Tag: Bangaluru

  • ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥ ಪೂರೈಕೆ ಮಾಡಿದ್ರೆ ಕಠಿಣ ಕ್ರಮ- ಲಕ್ಷ್ಮಿ ಹೆಬ್ಬಾಳ್ಕರ್

    ಅಂಗನವಾಡಿ ಕೇಂದ್ರಗಳಿಗೆ ಕಳಪೆ ಆಹಾರ ಪದಾರ್ಥ ಪೂರೈಕೆ ಮಾಡಿದ್ರೆ ಕಠಿಣ ಕ್ರಮ- ಲಕ್ಷ್ಮಿ ಹೆಬ್ಬಾಳ್ಕರ್

    ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ (Anganwadi Centers) ಕಳಪೆ ಆಹಾರ ಪೂರೈಕೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಎಚ್ಚರಿಕೆ ನೀಡಿದರು.

    ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಅಂಗನವಾಡಿ ಕೇಂದ್ರಗಳಲ್ಲಿ ಆಹಾರ ಪದಾರ್ಥಗಳ ಕಳಪೆ ಗುಣಮಟ್ಟದ ಪೂರೈಕೆಯಲ್ಲಿ ಆಗುತ್ತಿದೆ. ಇದೊಂದು ದೊಡ್ಡ ಮಾಫಿಯಾ ಇದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕೂಡಲೇ ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಅಂತ ನಾರಾಯಣಸ್ವಾಮಿ ಆಗ್ರಹಿಸಿದರು. ಇದನ್ನೂ ಓದಿ: ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್

    ಇದಕ್ಕೆ ಉತ್ತರಿಸಿದ ಸಚಿವೆ, ರಾಜ್ಯದಲ್ಲಿ 67,570 ಅಂಗನವಾಡಿ ಕೇಂದ್ರಗಳು ಮತ್ತು 2,329 ಮಿನಿ ಅಂಗನವಾಡಿ ಕೇಂದ್ರಗಳು ಸೇರಿ ಒಟ್ಟು 69,899 ಅಂಗನವಾಡಿ ಕೇಂದ್ರಗಳಿವೆ. 39,50,179 ಮಕ್ಕಳು ಇಲ್ಲಿ ದಾಖಲಾಗಿ ಸೌಲಭ್ಯ ಪಡೆಯುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಆಗುವ ಆಹಾರ ಪದಾರ್ಥ ಕಳಪೆ ಗುಣಮಟ್ಟ ಆಗಿರೋದು ಗಮನಕ್ಕೆ ಬಂದಿದೆ. ಕಲಬುರಗಿಯಲ್ಲಿ ಇಂತಹ ಕೇಸ್ ಗಮನಕ್ಕೆ ಬಂದಿದೆ. ಈ ಕೇಂದ್ರಕ್ಕೆ ನೊಟೀಸ್ ನೀಡಲಾಗಿದೆ. ಕಳಪೆ ಮೊಟ್ಟೆ ಪ್ರಕರಣಗಳೂ ನನ್ನ ಗಮನಕ್ಕೆ ಬಂದಿದೆ. ಈ‌ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕೆಂಪು ಸುಂದರಿ ಜಾಗಕ್ಕೆ ಹುಣಸೆ ಹಣ್ಣು ಎಂಟ್ರಿ- ಡಿಮ್ಯಾಂಡ್ ಬೆನ್ನಲ್ಲೇ ದರ ಏರಿಕೆ

    ಮಗುವಿನ ಆರೋಗ್ಯಕ್ಕಾಗಿ ಸರ್ಕಾರ ದಿನಕ್ಕೆ 8 ರೂ. ಕೊಡುತ್ತಿದೆ. ನಾನೇ ಒಂದು ಅಂಗನವಾಡಿ ಕೇಂದ್ರಕ್ಕೆ ಹೋಗಿ‌‌ ನೋಡಿದೆ. ನನಗೇ ನಾಚಿಕೆ ಆಯ್ತು. ನಾನು ವಿಸಿಟ್ ಮಾಡಿದ ಕೇಂದ್ರ‌ ಮುಚ್ಚಿಸಿದ್ದೇನೆ. ಯಾರೇ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದರೂ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ತೀವಿ. ಇಲಾಖೆಯಲ್ಲಿ ವಿಕೇಂದ್ರೀಕರಣದಿಂದ ಸಮಸ್ಯೆ ಅಗ್ತಿದೆ. ಹೀಗಾಗಿ ಏಕೀಕೃತ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ತೀವಿ ಎಂದು ವಿವರಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್

    ಮೊಟ್ಟೆ ವಿತರಣೆ ಬಗ್ಗೆ ನಿಗಾವಹಿಸಲು ಸ್ಪೆಷಲ್‌ ಟಾಸ್ಕ್‌ ಫೋರ್ಸ್‌ ರಚನೆ ಮಾಡ್ತೀವಿ – ಲಕ್ಷ್ಮಿ ಹೆಬ್ಬಾಳ್ಕರ್

    – ಕಳಪೆ ಮೊಟ್ಟೆ ವಿತರಿಸಿದರನ್ನ ಕಪ್ಪುಪಟ್ಟಿಗೆ ಸೇರಿಸಲು ತೀರ್ಮಾನ ಎಂದ ಸಚಿವೆ

    ಬೆಂಗಳೂರು: ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ (Egg Distribution) ಕುರಿತು ನಿಗಾವಹಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ತಿಳಿಸಿದ್ದಾರೆ.

    ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ವಿತರಣೆ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿಧಾನಸೌಧದಲ್ಲಿ ಮಾತನಾಡಿ, ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನ, ಪೂರೈಕೆ ಮಾಡುವವರನ್ನ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಮೊಟ್ಟೆ ವಿತರಕರ ಪಟ್ಟಿಯಿಂದಲೂ ಅವರನ್ನ ಕೈಬಿಡಲಾಗುವುದು ಎಂದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: 4 ದಿನಗಳ ಅಂತರದಲ್ಲಿ 2ನೇ ಪ್ರಕರಣ ಬಯಲಿಗೆ – ಗರ್ಭಿಣಿ, ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಣೆ

    ಖರೀದಿ ವಿಕೇಂದ್ರೀಕರಣ ಮಾಡಿದ್ದರಿಂದಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿಯಾಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೇ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ. ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ. ಕಳಪೆ ಮೊಟ್ಟೆ ವಿತರಣೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗರ್ಭಿಣಿ, ಬಾಣಂತಿಯರಿಗೆ ಕೆಟ್ಟಿರುವ ಮೊಟ್ಟೆಗಳ ವಿತರಣೆ

    ವಿಕೇಂದ್ರೀಕರಣ ಮಾದರಿಯ ಖರೀದಿಯಿಂದ ಪ್ರಾಮಾಣಿಕ ಪೂರೈಕೆ ಆಗ್ತಿಲ್ಲ. ಈ ನಿಟ್ಟಿನಲ್ಲಿ ಖರೀದಿ ವ್ಯವಸ್ಥೆ ಕೇಂದ್ರೀಕರಣ ಮಾಡಲು ಕ್ರಮವಹಿಸಲಾಗುವುದು. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ತಿಳಿಸಿದ್ದಾರೆ. ಸರ್ಕಾರಿ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ನಡೆಯುತ್ತಿದ್ದು, ಎಲ್ಲಾ ಪ್ರಸ್ತಾಪಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಂಗ್ರೆಸ್‍ನವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ: ಬೊಮ್ಮಾಯಿ

    ಕಾಂಗ್ರೆಸ್‍ನವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ: ಬೊಮ್ಮಾಯಿ

    ಬೆಂಗಳೂರು: ಕಾಂಗ್ರೆಸ್ (Congress) ಅವರು ತಮ್ಮ ವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  (Basavaraj Bommai) ವಾಗ್ದಾಳಿ ನಡೆಸಿದ್ದಾರೆ.

    ಮತದಾರರ ಸಮೀಕ್ಷೆ ಹೆಸರಿನಲ್ಲಿ ಖಾಸಗಿತನಕ್ಕೆ ಕನ್ನ ಹಾಕಲಾಗಿದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ (BBMP) ಹಾಗೂ ಸ್ಥಳೀಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಕ್ಷಾ ಕೆಲಸವನ್ನು ಎನ್‍ಜಿಓಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ ಎಂದಿದ್ದಾರೆ.

    ಎನ್‍ಜಿಒ, ಬಿ.ಎಲ್.ಡಿ ದುರ್ಬಳಕೆ ಮಾಡಿದ್ದಾರೆ. ಆದ್ದರಿಂದ ಚುನಾವಣಾ ಆಯೋಗ ನೀಡಿರುವ ಆದೇಶದಿಂದ ಮೊದಲುಗೊಂಡು ಇಡೀ ಪ್ರಕರಣದ ಸಮಗ್ರ ತನಿಖೆಗೆ ಸೂಚನೆ ನೀಡುತ್ತೇನೆ. ನಿಜ ಹೊರಗೆ ಬರಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಟಿಪ್ಪು ಪ್ರತಿಮೆ ಬೇಡ ಎಂದ ಸಿಎಂ ಇಬ್ರಾಹಿಂ ವಿರುದ್ಧ ಚೇತನ್‌ ಕಿಡಿ – ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್

    ಕಾಂಗ್ರೆಸ್ ನನ್ನ ರಾಜೀನಾಮೆಗೆ ಒತ್ತಾಯಿಸುವುದು ಹಾಸ್ಯಾಸ್ಪದ. ಸಂಬಂಧವಿಲ್ಲದ್ದನ್ನು ಕೇಳುತ್ತಿದ್ದಾರೆ. ಅದೇ ಮಾನದಂಡವಾದರೆ ಕಾಂಗ್ರೆಸ್ ಮುಖ್ಯಮಂತ್ರಿಗಳು ಈವರೆಗೆ ಮೂರು ಬಾರಿ ರಾಜೀನಾಮೆ ನೀಡಬೇಕಿತ್ತು. ಇದೊಂದು ಆಧಾರರಹಿತ ಆರೋಪ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಜನರ ಸರ್ವೇ ಮಾಡಿಸಿ ಚುನಾವಣೆಗೆ ಬಳಸಿಕೊಂಡಿದೆ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ, ನಾಯಕತ್ವದ ತವರು: ಮೋದಿ

    ಬೆಂಗಳೂರು ತಂತ್ರಜ್ಞಾನ, ನಾವೀನ್ಯತೆ, ನಾಯಕತ್ವದ ತವರು: ಮೋದಿ

    ಬೆಂಗಳೂರು: ಭಾರತದಲ್ಲಿ ಮೂಲಸೌಲಭ್ಯ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್ (7,539 ಲಕ್ಷ ಕೋಟಿ)  ನಷ್ಟು ಅಗಾಧ ಮೊತ್ತವನ್ನು ಹೂಡಲಾಗುವುದು. ದೇಶದಲ್ಲಿ (India) ಬಂಡವಾಳ ಹೂಡಿಕೆದಾರರ ಪಾಲಿಗೆ ಹಿಂದಿನ ಕೆಂಪುಪಟ್ಟಿಯ ಸಮಸ್ಯೆ ಕೊನೆಗೊಂಡಿದ್ದು, ಈಗ ರತ್ನಗಂಬಳಿಯ ಸ್ವಾಗತವಿದೆ. ಅದರಲ್ಲೂ ಬೆಂಗಳೂರು (Bengaluru) ತಂತ್ರಜ್ಞಾನ (Technology), ನಾವೀನ್ಯತೆ (Innovation) ಮತ್ತು ಸಮರ್ಥ ನಾಯಕತ್ವದ (Leadership) ತವರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

    25ನೇ ಪ್ರತಿಷ್ಠಿತ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯನ್ನು (Bengaluru Tech Summit) ಉದ್ದೇಶಿಸಿ ವರ್ಚುವಲ್ ಮೂಲಕ ಮಾತನಾಡಿದ ಅವರು, ತಂತ್ರಜ್ಞಾನಕ್ಕೆ ಮಾನವೀಯ ಮತ್ತು ಪ್ರಜಾಸತ್ತಾತ್ಮಕ ಸ್ಪರ್ಶವನ್ನು ನೀಡುತ್ತಲೇ ಇರುವುದು ಭಾರತದ ಅನನ್ಯ ಸಾಧನೆಯಾಗಿದೆ. ಅದರಲ್ಲೂ ತಂತ್ರಜ್ಞಾನವು ನಮಗೆ ಬಡತನದ ವಿರುದ್ಧದ ಹೋರಾಟಕ್ಕೆ ಶಕ್ತಿಶಾಲಿ ಅಸ್ತ್ರವಾಗಿದೆ ಎಂದರು. ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಭಾರತೀಯ ಸಾಫ್ಟ್‌ವೇರ್‌ ತಂತ್ರಜ್ಞಾನ ಪಾರ್ಕ್‍ಗಳ ಒಕ್ಕೂಟದ ಸಹಯೋಗದಲ್ಲಿ ಈ ಸಮಾವೇಶವನ್ನು ಏರ್ಪಡಿಸಿದೆ. ಹೆಲ್ತ್ ಟೆಕ್, ಫಿನ್ ಟೆಕ್, ಎಡುಟೆಕ್ ಸೇರಿದಂತೆ ಎಲ್ಲ ರಂಗಗಳನ್ನೂ ಭಾರತೀಯರು ಜಾಗತಿಕ ಮಟ್ಟದಲ್ಲಿ ಮುನ್ನಡೆಸುತ್ತಿದ್ದಾರೆ. ಯುವಶಕ್ತಿಯಿಂದ ಕೂಡಿರುವ ಸಮಕಾಲೀನ ಜಗತ್ತಿನಲ್ಲಿ ಪ್ರತಿಭೆಯ ಜಾಗತೀಕರಣ ನಡೆಯುತ್ತಿದೆ. ಭಾರತದಲ್ಲಿ 81 ಸಾವಿರ ನವೋದ್ಯಮಗಳಿದ್ದು, ಯೂನಿಕಾರ್ನ್‍ಗಳಲ್ಲಿ ಪ್ರಪಂಚದ 3ನೇ ಅತಿದೊಡ್ಡ ಹಬ್ ಆಗಿದೆ. ಜೊತೆಗೆ, ಜಾಗತಿಕ ನಾವೀನ್ಯತಾ ಸೂಚ್ಯಂಕದಲ್ಲಿ ಭಾರತದ ಸ್ಥಾನಮಾನವು ಕಳೆದ ಎಂಟು ವರ್ಷಗಳಲ್ಲಿ 40 ಸ್ಥಾನಗಳಷ್ಟು ಮೇಲಕ್ಕೆ ಜಿಗಿದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ನಡದಲ್ಲಿ ಮಾತಾಡಿ, ಬೆಂಗಳೂರು ಹೊಗಳಿದ ಪ್ರಧಾನಿ ಮೋದಿ

    ತಂತ್ರಜ್ಞಾನದ ಮೂಲಕ ದೇಶದಲ್ಲಿ ಸಮಾನತೆ ಮತ್ತು ಸಬಲೀಕರಣಗಳನ್ನು ಸಾಧಿಸಲಾಗುತ್ತಿದೆ. ಜೊತೆಗೆ, ಭ್ರಷ್ಟಾಚಾರಕ್ಕೂ ಇದು ತೆರೆ ಎಳೆದಿದೆ. ಭಾರತವಂತೂ ಈಗ ಮಾಹಿತಿ ಸೂಪರ್ ಹೈವೇ ಆಗಿದೆ. ಕೊರೊನಾ (Corona) ಪಿಡುಗಿನ ವಿರುದ್ಧ ಹೋರಾಟ, ಶಿಕ್ಷಣ, ನೇರ ನಗದು ವರ್ಗಾವಣೆ, ಜನ್‍ಧನ್, ಆಧಾರೆ, ಇ-ಮಾರ್ಕೆಟ್ (E-Market) ಎಲ್ಲವನ್ನೂ ಭಾರತವು ತಂತ್ರಜ್ಞಾನದ ಸಮರ್ಥ ಬಳಕೆಯ ಮೂಲಕ ಯಶಸ್ವಿಯಾಗಿ ಕೈಗೊಂಡಿದೆ. ಹೂಡಿಕೆದಾರರ ನಂಬಿಕೆ ಮತ್ತು ದೇಶದಲ್ಲಿರುವ ತಂತ್ರಜ್ಞಾನದ ಶಕ್ತಿ ಎರಡೂ ಸೇರಿದರೆ, ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಾಧ್ಯವಾಗಲಿದೆ. ಇದು ಸಣ್ಣಪುಟ್ಟ ವ್ಯಾಪಾರಿಗಳಿಗೆ ಅನುಕೂಲಕರವಾಗಿದ್ದು, ದೊಡ್ಡ ಗ್ರಾಹಕರನ್ನು ಸೃಷ್ಟಿಸಿದೆ. ಈಗ ಗ್ರಾಮೀಣ ಭಾಗಗಳಲ್ಲಿ ಬ್ರಾಡ್‍ಬ್ಯಾಂಡ್ ಕ್ರಾಂತಿ ನಡೆಯುತ್ತಿದ್ದು, ಮೊಬೈಲ್‍ನ ವ್ಯಾಪಕ ಬಳಕೆಯಿಂದಾಗಿ ಪ್ರಪಂಚವೇ ಬೆರಗಿನಿಂದ ನೋಡುತ್ತಿರುವಂಥ ಡಿಜಿಟಲ್ ಆರ್ಥಿಕತೆ ನಮ್ಮಲ್ಲಿ ರೂಪುಗೊಂಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ‘ನಾನು ಮೋದಿ ಭಕ್ತ’ ಎಂದು ಬಹಿರಂಗವಾಗಿ ಘೋಷಿಸಿದ ನಟ ಅನಂತ್ ನಾಗ್

    ತಂತ್ರಜ್ಞಾನದ ಅಳವಡಿಕೆ ಮೂಲಕ ನಾವು 200 ಕೋಟಿಗೂ ಹೆಚ್ಚು ಕೊರೊನಾ ಲಸಿಕೆ ನೀಡಿದ್ದೇವೆ. ಹಾಗೆಯೇ 200 ದಶಲಕ್ಷ ಕುಟುಂಬಗಳ 600 ದಶಲಕ್ಷ ಜನರಿಗೆ ಆಯುಷ್ಮಾನ್ ಭಾರತ ಯೋಜನೆಯ ಮೂಲಕ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ಮಾಡಿದ್ದೇವೆ. ನಮ್ಮಲ್ಲಿ ಸಿಗುತ್ತಿರುವಷ್ಟು ಅಗ್ಗದ ದರದಲ್ಲಿ ಡೇಟಾ ಎಲ್ಲೂ ಸಿಗುತ್ತಿಲ್ಲ. ಒಟ್ಟಿನಲ್ಲಿ ತಂತ್ರಜ್ಞಾನದ ಮೂಲಕ ಭಾರತವು ಬೇರಾವ ದೇಶಕ್ಕೂ ಸಾಧ್ಯವಾಗದಂತಹ ಸಾಧನೆಗಳನ್ನು ಮಾಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯೋತ್ಸವಕ್ಕೆ ಗಿಫ್ಟ್ – ನಾಳೆಯಿಂದ ಮೊಬೈಲ್‌ನಲ್ಲೇ ಮೆಟ್ರೋ ಟಿಕೆಟ್ ಖರೀದಿಸಿ

    ರಾಜ್ಯೋತ್ಸವಕ್ಕೆ ಗಿಫ್ಟ್ – ನಾಳೆಯಿಂದ ಮೊಬೈಲ್‌ನಲ್ಲೇ ಮೆಟ್ರೋ ಟಿಕೆಟ್ ಖರೀದಿಸಿ

    ಬೆಂಗಳೂರು: ಕನ್ನಡ ರಾಜ್ಯೋತ್ಸವದ (Kannada Rajyotsava) ಹಿನ್ನಲೆಯಲ್ಲಿ ಬೆಂಗಳೂರಿನ (Bengaluru) ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ವಿಶೇಷ ಕೊಡುಗೆ ನೀಡಿದೆ.

    ಸರತಿ ಸಾಲಿನಲ್ಲಿ ನಿಂತು ಟಿಕೆಟ್ ಖರೀದಿಸುತ್ತಿದ್ದ ಪ್ರಯಾಣಿಕರ ಸಮಯ ಉಳಿತಾಯ ಮಾಡಲು ಮೊಬೈಲ್‌ನಲ್ಲೇ (Mobile) ಕ್ಯೂಆರ್ ಕೋಡ್ (QRcode) ಬಳಸಿ ಟಿಕೆಟ್ ಖರೀದಿಸುವ ವಿಶೇಷ ಸೌಲಭ್ಯವನ್ನು ಜಾರಿಗೆ ತಂದಿದೆ. ಇದನ್ನೂ ಓದಿ: ನ.1ರಿಂದ ಕಾರಿನಲ್ಲಿ ಪ್ರಯಾಣಿಸೋ ಪ್ರಯಾಣಿಕರಿಗೂ ಸೀಟ್ ಬೆಲ್ಟ್ ಕಡ್ಡಾಯ

    ಮಂಗಳವಾರದಿಂದ (ನವೆಂಬರ್ 1) ಮೊಬೈಲ್‌ನಲ್ಲಿ (Mobile) ಟಿಕೆಟ್ ಖರೀದಿಸಬಹುದಾಗಿದ್ದು, ಕ್ಯೂ ಆರ್ ಕೋಡ್ ಮೂಲಕ ಎಂಟ್ರಿ-ಎಕ್ಸಿಟ್ ಅವಕಾಶ ಪಡೆಯಬಹುದಾಗಿದೆ. ಇದು ಪ್ರಯಾಣಿಕರ ಸಮಯ ಉಳಿತಾಯ, ಚಿಲ್ಲರೆ ಸಮಸ್ಯೆ ದೂರಮಾಡುವ ಉದ್ದೇಶವನ್ನೂ ಹೊಂದಿದೆ. ಇದನ್ನೂ ಓದಿ: ರಸ್ತೆಗುಂಡಿಗಳಿಂದಾದ ಸಾವನ್ನು ಸರ್ಕಾರಿ ಕೊಲೆ ಎಂದು ಪರಿಗಣಿಸಿ ಅಧಿಕಾರಿಗಳು, ಸಚಿವರನ್ನು ಆರೋಪಿಗಳನ್ನಾಗಿಸಿ: ಕಾಂಗ್ರೆಸ್

    ಮೊಬೈಲ್ ಅಪ್ಲಿಕೇಶನ್ ಬಳಸಿ ಟಿಕೆಟ್ ಖರೀದಿಸಿ, ಮೊಬೈಲ್ ನಲ್ಲೇ ಎಂಟ್ರಿ ಅಥವಾ ಎಕ್ಸಿಟ್ ಗೇಟ್‌ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್‌ ಮಾಡಿ ಪ್ರವೇಶ ಪಡೆಯಬಹುದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಹೆಡ್ ಬುಷ್ ಚಿತ್ರದ ಪ್ರಚಾರ – ತೊಂದರೆ ಕೊಡ್ತಿದ್ದಾರೆಂದು ಐವರ ವಿರುದ್ಧ FIR

    ಹೆಡ್ ಬುಷ್ ಚಿತ್ರದ ಪ್ರಚಾರ – ತೊಂದರೆ ಕೊಡ್ತಿದ್ದಾರೆಂದು ಐವರ ವಿರುದ್ಧ FIR

    ಬೆಂಗಳೂರು: ಹೆಡ್ ಬುಷ್ ಚಿತ್ರತಂಡ (Head Bush Film Team) ಒಂದಿಲ್ಲೊಂದು ವಿವಾದಕ್ಕೆ ಸಿಲುಕುತ್ತಿದೆ. ಇತ್ತೀಚೆಗೆ ವೀರಗಾಸೆ ಕಲಾವಿದರಿಗೆ ಅಪಮಾನ ಮಾಡಲಾಗಿದೆ ಹಾಗೂ `ಜುಜುಬಿ ಕರಗ’ (Karaga) ಎನ್ನುವ ಪದ ಬಳಸಲಾಗಿದ್ದು ಕರಗ ಕುಣಿತಕ್ಕೂ ಅವಮಾನ ಮಾಡಲಾಗಿದೆ ಅನ್ನೋ ವಿವಾದ ಎದುರಿಸುತ್ತಿದ್ದ ಚಿತ್ರತಂಡ ಇದೀಗ ಮತ್ತೊಂದು ವಿವಾದಕ್ಕೆ ಸಿಲುಕಿದೆ.

    ಹೆಡ್‌ಬುಷ್ ಚಿತ್ರದ ಪ್ರಚಾರ ಮಾಡುತ್ತಿದ್ದ ಐವರ ವಿರುದ್ಧ ಸ್ವಯಂಪ್ರೇರಿತವಾಗಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಕಾರು ಹಾಗೂ ಬೈಕ್‌ಗಳಲ್ಲಿ ಬಂದು ರಸ್ತೆ ಮಧ್ಯೆ ಕಿರುಚಾಡುತ್ತಾ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಆರೋಪದ ಮೇಲೆ ವಿಧಾನಸೌದ ಪೊಲೀಸರು (Vidhana Soudha Police) ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ‘ಜುಜುಬಿ ಕರಗ’ ಪದ ಮ್ಯೂಟ್ ಮಾಡಲು ಧನಂಜಯ್ ಹಾಗೂ ಹೆಡ್ ಬುಷ್ ತಂಡ ಒಪ್ಪಿಗೆ

    ಐದಕ್ಕಿಂತ ಹೆಚ್ಚು ಜನ ಅಕ್ರಮ ಕೂಟ ಕಟ್ಟಿಕೊಂಡು ಹೆಡ್‌ಬುಷ್ (Head Bush) ಚಿತ್ರದ ಬಗ್ಗೆ ಪ್ರಚಾರ ಮಾಡುತ್ತಾ ಕೂಗಾಡುತ್ತಿದ್ದರು. ಅಲ್ಲದೇ ವಿಧಾನಸೌಧ ಮೆಟ್ರೋ (Namma Metro) ನಿಲ್ದಾಣದ ಮುಂದೆ ಓಡಾಡುವ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಹಿಂದುತ್ವದಲ್ಲೇ ಬ್ರಾಹ್ಮಣತ್ವವಿದೆ; ಪಬ್ಲಿಸಿಟಿಗೋಸ್ಕರ ನಟ ಚೇತನ್ ವಿವಾದಿತ ಹೇಳಿಕೆ – ಪೇಜಾವರ ಶ್ರೀ

    ಇತ್ತೀಚೆಗೆ ವೀರಗಾಸೆಗೆ ಅವಮಾನ ಮಾಡಲಾಗಿದೆ ಎನ್ನುವ ಆರೋಪ ಕೇಳಿಬರುತ್ತಿದ್ದಂತೆ ಚಿತ್ರತಂಡ ಕ್ಷಮೆ ಕೇಳಿತ್ತು. ತದ ನಂತರ `ಜುಜುಬಿ ಕರಗ’ ಎನ್ನುವ ಪದವನ್ನೂ ಮ್ಯೂಟ್ ಮಾಡಲು ಒಪ್ಪಿಕೊಂಡಿತು. ಇದೀಗ ಪ್ರಚಾರದ ಮೂಲಕ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದಾರೆ ಅನ್ನೋ ಆರೋಪದ ಮೇಲೆ ಕೇಸ್ ದಾಖಲಾಗಿದ್ದು, ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳೆಯರ ನಗ್ನ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡ್ತಿದ್ದ ಆರೋಪಿ ಅರೆಸ್ಟ್

    ಮಹಿಳೆಯರ ನಗ್ನ ವೀಡಿಯೋ ಇಟ್ಕೊಂಡು ಬ್ಲಾಕ್‌ಮೇಲ್ ಮಾಡ್ತಿದ್ದ ಆರೋಪಿ ಅರೆಸ್ಟ್

    ಬೆಂಗಳೂರು: ಮಹಿಳೆಯರ (Womens) ನಗ್ನ ವೀಡಿಯೋ (Video) ಮತ್ತು ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡ್ತಿದ್ದ ಸೈಬರ್ ಆರೋಪಿ ಈಗ ಬೆಂಗಳೂರು ಪೊಲೀಸರ (Bengaluru Police) ಅತಿಥಿಯಾಗಿದ್ದಾನೆ.

    ಮಹಾಂತೇಶ್ ಬಂಧಿತ ಆರೋಪಿ. ಮಹಿಳೆಯರಿಗೆ ಕರೆ ಮಾಡಿ ನಗ್ನ ವಿಡಿಯೋ, ಫೋಟೋ ಇದೆ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕೋದಾಗಿ ಬೆದರಿಸಿ ಹಣಕ್ಕೆ ಡಿಮಾಂಡ್ ಮಾಡುತ್ತಿದ್ದ. ಬಳಿಕ ಮಹಿಳೆಯೊಬ್ಬರಿಗೆ ಕರೆ ಮಾಡಿ, 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾನೆ. ಬಳಿಕ ನಾರ್ಥ್ ಈಸ್ಟ್ ಸೈಬರ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾಳೆ. ಇದನ್ನೂ ಓದಿ: ಪ್ರವಾಸಿಗರ ಕಣ್ಮನ ಸೆಳೆಯುತ್ತಿರೋ ಅತ್ಯಾಧುನಿಕ ರೈಲ್ವೆ ರೆಸ್ಟೋರೆಂಟ್ – ಎಲ್ಲಿದೆ ಗೊತ್ತಾ?

    ಪ್ರಕರಣ (FIR) ದಾಖಲಿಸಿಕೊಂಡ ಪೊಲೀಸರು (Police) ಆರೋಪಿ ಬಂಧಿಸಿ ತನಿಖೆಗೆ ಒಳಪಡಿಸಿದ್ದಾಗ, ಹಲವು ಮಹಿಳೆಯರಿಗೆ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • ಈ ಬಾರಿ ದೀಪಾವಳಿ ಹಬ್ಬಕ್ಕೆ ಸೂರ್ಯಗ್ರಹಣ ಕಾರ್ಮೋಡ

    ಈ ಬಾರಿ ದೀಪಾವಳಿ ಹಬ್ಬಕ್ಕೆ ಸೂರ್ಯಗ್ರಹಣ ಕಾರ್ಮೋಡ

    ಬೆಂಗಳೂರು: ಈ ಬಾರಿಯ ದೀಪಾವಳಿ ಹಬ್ಬಕ್ಕೆ (Deepavali Festival) ಗ್ರಹಣದ ಕಾರ್ಮೋಡ ಕವಿದಿದೆ.

    3 ವರ್ಷಗಳ ಬಳಿಕ ದೇಶದಲ್ಲಿ ಪಾರ್ಶ್ವ ಸೂರ್ಯಗ್ರಹಣ (Solar eclipse) ಗೋಚರವಾಗುತ್ತಿದೆ. ನಾಡಿದ್ದು ಅಂದ್ರೆ, ಅಕ್ಟೋಬರ್ 25ರ ಸಂಜೆ 5 ಗಂಟೆ 12 ನಿಮಿಷಕ್ಕೆ ಆರಂಭವಾಗಿ, 6 ಗಂಟೆ 27 ನಿಮಿಷಕ್ಕೆ ಕೇತುಗ್ರಸ್ಥ ಸೂರ್ಯಗ್ರಹಣ ಅಂತ್ಯ ಕಾಣುತ್ತದೆ. ರಾಜ್ಯದ ಎಲ್ಲಾ ಭಾಗಗಳಲ್ಲಿ ಸೂರ್ಯಾಸ್ತದ ಹೊತ್ತಿನಲ್ಲಿ ಗ್ರಹಣ ಗೋಚರಿಸಲಿದೆ. ಇದನ್ನೂ ಓದಿ: ಪಾಕಿಸ್ತಾನದ ವಿರುದ್ಧ ಭಾರತ ಗೆದ್ದಿರೋದು ಕೆಲವರಿಗೆ ಬೇಸರ ತರಿಸಿದೆ – ಕಲ್ಲಡ್ಕ ಪ್ರಭಾಕರ್ ಭಟ್

    ಬೆಂಗಳೂರಿನಲ್ಲಿ (Bengaluru) ಶೇ.10ರಷ್ಟು ಮಾತ್ರ ಗ್ರಹಣ ಗೋಚರಿಸಲಿದೆ. ಗ್ರಹಣ ವೀಕ್ಷಣೆಗೆ ಉಡುಪಿ ಉತ್ತಮ ಪ್ರದೇಶವಾಗಿದೆ. ದೇಶದ ಪೂರ್ವ ಭಾಗಗಳಲ್ಲಿ ಸೂರ್ಯಾಸ್ತದ ವೇಳೆ ಗ್ರಹಣ ಸಂಭವಿಸಿದರೇ, ಈಶಾನ್ಯ ಭಾಗಗಳಲ್ಲಿ ಸೂರ್ಯಾಸ್ತದ ಬಳಿಕ ಗ್ರಹಣ ಕಾಣಿಸಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಶೇ.55ರಷ್ಟು, ಲೇಹ್ ಲಡಾಖ್‌ನಲ್ಲಿ ಶೇ.54ರಷ್ಟು ಗ್ರಹಣ ಗೋಚರವಾಗಲಿದೆ. ಇದನ್ನೂ ಓದಿ: ನಂಗೆ ಎರಡು ಮುಖವಿಲ್ಲ, ಇರೋದು ಒಂದೇ ಮುಖ: ಹೆಚ್‍ಡಿಕೆಗೆ ಸೋಮಣ್ಣ ಟಾಂಗ್

    ಭಾರತ ಮಾತ್ರವಲ್ಲದೇ ಯುರೋಪ್ (Europe), ಉತ್ತರ ಆಫ್ರಿಕಾ, ಮಧ್ಯ ಪ್ರಾಚ್ಯ ಮತ್ತು ಏಷ್ಯಾದ ಇತರ ಭಾಗಗಳಲ್ಲೂ ಸೂರ್ಯಗ್ರಹಣ ಗೋಚರಿಸಲಿದೆ. ರಷ್ಯಾದ ಉಗಾರದಲ್ಲಿ ಶೇ.85ರಷ್ಟು ಅಂದ್ರೆ ಅತಿ ಹೆಚ್ಚು ಭಾಗ ಗ್ರಹಣ ಕಾಣಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಜೆಡಿಎಸ್ ಸೇರ್ಪಡೆ ಆಗ್ತಾರಾ ಕೆಜಿಎಫ್ ಬಾಬು? – ಕುತೂಹಲ ಮೂಡಿಸಿದ ಇಬ್ರಾಹಿಂ-ಕೆಜಿಎಫ್ ಬಾಬು ಭೇಟಿ

    ಜೆಡಿಎಸ್ ಸೇರ್ಪಡೆ ಆಗ್ತಾರಾ ಕೆಜಿಎಫ್ ಬಾಬು? – ಕುತೂಹಲ ಮೂಡಿಸಿದ ಇಬ್ರಾಹಿಂ-ಕೆಜಿಎಫ್ ಬಾಬು ಭೇಟಿ

    ಬೆಂಗಳೂರು: ಕಾಂಗ್ರೆಸ್ (Congress) ಮುಖಂಡ ಕೆಜಿಎಫ್ ಬಾಬುರನ್ನು (KGF Babu) ಜೆಡಿಎಸ್‍ಗೆ (JDS) ಸೇರ್ಪಡೆ ಮಾಡಿಕೊಳ್ಳಲು ಜೆಡಿಎಸ್ ಪಕ್ಷ ಆಹ್ವಾನ ನೀಡಿದೆ.

    ಖುದ್ದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಇಂದು ಕೆಜಿಎಫ್ ಬಾಬು ಮನೆಗೆ ಹೋಗಿ ಸುಮಾರು ಎರಡೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಚಿಕ್ಕಪೇಟೆ (Chikkapete) ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಆಸೆಯನ್ನು ಕೆಜಿಎಫ್ ಬಾಬು ಅವರು ಹೊಂದಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಟಿಕೆಟ್ ಸಿಗುವುದು ಡೌಟ್ ಹಿನ್ನೆಲೆ ಜೆಡಿಎಸ್ ಪಕ್ಷ ಸೇರ್ಪಡೆಗೊಳ್ಳುವ ಬಗ್ಗೆ ಸಿಎಂ ಇಬ್ರಾಹಿಂ ಜೊತೆಗೆ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಶ್ರೀಸಾಮಾನ್ಯನನ್ನು ಅವಮಾನಿಸಬೇಡಿ – ಮೋದಿ ವಿರುದ್ಧ ಕೇಜ್ರಿವಾಲ್ ಕಿಡಿ

    ನಂತರ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೆಜಿಎಫ್ ಬಾಬು ದುಡ್ಡಿನ ಆಸೆ ಇಲ್ಲದೇ, ಪ್ರಾಮಾಣಿಕವಾಗಿ ಜನರ ಸೇವೆ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನು ಪಕ್ಷಕ್ಕೆ ಕರೆದಿದ್ದೇನೆ. ಅವರು ಬಂದರೆ ಚಿಕ್ಕಪೇಟೆ ಕ್ಷೇತ್ರದಲ್ಲಿ ಟಿಕೆಟ್ ನೀಡುವ ಬಗ್ಗೆ ದೇವೇಗೌಡರು (H.D.Devegowda), ಕುಮಾರಸ್ವಾಮಿ (H.D.KumarSwamy) ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊಲೆಗಾರರಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌

    ಬಳಿಕ ಮಾತನಾಡಿದ ಕೆಜಿಎಫ್ ಬಾಬು ಅವರು, ಹಿರಿಯರು ಮಾರ್ಗದರ್ಶನ ನೀಡಿ ಪಕ್ಷಕ್ಕೆ ಕರೆದಿದ್ದಾರೆ. ಯೋಚನೆ ಮಾಡಿ ತೀರ್ಮಾನ ಮಾಡುತ್ತೇನೆ. ಚಿಕ್ಕಪೇಟೆ ನಾನು ಹುಟ್ಟಿದ ಊರು. ಇದಕ್ಕಾಗಿ ಜನರಿಗೆ ಮನೆ ಕಟ್ಟಿಸಿಕೊಡುತ್ತಿದ್ದೇನೆ. ಯಾರು ಏನೇ ಮಾಡಿದರೂ, ನಾನು ಜನರ ಸೇವೆ ಮಾಡುವುದನ್ನು ನಿಲ್ಲಿಸುವುದಿಲ್ಲ. ಹೈಕೋರ್ಟ್‍ನಿಂದ ಆದೇಶ ತಂದಾದರೂ ಬಡವರಿಗೆ ಮನೆ ಕಟ್ಟಿಸಿಕೊಡುತ್ತೇನೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದಶಪಥ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಆರೋಪ – ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು

    ದಶಪಥ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಆರೋಪ – ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು

    ರಾಮನಗರ: ಸುಗಮ ಸಂಚಾರಕ್ಕೆ ಅನುಕೂಲವಾಗಬೇಕಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ (Mysuru Bengaluru Expressway) ಈಗ ಓವರ್ ಸ್ಪೀಡ್ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಅಪಘಾತಗಳ (Accidents) ಹಾಟ್‌ಸ್ಪಾಟ್ ಆಗಿ ಪರಿಣಮಿಸಿದೆ.

    ಸೆಪ್ಟೆಂಬರ್ ಮೊದಲ ವಾರದಿಂದ ಎಕ್ಸ್‌ಪ್ರೆಸ್‌ ವೇ ಮೊದಲ ಹಂತದ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಆರಂಭಿಸಿದ್ದು, ಅಪಘಾತ ಪ್ರಕರಣಗಳು (Road Accident) ಹೆಚ್ಚಾಗುತ್ತಿವೆ. ರಾಮನಗರದಿಂದ ಚನ್ನಪಟ್ಟಣದ ಬೈರಾಪಟ್ಟಣದವರೆಗೂ ಬೈಪಾಸ್ ನಿರ್ಮಿಸಲಾಗಿದೆ. ಇದರ ಪಕ್ಕದಲ್ಲಿನ ಸರ್ವಿಸ್ ರಸ್ತೆಯಲ್ಲಿಯೇ ಅತೀ ಹೆಚ್ಚಿನ ಅಪಘಾತಗಳು ನಡೆದಿವೆ. ಇಲ್ಲಿ ಸರಿಯಾದ ಎಂಟ್ರಿ ಹಾಗೂ ಎಕ್ಸಿಟ್‌ಗಳನ್ನು ನೀಡದಿರುವ ಕಾರಣ ಸರ್ವಿಸ್ ರಸ್ತೆಗಳಲ್ಲಿಯೂ ಓವರ್‌ಸ್ಪೀಡ್ ಸರ್ವೇ ಸಾಮಾನ್ಯವಾಗಿದೆ. ಇದನ್ನೂ ಓದಿ: ಇಡೀ ಶೋ ಬುಕ್ ಮಾಡಿ, ಫ್ಯಾಮಿಲಿ ಸಮೇತ ಕಾಂತಾರ ನೋಡಿದ ದಾವಣಗೆರೆ ಪೊಲೀಸರು

    ಹೀಗಾಗಿ ರಾಮನಗರ ಸಂಚಾರ ಪೊಲೀಸ್ ಠಾಣೆ (Traffic Police) ವ್ಯಾಪ್ತಿಯಲ್ಲಿನ ಬೈಪಾಸ್‌ನಲ್ಲಿಯೇ 6 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಇಂದು ಕೂಡಾ ರಾಮನಗರದಿಂದ ಮಾಗಡಿ ಕಡೆಗೆ ಹೋಗುತ್ತಿದ್ದ ಕುಮಾರ್ ಎಂಬಾತನಿಗೆ ಬೆಂಗಳೂರಿನಿಂದ ಮೈಸೂರು ಕಡೆಗೆ ಸರ್ವೀಸ್ ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಎರಡು ಕಾಲುಗಳು ತುಂಡಾಗಿವೆ. ಕೂಡಲೇ ಗಾಯಾಳುವನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೆಂಪೇಗೌಡನ ದೊಡ್ಡಿ ಬಳಿ ದಶಪಥ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಮೊದಲು ತಮ್ಮ ಮನೆ ಸರಿಮಾಡಿಕೊಳ್ಳಲಿ – ಕರಂದ್ಲಾಜೆ

    ಸರ್ವೀಸ್ ರಸ್ತೆಯಲ್ಲಿ ರೋಡ್ ಹಂಪ್ ಹಾಕದೇ ಇರುವುದು ಇದಕ್ಕೆ ಕಾರಣವಾಗಿದೆ. ಕೂಡಲೇ ಡಿಬಿಎಲ್ ಕಂಪನಿಯವರು ಸ್ಥಳಕ್ಕೆ ಬರುವಂತೆ ಆಗ್ರಹಿಸಿದ್ದಾರೆ. ಗ್ರಾಮಸ್ಥರ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಸುಮಾರು 2 ಕಿ.ಮೀ ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಬಂದ ರಾಮನಗರ ಗ್ರಾಮಾಂತರ ಪೊಲೀಸರು ಗ್ರಾಮಸ್ಥರ ಮನವೊಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]