Tag: Bank Of Bhagyalakshmi

  • ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ: ಅನಿಮೇಷನ್ ಟೀಸರ್ ಗೆ ಮೆಚ್ಚುಗೆ

    ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ: ಅನಿಮೇಷನ್ ಟೀಸರ್ ಗೆ ಮೆಚ್ಚುಗೆ

    ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್  ನಿರ್ಮಾಣದ, “ದಿಯಾ” ಸೇರಿದಂತೆ ಅನೇಕ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ (Dixit Shetty) ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” (Bank of Bhagyalakshmi) ಚಿತ್ರದ ಅನಿಮೇಷನ್‌ ಟೀಸರ್ (Animation Teaser) ಇತ್ತೀಚಿಗೆ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲೇ ಹೊಸ ಪ್ರಯೋಗ ಎನ್ನಬಹುದಾದ ಈ ಟೀಸರ್ ಮೂಲಕ ಚಿತ್ರದ ಕಥೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಅನಿಮೇಷನ್‌ ಟೀಸರ್ ಗಾಗಿ ಏಳೆಂಟು ಜನ ನುರಿತ ತಂತ್ರಜ್ಞರು ಸುಮಾರು ತಿಂಗಳ ಕಾಲ ಶ್ರಮ ಪಟ್ಟಿದ್ದಾರೆ‌. ಅನಿಮೇಷನ್‌ ಟೀಸರ್ ಗೆ ಬರುತ್ತಿರುವ ರೆಸ್ಪಾನ್ಸ್ ಗೆ ಬಹಳ ಖುಷಿಯಾಗಿದೆ ಎನ್ನುತ್ತಾರೆ ನಿರ್ದೇಶಕರು.

    ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಬೆಂಗಳೂರು, ತುಮಕೂರು ಹಾಗೂ ಚಿತ್ರದುರ್ಗದಲ್ಲಿ ಚಿತ್ರೀಕರಣ ನಡೆದಿದೆ.ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ದೀಕ್ಷಿತ್ ಶೆಟ್ಟಿ ಅವರಿಗೆ ನಾಯಕಿಯಾಗಿ “ಪ್ರೇಮಂ ಪೂಜ್ಯಂ” ಹಾಗೂ “ಕೌಸಲ್ಯ ಸುಪ್ರಜಾ ರಾಮ” ಚಿತ್ರಗಳ ಮೂಲಕ ಜನಪ್ರಿಯರಾಗಿರುವ  ಬೃಂದಾ ಆಚಾರ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಗೋಪಾಲ ಕೃಷ್ಣ ದೇಶಪಾಂಡೆ,ಉಷಾ ಭಂಡಾರಿ, ಭರತ್,ವಿಶ್ವನಾಥ್, ಹರೀಶ್ ಸಮಷ್ಟಿ, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೇಯಸ್ ಶರ್ಮಾ, ಶ್ರೀ ವತ್ಸ, ವಿನುತ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರ ಜೊತೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಅಭಿಷೇಕ್ ಎಂ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಭಿಷೇಕ್ ಅವರೆ ಬರೆದಿದ್ದಾರೆ. ಹೆಸರಾಂತ ನಟ ರಕ್ಷಿತ್ ಶೆಟ್ಟಿ, ನಿರ್ದೇಶಕ ಸಚಿನ್ ಹಾಗೂ ಅಭಿಷೇಕ್ ಅವರ ಸಾರಥ್ಯದ “ಪಿನಾಕ” ವಿ ಎಫ್ ಎಕ್ಸ್ ಸ್ಟುಡಿಯೋದಲ್ಲೇ “ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ” ಚಿತ್ರದ ಟೀಸರ್ ನ ಅನಿಮೇಷನ್‌ ವರ್ಕ್ ನಡೆದಿದೆ.

    ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ, ರಘು ಮೈಸೂರ್ ಕಲಾ ನಿರ್ದೇಶನ ಹಾಗೂ ಭೂಷಣ್ ಮಾಸ್ಟರ್ ನೃತ್ಯ ಈ ಚಿತ್ರಕ್ಕಿದೆ.

  • ದೀಕ್ಷಿತ್ ಅಂಡ್ ಟೀಮ್ ನಿಂದ ಬ್ಯಾಂಕ್ ಲೂಟಿ

    ದೀಕ್ಷಿತ್ ಅಂಡ್ ಟೀಮ್ ನಿಂದ ಬ್ಯಾಂಕ್ ಲೂಟಿ

    ರಂಗಿ ತರಂಗ, ‘ಅವನೇ ಶ್ರೀಮನ್ನಾರಾಯಣ’  ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್, ಈ ಬಾರಿ ಮತ್ತೆ ಹೊಸ ತಂಡದೊಂದಗೆ ಹಾಸ್ಯ ಪ್ರಧಾನ ಚಿತ್ರ ನಿರ್ಮಿಸುತ್ತಿದ್ದಾರೆ.  ದಿಯಾ ಖ್ಯಾತಿಯ ಹಾಗೂ ತೆಲುಗಿನ ದಸರಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ದೀಕ್ಷಿತ್ ಶೆಟ್ಟಿ (Dixit Shetty) ಚಿತ್ರದಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಹಾಸ್ಯ ಪಾತ್ರದ ಹುಡುಕಾಟದಲ್ಲಿದ ದೀಕ್ಷಿತ್ ಶೆಟ್ಟಿ ಬಯಸಿದಂತೆ ಇದೇ ಮೊದಲ ಬಾರಿಗೆ ಹಾಸ್ಯ ಪ್ರಧಾನ ಚಿತ್ರದಲ್ಲಿ  ವಿಭಿನ್ನ ಪಾತ್ರ ನಿರ್ವಹಿಸುತ್ತಿದ್ದಾರೆ.

    ದಿಯಾ ಹಾಗೂ ದಸರಾ ಅಭಿನಯಕ್ಕೆ ಹೆಸರು ಮಾಡಿದ ಮೇಲೆ  ತಮಿಳು ,ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ, ಸದಾ ಹೊಸ ಪ್ರತಿಭೆಗೆ ಅವಕಾಶ ನೀಡುವ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಈ ಸಿನಿಮಾಗೆ  ನವ ಹಾಗೂ ಪ್ರತಿಭಾವಂತ ನಿರ್ದೇಶಕ ಅಭಿಷೇಕ್ ಎಂ (Abhishek) ಅವರ ನಿರ್ದೇಶನ ಜವಾಬ್ದಾರಿ ನೀಡಿದ್ದಾರೆ.

    ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಹಾಗು ಕೆಲ ಸಿನೆಮಾಗಳಿಗೆ ಸಂಕಲನ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ (Bank of Bhagyalakshmi) ಮೂಲಕ ಚೊಚ್ಚಲ ಬಾರಿ ನಿರ್ದೇಶನಕ್ಕೆ ಇಳಿದಿದ್ದಾರೆ

    ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಹಾಸ್ಯ ಪ್ರಧಾನ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಬಹುದೊಡ್ಡ ನವ ತಾರಾಗಣ ಚಿತ್ರದಲ್ಲಿದೆ. ನಾಯಕಿಯಾಗಿ ಬೃಂದಾ ಆಚಾರ್ಯ ನಟಿಸುತ್ತಿದ್ದಾರೆ. ತಾರಾಗಣದಲ್ಲಿ  ಅಶ್ವಿನ್ ರಾವ್ ಹಾಸ್ಟೇಲ್ ಹುಡುಗರು ಖ್ಯಾತಿಯ ಶ್ರೀ ವತ್ಸ, ಶ್ರೇಯಸ್ ಶರ್ಮಾ , ವಿನುತ ಇನ್ನಿತರು ಇದ್ದಾರೆ. ಸದ್ಯ ಮೊದಲ ಹಂತದ  ಚಿತ್ರೀಕರಣ ಬೆಂಗಳೂರು ಹಾಗೂ ಚಿತ್ರದುರ್ಗ ಸುತ್ತ ಮುತ್ತ ಮುಗಿಸಿದ  ಚಿತ್ರತಂಡ ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದ್ದು, ಜನವರಿ ಮೊದಲ ವಾರ  ಆರಂಭವಾಗಲಿದೆ. ಹಾಗೆ ನಿರ್ಮಾಪಕರು ಚಿತ್ರವನ್ನು ಕನ್ನಡದ ಜೊತೆಗೆ ತೆಲುಗು, ತಮಿಳು, ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆ ಮೇಲೆ ಬರಲಿದೆ.

  • ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾಗೆ ಅಜಯ್ ರಾವ್ ಹೀರೋ

    ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಸಿನಿಮಾಗೆ ಅಜಯ್ ರಾವ್ ಹೀರೋ

    ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಖ್ಯಾತಿಯ ನಿರ್ಮಾಪಕ ಹೆಚ್. ಕೆ ಪ್ರಕಾಶ್ ಈ ಬಾರಿಯ ದೀಪಾವಳಿಗೆ ನಟ ಅಜಯ್ ರಾವ್ ಜೊತೆ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಬಾರಿಯೂ ಹೊಸ ಪ್ರತಿಭೆಗೆ ಅವಕಾಶ ನೀಡಿರುವ ನಿರ್ಮಾಪಕರು ಇಂಟ್ರಸ್ಟಿಂಗ್ ಟೈಟಲ್ ಕೂಡ ಅನೌನ್ಸ್ ಮಾಡಿದ್ದಾರೆ. ಅದುವೇ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’.  ಇದು ಹೆಚ್. ಕೆ ಪ್ರಕಾಶ್ ಅವರ ಶ್ರೀದೇವಿ ಎಂಟರ್ಟೈನರ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಐದನೇ ಸಿನಿಮಾವಾಗಿದೆ.

    ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ (Bank Of Bhagyalakshmi)’ ಕಥೆ ಕೇಳಿ ಥ್ರಿಲ್ ಆಗಿರೋ ನಟ ಅಜಯ್ ರಾವ್ (Ajay Rao) ಈ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಪ್ರತಿ ಬಾರಿ ನವ ನಿರ್ದೇಶಕರಿಗೆ ಮೊದಲ ಆದ್ಯತೆ ನೀಡುವ ನಿರ್ಮಾಪಕರಾದ ಹೆಚ್ ಕೆ ಪ್ರಕಾಶ್ ಈ ಬಾರಿಯೂ ನವ ಹಾಗೂ ಪ್ರತಿಭಾವಂತ ನಿರ್ದೇಶಕನೊಂದಿಗೆ ಕೈ ಜೋಡಿಸಿದ್ದಾರೆ. ಅಭಿಷೇಕ್ ಎಂ (Abhishek) ಈ ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಪರಿಚಿತರಾಗುತ್ತಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ಜೊತೆ ‘ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ’, ‘ಬಹುಪರಾಕ್’ ಮತ್ತು ‘ಆಪರೇಷನ್ ಅಲಮೇಲಮ್ಮ’ ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ‘ಪಿನಾಕ’ ಎಂಬ VFX ಸ್ಟುಡಿಯೋ ಕೂಡ ಹೊಂದಿರುವ ಅಭಿಷೇಕ್ ಎಂ ‘ಬ್ಯಾಂಕ್ ಆಫ್ ಭಾಗ್ಯಲಕ್ಷಿ’ ಮೂಲಕ ಚೊಚ್ಚಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ಬ್ಯಾಂಕ್ ವೊಂದನ್ನು ದರೋಡೆ ಮಾಡಲು ಹೊರಟವರ ಸುತ್ತ ಹೆಣೆಯಲಾದ ಇಂಟ್ರಸ್ಟಿಂಗ್ ಕಥಾಹಂದರ ಈ ಚಿತ್ರ ಒಳಗೊಂಡಿದೆ. ಇದಿಷ್ಟನ್ನೇ ರಿವೀಲ್ ಮಾಡಿರುವ ಸಿನಿಮಾ ತಂಡ ಮುಂಬರುವ ದಿನಗಳಲ್ಲಿ ಚಿತ್ರದ ಬಗ್ಗೆ, ನಾಯಕಿ ಮತ್ತು ಕಲಾವಿದರ ಬಳಗ ಇದೆಲ್ಲದರ ಬಗ್ಗೆ  ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ. ಸದ್ಯ ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ, ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ನಿರ್ದೇಶನ, ತೇಜಸ್ ಆರ್ ಸಂಕಲನ, ರಾಘು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]