Tag: Bangalore

  • 27 ವರ್ಷಗಳ ನಂತರ ಭಾರತದಲ್ಲಿ ವಿಶ್ವಸುಂದರಿ ಸ್ಪರ್ಧೆ: ಮೊದಲಾಗಿದ್ದು ಬೆಂಗಳೂರಿನಲ್ಲಿ

    27 ವರ್ಷಗಳ ನಂತರ ಭಾರತದಲ್ಲಿ ವಿಶ್ವಸುಂದರಿ ಸ್ಪರ್ಧೆ: ಮೊದಲಾಗಿದ್ದು ಬೆಂಗಳೂರಿನಲ್ಲಿ

    ವಿಶ್ವ ಸುಂದರಿ (Miss World) ಸ್ಪರ್ಧೆಯನ್ನು ಈ ಬಾರಿ ಭಾರತದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಭಾರತವು (India) ಇಂಥದ್ದೊಂದು ಅವಕಾಶ ಪಡೆದಿದೆ. ನಿನ್ನೆ ನಡೆದ ಸಭೆಯಲ್ಲಿ ಈ ಬಾರಿ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತ ಆತಿಥ್ಯ ವಹಿಸಿಕೊಳ್ಳಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

    ವಿಶ್ವ ಸುಂದರಿ (Vishwasundari) ಸ್ಪರ್ಧೆಯನ್ನು ಆಯೋಜನೆ ಮಾಡಲು ಹಲವು ರಾಷ್ಟ್ರಗಳು ತುದಿಗಾಲಲ್ಲಿ ನಿಂತಿರುತ್ತವೆ. ಅದೊಂದು ಪ್ರತಿಷ್ಠಿತ ಸ್ಪರ್ಧೆ ಆಗಿರುವುದರಿಂದ ಆತಿಥ್ಯ ವಹಿಸಲು ಸಹಜವಾಗಿಯೇ ಪೈಪೋಟಿ ನಡೆದಿರುತ್ತದೆ. ಈ ಎಲ್ಲ ಪೈಪೋಟಿಯಾಚೆ ಈ ಬಾರಿ ಭಾರತದಲ್ಲಿ ಸ್ಪರ್ಧೆ ನಡೆಯಲಿದೆ.

    ಎರಡನೇ ಬಾರಿ ಭಾರತದಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆಯುತ್ತಿದ್ದು, ಮೊದಲ ಬಾರಿಗೆ ಬೆಂಗಳೂರಿನಲ್ಲಿ (Bangalore) ನಡೆದಿತ್ತು ಎನ್ನುವುದು ವಿಶೇಷ. 1996ರಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತ ಆತಿಥ್ಯ ವಹಿಸಿಕೊಂಡಿತ್ತು. ಆ ಸ್ಪರ್ಧೆಯು ಬೆಂಗಳೂರಿನಲ್ಲಿ ಆಯೋಜನೆಗೊಂಡಿತ್ತು. ಅಮಿತಾಭ್ ಬಚ್ಚನ್ (Amitabh Bachchan) ಅದರ ನೇತೃತ್ವ ವಹಿಸಿಕೊಂಡಿದ್ದರು. ಇದನ್ನೂ ಓದಿ:ಲೂಸಿಯಾ ಪವನ್ ನಿರ್ದೇಶನದ ‘ಧೂಮಂ’ ಚಿತ್ರದಲ್ಲಿ ‘ಕೆಜಿಎಫ್’ ರಾಕಿಭಾಯ್ : ಟ್ರೈಲರ್ ರಿಲೀಸ್

    ಬೆಂಗಳೂರಿನಲ್ಲಿ ವಿಶ್ವ ಸುಂದರಿ ಸ್ಪರ್ಧೆ ನಡೆದಾಗ ಭಾರೀ ಪ್ರತಿರೋಧ ವ್ಯಕ್ತವಾಯಿತು. ಇದರ ವಿರುದ್ಧ ಮಹಿಳಾ ಸಂಘಟನೆಗಳು ಬೀದಿಗೆ ಇಳಿದು ಹೋರಾಟ ನಡೆಸಿದ್ದವು. ಆಗ ಮುಖ್ಯಮಂತ್ರಿಗಳಾಗಿ ಜೆ.ಎಚ್. ಪಟೇಲ್ ಅವರು ಅಧಿಕಾರ ವಹಿಸಿದ್ದರು. ಪ್ರತಿಭಟನೆ ಎಷ್ಟೇ ಜೋರಾಗಿದ್ದರೂ, ಪೊಲೀಸ್ ಭದ್ರತೆಯಲ್ಲಿ ಕಾರ್ಯಕ್ರಮ ನಡೆಸಲು ಪಟೇಲ್ (JH Patel) ಸೂಚಿಸಿದ್ದರು. ಈ ವೇಳೆಯಲ್ಲಿ ಅಮಿತಾಭ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆಗ ನಟ ಅಂಬರೀಶ್ ಅವರು ಅಮಿತಾಭ್ ನೆರವಿಗೆ ಧಾವಿಸಿದ್ದರು.

    ವಿಶ್ವಸುಂದರಿ ಸ್ಪರ್ಧೆಯು ಒಂದು ತಿಂಗಳುಗಳ ಕಾಲ ನಡೆಯಲಿದ್ದು, ಈ ಬಾರಿ ಯಾವ ರಾಜ್ಯದಲ್ಲಿ ಇದನ್ನು ಆಯೋಜನೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿಲ್ಲ. ಆಯೋಜಕರು ಮುಂದಿನ ದಿನಗಳಲ್ಲಿ ತಿಳಿಸಬಹುದು. ಅಂದಹಾಗೆ ಈ ಬಾರಿ ಭಾರತದಿಂದ ನಂದಿತಾ ಗುಪ್ತಾ ಸೇರಿದಂತೆ ಹಲವರು ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ಮಳೆ ಆವಾಂತರ : ಸಿನಿಮಾ ನಿರ್ದೇಶಕ ಶಶಾಂಕ್ ಅನುಭವಿಸಿದ್ದೇನೆ?

    ಮಳೆ ಆವಾಂತರ : ಸಿನಿಮಾ ನಿರ್ದೇಶಕ ಶಶಾಂಕ್ ಅನುಭವಿಸಿದ್ದೇನೆ?

    ಬೆಂಗಳೂರು (Bangalore) ಮಳೆ (Rain) ಆವಾಂತರ ಅನೇಕರನ್ನು ನಾನಾ ರೀತಿಯಲ್ಲಿ ಕಾಡಿದೆ. ಸ್ಯಾಂಡಲ್ ವುಡ್ ನಿರ್ದೇಶಕ ಶಶಾಂಕ್ ತಮಗಾದ ಅನುಭವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಶಶಾಂಕ್ (Shashank) ಅವರ ಆಫೀಸು ಇದ್ದು, ಆಫೀಸ್ ಪಕ್ಕದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಮರ ಉರುಳಿದ ಬಿದ್ದಿದೆ. ಅದರಿಂದಾಗಿ ಕರೆಂಟೂ ಇಲ್ಲ, ನೀರು ಇಲ್ಲವೆಂದು ಫೋಟೋ ಸಮೇತ ಬರೆದುಕೊಂಡಿದ್ದಾರೆ.

    ನಿನ್ನೆಯಿಂದಲೇ ಬಿಬಿಎಂಪಿ ಸಿಬ್ಬಂದಿಗೆ ಹಾಗೂ ಬೆಸ್ಕಾಂ ಸಿಬ್ಬಂದಿ ಕರೆ ಮಾಡಿದರೂ, ಈವರೆಗೂ ಅವರಿಂದ ಯಾವುದೇ ಸ್ಪಂದನೆ ಇಲ್ಲ ಎನ್ನುವುದನ್ನು ಶಶಾಂಕ್ ಹೇಳಿಕೊಂಡಿದ್ದಾರೆ. ಕಾರಿನ ಮೇಲೆ ಮರ ಬಿದ್ದಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಬಿಬಿಎಂಪಿ ಹಾಗೂ ಬೆಸ್ಕಾಂ ಸಿಬ್ಬಂದಿ ಇನ್ನೂ ಬಂದಿಲ್ಲವೆಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಭಾನುವಾರ ಸಂಜೆ ಸುರಿದ ಭಾರೀ ಮಳೆಗೆ ಬಿಜೆಪಿ ರಾಜ್ಯಸಭಾ ಸದಸ್ಯ- ನಟ ಜಗ್ಗೇಶ್ (Jaggesh) ಅವರಿಗೂ ಮಳೆಯ ಅವಾಂತರದ ಬಿಸಿ ತಟ್ಟಿದೆ. ನಿನ್ನೆ ಸುರಿದ ಮಳೆಯಿಂದ ಜಗ್ಗೇಶ್ ಅವರ ಕಾರು ಮುಳುಗಡೆ ಆಗಿದೆ. ಜಗ್ಗೇಶ್ ಅವರ ಮನೆಯ ರಿಪೇರಿ ಕೆಲಸ ಕಾರ್ಯಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಜಗ್ಗೇಶ್ ಅವರು ತಮ್ಮ BMW ಕಾರನ್ನು ಸ್ನೇಹಿತ ಮುರುಳಿ ಮನೆ ಬಳಿ ನಿಲ್ಲಿಸಿದ್ದರು.

    ಮಳೆ ತಂದ ಸಂಕಷ್ಟದಿಂದ ಮುರಳಿ ಅವರ ಮನೆ- ಪಾರ್ಕಿಂಗ್‌ಗೆ ನೀರು ನುಗ್ಗಿದೆ. ಈ ಪರಿಣಾಮ ಜಗ್ಗೇಶ್ ಅವರ BMW ಕಾರು ಮುಳುಗಡೆಯಾಗಿದೆ. ಕೊನೆಗೂ ಹೇಗೋ ಸ್ನೇಹಿತ ಮುರಳಿ ಅವರು ಪಂಪ್ ಬಳಸಿ ನೀರು ಹೊರ ಹಾಕುವ ಕೆಲಸ ಮಾಡಿದ್ದಾರೆ. ಬೆಂಗಳೂರು ನಿನ್ನೆ ಸುರಿದ ಭಾರೀ ಮಳೆಯಿಂದ ಹತ್ತು ಅಲವು ಅನಾಹುತ ಸೃಷ್ಟಿಸಿದೆ.

  • ಬೆಂಗಳೂರಿಗರೇ ವೋಟು ಮಾಡಿ: ಬೇಸರ ಹೊರಹಾಕಿದ ನಟಿ ಮೇಘನಾ

    ಬೆಂಗಳೂರಿಗರೇ ವೋಟು ಮಾಡಿ: ಬೇಸರ ಹೊರಹಾಕಿದ ನಟಿ ಮೇಘನಾ

    ಬೆಂಗಳೂರಿನ (Bangalore) ಜೆಪಿ ನಗರದ ಮತದಾನ (Voting) ಕೇಂದ್ರಕ್ಕೆ ನಾನು ಮತ್ತು ನನ್ನ ತಂದೆ ಬಂದಾಗ ನಮ್ಮ ಕುಟುಂಬ ಬಿಟ್ಟು ಬೇರೆ ಯಾರೂ ಇರಲಿಲ್ಲ. ನಿಜಕ್ಕೂ ನನಗೆ ಶಾಕ್ ಆಯಿತು. ಮತದಾನ ಮಾಡುವಂತೆ ಏನೆಲ್ಲ ಮನವಿ ಮಾಡಿಕೊಂಡಿದ್ದಾರೆ. ಚುನಾವಣೆ ಆಯೋಗ ಸಾಕಷ್ಟು ಶ್ರಮ ಪಟ್ಟಿದೆ. ಆದರೆ, ಯುವಜನರಿಂದ ಮತದಾನಕ್ಕೆ ನೀರಸ ಪ್ರತಿಕ್ರಿಯೆ ಸಿಕ್ಕಿರುವುದು ನನಗಂತೂ ತುಂಬಾ ಬೇಸರವಾಗಿದೆ ಎಂದು ನಟಿ ಮೇಘನಾ ರಾಜ್ ಸರ್ಜಾ (Meghna Raj) ಹೇಳಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಯುವಜನರ ನೀರಸ ಪ್ರತಿಕ್ರಿಯೆ ಬೇಸರ ತಂದಿದೆ. ಅಲ್ಲದೇ, ಸೋಷಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಮಾಮಾಡ್ತಾರೆ. ಬೆಂಗಳೂರಿಗೆ ಸಮಸ್ಯೆಯಾದಾಗ ಸೋಷಿಯಲ್ ಮೀಡಿಯಾದಲ್ಲಿ ಸೌಂಡ್ ಆಗುತ್ತೆ. ಆದರೆ, ರಿಯಾಲಿಟಿಯಲ್ಲಿ ಮತದಾನ ಮಾಡೋಕೆ ಮಾತ್ರ ಹಿಂದೇಟು ಯಾಕೆ?’ ಎಂದು ಅವರು ಪ್ರಶ್ನೆ ಮಾಡಿದರು. ಇದನ್ನೂ ಓದಿ:ನಾನ್ ವೆಜ್ ತಿನ್ನಲ್ಲ ಅಂತಾ ಹೇಳಿ ತಗ್ಲಾಕೊಂಡ ರಶ್ಮಿಕಾ ಮಂದಣ್ಣಗೆ ನೆಟ್ಟಿಗರಿಂದ ತರಾಟೆ

    ಹುರುಪಿನಿಂದಲೇ ನಾನು ಮತ್ತು ನನ್ನ ಕುಟುಂಬ ಮತದಾನ ಮಾಡುವುದಕ್ಕೆ ಬಂದೆವು. ಬೂತ್ ಗೆ ಬಂದಾಗ ನಮ್ಮ ಕುಟುಂಬ ಬಿಟ್ಟು ಬೇರೆ ಯಾರು ಇರಲಿಲ್ಲ. ಮತದಾನ ನಡೆಯುತ್ತಿದೆಯಾ ಅಥವಾ ಇಲ್ಲವಾ ಎಂದು ನಮಗೆ ಗೊಂದಲವಾಗುವಂತೆ ಜನರು ಇದ್ದರು. ಹೀಗೆ ಆಗಬಾರದು. ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಮೇಘನಾ ಹಾಗೂ ತಂದೆ ಸುಂದರ್ ರಾಜ್ ಬೇಸರ ವ್ಯಕ್ತಪಡಿಸಿದರು.

  • ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ ನಟ ಕಿಶೋರ್

    ಬಿಬಿಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ ನಟ ಕಿಶೋರ್

    ಕಾಂತಾರ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಟ ಕಿಶೋರ್ (Kishor), ಬಿಬಿಎಂಪಿ (BBMP) ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವರಕೆರೆ (Devarakere) ಕುರಿತಂತೆ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ಅವರು ಬಿಬಿಎಂಪಿ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ, ದೇವರಕೆರೆ ಉಳಿಸುವಂತೆ ಅವರು ಜನತೆಗೆ ಮನವಿ ಮಾಡಿದ್ದಾರೆ.

    ಬೆಂಗಳೂರು (Bangalore) ದಕ್ಷಿಣ ಭಾಗದಲ್ಲಿರುವ ದೇವರಕೆರೆಗೆ 1000 ವರ್ಷಗಳ ಇತಿಹಾಸವಿದೆ. ಇದು ಹೊಯ್ಸಳ ಕಾಲದ ಕೆರೆ ಎಂದು ಹೇಳಲಾಗುತ್ತದೆ. ಮೊದಲು ಈ ಕೆರೆಯು ಅರಣ್ಯ ಇಲಾಖೆಯ ಸುಪರ್ದಿಯಲ್ಲಿತ್ತು. ಹತ್ತು ವರ್ಷಗಳ ಹಿಂದೆಯಷ್ಟೇ ಅರಣ್ಯ ಇಲಾಖೆಯು ಈ ಕೆರೆಯನ್ನು ಬಿಬಿಎಂಪಿ ಹಸ್ತಾಂತರ ಮಾಡಲಾಗಿದೆಯಂತೆ. ಅರಣ್ಯ ಇಲಾಖೆಯ ಸುಪರ್ದಿಯಲ್ಲಿದ್ದಾಗ ಶುದ್ಧ ನೀರಿನಿಂದ ಈ ಕೆರೆಯು ತುಂಬಿರುತ್ತಿತ್ತು ಎಂದಿದ್ದಾರೆ ಕಿಶೋರ್.

    ಬಿಬಿಎಂಪಿ ತೆಕ್ಕೆಗೆ ಈ ಕೆರೆಯು ಯಾವಾಗ ಬಂತೋ ಅಲ್ಲಿಂದ ಹದಗೆಡಲು ಶುರುವಾಯಿತು ಎನ್ನುವುದು ಕಿಶೋರ್ ಆರೋಪ. ಅಭಿವೃದ್ಧಿ ಹೆಸರಿನಲ್ಲಿ ಈ ಕೆರೆಯನ್ನು ಕೊಂದುಬಿಟ್ಟಿದೆ ಬಿಬಿಎಂಪಿ ಎಂದಿದ್ದಾರೆ ನಟ. ಈ ಕೆರೆಯು ಹಾಳಾಗುವುದಕ್ಕೆ ಅನಗತ್ಯ ಕಾಮಗಾರಿಗಳಂತೆ. ಅಭಿವೃದ್ಧಿ ಹೆಸರಿನಲ್ಲಿ ಕೇವಲ ಐದೇ ಐದು ವರ್ಷದಲ್ಲಿ ಕೆರೆಯನ್ನು ಸಾಯಿಸಿದ್ದಾರೆ ಎನ್ನುವುದು ಕಿಶೋರ್ ಆರೋಪ.  ಇದನ್ನೂ ಓದಿ:ಅಖಿಲ್ ಅಕ್ಕಿನೇನಿ ಜೊತೆ ಜಾನ್ವಿ ಕಪೂರ್ ರೊಮ್ಯಾನ್ಸ್

    ಕಿಶೋರ್ ಕಾಳಜಿಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕೆರೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ದೊಡ್ಡದೊಂದು ಆಂದೋಲನವೇ ಶುರುವಾಗಬೇಕು ಎಂದಿದ್ದಾರೆ. ಸ್ಥಳೀಯ ನಿವಾಸಿಗಳು ಈ ಕೆರೆಯ ಕುರಿತು ದೊಡ್ಡಮಟ್ಟದಲ್ಲೇ ಧ್ವನಿ ಎತ್ತಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ.

  • ನಟ ಶರತ್ ಬಾಬು ಆರೋಗ್ಯ ಮತ್ತಷ್ಟು ಗಂಭೀರ: ಹಿರಿಯ ವೈದ್ಯರಿಂದ ಚಿಕಿತ್ಸೆ

    ನಟ ಶರತ್ ಬಾಬು ಆರೋಗ್ಯ ಮತ್ತಷ್ಟು ಗಂಭೀರ: ಹಿರಿಯ ವೈದ್ಯರಿಂದ ಚಿಕಿತ್ಸೆ

    ನ್ನಡದ ಅಮೃತವರ್ಷಿಣಿ (Amrutavarshini) ಸೇರಿದಂತೆ ದಕ್ಷಿಣದ ನಾನಾ ಭಾಷೆಗಳ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟ ಶರತ್ ಬಾಬು (Sharat Babu) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಮೂಲಗಳ ಪ್ರಕಾರ ಅವರ ಕಿಡ್ನಿ, ಲಿವರ್, ಲಂಗ್ಸ್ ಸೇರಿದಂತೆ ಮತ್ತಿತರ ಅಂಗಾಂಗ ತೊಂದರೆಯಿಂದ ಅವರು ಬಳಲುತ್ತಿದ್ದಾರಂತೆ. ನುರಿತ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆಯಂತೆ.

    ಸದ್ಯ ವೆಂಟಿಲೇಟರ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯದ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯುತ್ತಿದ್ದರು. ದಿಢೀರ್ ಅಂತ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಕಾರಣದಿಂದಾಗಿ ಅವರನ್ನು ಹೈದರಾಬಾದ್ (Hyderabad) ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.  ಇದನ್ನೂ ಓದಿ:ಎಲೋನ್ ಮಸ್ಕ್ ಬಗ್ಗೆ ಸಿಟ್ಟಾದ ಬಿಗ್ ಬಿ: ಹಣ ಕಳೆದುಕೊಂಡ ಬಗ್ಗೆ ಅಮಿತಾಭ್ ಕಿಡಿಕಿಡಿ

    ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ಶಿಫ್ಟ್ ಮಾಡಿದ ನಂತರ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು, ಅಲ್ಲದೇ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಸಾಮಾನ್ಯ ವಾರ್ಡ್ ಗೆ ಸ್ಥಳಾಂತರ ಮಾಡುವ ಕುರಿತು ವೈದ್ಯರು ನಿರ್ಧಾರ ತಗೆದುಕೊಂಡಿದ್ದಾರೆ ಎನ್ನುವ ಮಾಹಿತಿಯೂ ಇತ್ತು. ಆದರೆ, ಮತ್ತೆ ದಿಢೀರ್ ಅಂತ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆಯಂತೆ.

    ನಾಲ್ಕು ದಶಕಗಳ ಕಾಲ ಚಿತ್ರೋದ್ಯಮದಲ್ಲಿ ಕಲಾವಿದರಾಗಿ ಗುರುತಿಸಿಕೊಂಡಿರುವ ಶರತ್ ಬಾಬು, ಹುಟ್ಟಿದ್ದು ಆಂಧ್ರಪ್ರದೇಶದಲ್ಲಿ. ಆದರೂ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಅವರು ನಟಿಸಿದ್ದಾರೆ. ಕನ್ನಡದಲ್ಲಿ ಅವರು ಅಮೃತವರ್ಷಿಣಿ ಶರತ್ ಬಾಬು ಎಂದೇ ಫೇಮಸ್ ಆಗಿದ್ದಾರೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಅವರದ್ದು

  • ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ನಡುವೆ ಕ್ರಿಕೆಟ್ ವೀಕ್ಷಿಸಿದ ಧನುಷ್, ಶಿವಣ್ಣ

    ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ನಡುವೆ ಕ್ರಿಕೆಟ್ ವೀಕ್ಷಿಸಿದ ಧನುಷ್, ಶಿವಣ್ಣ

    ದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ (Shivaraj Kumar) ತಮಿಳು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ರಜನಿಕಾಂತ್ ಜೊತೆ ಜೈಲರ್ ಸಿನಿಮಾದಲ್ಲಿ ನಟಿಸುತ್ತಿದ್ದರೆ, ಧನುಷ್ (Dhanush) ಜೊತೆ ಕ್ಯಾಪ್ಟನ್ ಮಿಲ್ಲರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸತತವಾಗಿ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಶೂಟಿಂಗ್ ನಡುವೆ ಬಿಡುವು ಮಾಡಿಕೊಂಡು ಧನುಷ್ ಮತ್ತು ಶಿವರಾಜ್ ಕುಮಾರ್ ಐಪಿಎಲ್ ಪಂದ್ಯ ವೀಕ್ಷಿಸಿದ್ದಾರೆ.

    ನಿನ್ನೆ ಬೆಂಗಳೂರಿನ (Bangalore) ಚಿನ್ನಸ್ವಾಮಿ ಕ್ರೀಡಾಂಗಣಯದಲ್ಲಿ ಆಯೋಜನೆಯಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 24ನೇ ಪಂದ್ಯದಲ್ಲಿ ಬೆಂಗಳೂರಿನ ರಾಯಲ್ ಚಾಲೆಂಜರ್ಸ್ (RCB,)  ಹಾಗೂ ಚೆನ್ನೈನ ಸೂಪರ್ ಕಿಂಗ್ಸ್ (CSK) ತಂಡಗಳು ಮುಖಾಮುಖಿಯಾಗಿದ್ದವು. ರಾಯಲ್ ಚಾಲೆಂಜರ್ಸ್ ಪರವಾಗಿ ಶಿವರಾಜ್ ಕುಮಾರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಧನುಷ್ ಬೆಂಬಲಿಸಿದರು. ಜೊತೆಗೆ ಒಟ್ಟಿಗೆ ಕೂತು ಪಂದ್ಯ ವೀಕ್ಷಿಸಿದ್ದು ವಿಶೇಷವಾಗಿತ್ತು. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 8 ರನ್‍ ಗಳ ರೋಚಕ ಗೆಲುವನ್ನು ಕಂಡಿದೆ. ಶಿವರಾಜ್ ಕುಮಾರ್ ಹಾಗೂ ಧನುಷ್ ಒಟ್ಟಿಗೆ ಕೂತು ಪಂದ್ಯ ವೀಕ್ಷಿಸಿದ ಫೋಟೋಗಳು ವೈರಲ್ ಆಗಿವೆ. ಇದನ್ನೂ ಓದಿ:ಸೀರೆಯುಟ್ಟು ಮಿಂಚಿದ ನಿವೇದಿತಾಗೆ ರಾ ರಾ ನಾಗವಲ್ಲಿ ಎಂದ ನೆಟ್ಟಿಗರು

    ರಜನಿಕಾಂತ್ ನಟನೆಯ ಜೈಲರ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ವಿಶೇಷ ಪಾತ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ,  ಪಾತ್ರ ಯಾವುದು, ಹಿನ್ನೆಲೆ ಏನು ಎನ್ನುವ ವಿಚಾರ ಈವರೆಗೂ ಚಿತ್ರತಂಡ ಬಿಟ್ಟು ಕೊಟ್ಟಿಲ್ಲ. ಸ್ವತಃ ಶಿವರಾಜ್ ಕುಮಾರ್ ಕೂಡ ಈತನಕ ಹೇಳಿಕೊಂಡಿಲ್ಲ. ಪಾತ್ರ ಮತ್ತು ಕಥೆಯ ಬಗ್ಗೆ ಗೌಪ್ಯತೆ ಕಾಪಾಡಿಕೊಂಡು ಬರಲಾಗುತ್ತಿದೆ.

    ಆದರೆ, ಆಕಸ್ಮಿಕ ಎನ್ನುವಂತೆ ಧನುಷ್ ಜೊತೆ ಮಾಡುತ್ತಿದ್ದ ಕ್ಯಾಪ್ಟನ್ ಮಿಲ್ಲರ್ (Captain Miller) ಸಿನಿಮಾದ ಕೆಲವು ವಿಷಯಗಳು ಸೋರಿಕೆಯಾಗಿವೆ. ಅಂದರೆ, ಶಿವರಾಜ್ ಕುಮಾರ್ ಅವರಿಗೆ ಕೇಶವಿನ್ಯಾಸ ಮಾಡುತ್ತಿರುವ ರಾಜು ಎನ್ನುವವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಪಾತ್ರ ಮತ್ತು ಸಿನಿಮಾದ ಕಥೆಯನ್ನೂ ಅವರು ಬಿಟ್ಟುಕೊಟ್ಟಿದ್ದಾರೆ.

    ಕಾಡು ಜನರು ಮತ್ತು ಬ್ರಿಟಿಷ್ ರ ನಡುವಿನ ಹೋರಾಟದ ಕಥೆಯನ್ನು ಕ್ಯಾಪ್ಟನ್ ಮಿಲ್ಲರ್ ನಲ್ಲಿ ಹೇಳುತ್ತಿದ್ದಾರಂತೆ ನಿರ್ದೇಶಕರು. ಈ ಸಿನಿಮಾದಲ್ಲಿ ಕಾಡು ಜನರ ಪಾತ್ರದಲ್ಲಿ ಶಿವಣ್ಣ ಮತ್ತು ಧನುಷ್ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಧನುಷ್ ಅಣ್ಣನ ಪಾತ್ರದಲ್ಲಿ ಶಿವರಾಜ್ ಕುಮಾರ್ ನಟಿಸಿದ್ದಾರಂತೆ.

  • RCB ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ನಿರ್ದೇಶಕ ಸಿಂಪಲ್ ಸುನಿ

    RCB ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ನಿರ್ದೇಶಕ ಸಿಂಪಲ್ ಸುನಿ

    ಮೊದಲಿನಿಂದಲೂ ಆರ್ ಸಿ ಬಿ (RCB) ಟೀಮ್ ಅನ್ನು ಬೆಂಬಲಿಸುತ್ತಾ ಬಂದಿರುವ ಸ್ಯಾಂಡಲ್ ವುಡ್ ನಿರ್ದೇಶಕ ಸಿಂಪಲ್ ಸುನಿ (Simple Suni), ನಿನ್ನೆ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಆರ್ ಸಿ ಬಿ ಸೋತಿರುವುದಕ್ಕೆ (Loss) ಬೇಸರ ವ್ಯಕ್ತ ಪಡಿಸಿದ್ದಾರೆ. ಮುಂದಿನ ಮ್ಯಾಚ್ ಕೂಡ ಸೋಲಿರಿ ಎಂದು ಅಚ್ಚರಿಯ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ಆಶಾಭಾವವನ್ನೂ ಅವರು ವ್ಯಕ್ತ ಪಡಿಸಿದ್ದು, 17ನೇ ತಾರೀಖು ಮ್ಯಾಚ್ ನಮ್ಮದೇ ಆಗಬೇಕು ಎಂದಿದ್ದಾರೆ.

    ಈ ಕುರಿತು ಸರಣಿಯ ಟ್ವೀಟ್ ಮಾಡಿರುವ ಸುನಿ, ‘ಧೋನಿ ಮೇಲೆ ರೆಸ್ಪೆಕ್ಟ್ ಇದೆ. ಸಿಎಸ್ ಕೆ ಮೇಲೆ ಜಿದ್ದಿದೆ, ಆರ್ ಸಿ ಬಿ ಮೇಲೆ ಪ್ರಾಣಾನೇ ಇದೆ’ ಎಂದು ಕಾವ್ಯಾತ್ಮಕವಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ಆರ್ ಸಿ ಬಿ ಸತತವಾಗಿ ಎರಡು ಪಂದ್ಯವನ್ನು ಸೋತಿದೆ. ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಆರ್ ಸಿ ಬಿ ಚೆನ್ನಾಗಿಯೇ ಆಡಿತ್ತು. ಹಾಗಾಗಿ ಈ ಪಂದ್ಯವನ್ನು ಗೆಲ್ಲುತ್ತದೆ ಎಂದು ನಂಬಿಕೆಯಿತ್ತು. ಕೊನೆ ಗಳಿಗೆಯಲ್ಲಿ ನಂಬಿಕೆ ಹುಸಿ ಆಯಿತು. ಇದನ್ನೂ ಓದಿ: ಮಗಳ ಮುದ್ದಾದ ಫೋಟೋ ಹಂಚಿಕೊಂಡ ನಟಿ ಮಾನಸ ಜೋಶಿ

    ನಿನ್ನೆಯ ಸೋಲು ಕೂಡ ಅನೇಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಮುಂದಿನ 15ನೇ ತಾರೀಖು ಮತ್ತು 17ನೇ ತಾರೀಖು ಎರಡು ಪಂದ್ಯಗಳಿವೆ. 17ನೇ ತಾರೀಖಿನ ಪಂದ್ಯ ಮಹತ್ವದ್ದು ಆಗಿರುವುದರಿಂದ 15ನೇ ತಾರೀಖು ಮ್ಯಾಚ್ ಸೋತರೂ, 17ಕ್ಕೆ ಸೋಲುವಂತಿಲ್ಲ ಎಂದು ಸಿಂಪಲ್ ಸುನಿ ಟ್ವೀಟ್ ಮಾಡಿದ್ದಾರೆ.

    ಮತ್ತೊಂದು ಟ್ವೀಟ್ ಮಾಡಿರುವ ಸುನಿ, ‘ವೈಡ್ ಬಾಲ್ ಹಾಕೋದು ಬಿಡೋಲ್ಲ. ಬ್ಯಾಟಿಂಗ್ ಚೆನ್ನಾಗಿ ಮಾಡಿದ್ರೆ ಬೌಲಿಂಗ್ ಮಾಡೋಲ್ಲ. ಬೌಲಿಂಗ್ ಮಾಡಿದ್ರೆ ಬ್ಯಾಟಿಂಗ್ ಆಡೋಲ್ಲ. ಕರ್ನಾಟಕ ಪ್ಲೇಯರ್ಸ್ ನ ತಗೋಳಲ್ಲ. ಬ್ಯಾಂಗಳೂರ್ ನ ಬೆಂಗಳೂರು ಮಾಡಲ್ಲ. ಆದರೂ ನಮ್ ಕರ್ಮ ದ್ವೇಷಿಸೋಕೆ ನಮಗ್ ಬರೋಲ್ಲ. ನಿಮ್ಮ ಮೇಲೆ ಅಭಿಮಾನ ಕಮ್ಮಿ ಆಗಿಲ್ಲ. ಸ್ಟೇಟಸ್ ಹಾಕ್ದೆ ಮಲಗೋಲ್ಲ’ ಎಂದು ಬರೆದಿದ್ದಾರೆ.

  • Special-ಬೆಂಗಳೂರು ಚಿತ್ರೋತ್ಸವ : ಯಾವೆಲ್ಲ ಚಿತ್ರಗಳಿಗೆ ಪ್ರಶಸ್ತಿ?

    Special-ಬೆಂಗಳೂರು ಚಿತ್ರೋತ್ಸವ : ಯಾವೆಲ್ಲ ಚಿತ್ರಗಳಿಗೆ ಪ್ರಶಸ್ತಿ?

    ಬೆಂಗಳೂರಿನ (Bangalore) 14ನೇ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Film Festival) ನಿನ್ನೆ ತೆರೆ ಬಿದ್ದಿದೆ. ಚಿತ್ರೋತ್ಸವದ ಕೊನೆಯ ದಿನ ಸ್ಪರ್ಧೆಯಲ್ಲಿದ್ದ ಮೂರು ವಿಭಾಗಗಳಿಗೆ ಪ್ರಶಸ್ತಿಯನ್ನು (Awards) ಘೋಷಿಸಲಾಗಿದೆ. ಸಮಾರೋಪ ಸಮಾರಂಭಕ್ಕೂ ಒಂದು ದಿನ ಮುಂಚೆಯೇ ಫೇಸ್ ಬುಕ್ ನಲ್ಲಿ ಹಲವು ಸಿನಿಮಾಗಳಿಗೆ ಪ್ರಶಸ್ತಿ ಬಂದಿದೆ ಎಂದೂ, ಅವುಗಳನ್ನು ದುಡ್ಡು ಪಡೆದು ಪಡೆಯಲಾಗಿದೆ ಎಂದು ಭಾರೀ ಚರ್ಚೆ ನಡೆದಿತ್ತು. ಆ ಚರ್ಚೆಯಲ್ಲಿ ಕಂಡಂತಹ ಸಿನಿಮಾಗಳಿಗೂ ಪ್ರಶಸ್ತಿ ನೀಡಲಾಗಿದೆ. ಹಾಗಾಗಿ ಪ್ರಶಸ್ತಿಯ ಪಾರದರ್ಶಕತೆಯ ಬಗ್ಗೆಯೂ ಮಾತನಾಡಲಾಗುತ್ತಿದೆ.

    ಚರ್ಚೆಗಳಾಚೆ ಏನೇ ಇದ್ದರೂ ಮೂರು ವಿಭಾಗಗಳಲ್ಲಿ ನಿನ್ನೆ ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ನಿನ್ನೆಯೇ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನವನ್ನೂ ಮಾಡಲಾಗಿದೆ. ಕನ್ನಡದ ಹಿರಿಯ ನಟ ದೊಡ್ಡಣ್ಣ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದರೆ, ಇಂಡೋನೇಷ್ಯಾದ ‘ಬಿಫೋರ್ ನೌ ಅಂಡ್ ದೆನ್’ ಹಾಗೂ ಇರಾನ್ ನ ‘ಮದರ್ ಲೆಸ್’ ಚಿತ್ರಗಳು ಏಷ್ಯನ್ ವಿಭಾಗದಲ್ಲಿ ಉತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿವೆ.

    ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಚಿತ್ರವಾಗಿ ಕೃಷ್ಣೆಗೌಡ ನಿರ್ದೇಶನದ ‘ನಾನು ಕುಸುಮಾ’ ಪ್ರಶಸ್ತಿ ಬಾಚಿಕೊಂಡರೆ, ಅತ್ಯುತ್ತಮ ದ್ವಿತೀಯ ಚಿತ್ರವಾಗಿ ಪೃಥ್ವಿ ಕೊಣನೂರು ನಿರ್ದೇಶನದ ‘ಹದಿನೇಳೆಂಟು’, ಅತ್ಯುತ್ತಮ ತೃತೀಯ ಚಿತ್ರವಾಗಿ ಉತ್ಸವ್ ಗೋನಾವರ್ ಅವರ ‘ಫೋಟೋ ‘ ಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಇದನ್ನೂ ಓದಿ: ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌; ಮಾ.31 ರಿಂದ IPL ಧಮಾಕ – ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

    ಚಿತ್ರ ಭಾರತಿ –ಭಾರತೀಯ  ಚಿತ್ರ ವಿಭಾಗದಲ್ಲಿ ಚಂಪಾ ಶೆಟ್ಟಿ ನಿರ್ದೇಶನದ ಕನ್ನಡದ ‘ಕೋಳಿ ಎಸ್ರು’ ಅತ್ಯುತ್ತಮ ಚಿತ್ರವಾಗಿ, ತರುಣ್ ಮೂರ್ತಿ ಅವರ ಮಲಯಾಳಂ ಸಿನಿಮಾ ‘ಸೌದಿ ವೆಲ್ಲಕ ಸಿಸಿ’ ಸಿನಿಮಾ ದ್ವಿತೀಯ ಅತ್ಯುತ್ತಮ ಚಿತ್ರವಾಗಿ ಗೌತಮ್ ರಾಮಚಂದ್ರನ್ ನಿರ್ದೇಶನದ ತಮಿಳು ಸಿನಿಮಾ ‘ಗಾರ್ಗಿ’ ಅತ್ಯುತ್ತಮ ತೃತೀಯ ಚಿತ್ರ ಪ್ರಶಸ್ತಿಯನ್ನು ಪಡೆದವು.

    ಏಷ್ಯನ್ ವಿಭಾಗದಲ್ಲಿ ಇಂಡೋನೇಷ್ಯಾದ ಕಮಿಲಾ ಅಂದಿನಿ ನಿರ್ದೇಶನದ ‘ಬಿಫೋರ್ ನೌ ಅಂಡ್ ದೆನ್’ ಹಾಗೂ ಸಯ್ಯದ್ ಮೊರ್ತೆಜಾ ಫೆತಮಿ ನಿರ್ದೇಶನದ ಇರಾನ್ ಸಿನಿಮಾ ‘ಮದರ್ ಲೆಸ್’ ಸಿನಿಮಾ ಅತ್ಯುತ್ತಮ ಸಿನಿಮಾವಾಗಿ ಹೊರಹೊಮ್ಮಿವೆ. ವಿಶಕೆಸ್ ಚಂದ್ರಶೇಖರಮ್ ನಿರ್ದೇಶನದ ಶ್ರೀಲಂಕಾ ಚಿತ್ರ ‘ಸ್ಯಾಂಡ್’ ಅತ್ಯುತ್ತಮ ದ್ವಿತೀಯ ಚಿತ್ರವಾಗಿ, ಅಕ್ರಂ ಖಾನ್ ನಿರ್ದೇಶನದ ಬಾಂಗ್ಲಾದೇಶದ ‘ಎ ಟೇಲ್ ಆಫ್ ಟು ಸಿಸ್ಟರ್’ ಹಾಗೂ ಬಿ.ಎಸ್.ಲಿಂಗದೇವರು ನಿರ್ದೇಶನದ ಕನ್ನಡದ ‘ವಿರಾಟಪುರ ವಿರಾಗಿ’ ಸಿನಿಮಾ ತೃತೀಯ ಸ್ಥಾನವನ್ನು ಪಡೆದುಕೊಂಡಿವೆ.

    ವಿಧಾನಸೌಧದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ವಾರ್ತಾ ಇಲಾಖೆಯ ನಿರ್ದೇಶಕ ಡಿ.ಪಿ. ಮುರಳಿಧರ್, ಆಯುಕ್ತ ಪಿ.ಎಸ್. ಹರ್ಷ ಮತ್ತು ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ನರಹರಿ ರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನವನ್ನು ಮಾಡಿದರು.

  • ಬೆಂಗಳೂರು ಐಕಾನ್ ಆಗಿ ಗಾಯಕ ಮೋಹನ್, ನಟ ಮಾಸ್ಟರ್ ಆನಂದ್ ಆಯ್ಕೆ

    ಬೆಂಗಳೂರು ಐಕಾನ್ ಆಗಿ ಗಾಯಕ ಮೋಹನ್, ನಟ ಮಾಸ್ಟರ್ ಆನಂದ್ ಆಯ್ಕೆ

    ತದಾರರಿಗೆ ಜಾಗೃತಿ ಮೂಡಿಸುವುದಕ್ಕಾಗಿ ಬೃಹತ್ ಬೆಂಗಳೂರು (Bangalore) ಮಹಾನಗರ ಪಾಲಿಕೆ (BBMP) ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ. ಅದರಲ್ಲೂ ಬೆಂಗಳೂರು ವ್ಯಾಪ್ತಿಯಲ್ಲಿ ಈಗಾಗಲೇ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅದರ ಭಾಗವಾಗಿ ಇದೀಗ ಬೆಂಗಳೂರು ಐಕಾನ್ ಗಳೆಂದು (Icon)  ಐವರು ಪ್ರಮುಖ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

    ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿರುವಂತಹ ಐದು ವ್ಯಕ್ತಿಗಳನ್ನು ಬೆಂಗಳೂರು ಐಕಾನ್ ಹೆಸರಿನಲ್ಲಿ ಆಯ್ಕೆ ಮಾಡಲಾಗಿದ್ದು, ಇವರು ಬೆಂಗಳೂರಿನ ಮತದಾರರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದಾರೆ. ಹೆಚ್ಚು ಮತದಾನ ಆಗುವಂತೆ ನೋಡಿಕೊಳ್ಳಲಿದ್ದಾರೆ. ಈ ಐವರಲ್ಲಿ ಕನ್ನಡ ಸಿನಿಮಾ ರಂಗದ ಒಬ್ಬರು ಗಾಯಕರನ್ನು ಮತ್ತು ನಟರನ್ನು ಬಿಬಿಎಂಪಿ ಆಯ್ಕೆ ಮಾಡಿಕೊಂಡಿದೆ. ಇದನ್ನೂ ಓದಿ:ನಮ್ಮ ನಡುವೆ ಏನಿಲ್ಲ, ಡಾಲಿಗೆ ಹೆಣ್ಣು ಕೊಡುತ್ತಿಲ್ಲ: ನಟಿ ಅಮೃತಾ

    ಬಾಲ್ಯದಿಂದಲೂ ಸಿನಿಮಾ ರಂಗದಲ್ಲಿ ಸಕ್ರೀಯರಾಗಿರುವ ಮಾಸ್ಟರ್ ಆನಂದ್ಅ (Master Anand)ವರನ್ನು ಬೆಂಗಳೂರು ಐಕಾನ್ ಎಂದು ಗುರುತಿಸಿರುವ ಬಿಬಿಎಂಪಿ, ಇವರ ಮೂಲಕ ಮತದಾನದ ಜಾಗೃತಿಗೆ ಮುಂದಾಗುತ್ತಿದೆ. ಕನ್ನಡ ಕಿರುತೆರೆ ಮತ್ತು ಹಿರಿತೆರೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಆನಂದ್, ಈಗಾಗಲೇ ಅನೇಕ ಸಮಾಜಮುಖಿ ಕೆಲಸಗಳಿಗೆ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

    ಶಿವರಾಜ್ ಕುಮಾರ್ ನಟನೆಯ ವೇದ ಸಿನಿಮಾದಲ್ಲಿ ಜುಂಜಪ್ಪ ಗೀತೆಯನ್ನು ಹಾಡಿರುವ ಗಾಯಕ ಮೋಹನ್ ಕುಮಾರ್ (Mohan Kumar) ಕೂಡ ಬೆಂಗಳೂರು ಐಕಾನ್ ಆಗಿ ಆಯ್ಕೆ ಮಾಡಲಾಗಿದೆ. ಕಾಡುಗೊಲ್ಲರ  ಹಾಡುಗಳನ್ನು ಹಾಡುತ್ತಾ ಗಮನ ಸೆಳೆದಿರುವ ಮೋಹನ್ ಅವರಿಗೆ ಇತ್ತೀಚೆಗಷ್ಟೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯು ಅತ್ಯುತ್ತಮ ಗಾಯಕ ಪ್ರಶಸ್ತಿ ನೀಡಿ ಗೌರವಿಸಿತ್ತು.

  • Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

    Biffes 2023- ಇಂದು ಸಂಜೆ 4.30ಕ್ಕೆ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ

    14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ (Bangalore International Film Festival) ಇಂದಿನಿಂದ ಆರಂಭವಾಗಲಿದ್ದು ಸಂಜೆ 4.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಚಾಲನೆ ನೀಡಲಿದ್ದಾರೆ. ಆರ್.ಆರ್.ಆರ್ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ (Vijayendra Prasad) ಮುಖ್ಯ ಅತಿಥಿಯಾಗಿ ಬರುತ್ತಿದ್ದು, ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ವಿಧಾನಸೌಧದ ಮೆಟ್ಟಿಲು ಮೇಲೆ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

    ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದು, ಹರ್ಷಿಕಾ ಪೂಣಚ್ಚ ದೀಪ ಕಾರ್ಯಕ್ರಮಕ್ಕೆ ನೆರವು ನೀಡಲಿದ್ದಾರೆ. ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಇದನ್ನೂ ಓದಿ: ಮೊದಲ ಪ್ಯಾನ್ ಇಂಡಿಯಾ ಮಕ್ಕಳ ಚಿತ್ರಕ್ಕೆ ರಾಗಿಣಿ ದ್ವಿವೇದಿ ಸಾಥ್

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಆಯೋಜಿಸಿರುವ ಈ ಚಿತ್ರೋತ್ಸವ ಮಾರ್ಚ್ 23 ರಿಂದ ಆರಂಭವಾಗಿ 30ನೇ ತಾರೀಖಿನವರೆಗೂ ನಡೆಯಲಿದೆ. ಇನ್ನೂರಕ್ಕೂ ಹೆಚ್ಚು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ಈ ಬಾರಿ ಅತೀ ಹೆಚ್ಚು ಕನ್ನಡ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವುದು ವಿಶೇಷ.

    ಈ ಚಿತ್ರೋತ್ಸವದಲ್ಲಿ ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರತ್ಯೇಕವಾಗಿ ಕನ್ನಡ ವಿಭಾಗ, ಇಂಡಿಯನ್ ವಿಭಾಗ ಹಾಗೂ ಏಷಿಯನ್ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಕ್ರಮವಾಗಿ ಆಯಾ ವಿಭಾಗದಲ್ಲಿ ಮೂರು ಚಿತ್ರಗಳಿಗೆ ಪ್ರಶಸ್ತಿ ನೀಡಲಾಗುವುದು. ಮೊದಲ ಪ್ರಶಸ್ತಿ ಬಂದ ಚಿತ್ರಕ್ಕೆ ಹತ್ತು ಲಕ್ಷ ರೂಪಾಯಿ ಬಹುಮಾನ ಕೂಡ ಇದೆ. ಚಿತ್ರೋತ್ಸವದ ಕೊನೆಯ ದಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ

    ಮಾರ್ಚ್ 24 ರಿಂದ ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್ ನಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ. ಚಿತ್ರ ಪ್ರದರ್ಶನ, ಗೋಷ್ಠಿಗಳು, ಸಂದರ್ಶನ, ಸಿನಿಮಾ ಸ್ಪರ್ಧೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಚಿತ್ರೋತ್ಸವದ ಭಾಗವಾಗಿ ಆಯೋಜನೆ ಮಾಡಿದ್ದಾರೆ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್ ಕಶ್ಯಪ್.