Tag: bangkok

  • ಸ್ಪಂದನಾ ನಿಧನ: ಕೋವಿಡ್ ನಂತರ ಹೃದಯಾಘಾತ ಹೆಚ್ಚಾಗುತ್ತಿವೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ

    ಸ್ಪಂದನಾ ನಿಧನ: ಕೋವಿಡ್ ನಂತರ ಹೃದಯಾಘಾತ ಹೆಚ್ಚಾಗುತ್ತಿವೆ ಎಂದ ಮಾಜಿ ಸಿಎಂ ಕುಮಾರಸ್ವಾಮಿ

    ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ (Spandana) ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಕನ್ನಡ ಚಿತ್ರರಂಗದ ನಟ ವಿಜಯ ರಾಘವೇಂದ್ರ ಅವರ  ಧರ್ಮಪತ್ನಿ ಬ್ಯಾಂಕಾಕ್  ಪ್ರವಾಸದಲ್ಲಿದ್ದಾಗ ಹೃದಯಾಘಾತಕ್ಕೆ (Hear Attack) ಒಳಗಾಗಿ ಮೃತರಾಗಿದ್ದಾರೆ. ಅವರ ನಿಧನ ಎಲ್ಲರಿಗೂ ಆಘಾತ ತಂದಿದೆ. ಚಿಕ್ಕ ವಯಸ್ಸಿನಲ್ಲಿ ಆರೋಗ್ಯವಾಗಿ ಇದ್ದೋರು ಇಂತಹ ಸಾವು ಆಗಿರೋದು ಯಾರು ನಿರೀಕ್ಷೆ ಮಾಡಿರಲಿಲ್ಲ. ಅವರ ಕುಟುಂಬದವರೂ ನಿರೀಕ್ಷೆ ಮಾಡಿರಲಿಲ್ಲ. ಇದೊಂದು ಆಘಾತಕಾರಿ ಘಟನೆ’ ಎಂದಿದ್ದಾರೆ.

    ಮುಂದುವರಿದು ಮಾತನಾಡಿದ ಕುಮಾರಸ್ವಾಮಿ, ‘ಇತ್ತೀಚಿನ ದಿನಗಳಲ್ಲಿ ಕೋವಿಡ್ ನಂತರ ಇಂತಹ ಘಟನೆಗಳು ಅಚ್ಚರಿ ರೂಪದಲ್ಲಿ ಆಗುತ್ತಿವೆ. ಇದರ ಮೂಲ ಹಿನ್ನೆಲೆ ಕೋವಿಡ್ (COVID 19) ನಂತರ ಆದ ಕೆಲ ಸಮಸ್ಯೆ, ಮನುಷ್ಯನ ದೇಹದ ಮೇಲೆ ಆಗಿರೋ ಸಮಸ್ಯೆಗಳಿಂದ ಹೀಗೆ ಆಗ್ತಿದೆ. ಪ್ರತಿಯೊಬ್ಬರೂ ಎಚ್ಚರಿಕೆಯಿಂದ, ಜಾಗೃತೆಯಿಂದ ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕು. ಆಗಾಗ ಚೆಕಪ್ ಮಾಡಿಸಿಕೊಳ್ಳುವ ಕೆಲಸವೂ ಆಗಬೇಕು’ ಎಂದರು. ಇದನ್ನೂ ಓದಿ:ಟೈಗರ್ ಶ್ರಾಫ್ ಜೊತೆ ಬ್ರೇಕಪ್? ಹೊಸ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ದಿಶಾ

    ಚಿಕ್ಕ ವಯಸ್ಸಿನಲ್ಲಿ ಇಂತಹ ಸಾವು ಕುಟುಂಬದಲ್ಲಿ ದೊಡ್ಡ ನೋವು ತರಿಸಿದೆ. ಆ ನೋವಿನಿಂದ ಹೊರ ಬರೋದು ತುಂಬಾ ಕಷ್ಟ. ಅವರ ಕುಟುಂಬಕ್ಕೆ ಆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

     

    ಈಗಾಗಲೇ ವಿಜಯ ರಾಘವೇಂದ್ರ (Vijaya Raghavendra) ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ.  ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passedway) ವೈದ್ಯರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    ಸ್ಪಂದನಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

    ಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು’ ಎಂದು ಟ್ವೀಟ್ ಮಾಡಿದ್ದಾರೆ.

    ಶ್ರೀಮುರಳಿ ಹೇಳಿದ್ದೇನು?

    ಸ್ಪಂದನಾ (Spandana) ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಗೆ ಆಘಾತ ಮೂಡಿಸಿದೆ’ ಎಂದು ಹೇಳಿದರು. ಇದನ್ನೂ ಓದಿ:ತಮಿಳಿಗೆ ಹಾರಿದ ‘ಸೀತಾರಾಮಂ’ ನಟಿ- ಶಿವಕಾರ್ತಿಕೇಯನ್‌ಗೆ ಮೃಣಾಲ್ ನಾಯಕಿ

    ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ (Vijaya Raghavendra) ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.

     

    ಈಗಾಗಲೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ.  ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passway) ವೈದ್ಯರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ ನನಗೆ ಸಿಕ್ಕಿರುವ ಮಾಹಿತಿ : ನಟ ಶ್ರೀಮುರಳಿ

    ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ ನನಗೆ ಸಿಕ್ಕಿರುವ ಮಾಹಿತಿ : ನಟ ಶ್ರೀಮುರಳಿ

    ಸ್ಪಂದನಾ (Spandana) ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,’ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಕೆ ಆಘಾತ ಮೂಡಿಸಿದೆ’ ಎಂದು ಹೇಳಿದರು.

    ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ (Vijaya Raghavendra) ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.

     

    ಈಗಾಗಲೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್ (Bangkok)ಗೆ ತೆರಳಿದೆ.  ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ (Passedway) ವೈದ್ಯರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ನಿರ್ಮಲ’ ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ

    ‘ನಿರ್ಮಲ’ ಚಿತ್ರಕ್ಕೆ ಅತ್ಯುತ್ತಮ ಮಕ್ಕಳ ಚಿತ್ರ ಪ್ರಶಸ್ತಿ

    ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಇಂಟರ್ ನ್ಯಾಶನಲ್ ಫಿಲಂ ಫೆಸ್ಟಿವಲ್ ನಲ್ಲಿ ಕನ್ನಡದ ‘ನಿರ್ಮಲ’ (Nirmala) ಚಿತ್ರ ಅತ್ಯುತ್ತಮ ಮಕ್ಕಳ ಚಿತ್ರ (Children’s Film) ಅವಾರ್ಡ್ ಪಡೆದುಕೊಂಡಿದೆ. ಉಲ್ಲಾಸ್ ಎಂಟರ್ಪ್ರೈಸಸ್ ಬ್ಯಾನರ್ ನಡಿ ನಿರ್ಮಾಣವಾದ ಈ ಚಿತ್ರ ಜರ್ಮನ್, ಥಾಯ್ಲೆಂಡ್, ಇಟಲಿ, ಉಕ್ರೇನ್ ಸೇರಿದಂತೆ ಹತ್ತಕ್ಕೂ ಹೆಚ್ಚು ಭಾಷೆಯ ಮಕ್ಕಳ ಸಿನಿಮಾಗಳ ನಡುವೆ ಅತ್ಯುತ್ತಮ ಮಕ್ಕಳ ಸಿನಿಮಾ ಪ್ರಶಸ್ತಿಗೆ ಪಾತ್ರವಾಗಿದೆ. ಥಾಯ್ಲೆಂಡ್ ಮಾಜಿ ಪ್ರಧಾನಿ ಪ್ರಶಸ್ತಿಯನ್ನು ಪ್ರಧಾನ ಮಾಡುವ ಮೂಲಕ ಕನ್ನಡ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಬ್ಯಾಂಕಾಕ್ (Bangkok) ನಲ್ಲಿ ನಡೆಯುತ್ತಿರುವ ಮೂರನೇ ಇಂಟರ್ ನ್ಯಾಶನಲ್ ಫಿಲಂ ಫೆಸ್ಟಿವಲ್ ಇದಾಗಿದ್ದು, ಕರ್ನಾಟಕದಿಂದ ಮಕ್ಕಳ ಚಿತ್ರವಾಗಿ ‘ನಿರ್ಮಲ’ ಸಿನಿಮಾ ಮಾತ್ರ ಆಯ್ಕೆ ಆಗಿತ್ತು. ಬೇರೆ ಬೇರೆ ಭಾಷೆಯ ಹಲವು ಸಿನಿಮಾಗಳು ಪ್ರಶಸ್ತಿ ರೇಸ್ ನಲ್ಲಿದ್ದರೂ ಅಂತಿಮವಾಗಿ ನಮ್ಮ ಬ್ಯಾನರ್ ನಿರ್ಮಾಣದ ‘ನಿರ್ಮಲ’ ಸಿನಿಮಾ ಈ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಕ್ಯಾಮೆರಾ ಮ್ಯಾನ್ ಹಾಗೂ ಪ್ರೊಡಕ್ಷನ್ ಹೊರತುಪಡಿಸಿ ಎಲ್ಲಾ ವಿಭಾಗದಲ್ಲೂ ಹದಿನಾರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳೇ ಸೇರಿ ಮಾಡಿರುವ ಸಿನಿಮಾವಿದು. ನಿರ್ದೇಶನ, ನಟನೆ, ಸಂಕಲನ, ಮೇಕಪ್, ಮ್ಯೂಸಿಕ್ ಎಲ್ಲವನ್ನು ಮಕ್ಕಳೇ ಮಾಡಿರೋದು ಈ ಚಿತ್ರದ ವಿಶೇಷ. ಅಲ್ಲಿ ಬಂದವರೆಲ್ಲ ಸಿನಿಮಾ ಬಗ್ಗೆ ಕೇಳಿ ಆಶ್ಚರ್ಯ ಹಾಗೂ ಹರುಷ ವ್ಯಕ್ತಪಡಿಸಿದ್ರು ಎಂದು ಚಿತ್ರದ ನಿರ್ಮಾಪಕ ಉಲ್ಲಾಸ್ ಎಂಟರ್ಪ್ರೈಸಸ್ ಬ್ಯಾನರ್ ನ ಉಲ್ಲಾಸ್ ಗೌಡ (Ullas Gowda) ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸದ್ಯಕ್ಕಿಲ್ಲ ‘ಕಿರಿಕ್ ಪಾರ್ಟಿ 2’ : ಈಗೇನಿದ್ದರೂ ರಿಚರ್ಡ್ ಆಂಟನಿ ಗುಂಗಿನಲ್ಲಿ ರಕ್ಷಿತ್

    ಬೆಂಗಳೂರು ಇಂಟರ್ ನ್ಯಾಶನಲ್ ಫೆಸ್ಟಿವಲ್ ಗೆ ಆಯ್ಕೆ ಆಗಿ ಇನ್ನೇನು ಸಿನಿಮಾ ಬಿಡುಗಡೆ ಮಾಡಬೇಕು ಎನ್ನುವಾಗ ಕೋವಿಡ್ ಬಂತು. ಆನ್‌ಲೈನ್ ನಲ್ಲಿ ಹಲವು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಲ್ಲಿ ಈ ಚಿತ್ರ ಪ್ರದರ್ಶನಗೊಂಡಿದೆ. ಬ್ಯಾಂಕಾಕ್ ಇಂಟರ್ ನ್ಯಾಶನಲ್ ಫೆಸ್ಟಿವಲ್ ನಲ್ಲಿ ಈ ಸಿನಿಮಾ ಆಯ್ಕೆ ಆಗಿ ಪ್ರಶಸ್ತಿ ಪಡೆದುಕೊಂಡಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷನಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಶಸ್ತಿ ಸ್ವೀಕರಿಸಿದ್ದು ತುಂಬಾ ಖುಷಿ ಕೊಟ್ಟಿದೆ. ನಮ್ಮ ಬ್ಯಾನರ್ ನಲ್ಲಿ ಇಂತಹದೊಂದು ಸಿನಿಮಾ ಮೂಡಿ ಬಂದಿರೋದು ಹೆಮ್ಮೆ ಎನಿಸುತ್ತದೆ ಎಂದು ಭಾ.ಮ.ಹರೀಶ್ ಸಂತಸ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜಾದೂಗಾರ ಕುದ್ರೋಳಿ ಗಣೇಶ್‌ಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ

    ಜಾದೂಗಾರ ಕುದ್ರೋಳಿ ಗಣೇಶ್‌ಗೆ ಎರಡು ಅಂತಾರಾಷ್ಟ್ರೀಯ ಪ್ರಶಸ್ತಿ

    ಮಂಗಳೂರು: ಥೈಲ್ಯಾಂಡಿನ (Thailand) ಬ್ಯಾಂಕಾಕ್‌ನಲ್ಲಿ (Bangkok) ಇತ್ತೀಚೆಗೆ ನಡೆದ ವಿಶ್ವ ಜಾದೂ ಸಮ್ಮೇಳನದಲ್ಲಿ (World Magic Conference) ಜಾದೂಗಾರ (Magician) ಕುದ್ರೋಳಿ ಗಣೇಶ್ (Ganesh Kudroli) ಅವರು ಪ್ರಸುತ ಪಡಿಸಿದ ತುಳುನಾಡು ತುಡರ್ ಚೆಂಡು ಜಾದೂವಿಗೆ ಎರಡು ಅಂತಾರಾಷ್ಟ್ರೀಯ ಮಟ್ಟದ ಪುರಸ್ಕಾರಗಳು ಲಭಿಸಿದೆ.

    ಜಗತ್ತಿನ ಅತ್ಯಂತ ಪುರಾತನ ಜಾದೂ ಆಗಿರುವ ಕಪ್ಸ್ ಆಂಡ್ ಬಾಲ್ಸ್ ಮ್ಯಾಜಿಕ್ ಅನ್ನು ಕುದ್ರೋಳಿ ಗಣೇಶ್ ಅವರು ನೂತನ ತಂತ್ರಗಾರಿಕೆಯ ಮೂಲಕ ತುಳು ಭಾಷೆ ಹಾಗೂ ಪಾಡ್ದನದ ಮೂಲಕ ಪ್ರಸ್ತುತ ಪಡಿಸಿದ ಸೃಜನಶೀಲತೆಯನ್ನು ಪರಿಗಣಿಸಿ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿರುವ ಜಗತ್ತಿನ ಬೃಹತ್ ಜಾದೂ ಸಂಸ್ಥೆ ಅನ್ನುವ ಹೆಗ್ಗಳಿಕೆ ಹೊಂದಿದ ಅಮೆರಿಕಾದ ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯು ಪ್ರತಿಷ್ಟಿತ ಮರ್ಲಿನ್ ಮೆಡಲ್ ನೀಡಿ ಗೌರವಿಸಿದೆ. ತುಳುನಾಡು ತುಡರ್ ಚೆಂಡು ಜಾದೂವಿನ ಹೊಸತನವನ್ನು ಗಮನಿಸಿ ವಿಶ್ವ ಜಾದೂ ಸಮ್ಮೇಳನ ಸಂಘಟಿಸಿದ ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಮೋಸ್ಟ್ ಓರಿಜಿನಲ್ ಆಕ್ಟ್ ಪ್ರಶಸ್ತಿ ನೀಡಿ ಪುರಸ್ಕರಿಸಿದೆ.

    ಇಂಟರ್ ನ್ಯಾಶನಲ್ ಸೊಸೈಟಿ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಅಮೆರಿಕಾದ ಜಾದೂಗಾರ ಟೋನಿ ಹಸೀನಿ ಹಾಗೂ ಉಕ್ರೇನಿನ ಜಾದೂಗಾರ ವೊರೋನಿನ್ ಅವರು ಕುದ್ರೋಳಿ ಗಣೇಶ್ ಅವರಿಗೆ ಪುರಸ್ಕಾರ ನೀಡಿ ಗೌರವಿಸಿದರು. ಥೈಲ್ಯಾಂಡ್ ಇಂಟರ್ ನ್ಯಾಶನಲ್ ಅಕಾಡೆಮಿ ಆಫ್ ಮ್ಯಾಜಿಕ್ ಸಂಸ್ಥೆ ಅಧ್ಯಕ್ಷರಾದ ಜಾದೂಗಾರ ಮಮದಾ ಹಾಗೂ ಭಾರತದ ದಿಲ್ಲಿ ಸ್ಕೂಲ್ ಆಫ್ ಮ್ಯಾಜಿಕ್ ಸಂಸ್ಥೆಯ ಅಧ್ಯಕ್ಷರಾದ ಜಾದೂಗಾರ ರಾಜ್ ಕುಮಾರ್ ಉಪಸ್ಥಿತರಿದ್ದರು. ಇದನ್ನೂ ಓದಿ: 10 ಅಡಿ ಸುರಂಗ ಕೊರೆದು ಬ್ಯಾಂಕ್‍ನಲ್ಲಿದ್ದ 1 ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಖದೀಮರು

    ಹಾಂಗ್ ಕಾಂಗ್ ಜಾದೂಗಾರರಾದ ಅಲ್ಬರ್ಟ್ ಟಾಮ್ ಮತ್ತು ಬಾಂಡ್ ಲೀ, ಇಂಡೋನೇಶಿಯಾದ ಜಾದೂಗಾರ ಹ್ಯಾಂಡಿ, ಸಿಂಗಾಪುರದ ಜಾದೂಗಾರ ಕಸ್ಸಿಡಿ ಲೀ ಮುಂತಾದವರು ಆಯ್ಕೆ ಸಮಿತಿಯಲ್ಲಿದ್ದರು. ಬ್ಯಾಂಕಾಕ್‌ನ ಫ್ಯಾಶನ್ ಐಲ್ಯಾಂಡ್ ಮಾಲ್ ಪ್ರಾಂಗಣದಲ್ಲಿ ನಡೆದ ಐದು ದಿನಗಳ ವಿಶ್ವ ಜಾದೂ ಸಮ್ಮೇಳನದಲ್ಲಿ ಜಗತ್ತಿನ ಹತ್ತಕ್ಕೂ ಹೆಚ್ಚು ದೇಶಗಳ ನೂರಾರು ಜಾದೂಗಾರರು ಭಾಗವಹಿಸಿದ್ದರು. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿ ಪ್ರಕಟ

    Live Tv
    [brid partner=56869869 player=32851 video=960834 autoplay=true]

  • ಬ್ಯಾಂಕಾಕ್‍ನಿಂದ ಚೆನ್ನೈಗೆ ಮುಂಗುಸಿಯನ್ನು ಬ್ಯಾಗ್‍ನಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ ಪ್ರಯಾಣಿಕ ಅರೆಸ್ಟ್

    ಬ್ಯಾಂಕಾಕ್‍ನಿಂದ ಚೆನ್ನೈಗೆ ಮುಂಗುಸಿಯನ್ನು ಬ್ಯಾಗ್‍ನಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ ಪ್ರಯಾಣಿಕ ಅರೆಸ್ಟ್

    ಚೆನ್ನೈ: ಚೆಕ್ ಇನ್ ಬ್ಯಾಗೇಜ್‍ನಲ್ಲಿ ಬ್ಯಾಂಕ್‍ಕ್‍ನಿಂದ (Bangkok) ಅಕ್ರಮವಾಗಿ ಸಾಗಿಸಲಾಗಿದ್ದ 5 ವಿದೇಶಿ ಪ್ರಾಣಿಗಳನ್ನು (Animals) ಚೆನ್ನೈನ (Chennai) ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

    ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಲವಾರು ಮುಂಗುಸಿ ಹಾಗೂ ಕ್ಯೂಕಸ್ ಅನ್ನು ಚೀಲದಲ್ಲಿ ಮರೆ ಮಾಡಲಾಗಿತ್ತು. ಈ ಎಲ್ಲಾ ಪ್ರಾಣಿಗಳು ಬ್ಯಾಂಕಾಕ್‍ನಿಂದ ಬಂದ ಪ್ರಯಾಣಿಕನ (Passenger) ಬ್ಯಾಗ್‍ನಲ್ಲಿತ್ತು. ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಥೈಲ್ಯಾಂಡ್‍ಗೆ ಕಳುಹಿಸಿದ್ದಾರೆ.

    ಮುಂಗುಸಿ ಅಂಗೋಲಾ, ಉತ್ತರ ನಮೀಬಿಯಾ, ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್, ಜಾಂಬಿಯಾ ಮತ್ತು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿರುವ ಮುಂಗುಸಿ ಜಾತಿಯಾಗಿದೆ. ಇದು ಹಳದಿ, ಕೆಂಪು, ಕಡು ಕಂದು ಬಣ್ಣದಲ್ಲಿದೆ. ಇದನ್ನೂ ಓದಿ: ಡೆಂಗ್ಯೂ ರೋಗಿಗೆ ಡ್ರಿಪ್‍ನಲ್ಲಿ ಮೊಸಂಬೆ ಜ್ಯೂಸ್ ನೀಡಿದ್ದ ಆಸ್ಪತ್ರೆಗೆ ಇದೀಗ ಬುಲ್ಡೋಜರ್ ಭಯ

    ಘಟನೆಗೆ ಸಂಬಂಧಿಸಿ ಚೆನ್ನೈನಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಯಾಣಿಕನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಹಿಳೆಯನ್ನು ಗುರಾಯಿಸಿದ್ದಕ್ಕೆ ಪೊಲೀಸರಿಂದ ಕಪಾಳಮೋಕ್ಷ – ಸೇಡಿಗೆ ವ್ಯಕ್ತಿ ಮಾಡಿದ್ದೇನು ಗೊತ್ತಾ?

    Live Tv
    [brid partner=56869869 player=32851 video=960834 autoplay=true]

  • ತನ್ನ ಪತಿಯನ್ನು ಖುಷಿಯಾಗಿರಿಸಲು ಮೂವರು ಸುಂದರಿಯರನ್ನ ಕೆಲಸಕ್ಕೆ ನೇಮಿಸಿದ ಪತ್ನಿ!

    ತನ್ನ ಪತಿಯನ್ನು ಖುಷಿಯಾಗಿರಿಸಲು ಮೂವರು ಸುಂದರಿಯರನ್ನ ಕೆಲಸಕ್ಕೆ ನೇಮಿಸಿದ ಪತ್ನಿ!

    ಬ್ಯಾಂಕಾಕ್: ಸತಿ-ಪತಿಗಳಿಬ್ಬರು ಒಬ್ಬರಿಗೊಬ್ಬರು ಅರ್ಥಮಾಡಿಕೊಂಡು ಸುಖವಾಗಿದ್ದರೆ ಸಂಸಾರ ಹಾಲು-ಜೇನು ಎಂದು ಎಲ್ಲರೂ ಹೇಳುತ್ತಾರೆ. ಇದಕ್ಕೆ ಥಾಯ್‌ಲ್ಯಾಂಡ್‌ನ ಮಹಿಳೆಯೊಬ್ಬರು ಸಾಕ್ಷಿಯಾಗಿ ನಿಲ್ಲುತ್ತಾಳೆ.

    ಹೌದು.. ಬ್ಯಾಂಕಾಕ್‌ನ 44 ವರ್ಷದ ಪಾತೀಮಾ ಚಮ್ನಾನ್, ತನ್ನ ಪತಿಯನ್ನು ಸಂತೋಷವಾಗಿಡಲು ಮೂವರು ಸುಂದರ ಹಾಗೂ ವಿದ್ಯಾವಂತ ಪ್ರೇಯಸಿಯರನ್ನ ಕೆಲಸಕ್ಕೆ ನೇಮಿಸಿಕೊಂಡಿದ್ದಾಳೆ. ತನ್ನ ಪತಿಯೊಂದಿಗೆ ಆಕೆ ಹೆಚ್ಚು ಸಮಯ ಕೊಡಲು ಆಗುತ್ತಿಲ್ಲ ಎಂಬ ಕಾರಣಕ್ಕೆ ಪ್ರೇಯಸಿಯನ್ನ ಕೆಲಸಕ್ಕೆ ನೇಮಿಸಿಕೊಂಡಿರುವುದಾಗಿ ಹೇಳಿದ್ದಾಳೆ. ಇದನ್ನೂ ಓದಿ: ವಾಮನ ಟೀಸರ್ ರಿಲೀಸ್, ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್

    ಇತ್ತೀಚೆಗೆ ಚಮ್ನಾನ್ ಅವರು ಕಾಲೇಜು ಡಿಪ್ಲೋಮಾ ಹೊಂದಿರುವ ಯುವ ಹಾಗೂ ಏಕಾಂಗಿ ಮಹಿಳೆಯರನ್ನು ಕೆಲಸಕ್ಕಾಗಿ ಹುಡುಕುವ ಬಗ್ಗೆ ವೀಡಿಯೋ ಜಾಹೀರಾತನ್ನು ಜಾಲತಾಣದಲ್ಲಿ ಪ್ರಕಟಿಸಿದ್ದರು. ಅದಕ್ಕಾಗಿ 15 ಸಾವಿರ ಬಹ್ತ್ (33,800 ರೂ.) ವೇತನ ನೀಡುವುದಾಗಿಯೂ ಹೇಳಿದ್ದರು. ಇದರೊಂದಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ನೀವು ನನಗೆ ಸಹಾಯ ಮಾಡಬೇಕು. ನನ್ನ ಕಚೇರಿಯಲ್ಲಿ ದಾಖಲೆಗಳ ಸಿದ್ಧತೆಗಾಗಿ ಇಬ್ಬರು ಹಾಗೂ ನಾನು, ನನ್ನ ಪತಿ-ಮಗುವನ್ನು ನೋಡಿಕೊಳ್ಳಲು ಒಬ್ಬರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ವೀಡಿಯೋನಲ್ಲಿ ಹೇಳಿದ್ದರು.

    ನನ್ನ ನಿಮ್ಮ ನಡುವೆ ಯಾವುದೇ ಜಗಳ ನಡೆಯುವುದಿಲ್ಲ ಎಂದು ನಾನು ಭರವಸೆ ನೀಡುತ್ತೇನೆ. ನನ್ನ ಪತಿ ಏಕಾಂಗಿಯಾಗಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾನೆ. ನಾನು ಅವನನ್ನು ಸಂತೋಷವಾಗಿಡಲು ಬಯಸುತ್ತೇನೆ. ಮನೆಗೆ ಸ್ನೇಹಿತರು ಬಂದಾಗ ನಾನು ಅವನೊಂದಿಗೆ ಇರಲು ಬಯಸುತ್ತೇನೆ. ಹಾಗಾಗಿ ಮಹಿಳೆಯರ ಅಗತ್ಯವಿದೆ. ಆದರೆ ಕೆಲಸಕ್ಕೆ ಬರುವವರು ಮಕ್ಕಳನ್ನು ಹೊಂದಿರಬಾರದು, ಉತ್ತಮ ಸಂವಹನ ಕೌಶಲ ಇರಬೇಕು. ಜೊತೆಗೆ ಪ್ರೇಯಸಿಯರು ನನ್ನ ಪತಿಯನ್ನು ಮೆಚ್ಚಿಸಲು, ಅವನನ್ನು ಸಂತೋಷಪಡಿಸಲು ಹಾಗೂ ಒಡನಾಟದಲ್ಲಿ ಸಮರ್ಥರಾಗಿರುವಂತಹವರು ಆಗಿರಬೇಕು ಎಂದು ಷರತ್ತು ವಿಧಿಸಿದ್ದಾರೆ. ಇದನ್ನೂ ಓದಿ: ದೇಶ ವಿಭಜನೆ ಒಪ್ಪಿಕೊಳ್ಳದಿದ್ರೆ ಭಾರತ ಛಿದ್ರವಾಗ್ತಿತ್ತು- ಪಟೇಲ್ ಹೇಳಿಕೆ ಪುನರುಚ್ಚರಿಸಿದ ಸೋನಿಯಾ

    ಅದರಂತೆ ಮೂವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಕಚೇರಿ ಕೆಲಸ ಮಾಡಲು ಇಬ್ಬರು ಹಾಗೂ ಮನೆಯಲ್ಲಿ ಗಂಡ-ಹೆಂಡತಿ ಮಕ್ಕಳನ್ನು ನೋಡಿಕೊಳ್ಳಲು 33 ವರ್ಷದ ಮಹಿಳೆ ಒಪ್ಪಿಕೊಂಡಿದ್ದಾಳೆ. ಆದರೆ ಆಕೆ ಚಮ್ಮಾನ್ ಸ್ನೇಹಿತೆಯೇ ಆಗಿದ್ದಾಳೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ.

    Live Tv

  • ಹಪ್ಪಳದ ಪ್ಯಾಕೆಟ್‍ನಲ್ಲಿ 15 ಲಕ್ಷ ಮೌಲ್ಯದ ಅಮೆರಿಕನ್ ಡಾಲರ್‌ – ವ್ಯಕ್ತಿ ಬಂಧನ

    ಹಪ್ಪಳದ ಪ್ಯಾಕೆಟ್‍ನಲ್ಲಿ 15 ಲಕ್ಷ ಮೌಲ್ಯದ ಅಮೆರಿಕನ್ ಡಾಲರ್‌ – ವ್ಯಕ್ತಿ ಬಂಧನ

    ನವದೆಹಲಿ: ಬ್ಯಾಂಕಾಕ್‍ಗೆ ತೆರಳುತ್ತಿದ್ದ ಭಾರತೀಯ ವ್ಯಕ್ತಿಯೊಬ್ಬ 15 ಲಕ್ಷ ರೂ ಮೌಲ್ಯದ ಅಮೆರಿಕನ್ ಡಾಲರ್‌ಗಳನ್ನು ಹಪ್ಪಳದ ಪ್ಯಾಕೆಟ್‍ನಲ್ಲಿ ಬಚ್ಚಿಟ್ಟಿದ್ದ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.

    ಇಂದಿರಾಗಾಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪಡೆಗಳು ತಪಾಸಣೆ ನಡೆಸುವ ಸಮಯದಲ್ಲಿ ಹಪ್ಪಳ ಇರುವ ಪ್ಯಾಕೆಟ್‍ನಲ್ಲಿ ಭಾರಿ ಮೊತ್ತದ ಅಮೆರಿಕನ್ ಡಾಲರ್‌ಗಳು ಪತ್ತೆ ಆಗಿದೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಬಂಧಿಸಲಾಗಿದೆ.

    ಬ್ಯಾಂಕಾಕ್‍ಗೆ ಪ್ರಯಾಣಿಸುವ ವೇಳೆ ತನ್ನ ಲಗೇಜ್ ಬ್ಯಾಗ್‍ನಲ್ಲಿರುವ ಹಪ್ಪಳ ತುಂಬಿದ ಪ್ಯಾಕೆಟ್‍ನಲ್ಲಿ 19,900 ಡಾಲರ್(14.5 ಲಕ್ಷ ರೂ.) ವನ್ನು ಇಟ್ಟುಕೊಂಡಿದ್ದ. ಇದು ತಪಾಸಣೆ ವೇಳೆ ಸಿಬ್ಬಂದಿಗೆ ದೊರಕಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿದಿಲ್ಲ, ಅದು ಸ್ವಾಭಾವಿಕ: ನಿರ್ಮಲಾ ಸೀತಾರಾಮನ್

    ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿಯಿಂದ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ದೇಶದಲ್ಲಿ ʻಪ.ಬಂಗಾಳ ಪಡಿತರ ಮಾದರಿʼ ಜಾರಿಗೊಳಿಸಿ – ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಧಾನಿ ಮೋದಿ ಸಹೋದರ ಪ್ರತಿಭಟನೆ

    Live Tv
    [brid partner=56869869 player=32851 video=960834 autoplay=true]

  • ಬ್ಯಾಂಕಾಕ್‌ಗೆ ಹಾರಿದ ಮೋಹಕ ತಾರೆ ರಮ್ಯಾ: ಫೋಟೋ ವೈರಲ್

    ಬ್ಯಾಂಕಾಕ್‌ಗೆ ಹಾರಿದ ಮೋಹಕ ತಾರೆ ರಮ್ಯಾ: ಫೋಟೋ ವೈರಲ್

    ಚಂದನವನದ ಚೆಂದದ ನಟಿ ರಮ್ಯಾ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಅಗಿದ್ದಾರೆ. ಮತ್ತೆ ಸಿನಿಮಾಗೆ ಕಂಬ್ಯಾಕ್ ಮಾಡಲು ತೆರೆಮರೆಯಲ್ಲಿ ಸಖತ್ ಕಸರತ್ತು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಈಗ ಸ್ನೇಹಿತೆಯರೊಂದಿಗೆ ನಟಿ ರಮ್ಯಾ ಬ್ಯಾಂಕಾಕ್‌ಗೆ ಹಾರಿದ್ದಾರೆ. ನಟಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹಲ್‌ಚಲ್ ಎಬ್ಬಿಸುತ್ತಿದೆ.

    `ಅಭಿ’ ಸಿನಿಮಾದ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ರಮ್ಯಾ, ಸಾಕಷ್ಟು ಹಿಟ್ ಸಿನಿಮಾಗಳ ಮೂಲಕ ಕಮಾಲ್ ಮಾಡಿದ್ದರು. ಕಡೆಯದಾಗಿ ʻನಾಗರಹಾವುʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ನಂತರ ರಾಜಕೀಯ ರಂಗದಲ್ಲಿ ಬ್ಯುಸಿಯಾದ್ದರು. ಸಿನಿಮಾ ಮತ್ತು ರಾಜಕೀಯ ಎರಡು ರಂಗದಿಂದಲೂ ಅಂತರ ಕಾಯ್ದುಕೊಂಡು ಸೈಲೆಂಟ್ ಆಗಿದ್ದರು. ಈಗ ಮತ್ತೆ ರಮ್ಯಾ ಚೈತ್ರ ಕಾಲ ಶುರುವಾಗಿದೆ. ಸಿನಿಮಾ ಸಮಾರಂಭಗಳಿಗೆ ಕಾಣಿಸಿಕೊಳ್ಳುತ್ತಾ ಹೊಸ ತಂಡಕ್ಕೆ ಸಾಥ್ ನೀಡುತ್ತಿರುತ್ತಾರೆ. ಇದೀಗ ರಮ್ಯಾ ವಿದೇಶಕ್ಕೆ ಹಾರಿದ್ದಾರೆ. ನಟಿಯ ನಯಾ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

    RAMYA

    ಇತ್ತೀಚೆಗೆಷ್ಟೇ ನಟಿ ಕಾವ್ಯಾ ಮತ್ತು ವರುಣ್ ಗೌಡ ಮದುವೆಯಲ್ಲಿ ಕಾಣಿಸಿಕೊಂಡಿದ್ದರು. ಈಗ ಕೊಂಚ ಬ್ರೇಕ್ ತೆಗೆದುಕೊಂಡು ಬ್ಯಾಂಕಾಕ್‌ಗೆ ಹಾರಿದ್ದಾರೆ. ತಮ್ಮ ಚೆಂದದ ಫೋಟೋವೊಂದು ಶೇರ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹೈಪ್ ಕ್ರಿಯೇಟ್ ಮಾಡಿದ್ದಾರೆ. ರಮ್ಯಾ ಲುಕ್ ನೋಡಿ ಅಯ್ಯೋ ದೃಷ್ಟಿ ತೆಗೆಸಿಕೊಳ್ಳಿ ಅಂತಾ ಕಾಮೆಂಟ್ ಮಾಡ್ತಿದ್ದಾರೆ.ಇದನ್ನೂ ಓದಿ:`ವಿ ಲವ್ ಯೂ’ ಎಂದ ಅಭಿಮಾನಿಗೆ ದೀಪಿಕಾ ಖಡಕ್ ರಿಯಾಕ್ಷನ್

    ಇದೀಗ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿರುವ ರಮ್ಯಾ, ಭಿನ್ನ ಕಥೆಯ ಮೂಲಕ ಕಮ್‌ಬ್ಯಾಕ್ ಆಗಲು ರೆಡಿಯಾಗಿದ್ದಾರೆ. ಸದ್ಯದಲ್ಲೇ ಅನೌನ್ಸ್ ಕೂಡ ಮಾಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • Thailand Open – ನಂ.1 ಆಟಗಾರ್ತಿ ಯಮಗುಚಿಯನ್ನು ಸೋಲಿಸಿ ಸೆಮಿಗೆ ಸಿಂಧು ಎಂಟ್ರಿ

    Thailand Open – ನಂ.1 ಆಟಗಾರ್ತಿ ಯಮಗುಚಿಯನ್ನು ಸೋಲಿಸಿ ಸೆಮಿಗೆ ಸಿಂಧು ಎಂಟ್ರಿ

    ಬ್ಯಾಂಕಾಕ್: ಥೈಲ್ಯಾಂಡ್ ಓಪನ್ 2022 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ವಿಶ್ವ ನಂ.1 ಬ್ಯಾಡ್ಮಿಂಟನ್ ಆಟಗಾರ್ತಿ ಅಕಾನೆ ಯಮಗುಚಿಯನ್ನು ಕ್ವಾರ್ಟರ್ ಫೈನಲ್‍ನಲ್ಲಿ ಸೋಲಿಸಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಸೆಮಿಫೈನಲ್‍ಗೆ ಲಗ್ಗೆ ಇಟ್ಟಿದ್ದಾರೆ.

    ಬ್ಯಾಂಕಾಕ್‍ನಲ್ಲಿ ನಡೆಯುತ್ತಿರುವ ಟೂರ್ನಿಯ ಕ್ವಾಟರ್ ಫೈನಲ್ ಪಂದ್ಯ ಬಾರಿ ರೋಚಕವಾಗಿ ಕೂಡಿತ್ತು. 51 ನಿಮಿಷಗಳ ವರೆಗಿನ ಹೋರಾಟದಲ್ಲಿ ಕೊನೆಗೆ ಪಿ.ವಿ ಸಿಂಧು 21-15, 20-22, 21-13 ಸೆಟ್‍ಗಳಿಂದ ಜಪಾನಿನ ಸ್ಟಾರ್ ಆಟಗಾರ್ತಿಯ ವಿರುದ್ಧ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‍ನಲ್ಲಿ ಆಡುವ ಅವಕಾಶ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿರುವುದು ಹೆಮ್ಮೆ ಎನಿಸಿತು: ನಿಖತ್ ಜರೀನ್

    ಈ ವರ್ಷದ ಆರಂಭದಲ್ಲಿ ಯಮಗುಚಿ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಟೂರ್ನಿಯಲ್ಲಿ ಸಿಂಧುರನ್ನು ಸೋಲಿಸಿದ್ದರು. ಆ ಬಳಿಕ ಥೈಲ್ಯಾಂಡ್ ಓಪನ್ 2022 ಬಾಡ್ಮಿಂಟನ್ ಟೂರ್ನಿಯಲ್ಲಿ ಎದುರುಬದುರಾದ ಇಬ್ಬರು ಆಟಗಾರ್ತಿಯರ ಮಧ್ಯೆ ತೀವ್ರ ಪೈಪೋಟಿ ಎದುರಾಯಿತು. ಆದರೆ ಅಂತಿಮ ಸೆಟ್‍ನಲ್ಲಿ ಯಮಗುಚಿ ಗಾಯಗೊಂಡು ಮೈದಾನ ತೊರೆದರು. ಈ ಮೂಲಕ ಸಿಂಧು ಸೆಮಿಫೈನಲ್‍ಗೆ ಲಗ್ಗೆ ಇಟ್ಟರು. ಇದನ್ನೂ ಓದಿ: ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್ – ಚಿನ್ನದ ಪದಕ ಗೆದ್ದ ಭಾರತದ ಬಾಕ್ಸರ್ ನಿಖತ್ ಜರೀನ್

    ಸೆಮಿಫೈನಲ್‍ನಲ್ಲಿ ಒಲಿಂಪಿಕ್ಸ್ ಚಾಂಪಿಯನ್ ಚೀನಾದ ಚೆನ್ ಯುಫೀನ್ ವಿರುದ್ಧ ಸಿಂಧು ಸೆಣಸಾಡಲಿದ್ದಾರೆ.