆಗೆ ಬರಬೇಡಿ, ಅಭಿಮಾನಿಗಳ ಭೇಟಿಗೆ ಸ್ಥಳ ಫಿಕ್ಸ್

    ಸುದೀಪ್ ಹುಟ್ಟುಹಬ್ಬ: ಮನೆಗೆ ಬರಬೇಡಿ, ಅಭಿಮಾನಿಗಳ ಭೇಟಿಗೆ ಸ್ಥಳ ಫಿಕ್ಸ್

    ಕಿಚ್ಚ ಸುದೀಪ್ (Sudeep) ಅವರ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸುದೀಪ್ ಸದ್ಯ ಚೆನ್ನೈನಲ್ಲಿದ್ದಾರೆ. ಅವರ ಹೊಸ ಸಿನಿಮಾದ ಚಿತ್ರೀಕರಣ ಅಲ್ಲಿ ನಿರಂತರವಾಗಿ ನಡೆಯುತ್ತಿದೆ. ಶೂಟಿಂಗ್ ನಡುವೆಯೂ ಬ್ರೇಕ್ ತೆಗೆದುಕೊಂಡು ಅಭಿಮಾನಿಗಳ ಜೊತೆ ಅವರು ಒಂದು ದಿನ ಕಳೆಯಲಿದ್ದಾರೆ.

    ಈ ಕುರಿತು ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದು, ‘ಪ್ರತಿ ವರ್ಷ ಸುದೀಪ್ ಅವರ ಹುಟ್ಟು ಹಬ್ಬವನ್ನು ಜೆಪಿ ನಗರದಲ್ಲಿರುವ ಅವರ ನಿವಾಸದ ಮುಂದೆ ಆಚರಣೆ ಮಾಡಲಾಗುತ್ತಿತ್ತು. ಜನಸಂದಣಿಯಿಂದಾಗಿ ಅಭಿಮಾನಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕಾಗಿ ಈ ಬಾರಿ ಒಂದು ದಿನ ಮೊದಲೇ ಸೆಪ್ಟೆಂಬರ್ 1ರಂದು  ಬೆಂಗಳೂರಿನ ನಂದಿ ಲಿಂಕ್ಸ್ ಮೈದಾನದಲ್ಲಿ ಹುಟ್ಟು ಹಬ್ಬವನ್ನು ಆಚರಿಸಲು ನಿರ್ಧರಿಸಲಾಗಿದೆ’ ಎಂದು ಹೇಳಲಾಗಿದೆ.

    ಸೆಪ್ಟೆಂಬರ್ 1ರಂದು ಸಂಜೆ 7 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಸುದೀಪ್ ಅವರು ನಂದಿ ಲಿಂಕ್ಸ್ ಮೈದಾನದಲ್ಲಿ ಅಭಿಮಾನಿಗಳ ಜೊತೆ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಹಾಗಾಗಿ ಸೆಪ್ಟೆಂಬರ್ 2ಕ್ಕೆ ಯಾರೂ ಸುದೀಪ್ ಅವರ ಮನೆಯ ಮುಂದೆ ಬರಬಾರದು ಎಂದು ವಿನಂತಿಸಲಾಗಿದೆ.

     

    ಸುದೀಪ್ ಅವರ ಹುಟ್ಟು ಹಬ್ಬಕ್ಕೆ ಹಲವು ಅಚ್ಚರಿಗಳು ಕೂಡ ಇರಲಿವೆಯಂತೆ. ಹೊಸ ಸಿನಿಮಾದ ಟ್ರೈಲರ್  ಮತ್ತು ಹೊಸ ಸಿನಿಮಾಗಳ ಘೋಷಣೆ ಕೂಡ ಆಗಲಿವೆ ಎನ್ನುವ ಮಾಹಿತಿ ಇದೆ. ಸತತವಾಗಿ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಸುದೀಪ್, ಈ ಬಾರಿ ಅಭಿಮಾನಿಗಳ ಒತ್ತಡಕ್ಕೆ ಮಣಿದು, ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡು ಹುಟ್ಟು ಹಬ್ಬವನ್ನು ಆಚರಿಸುತ್ತಿರುವುದು ವಿಶೇಷ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Breaking: ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ, ಬೆಂಗಳೂರಿಗೆ ಆಗಮನ

    Breaking: ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ, ಬೆಂಗಳೂರಿಗೆ ಆಗಮನ

    ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ ಬೆಂಗಳೂರಿಗೆ ಆಗಮಿಸಿದೆ. ಬ್ಯಾಂಕಾಕ್‌ನಿಂದ ಕಾರ್ಗೋ ವಿಮಾನದಲ್ಲಿ ತರಲಾದ ಮೃತದೇಹವನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುಮಾರು 30 ನಿಮಿಷಗಳ ಕಸ್ಟಮ್ಸ್‌ ಕ್ಲಿಯರೆನ್ಸ್‌ ಪ್ರಕ್ರಿಯೆ ಮುಗಿಸಿದ ಬಳಿಕ ಪಾರ್ಥಿವ ಶರೀರವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು.

    ಸ್ಪಂದನಾ ಅವರ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್‌, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ ಸೇರಿದಂತೆ ಹಲವರು ಸ್ಥಳದಲ್ಲಿದ್ದು ಮೃತದೇಹವನ್ನ ಪಡೆದುಕೊಳ್ಳಲಿದ್ದಾರೆ. ವಿಮಾನ ನಿಲ್ದಾಣದಲ್ಲಿ ಪ್ರಕ್ರಿಯೆ ಮುಗಿಸಿ ಮಲ್ಲೇಶ್ವರಂಗೆ ಮೃತದೇಹ ರವಾನೆ ಮಾಡಲಾಗುವುದು ಸ್ಪಂದನಾ, ಅಂತಿಮ ದರ್ಶನಕ್ಕಾಗಿ ಮಲ್ಲೇಶ್ವರಂ ಮನೆಗೆ ಆಪ್ತರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಬ್ಯಾಂಕಾಕ್ ಏರ್ ಪೋರ್ಟಿಗೆ ಬಂದ ಸ್ಪಂದನಾ ಮೃತದೇಹ: 8.30ಕ್ಕೆ ಹೊರಡಲಿದೆ ವಿಮಾನ

    ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ ಸ್ಪಂದನಾ ನಿವಾಸದ ಮುಂಭಾಗ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಇದನ್ನೂ ಓದಿ: ರಜನಿ ‘ಜೈಲರ್’ ಬಿಡುಗಡೆ: ರಜೆ ಘೋಷಿಸಿ, ಸಿಬ್ಬಂದಿಗೆ ಉಚಿತ ಟಿಕೆಟ್ ನೀಡಿದ ಕಂಪನಿ

    ಬುಧವಾರ (ಆ.9) ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆಲವೇ ಗಂಟೆಗಳಲ್ಲಿ ಸ್ಪಂದನಾ ಮೃತದೇಹ ಬೆಂಗಳೂರಿಗೆ: ಅಂತಿಮ ದರ್ಶನಕ್ಕೆ ಸಿದ್ಧತೆ

    ಕೆಲವೇ ಗಂಟೆಗಳಲ್ಲಿ ಸ್ಪಂದನಾ ಮೃತದೇಹ ಬೆಂಗಳೂರಿಗೆ: ಅಂತಿಮ ದರ್ಶನಕ್ಕೆ ಸಿದ್ಧತೆ

    ಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ (Spandana) ಮೃತದೇಹ ಕೆಲವೇ ಗಂಟೆಗಳಲ್ಲಿ ಬೆಂಗಳೂರಿಗೆ (Bangalore) ಬರಲಿದೆ. ಮೃತದೇಹ ಹೊತ್ತ ವಿಮಾನ ಈಗಾಗಲೇ ಬ್ಯಾಂಕಾಕ್ (Bangkok) ನಿಂದ ಹೊರಟಿದ್ದು, ರಾತ್ರಿ 11.30ರ ಹೊತ್ತಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅದು ಬಂದು ತಲುಪಲಿದೆ. ಈಗಾಗಲೇ ಸ್ಪಂದನಾ ಚಿಕ್ಕಪ್ಪ ಬಿ.ಕೆ.ಹರಿಪ್ರಸಾದ್, ಮಾವ ಚಿನ್ನೇಗೌಡ ಸೇರಿದಂತೆ ಹಲವರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

    ಇತ್ತ ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ (Malleswaram) ಸ್ಪಂದನಾ ನಿವಾಸದ ಮುಂಭಾಗ ಸಿದ್ದತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಇದನ್ನೂ ಓದಿ:ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ದರ್ಶನ, ಹರಿಶ್ಚಂದ್ರ ಘಾಟ್‍ ನಲ್ಲಿ ಅಂತಿಮ ಸಂಸ್ಕಾರ

    ಸ್ಪಂದನಾ ಅವರ ತಂದೆಯ ಮನೆಗೆ ಬಹುತೇಕರು ಆಗಮಿಸುತ್ತಿದ್ದು,  ಬಿ.ಕೆ ಶಿವರಾಂ ಮನೆಯಲ್ಲಿ ಕುಟುಂಬಸ್ಥರನ್ನ ಸಮಾಧಾನಿಸುವ ದೃಶ್ಯ ಎಂಥವರನ್ನೂ ಭಾವುಕರನ್ನಾಗಿಸುತ್ತಿದೆ. ಇತ್ತ ಸೊಸೆ ಸ್ಪಂದನಾ ನೆನೆದು ಮಾವ ಚಿನ್ನೇಗೌಡ ಕೂಡ ಭಾವುಕರಾಗಿದ್ದಾರೆ.

    ಇಂದು ರಾತ್ರಿಯಿಂದ ನಾಳೆ ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬ್ಯಾಂಕಾಕ್ ಏರ್ ಪೋರ್ಟಿಗೆ ಬಂದ ಸ್ಪಂದನಾ ಮೃತದೇಹ: 8.30ಕ್ಕೆ ಹೊರಡಲಿದೆ ವಿಮಾನ

    ಬ್ಯಾಂಕಾಕ್ ಏರ್ ಪೋರ್ಟಿಗೆ ಬಂದ ಸ್ಪಂದನಾ ಮೃತದೇಹ: 8.30ಕ್ಕೆ ಹೊರಡಲಿದೆ ವಿಮಾನ

    ನಿನ್ನೆಯಷ್ಟೇ ಬ್ಯಾಂಕಾಕ್ (Bangkok) ನಲ್ಲಿ ನಿಧನರಾದ ಸ್ಪಂದನಾ (Spandana) ಮೃತದೇಹವನ್ನು ಬ್ಯಾಂಕಾಕ್ ನ ಸುವರ್ಣಭೂಮಿ ವಿಮಾನ ನಿಲ್ದಾಣಕ್ಕೆ ತರಲಾಗಿದೆ. ಆ ವಿಮಾನವು 8.30ಕ್ಕೆ ಬ್ಯಾಂಕಾಕ್ ನಿಂದ ಹೊರಡಲಿದ್ದು, ಬೆಂಗಳೂರಿಗೆ 11.20ಕ್ಕೆ ಆಗಮಿಸಲಿದೆ. ಅದೇ ವಿಮಾನದಲ್ಲೇ ವಿಜಯ ರಾಘವೇಂದ್ರ ಮತ್ತು ಸ್ಪಂದನಾ ಜೊತೆ ಪ್ರವಾಸಕ್ಕೆ ತೆರಳಿದ್ದ ಸಂಬಂಧಿಕರು ಕೂಡ ಬೆಂಗಳೂರಿಗೆ  (Bangalore) ಆಗಮಿಸಲಿದ್ದಾರೆ.

    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಕ್ರಿಯೆಗಳನ್ನು ಸುಗಮಗೊಳಿಸುವುದಕ್ಕಾಗಿ ಮತ್ತು ಆದಷ್ಟು ಬೇಗ ಮೃತದೇಹವನ್ನು ಪಡೆಯುವುದಕ್ಕಾಗಿ ಈಗಾಗಲೇ ಸ್ಪಂದನಾ ಕುಟುಂಬಸ್ಥರು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊರಟಿದ್ದಾರೆ. ಸ್ಪಂದನಾ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ಮತ್ತು ಇತರರು ರಾತ್ರಿ 9 ಗಂಟೆಯ ಹೊತ್ತಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಿದ್ದಾರೆ. ಇದನ್ನೂ ಓದಿ:ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

    ಬೆಂಗಳೂರು ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 12 ಗಂಟೆಯ ಹೊತ್ತಿಗೆ ಅಂಬುಲೆನ್ಸ್ ಮೂಲಕ ಮೃತದೇಹವನ್ನು ಸ್ಪಂದನಾ ಅವರ ತಂದೆಯ ಮನೆಗೆ ತರಲಾಗುತ್ತಿದೆ. ಮಲ್ಲೇಶ್ವರಂನಲ್ಲಿರುವ (Malleswaram) ಬಿ.ಕೆ.ಶಿವರಾಮ್ ಅವರ ನಿವಾಸದಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾತ್ರಿಯಿಂದಲೇ ಅಂತಿಮ ದರ್ಶನ ಪಡೆಯಬಹುದಾಗಿದೆ.

     

    ಇಂದು ರಾತ್ರಿಯಿಂದ ನಾಳೆ ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಹೇಳಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

    ಕುಟುಂಬಕ್ಕೆ ಸ್ಪಂದನಾ ಮೃತದೇಹ ಹಸ್ತಾಂತರ ಪ್ರಕ್ರಿಯೆ ಪೂರ್ಣ

    ಟ ವಿಜಯ ರಾಘವೇಂದ್ರ  (Vijaya Raghavendra) ಪತ್ನಿ ಸ್ಪಂದನಾ (Spandana) ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡುವ ಪ್ರಕ್ರಿಯೆ ಇದೀಗ ಪೂರ್ಣಗೊಂಡಿದೆ. ಮರಣೋತ್ತರ ಪರೀಕ್ಷೆಯ ವರದಿ ಬರುತ್ತಿದ್ದಂತೆಯೇ ಮುಂದಿನ ಪ್ರಕ್ರಿಯೆಗಳು ಚುರುಕುಗೊಂಡಿದ್ದರಿಂದ ಇದೀಗ ಸ್ಪಂದನಾ ಅವರ ಮೃತದೇಹವನ್ನು ಬೆಂಗಳೂರಿಗೆ ತರುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ರಾತ್ರಿ 8.30ರ ಹೊತ್ತಿಗೆ ಮೃತದೇಹ ಹೊತ್ತ ವಿಮಾನ ಬ್ಯಾಂಕಾಕ್ (Bangkok) ನಿಂದ ಹೊರಟರೆ, ಬೆಂಗಳೂರಿಗೆ (Bangalore) 11.15ಕ್ಕೆ ವಿಮಾನ ಆಗಮನವಾಗಲಿದೆ.

    ಬೆಂಗಳೂರಿನಲ್ಲೂ ಅಂತಿಮ ದರ್ಶನಕ್ಕೆ ಸ್ಪಂದನಾ ಅವರ ತವರು ಮನೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮಲ್ಲೇಶ್ವರಂ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಇವತ್ತು ರಾತ್ರಿಯಿಂದಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನದವರೆಗೂ ಅಂತಿಮ ದರ್ಶನ ಮಾಡಬಹುದಾಗಿದೆ.

    ಮರಣೋತ್ತರ ಪರೀಕ್ಷೆಯ ನಂತರದ ಪ್ರಕ್ರಿಯೆಗಳು ಏನಿದ್ದವು?

    ಕನ್ನಡದ ಹೆಸರಾಂತ ನಟ ವಿಜಯ ರಾಘವೇಂದ್ರ ಪತ್ನಿ ಹಾಗೂ ನಿರ್ಮಾಪಕಿ ಸ್ಪಂದನಾ ಸೋಮವಾರ ಬೆಳಗ್ಗೆ ಬ್ಯಾಂಕಾಕ್ ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆದರೂ ಈವರೆಗೂ ಅವರ ಮೃತದೇಹ ಭಾರತಕ್ಕೆ ತರಲಾಗಿಲ್ಲ. ಕಾರಣ, ವಿದೇಶದಲ್ಲಿ ಯಾವುದೇ ಪ್ರಜೆ ನಿಧನ ಹೊಂದಿದರೂ, ಅವರ ಮೃತದೇಹ ತರುವುದು ಸುಲಭವಲ್ಲ. ಅದರಲ್ಲೂ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ನಿಧನ ಹೊಂದಿದರೆ ಪ್ರಕ್ರಿಯೆ ಇನ್ನೂ ಕಠಿಣವಾಗಿರುತ್ತದೆ.

    ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಪ್ರವಾಸಕ್ಕೆಂದು ಬಂದು ಮೃತರಾದ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ತಡವಾಗುವುದು ಸಾಮಾನ್ಯ. ಭಾರತದಂತೆಯೇ ಅಲ್ಲಿಯೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲೇ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಆ ವರದಿಯನ್ನು ಮೊದಲು ಪೊಲೀಸರು ಪಡೆದುಕೊಳ್ಳುತ್ತಾರೆ. ಸಾವಿಗೆ ಕಾರಣ ಏನು ಎನ್ನುವುದು ಮೊದಲು ಗೊತ್ತಾಗುವುದು ಅಲ್ಲಿನ ಪೊಲೀಸ್ ವ್ಯವಸ್ಥೆಗೆ.

    ಪೊಲೀಸರಿಗೆ ಮರಣೋತ್ತರ ವರದಿ ಬಂದ ತಕ್ಷಣವೇ ಪರಿಶೀಲಿಸಿ ಅದು ಸಹಜ ಸಾವು ಅಂದ ಬಳಿಕವಷ್ಟೇ ಕುಟುಂಬಸ್ಥರಿಗೆ ಮೃತದೇಹವನ್ನು ನೀಡಲಾಗುತ್ತದೆ. ನಂತರ ಕುಟುಂಬದವರು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುತ್ತಾರೆ. ಮರಣೋತ್ತರ ವರದಿ, ಮರಣ ಪ್ರಮಾಣ ಪತ್ರ ಹಾಗೂ ಪೊಲೀಸ್ ವರದಿಗಳನ್ನು ಪಡೆದುಕೊಂಡು ಆಯಾ ರಾಯಭಾರಿ ಕಚೇರಿಗಳನ್ನು ಸಂಪರ್ಕಿಸಬೇಕಾಗುತ್ತದೆ.

    ಸ್ಪಂದನಾ ಬ್ಯಾಂಕಾಕ್ ನಲ್ಲಿ ನಿಧನರಾಗಿದ್ದರಿಂದ ಅವರ ಕುಟುಂಬವು ಈ ಎಲ್ಲ ವರದಿಗಳನ್ನು ಪಡೆದುಕೊಂಡು ಬ್ಯಾಂಕಾಕ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ನೀಡಬೇಕು. ರಾಯಭಾರಿ ಕಚೇರಿ ಮತ್ತು ಸ್ಥಳೀಯ ಆಡಳಿತ ಸೇರಿಕೊಂಡು ಕಸ್ಟಮ್ಸ್ ಕ್ಲಿಯರೆನ್ಸ್ ಪಡೆದುಕೊಳ್ಳಲಾಗುತ್ತದೆ.

    ಈ ಸಮಯದಲ್ಲಿ ಸ್ಪಂದನಾ ಅವರ ಪಾಸ್ ಪೋರ್ಟ್ ಮತ್ತೆ ವೀಸಾವನ್ನು ವಾಪಸ್‌ ಪಡೆದುಕೊಳ್ಳಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮುಗಿದ ನಂತರವಷ್ಟೇ ಮೃತದೇಹವನ್ನು ವಿಮಾನ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಲು ಅನುಮತಿಸಲಾಗುತ್ತದೆ.

    ಏರ್‌ಪೋರ್ಟ್‌ಗೆ ಮೃತದೇಹ ತಂದ ತಕ್ಷಣವೇ ಅಲ್ಲೂ  ಹಲವು ಪ್ರಕ್ರಿಯೆಗಳು ನಡೆಯಲಿವೆ. ಅಲ್ಲಿಯೂ ಕೂಡ ರಾಯಭಾರಿ ಕಚೇರಿಯಿಂದ ಪಡೆದಿರುವಂತಹ ಎಲ್ಲ ವರದಿಗಳನ್ನೂ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ನೀಡಬೇಕು. ಆನಂತರವಷ್ಟೇ ಮೃತದೇಹವನ್ನು ವಿಮಾನದಲ್ಲಿ ಸಾಗಿಸಲು ಪರವಾನಿಗೆ ದೊರೆಯುತ್ತದೆ. ಈ ಎಲ್ಲಾ ಕಾರಣದಿಂದಾಗಿ ಸ್ಪಂದನಾ ಅವರ ಮೃತ ದೇಹ ಬೆಂಗಳೂರಿಗೆ ತರಲು ತಡವಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ, ಬುಧವಾರ ಅಂತ್ಯಕ್ರಿಯೆ

    ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ, ಬುಧವಾರ ಅಂತ್ಯಕ್ರಿಯೆ

    ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು, ಮೃತ ದೇಹವನ್ನು (Dead Body) ನಾಳೆ ಸಾಯಂಕಾಲ ಬೆಂಗಳೂರಿಗೆ ತರಲಾಗುವುದು ಎಂದಿದ್ದಾರೆ ಸ್ಪಂದನಾ ಚಿಕ್ಕಪ್ಪ ಬಿ.ಕೆ. ಹರಿಪ್ರಸಾದ್. ಇಂದು ಮರಣೋತ್ತರ (Postmortem) ಪರೀಕ್ಷೆ ಮುಗಿದಿದ್ದರೂ, ಇನ್ನೂ ಹಲವು ವಿದೇಶಿ ಪ್ರಕ್ರಿಯೆಗಳು ನಡೆಯಬೇಕಿವೆ. ಅವು ನಾಳೆ ಮಧ್ಯಾಹ್ನ ಪೂರ್ಣಗೊಳ್ಳಲಿವೆಯಂತೆ.

    ‘ಸ್ಪಂದನಾ ಸಾವಿನ ಕುರಿತಂತೆ ಬ್ಯಾಂಕಾಕ್ ಪ್ರಕ್ರಿಯೆಗಳು ಮುಗಿಯಲು ನಾಳೆ ಮಧ್ಯಾಹ್ನ ಆಗುತ್ತದೆ. ಆದ್ದರಿಂದ ಪ್ರಕ್ರಿಯೆಗಳು ಮುಗಿಸಿ ಮೃತದೇಹ ಸಂಜೆ ಹೊರಡಲಾಗುತ್ತದೆ. ರಾತ್ರಿಯ ಒಳಗೆ ಮೃತ ದೇಹ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನಿಂದ (Bangalore) ಕೆಲವರು ಅಲ್ಲಿಗೆ ಹೋಗೋಣ ಎಂದುಕೊಂಡಿದ್ದೆವು. ಆದ್ರೆ ನಾವು ಹೋಗೋ ಅಷ್ಟರಲ್ಲಿ ಸಮಯ ಆಗುತ್ತೆ. ಆದ್ರಿಂದ ನಾವ್ಯಾರೂ ಇಲ್ಲಿಂದ ಹೋಗ್ತಾ ಇಲ್ಲ. ನಾಳೆ ರಾತ್ರಿ 11:30ರ ಹೊತ್ತಿಗೆ ಮೃತ ದೇಹ ಬರಬಹುದು. ಬುಧವಾರ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ’ ಎಂದಿದ್ದಾರೆ ಹರಿಪ್ರಸಾದ್.

    ಅಂತ್ಯಸಂಸ್ಕಾರ (Funeral) ಎಲ್ಲಿ ನಡೆಯಬೇಕು ಎನ್ನುವ ಕುರಿತು ಯಾವುದೇ ನಿರ್ಧಾರ ಈವರೆಗೂ ತೆಗೆದುಕೊಂಡಿಲ್ಲ ಎಂದಿರುವ ಹರಿಪ್ರಸಾದ್, ಯಾವ ಸ್ಥಳದಲ್ಲಿ ಮತ್ತು ಸಮಯದಲ್ಲಿ ಅಂತ್ಯ ಸಂಸ್ಕಾರ ಮಾಡಬೇಕು ಎನ್ನುವುದನ್ನು ಚರ್ಚಿಸಿ ತಿಳಿಸುತ್ತೇವೆ ಎಂದಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಅದನ್ನು ಮಾಧ್ಯಮಗಳಿಗೆ ನೀಡುವ ಕುರಿತು ಮಾತನಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]