Tag: Bank Employee

  • ಕನ್ನಡ ಮಾತಾಡಿ ಎಂದಿದ್ದಕ್ಕೆ ರೂಲ್ಸ್ ಇದೆಯಾ ಎಂದು ದರ್ಪ ಮೆರೆದ ಬ್ಯಾಂಕ್ ಸಿಬ್ಬಂದಿ

    ಕನ್ನಡ ಮಾತಾಡಿ ಎಂದಿದ್ದಕ್ಕೆ ರೂಲ್ಸ್ ಇದೆಯಾ ಎಂದು ದರ್ಪ ಮೆರೆದ ಬ್ಯಾಂಕ್ ಸಿಬ್ಬಂದಿ

    ಬೀದರ್: ಕನ್ನಡ (Kannada) ಮಾತನಾಡಿ ಎಂದಿದಕ್ಕೆ ರೂಲ್ಸ್ ಇದೆಯಾ ಎಂದು ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ವ್ಯಕ್ತಿ ಮೇಲೆಯೇ ದರ್ಪ ಮೆರೆದ ಘಟನೆ ಬೀದರ್ (Bidar) ಜಿಲ್ಲೆಯ ಹುಲಸೂರು ಪಟ್ಟಣದ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದೆ.

    ಕರ್ನಾಟಕದಲ್ಲಿ ಕನ್ನಡ ಮಾತನಾಡಬೇಕಲ್ವಾ ಎಂದು ಸ್ಥಳೀಯ ವ್ಯಕ್ತಿ ಪ್ರಶ್ನೆ ಮಾಡಿದ್ದಕ್ಕೆ, ನಾನು ಕನ್ನಡ ಮಾತನಾಡಲ್ಲಾ ಎಂದು ಡಿಸಿಸಿ ಬ್ಯಾಂಕ್ ಸಿಬ್ಬಂದಿ ಕಿರಿಕ್ ಮಾಡಿದ್ದಾರೆ. ಅಲ್ಲದೇ ಈ ರೀತಿ ಮಾತನಾಡಿ ಎಂದು ಹೇಳೋ ಕೆಲಸ ಮಾಡಬೇಡಿ ಎಂದು ದರ್ಪ ಮೆರೆದಿದ್ದಾರೆ. ಇದನ್ನೂ ಓದಿ: ಕುಡಿತಕ್ಕೆ ದಾಸನಾಗಿದ್ದ ಪತಿಯೊಂದಿಗೆ ಗಲಾಟೆ – ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

    ಇದು ಕರ್ನಾಟಕ, ಮಹಾರಾಷ್ಟ್ರ ಅಲ್ಲ ಎಂದು ವ್ಯಕ್ತಿ ಹೇಳಿದ್ದಾರೆ. ಈ ವೇಳೆ ಬ್ಯಾಂಕ್‌ನಲ್ಲಿ ನಿಮ್ಮ ಅಕೌಂಟ್ ಇದೆಯಾ, ಇಲ್ಲವಾದ್ರೆ ಇಲ್ಲಿಂದ ಹೋಗಿ ಎಂದು ಸಿಬ್ಬಂದಿ ಕಿರಿಕ್ ಮಾಡಿದ್ದಾರೆ. ಅಜ್ಜನ ಬ್ಯಾಂಕ್ ಅಕೌಂಟ್ ಬಗ್ಗೆ ಮಾಹಿತಿ ಪಡೆಯಲು ಬಂದಿದ್ದ ವ್ಯಕ್ತಿ ಮೇಲೆಯ ಡಿಸಿಸಿ ಬ್ಯಾಂಕ್ ಸಿಬ್ಬಂದಿ ದರ್ಪ ತೋರಿದ್ದಾರೆ. ಇದನ್ನೂ ಓದಿ: ಕಾಲ್ತುಳಿತಕ್ಕೆ ಬಲಿಯಾಗಿದ್ದ ಮಗಳ ಕಿವಿಯೋಲೆ ಕಳವು – ಬೌರಿಂಗ್ ಆಸ್ಪತ್ರೆಯ ವಿರುದ್ಧ ದೂರು

  • ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ಇಡಿ ದಾಳಿ

    ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿ ಮನೆ ಮೇಲೆ ಇಡಿ ದಾಳಿ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳಿಂದ ದಾಳಿ ನಡೆದಿದೆ.ಇದನ್ನೂ ಓದಿ: ಇಂಟರ್ನ್‌ಶಿಪ್‌ ಯೋಜನೆಗೆ ಚಾಲನೆ, ಸಿಗಲಿದೆ ತಿಂಗಳಿಗೆ 5 ಸಾವಿರ ಭತ್ಯೆ – ಅರ್ಜಿ ಸಲ್ಲಿಸೋದು ಹೇಗೆ? ಮಾನದಂಡ ಏನು?

    ರಾಷ್ಟ್ರೀಕೃತ ಬ್ಯಾಂಕ್ (Nationalized Bank) ಸಿಬ್ಬಂದಿಯ ಮನೆ ಮೇಲೆ ದಾಳಿ ನಡೆದಿದ್ದು, ಸತತವಾಗಿ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ.

    ಸದ್ಯ 5 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದೆಹಲಿಯಲ್ಲಿ (Delhi) ದಾಖಲಾಗಿದ್ದ ಇಡಿ ಪ್ರಕರಣದ ಹಿನ್ನೆಲೆ ಬೆಂಗಳೂರಿನಲ್ಲಿ ಬ್ಯಾಂಕ್ ಸಿಬ್ಬಂದಿಯ ಮೇಲೆ ಸತತವಾಗಿ ಎರಡು ದಿನಗಳಿಂದ ದಾಳಿ ನಡೆಸಿದ್ದಾರೆ. ಗುರುವಾರ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಇಂದು (ಅ.4) ಬೆಳಿಗ್ಗೆ ದಾಳಿ ಮಾಡಿದ್ದಾರೆ.ಇದನ್ನೂ ಓದಿ: ದಸರಾ ವಿಶೇಷ; ಉತ್ತರ ಕರ್ನಾಟಕ ಶೈಲಿಯ ತಾಲಿಪಟ್ಟು ರೆಸಿಪಿ ನಿಮಗಾಗಿ

  • ಬ್ಯಾಂಕ್ ಉದ್ಯೋಗಿಗೆ ಕೊರೊನಾ- ಆತಂಕದಲ್ಲಿ ಮಸ್ಕಿ, ಕೊಪ್ಪಳದ ಜನತೆ

    ಬ್ಯಾಂಕ್ ಉದ್ಯೋಗಿಗೆ ಕೊರೊನಾ- ಆತಂಕದಲ್ಲಿ ಮಸ್ಕಿ, ಕೊಪ್ಪಳದ ಜನತೆ

    -ಕೊಪ್ಪಳದಲ್ಲಿ ವಾಸ, ರಾಯಚೂರಿನಲ್ಲಿ ಕೆಲಸ

    ಕೊಪ್ಪಳ/ರಾಯಚೂರು: ಕೊಪ್ಪಳದಲ್ಲಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ 27 ವರ್ಷದ ಬ್ಯಾಂಕ್ ಉದ್ಯೋಗಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಹೀಗಾಗಿ ಸೋಂಕಿತ ಕಾರ್ಯ ನಿರ್ವಹಿಸುತ್ತಿದ್ದ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿಯೂ ಮತ್ತು ವಾಸವಾಗಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

    ರೋಗಿ 2254 ಕೇಸೂರು ಗ್ರಾಮದ ನಿವಾಸಿಯಾಗಿದ್ದು, ಮಸ್ಕಿಯ ಕೆನರಾ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿನಿತ್ಯ ಗ್ರಾಮದಿಂದ ಹೋಗಿ ಬರುತ್ತಿದ್ದರು. ಮೇ 17ರಂದು ಉದ್ಯೋಗಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. 22 ರಂದು ಕೇಸೂರು ಗ್ರಾಮದ ಪ್ರ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆಸ್ಪತ್ರೆ ಸಿಬ್ಬಂದಿ ಉದ್ಯೋಗಿ ಗಂಟಲು ದ್ರವದ ಮಾದರಿಯನ್ನು ಪಡೆದು ಕೋವಿಡ್-19 ಪರೀಕ್ಷೆಗೆ ಕಳುಗಹಿಸಿದ್ದರು. ಪರೀಕ್ಷೆಯ ಬಳಿಕ ಉದ್ಯೋಗಿಯನ್ನು ಕೊಪ್ಪಳದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

    ಇಂದು ಬಂದ ವರದಿಯಲ್ಲಿ ಉದ್ಯೋಗಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಸೋಂಕಿತ ಬ್ಯಾಂಕ್ ಉದ್ಯೋಗಿಯಾಗಿದ್ದರಿಂದ ಹಲವು ಜನರ ಜೊತೆ ಸಂಪರ್ಕ ಹೊಂದಿದ್ದಾರೆ. ಮಸ್ಕಿಯಲ್ಲಿ ಪುರಸಭೆ ಸಿಬ್ಬಂದಿ ಬ್ಯಾಂಕ್ ಒಳಗೆ ಡಿಸ್ ಇನ್ಫೆಕ್ಷನ್ ಸ್ಪ್ರೇ ಮಾಡಿದ್ದಾರೆ. ಮಸ್ಕಿಯಲ್ಲಿ ವ್ಯಕ್ತಿ ವಾಸವಿದ್ದ ಮನೆ ಹಾಗೂ ಓಡಾಡಿದ ಜಾಗದಲ್ಲೆಲ್ಲಾ ಕೆಮಿಕಲ್ ಸ್ಪ್ರೇ ಮಾಡಲಾಗಿದೆ.

    ಇತ್ತ ಸೋಂಕಿತ ವಾಸವಾಗಿದ್ದ ಕೇಸೂರು ಗ್ರಾಮವನ್ನು ಸೀಲ್‍ಡೌನ್ ಮಾಡಲಾಗಿದೆ. ದೋಟಿಹಾಳ ಗ್ರಾಮವನ್ನು ಬಫರ್ ಝೋನ್ ಎಂದು ಗುರುತಿಸಲಾಗಿದೆ. ಇನ್ನು ಸೋಂಕಿತನ ಸೋದರ ಕೊಪ್ಪಳ ನಗರದ ಐಸಿಐಸಿಐ ಬ್ಯಾಂಕ್ ಗೆ ಆಗಮಿಸಿ ವ್ಯವಹಾರ ನಡೆಸಿದ್ದು, ನಗರದ ಗಂಜ್ ಸರ್ಕಲ್ ನಲ್ಲಿರುವ ಮೊಬೈಲ್ ಶಾಪ್ ನಲ್ಲಿ ವ್ಯವಹಾರ ಮಾಡಿರುವ ಮಾಹಿತಿ ಲಭ್ಯವಾಗಿದೆ.

    ಬ್ಯಾಂಕ್ ಉದ್ಯೋಗಿಯ ಸೋಂಕಿನ ಮೂಲ, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿರುವವರ ಪತ್ತೆಗಾಗಿ ಕೊಪ್ಪಳ ಮತ್ತು ರಾಯಚೂರು ಜಿಲ್ಲಾಡಳಿತ ಮುಂದಾಗಿವೆ.

  • ನಿರಾಶ್ರಿತರ ಜೊತೆ ಹುಟ್ಟುಹಬ್ಬ – 2000 ಜನರಿಗೆ ಅನ್ನದಾನ ಮಾಡಿದ ನಿವೃತ್ತ ಬ್ಯಾಂಕ್ ಉದ್ಯೋಗಿ

    ನಿರಾಶ್ರಿತರ ಜೊತೆ ಹುಟ್ಟುಹಬ್ಬ – 2000 ಜನರಿಗೆ ಅನ್ನದಾನ ಮಾಡಿದ ನಿವೃತ್ತ ಬ್ಯಾಂಕ್ ಉದ್ಯೋಗಿ

    ಉಡುಪಿ: ದೇಶವೇ ಲಾಕ್‍ಡೌನ್ ಆಗಿರುವುದರಿಂದ ಉಡುಪಿಯಲ್ಲಿರುವ ಬಡವರಿಗೆ, ನಿರಾಶ್ರಿತರಿಗೆ ಮತ್ತು ಕೂಲಿ ಕಾರ್ಮಿಕರಿಗೆ ಊಟಕ್ಕೆ ಸಮಸ್ಯೆಯಾಗಿದೆ. ಇದೇ ವೇಳೆ ನಿವೃತ್ತ ಬ್ಯಾಂಕ್ ಉದ್ಯೋಗಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ 2000 ಜನರಿಗೆ ಅನ್ನದಾನ ಮಾಡಿದ್ದಾರೆ.

    ಹಲವಾರು ಸಂಘ ಸಂಸ್ಥೆಗಳು, ಸಮಾಜ ಸೇವಕರು ಮೂರು ಹೊತ್ತಿನ ಊಟೋಪಚಾರ ವ್ಯವಸ್ಥೆ ಮಾಡುತ್ತಿದ್ದಾರೆ. ಈ ನಡುವೆ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿಯಾದ ಜಯರಾಮ್ ರಾವ್ ತಮ್ಮ 63ನೇ ಹುಟ್ಟುಹಬ್ಬವನ್ನು ನಿರಾಶ್ರಿತರ, ಕೂಲಿ ಕಾರ್ಮಿಕರ ಜೊತೆ ಆಚರಿಸಿದರು. ಅಲ್ಲದೇ ಸುಮಾರು 2000 ಜನರಿಗೆ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದರು.

    ಈ ಸಂದರ್ಭದಲ್ಲಿ ಜಯರಾಮ್ ರಾವ್ ಮಾತನಾಡಿ. ನಾನು ಹುಟ್ಟುಹಬ್ಬ ಆಚರಿಸಿಲ್ಲ. ಆದರೆ ಈಗ ಜನ ಸಂಕಷ್ಟದಲ್ಲಿ ಇದ್ದಾರೆ. ಅವರಿಗೆ ಊಟ ಕೊಡುವ ಮನಸ್ಸಾಯ್ತು. ದೇಶ ಹಸಿವಿನಿಂದ ಇರುವಾಗ ನಾವು ಮನೆಯಲ್ಲಿ ಸಿಹಿಯೂಟ ಮಾಡುವುದು ಎಷ್ಟು ಸರಿ ಎಂಬ ಆಲೋಚನೆ ಬಂತು. ಆಗ ಗಣೇಶೋತ್ಸವ ಸಮಿತಿಯನ್ನು ಸಂಪರ್ಕಿಸಿದೆ. ಅವರ ಮೂಲಕ ಜನರಿಗೆ ಊಟದ ವ್ಯವಸ್ಥೆ ಮಾಡಿದೆ ಎಂದು ಹೇಳಿದರು.

    ಜಯರಾಮ್ ಅವರಿಂದ ವಿತರಣೆಯಾದ ಊಟ ಹಸಿದ ಹೊಟ್ಟೆಗೆ ಸೇರಿದೆ. ಸಂಕಷ್ಟದ ಈ ಸ್ಥಿತಿಯಲ್ಲಿ ದಾನಿಗಳು ಮುಂದೆ ಬಂದರೆ ಸರ್ಕಾರಕ್ಕೆ ಹೊರೆ ಕಡಿಮೆಯಾಗುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

    ಉಡುಪಿ ನಗರದ 10 ಕಡೆ ಮಧ್ಯಾಹ್ನದ ಅನ್ನದಾನ ಮಾಡಿ ವಿಶೇಷ ರೀತಿಯಲ್ಲಿ ಸದಾಕಾಲ ನೆನಪಿನಲ್ಲಿ ಇರುವಂತೆ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಜಯರಾಮ್ ಅವರ ಪತ್ನಿ ವೀಣಾ ರಾವ್ ಜೊತೆಗಿದ್ದು, ಊಟ ವಿತರಣೆ ಮಾಡಿದರು. ಕಡಿಯಾಳಿ ಗಣೇಶೋತ್ಸವ ಸಮಿತಿ ಮೂಲಕ ಅನ್ನದಾನ ಮಾಡಿದ್ದು, ವ್ಯವಸ್ಥಾಪಕ ಮಂಜುನಾಥ್ ಹೆಬ್ಬಾರ್, ಶಾಸಕ ರಘುಪತಿ ಭಟ್, ಮೇಲ್ವಿಚಾರಕ ರಾಘವೇಂದ್ರ ಕಿಣಿ, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

  • ಬೆಂಗ್ಳೂರಲ್ಲಿ ನಿಲ್ಲದ ಗಾಂಜಾ ವ್ಯಸನಿಗಳ ಪುಂಡಾಟಿಕೆ- ಯುವಕನ ಹೆಬ್ಬೆರಳೇ ಕಟ್

    ಬೆಂಗ್ಳೂರಲ್ಲಿ ನಿಲ್ಲದ ಗಾಂಜಾ ವ್ಯಸನಿಗಳ ಪುಂಡಾಟಿಕೆ- ಯುವಕನ ಹೆಬ್ಬೆರಳೇ ಕಟ್

    ಬೆಂಗಳೂರು: ನಗರದಲ್ಲಿ ಗಾಂಜಾ ವ್ಯಸನಿಗಳ ಪುಂಡಾಟಿಕೆ ಮುಂದುವರಿದಿದ್ದು, ಮತ್ತಿನಲ್ಲಿದ್ದ ಗುಂಪೊಂದು ಯುವಕನ ಹೆಬ್ಬೆರಳು ಕತ್ತರಿಸಿದ್ದಾರೆ.

    ಎಚ್‍ಡಿಎಫ್‍ಸಿ ಬ್ಯಾಂಕ್ ಉದ್ಯೋಗಿ ಲೋಹಿತ್ ಕುಮಾರ್ ಹಲ್ಲೆಗೊಳಗಾದ ಯುವಕ. ಪ್ರದೀಪ್, ಮನೋಜ್ ಹಾಗೂ ಪ್ರದೀಪ್ ಹಲ್ಲೆ ಆರೋಪಿಗಳು. ಎಲ್‍ಆರ್ ಬಂಡೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ.

    ಗಾಂಜಾ ಮತ್ತಿನಲ್ಲಿದ್ದ ಆರೋಪಿಗಳು ಲೋಹಿತ್ ಕುಮಾರ್ ಅವರ ಜೊತೆಗೆ ಜಗಳ ಮಾಡಿಕೊಂಡಿದ್ದಾರೆ. ಬಳಿಕ ಡ್ರ್ಯಾಗರ್ ನಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ಲೋಹಿತ್ ಕುಮಾರ್ ಬಲಗೈ ಹೆಬ್ಬೆರಳು ತುಂಡಾಗಿದ್ದು, ಬೆನ್ನಿಗೆ ಗಂಭೀರವಾಗಿ ಗಾಯವಾಗಿದೆ.

    ಗಂಭೀರವಾಗಿ ಗಾಯಗೊಂಡಿದ್ದ ಲೋಹಿತ್ ಕುಮಾರ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಡಿಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸ್ಪೈಡರ್ ಮ್ಯಾನ್ ವೇಷ ಧರಿಸಿ ಆಫೀಸ್‍ಗೆ ಬಂದ ಉದ್ಯೋಗಿ

    ಸ್ಪೈಡರ್ ಮ್ಯಾನ್ ವೇಷ ಧರಿಸಿ ಆಫೀಸ್‍ಗೆ ಬಂದ ಉದ್ಯೋಗಿ

    ರಿಯೋ ಡಿ ಜನೈರೊ: ಯಾವುದೇ ಒಂದು ಕಂಪನಿ ಅಥವಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ನಂತರ ಬೇರೆ ಕಂಪನಿಗೆ ಅಥವಾ ನಿವೃತ್ತಿಯ ವೇಳೆ ಕಡೆಯ ದಿನ ತುಂಬಾ ಉದ್ಯೋಗಿಗಳು ಭಾವುಕರಾಗುತ್ತಾರೆ. ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ.

    ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು, ಈಗ ಬ್ಯಾಂಕ್ ಉದ್ಯೋಗಿ ಸ್ಪೈಡರ್ ಮ್ಯಾನ್ ವೇಷ ಧರಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಉದ್ಯೋಗಿ ತನ್ನ ಕಡೆಯ ಕೆಲಸದ ದಿನ ಜೀವತಾವಧಿಯಲ್ಲಿ ಸದಾ ನೆನಪಿರಬೇಕು ಎಂದು ಈ ರೀತಿಯ ವೇಷದಲ್ಲಿ ಹೋಗಿದ್ದಾನೆ.

    ಉದ್ಯೋಗಿ ಸ್ಪೈಡರ್ ಮ್ಯಾನ್ ವೇಷ ಧರಿಸಿ ಬಂದಿದ್ದು, ದಿನ ಅದೇ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸಹೋದ್ಯೋಗಿಯೊಬ್ಬರು ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಅದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಫೋಟೋ ಮತ್ತು ವಿಡಿಯೋದಲ್ಲಿ, ಉದ್ಯೋಗಿ ತನ್ನ ಜಾಗದಲ್ಲಿ ಕುಳಿತು ಅದೇ ವೇಷದಲ್ಲಿ ಕೆಲಸ ಮಾಡುತ್ತಿರುವುದು. ಜೊತೆಗೆ ಕಿವಿಗೆ ಹೆಡ್‍ಫೋನ್ ಹಾಕಿರುವುದು ಮತ್ತು ತನ್ನ ಸಹೋದ್ಯೋಗಿಗೆ ಸಲಹೆ ಕೊಡುತ್ತಿರುವುದನ್ನು ನೋಡಬಹುದಾಗಿದೆ. ಇನ್ನೂ ವಿಡಿಯೋದಲ್ಲಿ ತನ್ನ ಸಹೋದ್ಯೋಗಿಗಳಿಗೆ ಕಡೆದ ದಿನದ ಹಿನ್ನೆಲೆಯಲ್ಲಿ ಸ್ವೀಟ್ ನೀಡುತ್ತಿರುವುದನ್ನು ನೋಡಬಹುದಾಗಿದೆ.

    ಉದ್ಯೋಗಿಯ ಸ್ಪೈಡರ್ ಮ್ಯಾನ್ ವೇಷಧಾರಿಯ ಫೋಟೋವನ್ನು ಸಹೋದ್ಯೋಗಿಗಳು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದು, ಫನ್ನಿ ಫನ್ನಿಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv