Tag: bank accounts

  • 77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

    77 ಲಕ್ಷ ವಂಚನೆ – ಆಲಿಯಾ ಭಟ್‌ ಮಾಜಿ ಆಪ್ತ ಕಾರ್ಯದರ್ಶಿ ಬೆಂಗಳೂರಿನಲ್ಲಿ ಅರೆಸ್ಟ್‌

    ಮುಂಬೈ: ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ (Alia Bhatt) ಅವರ ಮಾಜಿ ಆಪ್ತ ಕಾರ್ಯದರ್ಶಿಯನ್ನ ಜುಹು ಪೊಲೀಸರು (Juhu Police) ಬೆಂಗಳೂರಿನಲ್ಲಿ (Bengaluru) ಬಂಧಿಸಿದ್ದಾರೆ.

    ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ ಆರೋಪಿ. ಭಟ್‌ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ (Eternal Sunshine Productions Private Limited) ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ ವಂಚಿಸಿದ ಆರೋಪ ವೇದಿಕಾ ಮೇಲೆ ಹೊರಿಸಲಾಗಿದೆ. 2022ರ ಮೇ ಮತ್ತು 2024ರ ಆಗಸ್ಟ್‌ ತಿಂಗಳ ನಡುವೆ ಈ ವಂಚನೆ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್‌ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್‌ ಏವಿಯೇಷನ್‌ ಸ್ಪಷ್ಟನೆ

    ಆಲಿಯಾ ಭಟ್‌ ಅವರ ತಾಯಿ, ನಟಿ-ನಿರ್ದೇಶಕಿ ಸೋನಿ ರಜ್ದಾನ್ ಕಳೆದ ಜನವರಿ 23ರಂದು ಜುಹು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ದೂರನ್ನಾಧರಿಸಿ ಕ್ರಿಮಿನಲ್‌ ಮತ್ತು ವಂಚನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವೇದಿಕಾಗಾಗಿ ಹುಡುಕಾಟ ನಡೆಸಿದ್ದರು. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ

    ಪೊಲೀಸ್‌ ಮೂಲಗಳ ಪ್ರಕಾರ, ವೇದಿಕಾ (Vedika Prakash Shetty) 2021ರಿಂದ 2024ರ ವರೆಗೆ ಆಲಿಯಾ ಭಟ್‌ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಳು. ಈ ವೇಳೆ ನಟಿಗೆ ಸಂಬಂಧಿಸಿದ ಹಣಕಾಸಿನ ದಾಖಲೆಗಳನ್ನು ನೋಡಿಕೊಳ್ಳುತ್ತಿದ್ದಳು. ನಟಿಗೆ ಸಂಬಂಧಿದ ವೇಳಾಪಟ್ಟಿಯನ್ನೂ ಈಕೆಯೇ ನಿರ್ವಹಿಸುತ್ತಿದ್ದಳು. ಈ ಸಮಯದಲ್ಲಿ ನಕಲಿ ಹಣಕಾಸಿನ ಬಿಲ್‌ಗಳನ್ನು ತಯಾರಿಸಿ, ಆಲಿಯಾ ಭಟ್‌ ಸಹಿ ಮಾಡಿಸಿ ಹಣ ವಂಚಿಸಿದ್ದಾಳೆ. ನಟಿ ನಕಲಿ ಬಿಲ್‌ಗಳಿಗೆ ಸಹಿ ಮಾಡಿದ ಬಳಿಕ ಸ್ನೇಹಿತರ ಖಾತೆಗಳಿಗೆ ಹಣ ವರ್ಗಾಯಿಸಿದ್ದಾಳೆ ವೇದಿಕಾ ಎಂದು ತಿಳಿದುಬಂದಿದೆ.

    ಬೆಂಗಳೂರಿನಲ್ಲಿ ಅರೆಸ್ಟ್‌
    ಆಲಿಯಾ ಭಟ್‌ ಅವರ ತಾಯಿ ದೂರು ನೀಡಿದ್ದ ಬಳಿಕ ಎಸ್ಕೇಪ್‌ ಆಗಿದ್ದ ವೇದಿಕಾ ಸ್ಥಳ ಬದಲಾಯಿಸುತ್ತಲೇ ಇದ್ದಳು. ಕೊನೆಗೆ ರಾಜಸ್ಥಾನದ ಬಳಿಕ ಕರ್ನಾಟಕದ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದಳು. ಖಚಿತ ಮಾಹಿತಿ ಪಡೆದ ಪೊಲೀಸರು ಆಕೆಯನ್ನ ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಮುಂಬೈಗೆ ಕರೆತಂದಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ತಾಮ್ರದ ಮೇಲೆ 50%, ಔಷಧ ಆಮದಿನ ಮೇಲೆ 200% ಸುಂಕದ ಎಚ್ಚರಿಕೆ – ಭಾರತದ ಮೇಲೆ ಏನು ಪರಿಣಾಮ?

  • ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ಖಾತೆಗಳನ್ನ ಬಿಜೆಪಿ ಸೀಜ್ ಮಾಡಿದೆ: ಪರಮೇಶ್ವರ್

    ರಾಜಕೀಯ ಉದ್ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ಬ್ಯಾಂಕ್‌ಖಾತೆಗಳನ್ನ ಬಿಜೆಪಿ ಸೀಜ್ ಮಾಡಿದೆ: ಪರಮೇಶ್ವರ್

    ಬೆಂಗಳೂರು: ಆದಾಯ ತೆರಿಗೆ ಇಲಾಖೆ (IT Department) ಕಾಂಗ್ರೆಸ್ ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸೀಜ್‌ ಮಾಡಿರೋದು ರಾಜಕೀಯ ಉದ್ದೇಶದಿಂದ ಅಂತ ಗೃಹ ಸಚಿವ ಪರಮೇಶ್ವರ್ (G Parameshwara) ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ (Congress Party) ಹೇಗಾದರೂ ಮಾಡಿ ತೊಂದರೆ ಕೊಡಬೇಕು ಅಂತ ನಿರ್ಧಾರ ಮಾಡಿದ ಹಾಗೆ ಇದೆ. ಸುಪ್ರೀಂ ಕೋರ್ಟ್ (Supreme Court) ಚುನಾವಣೆ ಬಾಂಡ್ ತೆಗೆದುಕೊಳ್ಳಬಾರದು ಅಂತ ಆದೇಶ ಮಾಡಿದೆ. ಇಲ್ಲಿವರೆಗೂ ತೆಗೆದುಕೊಂಡಿರೋ ಬಾಂಡ್‌ಗಳ ಬಗ್ಗೆ ಮಾಹಿತಿ ಕೊಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ. ಈ ಹಿನ್ನೆಲೆಯಲ್ಲಿ ಅವರು ಸೀಜ್‌ ಮಾಡಿದ್ದಾರೆ ಅನ್ನಿಸುತ್ತೆ ಎಂದು ಕಿಡಿ ಕಾರಿದ್ದಾರೆ.

    ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಾತೆಗಳನ್ನ ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ. ಅಕೌಂಟ್ ‌ವಿವರ ಕೇಳಬಹುದಿತ್ತು. ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಮುಖವಾಣಿ; ಕೇರಳದ ʻಜೈಹಿಂದ್‌ ಟಿವಿʼ ಚಾನೆಲ್‌ ಬ್ಯಾಂಕ್‌ ಖಾತೆಗಳು ಫ್ರೀಜ್‌!

    ಐಟಿಗೆ ಅರಿವಾದ ಮೇಲೆ ಅಕೌಂಟ್ ಓಪನ್ ಮಾಡಿದ್ದಾರೆ. ಇದೆಲ್ಲವನ್ನು ನೋಡಿದ್ರೆ ಉದ್ದೇಶ ಪೂರ್ವಕವಾಗಿ ಕೇಂದ್ರ ಮಾಡ್ತಿದೆ ಅಂತ ನಮಗೆ ಅನಿಸುತ್ತದೆ. ಈ ಸಂಧರ್ಭದಲ್ಲಿ ಮಾಡಿದಾಗ ಉದ್ದೇಶಪೂರ್ವಕವಾಗಿ ಚುನಾವಣೆಗೆ ತೊಂದರೆ ಮಾಡೋದಕ್ಕೆ‌ ಮಾಡ್ತಿದ್ದಾರೆ ಅಂತ ಅನ್ನಿಸುತ್ತೆ. ಬರೀ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೀಗೆ, ಆದರೆ‌ ಇದು ಉದ್ದೇಶಪೂರ್ವಕವಾಗಿ ಆಗಿದೆ ಅಂತ ಅನ್ನಿಸುತ್ತದೆ. ಇದರಲ್ಲಿ ‌ರಾಜಕೀಯ ಇದೆ ಅಂತ ಅನ್ನಿಸುತ್ತೆ ಅಂತ ಕೇಂದ್ರದ ವಿರುದ್ದ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

    115 ಕೋಟಿ ಹಣ ಫ್ರೀಜ್‌:
    ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದ ಮರು ದಿನವೇ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಮೂರು ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ ಬೆಳವಣಿಗೆ ನಡೆದಿದೆ. ಸಾರ್ವಜನಿಕರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲಾದ 210 ಕೋಟಿ ರೂ.ಗಳಿಗೆ ತೆರಿಗೆ ಪಾವತಿಸದ ಕಾರಣ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ಸೇರಿದ ಮೂರು ಬ್ಯಾಂಕ್‌ ಖಾತೆಗಳನ್ನು ಗುರುವಾರ ರಾತ್ರಿಯಿಂದಲೇ ಮುಟ್ಟುಗೋಲು ಹಾಕಿಕೊಂಡಿರುವುದು ವರದಿಯಾಗಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯ ಮಂಡಳಿ ಆದೇಶದ ಬಳಿಕ ಬ್ಯಾಂಕ್‌ ಖಾತೆಗಳು ಚಾಲ್ತಿಗೆ ಬಂದಿದ್ದರೂ 115 ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಫ್ರೀಜ್‌ ಮಾಡಲಾಗಿದೆ. 115 ಕೋಟಿ ರೂ. ಹಣವನ್ನು ಬ್ಯಾಂಕ್‌ ಖಾತೆಯಲ್ಲಿ ಉಳಿಸಿ, ಪಕ್ಷದ ರಾಜಕೀಯ ಚಟುವಟಿಕೆಗಳಿಗೆ ಉಳಿದ ಹಣವನ್ನು ವಿನಿಯೋಗ ಮಾಡುತ್ತೇವೆ ಎಂದು ಅಜಯ್‌ ಮಾಕೆನ್‌ ಹೇಳಿದರು. ಇದಕ್ಕೆ ಸಂಬಂಧಿಸಿದಂತೆ ಪರಮೇಶ್ವರ್‌ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    `ಜೈಹಿಂದ್ ಚಾನೆಲ್’ನ ಬ್ಯಾಂಕ್ ಖಾತೆ ಫ್ರೀಜ್‌:
    ಕಾಂಗ್ರೆಸ್ ಮುಖವಾಣಿ ಸಂಸ್ಥೆ ಕೇರಳದ `ಜೈಹಿಂದ್ ಚಾನೆಲ್’ನ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಸ್ಥಗಿತಗೊಳಿಸಿದೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Loksabha Election: ಸೋಮಣ್ಣ ಬಳಿಕ ಸಿ.ಟಿ ರವಿ, ಸುಧಾಕರ್, ಶ್ರೀರಾಮುಲು ಕಸರತ್ತು

  • ಕಾಂಗ್ರೆಸ್‌ ಮುಖವಾಣಿ; ಕೇರಳದ ʻಜೈಹಿಂದ್‌ ಟಿವಿʼ ಚಾನೆಲ್‌ ಬ್ಯಾಂಕ್‌ ಖಾತೆಗಳು ಫ್ರೀಜ್‌!

    ಕಾಂಗ್ರೆಸ್‌ ಮುಖವಾಣಿ; ಕೇರಳದ ʻಜೈಹಿಂದ್‌ ಟಿವಿʼ ಚಾನೆಲ್‌ ಬ್ಯಾಂಕ್‌ ಖಾತೆಗಳು ಫ್ರೀಜ್‌!

    – ಚಾನೆಲ್‌ಗೆ ಡಿಕೆಶಿ ಕುಟುಂಬ ಹೂಡಿಕೆ ಬಗ್ಗೆ ಮಾಹಿತಿ ಕೇಳಿದ್ದ ಸಿಬಿಐ

    ಬೆಂಗಳೂರು/ತಿರುವನಂತಪುರಂ: ಕಾಂಗ್ರೆಸ್‌ ಮುಖವಾಣಿ ಸಂಸ್ಥೆ ಕೇರಳದ ʻಜೈಹಿಂದ್ ಚಾನೆಲ್‌ʼನ ಬ್ಯಾಂಕ್‌ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ (Income Tax department) ಸ್ಥಗಿತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

    ʻಜೈಹಿಂದ್ ಟಿವಿ’ಯ (Jai Hind TV channel) ಮಾತೃಸಂಸ್ಥೆಯಾದ ಭಾರತ್ ಬ್ರಾಡ್ ಕಾಸ್ಟಿಂಗ್ ಕಂಪನಿಯಿಂದ ಬಾಕಿ ಇರುವ ತೆರಿಗೆ ಮೊತ್ತವನ್ನು ವಸೂಲಿ ಮಾಡುವಂತೆ ಎರಡು ಪ್ರಮುಖ ಖಾಸಗಿ ಬ್ಯಾಂಕುಗಳಿಗೆ ಇಲ್ಲಿನ ಕೇಂದ್ರ GST ಮತ್ತು ಅಬಕಾರಿ ಕಚೇರಿಯ ಸಹಾಯಕ ಆಯುಕ್ತರು ಇತ್ತೀಚೆಗೆ ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ಈಗ ಸಂಸ್ಥೆಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

    ಸಂಸ್ಥೆಯ ಖಾತೆಗಳನ್ನು ಸ್ಥಗಿತಗೊಳಿಸಿ ಕೈಗೊಂಡಿರುವ ಕ್ರಮಕ್ಕೂ, 7 ವರ್ಷಗಳ ಹಿಂದಿನ ಸೇವಾ ತೆರಿಗೆ ಬಾಕಿಗೆ ಸಂಬಂಧಿಸಿದ ಇದೇ ಸಂಸ್ಥೆಗೆ ಸಂಬಂಧಿಸಿದ ಪ್ರಕರಣಕ್ಕೂ ನಂಟಿದೆ. ಸೇವಾ ತೆರಿಗೆ ಬಾಕಿ ಕುರಿತ ಪ್ರಕರಣದ ವಿಚಾರಣೆ ಸದ್ಯ ಕೇರಳ ಹೈಕೋರ್ಟ್‌ನಲ್ಲಿ (Kerala Highcourt) ನಡೆಯುತ್ತಿದೆ. ಈ ನಡುವೆ ಇಲಾಖೆ ಕೈಗೊಂಡಿರುವ ಈ ದಿಢೀರ್ ಕ್ರಮ ದುರದೃಷ್ಟಕರ ಮಾತ್ರವಲ್ಲ. ಇದರಿಂದ ಚಾನೆಲ್ ಸಂಕಷ್ಟಕ್ಕೆ ಸಿಲುಕಿದೆ ಚಾನೆಲ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಇಂದಿರಾ ಗಾಂಧಿ 3ನೇ ಮಗ ಶಾಕ್? – ಪುತ್ರನ ಜೊತೆ ಕಮಲ್‌ನಾಥ್ ಬಿಜೆಪಿ ಸೇರ್ಪಡೆ?

    ಡಿಕೆಶಿ ಹೂಡಿಕೆ ಬಗ್ಗೆ ಮಾಹಿತಿ ಕೇಳಿದ್ದ ಸಿಬಿಐ:
    ಸದ್ಯ ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾ‌ರ್ ಮತ್ತು ಅವರ ಕುಟುಂಬ ಈ ಸಂಸ್ಥೆಯಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನಲಾಗಿದ್ದು, ಈ ಕುರಿತು ವಿವರ ನೀಡುವಂತೆ ಸಂಸ್ಥೆಗೆ ಕಳೆದ ಡಿಸೆಂಬರ್ 22ರಂದು ಸಿಬಿಐ ನೋಟಿಸ್ ನೀಡಿತ್ತು. ಈ ವಿಚಾರವಾಗಿ ನಾವು ತನಿಖಾ ಸಂಸ್ಥೆಗೆ ಸಹಕಾರ ನೀಡುತ್ತಿದ್ದೇವೆ. ಇದಾದ ನಂತರ, ನಾವು ಕೇಂದ್ರದ ವಿವಿಧ ಇಲಾಖೆಗಳಿಂದ 10ಕ್ಕೂ ಹೆಚ್ಚು ನೋಟಿಸ್‌ಗಳನ್ನು ಪಡೆದಿದ್ದೇವೆ ಎಂದು ಶಿಜು ಹೇಳಿದ್ದಾರೆ.

    ಡಿಕೆಶಿ ಕುಟುಂಬದಿಂದ 25 ಲಕ್ಷ ರೂ. ಹೂಡಿಕೆ?:
    2016-17 ರಲ್ಲಿ ಕೇರಳದ ಜೈಹಿಂದ್ ಪ್ರೈವೇಟ್ ಲಿಮಿಟೆಡ್‌ಗೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕುಟುಂಬ 25 ಲಕ್ಷ ರೂ. ಹೂಡಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್‌ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏರ್‌ಪೋರ್ಟ್ ಸ್ಫೋಟಿಸುತ್ತೇನೆ- ‌ ಬೆದರಿಕೆ ಕರೆ ಮಾಡಿ ಮೊಬೈಲ್‌ ಸ್ವಿಚ್ಛ್‌ ಆಫ್‌ ಮಾಡ್ಕೊಂಡ!

    115 ಕೋಟಿ ಹಣ ಫ್ರೀಜ್‌:
    ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿದ ಮರು ದಿನವೇ ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಮೂರು ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ ಬೆಳವಣಿಗೆ ನಡೆದಿದೆ. ಸಾರ್ವಜನಿಕರಿಂದ ದೇಣಿಗೆ ರೂಪದಲ್ಲಿ ಸಂಗ್ರಹಿಸಲಾದ 210 ಕೋಟಿ ರೂ.ಗಳಿಗೆ ತೆರಿಗೆ ಪಾವತಿಸದ ಕಾರಣ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ಗೆ ಸೇರಿದ ಮೂರು ಬ್ಯಾಂಕ್‌ ಖಾತೆಗಳನ್ನು ಗುರುವಾರ ರಾತ್ರಿಯಿಂದಲೇ ಮುಟ್ಟುಗೋಲು ಹಾಕಿಕೊಂಡಿರುವುದು ವರದಿಯಾಗಿದೆ. ಆದಾಯ ತೆರಿಗೆ ಮೇಲ್ಮನವಿ ನ್ಯಾಯ ಮಂಡಳಿ ಆದೇಶದ ಬಳಿಕ ಬ್ಯಾಂಕ್‌ ಖಾತೆಗಳು ಚಾಲ್ತಿಗೆ ಬಂದಿದ್ದರೂ 115 ಕೋಟಿ ರೂ. ಹಣವನ್ನು ದಂಡದ ರೂಪದಲ್ಲಿ ಫ್ರೀಜ್‌ ಮಾಡಲಾಗಿದೆ. 115 ಕೋಟಿ ರೂ. ಹಣವನ್ನು ಬ್ಯಾಂಕ್‌ ಖಾತೆಯಲ್ಲಿ ಉಳಿಸಿ, ಪಕ್ಷದ ರಾಜಕೀಯ ಚಟುವಟಿಕೆಗಳಿಗೆ ಉಳಿದ ಹಣವನ್ನು ವಿನಿಯೋಗ ಮಾಡುತ್ತೇವೆ ಎಂದು ಅಜಯ್‌ ಮಾಕೆನ್‌ ಹೇಳಿದರು. ಇದನ್ನೂ ಓದಿ: ಹಳಿ ತಪ್ಪಿದ ರೈತರ ಪ್ರತಿಭಟನೆ; ಕತ್ತಿ ಝಳಪಿಸಿದ ನಿಹಾಂಗ್‌ ಸಿಖ್ಖರು – ಖಲಿಸ್ತಾನಿ ಉಗ್ರನ ಫೋಟೋ ಪತ್ತೆ!

  • ದೇಶದಲ್ಲಿ ಬ್ಯಾನ್ ಆಗುತ್ತಾ ಪಿಎಫ್‍ಐ? – ಇಡಿಯಿಂದ 23 ಬ್ಯಾಂಕ್ ಖಾತೆ ಫ್ರೀಜ್

    ದೇಶದಲ್ಲಿ ಬ್ಯಾನ್ ಆಗುತ್ತಾ ಪಿಎಫ್‍ಐ? – ಇಡಿಯಿಂದ 23 ಬ್ಯಾಂಕ್ ಖಾತೆ ಫ್ರೀಜ್

    ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಬ್ಯಾನ್ ಆಗೋ ದಿನಗಳು ಹತ್ತಿರವಾದಂತೆ ಕಾಣುತ್ತಿದೆ. ನಿಷೇಧದ ಮೊದಲ ಭಾಗವಾಗಿಯೇ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಜಾರಿ ನಿರ್ದೇಶನಾಲಯ (ED) ಬಿಗ್ ಶಾಕ್ ನೀಡಿದೆ.

    ಪಿಎಂಎಲ್‍ಎ ಕಾಯ್ದೆಯಡಿ ಪಿಎಫ್‍ಐನ 23 ಬ್ಯಾಂಕ್ ಖಾತೆಗಳನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೇ, ಪಿಎಫ್‍ಐನ ಮತ್ತೊಂದು ಅಂಗಸಂಸ್ಥೆ ರಿಹಾಬ್ ಇಂಡಿಯಾ ಫೌಂಡೇಷನ್‍ಗೆ ಸೇರಿದ 10 ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದೆ. ಈ ಖಾತೆಗಳಲ್ಲಿ ಇದ್ದ 9.5 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದೆ. ಪಿಎಎಸ್‍ಐ ಸಂಘಟನೆ ಮತ್ತು ರಿಹ್ಯಾಬ್ ಇಂಡಿಯಾ ಫೌಂಡೇಶನ್ ಖಾತೆಯಲ್ಲಿ ಒಟ್ಟು 68,62,081 ರೂಪಾಯಿ ಇದೆ. ಈ ಖಾತೆಯನ್ನು ಫ್ರೀಜ್ ಮಾಡಲಾಗಿದೆ ಎಂದು ಇಡಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದಲ್ಲಿ ಹೈ ಅಲರ್ಟ್ – ಜಾಮೀಯಾ ಮಸೀದಿ ಸುತ್ತ 144 ನಿಷೇಧಾಜ್ಞೆ ಜಾರಿ

    ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಫ್‍ಐ ಸಂಘಟನೆಯ ಹಲವು ಮುಖಂಡರ ಮನೆಗಳಿಗೆ ದಾಳಿ ನಡೆಸಿ ಇಡಿ ವಿಚಾರಣೆ ನಡೆಸುತ್ತಿದೆ. 2006ರಲ್ಲಿ ಪಿಎಫ್‍ಐ ಕೇರಳದಲ್ಲಿ ಆರಂಭಗೊಂಡಿತ್ತು. ಇದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಕೈ, ದಳದಲ್ಲಿ ಗೊಂದಲ – ಇಬ್ಬರ ಜಗಳದ ಲಾಭ ಪಡೆಯುವ ನಿರೀಕ್ಷೆಯಲ್ಲಿ BJP