Tag: bangladesh

  • ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

    ಬಾಂಗ್ಲಾ ಬಗ್ಗು ಬಡಿದು ಅಜೇಯವಾಗಿ ಫೈನಲ್‌ ಪ್ರವೇಶಿಸಿದ ಭಾರತ

    – ಹಲವು ಕ್ಯಾಚ್‌ ಡ್ರಾಪ್‌ ಮಾಡಿದ್ದ ಟೀಂ ಇಂಡಿಯಾ

    ದುಬೈ: ಏಷ್ಯಾ ಕಪ್‌ (Asia Cup) ಸೂಪರ್‌ 4 ಪಂದ್ಯದಲ್ಲಿ ಬಾಂಗ್ಲಾದೇಶ (Bangladesh) ವಿರುದ್ಧ 41 ರನ್‌ಗಳ ಜಯ ಸಾಧಿಸಿದ ಭಾರತ (India) ಅಜೇಯವಾಗಿ ಫೈನಲ್‌ ಪ್ರವೇಶಿಸಿದೆ.

    ಗೆಲುವಿಗೆ 168 ರನ್‌ಗಳ ಗುರಿಯನ್ನು ಪಡೆದ ಬಾಂಗ್ಲಾ 19.3 ಓವರ್‌ಗಳಲ್ಲಿ 127 ರನ್‌ ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಗುರುವಾರ ಪಾಕಿಸ್ತಾನ ಮತ್ತು ಬಾಂಗ್ಲಾ ನಡುವೆ ಪಂದ್ಯ ನಡೆಯಲಿದ್ದು ಈ ಪಂದ್ಯದಲ್ಲಿ ಜಯಗಳಿಸಿದವರು ಫೈನಲ್‌ ಪ್ರವೇಶಿಸಲಿದ್ದಾರೆ.

    ಬಾಂಗ್ಲಾ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡಿತು. ಬುಮ್ರಾ ತಮ್ಮ ಮೊದಲ ಓವರಿನ ಎರಡನೇ ಎಸೆತದಲ್ಲಿ ತಾಂಜಿದ್ ಹಸನ್ ಅವರನ್ನು ಔಟ್‌ ಮಾಡಿದರು.

    ಪರ್ವೇಜ್ ಹೊಸೇನ್ ಎಮನ್ 21 ರನ್‌ ಗಳಿಸಿ ಔಟಾದರು. ಒಂದು ಕಡೆ ವಿಕೆಟ್‌ ಪತನಗೊಳ್ಳುತ್ತಿದ್ದರೂ ಆರಂಭಿಕ ಆಟಗಾರ ಸೈಫ್‌ ಹಸನ್‌ ಮುನ್ನುಗ್ಗಿ ಹೊಡೆಯುತ್ತಿದ್ದರು. ಅಕ್ಷರ್‌ ಪಟೇಲ್‌, ಶಿವಂ ದುಬೆ ಮತ್ತು ಕೀಪರ್‌ ಸಂಜು ಸ್ಯಾಮ್ಸನ್‌, ಅಭಿಷೇಕ್‌ ಶರ್ಮಾ ಕ್ಯಾಚ್‌ ಡ್ರಾಪ್‌ ಮಾಡಿದರು. ಕೊನೆಗೆ 69 ರನ್‌(61 ಎಸೆತ, 3 ಬೌಂಡರಿ, 5 ಸಿಕ್ಸ್‌) ಬುಮ್ರಾ ಬೌಲಿಂಗ್‌ನಲ್ಲಿ ಸಿಕ್ಸ್‌ ಸಿಡಿಸಲು ಹೋದರು. ಆದರೆ ಬೌಂಡರಿ ಗೆರೆಯ ಬಳಿ ಅಕ್ಷರ್‌ ಪಟೇಲ್‌ ಉತ್ತಮ ಕ್ಯಾಚ್‌ ಹಿಡಿದಿದ್ದರಿಂದ ಔಟಾದರು.

    ಬಾಂಗ್ಲಾ ಉಳಿದ ಆಟಗಾರರಿಂದ ಉತ್ತಮ ಪ್ರತಿರೋಧ ವ್ಯಕ್ತವಾಗದ ಕಾರಣ ಪಂದ್ಯವನ್ನು ಸೋತಿತು. ಈ ಪಂದ್ಯದಲ್ಲಿ ಭಾರತ ಫೀಲ್ಡಿಂಗ್‌ ಕಳಪೆಯಾಗಿತ್ತು. ಹಲವು ಕ್ಯಾಚ್‌ಗಳನ್ನು ಆಟಗಾರರು ಕೈ ಚೆಲ್ಲಿದ್ದರು.

    ಕುಲದೀಪ್‌ ಯಾದವ್‌ 3 ವಿಕೆಟ್‌ಪಡೆದರೆ ಬುಮ್ರಾ, ವರುಣ್‌ ಚಕ್ರವರ್ತಿ ತಲಾ 2 ವಿಕೆಟ್‌, ಅಕ್ಷರ್‌ ಪಟೇಲ್‌ ಮತ್ತು ತಿಲಕ್‌ ವರ್ಮಾ ತಲಾ 1 ವಿಕೆಟ್‌ ಪಡೆದರು.

    ಶರ್ಮಾ ಸ್ಫೋಟಕ ಫಿಫ್ಟಿ:
    ಇದಕ್ಕೂ ಮೊದಲು ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ಅಭಿಷೇಕ್‌ ಶರ್ಮಾ (Abhishek Sharma) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 168 ರನ್‌ ಗಳಿಸಿತ್ತು. ಭಾರತದ ಆರಂಭ ಉತ್ತಮವಾಗಿತ್ತು. ನಾಯಕ ಗಿಲ್‌ ಮತ್ತು ಅಭಿಷೇಕ್‌ ಶರ್ಮಾ 38 ಎಸೆತಗಳಲ್ಲಿ 77 ರನ್‌ ಜೊತೆಯಾಟವಾಡಿದರು. ಗಿಲ್‌ 29 ರನ್‌(19 ಎಸೆತ, 2 ಬೌಂಡರಿ, 1 ಸಿಕ್ಸ್‌) ಸಿಡಿಸಿ ಔಟಾದರು.

    ಗಿಲ್‌ ಔಟಾದ ಬೆನ್ನಲ್ಲೇ ಶಿವಂ ದುಬೆ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಎರಡು ವಿಕೆಟ್‌ ಪತನಗೊಂಡರೂ ಮತ್ತೊಂದು ಕಡೆ ಅಭಿಷೇಕ್‌ ಶರ್ಮಾ ಸ್ಫೋಟಕ ಬ್ಯಾಟ್‌ ಬೀಸಿದರು. ಸಿಕ್ಸರ್‌ ಬೌಂಡರಿ ಸಿಡಿಸಿದ ಅಭಿಷೇಕ್‌ ಶರ್ಮಾ 75 ರನ್‌( 37 ಎಸೆತ, 6 ಬೌಂಡರಿ, 5 ಸಿಕ್ಸರ್‌) ರನೌಟ್‌ ಆದರು.


    ಅಭಿಷೇಕ್‌ ಶರ್ಮಾ ಔಟಾದ ಬೆನ್ನಲ್ಲೇ ಸೂರ್ಯಕುಮಾರ್‌ ಯಾದವ್‌ 5ರನ್‌, ತಿಲಕ್‌ ವರ್ಮಾ 5 ರನ್‌ ಗಳಿಸಿದರು. ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ಅಕ್ಷರ್‌ ಪಟೇಲ್‌ 34 ಎಸೆತಗಳಲ್ಲಿ 39 ರನ್‌ ಹೊಡೆದರು. ಪಾಂಡ್ಯ 38 ರನ್‌(29 ಎಸೆತ, 4 ಬೌಂಡರಿ, 1 ಸಿಕ್ಸ್‌) ಹೊಡೆದು ಔಟಾದರೆ ಅಕ್ಷರ್‌ ಪಟೇಲ್‌ ಔಟಾಗದೇ 10 ರನ್‌ ಹೊಡೆದರು.

  • ಶರ್ಮಾ ಸ್ಫೋಟಕ ಫಿಫ್ಟಿ – ಬಾಂಗ್ಲಾಗೆ 169 ರನ್‌ ಟಾರ್ಗೆಟ್‌

    ಶರ್ಮಾ ಸ್ಫೋಟಕ ಫಿಫ್ಟಿ – ಬಾಂಗ್ಲಾಗೆ 169 ರನ್‌ ಟಾರ್ಗೆಟ್‌

    ದುಬೈ: ಅಭಿಷೇಕ್‌ ಶರ್ಮಾ (Abhishek Sharma) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಏಷ್ಯಾ ಕಪ್‌ (Asia Cup) ಸೂಪರ್‌ 4 ಪಂದ್ಯದಲ್ಲಿ ಬಾಂಗ್ಲಾದೇಶದ (Bangladesh) ವಿರುದ್ಧ ಭಾರತ (Team India) 6 ವಿಕೆಟ್‌ ನಷ್ಟಕ್ಕೆ 168 ರನ್‌ ಹೊಡೆದಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತದ ಆರಂಭ ಉತ್ತಮವಾಗಿತ್ತು. ನಾಯಕ ಗಿಲ್‌ ಮತ್ತು ಅಭಿಷೇಕ್‌ ಶರ್ಮಾ 38 ಎಸೆತಗಳಲ್ಲಿ 77 ರನ್‌ ಜೊತೆಯಾಟವಾಡಿದರು. ಗಿಲ್‌ 29 ರನ್‌(19 ಎಸೆತ, 2 ಬೌಂಡರಿ, 1 ಸಿಕ್ಸ್‌) ಸಿಡಿಸಿ ಔಟಾದರು.

    ಗಿಲ್‌ ಔಟಾದ ಬೆನ್ನಲ್ಲೇ ಶಿವಂ ದುಬೆ 2 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಎರಡು ವಿಕೆಟ್‌ ಪತನಗೊಂಡರೂ ಮತ್ತೊಂದು ಕಡೆ ಅಭಿಷೇಕ್‌ ಶರ್ಮಾ ಸ್ಫೋಟಕ ಬ್ಯಾಟ್‌ ಬೀಸಿದರು. ಸಿಕ್ಸರ್‌ ಬೌಂಡರಿ ಸಿಡಿಸಿದ ಅಭಿಷೇಕ್‌ ಶರ್ಮಾ 75 ರನ್‌( 37 ಎಸೆತ, 6 ಬೌಂಡರಿ, 5 ಸಿಕ್ಸರ್‌) ರನೌಟ್‌ ಆದರು.

    ಅಭಿಷೇಕ್‌ ಶರ್ಮಾ ಔಟಾದ ಬೆನ್ನಲ್ಲೇ ಸೂರ್ಯಕುಮಾರ್‌ ಯಾದವ್‌ 5ರನ್‌, ತಿಲಕ್‌ ವರ್ಮಾ 5 ರನ್‌ ಗಳಿಸಿದರು. ಕೊನೆಯಲ್ಲಿ ಹಾರ್ದಿಕ್‌ ಪಾಂಡ್ಯ ಮತ್ತು ಅಕ್ಷರ್‌ ಪಟೇಲ್‌ 34 ಎಸೆತಗಳಲ್ಲಿ 39 ರನ್‌ ಹೊಡೆದರು. ಪಾಂಡ್ಯ 38 ರನ್‌(29 ಎಸೆತ, 4 ಬೌಂಡರಿ, 1 ಸಿಕ್ಸ್‌) ಹೊಡೆದು ಔಟಾದರೆ ಅಕ್ಷರ್‌ ಪಟೇಲ್‌ ಔಟಾಗದೇ 10 ರನ್‌ ಹೊಡೆಯುವ ಮೂಲಕ ತಂಡದ ಮೊತ್ತವನ್ನು 160 ರನ್‌ಗಳ ಗಡಿ ದಾಟಿಸಿದರು. ಕೊನೆಯ 9 ಓವರ್‌ಗಳಲ್ಲಿ ಭಾರತ 4 ವಿಕೆಟ್‌ ಕಳೆದುಕೊಂಡು 56 ರನ್‌ ಸಿಡಿಸಿದ ಪರಿಣಾಮ ಹೆಚ್ಚು ರನ್‌ ಗಳಿಸಲು ಸಾಧ್ಯವಾಗಲಿಲ್ಲ.

  • ಪಾಕಿಸ್ತಾನ ನನ್ನ ಮನೆಯಂತೆ ಭಾಸವಾಗುತ್ತೆ, ಭಾರತ ಶಾಂತಿ ಮಾತುಕತೆ ನಡೆಸಬೇಕು: ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದ

    ಪಾಕಿಸ್ತಾನ ನನ್ನ ಮನೆಯಂತೆ ಭಾಸವಾಗುತ್ತೆ, ಭಾರತ ಶಾಂತಿ ಮಾತುಕತೆ ನಡೆಸಬೇಕು: ಸ್ಯಾಮ್ ಪಿತ್ರೋಡಾ ಹೇಳಿಕೆ ವಿವಾದ

    – 2008ರ ಮುಂಬೈ ದಾಳಿ ಉಲ್ಲೇಖಿಸಿ ಬಿಜೆಪಿ ಕಿಡಿ

    ನವದೆಹಲಿ: ಪಾಕಿಸ್ತಾನಕ್ಕೆ (Pakistan) ಹೋದ್ರೆ ನನಗೆ ಮನೆಗೆ ಹೋದ ಅನುಭವವಾಗುತ್ತೆ ಎಂದು ಹೇಳುವ ಮೂಲಕ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ (Sam Pitroda) ಈಗ ಹೊಸ ವಿವಾದ ಸೃಷ್ಟಿಸಿದ್ದಾರೆ.

    ತಮ್ಮ ಹೇಳಿಕೆಗಳಿಂದಲೇ ವಿವಾದ ಸೃಷ್ಟಿಸುವ ಸ್ಯಾಮ್‌ ಪಿತ್ರೋಡಾ ಅವರ ಪಟ್ಟಿಗೆ ಇದು ಹೊಸ ವಿವಾದವಾಗಿದೆ. ಸಂದರ್ಶನವೊಂದರಲ್ಲಿ ಭಾರತದ ವಿದೇಶಾಂಗ ನೀತಿ ಮತ್ತು ನೆರೆಯ ರಾಷ್ಟ್ರಗಳೊಂದಿಗಿನ ಸಂಬಂಧಗಳ ಕುರಿತು ಮಾತನಾಡುತ್ತಾ, ನೆರೆಹೊರೆಯಲ್ಲಿ ಹಿಂಸಾಚಾರ ಮತ್ತು ಭಯೋತ್ಪಾದನೆಯ ಸಮಸ್ಯೆಗಳ‌ ಹೊರತಾಗಿಯೂ ಭಾರತವು ಪಾಕಿಸ್ತಾನ (India Pakistan) ಮತ್ತು ಬಾಂಗ್ಲಾದೊಂದಿಗೆ ತೊಡಗಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

    ನಮ್ಮ ವಿದೇಶಾಂಗ ನೀತಿಯು ಮೊದಲು ನಮ್ಮ ನೆರೆಹೊರೆಯ ರಾಷ್ಟ್ರಗಳಿಗೆ ಪ್ರಾಮುಖ್ಯತೆ ನೀಡಬೇಕು. ನಮ್ಮ ನೆರೆಹೊರೆ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಸುಧಾರಿಸಬಹುದೇ? ಎಂಬುದರ ಬಗ್ಗೆ ಚಿಂತಿಸಬೇಕು. ನಾನು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ನೇಪಾಳಕ್ಕೆ ಹೋಗಿದ್ದೇನೆ. ಈ ವೇಳೆ ನನಗೆ ನನ್ನ ತಾಯ್ನಾಡಿನಲ್ಲೇ ಇದ್ದೇನೆಂಬ ಭಾವನೆ ಮೂಡಿಸಿತ್ತು ಎಂದು ಹೇಳಿದ್ದಾರೆ.

    ಪಾಕ್‌, ಬಾಂಗ್ಲಾ ನನ್ನ ಮನೆಯಂತೆ ಭಾಸವಾಗುತ್ತೆ:
    ಮುಂದುವರಿದು… ಪಾಕಿಸ್ತಾನ, ಬಾಂಗ್ಲಾದೇಶ (Bangladesh) ಹಾಗೂ ನೇಪಾಳಕ್ಕೆ ಭೇಟಿ ನೀಡಿದ್ದೇನೆ. ಅಲ್ಲಿಗೆ ಪ್ರವಾಸಕ್ಕೆ ಹೋದ ಸಮಯದಲ್ಲಿ ನನ್ನ ಮನೆಯಂತೆಯೇ ಭಾಸವಾಗುತ್ತಿತ್ತು. ಪಾಕಿಸ್ತಾನಕ್ಕೆ ಹೋದಾಗಲೂ ನಾನು ವಿದೇಶದಲ್ಲಿದ್ದೇನೆ ಅನ್ನಿಸಲೇ ಇಲ್ಲ ನನ್ನ ಮನೆಯಂತೆ ಭಾಸವಾಗಿತ್ತು. ಅವರು ನನ್ನ ಹಾಡುಗಳನ್ನು ಇಷ್ಟಪಡ್ತಾರೆ, ನನ್ನಂತೆಯೇ ಮಾತನಾಡ್ತಾರೆ, ನನ್ನ ಆಹಾರವನ್ನೇ ತಿನ್ನುತ್ತಾರೆ. ನಾವು ಅವರೊಂದಿಗೆ ಶಾಂತಿ ಸಾಮರಸ್ಯದಿಂದ ಬದುಕಲು ಕಲಿಯಬೇಕು ಎಂದಿದ್ದಾರೆ. ಇದನ್ನೂ ಓದಿ: iPhone 17 ಖರೀದಿಗೆ ನೂಕುನುಗ್ಗಲು – ಆ್ಯಪಲ್‌ ಸ್ಟೋರ್‌ ಮುಂದೆ ಹೊಡೆದಾಡಿಕೊಂಡ ಗ್ರಾಹಕರು

    ಮುಂಬೈ ದಾಳಿ ಉಲ್ಲೇಖಿಸಿ ಬಿಜೆಪಿ ಕಿಡಿ
    ಇನ್ನೂ 2008ರ ಮುಂಬೈ ದಾಳಿ ಉಲ್ಲೇಖಿಸಿ ಸ್ಯಾಮ್‌ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ. ಪಾಕಿಸ್ತಾನದ ಬಗ್ಗೆ ಕಾಂಗ್ರೆಸ್ ಮೃದು ಧೋರಣೆ ಹೊಂದಿರುವುದನ್ನು ಸಾಬೀತುಪಡಿಸುತ್ತಿದೆ ಎಂದು ಕಿಡಿಕಾರಿದೆ. ಇದನ್ನೂ ಓದಿ: ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA

    ಈ ನಡುವೆ ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಕೆಎಲ್‌ಎಫ್ ಉಗ್ರ ಯಾಸಿನ್ ಮಲ್ಲಿಕ್, ಸ್ಫೋಟಕ ಹೇಳಿಕೆ ನೀಡಿದ್ದಾನೆ. ಮುಂಬೈ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಎ-ತೋಯ್ಬಾ ಹಫೀಜ್ ಸಯೀದ್‌ನನ್ನು ಭೇಟಿ ಮಾಡಿದ್ದಕ್ಕೆ ಮಾಜಿ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ನನಗೆ ಧನ್ಯವಾದ ಅರ್ಪಿಸಿದ್ದರು ಎಂದಿದ್ದಾನೆ.

    ಯಾಸಿನ್ ಮಲಿಕ್ 2006ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್‌ನನ್ನು ಭೇಟಿಯಾಗಿದ್ದ. ಮನಮೋಹನ್ ಸಿಂಗ್ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಹೇಳಿದ್ದರು ಎಂದು ಯಾಸಿನ್ ಮಲಿಕ್ ಆಗಸ್ಟ್ 25 ರಂದು ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾನೆ. ಈ ಭೇಟಿಯನ್ನು ನಾನು ನಿಗದಿ ಮಾಡಿರಲಿಲ್ಲ. ಬದಲಾಗಿ ಹಿರಿಯ ಭಾರತೀಯ ಗುಪ್ತಚರ ಅಧಿಕಾರಿಗಳ ಕೋರಿಕೆಯ ಮೇರೆಗೆ ಉಗ್ರರ ಜೊತೆ ಸಭೆ ಮಾಡಿದ್ದೆ ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್‌ ಗಾಂಧಿ ಬಾಂಬ್‌

  • ಬಂಧನದಲ್ಲಿದ್ದ ಬಾಂಗ್ಲಾದ ಗರ್ಭಿಣಿ ಮುಂಬೈನ ಜೆಜೆ ಆಸ್ಪತ್ರೆಯಿಂದ ಎಸ್ಕೇಪ್

    ಬಂಧನದಲ್ಲಿದ್ದ ಬಾಂಗ್ಲಾದ ಗರ್ಭಿಣಿ ಮುಂಬೈನ ಜೆಜೆ ಆಸ್ಪತ್ರೆಯಿಂದ ಎಸ್ಕೇಪ್

    ಮುಂಬೈ: ಅಕ್ರಮವಾಗಿ ಬಾರತದಲ್ಲಿ ವಾಸವಾಗಿದ್ದ ಆರೋಪ ಎದುರಿಸುತ್ತಿದ್ದ ಬಾಂಗ್ಲಾದ ಗರ್ಭಿಣಿಯೊಬ್ಬಳು ಮುಂಬೈನ (Mumbai) ಜೆಜೆ ಆಸ್ಪತ್ರೆಯಿಂದ (Hospital) ಪರಾರಿಯಾದ ಪ್ರಕರಣ ನಡೆದಿದೆ. ರುಬಿನಾ ಇರ್ಷಾದ್ ಶೇಖ್ (25) ಪರಾರಿಯಾದ ಬಾಂಗ್ಲಾ ಮಹಿಳೆಯಾಗಿದ್ದಾಳೆ.

    ಆಕೆಯನ್ನು ಬಂಧಿಸಿ ಬೈಕುಲ್ಲಾ ಮಹಿಳಾ ಜೈಲಿನಲ್ಲಿ ಇರಿಸಲಾಗಿತ್ತು. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ, ಪೊಲೀಸರು ಆಗಸ್ಟ್ 11 ರಂದು ಜೆಜೆ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಆಕೆ ಪರಾರಿಯಾಗಿದ್ದಾಳೆ. ಆಕೆ ನವಿ-ಮುಂಬೈ ನಿವಾಸಿಯಾಗಿದ್ದಳು ಎಂದು ತಿಳಿದುಬಂದಿದೆ. ಆಕೆ ನಕಲಿ ಜನನ ಪ್ರಮಾಣಪತ್ರವನ್ನು ಬಳಸಿಕೊಂಡು ಭಾರತೀಯ ಪಾಸ್‌ಪೋರ್ಟ್ ಪಡೆಯಲು ಪ್ರಯತ್ನಿಸಿದ್ದಳು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮೇಘಸ್ಫೋಟ | ದುರಂತ ನಡೆದಾಗ ಸ್ಥಳದಲ್ಲಿ 1,200 ಜನ ಇದ್ದರು: ಬಿಜೆಪಿ ಶಾಸಕ ಬಾಂಬ್‌

    ರುಬಿನಾಳನ್ನು ಆ.14 ರಂದು ಕಾವಲಿಗಿದ್ದ ಪೊಲೀಸರನ್ನು ತಳ್ಳಿ, ಜನನಿಬಿಡ ಆಸ್ಪತ್ರೆ ಆವರಣದಿಂದ ಪರಾರಿಯಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

    ರುಬಿನಾ ಶೇಖ್ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 262ರ (ಕಾನೂನುಬದ್ಧ ಬಂಧನಕ್ಕೆ ಪ್ರತಿರೋಧ ಅಥವಾ ಅಡಚಣೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

  • ಬಾಂಗ್ಲಾ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತ

    ಬಾಂಗ್ಲಾ ಸರಕುಗಳ ಮೇಲೆ ಕಠಿಣ ನಿರ್ಬಂಧ ವಿಧಿಸಿದ ಭಾರತ

    ನವದೆಹಲಿ: ಭಾರತ ಸರ್ಕಾರವು (India) ಬಾಂಗ್ಲಾದೇಶದಿಂದ (Bangladesh) ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಕಠಿಣ ನಿರ್ಬಂಧವನ್ನು ವಿಧಿಸಿದೆ. ಭಾರತ-ಬಾಂಗ್ಲಾದೇಶ ಗಡಿಯಾದ್ಯಂತ ಎಲ್ಲಾ ಭೂಮಾರ್ಗಗಳ ಮೂಲಕ ಆಮದು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.

    ಅಧಿಕೃತ ಮೂಲಗಳ ಪ್ರಕಾರ, ಬಾಂಗ್ಲಾದೇಶದಿಂದ ಆಮದಾಗುವ ಎಲ್ಲಾ ಸರಕುಗಳು ಕೇವಲ ಮಹಾರಾಷ್ಟ್ರದ ಜವಾಹರಲಾಲ್ ನೆಹರು ಬಂದರು (ನ್ಹಾವಾ ಶೇವಾ) ಮೂಲಕವೇ ಭಾರತಕ್ಕೆ ಪ್ರವೇಶಿಸಲು ಅನುಮತಿ ಇರಲಿದೆ ಎಂದು ತಿಳಿಸಿವೆ. ಈ ಕ್ರಮವು ಗಡಿ ವ್ಯಾಪಾರದಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ನಿಯಂತ್ರಣವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆ. ಜೊತೆಗೆ ಜವಾಹರಲಾಲ್ ನೆಹರು ಬಂದರಿನಲ್ಲಿ ಕಟ್ಟುನಿಟ್ಟಾದ ತಪಾಸಣೆ ಮತ್ತು ಕಸ್ಟಮ್ಸ್ ಪ್ರಕ್ರಿಯೆಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿದುಬಂದಿದೆ.ಇದನ್ನೂ ಓದಿ: ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ಮಹಾರಥೋತ್ಸವ – ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ

    ಬಾಂಗ್ಲಾದೇಶದಿಂದ ಆಮದಾಗುವ ಜವಳಿ, ಕೃಷಿ ಉತ್ಪನ್ನಗಳು ಮತ್ತು ಇತರ ಅಗತ್ಯವಸ್ತುಗಳು ಈಗ ಒಂದೇ ಬಂದರಿನ ಮೂಲಕ ಬರಬೇಕಾಗಿರುವುದರಿಂದ, ವ್ಯಾಪಾರಿಗಳಿಗೆ ಲಾಜಿಸ್ಟಿಕ್ಸ್ ವೆಚ್ಚ ಹೆಚ್ಚಾಗಬಹುದು ಎನ್ನಲಾಗಿದೆ. ಈ ನಿರ್ಧಾರದ ಹಿಂದಿನ ಕಾರಣಗಳ ಬಗ್ಗೆ ಸರ್ಕಾರವು ಇನ್ನೂ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಿಲ್ಲ. ಆದರೆ, ಗಡಿ ಭದ್ರತೆ, ಕಳ್ಳಸಾಗಾಣಿಕೆ ನಿಯಂತ್ರಣ ಮತ್ತು ಆರ್ಥಿಕ ನೀತಿಗಳನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

    ಈ ಬದಲಾವಣೆಯಿಂದ ಗಡಿಪ್ರದೇಶದ ವ್ಯಾಪಾರಿಗಳು ಮತ್ತು ಗ್ರಾಹಕರ ಮೇಲೆ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಸದ್ಯ ಚರ್ಚೆಗಳು ಆರಂಭವಾಗಿವೆ. ಸರ್ಕಾರವು ಈ ನಿರ್ಬಂಧದಿಂದ ಉಂಟಾಗಬಹುದಾದ ಸವಾಲುಗಳನ್ನು ಎದುರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.ಇದನ್ನೂ ಓದಿ: ವಿಧಾನಸಭೆಯಲ್ಲೂ ಧರ್ಮಸ್ಥಳ ಪ್ರಕರಣ ಸದ್ದು – ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಸದಸ್ಯರ ಪಟ್ಟು

  • ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ – ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ – ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

    ಸಾವನ್ನಪ್ಪಿದವರಲ್ಲಿ 25 ಮಕ್ಕಳಿದ್ದಾರೆ. ಸುಮಾರು 170 ಮಂದಿ ಗಾಯಗೊಂಡಿದ್ದು, ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಶಾಲೆಯ ಸಿಬ್ಬಂದಿ ಸೈದೂರ್ ರೆಹಮಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಸೋಶಿಯಲ್‌ ಮೀಡಿಯಾದಲ್ಲಿ ಫೋಟೋ ವೈರಲ್‌ ಮಾಡಿ ಕಿರುಕುಳ – ಡ್ಯಾಂಗೆ ಹಾರಿ ಯುವತಿ ಆತ್ಮಹತ್ಯೆ

    ಏನಿದು ಪ್ರಕರಣ?
    ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಢಾಕಾದ ಉತ್ತರದ (Uttara) ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿತ್ತು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ನಟ ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ – ಗುರುವಾರ ಜಾಮೀನು ಭವಿಷ್ಯ

    ಅಪಘಾತಕ್ಕೀಡಾದ ಎಫ್-7 ಬಿಜಿಐ ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ ಜೆ-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.

  • ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    -70ಕ್ಕೂ ಹೆಚ್ಚು ಜನರಿಗೆ ಗಾಯ

    ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ (Air Force) ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಘಡದಲ್ಲಿ ಪೈಲಟ್ ಸೇರಿ 16 ಜನ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ಸಹಾಯಕ ಪ್ರೊಫೆಸರ್ ಎಂಡಿ ಸಯದುರ್ ರೆಹಮಾನ್ ಮಾತನಾಡಿ, ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ನಿಯಂತ್ರಣ ಕಳೆದುಕೊಂಡು ಢಾಕಾದ ಉತ್ತರದಲ್ಲಿರುವ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ. ಪರಿಣಾಮ ಪೈಲಟ್ ಸೇರಿ 16 ಜನ ಮೃತಪಟ್ಟಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ನಂಗೆ ಯಾರೂ ಬಾಯ್‌ಫ್ರೆಂಡ್ ಇಲ್ಲ, 4 ತಿಂಗಳು ನನ್ನ ಫೋನ್ ಪ್ರತೀಕ್ ಚೌಹಾಣ್ ಬಳಿ ಇತ್ತು: ಸಂತ್ರಸ್ತೆ

    ಅಗ್ನಿಶಾಮಕ ದಳದ ಕರ್ತವ್ಯ ಅಧಿಕಾರಿ ಲಿಮಾ ಖಾನ್ ಮಾತನಾಡಿ, ತರಬೇತಿ ಜೆಟ್ ಪತನಗೊಂಡ ಸ್ವಲ್ಪ ಸಮಯದ ನಂತರ ಗಾಯಗೊಂಡವರನ್ನು ಸಿಎಂಹೆಚ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ.

    ಏನಿದು ಪ್ರಕರಣ?
    ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿತ್ತು.

    ಅಪಘಾತಕ್ಕೀಡಾದ F-7BGI ತರಬೇತಿ ವಿಮಾನವು ಬಾಂಗ್ಲಾದೇಶದ ನಿರ್ವಹಿಸುತ್ತಿರುವ 16 (ಈಗ 15) ವಿಮಾನಗಳಲ್ಲಿ ಒಂದಾಗಿದೆ. ಇದು ಚೀನಾದ J-7 ಯುದ್ಧ ವಿಮಾನದ ಮುಂದುವರಿದ ಆವೃತ್ತಿಯ ವಿಮಾನವಾಗಿದೆ.ಇದನ್ನೂ ಓದಿ: ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ

  • ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

    ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ಪತನ – ಓರ್ವ ಸಾವು, ನಾಲ್ವರು ಗಂಭೀರ

    – ಏರ್ ಇಂಡಿಯಾ ವಿಮಾನ ಮಾದರಿಯಲ್ಲಿ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ದುರಂತ

    ಢಾಕಾ: ಬಾಂಗ್ಲಾದೇಶದ (Bangladesh) ವಾಯುಪಡೆಯ ಎಫ್-7 ಬಿಜಿಐ (F-7 BGI) ತರಬೇತಿ ಜೆಟ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಘಟನೆ ನಡೆದಿದೆ.

    ಏರ್ ಇಂಡಿಯಾ (Air India) ವಿಮಾನ ದುರಂತದ ಮಾದರಿಯಲ್ಲೇ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಮೈಲ್‌ಸ್ಟೋನ್ (Milestone) ಶಿಕ್ಷಣ ಸಂಸ್ಥೆಯ ಕಟ್ಟಡಕ್ಕೆ ಅಪ್ಪಳಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.ಇದನ್ನೂ ಓದಿ: Mandya | ಕಾಲೇಜು ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿ ನೇಣಿಗೆ ಶರಣು

    ಈ ಕುರಿತು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಡೈರೆಕ್ಟರೇಟ್ (ಐಎಸ್‌ಪಿಆರ್) ಹೇಳಿಕೆ ಬಿಡುಗಡೆ ಮಾಡಿದ್ದು, ಸೋಮವಾರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಢಾಕಾದ ಉತ್ತರದ ಮೈಲ್‌ಸ್ಟೋನ್ ಶಿಕ್ಷಣ ಸಂಸ್ಥೆಯ ಕ್ಯಾಂಟೀನ್ ಮೇಲೆ ಪತನಗೊಂಡಿದೆ. ಅವಘಡದಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

    ಅಗ್ನಿಶಾಮಕ ದಳದ ಕರ್ತವ್ಯ ಅಧಿಕಾರಿ ಲಿಮಾ ಖಾನ್ ಮಾತನಾಡಿ, ತರಬೇತಿ ಜೆಟ್ ಪತನಗೊಂಡ ಸ್ವಲ್ಪ ಸಮಯದ ನಂತರ ಗಾಯಗೊಂಡ ನಾಲ್ವರನ್ನು ಸಿಎಂಹೆಚ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಘಡ ಸಂಭವಿಸಿದಾಗ ಶಾಲೆಯಲ್ಲಿ ಮಕ್ಕಳಿದ್ದರು. ಆದರೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ಬಾಂಗ್ಲಾದೇಶ ಸೇನೆಯ ಸಾರ್ವಜನಿಕ ಸಂಪರ್ಕ ಕಚೇರಿ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ, ಪತನಗೊಂಡ ಎಫ್-7 ಬಿಜಿಐ ಜೆಟ್ ಬಾಂಗ್ಲಾದೇಶದ ವಾಯುಪಡೆಗೆ ಸೇರಿದ್ದು ಎಂದು ದೃಢಪಡಿಸಿದೆ. ಸದ್ಯ ಘಟನಾ ಸ್ಥಳದಲ್ಲಿ ಮೂರು ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿದ್ದು, ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ತೊಡಗಿಕೊಂಡಿದ್ದಾರೆ. ಇದನ್ನೂ ಓದಿ: ನೆಲಮಂಗಲ | ರ‍್ಯಾಗಿಂಗ್‌ಗೆ ಹೆದರಿ ಸೆಲ್ಫಿ ವೀಡಿಯೋ ಮಾಡಿಟ್ಟು ಕಾಲೇಜು ಟಾಪರ್ ಆತ್ಮಹತ್ಯೆ

  • ಅಕ್ರಮ ಮುಸ್ಲಿಂ ವಲಸಿಗರು ಭಯೋತ್ಪಾದನೆ, ಜನೋತ್ಪಾದನೆಯಲ್ಲಿ ತೊಡಗಿದ್ದಾರೆ: ಪ್ರತಾಪ್‌ ಸಿಂಹ

    ಅಕ್ರಮ ಮುಸ್ಲಿಂ ವಲಸಿಗರು ಭಯೋತ್ಪಾದನೆ, ಜನೋತ್ಪಾದನೆಯಲ್ಲಿ ತೊಡಗಿದ್ದಾರೆ: ಪ್ರತಾಪ್‌ ಸಿಂಹ

    ಬೆಂಗಳೂರು: ಅಕ್ರಮ ಮುಸ್ಲಿಂ ವಲಸಿಗರು (Muslim Immigrants) ಭಯೋತ್ಪಾದನೆ ಹಾಗೂ ಜನೋತ್ಪಾದನೆಯಲ್ಲಿ ನಿರಂತರವಾಗಿ ತೊಡಗಿದ್ದಾರೆ. ದೇಶದಿಂದ ಇವರನ್ನು ತೊಲಗಿಸಿದರೆ ಮಾತ್ರ ದೇಶಕ್ಕೂ, ಹಿಂದೂಗಳಿಗೂ ಉಳಿಗಾಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ  (Pratap Simha) ಗುಡುಗಿದ್ದಾರೆ.

    ಬೆಂಗಳೂರಿನ (Bengaluru) ಮಹಾದೇವಪುರ ಕ್ಷೇತ್ರದಲ್ಲಿ ಅಕ್ರಮ ಬಾಂಗ್ಲಾ (Bangladesh) ವಲಸಿಗರ ವಿರುದ್ಧ ಜನಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತಾನಾಡಿದರು. ಈ ವೇಳೆ, ರೋಹಿಂಗ್ಯಾ ಮುಸ್ಲಿಮರು, ಪಾಕ್ ಮುಸ್ಲಿಮರು ಭಾರತಕ್ಕೆ ಬರಲಿ ಎನ್ನುವ ಮನಸ್ಥಿತಿ ಕಾಂಗ್ರೆಸ್ ನವರದ್ದು. ನಮ್ಮ ಮಹಿಳೆಯರಿಗೆ ಒಂದು ಮಗುವನ್ನು ಹೆರೋದ್ರೊಳಗೆ ಸೊಂಟ ಬಿದ್ದು ಹೋಗುತ್ತದೆ. ಆದರೆ ಅಕ್ರಮ ಮುಸ್ಲಿಂ ವಲಸಿಗರು ಪುರುಸೊತ್ತಿಲ್ಲದೇ ಮಕ್ಕಳನ್ನು ಹೆರುತ್ತಲೇ ಇರುತ್ತಾರೆ. ಈ ವಲಸಿಗರು ಭಾರತದಲ್ಲಿದ್ರೆ ನಮ್ಮ ಜಾಗ ಕಬಳಿಸ್ತಾರೆ. ಭಯೋತ್ಪಾದನೆ ಜತೆಗೆ ಪುರುಸೊತ್ತಿಲ್ಲದೇ ಜನೋತ್ಪಾದನೆ ಮಾಡ್ತಾರೆ. ಹಿಂದೂಗಳಿಗೆ ಇರೋದು ಒಂದೇ ದೇಶ, ನಮಗೆ ಯಾರೂ ಆಶ್ರಯ ಕೊಡಲ್ಲ. ಭಾರತವನ್ನು ಭಾರತವಾಗಿ ಉಳಿಸಿಕೊಳ್ಳಬೇಕು ಎಂದಿದ್ದಾರೆ.

    ಅಕ್ರಮ ಬಾಂಗ್ಲಾದವರು ಕಡಿಮೆ ಹಣಕ್ಕೆ ಸಿಗ್ತಾರೆ ಎಂದು ಕೆಲಸಕ್ಕೆ ಸೇರಿಸಿಕೊಳ್ಳಬೇಡಿ. ಅವರು ಬಂದಿರೋ ಉದ್ದೇಶವೇ ಬೇರೆ. ನಾವು ಎಚ್ಚೆತ್ತುಕೊಳ್ಳಬೇಕು. ಮೋದಿಯವರನ್ನು ಎರಡು ಬಾರಿ ಬಹುಮತದ ಮೂಲಕ ಗೆಲ್ಲಿಸಿದ್ರಿ. ಕಳೆದ ಬಾರಿ ನೀವು ಸ್ವಲ್ಪ ಸೋಮಾರಿ ಆಗಿದ್ದಕ್ಕೆ 242 ಸೀಟು ನೀಡಿದ್ರಿ. ಮತ್ತೊಮ್ಮೆ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ. ನಮ್ಮದು ಹಿಂದೂ ರಾಷ್ಟ್ರ. ನಮಗೆ ಬೇರೆ ಎಲ್ಲೂ ನೆಲೆ ಇಲ್ಲ. ಹೀಗಾಗಿ ನಾವು ನಮ್ಮ ದೇಶ ಉಳಿಸಬೇಕು. ಈ ಹೋರಾಟ ರಾಜಕೀಯ ಕಾರಣಕ್ಕೆ ಅಲ್ಲ ಎಂದಿದ್ದಾರೆ.

    ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಬಂದಾಗ 24% ಮುಸ್ಲಿಮರು ಇದ್ರು, ಇವತ್ತು ಎಷ್ಟಿದ್ದಾರೆ? ಪಾಕ್‌ನಲ್ಲಿ ಹಿಂದೂಗಳು ಮೊದಲು 15% ಇದ್ರು ಈಗ 2% ಇದ್ದಾರೆ. ಅಲ್ಲಿ ಹಿಂದೂಗಳನ್ನು ಓಡಿಸಿ ಈಗ ಆ ಮುಸ್ಲಿಮರು ನಮ್ಮಲ್ಲಿ ಬಂದಿದ್ದಾರೆ. ಇಂಥವರು ನಮ್ಮ ದೇಶ, ರಾಜ್ಯದಲ್ಲಿ ಇರಬಾರದು. ಪಕ್ಕದಲ್ಲಿ ಇರೋ ದೇಶಗಳ ಮುಸ್ಲಿಮರು ಭಾರತಕ್ಕೆ ಬಂದ್ರೆ ನಾವೆಲ್ಲಿ ಹೋಗಬೇಕು? ಈ ಮುಸ್ಲಿಂ ವಲಸಿಗರಿಗೆ ಜಗತ್ತಿನ 57 ಮುಸ್ಲಿಂ ದೇಶಗಳು ಯಾಕೆ ಆಶ್ರಯ ಕೊಡ್ತಿಲ್ಲ? ಯಾಕೆ ಇವರಿಗೆ ಭಾರತವೇ ಆಶ್ರಯ ಕೊಡಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

  • ಭಾರತ ಹೊರಗಿಟ್ಟು ಸಾರ್ಕ್‌ಗೆ ಪರ್ಯಾಯವಾಗಿ ಹೊಸ ಪ್ರಾದೇಶಿಕ ಒಕ್ಕೂಟ ರಚಿಸಲು ಚಿಂತನೆ

    ಭಾರತ ಹೊರಗಿಟ್ಟು ಸಾರ್ಕ್‌ಗೆ ಪರ್ಯಾಯವಾಗಿ ಹೊಸ ಪ್ರಾದೇಶಿಕ ಒಕ್ಕೂಟ ರಚಿಸಲು ಚಿಂತನೆ

    – ಸಾರ್ಕ್‌ಗೆ ಪರ್ಯಾಯವಾಗಿ ಹೊಸ ಪ್ರಾದೇಶಿಕ ಒಕ್ಕೂಟದ ಚಿಂತನೆ

    ಕುನ್ಮಿಂಗ್: ಚೀನಾದ ಕುನ್ಮಿಂಗ್‌ನಲ್ಲಿ (Kunming) ಇತ್ತೀಚೆಗೆ ನಡೆದ ಚೀನಾ-ದಕ್ಷಿಣ ಏಷ್ಯಾ ಎಕ್ಸ್‌ಪೋ ಮತ್ತು ಚೀನಾ-ದಕ್ಷಿಣ ಏಷ್ಯಾ ಸಹಕಾರ ಸಮ್ಮೇಳನದ ಸಂದರ್ಭದಲ್ಲಿ ಚೀನಾ, ಪಾಕಿಸ್ತಾನ (Pakistan) ಮತ್ತು ಬಾಂಗ್ಲಾದೇಶದ ನಡುವೆ ತ್ರಿಪಕ್ಷೀಯ ಸಭೆ ನಡೆದಿದೆ. ಸಭೆಯಲ್ಲಿ ಸೌತ್ ಏಷಿಯನ್ ಅಸೋಸಿಯೇಷನ್ ಫಾರ್ ರೀಜನಲ್ ಕೋಆಪರೇಷನ್ (Saarc) ಬದಲಿಗೆ ಹೊಸ ಒಕ್ಕೂಟ ಸ್ಥಾಪಿಸುವ ಬಗ್ಗೆ ಚರ್ಚೆ ನಡೆದಿದೆ.

    ಸಾರ್ಕ್, ದಕ್ಷಿಣ ಏಷ್ಯಾದ ಎಂಟು ರಾಷ್ಟ್ರಗಳನ್ನು ಒಳಗೊಂಡಿರುವ ಪ್ರಾದೇಶಿಕ ಸಂಘಟನೆಯಾಗಿದೆ. ಭಾರತ (India), ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ, ಶ್ರೀಲಂಕಾ ಮತ್ತು ಆಫ್ಘಾನಿಸ್ತಾನವನ್ನು ಒಳಗೊಂಡಿದೆ. ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವಿನ ಭೌಗೋಳಿಕ-ರಾಜಕೀಯ ಘರ್ಷಣೆಯಿಂದಾಗಿ, 2016ರಿಂದ ಸಾರ್ಕ್‌ನ ಶೃಂಗಸಭೆಗಳು ಸ್ಥಗಿತಗೊಂಡಿವೆ. ಇದನ್ನೂ ಓದಿ: ಇರಾನ್‌ನ ಪರಮಾಣು ಯೋಜನೆಗೆ 30 ಶತಕೋಟಿ ಡಾಲರ್‌ ನೆರವು ಪ್ರಸ್ತಾಪಿಸಿದ ಅಮೆರಿಕ

    ಪ್ರಾದೇಶಿಕ ಏಕೀಕರಣ ಮತ್ತು ಸಂಪರ್ಕಕ್ಕಾಗಿ ಹೊಸ ಸಂಘಟನೆಯ ಅಗತ್ಯವಿದೆ ಎಂದು ಪಾಕಿಸ್ತಾನ ಮತ್ತು ಚೀನಾ (China) ಎರಡೂ ಸಭೆಯಲ್ಲಿ ಮನವರಿಕೆ ಮಾಡಿವೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಹೇಳಿದೆ. ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಸಾರ್ಕ್ ಸದಸ್ಯರು ಹೊಸ ಗುಂಪಿನ ಭಾಗವಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ. ಇದನ್ನೂ ಓದಿ: `ಆಪರೇಷನ್ ಸಿಂಧೂರ’ದಲ್ಲಿ ನಿರ್ನಾಮವಾದ ಉಗ್ರರ ಲಾಂಚ್ ಪ್ಯಾಡ್ ಮರುನಿರ್ಮಾಣ ಮಾಡುತ್ತಿದೆ ಪಾಕ್‌

    2016ರಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಉರಿಯಲ್ಲಿ ಭಯೋತ್ಪಾದಕ ದಾಳಿಯ ನಂತರ ಭಾರತವು ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಬಹಿಷ್ಕರಿಸಿತು. ಇದಕ್ಕೆ ಬಾಂಗ್ಲಾದೇಶ, ಭೂತಾನ್, ಆಫ್ಘಾನಿಸ್ತಾನ ಮತ್ತು ಶ್ರೀಲಂಕಾ ಸಹ ಸಾಥ್ ನೀಡಿದ್ದವು. ಇದರಿಂದಾಗಿ ಶೃಂಗಸಭೆಯನ್ನು ರದ್ದುಗೊಳಿಸಲಾಯಿತು. ಈ ಘಟನೆಯಿಂದಾಗಿ, ಸಾರ್ಕ್‌ನ ಕಾರ್ಯಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ.

    ಇದರ ಬೆನ್ನಲೆ ಕುನ್ಮಿಂಗ್‌ನಲ್ಲಿ ನಡೆದ ತ್ರಿಪಕ್ಷೀಯ ಸಭೆಯಲ್ಲಿ ಚೀನಾ ಮತ್ತು ಪಾಕಿಸ್ತಾನದ ನೇತೃತ್ವದಲ್ಲಿ ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಆಫ್ಘಾನಿಸ್ತಾನವನ್ನು ಒಳಗೊಂಡಂತೆ ಹೊಸ ಪ್ರಾದೇಶಿಕ ಒಕ್ಕೂಟವನ್ನು ರಚಿಸುವ ಮೂರು ದೇಶಗಳು ಸಮಾಲೋಚನೆ ನಡೆಸಿವೆ. ಇದನ್ನೂ ಓದಿ: ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

    ಈ ಒಕ್ಕೂಟವು ವ್ಯಾಪಾರ ಮತ್ತು ಸಂಪರ್ಕವನ್ನು ಹೆಚ್ಚಿಸುವ ಮೂಲಕ ಪ್ರಾದೇಶಿಕ ಸಹಕಾರವನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ವರದಿಗಳ ಪ್ರಕಾರ, ಭಾರತವನ್ನು ಸಹ ಈ ಒಕ್ಕೂಟಕ್ಕೆ ಆಹ್ವಾನಿಸಲಾಗುವ ಸಾಧ್ಯತೆಯಿದೆ. ಆದರೆ ಭಾರತದ ಭಾಗವಹಿಸುವಿಕೆಯು ಅನಿಶ್ಚಿತವಾಗಿದೆ. ಭಾರತವು ಭಯೋತ್ಪಾದನೆಯ ವಿರುದ್ಧ ತನ್ನ ದೃಢನಿಲುವನ್ನು ಮುಂದುವರೆಸಿದೆ ʻರಾತ್ರಿಯಲ್ಲಿ ಭಯೋತ್ಪಾದನೆ, ಹಗಲಿನಲ್ಲಿ ವ್ಯಾಪಾರʼ ಎಂಬ ಸನ್ನಿವೇಶವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸಾಮಾನ್ಯ ತಾಪಮಾನದ ನ್ಯೂಯಾರ್ಕ್‌, ಬೋಸ್ಟನ್‌ – ಇದೀಗ ದಾಖಲೆಯ ಮಟ್ಟ ಮೀರುತ್ತಿರುವುದ್ಯಾಕೆ?

    ಬಾಂಗ್ಲಾದೇಶದ ತಾತ್ಕಾಲಿಕ ಸರ್ಕಾರವು ಈ ಸಭೆಯು ರಾಜಕೀಯವಲ್ಲ ಎಂದು ವಿವರಿಸಿದೆ ಮತ್ತು ಯಾವುದೇ ಹೊಸ ಒಕ್ಕೂಟದ ರಚನೆಯ ಸಾಧ್ಯತೆಯನ್ನು ತಳ್ಳಿಹಾಕಿದೆ. ಆದರೆ, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಮತ್ತು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರು ಸಾರ್ಕ್‌ನ ಪುನರುತ್ಥಾನಕ್ಕೆ ಒತ್ತು ನೀಡಿದ್ದಾರೆ. ಇದಕ್ಕೆ ಕಾರಣ, ಈ ರಾಷ್ಟ್ರಗಳಿಗೆ ಸಾರ್ಕ್‌ನಂತಹ ಪ್ರಾದೇಶಿಕ ವೇದಿಕೆಯು ವ್ಯಾಪಾರ ಮತ್ತು ಆರ್ಥಿಕ ಸಹಕಾರಕ್ಕೆ ಅತ್ಯಗತ್ಯವಾಗಿದೆ. ಆದರೆ, ಭಾರತವು ತನ್ನ ದ್ವಿಪಕ್ಷೀಯ ಸಂಬಂಧಗಳ ಮೂಲಕ ಈ ರಾಷ್ಟ್ರಗಳೊಂದಿಗೆ ಸಂಪರ್ಕವನ್ನು ಕಾಯ್ದುಕೊಳ್ಳಬಹುದು ಎಂದು ಭಾವಿಸುತ್ತದೆ, ಆದ್ದರಿಂದ ಸಾರ್ಕ್‌ನಂತಹ ಬಹುಪಕ್ಷೀಯ ವೇದಿಕೆಯ ಅಗತ್ಯವಿಲ್ಲ ಎಂದು ವಾದಿಸುತ್ತದೆ.