Tag: bannanje raja

  • ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜಾ

    ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜಾ

    ಉಡುಪಿ: ಪೆರೋಲ್ ಮೇಲೆ ಬಿಡುಗಡೆಯಾಗಿರುವ ಭೂಗತ ಪಾತಕಿ ಬನ್ನಂಜೆ ರಾಜಾ (Bannanje Raja) ಉಡುಪಿಗೆ (Udupi) ಆಗಮಿಸಿದ್ದಾನೆ.

    ತಂದೆ ಸುಂದರ ಶೆಟ್ಟಿಗಾರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಬೇಕೆಂದು ಬನ್ನಂಜೆ, ಹೈಕೋರ್ಟ್‌ಗೆ ಪೆರೋಲ್ ಅರ್ಜಿ ಸಲ್ಲಿಸಿದ್ದ. ಕೋಟ್ ಪೆರೋಲ್ ನೀಡಿದ್ದು, ಬಿಗಿ ಪೊಲೀಸ್ ಭದ್ರತೆಯಲ್ಲಿ ಬನ್ನಂಜೆ ರಾಜಾನನ್ನು ಉಡುಪಿಗೆ ಕರೆತರಲಾಗಿದೆ. ಅಂತ್ಯಸಂಸ್ಕಾರ ಮತ್ತು ಅಪರಕ್ರಿಯೆಯಲ್ಲಿ ನಡೆಸಲಿದ್ದಾನೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್

    ಬನ್ನಂಜೆ ರಾಜಾ ಒಟ್ಟು 23 ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾನೆ. ಈತನನ್ನು ಬೆಳಗಾವಿ ಹಿಂಡಲಗಾ ಜೈಲಿನಲ್ಲಿರಿಸಲಾಗಿದೆ.

    ಈ ಕುರಿತು ಮಾತನಾಡಿರುವ ಉಡುಪಿ ಎಸ್‌ಪಿ ಡಾ. ಅರುಣ್ ಕುಮಾರ್, ಇತ್ತೀಚೆಗೆ ಬನ್ನಂಜೆ ರಾಜಾನ ತಂದೆ ಮೃತಪಟ್ಟಿದ್ದಾರೆ. ಬೆಳಗಾವಿ ಜೈಲಿನಿಂದ ಹೈಕೋರ್ಟಿಗೆ ಪೆರೋಲ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಪೆರೋಲ್ ನೀಡಿದೆ. ಮೇ 3 ರಿಂ 14ನೇ ತಾರೀಖಿನವರೆಗೆ ಪೆರೋಲ್ ರಜೆ ನೀಡಲಾಗಿದೆ. ಸಹಚರರ ಜೊತೆ ಯಾವುದೇ ಕೃತ್ಯದಲ್ಲಿ ಭಾಗಿಯಾಗುವಂತಿಲ್ಲ. ಮೊಬೈಲ್, ಇಂಟರ್ನೆಟ್ ಬಳಸುವಂತಿಲ್ಲ. ಮನೆಯನ್ನು ಬಿಟ್ಟು ಹೊರಗೆ ಬರುವಂತಿಲ್ಲ. ಬನ್ನಂಜೆ ರಾಜಾ ಅಂತ್ಯಸಂಸ್ಕಾರದಲ್ಲಿ ಮಾತ್ರ ಭಾಗಿಯಾಗಬೇಕು ಎಂದು ಷರತ್ತು ವಿಧಿಸಲಾಗಿದೆ. ಮೇ 14 ರಂದು ಮತ್ತೆ ಬೆಳಗಾವಿಗೆ ಆತನನ್ನು ಶಿಫ್ಟ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಮೇಲೂ ಐದು ಕೇಸ್‌ಗಳಿವೆ.. ಅದ್ಕೆ ಅವರ ಮನೆಗೆ ನಾವು ಭೇಟಿ ಕೊಟ್ಟಿಲ್ಲ: ಪರಮೇಶ್ವರ್

  • ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 8 ಅಪರಾಧಿಳಿಗೆ ಜೀವಾವಧಿ ಶಿಕ್ಷೆ: ಬೆಳಗಾವಿ ಕೋಕಾ ನ್ಯಾಯಾಲಯ ಆದೇಶ

    ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 8 ಅಪರಾಧಿಳಿಗೆ ಜೀವಾವಧಿ ಶಿಕ್ಷೆ: ಬೆಳಗಾವಿ ಕೋಕಾ ನ್ಯಾಯಾಲಯ ಆದೇಶ

    ಬೆಳಗಾವಿ: ಅಂಕೋಲಾದ ಉದ್ಯಮಿ ಆರ್.ಎನ್.ನಾಯಕ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ಎಂಟು ಅಪರಾಧಿಗಳಿಗೆ ಇಲ್ಲಿನ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

    ಮಾರ್ಚ್ 30ರಂದು ಪ್ರಕರಣದಲ್ಲಿ 9 ಮಂದಿ ದೋಷಿಗಳು ಎಂದು ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ಪ್ರಕಟಿಸಿದ್ದರು. 2013 ಡಿಸೆಂಬರ್ 21ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಉದ್ಯಮಿ ಆರ್.ಎನ್.ನಾಯಕ ಅವರನ್ನು ಕೊಲೆ ಮಾಡಲಾಗಿತ್ತು. 3 ಕೋಟಿ ಹಫ್ತಾ ನೀಡದಿರುವುದಕ್ಕೆ ಭೂಗತ ಪಾತಕಿ ಬನ್ನಂಜೆ ರಾಜಾ ಹಾಗೂ ಆತನ ಸಹಚರರು ಹತ್ಯೆಗೆ ಸಂಚು ರೂಪಿಸಿದ್ದರು. ಆರೋಪಿಗಳ ವಿರುದ್ಧ ಕೋಕಾ ಅಂದ್ರೆ ಸಂಘಟಿತ ಅಪರಾಧಗಳ ತಡೆ ಕಾಯ್ದೆ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಜಿಸ್ಡ್ ಕ್ರೈಮ್ಸ್ ಆಕ್ಟ್) ಕೇಸ್ ದಾಖಲಿಸಿ ಪೊಲೀಸರು ತನಿಖೆ ನಡೆಸಿದ್ದರು. 9 ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆದು ಇದೀಗ 8 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12ನೇ ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್‍ ಶಿಕ್ಷೆಳೊಗಾದವರು. ಇದನ್ನೂ ಓದಿ: ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

    ಪ್ರಕರಣದ ಐದನೇ ಆರೋಪಿ ಕೇರಳದ ಕೆ.ಎಂ.ಇಸ್ಮಾಯಿಲ್‍ಗೆ ಮೂರು ಸೆಕ್ಷನ್ ಅಡಿ ಪ್ರತ್ಯೇಕವಾಗಿ 13 ವರ್ಷಗಳ ಕಾರಾಗೃಹ ಶಿಕ್ಷೆ ಜೊತೆಗೆ 15 ಸಾವಿರ ರೂ. ದಂಡ ವಿಧಿಸಲಾಗಿದೆ. ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಅಪರಾಧಿಗಳಿಗೂ ದಂಡ ವಿಧಿಸಲಾಗಿದೆ. ಆರ್.ಎನ್.ನಾಯಕ ಅವರ ಪತ್ನಿಗೆ 30 ಲಕ್ಷ ರೂ. ಪರಿಹಾರ ಒದಗಿಸಬೇಕು. ಪುತ್ರ ಹಾಗೂ ಸಾಕ್ಷಿ ಹೇಳಿದ ಮೈಸೂರು ಮೂಲದ ಮಹಿಳೆಗೆ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಉತ್ತರ ಕನ್ನಡ ಎಸ್.ಪಿ ಹಾಗೂ ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ.ಪುರಾಣಿಕಮಠ, ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು. ಬನ್ನಂಜೆ ರಾಜಾ ಪರ ವಕೀಲ ಎಂ.ಶಾಂತಾರಾಮ ಶೆಟ್ಟಿ ವಾದ ಮಂಡಿಸಿದ್ದರು. ಇದನ್ನೂ ಓದಿ: ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    ಬೆಳಗಾವಿಯಲ್ಲಿ ವಿಶೇಷ ಕೆ.ಜಿ.ಪುರಾಣಿಕಮಠ ಮಾತನಾಡಿ, ಕೋಕಾ ನ್ಯಾಯಾಲಯದಿಂದ 8 ಜನರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಮರಣದಂಡನೆ ಶಿಕ್ಷೆ ಆಗಬೇಕಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದರು.

  • ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

    ಆರ್.ಎನ್ ನಾಯಕ ಕೊಲೆ ಕೇಸ್ – ಭೂಗತಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ

    ಬೆಳಗಾವಿ: ಅಂಕೋಲಾ ಉದ್ಯಮಿ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಬೆಳಗಾವಿ ಕೋಕಾ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿತರನ್ನು ದೋಷಿ ಎಂದು ಮಹತ್ವದ ತೀರ್ಪು ಪ್ರಕಟಿಸಿದೆ.

    ಶಿಕ್ಷೆಯ ಪ್ರಮಾಣ ಕಾಯ್ದಿರಿಸಿ ನ್ಯಾಯಾಧೀಶ ಸಿ.ಎಂ. ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ನ್ಯಾಯಾಧೀಶ ಸಿ.ಎಂ ಜೋಶಿ ತಿಳಿಸಿದ್ದಾರೆ.

    ಪ್ರಕರಣದ 6, 11 ಹಾಗೂ 16 ನೇ ಆರೋಪಿಗಳನ್ನು ನಿರ್ದೋಷಿ ಎಂದು ನ್ಯಾಯಾಲಯ ಹೇಳಿದೆ. ಹೀಗಾಗಿ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ ಹಾಗೂ 16ನೇ ಆರೋಪಿ ಉತ್ತರ ಕನ್ನಡದ ಆನಂದ ರಮೇಶ್ ನಾಯಕ ಈ ಪ್ರಕರಣದಿಂದ ದೋಷಮುಕ್ತರಾಗಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

    ಉಳಿದಂತೆ ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ, ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12 ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿಗಳೆಂದು ಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.  ಇದನ್ನೂ ಓದಿ: ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    2013 ಡಿಸೆಂಬರ್ 21ರಂದು ಅಂಕೋಲಾದಲ್ಲಿ ನಡೆದ ಆರ್.ಎನ್ ನಾಯಕ ಕೊಲೆ ಪ್ರಕರಣ ಸಂಬಂಧ ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಇದು ರಾಜ್ಯದ ಮೊದಲ ಕೋಕಾ ಪ್ರಕರಣವಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ ಹಾಗೂ ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವಾ ವಕಾಲತ್ತು ವಹಿಸಿದ್ದರು.

  • ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದ ಅದಿರು ಉದ್ಯಮಿ ಆರ್.ಎನ್.ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಇಂದು ಪ್ರಕಟವಾಗಲಿದೆ.

    ಬೆಳಗಾವಿಯ ಕೋಕಾ ನ್ಯಾಯಾಲಯದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ತೀರ್ಪು ಪ್ರಕಟವಾಗಲಿದ್ದು, ರಾಜ್ಯದ ಮೊದಲ ಕೋಕಾ ಪ್ರಕರಣ ಇದಾಗಿದೆ. ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಘಟನೆ ನಡೆದು ಬರೋಬ್ಬರಿ 9 ವರ್ಷಗಳ ಬಳಿಕ ತೀರ್ಪು ಪ್ರಕಟವಾಗುತ್ತಿದೆ.  ಇದನ್ನೂ ಓದಿ: ಆನ್‍ಲೈನ್ ಗೇಮ್ ನಿಷೇಧ ರದ್ದು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಅರ್ಜಿ

    ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಕೆ.ಜಿ.ಪುರಾಣಿಕಮಠ ಅವರು ವಕಾಲತ್ತು ವಹಿಸಿದ್ದರು. ಈ ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರತಾಪ್ ರೆಡ್ಡಿ, ಅಲೋಕ್ ಕುಮಾರ್, ಮಾಜಿ ಪೊಲೀಸ್ ಅಧಿಕಾರಿಗಳಾದ ಭಾಸ್ಕರ್ ರಾವ್, ಅಣ್ಣಾ ಮಲೈ ಸೇರಿ ಒಟ್ಟು 210 ಜನರು ಸಾಕ್ಷಿ ನುಡಿದಿದ್ದಾರೆ. 1,027 ದಾಖಲೆ ಪತ್ರಗಳು ಹಾಗೂ 138 ಮುದ್ದೆಮಾಲನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

    3 ಕೋಟಿ ರೂ. ಹಫ್ತಾ ಕೇಳಿದ್ದ ರಾಜಾ
    ಶಿಕ್ಷಣ ಹಾಗೂ ಸಹಕಾರ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಆರ್.ಎನ್.ನಾಯಕ್ ಅದಿರು ಉದ್ಯಮಿಯೂ ಆಗಿದ್ದರು. ಈ ಕಾರಣಕ್ಕೆ ಬನ್ನಂಜೆ ರಾಜಾ, ಆರ್.ಎನ್.ನಾಯಕ್ ಅವರನ್ನು ಟಾರ್ಗೆಟ್ ಮಾಡಿದ್ದ. ವಿದೇಶದಲ್ಲಿ ಕುಳಿತುಕೊಂಡೇ ಬನ್ನಂಜೆ ರಾಜಾ ನಾಯಕರ ಬಳಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. 3 ಕೋಟಿ ರೂ. ಹಫ್ತಾ ನೀಡದಿದ್ರೆ ಪ್ರಾಣ ತೆಗೆಯುವ ಬೆದರಿಕೆಯನ್ನು ನಾಯಕ್ ಅವರಿಗೆ ಹಾಕಲಾಗಿತ್ತು. ಈ ಸಂಬಂಧ ನಾಯಕ್ ಅಂಕೋಲಾ ಠಾಣೆಯಲ್ಲಿ ದೂರು ನೀಡಿದ್ದರು.

  • ಚಿತೆಯ ಮೇಲೆ ಮಲಗಿದ್ದ ತಾಯಿಯ ಪಾದದಡಿಗೆ ತಲೆಕೊಟ್ಟು ಕಣ್ಣೀರಿಟ್ಟ ಅಂಡರ್ ವರ್ಲ್ಡ್ ಡಾನ್!

    ಚಿತೆಯ ಮೇಲೆ ಮಲಗಿದ್ದ ತಾಯಿಯ ಪಾದದಡಿಗೆ ತಲೆಕೊಟ್ಟು ಕಣ್ಣೀರಿಟ್ಟ ಅಂಡರ್ ವರ್ಲ್ಡ್ ಡಾನ್!

    ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜನ ತಾಯಿ ವಿಲಾಸಿನಿ ಶೆಟ್ಟಿಗಾರ್ ಕಾಲು ಜಾರಿ ಬಿದ್ದು ಮೃತಪಟ್ಟಿದ್ದು, ಇಂದು ಅಂತ್ಯಸಂಸ್ಕಾರ ನಡೆದಿದೆ. ಬನ್ನಂಜೆ ರಾಜ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ತಾಯಿಯ ಅಂತಿಮ ವಿಧಿವಿಧಾನ ಮತ್ತು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದಾನೆ.

    ಉಡುಪಿಯ ಕಲ್ಮಾಡಿಯಲ್ಲಿರುವ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದ ವಿಲಾಸಿನಿ ಶೆಟ್ಟಿಗಾರ್ಗೆ ಹೃದಯಾಘಾತವಾಗಿತ್ತು. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಬಳಿಕ ಬನ್ನಂಜೆ ರಾಜಾ ಕುಟುಂಬಸ್ಥರು ಉಡುಪಿ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದು, ರಾಜನನ್ನು ಒಂದು ದಿನದ ಮಟ್ಟಿಗೆ ತಾಯಿಯ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಪರವಾನಿಗೆ ಪಡೆಯುವುದರಲ್ಲಿ ಯಶಸ್ವಿಯಾದರು. ಇದನ್ನೂ ಓದಿ:  ಭೂಗತ ಪಾತಕಿ ಬನ್ನಂಜೆ ರಾಜನ ತಾಯಿ ನಿಧನ

    ಬನ್ನಂಜೆ ರಾಜ ಕಳೆದ ರಾತ್ರಿ ಉಡುಪಿ ನಗರ ಠಾಣೆಗೆ ಬಂದಿದ್ದನು. ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಕಲ್ಮಾಡಿಯ ಮನೆಗೆ ಕರೆತರಲಾಗಿದ್ದು, ಮನೆಯಲ್ಲಿ ನಡೆದ ಅಂತಿಮ ವಿಧಿವಿಧಾನದಲ್ಲಿ ಬನ್ನಂಜೆ ರಾಜ ಮಗನಾಗಿ ಮಾಡಬೇಕಾಗ ವಿಧಿವಿಧಾನದಲ್ಲಿ ಪಾಲ್ಗೊಂಡಿದ್ದಾನೆ. ಅಂತಿಮ ಯಾತ್ರೆಯ ಚಟ್ಟಕ್ಕೆ ಹೆಗಲು ಕೊಟ್ಟಿದ್ದಾನೆ. ಅಲ್ಲಿಂದ ಮಲ್ಪೆಯ ಹಿಂದೂ ರುದ್ರಭೂಮಿಗೆ ಬನ್ನಂಜೆ ರಾಜನನ್ನು ಕರೆದುಕೊಂಡು ಹೋಗಿದ್ದು, ರುದ್ರಭೂಮಿಯಲ್ಲಿ ಸುಮಾರು ಒಂದು ಗಂಟೆಗಳ ಪ್ರಕ್ರಿಯೆಗಳು ನಡೆದಿದೆ. ಹಿರಿಯರ ಅಪ್ಪಣೆಯಂತೆ ಎಲ್ಲಾ ಪ್ರಕ್ರಿಯೆಯನ್ನು ಬನ್ನಂಜೆ ರಾಜ ಮಾಡಿದ್ದಾನೆ.

    ತಾಯಿಯ ಪಾದದಡಿ ಕಾಲಿಟ್ಟು ಕಣ್ಣೀರಿಟ್ಟ ಭೂಗತ ಪಾತಕಿ!
    ಭೂಗತ ಪಾತಕಿ ಬನ್ನಂಜೆ ರಾಜ ಸುಮಾರು 25 ವರ್ಷಗಳ ಕಾಲ ಅಜ್ಞಾತ ಸ್ಥಳದಲ್ಲಿದ್ದನು. 2015ರಲ್ಲಿ ಮೊರಕ್ಕೋದಲ್ಲಿ ಪೊಲೀಸರಿಗೆ ಶರಣಾಗಿದ್ದ. 2015ರ ಆಗಸ್ಟ್ 15ರಂದು ಉಡುಪಿಗೆ ಕರೆತರಲಾಗಿತ್ತು. 10ಕ್ಕೂ ಹೆಚ್ಚು ಪ್ರಕರಣಗಳು ಸದ್ಯ ಬನ್ನಂಜೆ ರಾಜನ ಮೇಲಿದ್ದು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ಸುಮಾರು 25 ವರ್ಷಗಳಿಂದ ಕುಟುಂಬದ ಸಂಪರ್ಕದಿಂದ ದೂರವಾಗಿದ್ದ ರಾಜನಿಗೆ ಅಮ್ಮನ ಅನಾರೋಗ್ಯ ಬಹಳ ಕಾಡುತ್ತಿದ್ದಂತೆ. ಅಮ್ಮನ ಕೊನೆಯ ದಿನಗಳಲ್ಲಿ ಅವರ ಜೊತೆಗೆ ಇರಬೇಕು ಅಂತ ಅವನ ಮನಸ್ಸು ಹಂಬಲಿಸಿದೆ. ಹೀಗಾಗಿ ಪೊಲೀಸರಿಗೆ ಶರಣಾಗಿದ್ದಾನೆ.

    ತಾಯಿಯ ಅನಾರೋಗ್ಯದ ಸಂದರ್ಭ ಮನೆಗೆ ಬಂದಿದ್ದ ಬನ್ನಂಜೆ, ಎರಡನೇ ಭೇಟಿಯ ಸಂದರ್ಭ ತಾಯಿ ಇಲ್ಲವಾಗಿದ್ದಾರೆ. ಅಂತ್ಯ ಸಂಸ್ಥಾರದ ಚಿತೆಯ ಮೇಲೆ ಮಲಗಿದ್ದ ತಾಯಿಯ ಪಾದದ ಕೆಳಗೆ ತಲೆಯಿಟ್ಟು ಕೆಲಕಾಲ ಕಣ್ಣೀರಿಟ್ಟಿದ್ದಾನೆ. ಬನ್ನಂಜೆ ರಾಜಾ, ತಂದೆ ಮತ್ತು ಅಣ್ಣನ ಜೊತೆಗೆ ತಾಯಿಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಿದ್ದಾನೆ. ಪ್ರಕ್ರಿಯೆಗಳೆಲ್ಲಾ ಮುಗಿಯುವ ತನಕ ಸ್ಮಶಾನದಲ್ಲಿರಲು ಅವಕಾಶ ನೀಡಿದ ಪೊಲೀಸರು ಮತ್ತೆ ನಗರ ಠಾಣೆಗೆ ಕರೆದೊಯ್ದಿದ್ದಾರೆ.

    ಬನ್ನಂಜೆ ರಾಜನ ಸಂಬಂಧಿ ಸುನೀಲ್ ದಾಸ್ ಮಾಧ್ಯಮಗಳ ಜೊತೆ ಮಾತನಾಡುತ್ತಾ, ವಿಲಾಸಿನಿ ಶೆಟ್ಟಿಗಾರ್ ಉತ್ತಮ ಶಿಕ್ಷಕಿಯಾಗಿ ಉಡುಪಿಯ ಎಲ್ಲಾ ಭಾಗಗಳಲ್ಲೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದರು. ಕಾಲು ಜಾರಿ ಬಿದ್ದು ಮೃತಪಟ್ಟಿದ್ದು, ಬನ್ನಂಜೆ ರಾಜನನ್ನು ಬೆಳಗಾವಿಯಿಂದ ಕರೆತರಲು ಉಡುಪಿ ಕೋರ್ಟ್ ಅವಕಾಶ ನೀಡಿದೆ. ಇಡೀ ಕುಟುಂಬಸ್ಥರ ಪರವಾಗಿ ನಾವು ಕೋರ್ಟ್ ಮತ್ತು ಪೊಲೀಸ್ ಇಲಾಖೆಗೆ ಧನ್ಯವಾದ ಹೇಳುತ್ತೇವೆ. ತಾಯಿಯ ಕೊನೆಗಾಲದಲ್ಲಿ ಜೊತೆಗಿರಬೇಕು ಎಂದು ರಾಜೇಂದ್ರ (ಬನ್ನಂಜೆ ರಾಜ) ಹೇಳಿಕೊಂಡಿದ್ದನು. ಆದರೆ ತಾಯಿಯ ಮುಖವನ್ನಾದರೂ ನೋಡುವ ಅವಕಾಶ ಸಿಕ್ಕಿದ್ದು ನೆಮ್ಮದಿ ತಂದಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜ

    ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜ

    ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜ ತಾಯಿಯ ಆರೋಗ್ಯ ವಿಚಾರಿಸಲು ಉಡುಪಿಗೆ ಆಗಮಿಸಿದ್ದಾನೆ.

    ವಿಚಾರಣಾಧೀನ ಖೈದಿಯಾಗಿರುವ ಬನ್ನಂಜೆ ರಾಜ ಬೆಳಗಾವಿಯ ಹಿಂಡೆಲಗ ಜೈಲಿನಲ್ಲಿದ್ದಾನೆ. ಜೈಲಿನಲ್ಲಿರುವ ಬನ್ನಂಜೆ ರಾಜನಿಗೆ ನ್ಯಾಯಾಲಯ ಮಾನವೀಯ ನೆಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ನೋಡಲು ಅವಕಾಶ ನೀಡಿದೆ. ಇದನ್ನೂ ಓದಿ: ಅಮ್ಮನನ್ನು ನೋಡಲು ಬರ್ತಿದ್ದಾನೆ ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾ

    ಪೊಲೀಸ್ ಬಿಗಿ ಭದ್ರತೆಯಲ್ಲಿ ಉಡುಪಿಗೆ ಆಗಮಿಸಿದ ಬನ್ನಂಜೆ ರಾಜನನ್ನು ನಗರ ಠಾಣೆಗೆ ಕರೆದೊಯ್ಯಲಾಯ್ತು. ಭಾನುವಾರ ರಾತ್ರಿ ಬನ್ನಂಜೆ ರಾಜ ಉಡುಪಿ ನಗರ ಪೊಲೀಸ್ ಠಾಣೆಯಲ್ಲೇ ಇದ್ದು, ಇಂದು ಉಡುಪಿಯ ಮಲ್ಪೆ ಸಮೀಪವಿರುವ ಕಲ್ಮಾಡಿಯಲ್ಲಿರುವ ಮನೆಗೆ ತೆರಳಲಿದ್ದಾನೆ.

    ಬನ್ನಂಜೆ ರಾಜಾ ಮೊರಾಕ್ಕೋದಲ್ಲಿ 2015ರಲ್ಲಿ ಬಂಧನಕ್ಕೊಳಗಾಗಿದ್ದನು. ಇದೀಗ ಈತನ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶೂಟೌಟ್, ದರೋಡೆ, ಕೊಲೆ ಪ್ರಕರಣ ಸಹಿತ 16 ಕ್ರಿಮಿನಲ್ ಪ್ರಕರಣಗಳು ಹೀಗೆ ಒಟ್ಟು 45ಕ್ಕೂ ಹೆಚ್ಚು ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ.

  • ಅಮ್ಮನನ್ನು ನೋಡಲು ಬರ್ತಿದ್ದಾನೆ ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾ

    ಅಮ್ಮನನ್ನು ನೋಡಲು ಬರ್ತಿದ್ದಾನೆ ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜಾ

    ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಪೆರೋಲ್ ಮೇಲೆ ಹೊರಬರಲಿದ್ದಾನೆ. ಬೆಳಗಾವಿಯ ಹಿಂಡಲಗಾ ಜೈಲಲ್ಲಿರುವ ಬನ್ನಂಜೆ ರಾಜ ಉಡುಪಿಗೆ ಬರಲಿದ್ದಾನೆ.

    ಜುಲೈ  8  ರಂದು ಆತ ಉಡುಪಿಗೆ ಬರಲು ನ್ಯಾಯಾಲಯದ ಮುಂದೆ ಅನುಮತಿ ಕೋರಿದ್ದಾನೆ. ಆತನಿಗೆ ನ್ಯಾಯಾಧೀಶರಿಂದ ವಿಶೇಷ ಅನುಮತಿಯೂ ಸಿಕ್ಕಿದೆ ಎಂದು ತಿಳಿದು ಬಂದಿದೆ. ಬನ್ನಂಜೆ ರಾಜ ಅನಾರೋಗ್ಯ ಪೀಡಿತ ತನ್ನ ತಾಯಿಯನ್ನು ನೋಡಲು ಆಗಮಿಸಲಿದ್ದಾನೆ.

    ಬನ್ನಂಜೆ ರಾಜಾ ಮೊರಾಕ್ಕೋದಲ್ಲಿ 2015ರಲ್ಲಿ ಬಂಧನಕ್ಕೊಳಗಾಗಿದ್ದನು. ಇದೀಗ ಈತನ ಭೇಟಿ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಸಾಧ್ಯತೆಯಿದೆ. ಶೂಟೌಟ್ , ದರೋಡೆ , ಕೊಲೆ ಪ್ರಕರಣ ಸಹಿತ 16 ಕ್ರಿಮಿನಲ್ ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ.

    ಬನ್ನಂಜೆ ರಾಜನ ಮೇಲೆ 45 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಉಡುಪಿ ಭೇಟಿ ಸಂದರ್ಭ ಬನ್ನಂಜೆಯ ಸಹಚರರು ಆಗಮಿಸುವ ಸಾಧ್ಯತೆಯಿದೆ.

  • ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜನ ಹುಟ್ಟುಹಬ್ಬ- ಉಡುಪಿಯಲ್ಲಿ ಎಸ್‍ಪಿ ಕಚೇರಿ ಪಕ್ಕದಲ್ಲೇ ಕಟೌಟ್

    ಅಂಡರ್ ವರ್ಲ್ಡ್ ಡಾನ್ ಬನ್ನಂಜೆ ರಾಜನ ಹುಟ್ಟುಹಬ್ಬ- ಉಡುಪಿಯಲ್ಲಿ ಎಸ್‍ಪಿ ಕಚೇರಿ ಪಕ್ಕದಲ್ಲೇ ಕಟೌಟ್

    ಉಡುಪಿ: ಇವತ್ತು ಅಂಡರ್ ವರ್ಲ್ಡ್ ಡಾನ್ ಉಡುಪಿ ಮೂಲದ ಬನ್ನಂಜೆ ರಾಜನ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬನ್ನಂಜೆ ರಾಜನ ಅಭಿಮಾನಿ ಬಳಗ ಉಡುಪಿಯಲ್ಲಿ ‘ಅಣ್ಣ’ನ ಕಟೌಟ್ ಹಾಕಿದೆ. ಅದೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಪಕ್ಕದಲ್ಲೇ ಕಟೌಟ್ ರಾರಾಜಿಸುತ್ತಿದೆ.

    ಎಸ್‍ಪಿ ಕಚೇರಿ ಜಂಕ್ಷನ್ ಗೆ ಹೋಗುವ ದಾರಿಯಲ್ಲೇ ಖತರ್ನಾಕ್ ಭೂಗತ ಪಾತಕಿಯ ಕಟೌಟ್ ಇರೋದು ವಿಪರ್ಯಾಸ. ಬಡವರ ರಕ್ಷಕ, ಸಮಾಜ ಸೇವಕ, ಮೆಚ್ಚಿನ ನಾಯಕ ಅಂತ ಬ್ಯಾನರ್ ನಲ್ಲಿ ನಮೂದಿಸಲಾಗಿದೆ. ಬನ್ನಂಜೆ ರಾಜ ಅಭಿಮಾನಿಗಳ ಬಳಗ ರಿಜಿಸ್ಟರ್ ಕೂಡಾ ಆಗಿರೋದು ಮತ್ತೊಂದು ವಿಪರ್ಯಾಸ.

    ಹಿಂಡಲಗಾ ಜೈಲಿನಲ್ಲಿರುವ ಬನ್ನಂಜೆ ರಾಜಾ, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ಅನುಭವಿಸುತ್ತಿದ್ದಾನೆ. ಈ ಕಟೌಟ್ ನೋಡಿದರೆ ಬನ್ನಂಜೆ ರಾಜ ಸಮಾಜ ಸೇವಕನಾಗಿ ರಾಜಕೀಯಕ್ಕೆ ಎಂಟ್ರಿ ಆಗ್ತಾನಾ ಅನ್ನೋ ಡೌಟ್ ಶುರುವಾಗಿದೆ.

    ಇವತ್ತು ಬೆಳಗ್ಗೆ ಬನ್ನಂಜೆ ರಾಜನ ಅಭಿಮಾನಿಗಳು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಕಂಬಳಿ ವಿತರಿಸುತ್ತಾರೆ ಎನ್ನಲಾಗಿದೆ. ಉಡುಪಿಯ ಮತ್ತು ಬೆಂಗಳೂರಿನ ಡಾನ್ ಅಭಿಮಾನಿಗಳು ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ಅಂಡರ್ ವರ್ಲ್ಡ್ ಫೀಲ್ಡ್ ಬಿಟ್ಟು ರಾಜಕೀಯ ಕ್ಷೇತ್ರಕ್ಕೆ ಬನ್ನಂಜೆ ಎಂಟ್ರಿಗೆ ಈ ಹುಟ್ಟುಹಬ್ಬ ಆಚರಣೆ ಮೊದಲ ಹೆಜ್ಜೆ ಅನ್ನೋ ಚರ್ಚೆ ಕೂಡ ಶುರುವಾಗಿದೆ.

    ಅನಧಿಕೃತ ಬ್ಯಾನರ್-ಕಟೌಟ್ ಮೇಲೆ ಕಣ್ಣಿಡುವ, ಸಿಕ್ಕಾಪಟ್ಟೆ ಫೈನ್ ಹಾಕುವ ಉಡುಪಿ ನಗರಸಭೆ ಡಾನ್ ಕಟೌಟ್ ಗೆ ಬೆದರಿ ಸುಮ್ಮನಿದ್ಯಾ? ಅನ್ನೋದೇ ಪ್ರಶ್ನೆ. ಅದೂ ಎಸ್‍ಪಿ ಕಚೇರಿ ಪಕ್ಕದಲ್ಲೇ ಕಟೌಟ್ ಇರೋದು ಮತ್ತಷ್ಟು ವಿವಾದಕ್ಕೆ ಕಾರಣವಾಗಿದೆ.