Tag: Banke Bihari Temple

  • ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ

    ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ

    ನವದೆಹಲಿ: ಉತ್ತರ ಪ್ರದೇಶದಲ್ಲಿರುವ (Uttar Pradesh) ವೃಂದಾವನದ ಬಾಂಕೆ ಬಿಹಾರಿ ದೇವಾಲಯದ (Banke Bihari Temple) ಕಾರಿಡಾರ್ ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯ ಸರ್ಕಾರ ತೀವ್ರ ಆತುರದ ನಡವಳಿಕೆಯನ್ನು ತೋರಿದೆ ಎಂದು ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.

    ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠವು ಈ ಯೋಜನೆಯ ವಿರುದ್ಧ ದಾಖಲಾದ ಅರ್ಜಿಯ ವಿಚಾರಣೆಯ ವೇಳೆ, ರಾಜ್ಯ ಸರ್ಕಾರವು ಹೆಚ್ಚಿನ ಚರ್ಚೆಯಿಲ್ಲದೆ ಮತ್ತು ಸ್ಥಳೀಯರ ಹಿತಾಸಕ್ತಿಗಳನ್ನು ಕಡೆಗಣಿಸಿ ಕಾರ್ಯನಿರ್ವಹಿಸುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ. ಈ ಯೋಜನೆಯು ದೇವಾಲಯದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಮೌಲ್ಯವನ್ನು ಹಾನಿಗೊಳಿಸಬಹುದು ಎಂದು ಆತಂಕ ವ್ಯಕ್ತಪಡಿಸಿದೆ. ನೀವು ಏಕೆ ಇಷ್ಟು ಆತುರದಲ್ಲಿದ್ದೀರಿ? ಯಾವುದೇ ಸ್ಪಷ್ಟ ಯೋಜನೆಯಿಲ್ಲದೆ, ಅಗತ್ಯವಾದಷ್ಟು ಚರ್ಚೆಯಿಲ್ಲದೆ ಈ ರೀತಿಯ ಯೋಜನೆಯನ್ನು ಜಾರಿಗೆ ತರಲು ಯತ್ನಿಸುತ್ತಿರುವುದು ಸರಿಯಲ್ಲ ಎಂದು ಉತ್ತರ ಪ್ರದೇಶ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದೆ.ಇದನ್ನೂ ಓದಿ: Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

    ಈ ಪ್ರಕರಣದಲ್ಲಿ, ವೃಂದಾವನದ ಬಾಂಕೆ ಬಿಹಾರಿ ದೇವಾಲಯದ ಸುತ್ತಲಿನ ಪ್ರದೇಶದಲ್ಲಿ ಕಾರಿಡಾರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನಿವಾಸಿಗಳು ಮತ್ತು ಭಕ್ತಾದಿಗಳಿಂದ ಆಕ್ಷೇಪಣೆಗಳು ಕೇಳಿಬಂದಿವೆ. ಈ ಯೋಜನೆಯಿಂದ ದೇವಾಲಯದ ಸುತ್ತಮುತ್ತಲಿನ ಸಾಂಪ್ರದಾಯಿಕ ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ವಾತಾವರಣಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಇದರ ಜೊತೆಗೆ, ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸದೆ ಯೋಜನೆಯನ್ನು ಮುಂದುವರಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.

    ನ್ಯಾಯಾಲಯವು ಈ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಮತ್ತು ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ಎಚ್ಚರಿಕೆ ನೀಡಿದೆ. ಸದ್ಯ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದ್ದು, ದೇವಾಲಯದ ಐತಿಹಾಸಿಕ ಮಹತ್ವವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.ಇದನ್ನೂ ಓದಿ:

  • ‘ಬ್ರಹ್ಮಾಸ್ತ್ರ’ ಕೆಳಗಿಟ್ಟು ಮಥುರಾದ ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್

    ‘ಬ್ರಹ್ಮಾಸ್ತ್ರ’ ಕೆಳಗಿಟ್ಟು ಮಥುರಾದ ಬಂಕೆ ಬಿಹಾರಿ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್

    ಬಾಲಿವುಡ್ ನ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ ಇತ್ತೀಚಿನ ದಿನಗಳಲ್ಲಿ ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ (Brahmastra) ಸಿನಿಮಾದ ಹಿಂದೆ ಬಿದ್ದಿದ್ದರು. ಈ ಸಿನಿಮಾದ ಕಲೆಕ್ಷನ್, ಗೆಲುವಿನ ವಿಚಾರವಾಗಿ ದಿನಕ್ಕೊಂದು ಕ್ಯಾತೆ ತಗೆಯುತ್ತಿದ್ದರು. ಇದೀಗ ವಿವಾದಿತ ಬ್ರಹ್ಮಾಸ್ತ್ರವನ್ನು ಕೆಳಗಿಟ್ಟು ದೇವರ ದರ್ಶನಕ್ಕೆ ಹೋಗಿದ್ದಾರೆ. ಇಡೀ ಕುಟುಂಬ ಸಮೇತ ಮಥುರಾ (Mathura) ವೃಂದಾವನ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನಕ್ಕೆ (Banke Bihari Temple) ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

    ಬಂಕೆ ಬಿಹಾರಿ ದೇವಸ್ಥಾನಕ್ಕೆ ಕಂಗನಾ (Kangana Ranaut)ಭೇಟಿ ಮಾಡುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಹಲವಾರು ಬಾರಿ ಭೇಟಿ ನೀಡಿ ದೇವರ ದರ್ಶನ ಮಾಡಿದ್ದಾರೆ. ಈ ಬಾರಿ ಕುಟುಂಬ ಸಮೇತ ಬಂದಿರುವುದು ವಿಶೇಷ.  ಕಂಗನಾ ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅಲ್ಲದೇ, ಅವರು ದೇವಸ್ಥಾನದಲ್ಲಿ ನಡೆದ ಪೂಜೆಯಲ್ಲೂ ಪಾಲ್ಗೊಂಡು ಭಜನೆ ಮಾಡಿರುವುದಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

    ದೇವಸ್ಥಾನಕ್ಕೆ ಕಂಗನಾ ಬರುತ್ತಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆಯೇ ಅನೇಕರು ಅಲ್ಲಿಗೆ ಆಗಮಿಸಿದ್ದರು. ನೆಚ್ಚಿನ ನಟಿಯ ಜೊತೆ ಸೆಲ್ಫಿ ತಗೆಸಿಕೊಂಡರು. ಕಂಗನಾ ಯಾರಿಗೂ ನಿರಾಸೆ ಮಾಡದೇ ಎಲ್ಲರೊಂದಿಗೆ ಫೋಟೋ ಕ್ಲಿಸಿಕೊಂಡಿದ್ದು ವಿಶೇಷ. ಅಭಿಮಾನಿಗಳಿಂದ ಕಂಗನಾ ಅವರನ್ನು ಬಿಡಿಸಿಕೊಳ್ಳಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಆ ಪ್ರಮಾಣದಲ್ಲಿ ಅಭಿಮಾನಿಗಳು ನೆರೆದಿದ್ದರು.

    ಪೂಜೆ ಮುಗಿಸಿಕೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಕಂಗನಾ, ‘ರಾಧೆ (Radhe), ಕೃಷ್ಣ ಅವರ ದರ್ಶನ ಸಿಕ್ಕಿದ್ದು ನನ್ನ ಪುಣ್ಯ. ಹಾಗಾಗ್ಗೆ ಈ ದೇವಸ್ಥಾನಕ್ಕೆ ಬರುತ್ತಲೇ ಇರುತ್ತೇನೆ. ಏನೋ ಒಂದು ರೀತಿಯಲ್ಲಿ ನೆಮ್ಮದಿ ನನಗೆ. ಎಲ್ಲರಿಗೂ ಭಗವಂತ ಒಳ್ಳೆಯದನ್ನು ಮಾಡಲಿ’ ಎಂದು ಹೇಳಿದರು. ಯಾವುದೇ ರಾಜಕೀಯ ಪ್ರೇರಿತ ಪ್ರಶ್ನೆಗಳಿಗೆ ಅವರು ಉತ್ತರ ಕೊಡದೇ ಅಲ್ಲಿಂದ ನಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ  ವೇಳೆ ಉಸಿರುಗಟ್ಟಿ ಭಕ್ತ ಸಾವು

    ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಉಸಿರುಗಟ್ಟಿ ಭಕ್ತ ಸಾವು

    ಲಕ್ನೋ: ಉತ್ತರ ಪ್ರದೇಶದ ಮಥುರಾದ ಬಂಕೆ ಬಿಹಾರಿ ಮಂದಿರದಲ್ಲಿ 65 ವರ್ಷದ ಭಕ್ತ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

    ಮೃತ ದುರ್ದೈವಿಯನ್ನು ಲಕ್ಷ್ಮಣ್ ಎಂದು ಗುರುತಿಸಲಾಗಿದ್ದು, ಇವರು ಮಥುರಾದ ನಿವಾಸಿಯಾಗಿದ್ದಾರೆ. ಶನಿವಾರ ಮಂದಿರದಲ್ಲಿ ಕುಸಿದು ಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಲಕ್ಷ್ಮಣ್ ಅವರನ್ನು ಸಂಬಂಧಿಕರು ಆಸ್ಪತ್ರೆಗೆ ಕರೆತಂದ ವೇಳೆ ಅವರು ಮೃತಪಟ್ಟಿರುವುದಾಗಿ ವೃಂದಾವನದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ.ಎಸ್.ಕೆ.ಜೈನ್ ತಿಳಿಸಿದ್ದಾರೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್, ರಾಘವ್ ಚಡ್ಡಾ ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಣ್‍ಜಿತ್ ಸಿಂಗ್ ಚನ್ನಿ

    ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಜನಸಂದಣಿಯ ಮಧ್ಯೆ ಲಕ್ಷ್ಮಣ್ ಅವರಿಗೆ ಉಸಿರುಗಟ್ಟಿದೆ. ನಂತರ ಅವರನ್ನು ತಕ್ಷಣ ಅಲ್ಲಿಂದ ಹೊರಕ್ಕೆ ಕರೆದೊಯ್ದರು. ಆದರೆ ದೇವಸ್ಥಾನದ ಹೊರಗೆ ಬರುವಾಗ ಪ್ರಜ್ಞೆ ತಪ್ಪಿದರು. ಹಾಗಾಗಿ ಆಸ್ಪತ್ರೆಗೆ ಕರೆದೊಯ್ದ ವೇಳೆ ವೈದ್ಯರು ಲಕ್ಷ್ಮಣ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ಮೃತ ಸಂಬಂಧಿಕರು ಹೇಳಿದ್ದಾರೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಸದ್ಯಕ್ಕೆ ಯಾವುದೇ ಭಕ್ತರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ದೇಶದಲ್ಲಿ ವಿಭಜನೆಯ ಬೀಜ ಬಿತ್ತಿದೆ: ಅನಿಲ್ ವಿಜ್