ಬೆಂಗಳೂರು: ಬನ್ನೇರುಘಟ್ಟ (Bannerghatta) ಸಫಾರಿ ವಾಹನದ ಮೇಲೆ ಜಾಲರಿ ಅಳವಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆಯ ಸಚಿವ ಈಶ್ವರ ಖಂಡ್ರೆ (Eshwar khandre) ಸೂಚನೆ ನೀಡಿದ್ದಾರೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿಂದು ಚಿರತೆ ಸಫಾರಿ ಅಂಗಳದಲ್ಲಿ ವಾಹನದ ಕಿಟಕಿ ಬಳಿ ಕೈ ಇಟ್ಟಿದ್ದ ಬಾಲಕನಿಗೆ ಚಿರತೆ ಗಾಯಗೊಳಿಸಿರುವ ಬಗ್ಗೆ ಆಘಾತ ವ್ಯಕ್ತಪಡಿಸಿದ ಸಚಿವರು ಎಲ್ಲಾ ಸಫಾರಿ ವಾಹನಗಳ ಕಿಟಕಿ ಮತ್ತು ಛಾಯಾಗ್ರಹಣದ ರಂಧ್ರಗಳಿಗೆ ಕಡ್ಡಾಯವಾಗಿ ಜಾಲರಿ ಅಳವಡಿಸಲು ಸೂಚಿಸಿದ್ದಾರೆ. ಇದನ್ನೂಓದಿ: ಬನ್ನೇರುಘಟ್ಟ ಸಫಾರಿ ವೇಳೆ ಬೊಲೆರೋ ಹಿಂಬಾಲಿಸಿ ಬಾಲಕನ ಮೇಲೆ ಚಿರತೆ ದಾಳಿ
ಸಫಾರಿಯ ವೇಳೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮತ್ತು ಪ್ರವಾಸಿಗರಿಗೆ ಸೂಕ್ತ ಎಚ್ಚರಿಕೆ ನೀಡಲು ಹಾಗೂ ಸಫಾರಿ ಟಿಕೆಟ್ ನಲ್ಲಿಯೇ ಎಚ್ಚರಿಕೆಯ ಸಂದೇಶ ಮುದ್ರಿಸುವಂತೆ ಅವರು ಸೂಚಿಸಿದ್ದಾರೆ.
ನಿಂತ ಕೆಲ ಕ್ಷಣದ ಬಳಿಕ ಬೊಲೆರೋ ಮುಂದಕ್ಕೆ ನಿಧಾನವಾಗಿ ಸಾಗಿದೆ. ಈ ವೇಳೆ ಬೊಲೆರೋ ಹಿಂಬಾಲಿಸಿದ ಚಿರತೆ ಕಿಟಕಿಯ ಮೂಲಕ ಕೈ ಹಾಕಿ ಉಗುರಿನಿಂದ ಪರಚಿದೆ. ಗಾಯಾಳು ಬಾಲಕನಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಬಾಲಕ ಮನೆಗೆ ತೆರಳಿದ್ದಾನೆ.
ಚರತೆ ಬೊಲೆರೋ ಹತ್ತಿ ದಾಳಿ ನಡೆಸುತ್ತಿರುವ ದೃಶ್ಯ ಹಿಂಬದಿಯ ವಾಹನದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲಿನಲ್ಲಿ ಸೆರೆಯಾಗಿದೆ.
ಪಾರ್ಕ್ ಒಳಗೆ ಸಂಚಾರ ಮಾಡುವ ಬಸ್ ಹಾಗೂ ಜೀಪ್‌ಗಳಲ್ಲಿ ಸಣ್ಣದಾದ ರಂದ್ರ ಇದ್ದು ಅದನ್ನು ಕೂಡ ಸಂಪೂರ್ಣವಾಗಿ ಬಂದ್ ಮಾಡಲು ಕೆಎಸ್‌ಟಿಡಿಸಿಗೆ ಸೂಚನೆ ನೀಡಿದ್ದು, ಇನ್ನು ಮುಂದೆ ಇಂತಹ ಘಟನೆ ಆಗದಂತೆ ಎಚ್ಚರ ವಹಿಸಲು ಸಿಬ್ಬಂದಿಗೆ ಹಾಗೂ ಚಾಲಕರಿಗೆ ಸೂಚನೆ ನೀಡಿದ್ದೇನೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸುರ್ಯಸೇನ್ ಮಾಹಿತಿ ನೀಡಿದ್ದಾರೆ.
ಈ ಹಿಂದೆಯೂ ಕೂಡ ಒಮ್ಮೆ ಚಿರತೆ ಹಾಗೂ ಇನ್ನೊಮ್ಮೆ ಹುಲಿ ಇದೇ ರೀತಿ ದಾಳಿ ಮಾಡಿತ್ತು. ಆದರೂ ಕೂಡ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ.
-ಮೈಸೂರು ಮೃಗಾಲಯ, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ – ಸಫಾರಿ ದರದಲ್ಲಿ ಹೆಚ್ಚಳ ಇಲ್ಲ, ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸೂಚನೆ
ಮೈಸೂರು: ಜಿಲ್ಲೆಯ ಕಾರಂಜಿ ಕೆರೆಯಲ್ಲಿರುವ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ (Penguin Park) ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಜೊತೆಗೆ ಮೈಸೂರು ಮೃಗಾಲಯ (Mysuru Zoo), ಬನ್ನೇರುಘಟ್ಟ ಝೂ (Bannerghatta) ಪ್ರವೇಶ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸಲು ನಿರ್ಧರಿಸಿದೆ.
ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಈಶ್ವರ ಬಿ ಖಂಡ್ರೆ ಅವರು, ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.ಇದನ್ನೂ ಓದಿ: ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ
ಮೃಗಾಲಯಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಿದರೆ, ಹೊಸ ವನ್ಯಜೀವಿಗಳು ಸೇರ್ಪಡೆಯಾದರೆ ಪ್ರವಾಸಿಗರಿಗೆ ಹೆಚ್ಚಿನ ಆಕರ್ಷಣೆ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಿ ಮೃಗಾಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಮುಂದಿನ 5 ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು, ವೆಚ್ಚವನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುವಾಗುವಂತೆ ಯೋಜನೆ ರೂಪಿಸಲು ತಿಳಿಸಿದರು.
ಗಣಿಬಾಧಿತ ಜಿಲ್ಲೆಗಳಲ್ಲಿರುವ ಮೃಗಾಲಯಗಳ ಅಭಿವೃದ್ಧಿಗೆ ಕೆಎಂಇಆರ್‌ಸಿ ನಿಧಿಯನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ದಾವಣಗೆರೆಯ ಮೃಗಾಲಯ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದರು. ಬೀದರ್‌ನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪಕ್ಷಿಧಾಮ, ವಿದೇಶಿ ಹಕ್ಕಿ, ಪಕ್ಷಿಗಳ ವಿಶಿಷ್ಟವಾದ ಪಕ್ಷಿಲೋಕವನ್ನು ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ತಿಳಿಸಿದರು. ಜೊತೆಗೆ ಈ ಯೋಜನೆಗೆ 20 ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಸೂಚಿಸಿದರು.
ಇನ್ನೂ ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದಲ್ಲಿನ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ದರವನ್ನು ಶೇ.50ರಷ್ಟು ಹೆಚ್ಚಿಸಬೇಕೆಂಬ ಪ್ರಾಧಿಕಾರದ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದರು. ಏಕಾಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಶೇ.20ರಷ್ಟು ಮಾತ್ರವೇ ದರ ಹೆಚ್ಚಳ ಮಾಡಿ ಎಂದು ಅನುಮೋದನೆ ನೀಡಿದರು. ಸಫಾರಿ ದರ ಹೆಚ್ಚಿಸದಂತೆ ಸೂಚಿಸಿದರು. ವನ್ಯಜೀವಿ ವೀಕ್ಷಣೆಗೆ ದೇಶ ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಮೃಗಾಲಯದಲ್ಲಿ ಮತ್ತು ಜೈವಿಕ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರು, ವಿಶ್ರಾಂತಿ ಧಾಮ, ಪುರುಷ ಮತ್ತು ಮಹಿಳೆಯರ ಶೌಚಾಲಯದ ಜೊತೆಗೆ ಹೆಚ್ಚಿನ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಮೃಗಾಲಯ ಮತ್ತು ಜೈವಿಕ ಉದ್ಯಾನ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಿದರು.
ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಅನ್ನು ಸಾಕಾನೆಗಳ ಹಿಂಡು ಅಡ್ಡಗಟ್ಟಿದೆ. ಗಜಪಡೆಯನ್ನು (Elephant) ನೋಡಿದ ಬಸ್‌ನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣ ಶಾಕ್‌ಗೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಯಾರಿಗೆ ಏನೂ ಮಾಡದೇ ಗಜಪಡೆ ಅರಣ್ಯದೊಳಗೆ ನುಗ್ಗಿವೆ.
ಬನ್ನೇರುಘಟ್ಟ (Bannerghatta) ಜೈವಿಕ ಉದ್ಯಾನವನದ ಸಾಕಾನೆಗಳ ಹಿಂಡು ಬೆಂಗಳೂರು (Bengaluru) ಹೊರವಲಯದ ಮುಖ್ಯರಸ್ತೆಗೆ ಲಗ್ಗೆಯಿಟ್ಟಿವೆ. ಪಾರ್ಕಿನ ಸಾಕಾನೆಗಳನ್ನ ಮೇಯಲು ಬಿಡಲಾಗಿತ್ತು. ಈ ವೇಳೆ ಕಾಡಂಚಿನ ಗ್ರಾಮಕ್ಕೆ ಬಂದು ಆತಂಕ ಸೃಷ್ಟಿಸಿತ್ತು. ಬೆಳಗ್ಗೆ 8 ಗಂಟೆ ಸುಮಾರಿಗೆ ಕಗ್ಗಲಿಪುರ ಸಮೀಪದ ಗುಲ್ಲಹಟ್ಟಿ ಕಾವಲ್ ಗ್ರಾಮದ ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ಬಸ್‌ಗೆ ಆನೆಗಳು ಅಡ್ಡ ಬಂದಿವೆ. ಇದನ್ನು ನೋಡಿದ ಬಸ್ ಚಾಲಕ, ಬಸ್ ನಿಲ್ಲಿಸಿದ್ದು, ಪ್ರಯಾಣಿಕರು ಒಂದು ಕ್ಷಣ ಗಾಬರಿಗೆ ಒಳಗಾದರು. ಇದನ್ನೂ ಓದಿ: Explainer| ಏನಿದು ಪಬ್ಲಿಕ್ ಟಿವಿ ವಿದ್ಯಾಪೀಠ? ವಿದ್ಯಾರ್ಥಿಗಳಿಗೆ ಏನು ಲಾಭ? ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ
ಕೆಆರ್ ಮಾರ್ಕೆಟ್‌ನಿಂದ ಗುಳ್ಳಹಟ್ಟಿ ಕಾವಲ್‌ಗೆ ಬಸ್ ಹೊರಟಿತ್ತು. ಗುಲ್ಲಹಟ್ಟಿ ಗ್ರಾಮದ ಮುಖ್ಯರಸ್ತೆಯಲ್ಲಿ ಈ ಕಾಡಾನೆಗಳ ದಂಡು ಎಂಟ್ರಿಯಾಗಿತ್ತು. ಗ್ರಾಮದವರು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರು. ಸ್ಥಳಕ್ಕೆ ಧಾವಿಸಿದ ಅರಣ್ಯ ಸಿಬ್ಬಂದಿ ಎಂಟು ಸಾಕಾನೆಗಳನ್ನು ಬನ್ನೇರುಘಟ್ಟ ಅರಣ್ಯಕ್ಕೆ ಓಡಿಸಿದರು. ಬನ್ನೇರುಘಟ್ಟ ಕಾಡಿನೊಳಗೆ ಸಾಕಾನೆಗಳನ್ನ ಮೊನ್ನೆರಾತ್ರಿ ಮೇಯಲು ಬಿಡಲಾಗಿತ್ತು. ಅದೇ ಆನೆಗಳ ಹಿಂಡು ಬೆಳಗ್ಗೆ ಕಾಡಂಚಿನ ಗುಲ್ಲಹಟ್ಟಿ ಕಾವಲ್ ಗ್ರಾಮದ ಮುಖ್ಯರಸ್ತೆಗೆ ಬಂದಿವೆ. ಕಾಡಾನೆಗಳು ಅಂತ ಗಾಬರಿಪಟ್ಟಿದ್ದ ಗ್ರಾಮಸ್ಥರು, ಅರಣ್ಯಾಧಿಕಾರಿಗಳು ಮತ್ತೆ ಕಾಡಿಗೆ ಓಡಿಸುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಮುಖ್ಯರಸ್ತೆಗೆ ಬಂದ ಗಜಪಡೆಯನ್ನ ನೋಡಿ, ಅರ್ಧ ಗಂಟೆಗೂ ಹೆಚ್ಚು ಕಾಲ ಬಿಎಂಟಿಸಿ ಪ್ರಯಾಣಿಕರು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಇದನ್ನೂ ಓದಿ: ಜಡ್ಜ್ ಮನೆಯಲ್ಲಿ ಪತ್ತೆಯಾದ ಕಂತೆ ಕಂತೆ ಹಣದ ಬಗ್ಗೆ ಎಫ್‌ಐಆರ್ ಆಗಿಲ್ಲ ಯಾಕೆ: ಧನಕರ್ ಪ್ರಶ್ನೆ
ಬೆಂಗಳೂರು: ಈಜಲು (Swim) ಹೋದ ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಬನ್ನೇರುಘಟ್ಟ (Bannerghatta) ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ.
ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು (20), ಯೋಗಿಶ್ವರನ್ (20) ಮೃತ ವಿದ್ಯಾರ್ಥಿಗಳು. ಹೆಬ್ಬಗೋಡಿಯ ಕಾಲೇಜುವೊಂದರ ಐವರು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ತೆರಳಿದ್ದರು. ಈ ಪೈಕಿ ದೀಪು, ಯೋಗೀಶ್ವರನ್‌ಗೆ ಈಜಲು ಆಗದೆ ಪರಾದಾಟ ನಡೆಸಿದ್ದಾರೆ. ಕೆಲಕಾಲ ಜೀವ ಉಳಿಸಿಕೊಳ್ಳಲು ಹೋರಾಟ ನಡೆಸಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: Exclusive | ಮುಡಾ ಕೇಸ್‌ನಲ್ಲಿ ಸಿಎಂ & ಕುಟುಂಬಸ್ಥರೇ ಸಂತ್ರಸ್ತರು – ನಟೇಶ್ ಪ್ರಮುಖ ಆರೋಪಿ ಎಂದ ʻಲೋಕಾʼ
ವಿದ್ಯಾರ್ಥಿಗಳು ಮುಳುಗುತ್ತಿದ್ದ ವೇಳೆ ರಕ್ಷಣೆ ಮಾಡಲು ಸಾಧ್ಯವಾಗದೇ ಉಳಿದ ಸ್ನೇಹಿತರು ಪರದಾಡಿದ್ದಾರೆ. ಈಜಲು ಬಾರದೇ ಒಬ್ಬರಾದ ಮೇಲೆ ಒಬ್ಬರಂತೆ ನೀರಿನಲ್ಲಿ ಮುಳುಗಿ ಸ್ನೇಹಿತರ ಕಣ್ಣೆದುರೇ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಸಂಪೂರ್ಣ ಘಟನೆಯ ದೃಶ್ಯ ಅಲ್ಲಿದ್ದ ಯುವಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಆಗಬೇಕಾ – ಬೇಡ್ವಾ?; ಸಾರ್ವಜನಿಕರಿಂದ ಸಲಹೆಗೆ ಆಹ್ವಾನ
ಬನ್ನೇರುಘಟ್ಟ: ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸುವ ಪ್ರಮುಖ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳದ್ದು. ಆದ್ರೆ ಇಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ಕಲುಷಿತ ನೀರನ್ನು (Contaminated Water) ಮನೆಗಳಿಗೆ ಸರಬರಾಜು ಮಾಡುತ್ತಿದ್ದು, ಸ್ಥಳೀಯ ನಿವಾಸಿಗಳಿಂದ ಆಕ್ರೋಶ ವ್ಯಕ್ತವಾಗಿದೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಪನಾಯಕನಹಳ್ಳಿಯಲ್ಲಿ. ಇಲ್ಲಿನ ನಿವಾಸಿಗಳಿಗೆ ವಾರಕ್ಕೊಮ್ಮೆ ಗ್ರಾಮ ಪಂಚಾಯತಿ ನೀರು ಸರಬರಾಜು ಮಾಡುತ್ತಿದೆ. ಆದ್ರೆ ಕಳೆದ 1 ತಿಂಗಳಿನಿಂದ ಸ್ಯಾನಿಟರಿ ಮತ್ತು ಚರಂಡಿ ಮಿಶ್ರೀತ ನೀರು ಸರಬರಾಜು ಮಾಡುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿಭೇದಿ, ಕೆಮ್ಮು ಜ್ವರ ನೆಗಡಿ ಜೊತೆ ಅಲರ್ಜಿ ಕೂಡ ಕಾಡುತ್ತಿದೆ ಎಂದು ಗ್ರಾಪಂ ವಿರುದ್ಧ ಕಿರಿ ಕಾಡಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲೇ ನೀರಿನ ದರ ಏರಿಕೆ ಶಾಕ್ – ಜಲಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
ಸಾರ್ವಜನಿಕ ನಲ್ಲಿಗಳಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿರುವ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಕಲುಷಿತ ನೀರು ಸೇವಿಸಿ ಮನೆ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಸಂಪ್‌ಗಳನ್ನು ಸ್ವಚ್ಛಗೊಳಿಸಿ ಹಣ ನೀರು ಟ್ಯಾಂಕರ್ ನೀರು ಹೊಡೆಸಿಕೊಳ್ಳುತ್ತಿದ್ದು, ಅದು ಕೂಡ ಕಲುಷಿತ ನೀರು ಸೇರಿ ಗಬ್ಬೆದ್ದು ನಾರುತ್ತಿದೆ. ಚುನಾವಣೆ ಬಂದಾಗ ಮತ ಕೇಳಲು ಬರುವ ರಾಜಕಾರಣಿಗಳು ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಇಷ್ಟೆಲ್ಲಾ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದ್ದರೂ ಪಂಚಾಯತಿ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೇರಳಕ್ಕೆ ಅನುದಾನ ಬೇಕಿದ್ರೆ ʻ ಹಿಂದುಳಿದ ರಾಜ್ಯʼ ಎಂದು ಘೋಷಿಸಲಿ: ಜಾರ್ಜ್ ಕುರಿಯನ್
ಬೆಂಗಳೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ (Wild Elephant) ಮೃತಪಟ್ಟ ಘಟನೆ ಬನ್ನೇರುಘಟ್ಟ (Bannerghatta) ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ (Bannerghatta Biological Park) ಹೊಸ ಅತಿಥಿಯೊಂದರ ಆಗಮನವಾಗಿದೆ. 15 ವರ್ಷದ ಆನೆಯೊಂದು (Elephant) ಹೆಣ್ಣು ಮರಿಗೆ ಜನ್ಮ ನೀಡಿದ್ದು, ಜೈವಿಕ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.
ಡಿ.11 ರಂದು ರೂಪಾ ಎಂಬ ಆನೆ ಮರಿಗೆ ಜನ್ಮ ನೀಡಿದ್ದು, ಸಫಾರಿಯ ಸೀಗೆಕಟ್ಟೆಯಲ್ಲಿ ಮರಿ ಆನೆ ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ಪಶುವೈದ್ಯರ ಆರೈಕೆಯಲ್ಲಿ ತಾಯಿ ಹಾಗೂ ಮರಿ ಆನೆಗಳು ಆರೋಗ್ಯವಾಗಿವೆ. ಈ ಹಿಂದೆ ಎರಡು ಮರಿಗಳಿಗೆ ರೂಪಾ ಜನ್ಮ ನೀಡಿತ್ತು. ಇದನ್ನೂ ಓದಿ: ನಾನು ಅಮ್ಮನಾಗುತ್ತಿದ್ದೇನೆ: ಗುಡ್ ನ್ಯೂಸ್ ಕೊಟ್ಟ ನಟಿ ಅದಿತಿ ಪ್ರಭುದೇವ್
ಈ ಹಿಂದೆ ಒಂದು ಗಂಡು ಹಾಗೂ ಒಂದು ಹೆಣ್ಣು ಮರಿಗೆ ರೂಪಾ ಜನ್ಮ ನೀಡಿತ್ತು. ಇದೀಗ ಮೂರನೇ ಹೆಣ್ಣು ಮರಿಗಳಿಗೆ ಜನ್ಮ ನೀಡಿದ್ದು, ಜೈವಿಕ ಉದ್ಯಾನವನದ ಆನೆಗಳ ಸಂಖ್ಯೆ 25ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ಹೊಸ ವರ್ಷ, ಹೊಸ ದಿನ- ದೇವರ ಮೊರೆ ಹೋದ ರಾಜ್ಯದ ಜನ
ಆನೇಕಲ್: ಕಳೆದ ಹಲವು ದಿನಗಳಿಂದ ಗಂಧದ ಮರ (Sandalwood) ಕಳ್ಳತನ (Theft) ಮಾಡುತ್ತಿದ್ದ ಖದೀಮನ ಮೇಲೆ ಫಾರೆಸ್ಟ್ ಬೀಟ್ ಸಿಬ್ಬಂದಿ ಗುಂಡು ಹಾರಿಸಿದ್ದು, ಕಳ್ಳ ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬನ್ನೇರುಘಟ್ಟ (Bannerghatta) ಅರಣ್ಯ ಪ್ರದೇಶದ ಕಲ್ಕೆರೆಯಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಅರಣ್ಯ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಗಂಧದ ಮರಗಳ ಕಳ್ಳತನವಾಗುತ್ತಿತ್ತು. ಈ ಹಿನ್ನೆಲೆ ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ರಾತ್ರಿ 2 ಗಂಟೆಯ ಸುಮಾರಿಗೆ ಕಳ್ಳ ಗಂಧದ ಮರ ಕಳ್ಳತನಕ್ಕೆ ಬಂದಿದ್ದ. ಈ ವೇಳೆ ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: KRS ಡ್ಯಾಂನಿಂದ ಮತ್ತೆ ತಮಿಳುನಾಡಿಗೆ ನೀರು
ಗಸ್ತಿನ ವೇಳೆ ಕಳ್ಳನ ಮೇಲೆ ಫಾರೆಸ್ಟ್ ಗಾರ್ಡ್ ಫೈರಿಂಗ್ ಮಾಡಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ