Tag: Banglegudde

  • ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

    ಬಂಗ್ಲೆಗುಡ್ಡ ರಹಸ್ಯ | 7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಕೊಡಗಿನ ವ್ಯಕ್ತಿಯ ಐಡಿ ಕಾರ್ಡ್‌, ವಾಕಿಂಗ್‌ ಸ್ಟಿಕ್‌ ಪತ್ತೆ

    ಮಂಗಳೂರು: ಧರ್ಮಸ್ಥಳದ (Dharmasthala) ಬಂಗ್ಲೆಗುಡ್ಡದ ರಹಸ್ಯ ಬೇಧಿಸಲು ಹೊರಟ ವಿಶೇಷ ತನಿಖಾ ತಂಡ (SIT) ಇಂದು 2ನೇ ದಿನದ ಶೋಧ ಕಾರ್ಯ ನಡೆಸಿದೆ. ನಿನ್ನೆಯ ಶೋಧ ವೇಳೆ 5 ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ಇಂದು ಕೂಡ ಬುರುಡೆ ಮತ್ತು ಅಸ್ಥಿಪಂಜರ (Skeleton) ಸಿಕ್ಕಿದ್ದು, ಇದರ ಜೊತೆಗೆ ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬುವವರಿಗೆ ಸೇರಿದ ಮಹತ್ವದ ದಾಖಲೆಗಳು ಪತ್ತೆಯಾಗಿದೆ.

    ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಯು.ಬಿ ಅಯ್ಯಪ್ಪ ಎಂಬುವವರಿಗೆ ಐಡಿ ಕಾರ್ಡ್‌ (ID Card) ಹಾಗೂ ತ್ರಿಲೆಗ್‌ ಬ್ಯಾಲೆನ್ಸ್‌ ಸ್ಟಿಕ್‌ (ವಾಕಿಂಗ್‌ ಸ್ಟಿಕ್‌) ಬಂಗ್ಲೆಗುಡ್ಡದಲ್ಲಿ ಪತ್ತೆಯಾಗಿದೆ. 7 ವರ್ಷಗಳ ಹಿಂದೆ ಮೈಸೂರಿಗೆ ಚಿಕಿತ್ಸೆಗೆಂದು ತೆರಳಿದ್ದ ಅಯ್ಯಪ್ಪ ಅವರು ಬಳಿಕ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಕುಟ್ಟ ಪೊಲೀಸ್‌ ಠಾಣೆಯಲ್ಲಿ (Kutta Police Station) ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದೀಗ ಬಂಗ್ಲೆಗುಡ್ಡದ ರಹಸ್ಯ ಕೆದಕಲು ಹೊರಟಿದ್ದ ಎಸ್‌ಐಟಿಗೆ ಅಯ್ಯಪ್ಪ ಅವರ ಐಡಿ ಕಾರ್ಡ್‌ ಹಾಗೂ ವಾಕಿಂಗ್‌ಸ್ಟಿಕ್‌ಗಳು ಸಿಕ್ಕಿದ್ದು, ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಕುಟುಂಬಸ್ಥರು ದಾಖಲಿಸಿದ್ದ ಮಿಸ್ಸಿಂಗ್‌ ಕಂಪ್ಲೆಂಟ್‌ನಲ್ಲಿ ವಾಕಿ ಸ್ಟಿಕ್‌ ಬಗ್ಗೆ ಉಲ್ಲೇಖ ಮಾಡಲಾಗಿದೆ ಎಂದು ಎಸ್‌ಐಟಿ ಮೂಲಗಳಿಂದ ತಿಳಿದುಬಂದಿದೆ.

    ಈ ನಡುವೆ ತಲೆಬುರುಡೆ ತಂದಿದ್ದ ವಿಠಲ ಗೌಡ ವಿರುದ್ಧ ಎಸ್‌ಐಟಿಗೆ ಧರ್ಮಸ್ಥಳ ಗ್ರಾಮಸ್ಥರೊಬ್ಬರು ದೂರು ನೀಡಿದ್ದಾರೆ. ಇನ್ನೊಂದೆಡೆ ಎಸ್‌ಐಟಿ ಅಧಿಕಾರಿಗಳು ಆರೋಪಿ ಚಿನ್ನಯ್ಯನನ್ನು ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ತಲೆ ಬುರುಡೆ ತಂದ ವಿಠಲ ಗೌಡ ವಿರುದ್ದ ದೂರು
    ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ತಲೆ ಬುರುಡೆ ತಂದಿದ್ದ ಸೌಜನ್ಯಳ ಮಾವ ವಿಠಲಗೌಡನನ್ನು ಎರಡು ಬಾರಿ ಬಂಗ್ಲೆಗುಡ್ಡಕ್ಕೆ ಕರೆತಂದ ಎಸ್‌ಐಟಿ ಅಧಿಕಾರಿಗಳು ಮಹಜರು ನಡೆಸಿದ್ದರು. ಮಹಜರು ನಡೆದ ಬಳಿಕ ವಿಠಲ ಗೌಡ ಬಂಗ್ಲೆಗುಡ್ಡದಲ್ಲಿ ಹತ್ತಾರು ಅಸ್ಥಿಪಂಜರಗಳನ್ನ ನೋಡಿದ್ದೇನೆಂದು ವೀಡಿಯೋ ಮಾಡಿ ಹೇಳಿಕೆ ನೀಡಿದ್ದ. ಇದಾದ ಬಳಿಕ ಬಂಗ್ಲೆಗುಡ್ಡದಲ್ಲಿ (Banglegudde) ಏನೋ ರಹಸ್ಯ ಅಡಗಿದೆ ಎಂದು ಎಲ್ಲೆಡೆ ಸುದ್ದಿ ಹಬ್ಬಿತ್ತು. ಈ ರಹಸ್ಯ ಬೇಧಿಸಲು ನಿರ್ಧರಿಸಿದ ಎಸ್‌ಐಟಿ 13 ಎಕರೆ ವಿಸ್ತೀರ್ಣದಲ್ಲಿರುವ ಇಡೀ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸರ್ಚ್ ನಡೆಸಲು ತೀರ್ಮಾನಿಸಿದ್ದರು. ಅದರಂತೆ ನಿನ್ನೆ ದಿನಪೂರ್ತಿ ಶೋಧ ನಡೆಸಿದ್ದ ವೇಳೆ ಐದು ಕಡೆಗಳಲ್ಲಿ ಭೂಮಿಯ ಮೇಲ್ಭಾಗದಲ್ಲಿ ಹರಡಿಕೊಂಡಿದ್ದ ಐದು ತಲೆ ಬುರುಡೆ ಹಾಗೂ ನೂರಕ್ಕೂ ಅಧಿಕ ಮೂಳೆಗಳು ಪತ್ತೆಯಾಗಿದೆ. ಎಲ್ಲವನ್ನ ವಶಕ್ಕೆ ಪಡೆದು ಮಹಜರು ನಡೆಸಿದ ಎಸ್‌ಐಟಿ ಅಧಿಕಾರಿಗಳು ಎಲ್ಲವನ್ನ ಎಫ್‌ಎಸ್‌ಎಲ್ ಗೆ ಕಳುಹಿಸಿಕೊಟ್ಟಿದ್ದಾರೆ. ಮಹಜರು ವೇಳೆ ಸ್ಥಳದಲ್ಲಿದ್ದ ತಜ್ಞ ವೈದ್ಯರು ಎಲ್ಲವೂ ಪುರುಷರ ತಲೆ ಬುರುಡೆ ಹಾಗೂ ಮೂಳೆಗಳು ಎಂದು ಮೇಲ್ನೋಟಕ್ಕೆ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಅದೇ ಸ್ಥಳದ ಮರವೊಂದರಲ್ಲಿ ಎರಡು ಹಗ್ಗ ಒಂದು ಸೀರೆ ನೇತಾಡುವ ಸ್ಥಿತಿಯಲ್ಲಿದ್ದು ಅದರ ಅಡಿಭಾಗದ ಭೂಮಿಯ ಮೇಲ್ಭಾಗದಲ್ಲೇ ಕಳೇಬರ ಪತ್ತೆಯಾಗಿದೆ. ಹೀಗಾಗಿ ಇದು ಆತ್ಮಹತ್ಯೆ ಮಾಡಿಕೊಂಡವರ ಕಳೇಬರ ಎಂದು ಎಸ್‌ಐಟಿ ಅಭಿಪ್ರಾಯಪಟ್ಟಿದೆ.

    ಸೌಜನ್ಯಳ ಮಾವ ವಿಠಲ ಗೌಡ, ತಲೆ ಬುರುಡೆ ತಂದ ಹಿನ್ನಲೆಯಲ್ಲಿ ಮಹಜರು ನಡೆಸಿದ್ದರಿಂದ ಬಂಗ್ಲೆಗುಡ್ಡ ಅರಣ್ಯದಲ್ಲಿ ಈ ಅಸ್ಥಿಪಂಜರಗಳೂ ಸಿಕ್ಕಿದೆ. ಈ ನಡುವೆ ಇದೇ ವಿಠಲ ಗೌಡ ವಿರುದ್ಧ ಎಸ್‌ಐಟಿಯಲ್ಲಿ ದೂರೊಂದು ದಾಖಲಾಗಿದೆ. ವಿಠಲಗೌಡ ಮಹಜರು ನಡೆಸಿದ ಬಳಿಕ ಎಸ್‌ಐಟಿ ತನಿಖೆ ಬಗ್ಗೆ ವೀಡಿಯೋ ಮಾಡಿ ಹೇಳಿಕೆ ನೀಡಿ ತನಿಖೆಯ ಹಾದಿತಪ್ಪಿಸಲು ಹಾಗೂ ಸಾಕ್ಷ್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಧರ್ಮಸ್ಥಳದ ಗ್ರಾಮಸ್ಥ ಸಂದೀಪ್ ರೈ ಎಂಬವರು ಬೆಳ್ತಂಗಡಿಯಲ್ಲಿರೋ ಎಸ್‌ಐಟಿ ಕಚೇರಿಗೆ ದೂರು ನೀಡಿದ್ದು, ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್‌ಐಟಿ ತನಿಖೆ ದಾರಿ ತಪ್ಪಿಸೋ ಪ್ರಯತ್ನ ನಡೆದಿದೆ. ಎಸ್‌ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಠಲ ಗೌಡ ವಿಡಿಯೋ ಹರಿ ಬಿಟ್ಟು ತನಿಖೆ ಹಾದಿ ತಪ್ಪಿಸಿದ್ದಾನೆ. ವಿಠಲ ಗೌಡ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ವಿಠಲ ಗೌಡ ವಿರುದ್ದ ತನಿಖೆ ನಡೆಸುವಂತೆ ಎಸ್‌ಐಟಿಗೆ ದೂರು ನೀಡಲಾಗಿದೆ. ಎಸ್‌ಐಟಿ ಅಧಿಕಾರಿಗಳು ದೂರು ಸ್ವೀಕರಿಸಿ ಸ್ವೀಕೃತಿ ನೀಡಿದ್ದಾರೆ.

    ಕೋರ್ಟ್‌ನಲ್ಲಿ ಚಿನ್ನಯ್ಯನ ವಿಚಾರಣೆ
    ಈ ನಡುವೆ ಶವ ಹೂತಿಟ್ಟ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಧೀಶರ ಮುಂದೆ ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆಯನ್ನು ಮಾಡಲಾಗಿದೆ. ಕಳೆದ ಸೆ.6ರಂದು ಬೆಳ್ತಂಗಡಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಶಿವಮೊಗ್ಗ ಜೈಲಿಗೆ ಕಳಿಸಲಾಗಿದೆ. ಇಂದು ಅಲ್ಲಿಂದ ಕರೆತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಒಟ್ಟಿನಲ್ಲಿ ಈ ಬುರುಡೆ ಪ್ರಕರಣ ದಿನದಿಂದ ದಿನಕ್ಕೆ ಒಂದೊಂದು ತಿರುವು ಪಡೆಯುತ್ತಿದ್ದು, ಇನ್ನೇನು ಆಗುತ್ತೆ ಅನ್ನೋ ಕುತೂಹಲ ಎಲ್ಲರಲ್ಲಿದೆ.

  • ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

    ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

    ಧರ್ಮಸ್ಥಳ: ಧರ್ಮಸ್ಥಳದ (Dharmasthala) ಬಂಗ್ಲೆಗುಡ್ಡ (Banglegudde) ರಹಸ್ಯ ಬೇಧಿಸಲು ಹೊರಟ ಎಸ್‌ಐಟಿ (SIT) ಇಂದು ಎರಡನೇ ದಿನದ ಶೋಧ ಕಾರ್ಯ ನಡೆಸಿದೆ. ಬುಧವಾರ ಶೋಧ ನಡೆಸಿದ ವೇಳೆ ಐದು ತಲೆ ಬುರುಡೆ ಸೇರಿ ನೂರಾರು ಮೂಳೆಗಳು ಸಿಕ್ಕಿದ್ದು ಅದೆಲ್ಲವೂ ಪುರುಷರದ್ದು ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

    ಧರ್ಮಸ್ಥಳದ ಶವ ಹೂತಿಟ್ಟ ಪ್ರಕರಣದಲ್ಲಿ ತಲೆ ಬುರುಡೆ ತಂದಿದ್ದ ಸೌಜನ್ಯಳ ಮಾವ ವಿಠಲ ಗೌಡನನ್ನು ಎರಡು ಬಾರಿ ಬಂಗ್ಲೆಗುಡ್ಡಕ್ಕೆ ಕರೆತಂದ ಎಸ್‌ಐಟಿ ಅಧಿಕಾರಿಗಳು ಮಹಜರು ನಡೆಸಿದ್ದರು. ಮಹಜರು ನಡೆದ ಬಳಿಕ ವಿಠಲ ಗೌಡ ಬಂಗ್ಲೆಗುಡ್ಡದಲ್ಲಿ ಹತ್ತಾರು ಅಸ್ಥಿಪಂಜರಗಳನ್ನ ನೋಡಿದ್ದೇನೆಂದು ವೀಡಿಯೋ ಮಾಡಿ ಹೇಳಿಕೆ ನೀಡಿದ್ದ. ಇದಾದ ಬಳಿಕ ಬಂಗ್ಲೆಗುಡ್ಡದಲ್ಲಿ ಏನೋ ರಹಸ್ಯ ಅಡಗಿದೆ ಎಂದು ಎಲ್ಲೆಡೆ ಸುದ್ದಿ ಹಬ್ಬಿತ್ತು. ಈ ರಹಸ್ಯ ಬೇಧಿಸಲು ನಿರ್ಧರಿಸಿದ ಎಸ್‌ಐಟಿ 13 ಎಕರೆ ವಿಸ್ತೀರ್ಣದಲ್ಲಿರುವ ಇಡೀ ಬಂಗ್ಲೆಗುಡ್ಡ ಅರಣ್ಯ ಪ್ರದೇಶದಲ್ಲಿ ಸರ್ಚ್ ನಡೆಸಲು ತೀರ್ಮಾನಿಸಿದ್ದರು. ಅದರಂತೆ ಬುಧವಾರ ದಿನಪೂರ್ತಿ ಶೋಧ ನಡೆಸಿದ್ದ ವೇಳೆ ಐದು ಕಡೆಗಳಲ್ಲಿ ಭೂಮಿಯ ಮೇಲ್ಭಾಗದಲ್ಲಿ ಹರಡಿಕೊಂಡಿದ್ದ ಐದು ತಲೆ ಬುರುಡೆ ಹಾಗೂ ನೂರಕ್ಕೂ ಅಧಿಕ ಮೂಳೆಗಳು ಪತ್ತೆಯಾಗಿದೆ. ಎಲ್ಲವನ್ನು ವಶಕ್ಕೆ ಪಡೆದು ಮಹಜರು ನಡೆಸಿದ ಎಸ್‌ಐಟಿ ಅಧಿಕಾರಿಗಳು ಎಲ್ಲವನ್ನ ಎಫ್‌ಎಸ್‌ಎಲ್‌ಗೆ ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಸೌಜನ್ಯ ಮಾವ ವಿಠಲ ಗೌಡ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರಿಂದ ಎಸ್‌ಐಟಿಗೆ ದೂರು

    ಮಹಜರು ವೇಳೆ ಸ್ಥಳದಲ್ಲಿದ್ದ ತಜ್ಞ ವೈದ್ಯರು ಎಲ್ಲವೂ ಪುರುಷರ ತಲೆ ಬುರುಡೆ ಹಾಗೂ ಮೂಳೆಗಳು ಎಂದು ಮೇಲ್ನೋಟಕ್ಕೆ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಅದೇ ಸ್ಥಳದ ಮರವೊಂದರಲ್ಲಿ ಎರಡು ಹಗ್ಗ ಒಂದು ಸೀರೆ ನೇತಾಡುವ ಸ್ಥಿತಿಯಲ್ಲಿದ್ದು ಅದರ ಅಡಿಭಾಗದ ಭೂಮಿಯ ಮೇಲ್ಭಾಗದಲ್ಲೇ ಕಳೇಬರ ಪತ್ತೆಯಾಗಿದೆ. ಹೀಗಾಗಿ ಇದು ಆತ್ಮಹತ್ಯೆ ಮಾಡಿಕೊಂಡವರ ಕಳೇಬರ ಎಂದು ಎಸ್‌ಐಟಿ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ

    ಸೌಜನ್ಯಳ ಮಾವ ವಿಠಲ ಗೌಡ ತಲೆ ಬುರುಡೆ ತಂದ ಹಿನ್ನೆಲೆಯಲ್ಲಿ ಮಹಜರು ನಡೆಸಿದ್ದರಿಂದ ಬಂಗ್ಲೆಗುಡ್ಡ ಅರಣ್ಯದಲ್ಲಿ ಈ ಅಸ್ಥಿಪಂಜರಗಳೂ ಸಿಕ್ಕಿದೆ. ಈ ನಡುವೆ ಇದೇ ವಿಠಲ ಗೌಡ ವಿರುದ್ಧ ಎಸ್‌ಐಟಿಯಲ್ಲಿ ಇಂದು ದೂರೊಂದು ದಾಖಲಾಗಿದೆ. ವಿಠಲಗೌಡ ಮಹಜರು ನಡೆಸಿದ ಬಳಿಕ ಎಸ್‌ಐಟಿ ತನಿಖೆ ಬಗ್ಗೆ ವೀಡಿಯೋ ಮಾಡಿ ಹೇಳಿಕೆ ನೀಡಿ ತನಿಖೆಯ ಹಾದಿತಪ್ಪಿಸಲು ಹಾಗೂ ಸಾಕ್ಷ÷್ಯ ನಾಶ ಮಾಡಲು ಸಾರ್ವಜನಿಕವಾಗಿ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಧರ್ಮಸ್ಥಳದ ಗ್ರಾಮಸ್ಥ ಸಂದೀಪ್ ರೈ ಎಂಬವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ದೂರು ನೀಡಿದ್ದು, ತನಿಖಾ ಹಂತದಲ್ಲಿ ವಿಠಲ ಗೌಡನಿಂದ ಎಸ್‌ಐಟಿ ತನಿಖೆ ದಾರಿ ತಪ್ಪಿಸೋ ಪ್ರಯತ್ನ ನಡೆದಿದೆ. ಎಸ್‌ಐಟಿ ಯಾವುದೇ ಮಾಹಿತಿ ನೀಡದೇ ಇದ್ದರೂ ವಿಠಲ್ ಗೌಡ ವೀಡಿಯೋ ಹರಿ ಬಿಟ್ಟು ತನಿಖೆ ಹಾದಿ ತಪ್ಪಿಸಿದ್ದಾನೆ. ವಿಠಲ ಗೌಡ ಹಿಂದೆ ಕೆಲ ವ್ಯಕ್ತಿಗಳು ಸೇರಿಕೊಂಡು ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ವಿಠಲ್ ಗೌಡ ವಿರುದ್ಧ ತನಿಖೆ ನಡೆಸುವಂತೆ ಎಸ್‌ಐಟಿಗೆ ದೂರು ನೀಡಲಾಗಿದೆ. ಎಸ್‌ಐಟಿ ಅಧಿಕಾರಿಗಳು ದೂರು ಸ್ವೀಕರಿಸಿ ಸ್ವೀಕೃತಿ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

    ಈ ನಡುವೆ ಶವ ಹೂತಿಟ್ಟ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ನ್ಯಾಯಾಧೀಶರ ಮುಂದೆ ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಪ್ರಕ್ರಿಯೆಯನ್ನು ಮಾಡಲಾಗಿದೆ. ಕಳೆದ ಸೆ.6ರಂದು ಬೆಳ್ತಂಗಡಿ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದ್ದು, ಇಂದು ಅಲ್ಲಿಂದ ಕರೆ ತಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದನ್ನೂ ಓದಿ: ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

  • ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

    ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

    ಮಂಗಳೂರು: ಧರ್ಮಸ್ಥಳದ ಬುರುಡೆ ಕೇಸ್‌ನಲ್ಲಿ (Dharmasthala Case) ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ (Banglegudde) ರಾಶಿರಾಶಿ ಕಳೇಬರ ಸಿಗುತ್ತವೆ ಎಂಬ ವೀಡಿಯೋ ಹೇಳಿಕೆ ಬೆನ್ನಲ್ಲೇ ಎಸ್‌ಐಟಿ (SIT) ತನಿಖೆಗೆ ಟ್ವಿಸ್ಟ್ ಸಿಕ್ಕಿದೆ.

    ನೇತ್ರಾವತಿ ನದಿ (Nethravathi River) ದಡದ ಬಂಗ್ಲೆಗುಡ್ಡಕ್ಕೆ ಎಸ್‌ಐಟಿ ಎಂಟ್ರಿ ಕೊಟ್ಟಿದೆ. ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ಮಹಜರು ನಡೆಯಿತು. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಮಹಜರಿನಲ್ಲಿ ಭಾಗಿಯಾಗಿದ್ದರು. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ: ತಿಮರೋಡಿ ವಿರುದ್ಧ ಎಸ್‌ಐಟಿಯಿಂದ ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

    ಪಾಯಿಂಟ್ 11ರ ಆಸುಪಾಸಿನಲ್ಲಿ ಭೂಮಿಯ ಮೇಲ್ಭಾಗದಲ್ಲೇ ಮಾನವನ ಮೂಳೆಗಳು ಪತ್ತೆಯಾಗಿವೆ. ಮೂಳೆ ಪತ್ತೆಯಾದ ಸ್ಥಳದಲ್ಲೇ ಬಟ್ಟೆಯ ತುಂಡುಗಳೂ ಪತ್ತೆಯಾಗಿವೆ. ಮೂಳೆಗಳನ್ನು ಪೈಪ್‌ಗಳಲ್ಲಿ ಸಂಗ್ರಹಿಸಿ, ಮಣ್ಣಿನ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಅಟ್ರಾಸಿಟಿ ಕೇಸ್‌| ಯತ್ನಾಳ್‌ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್‌

  • ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ

    ಬಂಗ್ಲೆಗುಡ್ಡೆ ಅರಣ್ಯದಲ್ಲಿ ಎಸ್‌ಐಟಿಯಿಂದ ಅಸ್ಥಿಪಂಜರದ ಶೋಧ ಕಾರ್ಯ

    – ಕಾಡಿನಿಂದ ಬುರುಡೆ ತಂದಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದ ವಿಠಲ್ ಗೌಡ

    ಮಂಗಳೂರು: ಧರ್ಮಸ್ಥಳ (Dharmasthala) ಗ್ರಾಮದ ಬಂಗ್ಲೆಗುಡ್ಡೆ (Banglegudde) ರಹಸ್ಯ ಭೇದಿಸಲು ಎಸ್‌ಐಟಿ ಮುಂದಾಗಿದೆ. ಬಂಗ್ಲೆಗುಡ್ಡೆದ ದಟ್ಟಾರಣ್ಯದಲ್ಲಿ ಇಂದು ಮಹಜರಿಗೆ ಎಸ್‌ಐಟಿ ಹೋಗಿದೆ.

    ಅರಣ್ಯ ಇಲಾಖೆ ಲೋಕೋಪಯೋಗಿ ಇಲಾಖೆ, ಸೋಕೋ ಟೀಮ್, ಕಂದಾಯ ಇಲಾಖೆ, ಪಂಚಾಯತ್ ಸಿಬ್ಬಂದಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮಹಜರಿಗೆ ಹಾಜರಿರಲು ಸೂಚನೆ ನೀಡಲಾಗಿದೆ. ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಭೂಮಿಯ ಮೇಲ್ಭಾಗದಲ್ಲಿರುವ ಅಸ್ಥಿಪಂಜರಗಳನ್ನ ಮಹಜರು ನಡೆಸಿ ತೆಗೆಯುವ ಸಾಧ್ಯತೆ ಇದೆ. ಬಂಗ್ಲೆಗುಡ್ಡೆಯಲ್ಲಿ ಭೂಮಿ ಅಗೆದು ಸ್ಥಳ ಪರಿಶೋಧನೆ ನಡೆಸೋದಿಲ್ಲ. ವಿಠಲ್ ಗೌಡ ಬುರುಡೆ ತಂದ ಹಾಗೂ ಅಡಗಿಸಿಟ್ಟಿದ್ದ ಸ್ಥಳದ ಸುತ್ತ ಎಸ್‌ಐಡಿ ಮಹಜರು ಮಾಡಲಿದೆ.

    ಬಂಗ್ಲೆಗುಡ್ಡೆ ಕಾಡಿನಿಂದ ಬುರುಡೆ ತಂದಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಗೆ ವಿಠಲ್ ಗೌಡ ಹೇಳಿಕೆ ನೀಡಿದ್ದ. ಬುರುಡೆ ತಂದ ಹಾಗೂ ಅಡಗಿಸಿಟ್ಟ ಜಾಗದಲ್ಲಿ ಎರಡು ಬಾರಿ ಮಹಜರು ನಡೆಸಲಿದೆ. ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಮಾನವನ ಕಳೇಬರ ಇದೆ ಎಂದು ಹೇಳಿದ್ದ. ಮಹಜರು ವೇಳೆ ಸಾಕಷ್ಟು ಅಸ್ಥಿಪಂಜರ ಕಾಣಸಿಕ್ಕಿದೆ ಎಂದಿದ್ದ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌ – ಬಂಗ್ಲೆ ಗುಡ್ಡ ಕಾಡಿನಲ್ಲಿ 3 ಅಸ್ಥಿಪಂಜರ ಪತ್ತೆ

    ನೇತ್ರಾವತಿ ಸ್ನಾನಘಟ್ಟದ ಬಳಿಯಿಂದ ಬಂಗ್ಲೆಗುಡ್ಡೆಗೆ ತಂಡ ತೆರಳಿದೆ. ಸೋಕೊ ತಂಡ, ಅರಣ್ಯ ಇಲಾಖೆ ಅಧಿಕಾರಿ-ಸಿಬ್ಬಂದಿ, ಮೆಟಲ್ ಡಿಟೆಕ್ಟರ್ ತಂಡ ಸಾಥ್ ನೀಡಿದೆ. ನೇತ್ರಾವತಿ ಸ್ನಾನಘಟ್ಟದ ಬಳಿಯ ಅರಣ್ಯ ಪ್ರವೇಶದಿಂದಲೇ ಶೋಧ ಆರಂಭವಾಗಲಿದೆ. 13 ಎಕರೆ ವಿಸ್ತೀರ್ಣದಲ್ಲಿರೋ ಬಂಗ್ಲೆಗುಡ್ಡೆ ಪೂರ್ತಿ ಎಸ್‌ಐಟಿ ಶೋಧ ನಡೆಸಲಿದೆ.

  • ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಬಂಗ್ಲೆಗುಡ್ಡೆಯಲ್ಲಿ ಉತ್ಖನನ ಮಾಡುವಂತೆ ರಿಟ್ ಅರ್ಜಿ – ಅರಣ್ಯ ಇಲಾಖೆಯಿಂದಲೂ ಮಾಹಿತಿ ಪಡೆದ ಎಸ್‌ಐಟಿ

    ಮಂಗಳೂರು: ಧರ್ಮಸ್ಥಳದ ಶವ ಹೂತಿಟ್ಟ (Dharmasthala Mass Burials) ಪ್ರಕರಣದ ತನಿಖೆ ಮುಂದುವರಿದಿದೆ. ಒಂದೆಡೆ ವಿಠಲ್ ಗೌಡ ಹತ್ತಾರು ಶವ ನೋಡಿದ್ದೇನೆ ಎಂದಿದ್ದು, ಇನ್ನೊಂದೆಡೆ ಇಬ್ಬರು ಹೈಕೋರ್ಟ್‌ಗೆ ರಿಟ್ ಅರ್ಜಿ (Writ Petition) ಹಾಕಿ ಬಂಗ್ಲೆಗುಡ್ಡೆಯಲ್ಲಿ (Banglegudde) ಉತ್ಖನನ ಮಾಡುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಬಂಗ್ಲೆಗುಡ್ಡೆಯ ವಿಚಾರದಲ್ಲಿ ಗೊಂದಲದಲ್ಲಿರುವ ಎಸ್‌ಐಟಿ (SIT) ರಹಸ್ಯ ಭೇದಿಸಲು ಮುಂದಾಗಿದೆ. ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತನಿಖೆಗೆ ಪ್ಲಾನ್ ಮಾಡಿದೆ.

    ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದ ತನಿಖೆ ಮುಂದುವರಿದಿದೆ. ಸದ್ಯ ತನಿಖೆ ನಡೆಸುತ್ತಿರುವ ಎಸ್‌ಐಟಿ ಹಲವಾರು ಗೊಂದಲದಲ್ಲಿದೆ. ಒಂದೆಡೆ ತಲೆ ಬುರುಡೆಯ ಮಹಜರು ನಡೆಸಲು ಬಂಗ್ಲೆಗುಡ್ಡೆಗೆ ತೆರಳಿದ ವೇಳೆ ರಾಶಿ ರಾಶಿ ಅಸ್ಥಿಪಂಜರ ನೋಡಿದ್ದೇನೆ ಎಂದು ಸೌಜನ್ಯಳ ಓರ್ವ ಮಾವ ವಿಠಲಗೌಡ ಹೇಳಿದ್ದ. ಇನ್ನೊಂದೆಡೆ ಸೌಜನ್ಯಳ ಇನ್ನೋರ್ವ ಮಾವ ವಿಠಲ ಗೌಡರ ತಮ್ಮ ಪುರಂದರ ಗೌಡ ಹಾಗೂ ಸಂಬಂಧಿ ತುಕರಾಮ ಗೌಡ ಹೈಕೋರ್ಟ್‌ಗೆ ರಿಟ್ ಅರ್ಜಿ ಹಾಕಿ ಬಂಗ್ಲೆಗುಡ್ಡೆಯಲ್ಲಿ ಶವ ಹೂತಿಟ್ಟಿರೋದನ್ನ ನಾವು ತೋರಿಸುತ್ತೇವೆ, ಅದನ್ನ ಉತ್ಖನನ ಮಾಡಲು ಎಸ್‌ಐಟಿಗೆ ಸೂಚನೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ಕುರಿತು ಉತ್ತರಿಸಲು ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಇದನ್ನೂ ಓದಿ: ಈ ಸರ್ಕಾರ 47 ಹೊಸ ಜಾತಿಗಳನ್ನು ಸೃಷ್ಟಿ ಮಾಡಿದೆ: ಸುನಿಲ್ ಕುಮಾರ್ ಕಿಡಿ

    ತಲೆ ಬುರುಡೆಯ ಮಹಜರು ನಡೆಸುತ್ತಿದ್ದ ಎಸ್‌ಐಟಿಗೆ ಇದೀಗ ಈ ವಿಚಾರ ಗೊಂದಲವನ್ನ ಸೃಷ್ಟಿಸಿದೆ. ಅರಣ್ಯ ಪ್ರದೇಶದೊಳಗೆ ಮತ್ತೆ ಉತ್ಖನನ ಮಾಡಬೇಕಾದರೆ ಸಾಕಷ್ಟು ಸವಾಲುಗಳು ಎದುರಾಗೋ ಹಿನ್ನಲೆಯಲ್ಲಿ ಸದ್ಯ ಅರಣ್ಯ ಇಲಾಖೆಯಿಂದ ಬಂಗ್ಲೆಗುಡ್ಡೆಯ ಸರ್ವೆ ದಾಖಲೆಗಳನ್ನ ಪಡೆದುಕೊಂಡಿದೆ. ಈ ಹಿಂದೆ ಅರಣ್ಯದ ಅಂಚಿನಲ್ಲಿ ಉತ್ಖನನ ನಡೆದಿರುವುದರಿಂದ ಯಾವುದೇ ಸವಾಲು ಇರಲಿಲ್ಲ. ಇದೀಗ ಅರಣ್ಯದೊಳಗಿನ ಉತ್ಖನನ ಆಗಬೇಕಾಗಿರುವುದರಿಂದ, ಕಾನೂನು ಅಡ್ಡಿಯಾಗುವುದರಿಂದ ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಎಸ್‌ಐಟಿ ತೀರ್ಮಾನಿಸಿದೆ. ಅರಣ್ಯದ ಸಮಗ್ರ ವರದಿ ಪಡೆದು ಅನುಮತಿ ಪಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ

    ಬಂಗ್ಲೆಗುಡ್ಡೆಯ ಮಹಜರು ಅಥವಾ ಉತ್ಖನನ ಮಾಡೋ ಬಗ್ಗೆ ಎಸ್‌ಐಟಿ ಇನ್ನೂ ಸರಿಯಾದ ನಿರ್ಧಾರ ಮಾಡಿಲ್ಲ. ಬಂಗ್ಲೆಗುಡ್ಡೆಯಲ್ಲಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡವರ ಅಸ್ಥಿಪಂಜರಗಳು ಇರುವ ಸಾಧ್ಯತೆ ಇದ್ದು, ಅದನ್ನ ಸ್ಥಳೀಯ ಪೊಲೀಸರು ಮಹಜರು ಮಾಡಬೇಕ, ಎಸ್‌ಐಟಿ ಮಾಡಬೇಕಾ ಅನ್ನೋ ಗೊಂದಲದಲ್ಲಿದ್ದಾರೆ. ಹೀಗಾಗಿ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಮಾಡಲು ಎಸ್‌ಐಟಿ ನಿರ್ಧರಿಸಿದೆ. ಇದನ್ನೂ ಓದಿ: ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಕೇಸ್ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್