Tag: Bangaluru

  • ರಾಜ್ಯ ಒಕ್ಕಲಿಗರ ಸಂಘದಲ್ಲಿ ಮಹಾಬಿರುಕು!

    ರಾಜ್ಯ ಒಕ್ಕಲಿಗರ ಸಂಘದಲ್ಲಿ ಮಹಾಬಿರುಕು!

    ಬೆಂಗಳೂರು: ಸದಾ ಒಂದಲ್ಲೊಂದು ವಿಚಾರದಲ್ಲಿ ಸುದ್ದಿಯಾಗಿರೊ ರಾಜ್ಯ ಒಕ್ಕಲಿಗರ ಸಂಘದಲ್ಲಿ ಇದೀಗ ಮಹಾಬಿರುಕು ಬಿಟ್ಟಿದೆ.

    ಅಂದು ಸಂಘದ ಅಧ್ಯಕ್ಷರಾಗಿದ್ದ ಡಾ.ಅಪ್ಪಾಜಿಗೌಡರನ್ನ ಕೆಳಗಿಸಲು ಬಳಸಿದ ರಣತಂತ್ರ, ಈಗಿನ ಅಧ್ಯಕ್ಷರಿಗೆ ಮುಳುವಾಗಿ ಪರಿಣಮಿಸಿದೆ ಎನ್ನಲಾಗಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಜ್ಜಾಗಿದ್ದು, ಸಂಘದ ಪದಾಧಿಕಾರಿಗಳು, ನಿರ್ದೇಶಕರು ಬೆಟ್ಟೇಗೌಡ ಮತ್ತು ಅವರ ತಂಡದ ವಿರುದ್ಧ ತಿರುಗಿಬಿದ್ದಿದ್ದಾರೆ.

    ಸಂಘದ ಅಧ್ಯಕ್ಷ ಡಿಎನ್ ಬೆಟ್ಟೇಗೌಡ, ಕಾರ್ಯದರ್ಶಿ ಪ್ರೋ ಎಂ ನಾಗರಾಜ್, ಖಜಾಂಚಿ ಡಿಸಿಕೆ ಕಾಳೇಗೌಡರಿಂದಲೇ ಒಕ್ಕಲಿಗ ಸಂಘದಲ್ಲಿ ಭಾರಿ ಸಮಸ್ಯೆ ಎದುರಾಗಲು ಕಾರಣವಾಗುತ್ತಿದೆಯಂತೆ. 270 ಜನರನ್ನು ಸಂಘಕ್ಕೆ ನೇಮಕ ಮಾಡಿಕೊಳ್ಳಲು ಸಂಘದ ಸಭೆಯಲ್ಲಿ ತೀರ್ಮಾನವಾಗಿತ್ತು. ಆದ್ರೆ 700ಕ್ಕೂ ಹೆಚ್ಚು ಜನರನ್ನು ಬೆಟ್ಟೇಗೌಡ ಮತ್ತು ಅವರ ತಂಡ ನೇಮಕ ಮಾಡಿಕೊಂಡಿದ್ದಾರೆ. ಈಗಲೇ ಇರೋ ಸಿಬ್ಬಂದಿ, ನೌಕರರುಗಳಿಗೆ ಸಂಬಳವನ್ನು ತಿಂಗಳ ಮಧ್ಯದಲ್ಲಿ ನೀಡುತ್ತಿದ್ದಾರೆ. ಇದರಿಂದಾಗಿ ಸಂಘದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದು ಸಂಘದ ಪದಾಧಿಕಾರಿಗಳು, ನಿರ್ದೇಶಕರು ಒಕ್ಕಲಿಗರ ಸಂಘಕ್ಕೆ ಇಂದು ಅವಿಶ್ವಾಸ ಪತ್ರ ನೀಡಿ ಆರೋಪಿಸಿದ್ದಾರೆ.

    ಒಕ್ಕಲಿಗ ಸಂಘದ ನಾಲ್ಕು ಜನ ಪದಾಧಿಕಾರಿಗಳು ಸೇರಿದಂತೆ 19 ಜನ ನಿರ್ದೇಶಕರು ಅವಿಶ್ವಾಸ ನಿರ್ಣಯಕ್ಕೆ ಸಹಮತವಿದೆ ಎಂದು ಸಂಘಕ್ಕೆ ಪತ್ರವನ್ನು ಬರೆದಿದ್ದರು. ಇನ್ನೂ ಈ ಬಗ್ಗೆ ಒಕ್ಕಲಿಗರ ಸಂಘ ಕಾರ್ಯದರ್ಶಿ ಪ್ರೊ. ನಾಗರಾಜ್ ಮಾತನಾಡಿದ್ದು, ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿ, ಇದು ಪ್ರಜಾಪ್ರಭುತ್ವ ಸಂಘದ ಬೈಲಾ ಪ್ರಕಾರ ಅವಿಶ್ವಾಸ ನಿರ್ಣಯ ಮಂಡನೆಗೆ ಏಳು ದಿನ ಕಾಲಾವಕಾಶವಿದೆ. ಅಷ್ಟರೊಳಗೆ ಅವಿಶ್ವಾಸ ಸಾಬೀತು ಪಡಿಸಬೇಕು. ಇಲ್ಲವಾದಲ್ಲಿ ಕೂಡಲೆ ಸ್ಥಾನ ಬಿಟ್ಟು ಕೊಡುತ್ತೇನೆ. ಅಲ್ಲಿಯವರೆಗೂ ಏನ್ ಬೇಕಾದ್ರೂ ಆಗಬಹುದು, ಕಾದುನೋಡಿ ಎಂದಿದ್ದಾರೆ.

    ಒಕ್ಕಲಿಗರ ಸಂಘದ ಈ ಹಿಂದಿನ ಅಧ್ಯಕ್ಷ ಡಾ ಅಪ್ಪಾಜಿಗೌಡರ ವಿರುದ್ಧ ಬೆಟ್ಟೇಗೌಡ ಅವಿಶ್ವಾಸ ನಿರ್ಣಯ ಮಂಡಿಸಿ ನೂತನವಾಗಿ ಅಧ್ಯಕ್ಷರಾಗಿದ್ದರು. ಈಗ ಅದೇ ಮಾದರಿಯಲ್ಲಿ ಮತ್ತೆ ಬೆಟ್ಟೇಗೌಡರನ್ನು ಇಳಿಸಲು ಸಜ್ಜಾಗುತ್ತಿದೆ. ಡಿಸೆಂಬರ್‍ನಲ್ಲಿ ಸಂಘದ ಚುನಾವಣಾ ನಡೆಯಲಿದ್ದು, ಈ ಹೊತ್ತಿನಲ್ಲಿ ಅವಿಶ್ವಾಸ ನಿರ್ಣಯ ಪತ್ರ ಕುತೂಹಲ ಮೂಡಿಸಿದೆ ಎಂದು ಸಂಘದ ಕಾರ್ಯದರ್ಶಿ ಪ್ರೋ. ನಾಗರಾಜು ಹೇಳಿದ್ದಾರೆ.

  • ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು – ರಾಹುಲ್ ಗಾಂಧಿ

    ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು – ರಾಹುಲ್ ಗಾಂಧಿ

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ದಿನ ಹತ್ತಿರವಾಗುತ್ತಿದ್ದಂತೆಯೇ ರಾಜ್ಯಕ್ಕೆ ಆಗಮಿಸಿ ಪ್ರಚಾರ ಮಾಡುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂದು ಹೇಳಿದ್ದಾರೆ.

    ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿ ಅವರು, ಕಂಠೀರವ ಸ್ಟೂಡಿಯೋಗೆ ಹೋಗಿ ಕರ್ನಾಟಕದ ರತ್ನ ಡಾ. ರಾಜ್‍ಕುಮಾರ್ ಅವರ ಸಮಾಧಿಗೆ ನಮನ ಸಲ್ಲಿಸಿ ಬಂದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಿನ ಐಸ್ ಕ್ರೀಂ ಗೆ ರಾಹುಲ್ ಗಾಂಧಿ ಫಿದಾ!

    ರಾಜ್ ಕುಮಾರ್ ಅವರ ಸಮಾಧಿಗೆ ಹೋಗಿ ಪುಷ್ಪಾರ್ಚನೆ ಸಲ್ಲಿಸಿದ್ದು, ಆ ಫೋಟೋವನ್ನು ಹಾಕಿ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು” ಎಂದು ಬರೆದ ಟ್ವೀಟ್ ಮಾಡಿದ್ದಾರೆ. ಜೊತೆಗೆ `ಕರ್ನಾಟಕದ ರತ್ನ ಡಾ. ರಾಜ್‍ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ಪುಷ್ಪಾರ್ಚನೆ ಸಮರ್ಪಿಸಿ ನನ್ನ ಗೌರವ ನಮನವನ್ನು ಸಲ್ಲಿಸಿದೆನು. ಅವರ ಜೀವನದ ಆದರ್ಶಗಳು ಪ್ರತಿಯೊಬ್ಬರಿಗೂ ಸದಾ ಸ್ಪೂರ್ತಿದಾಯಕ’ ಎಂದು ಬರೆದುಕೊಂಡಿದ್ದಾರೆ.

    ರಾಹುಲ್ ಗಾಂಧಿ ಅವರು ಶಿವಾನಂದ ಸರ್ಕಲ್ ನಲ್ಲಿರುವ ರಿಚಿ ರಿಚ್ ಗೆ ಭೇಟಿ ನೀಡಿ, ಅಲ್ಲಿ ಐಸ್ ಕ್ರೀಂ ಸವಿದಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದು, ಮತ್ತೊಮ್ಮೆ ಬರುವುದಾಗಿ ತಿಳಿಸಿದ್ದಾರೆ.

  • ಕೈ-ಕಾಲು ಕಟ್ಟಿಹಾಕಿ, ಚಾಕುವಿನಿಂದ ಇರಿದು ಇಸ್ಕಾನ್ ಅರ್ಚಕನ ಬರ್ಬರ ಕೊಲೆ

    ಕೈ-ಕಾಲು ಕಟ್ಟಿಹಾಕಿ, ಚಾಕುವಿನಿಂದ ಇರಿದು ಇಸ್ಕಾನ್ ಅರ್ಚಕನ ಬರ್ಬರ ಕೊಲೆ

    ಬೆಂಗಳೂರು: ಇಸ್ಕಾನ್ ದೇವಾಲಯದ ಅರ್ಚಕರೊಬ್ಬರನ್ನು ಕೈ-ಕಾಲು ಕಟ್ಟಿಹಾಕಿ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್ ಪುರಂನ ಬೆತ್ತಲ್ ನಗರದಲ್ಲಿ ನಡೆದಿದೆ.

    ಸಂಜಯ್ ಸತೀಶ್ ಕೊಲೆಯಾದ ಅರ್ಚಕ. ಇಸ್ಕಾನ್ ದೇವಾಲಯದಲ್ಲಿ ಅರ್ಚಕರಾಗಿದ್ದ ಸಂಜಯ್ ಸತೀಶ್ ಬೆತ್ತಲ್, ನಗರದ ಅಪಾರ್ಟ್ ಮೆಂಟ್‍ನಲ್ಲಿ ವಾಸವಾಗಿದ್ರು. 15 ದಿನಗಳಿಗೊಮ್ಮೆ ಅಪಾರ್ಟ್ ಮೆಂಟ್‍ಗೆ ಬಂದು ಒಂದೆರಡು ದಿನ ಉಳಿಯುತ್ತಿದ್ದ ಸಂಜಯ್, ಕಳೆದ ಬುಧವಾರದಂದು ಇಸ್ಕಾನ್‍ನಲ್ಲಿ ಪೂಜೆ ಮುಗಿಸಿಕೊಂಡು ಅಪಾರ್ಟ್ ಮೆಂಟ್‍ಗೆ ಬಂದಿದ್ದಾರೆ. ಈ ವೇಳೆಯಲ್ಲಿ ಅಪಾರ್ಟ್ ಮೆಂಟ್‍ಗೆ ಬಂದಿರೋ ಕೆಲವು ದುಷ್ಕರ್ಮಿಗಳು ಸಂಜಯ್ ಕೈ-ಕಾಲು ಕಟ್ಟಿ ಕೊಲೆ ಮಾಡಿದ್ದಾರೆ.

    ಕೊಲೆಯಾಗಿ ಒಂದು ವಾರವಾದ್ರೂ ಅಕ್ಕಪಕ್ಕದ ಮನೆಯವರಿಗೆ ಈ ವಿಷಯ ಗೊತ್ತಿರಲಿಲ್ಲ. ಬುಧವಾರ ರಾತ್ರಿ ಸಂಜಯ್ ಫ್ಲಾಟ್‍ನಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಕೆ.ಆರ್ ಪುರಂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ತೆಗೆದು ನೋಡಿದಾಗ ಸಂಜಯ್ ಕೊಲೆಯಾದ ವಿಷಯ ಬೆಳಕಿಗೆ ಬಂದಿದೆ.

    ಪೊಲೀಸರು ಬೆರಳಚ್ಚು ತಜ್ಞರನ್ನು ಕರೆಸಿ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಸಂಜಯ್ ಸತೀಶ್ ಸುಮಾರು ವರ್ಷಗಳಿಂದ ಒಬ್ಬರೇ ಫ್ಲಾಟ್‍ನಲ್ಲಿ ವಾಸವಾಗಿದ್ದು ಅವರ ಹಿನ್ನೆಲೆ ಗೊತ್ತಿಲ್ಲ ಅಂತ ಅಕ್ಕಪಕ್ಕದವರು ಅಂದಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ಕಳುಹಿಸಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ- ಧರೆಗೆ ಉರುಳಿತು ಮರಗಳು

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ- ಧರೆಗೆ ಉರುಳಿತು ಮರಗಳು

    ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡ ಹಿನ್ನೆಲೆಯಲ್ಲಿ ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ.

    ನಗರದ ಮಲ್ಲೇಶ್ವರಂ, ಬಿಇಎಲ್ ಸರ್ಕಲ್, ಯಶವಂತಪುರ, ದಾಸರಹಳ್ಳಿ, ತಾವರೆಕೆರೆ, ವಿದ್ಯಾರಣ್ಯಪುರ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ತೆಂಗಿನ ಮರ ಹಾಗೂ ವಿದ್ಯುತ್ ಕಂಬ ಧರೆಗೆ ಬಿದ್ದಿದ್ದು, ಇನ್ನೋವಾ ಕಾರು ಮತ್ತು ಆಟೋ ಜಖಂ ಗೊಂಡಿದೆ. ಅದೃಷ್ಟವಶಾತ್ ಆಟೋದಲ್ಲಿ ಪ್ರಯಾಣಿಸುತ್ತಿದ್ದವರು ಕೂದಲೆಳೆ ಅಂತರದಲ್ಲಿ ಆಪಾಯದಿಂದ ಪಾರಾಗಿದ್ದಾರೆ. ನಗರದ ವಿದ್ಯಾರಣ್ಯಪುರ, ಯಶವಂತಪುರ ಸೋಪ್ ಫ್ಯಾಕ್ಟರಿ ಬಳಿ ಎರಡು ತೆಂಗಿನ ಮರಗಳು ಧರೆಗುರುಳಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.

    ಕೆಆರ್ ಪುರಂ ನಲ್ಲಿ ಭಾರೀ ಮಳೆಯ ಪರಿಣಾಮ ರಸ್ತೆಗಳೆಲ್ಲಾ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಎಎಸ್ ಆರ್ ಲೇಔಟ್ ರಾಜಕಾಲುವೆಯ ನೀರು ಉಕ್ಕಿ ಹರಿದ ಪರಿಣಾಮ ವಾರ್ಡ್ ನಂ 52 ಮತ್ತು 53 ರ ತಗ್ಗು ಪ್ರದೇಶದಲ್ಲಿದ್ದ ಮನೆಗಳಿಗೆ ನುಗ್ಗಿದೆ. ಮನೆಯಿಂದ ಕೊಳಚೆ ನೀರು ಹೊರಹಾಕಲು ಹೆಂಗಸರು, ಮಕ್ಕಳು ಪರದಾಟ ನಡೆಸಿದ್ದಾರೆ. ಸಂಜೆ ವೇಳೆಗೆ ಗಾಳಿ ಮಳೆಯ ಪರಿಣಾಮದಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ.

    ಹವಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿನಿಂದ ಹೊರಡಬೇಕಿದ್ದ ಕೆಲ ವಿಮಾನಗಳು ರದ್ದಾಗಿದ್ದು, ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.

    ರಾಜ್ಯದ ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಬೇಸಗೆಯ ಬಿಸಿ ಎದುರಿಸುತ್ತಿದ್ದ ರೈತರ ಮುಖದಲ್ಲಿ ಮಳೆಯ ಸಿಂಚನ ಮಂದಹಾಸ ಮೂಡಿಸಿದೆ.

    https://www.youtube.com/watch?v=4FHWCnw9k2Q

  • ಶರ್ಟ್, ಪ್ಯಾಂಟ್ ಬಿಚ್ಚಿ ಕಾರಿನ ಮೇಲೆ ಕುಳಿತು ಪ್ರಯಾಣಿಸಿದ ಯುವಕ – ಸ್ನೇಹಿತ ವಿಡಿಯೋ ಮಾಡ್ದ

    ಶರ್ಟ್, ಪ್ಯಾಂಟ್ ಬಿಚ್ಚಿ ಕಾರಿನ ಮೇಲೆ ಕುಳಿತು ಪ್ರಯಾಣಿಸಿದ ಯುವಕ – ಸ್ನೇಹಿತ ವಿಡಿಯೋ ಮಾಡ್ದ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೋಲಿಗಳ ಹಾವಳಿ ಶುರುವಾಗಿದ್ದು, ರಸ್ತೆಯಲ್ಲಿಯೇ ಕಾರಿನಲ್ಲಿ ಹೋಗುತ್ತಿದ್ದಾಗ ಯುವಕನೊಬ್ಬ ಬೆತ್ತಲಾಗಿರುವ ಘಟನೆ ನಡೆದಿದೆ.

    ಶುಕ್ರವಾರ ರಾತ್ರಿ ಸುಮಾರು 12.30ರ ವೇಳೆಗೆ ಟಾಟಾ ಇಂಡಿಕಾ ಕಾರಿನಲ್ಲಿ ಮೂವರು ಯುವಕರು ರಸ್ತೆಯಲ್ಲಿಯೇ ಜನರಿಗೆ ಅಸಹ್ಯ ಆಗುವ ರೀತಿಯಲ್ಲಿ ವರ್ತಿಸಿದ್ದಾರೆ. ಯಶವಂತಪುರ ಬಳಿ ಇರುವ ಬ್ರಿಡ್ಜ್ ಮೇಲೆ ಈ ಘಟನೆ ನಡೆದಿದೆ.

    ಟಾಟಾ ಇಂಡಿಕಾ ಕಾರಿನಲ್ಲಿ ಹೋಗುತ್ತಿದ್ದಾಗ ಯುವಕರಲ್ಲಿ ಒಬ್ಬ ತನ್ನ ಶರ್ಟ್ ಹಾಗು ಪ್ಯಾಂಟ್ ಬಿಚ್ಚಿ ಕಾರಿನ ಮೇಲೆ ಕುಳಿತು ಪ್ರಾಯಾಣಿಸಿದ್ದಾನೆ. ಇತರೆ ಪ್ರಯಾಣಿಕರು ಹಾಗೂ ವಾಹನ ಸವಾರರು ಮುಜುಗರಪಡುವಂತೆ ವರ್ತಿಸಿದ್ದಾನೆ. ಇನ್ನೊಬ್ಬ ಯುವಕ ತನ್ನ ಸೇಹಿತ ಮಾಡುವ ಎಲ್ಲಾ ಆಟಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ.

  • ಪ್ರೀತಿಯ ಸೊಸೆಗೆ ಭರ್ಜರಿ ಉಡುಗೊರೆ ನೀಡಿದ ಕಿಚ್ಚ ಸುದೀಪ್

    ಪ್ರೀತಿಯ ಸೊಸೆಗೆ ಭರ್ಜರಿ ಉಡುಗೊರೆ ನೀಡಿದ ಕಿಚ್ಚ ಸುದೀಪ್

    ಬೆಂಗಳೂರು: ಕಿಚ್ಚ ಸುದೀಪ್ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇದ್ದರೂ, ಇತ್ತೀಚಿನ ದಿನಗಳಲ್ಲಿ ಸಿನಿಮಾಗೆ ಕೊಡುವಷ್ಟೇ ಪ್ರಾಮುಖ್ಯತೆ ಫ್ಯಾಮಿಲಿಗೂ ನೀಡುತ್ತಿದ್ದಾರೆ.

    ಸುದೀಪ್ ಮಗಳ ಶಾಲೆಯ ವಾರ್ಷಿಕೋತ್ಸವ, ಬರ್ತ್‍ಡೇ ಪಾರ್ಟಿ ಹೀಗೆ ಕೆಲಸದ ಬ್ಯುಸಿಯಲ್ಲಿಯೂ ಬಿಡುವು ಮಾಡಿಕೊಂಡು ಕುಟುಂಬಸ್ಥರಿಗಾಗಿ ಸಮಯ ನೀಡುತ್ತಿದ್ದಾರೆ. ತಾನಷ್ಟೇ ಅಲ್ಲದೆ ತನ್ನ ಸುತ್ತಮುತ್ತಲಿನವರನ್ನೂ ಖುಷಿಯಿಂದ ನೋಡಿಕೊಳ್ಳಬೇಕು ಎನ್ನುವ ಉದ್ದೇಶ ಸುದೀಪ್ ಅವರಿಗೆ ಇದೆ.

    ಕಿಚ್ಚ ಸುದೀಪ್ ತನ್ನ ಸೊಸೆಯ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಸಹೋದರಿ ಸುಜಾತ ಸಂಜೀವ್ ಅವರ ಪುತ್ರಿ ಶ್ರೇಯಾ ಅವರ ಹುಟ್ಟುಹಬ್ಬಕ್ಕೆ ಸುದೀಪ್ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಶ್ರೇಯಾಗೆ ಮಾವ ಸುದೀಪ್ ಅವರಿಂದ ಕಪ್ಪು ಬಣ್ಣದ ಜೀಪ್ ಉಡುಗೊರೆಯಾಗಿ ಸಿಕ್ಕಿದೆ. ಸುಜಾತ ಸಂಜೀವ್ ಅವರಿಗೆ ಒಬ್ಬ ಪುತ್ರ ಕೂಡ ಇದ್ದು, ಸಂಚಿತ್ ಸಂಜೀವ್ ಮಾವನಂತೆ ಸಿನಿಮಾರಂಗದಲ್ಲಿ ಗುರುತಿಸಿಕೊಳ್ಳಲು ಈಗಾಗಲೇ ಕೆಲಸ ಆರಂಭ ಮಾಡಿದ್ದಾರೆ.

    ಸುದೀಪ್ ತಮ್ಮ ಹುಟ್ಟುಹಬ್ಬವನ್ನ ಅಭಿಮಾನಿಗಳೊಂದಿಗೆ ಸೇರಿ ಸ್ಪೆಷಲ್ ಆಗಿ ಆಚರಿಸುತ್ತಾರೆ. ಅದೇ ರೀತಿ ಕಿಚ್ಚ ತಮ್ಮ ಮನೆಯವರ ಹುಟ್ಟು ಹಬ್ಬವನ್ನು ಕೂಡ ವಿಶೇಷವಾಗಿ ಆಚರಣೆ ಮಾಡಿದ್ದು, ವಿಶೇಷ ಉಡುಗೊರೆಯನ್ನು ನೀಡಿದ್ದಾರೆ.

  • ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

    ಪರೇಶ್ ಮೇಸ್ತಾ ಸಾವಿನ ಪ್ರಕರಣದ ತನಿಖೆ ಸಿಬಿಐ ಹೆಗಲಿಗೆ

    ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಹೊತ್ತಿ ಉರಿದ ಬಳಿಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಹೊನ್ನಾವರದ ಪರೇಶ್ ಮೇಸ್ತಾ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ಒಪ್ಪಿಸಿದೆ.

    ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ, ಪರೇಶ್ ಕುಟುಂಬದ ಬೇಡಿಕೆಯಂತೆ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿರೋದಾಗಿ ತಿಳಿಸಿದ್ದಾರೆ. ಬಿಜೆಪಿಯವರ ಒತ್ತಡಕ್ಕೆ ಮಣಿದು ಈ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ( ಇದನ್ನೂ ಓದಿ: ಪರೇಶ್ ಮೇಸ್ತಾ ಸಾವು: ವೈದ್ಯರ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ )

    ಹಿಂದೂ ಪರ ಸಂಘಟನೆಗಳು ಮತ್ತು ಬಿಜೆಪಿ ನಾಯಕರು ಪರೇಶ್ ಸಾವಿನ ಪ್ರಕರಣವನ್ನು ಎನ್‍ಐಎಗೆ ವಹಿಸಲು ಕೋರಿ ಭಾರೀ ಪ್ರತಿಭಟನೆ ನಡೆಸಿದ್ದರು. ಅತ್ತ ಪರೇಶ್ ಮೇಸ್ತಾ ಅವರದ್ದು ಸಹಜ ಸಾವೆಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿಸಿದ್ದರೂ, ಪರೇಶ್ ತಂದೆ ಕಮಲಾಕರ ಮೇಸ್ತಾ ಕೊಲೆ ಆರೋಪ ಮಾಡಿದ್ದಾರೆ. ( ಇದನ್ನೂ ಓದಿ: Exclusive: ವಿಷವುಣಿಸಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ – ಪರೇಶ್ ಮೇಸ್ತಾ ತಂದೆ ಹೇಳಿಕೆ )

    ಪರೇಶ್‍ನನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆತನ ಕೈಯಲ್ಲಿದ್ದ ಶಿವಾಜಿ ಟ್ಯಾಟುವನ್ನು ದುಷ್ಕರ್ಮಿಗಳು ಚಾಕುವಿನಿಂದ ಹಾಳು ಮಾಡಿದ್ದಾರೆ. ಪೊಲೀಸರು ಹೇಳುವಂತೆ, ಪರೇಶ್ ಮೇಸ್ತಾ ಕಾಲು ಜಾರಿ ಬಿದ್ದಿಲ್ಲ. ಆತನಿಗೆ ಚೆನ್ನಾಗಿಯೇ ಈಜು ಬರುತ್ತಿತ್ತು. ಸತ್ಯಾಸತ್ಯತೆ ಹೊರ ಬರಲು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದರು.

     

     

  • ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

    ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

    ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2018ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 01 ರಿಂದ 17 ರವರೆಗೆ ಪರೀಕ್ಷೆಗಳು ನಡೆಯಲಿವೆ.

    ಪರೀಕ್ಷೆಗಳು ನಡೆಯುವ ದಿನಾಂಕ ಮತ್ತು ವಿಷಯ:
    ಮಾರ್ಚ್ 1 – ಅರ್ಥಶಾಸ್ತ್ರ, ಭೌತಶಾಸ್ತ್ರ
    ಮಾರ್ಚ್ 2 – ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್ಸ್, ಹೆಲ್ತ್‍ಕೇರ್, ಬ್ಯೂಟಿ ಮತ್ತು ವೆಲ್‍ನೆಸ್ (ಎನ್, ಎಸ್, ಕ್ಯೂ, ಎಫ್)
    ಮಾರ್ಚ್ 3 – ಮನ:ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ
    ಮಾರ್ಚ್ 5 – ವ್ಯವಹಾರ ಅಧ್ಯಯನ, ಜೀವಶಾಸ್ತ್ರ
    ಮಾರ್ಚ್ 6 – ಉರ್ದು, ಸಂಸ್ಕøತ
    ಮಾರ್ಚ್ 7 – ರಾಜ್ಯಶಾಸ್ತ್ರ, ಭೂಗರ್ಭ ಶಾಸ್ತ್ರ
    ಮಾರ್ಚ್ 8 – ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ರಸಾಯನಶಾಸ್ತ್ರ
    ಮಾರ್ಚ್ 9 – ತರ್ಕಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ
    ಮಾರ್ಚ್ 10 – ಇತಿಹಾಸ, ಸಂಖ್ಯಾಶಾಸ್ತ್ರ
    ಮಾರ್ಚ್ 12 – ಸಮಾಜ ಶಾಸ್ತ್ರ, ಗಣಿತ, ಬೆಸಿಕ್ ಮ್ಯಾಥ್ಸ್
    ಮಾರ್ಚ್ 13 – ಭೂಗೋಳ ಶಾಸ್ತ್ರ, ಕರ್ನಾಟಕ, ಹಿಂದೂಸ್ಥಾನಿ ಸಂಗೀತ
    ಮಾರ್ಚ್ 14 – ಕನ್ನಡ
    ಮಾರ್ಚ್ 15 – ಹಿಂದಿ
    ಮಾರ್ಚ್ 16 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್,
    ಮಾರ್ಚ್ 17 – ಇಂಗ್ಲೀಷ್

  • ಬೆಳಗೆರೆಗೆ ಜಾಮೀನು ಮಂಜೂರು: ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

    ಬೆಳಗೆರೆಗೆ ಜಾಮೀನು ಮಂಜೂರು: ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

    ಬೆಂಗಳೂರು: ಸಹೋದ್ಯೊಗಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣವನ್ನು ಎದುರಿಸುತ್ತಿರುವ ಹಾಯ್ ಬೆಂಗಳೂರು ಪತ್ರಿಕೆಯೆ ಸಂಪಾದಕ ರವಿ ಬೆಳಗೆರೆಗೆ ಕೋರ್ಟ್ ಷರತ್ತು ಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

    65ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಬುಧವಾರ ಮಧ್ಯಾಹ್ನ ವಕೀಲ ದಿವಾಕರ್, ಬೆಳಗೆರೆ ಅವರು ತೀವ್ರ ಆನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಮನವಿ ಮಾಡಿದರು.

    ನಾವು ಜಾಮೀನು ಅರ್ಜಿಯೇ ಸಲ್ಲಿಸಿಲ್ಲ. ಆದರೆ ಆದರೆ ಸಿಸಿಬಿಯವರು ನಾವು ಜಾಮೀನು ಅರ್ಜಿ ಸಲ್ಲಿಸುವ ಮೊದಲೇ ಜಾಮೀನು ಸಿಗಬಾರದು ಎಂದು ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ ಅವರು ಸ್ವ ಹಿತಾಸಕ್ತಿ ತೋರಿಸುತ್ತಿದ್ದಾರೆ ಎನ್ನುವುದು ಇದರಲ್ಲೇ ಗೊತ್ತಾಗುತ್ತದೆ. ಈ ವಿಚಾರ ನಿರಂತರವಾಗಿ ಮಾಧ್ಯಮದಲ್ಲಿ ಬರುತ್ತಿದೆ ಎಂದಾಗ ನ್ಯಾ. ಮಧುಸೂದನ್ ಅವರು ನಾನು ನ್ಯೂಸ್ ಚಾನೆಲ್ ನೋಡೇ ಇಲ್ಲ ಎಂದು ಚಟಾಕಿ ಹಾರಿಸಿದರು. ಇದಕ್ಕೆ ದಿವಾಕರ್, ನ್ಯೂಸ್ ನೋಡಿ ನಿಮ್ಮನ್ನು ಕೇಳುತ್ತಿಲ್ಲ. ನನ್ನ ಅರಿವಿಗೆ ಬಂತು ಅದಕ್ಕೆ ನಾನು ಕೇಳಿದೆ ಎಂದು ತಿಳಿಸಿದರು. ( ಇದನ್ನೂ ಓದಿ:  ಸುನಿಲ್ ಹೆಗ್ಗರವಳ್ಳಿ ವಿರುದ್ಧ ಮೊದಲ ಬಾರಿಗೆ ಸಿಡಿದ ಯಶೋಮತಿ )

    ಗೌರಿಲಂಕೇಶ್ ಹತ್ಯೆ ವಿಚಾರಣೆಯಲ್ಲಿ ತಾಹಿರ್ ಸಿಕ್ಕಿದ, ತಾಹಿರ್ ಹೇಳಿಕೆಯ ಮೇಲೆ ಶಶಿಧರ್ ಬಂಧನ ಆಯ್ತು. ಆತ ಕೊಟ್ಟ ಸುಳಿವಿನ ಆಧಾರದ ಮೇಲೆ ಶಶಿಧರ್‍ರಿಂದ ರವಿಬೆಳೆಗೆರೆ ಬಂಧನ ಆಯ್ತು. ಆದರೆ ಕೊಲೆಗೆ ಸುಪಾರಿ ಕೊಟ್ಟಿದ್ದಾರೆ ಎನ್ನುವ ಅಂಶಕ್ಕೆ ಸಂಬಂಧ ಪಟ್ಟಂತೆ ವಿಚಾರಣೆ ಮಾಡಲೇ ಇಲ್ಲ. ರವಿ ಬೆಳಗೆರೆ ಅವರನ್ನು ತಕ್ಷಣ ಬಂಧನ ಮಾಡಿದರು. ಆದರೆ ಈಗ ಬೆಳಗೆರೆ ಅವರಿಗೆ ಅನಾರೋಗ್ಯ ಹೆಚ್ಚಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಅಲ್ಲಿ ಸರಿಯಾದ ಚಿಕಿತ್ಸೆ ಭರವಸೆ ಇಲ್ಲ. ಪ್ರಕರಣವನ್ನು ಸಂಪೂರ್ಣವಾಗಿ ತಿರುಚುತ್ತಿದ್ದಾರೆ ಎನ್ನುವ ಅಭಿಪ್ರಾಯ ಇದೆ. ಹೀಗಾಗಿ ಮಧ್ಯಂತರ ಜಾಮೀನು ಮಂಜೂರು ಮಾಡಿ ಎಂದು ದಿವಾಕರ್ ಮನವಿ ಮಾಡಿದರು.

    ಈ ವೇಳೆ ಈಗ ರವಿ ಬೆಳಗೆರೆ ಎಲ್ಲಿದ್ದಾರೆ ಎಂದು ಜಡ್ಜ್ ಪ್ರಶ್ನೆ ಕೇಳಿದರು. ದಿವಾಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಉತ್ತರಿಸಿದರು. ದಿವಾಕರ್ ವಾದವನ್ನು ಅಲಿಸಿದ ನ್ಯಾ. ಮಧುಸೂದನ್ ತೀವ್ರ ಅನಾರೋಗ್ಯ ಕಾರಣದಿಂದಾಗಿ ಬೆಳಗೆರೆಗೆ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಪ್ರಕಟಿಸಿದರು. 1 ಲಕ್ಷ ಬಾಂಡ್, ಇಬ್ಬರ ಶ್ಯೂರಿಟಿ, ಸಾಕ್ಷಿನಾಶ ಮಾಡಬಾರದು, ತನಿಖೆಗೆ ಸಹಕರಿಸುವಂತೆ ನ್ಯಾಯಾಧೀಶರ ಸೂಚನೆ ನೀಡಿ ಜಾಮೀನು ಅರ್ಜಿ ಇತ್ಯರ್ಥವಾಗುವವರೆಗೆ ಜಾಮೀನು ಮಂಜೂರು ಮಾಡಿದರು. (ಇದನ್ನೂ ಓದಿ: ಯಶೋಮತಿಯಿಂದ ಸಲಹೆ ಪಡೆಯುವಷ್ಟು ದಡ್ಡ ನಾನಲ್ಲ- ಸುನಿಲ್ ಹೆಗ್ಗರವಳ್ಳಿ  )

    ಜಾಮೀನು ಸಿಕ್ಕಿದ ಬಳಿಕ ಪ್ರತಿಕ್ರಿಯಿಸಿದ ಬೆಳಗೆರೆ ಪರ ವಕೀಲ ದಿವಾಕರ್, 140 ಪುಟಗಳ ಪೂರಕ ದಾಖಲಾತಿ ಒದಗಿಸಿದ್ವಿ. ಹೀಗಾಗಿ ಮಧ್ಯಂತರ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.

    ಸಿಸಿಬಿ ಪೊಲೀಸರು ರವಿ ಬೆಳಗೆರೆಯನ್ನು ಬಂಧಿಸಿ ಸೋಮವಾರ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ವೇಳೆ ಕೋರ್ಟ್ ಬೆಳಗೆರೆ ಅವರಿಗೆ ಡಿಸೆಂಬರ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಪ್ರಕಟಿಸಿತ್ತು. ಈ ಆದೇಶ ಪ್ರಕಟವಾದ ಬಳಿಕ ರವಿ ಬೆಳಗೆರೆ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.

  • ಬಿಎಸ್‍ವೈ ರಾಜಕೀಯದಲ್ಲೇ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ: ಸಿಎಂ

    ಬಿಎಸ್‍ವೈ ರಾಜಕೀಯದಲ್ಲೇ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ: ಸಿಎಂ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮುಂದೆ ಸಿದ್ದರಾಮಯ್ಯ ಬಚ್ಚಾ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

    ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿ ಅವರು ಯಡಿಯೂರಪ್ಪ ರಾಜಕೀಯದಲ್ಲಿ ಅತ್ಯಂತ ಬೇಜವಾಬ್ದಾರಿಯುತ ಮನುಷ್ಯ. ಯಡಿಯೂರಪ್ಪಗೆ ರಾಜಕೀಯ ಸಂಸ್ಕೃತಿ ಇಲ್ಲ. ಅವರಿಗೆ ಸಂಸದೀಯ ಪದಗಳೇ ಗೊತ್ತಿಲ್ಲ. ನಾನು ಮೋದಿ, ಯಡಿಯೂರಪ್ಪ ಇಬ್ಬರನ್ನು ಹೋಲಿಕೆ ಮಾಡಿಕೊಳ್ಳುವುದಿಲ್ಲ. 40 ವರ್ಷಗಳಿಂದ ಸಾರ್ವಜನಿಕ ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು ಹೇಳಿದರು.

    ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದ ಮೇಲೆ ಅಚ್ಚೇ ದಿನ ಬರುತ್ತದೆ ಎನ್ನುವ ಬಿಎಸ್ ವೈ ಹೇಳಿಕೆಗೂ ತಿರುಗೇಟು ನೀಡಿದ ಅವರು, ಅಚ್ಚೇ ದಿನ ಬರುತ್ತೆ ಅಂತ ಹೇಳಿದ್ದು ಯಾರು? ಮೋದಿ ಹೇಳಿ ಎಷ್ಟು ದಿನ ಆಯ್ತು? ಕ್ಯಾ ಅಚ್ಚೇ ದಿನ್ ಆಗಯಾ ಕ್ಯಾ ಅಂತ ಹಿಂದಿಯಲ್ಲೇ ಪ್ರಶ್ನೆ ಮಾಡಿದರು. ಬಿಜೆಪಿಯವರು ತಿಪ್ಪರಲಾಗ ಹಾಕಿದ್ರೂ ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲಿ ಸಾಧ್ಯವಿಲ್ಲ. ಬಿಜೆಪಿ ನಾಯಕರು, ಯಡಿಯೂರಪ್ಪ ಹತಾಶರಾಗಿದ್ದಾರೆ. ಅದಕ್ಕೆ ಏನೇನೋ ಬಾಯಿಗೆ ಬಂದಂತೆ ಮಾತಾಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಗೊತ್ತಾಗಿದೆ ಅದ್ದರಿಂದಲೇ ಅವರು ಹೀಗೆ ಕಿತಾಪತಿ ಮಾಡುತ್ತಿದ್ದಾರೆ. ಸತ್ತ ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ನನ್ನನ್ನು ಕಂಡರೆ ಮೋದಿಗೆ ಭಯ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈ ವಿಚಾರವನ್ನು ಕಲಬುರಗಿಯಲ್ಲಿ ನಡೆದ ನವಕರ್ನಾಟಕ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಬಿಎಸ್‍ವೈ ಪ್ರಸ್ತಾಪಿಸಿ, ಮೋದಿ ಮುಂದೆ ಸಿದ್ದರಾಮಯ್ಯ ಬಚ್ಚಾ, ನಾಚಿಕೆಯಾಗಬೇಕು ನಿಮಗೆ ಎಂದು ಹೇಳಿದ್ದರು. ಅಲ್ಲದೇ ಸಿಎಂ ರಾಜ್ಯದಲ್ಲಿ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.