Tag: banglore film festival

  • Biffes 2023: ಕೆಜಿಎಫ್- ಕಾಂತಾರ‌ ಸಿನಿಮಾವನ್ನು ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

    Biffes 2023: ಕೆಜಿಎಫ್- ಕಾಂತಾರ‌ ಸಿನಿಮಾವನ್ನು ಹಾಡಿ ಹೊಗಳಿದ ಸಿಎಂ ಬೊಮ್ಮಾಯಿ

    14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Banglore  Film Festival) ಗುರುವಾರ (ಮಾ.23)ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಚಿತ್ರೋತ್ಸವದಲ್ಲಿ ಸಿಎಂ ಬೊಮ್ಮಾಯಿ ಅವರು ಕನ್ನಡದ ಕೆಜಿಎಫ್, ಕಾಂತಾರ, ಆಸ್ಕರ್ ಗೆದ್ದಿರುವ RRR ಚಿತ್ರವನ್ನ ಹಾಡಿ ಹೊಗಳಿದ್ದಾರೆ.

    ಚಿತ್ರೋತ್ಸವ ಇಡೀ ಜಗತ್ತಿನಲ್ಲಿ ಅತ್ಯಂತ ಕಡಿಮೆ ನಗರದಲ್ಲಿ ನಡೆಯುತ್ತದೆ. ಅದರಲ್ಲಿ ಬೆಂಗಳೂರು ಒಂದಾಗಿರೋದು ಹೆಮ್ಮೆಯ ವಿಚಾರವಾಗಿದೆ. ಮುಂಬರುವ ದಿನಗಳಲ್ಲಿ ಬೆಂಗಳೂರು ಫೈನಾನ್ಸ್ ಕ್ಯಾಪಿಟಲ್ ಆಗಲಿದೆ. ಮಾತಿಲ್ಲದ ಸಿನಿಮಾದಿಂದ ಹಿಡಿದು ಅತ್ಯಂತ ಅದ್ಬುತ ತಂತ್ರಜ್ಞಾನ ಬಳಕೆ ಮಾಡಿದ ಸಿನಿಮಾ ನಮ್ಮಲ್ಲಿದೆ. ಬೆಂಗಳೂರು ಅಂತರಾಷ್ಟ್ರೀಯ ನಗರ. ಪ್ರತಿದಿನ ಐದು ಸಾವಿರಕ್ಕೂ ಹೆಚ್ಚು ಜನ ವಿಜ್ಞಾನಿಗಳು ಬರುತ್ತಾರೆ. 400 ಆರ್ ಆ್ಯಂಡ್ ಡಿ ಕೇಂದ್ರಗಳಿವೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಬೆಳೆದಿದೆ. ಇಲ್ಲಿ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಡೆಯದೆ ಇನ್ನೆಲ್ಲಿ ನಡೆಯುತ್ತದೆ. ಇದನ್ನೂ ಓದಿ: 14ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    ಸಿನಿಮಾಗೆ ಬಹಳ ದೊಡ್ಡ ಇತಿಹಾಸ ಇದೆ. ಅತ್ಯಂತ ಅದ್ಬುತವಾದ ತಂತ್ರಜ್ಞಾನ ಬಳಕೆಯಾಗುತ್ತಿದೆ. ಡಿಜಿಟಲೀಕರಣ ಆದ ಮೇಲೆ ಬಹಳಷ್ಟು ಬದಲಾವಣೆ ಆಗಿದೆ. ನಾವು ನೋಡುವುದಕ್ಕೂ, ನಮ್ಮ ಮಕ್ಕಳು ಸಿನೆಮಾ ನೋಡುವುದಕ್ಕು ವ್ಯತ್ಯಾಸ ಇದೆ. ಬದುಕಿನಲ್ಲಿ ಎಲ್ಲವೂ ವೇಗವಾಗಿ ಬೆಳೆಯುತ್ತಿರುವುದರಿಂದ ಸಿನೆಮಾದಲ್ಲಿಯೂ ವೇಗವಾಗಿ ಬೆಳವಣಿಗೆ ಆಗುತ್ತಿದೆ. ಈಗ ತಂತ್ರಜ್ಞಾನದ ಮೂಲಕ ಹೋದರೆ ಯಶಸ್ಸು ಸಿಗುತ್ತದೆ ಎಂದರು.

    ʻಕೆಜಿಎಫ್‌ʼ (KGF) ಮತ್ತು  ʻಕಾಂತಾರʼ (Kantara) ಸಿನಿಮಾ ಬಗ್ಗೆ ಯಾರು ನಿರೀಕ್ಷೆ ಮಾಡಿರಲಿಲ್ಲ. ʻಕಾಂತಾರʼ ಸ್ಥಳೀಯ ಸಂಸ್ಕೃತಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗದುಕೊಂಡು ಹೋಗಿದ್ದು, ಆ ತಂಡಕ್ಕೆ ಅಭಿನಂದನೆಗಳು. RRR ಸಿನಿಮಾ ಆಸ್ಕರ್ ಪಡೆದಿದ್ದು ನಾವೆಲ್ಲ ಹೆಮ್ಮೆ ಪಡಬೇಕು. ಇದರಿಂದ ಆಸ್ಕರ್ ನಮಗೆ ದೂರ ಇಲ್ಲ. ಪ್ರತಿವರ್ಷ ಪಡೆಯಬಹುದು ಅಂತ ತೋರಿಸಿ ಕೊಟ್ಟಿದೆ. ಈ ವರ್ಷ ಫೆಸ್ಟಿವಲ್ ನಲ್ಲಿ ಉತ್ತಮ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಸಿನಿಮಾಗಳು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ ಎಂದರು.

    ಸಿನಿಮಾ ಇಲ್ಲದೆ ನಮ್ಮ ಬದುಕಿಲ್ಲ. ಹೀಗಾಗಿ ಸಿನೆಮಾಗಾಗಿ ನಾನು ಏನೆಲ್ಲ ಬೇಕು, ಅದನ್ನು ಮಾಡಿದ್ದೇನೆ. ಸಿನಿಮಾ ಸಬ್ಸಿಡಿ ಹೆಚ್ಚಿಗೆ ಮಾಡಿದ್ದೇನೆ. ಸಬ್ಸಿಡಿ ಪಡೆಯುವ ಚಿತ್ರಗಳ ಸಂಖ್ಯೆ ಹೆಚ್ಚಳ ಮಾಡಿದ್ದೇನೆ. ಫಿಲ್ಮ್ ಸಿಟಿ ಕೂಡ ಆಗಲಿದೆ. ಅಲ್ಲಿ ಹಾಲಿವುಡ್ ಚಿತ್ರಗಳೂ ಶೂಟಿಂಗ್ ಆಗಬೇಕು ಎಂದರು.

    ಇನ್ನೂ ಈ ವೇಳೆ ಪುನೀತ್ ಸಮಾಧಿ ಅಭಿವೃದ್ಧಿ ಮತ್ತು  ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡುವ ಬಗ್ಗೆ ಸಿಎಂ ಮಾತನಾಡಿದ್ದಾರೆ.  ನಾವು ಈಗಾಗಲೇ ಪವರ್ ಸ್ಟಾರ್ ಪುನೀತ ರಾಜಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ್ದೇವೆ. ಅವರ ಹೆಸರಿನಲ್ಲಿ ಸ್ಮಾರಕ ಮಾಡಲು ಎಲ್ಲ ಸಿದ್ಧತೆ ನಡೆದಿದೆ. ಇದೇ ವರ್ಷ ನಟ ದಿ.ಪುನಿತ್ ರಾಜಕುಮಾರ್ ಅವರ ಸ್ಮಾರಕ ಅಭಿವೃದ್ಧಿ ಮಾಡುತ್ತೇವೆ. ಇದರ ಜೊತೆಗೆ ಅಂಬರೀಶ್ ಅವರ ಸ್ಮಾರಕ ಸಿದ್ದವಾಗುತ್ತಿದೆ. ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಲು ತೀರ್ಮಾನಿಸಲಾಗಿದೆ. ಮಾರ್ಚ್ 27 ರಂದು ಸ್ಮಾರಕ ಹಾಗೂ ಹೆಸರಿಡುವ ಕಾರ್ಯಕ್ರಮ ಮಾಡುತ್ತೇವೆ ಎಂದರು.

    ಈ ಸಂದರ್ಭಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಂಸದ ರಾಜೀವ್ ಚಂದ್ರಶೇಖರ್, ಸಚಿವ ಆರ್. ಅಶೋಕ್ ಹಾಗೂ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ, ಹರ್ಷಿಕಾ, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ ಹರೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು

  • 14ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    14ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ

    14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ (Banglore Film Festival) ಗುರುವಾರ (ಮಾ.23)ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Cm Basavaraj Bommai) ಚಾಲನೆ ನೀಡಿದ್ದಾರೆ. ಆರ್‌ಆರ್‌ಆರ್ (RRR) ಖ್ಯಾತಿಯ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ (V. Vijendra Prasad) ಮುಖ್ಯ ಅತಿಥಿಯಾಗಿ ಬಂದಿದ್ದು, ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆ ಮಾಡಿದ್ದಾರೆ.

    ವಿಧಾನಸೌಧದ ಮುಂಭಾಗದಲ್ಲಿ ಚಿತ್ರೋತ್ಸವದ ಕಾರ್ಯಕ್ರಮವನ್ ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ(Saptami Gowda), ಹರ್ಷಿಕಾ, ಫಿಲ್ಮ್ ಚೇಂಬರ್ ಭಾ.ಮ ಹರೀಶ್ ಭಾಗಿಯಾಗಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದ್ದಾರೆ. ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಸಚಿವ ರಾಜೀವ್ ಚಂದ್ರಶೇಖರ್, ಆರ್ ಅಶೋಕ್ ಮುಖ್ಯ ಅತಿಥಿಗಳಾಗಿದ್ದರು.

    ಕಾರ್ಯಕ್ರಮದ ಉದ್ಘಾಟನಾ ಚಿತ್ರವಾಗಿ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ (Kantara) ಸಿನಿಮಾ ರಾತ್ರಿ 8 ಗಂಟೆಯಿAದ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಪ್ರದರ್ಶಿಸಲಾಗಿದೆ. ಮಾರ್ಚ್ 23ರಿಂದ 30ರವರೆಗೆ ನಡೆಯಲಿರುವ ಚಿತ್ರೋತ್ಸವದಲ್ಲಿ ವಿವಿಧ ದೇಶಗಳ ಹಲವು ಭಾಷೆಯ ನೂರಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶವಾಗಲಿದೆ. ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್‌ನಲ್ಲಿ ಒಂದು ವಾರಗಳ ಕಾಲ ಚಿತ್ರ ಪ್ರದರ್ಶನಗಳು ನಡೆಯಲಿವೆ.

    ಈ ಚಿತ್ರೋತ್ಸವದಲ್ಲಿ ಒಟ್ಟು ಮೂರು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದೆ. ಪ್ರತ್ಯೇಕವಾಗಿ ಕನ್ನಡ ವಿಭಾಗ, ಇಂಡಿಯನ್ ವಿಭಾಗ ಹಾಗೂ ಏಷಿಯನ್ ವಿಭಾಗಗಳಲ್ಲಿ ಸ್ಪರ್ಧೆ ನಡೆಯುತ್ತದೆ. ಕ್ರಮವಾಗಿ ಆಯಾ ವಿಭಾಗದಲ್ಲಿ ಮೂರು ಚಿತ್ರಗಳಿಗೆ ಪ್ರಶಸ್ತಿ ನೀಡಲಾಗುವುದು. ಮೊದಲ ಪ್ರಶಸ್ತಿ ಬಂದ ಚಿತ್ರಕ್ಕೆ ಹತ್ತು ಲಕ್ಷ ರೂಪಾಯಿ ಬಹುಮಾನ ಕೂಡ ಇದೆ.

  • ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲೋಗೋ ಲಾಂಚ್ ಮಾಡಿದ ಸಿಎಂ ಬೊಮ್ಮಾಯಿ

    ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲೋಗೋ ಲಾಂಚ್ ಮಾಡಿದ ಸಿಎಂ ಬೊಮ್ಮಾಯಿ

    ರ್ನಾಟಕ ಚಲನಚಿತ್ರ ಅಕಾಡೆಮಿ (Karnataka Film Festival) ನಡೆಸುವ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದ ಲೋಗೋವನ್ನ ಸಿಎಂ ಬೊಮ್ಮಾಯಿ ಅವರು ಲಾಂಚ್ ಮಾಡಿದ್ದಾರೆ. ಪುನೀತ್ ರಾಜ್‌ಕುಮಾರ್ (Puneeth Rajkumar) ಅವರ ನಾಮಫಲಕದ ಉದ್ಘಾಟನೆ ಕಾರ್ಯಕ್ರಮದ ವೇಳೆಯೇ ಸಿಎಂ ಬೊಮ್ಮಾಯಿ (CM Bommai) ಅವರ ಲಾಂಚ್ ಮಾಡಿದ್ದಾರೆ.

    ನಾಯಂಡಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟ ವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರಿಡಬೇಕು ಎಂಬ ಬೇಡಿಕೆ ಇದೀಗ ಈಡೇರಿದೆ.

    ಪುನೀತ್ ಅವರ ನಾಮಫಲಕದ ಕಾರ್ಯಕ್ರಮದಲ್ಲಿ 14ನೇ ವರ್ಷದ ಅಂತರಾಷ್ಟೀಯ ಚಿತ್ರೋತ್ಸವದ ಲೋಗೋವನ್ನ ಕೂಡ ಸಿಎಂ ಬೊಮ್ಮಾಯಿ ಲಾಂಚ್ ಮಾಡಿದ್ದಾರೆ. ಈ ವೇಳೆ ಸಿಎಂ ಬೊಮ್ಮಾಯಿ ಅವರ ಜೊತೆ ಕಂದಾಯ ಸಚಿವ ಆರ್.ಅಶೋಕ್, ನಟ ರಾಘವೇಂದ್ರ ರಾಜ್‌ಕುಮಾರ್, ರಾಕ್‌ಲೈನ್‌ ವೆಂಕಟೇಶ್‌, ಭಾ.ಮ ಹರೀಶ್, ನಿರ್ದೇಶಕ ಅಶೋಕ್ ಕಶ್ಯಪ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

    ಈ ಮೂಲಕ ಮಾರ್ಚ್‌ನಲ್ಲಿ ನಡೆಯಲಿರುವ 14ನೇ ಅಂತರಾಷ್ಟ್ರೀಯ ಚಿತ್ರೋತ್ಸವಕ್ಕೆ ಇದೀಗ ಫಿಲ್ಮ್ ಫೆಸ್ಟಿವಲ್ ಲೋಗೋ ಲಾಂಚ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k