Tag: Banker

  • ನಿವೃತ್ತ ಬ್ಯಾಂಕ್‌ ಅಧಿಕಾರಿಗೆ ಬರೋಬ್ಬರಿ 1 ತಿಂಗಳು ಡಿಜಿಟಲ್‌ ಅರೆಸ್ಟ್‌ – 23 ಕೋಟಿ ವಂಚನೆ

    ನಿವೃತ್ತ ಬ್ಯಾಂಕ್‌ ಅಧಿಕಾರಿಗೆ ಬರೋಬ್ಬರಿ 1 ತಿಂಗಳು ಡಿಜಿಟಲ್‌ ಅರೆಸ್ಟ್‌ – 23 ಕೋಟಿ ವಂಚನೆ

    – ಪುಲ್ಪಾಮಾ ದಾಳಿಯಲ್ಲಿ ಆಧಾರ್ ಬಳಕೆಯಾಗಿದೆ ಅಂತ ಹೆದರಿಸಿ ವಂಚನೆ

    ನವದೆಹಲಿ: ಡಿಜಿಟಲ್ ಅರೆಸ್ಟ್ (Digital Arrest) ಪ್ರಕರಣ ಇತ್ತೀಚೆಗೆ ಜಾಸ್ತಿ ಆಗ್ತಿವೆ. ಖುದ್ದು ಪ್ರಧಾನಿ ಮೋದಿ (PM Modi) ಅವರೇ ಜಾಗೃತಿ ಮೂಡಿಸಿದ್ರೂ ಎಚ್ಚೆತ್ತುಕೊಳ್ಳದ ಜನ, ಇಂತಹ ಕೃತ್ಯಗಳಿಗೆ ಒಳಗಾಗುತ್ತಿದ್ದಾರೆ. ಅದರಂತೆ ದೆಹಲಿಯ ನಿವೃತ್ತ ಬ್ಯಾಂಕರ್ ಒಬ್ಬರು ಡಿಜಿಟಲ್ ಅರೆಸ್ಟ್‌ಗೆ ಹೆದರಿ 23 ಕೋಟಿ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ತಾವು ಇಡಿ ಮತ್ತು ಸಿಬಿಐ ಅಧಿಕಾರಿಗಳು (CBI Officers) ಅಂತ ಹೇಳಿಕೊಂಡು, ಸೈಬರ್ ವಂಚಕರು ಒಂದು ತಿಂಗಳ ಕಾಲ ಡಿಜಿಟಲ್ ಅರೆಸ್ಟ್ ಬೆದರಿಕೆ ಹಾಕುವ ಮೂಲಕ 23 ಕೋಟಿ ರೂ.ಗಳನ್ನು ವಂಚಿಸಿದ್ದಾರೆ. ಆರೋಪಿಗಳು, ನಿವೃತ್ತ ಬ್ಯಾಂಕರ್‌ಗೆ ನಿಮ್ಮ ಆಧಾರ್ ಕಾರ್ಡ್, ಡ್ರಗ್ಸ್ ಸಾಗಣೆ, ಉಗ್ರರಿಗೆ ಹಣಕಾಸು ನೆರವು ಮತ್ತು ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ (Pulwama Terror Attack) ಬಳಕೆಯಾಗಿದೆ ಎಂದು ಹೇಳಿದ್ದಾರೆ. ಬಳಿಕ ಸಿಬಿಐ, ಇಡಿ ಅಂತ ಹೇಳಿಕೊಳ್ಳುವ ಕೆಲ ಅಧಿಕಾರಿಗಳು ನಿವೃತ್ತ ಬ್ಯಾಂಕ್‌ ಅಧಿಕಾರಿಯನ್ನ ಸಂಪರ್ಕಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ ಕಡಲ ತೀರದಲ್ಲಿ ಸೋಮಾಲಿಯಕ್ಕೆ ಹೊರಡಬೇಕಿದ್ದ ಹಡಗಿಗೆ ಬೆಂಕಿ – ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ

    ತನಿಖೆಯ ನೆಪದಲ್ಲಿ ಆತನನ್ನು ಫ್ಲಾಟ್ ಒಳಗೆ ಇರಿಸಿ ಮನೆಯಿಂದ ಹೊರಗೆ ಹೋಗದಂತೆ ಹೇಳಿದ್ದಾರೆ. ಆಗಸ್ಟ್‌ 4ರಿಂದ ಒಂದು ತಿಂಗಳ ಅವಧಿಯಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದಾರೆ. ಭಯದಿಂದ ಬಲಿಪಶು, ಅವರು ಹೇಳಿದಂತೆಲ್ಲಾ ಕೇಳಿದ್ದಾರೆ. ಬಳಿಕ ಮೋಸಹೋಗಿರುವುದು ಅರಿತ ಬ್ಯಾಂಕರ್, ಸೆಪ್ಟೆಂಬರ್‌ 19ರಂದು NCRP ಸೈಬರ್ ಪೊಲೀಸ್ ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದಾರೆ. ಎಫ್‌ಐಆರ್ ದಾಖಲಿಸಿಕೊಂಡ ಸೈಬರ್ ಕ್ರೈಂ, ವಂಚನೆಗೊಳಗಾದ ಮೊತ್ತದಲ್ಲಿ 12.11 ಕೋಟಿ ರೂ ವಿವಿಧ ಬ್ಯಾಂಕ್ ಖಾತೆಗಳಲ್ಲಿ ಫ್ರೀಜ್ ಮಾಡಲಾಗಿದೆ.

    ಬಹುಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ದೇಶದ ವಿವಿಧ ಭಾಗದ ಬ್ಯಾಂಕ್‌ಗಳಿಂದ ರಿಕವರಿ ಮಾಡಲಾಗಿದೆ. ಹಲವು ತಂಡಗಳನ್ನು ತಖೆಗೆ ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನವರಾತ್ರಿ ಮೊದಲ ದಿನ ತ್ರಿಪುರ ಸುಂದರಿ ದೇವಿ ದರ್ಶನ ಪಡೆದ ಮೋದಿ – ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ

    ಡಿಜಿಟಲ್ ಅರೆಸ್ಟ್ ಎಂದರೇನು?
    ಡಿಜಿಟಲ್ ಅರೆಸ್ಟ್‌ ಸೈಬರ್ ವಂಚನೆಯ ಹೊಸ ವಿಧಾನವಾಗಿದೆ. ಇದರಲ್ಲಿ ವಂಚಕರು ಕಾನೂನು ಅಧಿಕಾರಿಗಳಂತೆ ಪೋಸ್ ನೀಡುತ್ತಾರೆ ಮತ್ತು ಆಡಿಯೊ ಅಥವಾ ವೀಡಿಯೊ ಕರೆಗಳಲ್ಲಿ ಜನರನ್ನು ಬೆದರಿಸುತ್ತಾರೆ. ಬಂಧನದ ಸುಳ್ಳು ನೆಪದಲ್ಲಿ ಡಿಜಿಟಲ್ ಒತ್ತೆಯಾಳುಗಳನ್ನಾಗಿ ಮಾಡಿ ಹಣ ಪೀಕುತ್ತಾರೆ. ಇದನ್ನೂ ಓದಿ: Air India Plane Crash | ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ

  • ರಜೆ ನೀಡದ್ದಕ್ಕೆ ಆಕ್ಸಿಜನ್ ಸಿಲಿಂಡರ್ ಸಹಿತ ಬ್ಯಾಂಕಿಗೆ ಬಂದ ನೌಕರ

    ರಜೆ ನೀಡದ್ದಕ್ಕೆ ಆಕ್ಸಿಜನ್ ಸಿಲಿಂಡರ್ ಸಹಿತ ಬ್ಯಾಂಕಿಗೆ ಬಂದ ನೌಕರ

    ರಾಂಚಿ: ಅನಾರೋಗ್ಯದಿಂದ ಬಳಲುತಿದ್ರೂ ರಜೆ ನೀಡಿಲ್ಲ ಎಂದು ಆರೋಪಿಸಿ ಬ್ಯಾಂಕ್ ನೌಕರರೊಬ್ಬರು ಆಕ್ಸಿಜನ್ ಸಿಲಿಂಡರ್ ಸಹಿತ ಕೆಲಸಕ್ಕೆ ಹಾಜರಾಗಿದ್ದಾರೆ. ಜಾರ್ಖಂಡ್ ನ ಬೊಕೊರಾದ ಸೆಕ್ಟರ್ 4ರಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಈ ಘಟನೆ ನಡೆದಿದೆ.

    ಅರವಿಂದ್ ಕುಮಾರ್ ಆಕ್ಸಿಜನ್ ಸಿಲಿಂಡರ್ ಜೊತೆಯಲ್ಲಿ ಬ್ಯಾಂಕಿಗೆ ಬಂದ ನೌಕರ. ಕೆಲ ದಿನಗಳ ಹಿಂದೆ ಅರವಿಂದ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಬಳಿಕ ವರದಿ ನೆಗಟಿವ್ ಬಂದಿದ್ರೂ ಉಸಿರಾಟದ ತೊಂದರೆಯಿಂದ ಮನೆಯಲ್ಲಿ ಆಕ್ಸಿಜನ್ ಸಪೋರ್ಟ್ ಮೇಲಿದ್ದರು. ಉಸಿರಾಟದ ಸಮಸ್ಯೆ ಜೊತೆಗೆ ಶ್ವಾಸಕೋಶದಲ್ಲಿ ಸೋಂಕು ತಗುಲಿದ್ದರಿಂದ ಮನೆಯಲ್ಲಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ರು.

    ಅನಾರೋಗ್ಯದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ರಜೆ ನೀಡುವಂತೆ ಮನವಿ ಮಾಡಿಕೊಂಡಿದ್ದೇನೆ. ಆದ್ರೂ ಕೆಲಸಕ್ಕೆ ಹಾಜರಾಗುವಂತೆ ಒತ್ತಡ ಹಾಕಲಾಗ್ತಿದೆ. ಆದ್ದರಿಂದ ಆಕ್ಸಿಜನ್ ಸಿಲಿಂಡರ್ ಜೊತೆಯಲ್ಲಿಯೇ ಕೆಲಸಕ್ಕೆ ಬರುವಂತಾಗಿದೆ ಎಂದು ಅರವಿಂದ್ ಕುಮಾರ್ ಹೇಳಿದ್ದಾರೆ.

    ಅರವಿಂದ್ ಕುಮಾರ್ ರಾಜೀನಾಮೆ ನೀಡಿದ್ರೂ ಅಧಿಕಾರಿಗಳು ಸ್ವೀಕರಿಸುತ್ತಿಲ್ಲ ಎನ್ನಲಾಗುತ್ತಿದೆ. ಇಂದು ಅರವಿಂದ್ ಜೊತೆ ಅವರ ಕುಟುಂಬಸ್ಥರು ಸಹ ಬ್ಯಾಂಕಿಗೆ ಆಗಮಿಸಿದ್ದರು. ಇತ್ತ ಬ್ಯಾಂಕ್ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.

  • ನಗ್ನ ಚಿತ್ರಗಳ ಬೆದರಿಕೆಯೊಡ್ಡಿ ಮಾಜಿ ಸಹೋದ್ಯೋಗಿ ಮೇಲೆ ಬ್ಯಾಂಕ್ ಉದ್ಯೋಗಿ ಅತ್ಯಾಚಾರ

    ನಗ್ನ ಚಿತ್ರಗಳ ಬೆದರಿಕೆಯೊಡ್ಡಿ ಮಾಜಿ ಸಹೋದ್ಯೋಗಿ ಮೇಲೆ ಬ್ಯಾಂಕ್ ಉದ್ಯೋಗಿ ಅತ್ಯಾಚಾರ

    ಮುಂಬೈ: ಸೆಕ್ಸ್ ವಿಡಿಯೋ, ಬೆತ್ತಲೆ ಫೋಟೋಗಳ ಬೆದರಿಕೆಯೊಡ್ಡಿ ಮಾಜಿ ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ್ದ ಬ್ಯಾಂಕ್ ಉದ್ಯೋಗಿಯೊಬ್ಬನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

    ಲೋವರ್ ಪರೇಲ್ ನಿವಾಸಿ ವಿಲಾಸ್ ಕೃಷ್ಣ ಕದಂ (38) ಬಂಧಿತ ಆರೋಪಿ. ವಿಲಾಸ್ ಮೇಲೆ ಅತ್ಯಾಚಾರ, ಹಲ್ಲೆ, ಬೆದರಿಕೆ, ಉದ್ದೇಶಪೂರ್ವಕ ಅವಮಾನ ಆರೋಪದಡಿ ಪ್ರಕರಣ ದಾಖಲಾಗಿದೆ. ಜೊತೆಗೆ ಆತನ ಬಳಿ ಇದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಏನಿದು ಪ್ರಕರಣ?:
    ಸಂತ್ರಸ್ತ ಮಹಿಳೆ ಹಾಗೂ ವಿಲಾಸ್ ಇಬ್ಬರು ಒಂದೇ ಬ್ಯಾಂಕ್‍ನಲ್ಲಿ 2008ರಿಂದ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಪ್ರೀತಿ ಬೆಳೆದು 2013ರಿಂದ 2015ರ ವರೆಗೆ ದೈಹಿಕ ಸಂಬಂಧ ಹೊಂದಿದ್ದರು. ಆದರೆ 2017ರಲ್ಲಿ ಸಂತ್ರಸ್ತ ಮಹಿಳೆಯು ಬೇರೊಬ್ಬ ಯುವಕನನ್ನು ಮದುವೆಯಾಗಿದ್ದಾಳೆ.

    ಮದುವೆಗೂ ಮುನ್ನ ವಿಲಾಸ್‍ನನ್ನು ಭೇಟಿಯಾಗಿ ನಮ್ಮ ಸಂಬಂಧವನ್ನು ನಿಲ್ಲಿಸುವಂತೆ ತಿಳಿಸಿದ್ದೆ. ಆದರೆ ಅವನು ಅದಕ್ಕೆ ಒಪ್ಪಲಿಲ್ಲ. ಕೊನೆಯದಾಗಿ ನಿನ್ನ ಜೊತೆಗೆ ಮಾತನಾಡಬೇಕು ದಾದರ್ ಸಮೀಪದ ಸೇನಾ ಭವನಕ್ಕೆ ಬಾ ಎಂದು 2017ರಲ್ಲಿ ಕರೆದಿದ್ದ. ಅಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾಳೆ.

    ಮದುವೆಯ ನಂತರವೂ ಫೋನ್ ಮಾಡಿ, ಕರೆಯುತ್ತಿದ್ದ. ಇದನ್ನು ನಿರಾಕರಿಸಿದರೆ, ನಮ್ಮಿಬ್ಬರ ಅಕ್ರಮ ಸಂಬಂಧದ ಕುರಿತು ನಿನ್ನ ಪತಿಗೆ ಹೇಳುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ. ಅಷ್ಟೇ ಅಲ್ಲದೆ ನನ್ನ ಪತಿಯ ಮೊಬೈಲ್ ನಂಬರ್ ಪಡೆದು, ನಿನ್ನ ಬೆತ್ತಲೆ ಚಿತ್ರಗಳನ್ನು ಕಳುಹಿಸುತ್ತೇನೆ ಎಂದು ಹೇಳಿ ವಿಲಾಸ್ ಮಾನಸಿಕ ಹಿಂಸೆ ನೀಡುತ್ತಿದ್ದ. ಇದರಿಂದಾಗಿ ಅವನು ಕರೆದ ಅನೇಕ ಹೋಟೆಲ್‍ಗಳಿಗೆ ಹೋಗಬೇಕಾದ ಪರಿಸ್ಥಿತಿ ಬಂದಿತು ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.

    ವಿಲಾಸ್‍ನಿಂದ ಮಾನಸಿಕ ಹಾಗೂ ದೈಹಿಕ ಹಿಂಸೆ ತಾಳಲಾರದೇ ಸಂತ್ರಸ್ತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಆದರೆ ಆಕೆಯ ಸ್ನೇಹಿತರು ಧೈರ್ಯ ಹೇಳಿ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣವೇ ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸರು ವಿಲಾಸ್‍ನನ್ನು ಬಂಧಿಸಿ, ಸಂತ್ರಸ್ತ ಮಹಿಳೆಯ ನಗ್ನ ಫೋಟೋಗಳಿದ್ದ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv