Tag: Bank Janardhan

  • ಪೀಣ್ಯಾದ ಚಿತಾಗಾರದಲ್ಲಿ ನೆರವೇರಿದ ಬ್ಯಾಂಕ್ ಜನಾರ್ಧನ್ ಅಂತ್ಯಕ್ರಿಯೆ

    ಪೀಣ್ಯಾದ ಚಿತಾಗಾರದಲ್ಲಿ ನೆರವೇರಿದ ಬ್ಯಾಂಕ್ ಜನಾರ್ಧನ್ ಅಂತ್ಯಕ್ರಿಯೆ

    ನ್ನಡದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (Bank Janardhan) ಅವರ ಅಂತ್ಯಕ್ರಿಯೆ ಪೀಣ್ಯಾದ ಚಿತಾಗಾರದಲ್ಲಿ ಮರಾಠಾ ಕ್ಷತ್ರೀಯ ಸಂಪ್ರದಾಯದಂತೆ ಜರುಗಿದೆ. ಪುತ್ರ ಗುರುಪ್ರಸಾದ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಈ ವೇಳೆ, ನಟನ ಅಂತ್ಯಕ್ರಿಯೆಯಲ್ಲಿ ಟೆನ್ನಿಸ್ ಕೃಷ್ಣ, ಗಣೇಶ್ ರಾವ್, ಡಿಂಗ್ರಿ ನಾಗರಾಜ್ ಭಾಗಿಯಾಗಿದ್ದಾರೆ. ಇದನ್ನೂ ಓದಿ:ಬ್ಯಾಂಕ್‌ ಜನಾರ್ಧನ್‌ ಸಾವಿನ ಸುದ್ದಿ ಕೇಳಿ ಆಘಾತವಾಯ್ತು: ದೊಡ್ಡಣ್ಣ ಭಾವುಕ

    ಅಂತ್ಯಕ್ರಿಯೆಯ ಬಳಿಕ ಬ್ಯಾಂಕ್ ಜನಾರ್ದನ ಪುತ್ರ ಗುರುಪ್ರಸಾದ್ ಮಾತನಾಡಿ, ಇವತ್ತು ತಂದೆ ಅಂತ್ಯಕ್ರಿಯೆ ಮುಗಿದಿದೆ.  ಬೆಳಗ್ಗೆಯಿಂದ ಎಲ್ಲರೂ ಬಂದು ಅಂತಿಮ ದರ್ಶನ ಪಡೆದಿದ್ದಾರೆ. ಕರ್ನಾಟಕ ಜನತೆಗೆ ಧನ್ಯವಾದ ಎಂದಿದ್ದಾರೆ. ಇಷ್ಟು ವರ್ಷಗಳ ಕಾಲ ನಮ್ಮ ತಂದೆಯನ್ನು ಹಾರೈಸಿ ಪ್ರೋತ್ಸಾಹಿಸಿದ್ದೀರಾ. ನನ್ನ ತಂದೆ ಮುಂದೆ ಕರ್ನಾಟಕದಲ್ಲೇ ಹುಟ್ಟಬೇಕು. ಇಲ್ಲೇ ಕಲಾವಿದನಾಗಿ ಸೇವೆ ಸಲ್ಲಿಸಬೇಕು ಅನ್ನೋದು ನನ್ನಾಸೆ ಎಂದು ಭಾವುಕರಾಗಿದ್ದಾರೆ. ಈ ದಿನದ ಜರ್ನಿಯಲ್ಲಿ ತುಂಬ ಜನ ಸಹಾಯಕ್ಕೆ ನಿಂತಿದ್ದಾರೆ. ಕಲಾವಿದರ ಸಂಘದ ಸದಸ್ಯರು ಸಹಾಯ ಮಾಡಿದ್ದಾರೆ. ನಮ್ಮ ತಂದೆ ಸ್ನೇಹಿತರಿಗೆ ಧನ್ಯವಾದಗಳು ಎಂದಿದ್ದಾರೆ. ಇನ್ನೂ 3ನೇ ದಿನ ಕಾರ್ಯ ಬುಧವಾರ ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ಹೋಗುತ್ತವೆ. 11ನೇ ದಿನದ ಕಾರ್ಯ ನಮ್ಮ ಮನೆಯಲ್ಲಿಯೇ ನಡೆಯಲಿದೆ ಎಂದು ಬ್ಯಾಕ್‌ ಜನಾರ್ಧನ್‌ ಪುತ್ರ ಮಾಹಿತಿ ನೀಡಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟನಿಗೆ ತಡರಾತ್ರಿ ರಾತ್ರಿ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆತಂದಿದ್ದಾದರೂ ಫಲಕಾರಿಯಾಗದೇ ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ:ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

    ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.

    80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.

  • ಜನಾರ್ಧನ್‌ಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬರಲು ಕಾರಣವೇನು ಗೊತ್ತಾ?

    ಜನಾರ್ಧನ್‌ಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಬರಲು ಕಾರಣವೇನು ಗೊತ್ತಾ?

    ಬೆಳ್ಳಿಪರದೆಯಲ್ಲಿ ಸದಾ ನಕ್ಕು ನಗಿಸುತ್ತಿದ್ದ ಜನಾರ್ಧನ್‌ಗೆ ಬ್ಯಾಂಕ್ ಜನಾರ್ಧನ್ (Bank Janardhan) ಎಂಬ ಹೆಸರು ಬರಲು ಕಾರಣವಿದೆ. 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಗೆದ್ದಿದ್ದ ನಟನಿಗೆ ಬ್ಯಾಂಕ್ ಜನಾರ್ಧನ್ ಎಂಬ ಹೆಸರು ಸಿಕ್ಕಿದ್ದೆ ರೋಚಕ ಕಥೆ. ಈ ಕುರಿತು ಇಲ್ಲಿದೆ ಮಾಹಿತಿ. ಇದನ್ನೂ ಓದಿ:ಬ್ಯಾಂಕ್‌ ಜನಾರ್ಧನ್‌ ಸಾವಿನ ಸುದ್ದಿ ಕೇಳಿ ಆಘಾತವಾಯ್ತು: ದೊಡ್ಡಣ್ಣ ಭಾವುಕ

    ಜನಾರ್ಧನ್ ಅವರು ತಮ್ಮ ಬಾಲ್ಯವನ್ನು ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಕಳೆದಿದ್ದರು. ಬಳಿಕ ಅಲ್ಲಿಯೇ ಬ್ಯಾಂಕ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಶಾಲೆ ಹಾಗೂ ಕಾಲೇಜು ದಿನಗಳಲ್ಲೇ ನಾಟಕದ ಗೀಳು ಅಂಟಿಸಿಕೊಂಡಿದ್ದರು. ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು. ಒಮ್ಮೆ ಅವರ ನಾಟಕ ನೋಡಿ ಇಂಪ್ರೆಸ್ ಆಗಿ ನಟ ಧೀರೇಂದ್ರ ಗೋಪಾಲ್ ಅವರು ಬೆಂಗಳೂರಿಗೆ ಬರುವಂತೆ ಹೇಳಿದ್ದರು. ಇದನ್ನೂ ಓದಿ:ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

    ಅವರ ಮಾತಿನಂತೆ ಜನಾರ್ಧನ್ ಬೆಂಗಳೂರಿಗೆ ಎಂಟ್ರಿ ಕೊಟ್ಟರು. ಬಳಿಕ ‘ಊರಿಗೆ ಉಪಕಾರಿ’ ಸಿನಿಮಾದಲ್ಲಿ ವಜ್ರಮುನಿ ಅವರಿಗೆ ಬಾಡಿಗಾರ್ಡ್ ಆಗಿ ಪಾತ್ರ ಮಾಡಿದ್ದರು. ಹೀಗೆ ತಮ್ಮ ಹಾಸ್ಯದ ಮೂಲಕ ಫೇಮಸ್ ಆಗುತ್ತಿದ್ದರು. ಆ ವೇಳೆ ಜನಾರ್ಧನ್ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾಗ ಅನೇಕರು ಜನಾರ್ಧನ್ ಹೆಸರಿನವರು ಇದ್ದರು. ವಿಜಯಾ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಹಿನ್ನೆಲೆ ಜನಾರ್ಧನ್ ಅವರು ತಮ್ಮ ಹೆಸರಿನ ಮುಂದೆ ಬ್ಯಾಂಕ್ ಅಂತ ಹೆಸರನ್ನು ಸೇರಿಸಿಕೊಂಡರು. ಅಲ್ಲಿಂದ ಅವರು ಬ್ಯಾಂಕ್ ಜನಾರ್ಧನ್ ಅಂತ ಫೇಮಸ್ ಆದರು.

    ಅಂದಹಾಗೆ, ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.

    80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.

  • ಬ್ಯಾಂಕ್‌ ಜನಾರ್ಧನ್ ಸಾವಿನ ಸುದ್ದಿ ಕೇಳಿ ಶಾಕ್ ಆಯ್ತು: ಧ್ರುವ ಸರ್ಜಾ

    ಬ್ಯಾಂಕ್‌ ಜನಾರ್ಧನ್ ಸಾವಿನ ಸುದ್ದಿ ಕೇಳಿ ಶಾಕ್ ಆಯ್ತು: ಧ್ರುವ ಸರ್ಜಾ

    ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (Dhruva Sarja) ಅವರು ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಮಾಧ್ಯಮಕ್ಕೆ ಮಾತನಾಡಿ, ಸಾವಿನ ವಿಚಾರ ಕೇಳಿ ಶಾಕ್ ಆಯ್ತು ಎಂದಿದ್ದಾರೆ ಧ್ರುವ ಸರ್ಜಾ. ಇದನ್ನೂ ಓದಿ:ಬ್ಯಾಂಕ್‌ ಜನಾರ್ಧನ್‌ ಅದ್ಭುತ ಅಭಿನಯದಿಂದ ನನ್ನ ಸಿನಿಪಯಣದಲ್ಲಿ ಯಶಸ್ವಿ ಹೆಜ್ಜೆ ಇಟ್ಟೆ: ಉಪೇಂದ್ರ

    ಬ್ಯಾಂಕ್ ಜನಾರ್ಧನ್ (Bank Janardhan) ಅವರನ್ನು ನಾವು ಚಿಕ್ಕವರಿಂದ ನೋಡಿಕೊಂಡು ಬೆಳೆದಿದ್ದೇವೆ. ನಮ್ಮ ಕಿಶೋರ್ ಅಂಕಲ್ (Kishore Sarja) ಅವರ ಕ್ಲೋಸ್ ಫ್ರೆಂಡ್ ಆಗಿದ್ರು. ಇವತ್ತು ಅವರು ನಮ್ಮ ಜೊತೆಯಿಲ್ಲ ಎಂಬುದನ್ನು ಕೇಳಿ ಶಾಕ್ ಆಯ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಧೈರ್ಯ ಕೊಡಲಿ ಎಂದು ಧ್ರುವ ಸರ್ಜಾ ಮಾತನಾಡಿದ್ದಾರೆ. ಇದನ್ನೂ ಓದಿ:ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.

    80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.

  • ಬ್ಯಾಂಕ್‌ ಜನಾರ್ಧನ್‌ ಸಾವಿನ ಸುದ್ದಿ ಕೇಳಿ ಆಘಾತವಾಯ್ತು: ದೊಡ್ಡಣ್ಣ ಭಾವುಕ

    ಬ್ಯಾಂಕ್‌ ಜನಾರ್ಧನ್‌ ಸಾವಿನ ಸುದ್ದಿ ಕೇಳಿ ಆಘಾತವಾಯ್ತು: ದೊಡ್ಡಣ್ಣ ಭಾವುಕ

    ಬ್ಯಾಂಕ್ ಜನಾರ್ಧನ್ ಬಹಳ ಶಿಸ್ತಿನ ವ್ಯಕ್ತಿ – ಸಾಧು ಕೋಕಿಲ ಭಾವುಕ 

    ನ್ನಡ ಚಿತ್ರರಂಗದಲ್ಲಿ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡವರು ಬ್ಯಾಂಕ್‌ ಜನಾರ್ಧನ್.‌ ಅವರ ನಿಧನದ ಬಗ್ಗೆ ಕಲಾವಿದರಾದ ದೊಡ್ಡಣ್ಣ (Doddanna), ಡಿಂಗ್ರಿ ನಾಗರಾಜ್‌, ಸಾಧು ಕೋಕಿಲ, ವಿನೋದ್‌ ರಾಜ್‌ ಸಂತಾಪ ಸೂಚಿಸಿದ್ದಾರೆ. ಅವರ ಜೊತೆಗಿನ ಒಡನಾಟದ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ:ಬ್ಯಾಂಕ್‌ ಜನಾರ್ಧನ್ ನಿಧನಕ್ಕೆ ಟೆನ್ನಿನ್‌ ಕೃಷ್ಣ, ನಟಿ ಅಭಿನಯ ಭಾವುಕ

    ಪಬ್ಲಿಕ್‌ ಟಿವಿಗೆ ದೊಡ್ಡಣ್ಣ ಮಾತನಾಡಿ, ನಾನು ಚಿತ್ರರಂಗಕ್ಕೆ ಬಂದು 46 ವರ್ಷಗಳಾಯ್ತು. ನನಗೆ 40 ವರ್ಷಗಳಿಂದ ಜನಾರ್ಧನ್ ಪರಿಚಿತರು. ಅವರೊಂದಿಗೆ ನಾನು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದೇನೆ. ಅವರೊಂದಿನ ಒಡನಾಟ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ಜನಾರ್ಧನ್ ಒಬ್ಬ ಒಳ್ಳೆಯ ಪೋಷಕ ನಟನಾಗಿದ್ದರು. ಅವರು ಮುಂಚೆ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅದಕ್ಕೆ ಅವರ ಹೆಸರೊಂದಿಗೆ ಬ್ಯಾಂಕ್ ಪದ ಸೇರಿಕೊಂಡಿದೆ. ಇದನ್ನೂ ಓದಿ: ಬ್ಯಾಂಕ್‌ ಜನಾರ್ಧನ್‌ ಅದ್ಭುತ ಅಭಿನಯದಿಂದ ನನ್ನ ಸಿನಿಪಯಣದಲ್ಲಿ ಯಶಸ್ವಿ ಹೆಜ್ಜೆ ಇಟ್ಟೆ: ಉಪೇಂದ್ರ

    2 ವರ್ಷಗಳ ಹಿಂದೆ ನಟ ಮಂದೀಪ್ ರಾಯ್ ತೀರಿಕೊಂಡಾಗ ಅವರ ಅಂತಿಮ ದರ್ಶನಕ್ಕೆ ಬ್ಯಾಂಕ್ ಜನಾರ್ಧನ್ ಬಂದಿದ್ದರು. ಈ ವೇಳೆ ಅವರನ್ನು ಕಡೆಯದಾಗಿ ಭೇಟಿಯಾಗಿದ್ದೆ. ಆಗ ಸ್ವಲ್ಪ ಸೋತಂಗೆ ಕಂಡಿದ್ದರು. ಆಗ ಹುಷರಿಲ್ವಾ ಎಂದು ಕೇಳಿದ್ದೆ, ಸಣ್ಣ ಪುಟ್ಟ ಏನಾದರೂ ಇರುತ್ತೆ ಅಲ್ವಾ ಎಂದಿದ್ದರು. ಒಂದೂವರೆ ವರ್ಷದ ಬಳಿಕ ಅವರು ಸಿಗಲಿಲ್ಲ. ಇಂದು ಬೆಳಗ್ಗೆ ಅವರ ಸಾವಿನ ಸುದ್ದಿ ತಿಳಿದು ಆಘಾತವಾಯ್ತು. ಏನು ಮಾಡೋಕೆ ಆಗಲ್ಲ. ಹುಟ್ಟು ಆಕಸ್ಮಿಕ, ಸಾವು ಖಚಿತ. ಹುಟ್ಟಿದ್ಮೇಲೆ ಒಂದಲ್ಲ ಒಂದು ದಿನ ಸಾಯಲೇಬೇಕು ಎಂದು ಭಾವುಕವಾಗಿ ದೊಡ್ಡಣ್ಣ ಮಾತನಾಡಿದ್ದಾರೆ.

    ಡಿಂಗ್ರಿ ನಾಗರಾಜ್ ಮಾತನಾಡಿ, ಬ್ಯಾಂಕ್ ಜನಾರ್ಧನ್ (Bank Janardhan) ಹಾಗೂ ನನ್ನದು ಸುಮಾರು 40 ವರ್ಷದ ಸ್ನೇಹವಾಗಿತ್ತು. ನನ್ನ ನಾಟಕದ ಟೀಮ್‌ನಲ್ಲಿ ಹಲವು ನಾಟಕಗಳನ್ನ ಅವರು ಮಾಡಿದ್ದರು. ಜಗ್ಗೇಶ್, ಕಾಶಿನಾಥ್ ಅವರ ಸಿನಿಮಾದಲ್ಲಿ ನಟಿಸಿ ಅವರು ಕೂಡ ತುಂಬಾ ಜನಪ್ರಿಯವಾದರು. ಬ್ಯಾಂಕ್ ಕೆಲಸದ ಜೊತೆಗೆ ನಟನೆ ತುಂಬಾ ಇಷ್ಟಪಡುತ್ತಿದ್ದರು. ಈ ಹಿಂದೆ ಹಾಸ್ಯ ಪೋಷಕನಟರ ಅಸೋಸಿಯೇಷನ್ ಮಾಡಿದ್ವಿ. ಅದಕ್ಕೆ ಬ್ಯಾಂಕ್ ಜನಾರ್ದನ್‌ರನ್ನೇ ಅಧ್ಯಕ್ಷರನ್ನಾಗಿ ಮಾಡಿದ್ವಿ.

    ಕಳೆದ 2 ವರ್ಷಗಳಿಂದ ನಿಲ್ಲೋದ್ದಕ್ಕೆ ಆಗ್ತಿರಲಿಲ್ಲ. ಹಾಗಾಗಿ ಸಿನಿಮಾದಿಂದ ದೂರವಾದರು. ಮಗನಿಗೆ ಡಬ್ಬಿಂಗ್ ಸ್ಟುಡಿಯೋ ಮಾಡಿ ಕೊಟ್ಟಿದ್ದರು. ಅದು ಅಷ್ಟೊಂದು ಸರಿಯಾಗಿ ನಡೆಯುತ್ತಿರಲಿಲ್ಲ. ಅವರಿಗೆ ಆ ಕೊರಗೂ ಇತ್ತು. ಪತ್ನಿ ತೀರಿ ಹೋದ ಮೇಲೆ ಸ್ವಲ್ಪ ಮಂಕಾಗಿದ್ದರು. ಅವರ ನಿಧನ ಕನ್ನಡ ಚಿತ್ರರಂಗಕ್ಕೆ ದೊಡ್ಡ ನಷ್ಟ ಎಂದು ಡಿಂಗ್ರಿ ನಾಗರಾಜ್ ಸ್ಮರಿಸಿದ್ದಾರೆ.

    ಬ್ಯಾಂಕ್ ಜನಾರ್ಧನ್ ಬಹಳ ಶಿಸ್ತುವುಳ್ಳ ವ್ಯಕ್ತಿಯಾಗಿದ್ದರು. ಅವರು ಧ್ವನಿ ಅಂತೂ ಮರೆಯೋಕೆ ಆಗಲ್ಲ, ನಾವೆಲ್ಲಾ ಚಿತ್ರರಂಗಕ್ಕೆ ಜೊತೆ ಜೊತೆಯಲ್ಲಿ ಬಂದವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಾಧು ಕೋಕಿಲ ಸಂತಾಪ ಸೂಚಿಸಿದ್ದಾರೆ.

    ಈ ವೇಳೆ, ಬ್ಯಾಂಕ್ ಜನಾರ್ಧನ್ ಜೊತೆಗಿನ ಒಡನಾಟ ನೆನೆದು ವಿನೋದ್ ರಾಜ್ ಕಣ್ಣೀರಿಟ್ಟಿದ್ದಾರೆ. ಕನ್ನಡ ಚಿತ್ರರಂಗ ಕಂಡ ಒಬ್ಬ ಅದ್ಭುತ ಹಾಸ್ಯ ಕಲಾವಿದರಾಗಿದ್ರು. ಸಿನಿಮಾದಲ್ಲಿ ರಂಜಿಸಿದವರನ್ನ ನಾವು ಕಳೆದುಕೊಂಡಿದ್ದೇವೆ. ಬೆರಳೆಣಿಕೆಯ ಶ್ರೇಷ್ಠ ಕಲಾವಿದರಲ್ಲಿ ಬ್ಯಾಂಕ್ ಜನಾರ್ಧನ್ ಒಬ್ಬರು ಆಗಿದ್ದರು. ಅವರ ನಿಧನ ಕರ್ನಾಟಕ ಚಲನಚಿತ್ರ ರಂಗಕ್ಕೆ ಭಾರೀ ಆಘಾತ ತಂದಿದೆ. ಅವರಿಲ್ಲದೇ ಇರೋದು ತುಂಬಾ ನೋವು ತಂದಿದೆ. ಕೆಲವು ದಿನಗಳ ಹಿಂದೆ ನನ್ನ ಆರೋಗ್ಯ ವಿಚಾರಿಸಲು ಅವರು ಫೋನ್ ಮಾಡಿದ್ದರು. ಆರೋಗ್ಯ ಸರಿ ಇಲ್ವಂತೆ ನಿನಗೆ ನೀನು ಚೆನ್ನಾಗಿರಬೇಕು ಅಂದರು. ಈಗ ನೋಡಿದ್ರೆ ನಮ್ಮ ಜೊತೆ ಅವರು ಇಲ್ಲ ಅನ್ನೋದು ನೋವು ತಂದಿದೆ ಎಂದಿದ್ದಾರೆ.

  • ಬ್ಯಾಂಕ್‌ ಜನಾರ್ಧನ್‌ ಅದ್ಭುತ ಅಭಿನಯದಿಂದ ನನ್ನ ಸಿನಿಪಯಣದಲ್ಲಿ ಯಶಸ್ವಿ ಹೆಜ್ಜೆ ಇಟ್ಟೆ: ಉಪೇಂದ್ರ

    ಬ್ಯಾಂಕ್‌ ಜನಾರ್ಧನ್‌ ಅದ್ಭುತ ಅಭಿನಯದಿಂದ ನನ್ನ ಸಿನಿಪಯಣದಲ್ಲಿ ಯಶಸ್ವಿ ಹೆಜ್ಜೆ ಇಟ್ಟೆ: ಉಪೇಂದ್ರ

    ಹಿರಿಯ ನಟ ಬ್ಯಾಂಕ್ ಜನಾರ್ಧನ್ (Bank Janardhan) ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಇದೀಗ ನಟನ ನಿಧನದ ಕುರಿತು ಉಪೇಂದ್ರ ರಿಯಾಕ್ಟ್ ಮಾಡಿದ್ದಾರೆ. ತಮ್ಮ ಅದ್ಭುತ ಅಭಿನಯದಿಂದ ನನ್ನ ಸಿನಿಪಯಣದಲ್ಲಿ ಯಶಸ್ವಿ ಹೆಜ್ಜೆ ಇಡಲು ಕಾರಣಕರ್ತರಾದವರು ಎಂದು ಬ್ಯಾಂಕ್ ಜನಾರ್ಧನ್‌ರನ್ನು ರಿಯಲ್‌ ಸ್ಟಾರ್ ಉಪೇಂದ್ರ (Upendra) ಸ್ಮರಿಸಿದ್ದಾರೆ. ಇದನ್ನೂ ಓದಿ:ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

    ‘ತರ್ಲೆ ನನ್ಮಗ’ ಸಿನಿಮಾದಲ್ಲಿ ಬ್ಯಾಂಕ್‌ ಜನಾರ್ಧನ್‌ಗೆ ಉಪೇಂದ್ರ ನಿರ್ದೇಶನ ಮಾಡಿದ್ದರು. ಹೀಗಾಗಿ ಅವರನ್ನು ನಟ ಸ್ಮರಿಸಿ ಪೋಸ್ಟ್‌ ಶೇರ್‌ ಮಾಡಿದ್ದಾರೆ. ‘ತರ್ಲೆ ನನ್ಮಗ, ಶ್ ಚಿತ್ರಗಳಲ್ಲಿ ತಮ್ಮ ಅದ್ಭುತ ಅಭಿನಯದಿಂದ ನನ್ನ ಸಿನಿ ಪಯಣದಲ್ಲಿ ಯಶಸ್ವಿ ಹೆಜ್ಜೆ ಇಡಲು ಕಾರಣಕರ್ತರಾದ ಸರಳ, ಸ್ನೇಹ ಜೀವಿ, ಅಪರೂಪದ ಕಲಾವಿದ ಬ್ಯಾಂಕ್ ಜನಾರ್ಧನ್. ಬೇರೆ ಪಾತ್ರಕ್ಕೆ ಸಜ್ಜಾಗಿ ಬರಲು ವಿಧಿವಶರಾಗಿದ್ದಾರೆ. ಬೇಗ ಬನ್ನಿ ಸಾರ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಉಪೇಂದ್ರ ಭಾವುಕವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

     

    View this post on Instagram

     

    A post shared by Upendra Kumar (@nimmaupendra)

    ಅಂದಹಾಗೆ, ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.

    80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್ ಉಪೇಂದ್ರ ನಿರ್ದೇಶನದ ಶ್, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.

  • ಬ್ಯಾಂಕ್‌ ಜನಾರ್ಧನ್ ನಿಧನಕ್ಕೆ ಟೆನ್ನಿಸ್ ಕೃಷ್ಣ, ನಟಿ ಅಭಿನಯ ಭಾವುಕ

    ಬ್ಯಾಂಕ್‌ ಜನಾರ್ಧನ್ ನಿಧನಕ್ಕೆ ಟೆನ್ನಿಸ್ ಕೃಷ್ಣ, ನಟಿ ಅಭಿನಯ ಭಾವುಕ

    ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (Bank Janardhan) ಇಂದು (ಏ.14) ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನಕ್ಕೆ ಹಲವು ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದ ಆತ್ಮೀಯ ಗೆಳೆಯ ಟೆನ್ನಿಸ್ ಕೃಷ್ಣ (Tennis Krishna) ಹಾಗೂ ನಟಿ ಅಭಿನಯ (Abhinaya) ಸಂತಾಪ ಸೂಚಿಸಿದ್ದಾರೆ. ಅವರೊಂದಿಗಿನ ಒಡನಾಟದ ಬಗ್ಗೆ ಅವರು ಸ್ಮರಿಸಿದ್ದಾರೆ.

    ಬ್ಯಾಂಕ್ ಜನಾರ್ಧನ್ ಅವರಿಗೆ ಬಹಳಷ್ಟು ವರ್ಷಗಳಿಂದ ಆರೋಗ್ಯ ಸಮಸ್ಯೆಯಿತ್ತು. ಈ ಹಿಂದೆ ಆದಿಚುಂಚನಗಿರಿ ಒಂದು ಕಾರ್ಯಕ್ರಮಕ್ಕೆ ಹೋಗುವಾಗ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ವೇದಿಕೆಗೆ ಹೋಗುವ ಮುಂಚೆ ಈ ಘಟನೆ ನಡೆದಿತ್ತು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದೇವು, ಅಂದು ಬೇಗನೇ ಟ್ರೀಟ್‌ಮೆಂಟ್ ಕೊಡಿಸಿದ್ದಕ್ಕೆ ಅವರು ಉಳಿದುಕೊಂಡಿದ್ದರು.

    ಕಳೆದ ವರ್ಷವೂ ಅವರಿಗೆ ಮತ್ತೊಮ್ಮೆ ಹಾರ್ಟ್ ಅಟ್ಯಾಕ್ ಆಯ್ತು. ಇನ್ನೇನು ಚೇತರಿಸಿಕೊಳ್ಳುತ್ತಿದ್ದರು. ನಾನು ಅವರನ್ನು ಕಡೆಯದಾಗಿ ನೋಡಿದ್ದು, ಲೀಲಾವತಿ ಅವರು ನಿಧನರಾದ ಸಂದರ್ಭದಲ್ಲಿ ಅಂತಿಮ ದರ್ಶನಕ್ಕೆ ಜನಾರ್ಧನ್ ಬಂದಿದ್ದರು. ಅಲ್ಲಿ ನಾನು ಅವರನ್ನು ಕೊನೆಯದಾಗಿ ಭೇಟಿ ಮಾಡಿದ್ದು, ಎಂದಿದ್ದಾರೆ. ಈ ಸಾವಿನ ಸುದ್ದಿ ಕೇಳುವ ಮುನ್ನ ಅರ್ಧ ಗಂಟೆ ಮುಂಚೆ ಅವರನ್ನು ನೆನೆಸಿಕೊಂಡೆ ಎಂದು ಗೆಳೆಯನ ಬಗ್ಗೆ ನಟ ಭಾವುಕರಾಗಿದ್ದಾರೆ. ಇದನ್ನೂ ಓದಿ:ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ನಾವು ಸ್ನೇಹಿತರು ಅನ್ನೋದಕ್ಕಿಂತ ಅಣ್ಣ ತಮ್ಮಂದಿರಂತೆ ಇದ್ವಿ. ಅವರಿಗೆ ಹೀಗೆ ಆಗಿರೋದು ತುಂಬಾ ನೋವು ಆಗ್ತಿದೆ. ಈ ಚಿತ್ರರಂಗದಲ್ಲಿ ಹಿರಿಯ ಕಲಾವಿದರಿಗೆ ಅವಕಾಶಗಳನ್ನು ಕೊಡೋದು ಬಿಟ್ಟು ಹೊಸ ಕಲಾವಿದರಿಗೆ ಅವಕಾಶ ಕೊಡುತ್ತಾರೆ. ಹಿರಿಯ ಕಲಾವಿದರಲ್ಲಿ ಇಬ್ಬರಿಗಾದ್ರೂ ಅವಕಾಶ ಕೊಡಬೇಕು ಅಲ್ವಾ ಎಂದು ಟೆನ್ನಿಸ್ ಕೃಷ್ಣ ಹೇಳಿದ್ದಾರೆ. ಇದನ್ನೂ ಓದಿ:ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

    ತುಂಬಾ ಒಳ್ಳೆಯ ಹಾಸ್ಯನಟನಾಗಿದ್ದರು. ಈ ಹಿಂದೆ ‘ಹಿಟ್ಲರ್ ಕಲ್ಯಾಣ’ ಎಂಬ ಸೀರಿಯಲ್‌ನಲ್ಲಿ ಒಟ್ಟಿಗೆ ನಟಿಸಿದ್ದೇವೆ. ಹಲವು ಸಿನಿಮಾಗಳಲ್ಲಿ ಅವರೊಟ್ಟಿಗೆ ತೆರೆಹಂಚಿಕೊಂಡಿದ್ದೇನೆ. ಪುಟ್ಟಿ ಪುಟ್ಟಿ ಅಂತ ಮಗು ರೀತಿ ನನ್ನನ್ನು ಮಾತನಾಡಿಸುತ್ತಿದ್ದರು. ತುಂಬಾ ಸರಳ ವ್ಯಕ್ತಿತ್ವದವರಾಗಿದ್ದರು. ತೆರೆಯ ಮೇಲೆ ಮಾತ್ರ ಅಲ್ಲ, ತೆರೆಹಿಂದೆಯೂ ಕೂಡ ಸಿಂಪಲ್ ಆಗಿರುತ್ತಿದ್ದರು. ನಿಜ ಜೀವನದಲ್ಲಿ ತುಂಬಾ ಹಾಸ್ಯ ಮಾಡುತ್ತಿದ್ದರು.

    ಹಿಂದೊಮ್ಮೆ ಸಿನಿಮಾ ಕಾರ್ಯಕ್ರಮವೊಂದರಲ್ಲಿ ಭೇಟಿ ಮಾಡಿದ್ದೇವೆ. ಆಗ ಅವರ ಕಾಲು ಊದಿತ್ತು. ಯಾಕೆ ಅಂತ ಕೇಳಿದ್ದಕ್ಕೆ, ವಯಸ್ಸಾಯ್ತಲ್ಲ ಪುಟ್ಟ ಎಂದಿದ್ದರು. ಮತ್ತೆ ಬ್ಯಾಂಕ್ ಜೊತೆಗೆ ಸಿನಿಮಾ ಹೇಗೆ ಮಾಡ್ತೀರಾ ಎಂದು ಕೇಳಿದ್ದೆ ಅದಕ್ಕೆ ಅವರು ಮಾಡಬೇಕಲ್ಲ ಪುಟ್ಟಿ ಮಾಡ್ತೀನಿ ಎಂದರು. ‘ಶ್’ ಎಂಬ ಸಿನಿಮಾದಲ್ಲಿ ನಾವು ಮೊದಲ ಬಾರಿಗೆ ಜೊತೆಯಾಗಿ ನಟಿಸಿದ್ದೇವೆ.

    ಅಂದಹಾಗೆ, ಇಂದು ಸಂಜೆ 4 ಗಂಟೆಯ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಬ್ಯಾಂಕ್‌ ಜನಾರ್ಧನ್‌ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

  • ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಂಗಳೂರು: ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ. ನಟನ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟನಿಗೆ ತಡರಾತ್ರಿ ರಾತ್ರಿ ಏಕಾಏಕಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ಕೂಡಲೇ ಆಸ್ಪತ್ರೆಗೆ ಕರೆತಂದಿದ್ದಾದರೂ ಫಲಕಾರಿಯಾಗದೇ ತಡರಾತ್ರಿ 2:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿರುವ ಪಾರ್ಥಿವ ಶರೀರವನ್ನ ಸುಲ್ತಾನ್ ಪಾಳ್ಯದಲ್ಲಿರುವ ಅವರ ನಿವಾಸಕ್ಕೆ ಶಿಫ್ಟ್‌ ಮಾಡಲಾಗುತ್ತಿದೆ. ಬೆಳಗ್ಗೆ 10:30 ರಿಂದ ಸಂಜೆ 4 ಗಂಟೆ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    Bank Janardhan 2

    ಇನ್ನೂ ತಂದೆ ಸಾವಿನ ಕುರಿತು ಮಾಹಿತಿ ನೀಡಿರುವ ಬ್ಯಾಂಕ್‌ ಜನಾರ್ಧನ್‌ ಅವರ ಪುತ್ರ ಗುರುಪ್ರಸಾದ್‌, 20 ದಿನಗಳಿಂದ ಆಸ್ಪತ್ರೆಗೆ ಹೋಗ್ತಾ ಇದ್ರು, ಸಾಕಷ್ಟು ಟ್ರೀಟ್ಮೆಂಟ್‌ ಕೊಡಿಸಿದ್ದೇವು. ಮೂರು ದಿನಗಳಿಂದ ಆರೋಗ್ಯ ಸಮಸ್ಯೆ ಏರುಪೇರು ಆಗುತ್ತಿತ್ತು. ನಂತರ ಆಸ್ಪತ್ರೆಗೆ ದಾಖಲು ಮಾಡಿದ್ವು, ನಿನ್ನೆ ತುಂಬಾ ಉಸಿರಾಟದ ಸಮಸ್ಯೆಯಾಗಿತ್ತು. ವೈದ್ಯರು ಕೂಡ ತುಂಬಾ ಪ್ರಯತ್ನ ಪಟ್ಟಿದ್ರು. ಆದ್ರೆ ಉಳಿಸಿಕೊಳ್ಳಲು ಆಗಲಿಲ್ಲ ಬೆಳಗಿನ ಜಾವ 2.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ನಟ ಜಗ್ಗೇಶ್‌ ತೀವ್ರ ಸಂತಾಪ:
    ಇನ್ನೂ ಬ್ಯಾಂಕ್ ಜನಾರ್ಧನ್ ನಿಧನಕ್ಕೆ ಹಿರಿಯ ನಟ ಜಗ್ಗೇಶ್‌ ಸಹ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಸಂತಾಪ ಸೂಚಿಸಿದ್ದಾರೆ. ಆತ್ಮೀಯ ಗೆಳೆಯ ಜನಾರ್ದನ ಹೋಗಿ ಬಾ.. ನಾವಿಬ್ಬರು ಪಾತ್ರಕ್ಕಾಗಿ ಹಸಿದು ಅಲೆದು ಪಡೆದು ಗೆದ್ದವರು. ನಾನು ನಿನ್ನ ಚಿತ್ರದಲ್ಲಿ ಕರೆಯುತ್ತಿದ್ದ ಬಾಂಡ್ಲಿ ಫಾದರ್ ಪದ ನಿನ್ನ ಓಡನಾಟ ನೆನೆದು ಭಾವುಕನಾದೆ.. ಆತ್ಮಕ್ಕೆ ಶಾಂತಿ ಎಂದು ಬರೆದುಕೊಂಡಿದ್ದಾರೆ.

  • ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

    ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ವಿಧಿವಶ

    ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) (Bank Janardhan) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ.

    ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್‌ ತಡರಾತ್ರಿ 2:30ರ ಸುಮಾರಿಗೆ‌ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್‌ ಪಾಳ್ಯದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

    500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪಾತ್ರ:
    ಪೋಷಕ ನಟ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ಜನಾರ್ಧನ್‌ ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಅಲ್ಲದೇ, ಕಿರುತೆರೆ ಹಾಗೂ ರಂಗಭೂಮಿಯಲ್ಲೂ ಛಾಪು ಮೂಡಿಸಿದ್ದಾರೆ.

    80, 90ರ ದಶಕದ ಬಹುಬೇಡಿಕೆ ಹೊಂದಿದ್ದ ಹಾಸ್ಯನಟರಲ್ಲಿ ಒಬ್ಬರಾದ ಜನಾರ್ಧನ್‌ ಉಪೇಂದ್ರ ನಿರ್ದೇಶನದ ಶ್‌, ತರ್ಲೆ ನನ್ಮಗ, ಬೆಳ್ಳಿಯಪ್ಪ ಬಂಗಾರಪ್ಪ, ಗಣೇಶ ಸುಬ್ರಮಣ್ಯ, ಕೌರವ ಚಿತ್ರಗಳಲ್ಲಿ ಗಮನ ಸೆಳೆಯುವ ಪಾತ್ರ ನಿರ್ವಹಿಸಿದ್ದಾರೆ. ಮಾಂಗಲ್ಯ, ರೋಬೋ ಫ್ಯಾಮಿಲಿ, ಪಾಪ ಪಾಂಡು, ಜೋಕಾಲಿ ಸೇರಿದಂತೆ ಸಾಲು ಸಾಲು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿ ಸೈ ಎನಿಸಿಕೊಂಡಿದ್ದಾರೆ.

  • ರಾಜ್ಯೋತ್ಸವ ಪ್ರಶಸ್ತಿ: ಸಿನಿಮಾ ಕ್ಷೇತ್ರದಿಂದ ಯಾರಿಗೆಲ್ಲ ಅವಾರ್ಡ್

    ರಾಜ್ಯೋತ್ಸವ ಪ್ರಶಸ್ತಿ: ಸಿನಿಮಾ ಕ್ಷೇತ್ರದಿಂದ ಯಾರಿಗೆಲ್ಲ ಅವಾರ್ಡ್

    ರ್ನಾಟಕ ಸರಕಾರವು ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2023 (Rajyotsava 2023) ಪ್ರಕಟಿಸಿದ್ದು, ನಾನಾ ಕ್ಷೇತ್ರದ ಗಣ್ಯರಿಗೆ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಿನಿಮಾ ಕ್ಷೇತ್ರದಲ್ಲಿನ ಗಣನೀಯ ಸೇವೆಗಾಗಿ ಹಿರಿಯ ನಟರಾದ ಡಿಂಗ್ರಿ ನಾಗರಾಜ್ (Dingri Nagaraj) ಮತ್ತು ಬ್ಯಾಂಕ್ ಜನಾರ್ದನ್ (Bank Janardhan) ಅವರಿಗೆ ಈ ಬಾರಿಯ ಪ್ರಶಸ್ತಿ ಸಂದಿದೆ. ಇದನ್ನೂ ಓದಿ:Bigg Boss Kannada: ವರ್ತೂರ್ ಸಂತೋಷ್‌ಗೆ ಗೆಟೌಟ್‌ ಸ್ವಾಗತ


    ಡಿಂಗ್ರಿ ನಾಗರಾಜ್ ಮತ್ತು ಬ್ಯಾಂಕ್ ಜನಾರ್ದನ್ ಅವರಿಗೆ ಸಿನಿಮಾ ಕ್ಷೇತ್ರದ ವಿಭಾಗದಲ್ಲಿ ಪ್ರಶಸ್ತಿ ಘೋಷಣೆ ಆಗಿದ್ದರೆ, ಸಂಕೀರ್ಣ ವಿಭಾಗದಲ್ಲಿ ಮಿಮಿಕ್ರಿ ದಯಾನಂದ್ ಅವರು ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಮೂವರು ಹಲವು ದಶಕಗಳ ಕಾಲ ಮನರಂಜನಾ ಕ್ಷೇತ್ರದಲ್ಲಿ ತಮ್ಮ ಸೇವೆಯನ್ನು ಸಲ್ಲಿಸಿದ್ದಾರೆ.

    ಪ್ರಶಸ್ತಿ ಪಟ್ಟಿ:

    ಸಂಗೀತ/ನೃತ್ಯ ಕ್ಷೇತ್ರ: ಡಾ. ನಯನ ಎಸ್ ಮೋರೆ, ಶ್ರೀಮತಿ ನೀಲಾ ಎಂ ಕೊಡ್ಲಿ, ಶ್ರೀ ಶಬ್ಬೀರ್ ಅಹಮದ್, ಡಾ. ಎಸ್ ಬಾಳೇಶ ಭಜ್ರಂತಿ ಅವರಿಗೆ ಪ್ರಶಸ್ತಿ ಲಭಿಸಿದೆ.

    ರಂಗಭೂಮಿ ಕ್ಷೇತ್ರ: ಎಜಿ ಚಿದಂಬರ ರಾವ್ ಜಂಬೆ, ಪಿ ಗಂಗಾಧರ ಸ್ವಾಮಿ, ಹೆಚ್‌ಬಿ ಸರೋಜಮ್ಮ, ತಯ್ಯಬಖಾನ್ ಎಂ ಇನಾಮದಾರ, ವಿಶ್ವನಾಥ್ ವಂಶಾಕೃತ ಮಠ, ಪಿ ತಿಪ್ಪೇಸ್ವಾಮಿ.

    ಶಿಲ್ಪಕಲೆ/ ಚಿತ್ರಕಲೆ/ ಕರಕುಶಲ ಕ್ಷೇತ್ರ: ಟಿ ಶಿವಶಂಕರ್, ಕಾಳಪ್ಪ ವಿಶ್ವಕರ್ಮ, ಮಾರ್ಥಾ ಜಾಕಿಮೋವಿಚ್ ಮತ್ತು ಪಿ ಗೌರಯ್ಯ.

    ಯಕ್ಷಗಾನ/ಬಯಲಾಟ ಕ್ಷೇತ್ರ: ಅರ್ಗೋಡು ಮೋಹನದಾಸ್ ಶೆಣೈ, ಕೆ ಲೀಲಾವತಿ ಬೈಪಾಡಿತ್ತಾಯ, ಕೇಶಪ್ಪ ಶಿಳ್ಳಿಕ್ಯಾತರ, ದಳವಾಯಿ ಸಿದ್ದಪ್ಪ (ಹಂದಿಜೋಗಿ).

    ಜಾನಪದ ಕ್ಷೇತ್ರ: ಹುಸೇನಬಿ ಬುಡೆನ್ ಸಾಬ್ ಸಿದ್ದಿ, ಶಿವಂಗಿ ಶಣ್ಮರಿ, ಮಹದೇವು, ನರಸಪ್ಪಾ, ಶಕುಂತಲಾ ದೇವಲಾನಾಯಕ, ಹೆಚ್‌ಕೆ ಕಾರಮಂಚಪ್ಪ, ಶಂಭು ಬಳಿಗಾರ, ವಿಭೂತಿ ಗುಂಡಪ್ಪ, ಚೌಡಮ್ಮ.

    ಸಮಾಜಸೇವೆ ಕ್ಷೇತ್ರ: ಹುಚ್ಚಮ್ಮ ಬಸಪ್ಪ ಚೌದ್ರಿ, ಚಾರ್ಮಾಡಿ ಹಸನಬ್ಬ, ರೂಪಾ ನಾಯಕ್, ನಿಜಗುಣಾನಂದ ಮಹಾಸ್ವಾಮಿಗಳು, ನಾಗರಾಜು ಜಿ.

    ಆಡಳಿತ ಕ್ಷೇತ್ರ: ಜಿವಿ ಬಲರಾಮ್

    ವೈದ್ಯಕೀಯ ಕ್ಷೇತ್ರ: ಡಾ. ಸಿ ರಾಮಚಂದ್ರ, ಡಾ. ಪ್ರಶಾಂತ್ ಶೆಟ್ಟಿ.

    ಸಾಹಿತ್ಯ ಕ್ಷೇತ್ರ: ಪ್ರೊ. ಸಿ ನಾಗಣ್ಣ, ಸುಬ್ಬು ಹೊಲೆಯಾರ್ (ಹೆಚ್‌ಕೆ ಸುಬ್ಬಯ್ಯ), ಸತೀಶ್ ಕುಲಕರ್ಣಿ, ಲಕ್ಷಿö್ಮÃಪತಿ ಕೋಲಾರ, ಪರಪ್ಪ ಗುರುಪಾದಪ್ಪ ಸಿದ್ದಾಪುರ, ಡಾ. ಕೆ ಷರೀಫಾ.

    ಶಿಕ್ಷಣ ಕ್ಷೇತ್ರ: ರಾಮಪ್ಪ (ರಾಮಣ್ಣ) ಹವಳೆ, ಕೆ ಚಂದ್ರಶೇಖರ್, ಕೆಟಿ ಚಂದು.

    ಕ್ರೀಡಾ ಕ್ಷೇತ್ರ: ದಿವ್ಯ ಟಿಎಸ್, ಅದಿತಿ ಅಶೋಕ್, ಅಶೋಕ್ ಗದಿಗೆಪ್ಪ ಏಣಗಿ.

    ನ್ಯಾಯಾಂಗ ಕ್ಷೇತ್ರ: ವಿ ಗೋಪಾಲಗೌಡ.

    ಕೃಷಿ-ಪರಿಸರ ಕ್ಷೇತ್ರ:
    ಸೋಮನಾಥರೆಡ್ಡಿ ಪೂರ್ಮಾ, ದ್ಯಾವನಗೌಡ ಟಿ. ಪಾಟೀಲ, ಶಿವರೆಡ್ಡಿ ಹನುಮರೆಡ್ಡಿ ವಾಸನ.

    ಸಂಕೀರ್ಣ ಕ್ಷೇತ್ರ: ಎಎಂ ಮದರಿ, ಹಾಜಿ ಅಬ್ದುಲ್ಲಾ ಪರ್ಕಳ, ಮಿಮಿಕ್ರಿ ದಯಾನಂದ್, ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್, ಕೊಡನ ಪೂವಯ್ಯ ಕಾರ್ಯಪ್ಪ.

    ಮಾಧ್ಯಮ ಕ್ಷೇತ್ರ: ದಿನೇಶ ಅಮೀನ್‌ಮಟ್ಟು, ಜವರಪ್ಪ, ಮಾಯಾ ಶರ್ಮ, ರಫೀ ಭಂಡಾರ.

    ವಿಜ್ಞಾನ/ ತಂತ್ರಜ್ಞಾನ ಕ್ಷೇತ್ರ:
    ಎಸ್. ಸೋಮನಾಥ್ ಶ್ರೀಧರ್ ಪನಿಕರ್, ಪ್ರೊ. ಗೋಪಾಲನ್ ಜಗದೀಶ್

    ಹೊರನಾಡು/ ಹೊರದೇಶ ಕ್ಷೇತ್ರ: ಸೀತಾರಾಮ ಅಯ್ಯಂಗಾರ್, ದೀಪಕ್ ಶೆಟ್ಟಿ, ಶಶಿಕಿರಣ್ ಶೆಟ್ಟಿ.

    ಸ್ವಾತಂತ್ರ್ಯ ಹೋರಾಟಗಾರ ಕ್ಷೇತ್ರ: ಪುಟ್ಟಸ್ವಾಮಿ ಗೌಡ.

    10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿ:
    1. ಕರ್ನಾಟಕ ಸಂಘ
    2. ಬಿಎನ್ ಶ್ರೀರಾಮ ಪುಸ್ತಕ ಪ್ರಕಾಶನ
    3. ಮಿಥಿಕ್ ಸೊಸೈಟಿ
    4. ಕನಾಟಕ ಸಾಹಿತ್ಯ ಸಂಘ
    5. ಮೌಲಾನಾ ಅಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ(ರಿ)
    6. ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ
    7. ಸ್ನೇಹರಂಗ ಹವ್ಯಾಸಿ ಕಲಾ ಸಂಸ್ಥೆ
    8. ಚಿಣ್ಣರ ಬಿಂಬ
    9. ಮಾರುತಿ ಜನಸೇವಾ ಸಂಘ
    10. ವಿದ್ಯಾದಾನ ಸಮಿತಿ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟ ಬ್ಯಾಂಕ್ ಜರ್ನಾದನ್‌ಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಹೇಗಿದೆ?

    ನಟ ಬ್ಯಾಂಕ್ ಜರ್ನಾದನ್‌ಗೆ ಹೃದಯಾಘಾತ: ಆರೋಗ್ಯ ಸ್ಥಿತಿ ಹೇಗಿದೆ?

    ನ್ನಡ ಸಿನಿಮಾ (Sandalwood) ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ (Bank Janardhan) ಅವರಿಗೆ ಮೂರು ದಿನಗಳ ಹಿಂದೆಯಷ್ಟೇ ಹೃದಯಾಘಾತವಾಗಿ (Heart Attack), ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗಲೂ ಅವರಿಗೆ ಐಸಿಯುವಿನಲ್ಲೇ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸುಧಾರಿಸಿದೆ. ಈ ಮಾಹಿತಿಯನ್ನು ಅವರನ್ನು ಭೇಟಿಯಾಗಿ ಬಂದ ಅನೇಕ ಸಹ ಕಲಾವಿದರು ನೀಡಿದ್ದಾರೆ.

    ಬ್ಯಾಂಕ್ ಜನಾರ್ದನ್ ಅವರಿಗೆ ಈಗಾಗಲೇ ಎರಡು ಬಾರಿ ಹೃದಯಾಘಾತವಾಗಿದೆ ಎನ್ನುವ ಮಾಹಿತಿ ಇದೆ. ಇದು ಮೂರನೇ ಬಾರಿ ಆಗಿದ್ದರಿಂದ ಗೆಳೆಯರು ಮತ್ತು ಬಂಧುಗಳು ಆತಂಕಗೊಂಡಿದ್ದರು. ಅಭಿಮಾನಿಗಳ ಹಾರೈಕೆಯಿಂದಾಗಿ ಅವರು ಗುಣಮುಖರಾಗುತ್ತಿದ್ದಾರೆ. ಅನೇಕ ಕಲಾವಿದರು ಅವರನ್ನು ಭೇಟಿ ಮಾಡಿ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು. ಇದನ್ನೂ ಓದಿ:ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ಬೆಂಬಲ: ನಟ-ನಟಿಯರು ಭಾಗಿ

    ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸು. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಜನಾರ್ದನ್. ಹಾಸ್ಯ ನಟರಾಗಿ ಸಾಕಷ್ಟು ಪಾತ್ರಗಳನ್ನು ಅವರು ನಿರ್ವಹಿಸಿದ್ದಾರೆ.

     

    ಗೌರಿ ಗಣೇಶ್, ಕೌರವ, ರಂಗ ಎಸ್.ಎಸ್.ಎಲ್.ಸಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ವಿಭಿನ್ನ ರೀತಿಯ ಪಾತ್ರಗಳನ್ನು ಮಾಡಿದ್ದಾರೆ. ಜೊತೆಗೆ ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಕೂಡ ಇವರದ್ದು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]