Tag: Bannerughatt

  • ಬಾಲಕನ ಬರ್ಬರ ಹತ್ಯೆ ಕೇಸ್ – ನಿಶ್ಚಿತ್ ಕೊನೇ ಕ್ಷಣದ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

    ಬಾಲಕನ ಬರ್ಬರ ಹತ್ಯೆ ಕೇಸ್ – ನಿಶ್ಚಿತ್ ಕೊನೇ ಕ್ಷಣದ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

    ಬೆಂಗಳೂರು: ಹುಳಿಮಾವು (Hulimavu) ಬಳಿ ಬಾಲಕನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಟ್ಯೂಷನ್ ಮುಗಿಸಿ ಮನೆಗೆ ವಾಪಸ್ಸಾಗ್ತಿದ್ದ ಬಾಲಕನ ಕೊನೆಯ ಸಿಸಿಟಿವಿ ದೃಶ್ಯವೊಂದು (CCTV Footage) ಲಭ್ಯವಾಗಿದೆ.

    ಗುರುಮೂರ್ತಿ ಮತ್ತು ಗೋಪಾಲ ಕೃಷ್ಣ ಬಂಧಿತ ಆರೋಪಿಗಳು. ಬುಧವಾರ (ಜು.30) ಸಂಜೆ ಬಾಲಕ ನಿಶ್ಚಿತ್ ಸ್ನೇಹಿತರ ಜೊತೆ ಟ್ಯೂಷನ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ದೃಶ್ಯ ಸಿಸಿಟಿವಿಯೊಂದಲ್ಲಿ ಸೆರೆಯಾಗಿದೆ. ಟ್ಯೂಷನ್ ಮುಗಿಸಿಕೊಂಡು ಸ್ನೇಹಿತರ ಜೊತೆ ಹೊರಗಡೆ ಬಂದಿದ್ದ. ಬಳಿಕ ಅಲ್ಲಿಯೇ ಸ್ನೇಹಿತರ ಜೊತೆ ಮಾತಾಡುತ್ತಾ ನಿಂತಿದ್ದ. ಈ ವೇಳೆ ಆರೋಪಿ ಗುರುಮೂರ್ತಿ ಬಾಲಕನನ್ನು ಕರೆದಿದ್ದಾನೆ. ನಿಶ್ಚಿತ್ ಮನೆಯಲ್ಲಿಯೇ ಆತ ಕೆಲಸ ಮಾಡಿ ಪರಿಚಯವಿದ್ದ ಕಾರಣ ಆತ ಸಹಜವಾಗಿಯೇ ಹೋಗಿದ್ದ. ಬಳಿಕ ಆರೋಪಿಗಳು ರಾತ್ರಿ 8 ಗಂಟೆ ಸುಮಾರಿಗೆ ಕೊಲೆ ಮಾಡಿ, ಬಳಿಕ ಮೃತದೇಹ ಸುಟ್ಟು ಹಾಕಿದ್ದರು.ಇದನ್ನೂ ಓದಿ: ಕಿಡ್ನ್ಯಾಪ್‌ & ಮರ್ಡರ್ ಕೇಸ್‌ – ಬಾಲಕನ ಮನೆಯಲ್ಲಿ ಚಾಲಕನಾಗಿದ್ದವನಿಂದಲೇ ಕೃತ್ಯ

    ಏನಿದು ಪ್ರಕರಣ?
    ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಚ್ಯುತ್ ಮತ್ತು ಕವಿತಾ ದಂಪತಿಯ ಪುತ್ರ ನಿಶ್ಚಿತ್ (13) ಬುಧವಾರ ಸಂಜೆ ಟ್ಯೂಷನ್‌ಗೆ ಹೋಗಿದ್ದಾಗ ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಸಂಜೆ 7:30ಕ್ಕೆ ಟ್ಯೂಷನ್ ಮುಗಿಸಿಕೊಂಡು ಪ್ರತಿನಿತ್ಯ ಮನೆಗೆ ವಾಪಸ್ ಬರುತ್ತಿದ್ದ ಮಗ 8 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಇದರಿಂದ ಆತಂಕಗೊAಡ ಪೋಷಕರು ಟ್ಯೂಷನ್ ಶಿಕ್ಷಕರಿಗೆ ಕರೆ ಮಾಡಿ ವಿಚಾರಿಸಿದ್ದರು. ಆಗ ಟ್ಯೂಷನ್ ಮುಗಿಸಿಕೊಂಡು 7:30ಕ್ಕೆ ಹೋಗಿದ್ದಾಗಿ ಅವರು ಹೇಳಿದ್ದರು.ಇದನ್ನೂ ಓದಿ: ಆನೇಕಲ್ | ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನ ಕಿಡ್ನ್ಯಾಪ್ ಮಾಡಿ ಬರ್ಬರ ಹತ್ಯೆ

    ಇದರಿಂದ ಗಾಬರಿಗೊಂಡ ಪೋಷಕರು ಮಗನ ಸ್ನೇಹಿತರು ಮತ್ತು ನೆಂಟರಿಗೆ ಕರೆ ಮಾಡಿ ವಿಚಾರಿಸಿದ್ದರು. ಯಾರ ಕಡೆಯಿಂದನೂ ನಿಶ್ಚಿತ್ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಆದರೆ ನಿಶ್ಚಿತ್ ಸೈಕಲ್ ಅರೆಕೆರೆ ಸಮೀಪದ ಫ್ಯಾಮಿಲಿ ಪಾರ್ಕ್ ಬಳಿ ಪತ್ತೆ ಆಗಿತ್ತು. ಇದರಿಂದ ಗಾಬರಿಗೊಂಡ ಪೋಷಕರು ಹುಳಿಮಾವು ಪೊಲೀಸರಿಗೆ ಮಗ ಕಾಣೆ ಆಗಿರುವ ಬಗ್ಗೆ ದೂರು ನೀಡಿದ್ದರು.

    ಮರುದಿನ ನಿಶ್ಚಿತ್‌ನ ತಂದೆಗೆ ಆರೋಪಿಗಳು ಕರೆ ಮಾಡಿ, 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ವಿಚಾರವನ್ನು ನಿಶ್ಚಿತ್ ತಂದೆ ಪೊಲೀಸರಿಗೆ ತಿಳಿಸಿದ್ದರು. ಪೊಲೀಸರು ಟವರ್ ಲೊಕೇಷನ್ ಟ್ರ‍್ಯಾಕ್ ಮಾಡುವಷ್ಟರಲ್ಲಿ ಬಾಲಕನ ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಬನ್ನೇರುಘಟ್ಟ ಬಳಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಕುರಿಗಾಯಿಗಳು ಮೃತ ದೇಹವನ್ನು ನೋಡಿ ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದರು.ಇದನ್ನೂ ಓದಿ: ಆನೇಕಲ್ | ಬಾಲಕ ನಿಶ್ಚಿತ್ ಬರ್ಬರ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು, ಇಬ್ಬರು ಅರೆಸ್ಟ್

  • ಆನೇಕಲ್ | ಬಾಲಕ ನಿಶ್ಚಿತ್ ಬರ್ಬರ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು, ಇಬ್ಬರು ಅರೆಸ್ಟ್

    ಆನೇಕಲ್ | ಬಾಲಕ ನಿಶ್ಚಿತ್ ಬರ್ಬರ ಹತ್ಯೆ; ಆರೋಪಿಗಳ ಕಾಲಿಗೆ ಗುಂಡೇಟು, ಇಬ್ಬರು ಅರೆಸ್ಟ್

    – ಕೊಲೆ ಬಳಿಕ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿ
    – ತಾನು ಕೆಲಸ ಮಾಡ್ತಿದ್ದ ಮನೆಯಲ್ಲಿದ್ದ ಬಾಲಕನನ್ನೇ ಕಿಡ್ನ್ಯಾಪ್‌

    ಬೆಂಗಳೂರು: ಟ್ಯೂಷನ್‌ಗೆ ಹೋಗ್ತಿದ್ದ ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಬನ್ನೇರುಘಟ್ಟ ಪೊಲೀಸರು (Bannerughatta) ಇಬ್ಬರನ್ನು ಬಂಧಿಸಿದ್ದಾರೆ.

    ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳು. ಬುಧವಾರ ರಾತ್ರಿ ಅರಕೆರೆ ಶಾಂತಿನಿಕೇತನ ಬಡಾವಣೆ ಬಳಿ ಟ್ಯೂಷನ್‌ನಿಂದ ಬರುತ್ತಿದ್ದ 13 ವರ್ಷದ ನಿಶ್ಚಿತ್‌ನನ್ನು ದುಷ್ಕರ್ಮಿಗಳು ಅಪಹರಿಸಿದ್ದರು.ಇದನ್ನೂ ಓದಿ: ಬೆಂಗಳೂರಿಗರಿಗೆ ಮತ್ತೊಂದು ಶಾಕ್ – ಇಂದಿನಿಂದ ಆಟೋ ದರ ಏರಿಕೆ

    ಬಾಲಕನ ತಂದೆ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದರು. ಹೀಗಾಗಿ ಕಿಡ್ನ್ಯಾಪರ್ಸ್ ಕರೆ ಮಾಡಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಕಿಡ್ನ್ಯಾಪರ್ಸ್ ಕಡೆಯಿಂದ ಫೋನ್ ಬರ್ತಿದ್ದಂತೆ ಬಾಲಕ ಪೋಷಕರು ಹುಳಿಮಾವು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಿಡ್ನ್ಯಾಪರ್ಸ್‌ಗಳ ಲೊಕೇಶನ್ ಟ್ರೇಸ್ ಮಾಡಿ ಹುಡುಕಾಟ ನಡೆಸಿದ್ದರು. ಮತ್ತೊಂದೆಡೆ ಪೋಷಕರು 5 ಲಕ್ಷ ಹಣವನ್ನು ಕೈಯಲ್ಲಿಡಿದು ಕಾದು ಕುಳಿತ್ತಿದ್ದರು. ಆದರೆ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತದೇಹ ಸುಟ್ಟ ರೀತಿಯಲ್ಲಿ ಪತ್ತೆಯಾಗಿತ್ತು. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು.

    ಕೃತ್ಯ ನಡೆದ ಸ್ವಲ್ಪ ದೂರದಲ್ಲಿಯೇ ಆರೋಪಿಗಳು ಬೈಕ್‌ನಲ್ಲಿ ಪರಾರಿಯಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಕಾಲಿಗೆ ಗುಂಡು ಹಾರಿಸಿ ಇಬ್ಬರನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳು ಲಾಂಗ್‌ನಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಸಬ್‌ಇನ್ಸ್‌ಪೆಕ್ಟರ್‌ ಅರವಿಂದ್ ಗಾಯಗೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಜಯನಗರ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.

    ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಗುರುಮೂರ್ತಿ ಸ್ಪೇರ್ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ. ಅದೇ ಮನೆಯಲ್ಲಿದ್ದ ಬಾಲಕನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಇನ್ನೂ ಇದಕ್ಕೂ ಮುನ್ನ ಆರೋಪಿ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ತೊಡಗಿಕೊಂಡಿದ್ದ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: 69 ದೇಶಗಳಿಗೆ ಸುಂಕದ ಬರೆ – ಭಾರತಕ್ಕೆ 25%, ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ ಟ್ರಂಪ್‌

  • ಪ್ರೇಯಸಿಯೊಂದಿಗೆ ಪ್ರವಾಸಕ್ಕೆ ಬಂದಿದ್ದ ಪ್ರೇಮಿಯ ಮುಂಗೈ ಕತ್ತರಿಸಿದ ದುಷ್ಕರ್ಮಿಗಳು!

    ಪ್ರೇಯಸಿಯೊಂದಿಗೆ ಪ್ರವಾಸಕ್ಕೆ ಬಂದಿದ್ದ ಪ್ರೇಮಿಯ ಮುಂಗೈ ಕತ್ತರಿಸಿದ ದುಷ್ಕರ್ಮಿಗಳು!

    ಬೆಂಗಳೂರು: ಪ್ರೇಯಸಿಯ ಜೊತೆ ಪ್ರವಾಸಕ್ಕೆ ಬಂದಿದ್ದ ಪ್ರೇಮಿಯೊಬ್ಬನ ಮುಂಗೈಯನ್ನು ಕತ್ತರಿಸಿದ ಅಮಾನವೀಯ ಘಟನೆ ನಗರದ ಹೊರವಲಯದ ಬನ್ನೇರುಘಟ್ಟದ ಬೆಟ್ಟದ ಬಳಿ ನಡೆದಿದೆ.

    ಚಿತ್ರದುರ್ಗ ಮೂಲದ ರವೀಶ್ (23) ಕೈ ಕಳೆದುಕೊಂಡ ಪ್ರೇಮಿ. ರವೀಶ್ ಆನೇಕಲ್ ತಾಲೂಕಿನ ಯಾರಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಪ್ರೇಯಸಿ ಕೂಡಾ ಚಿತ್ರದುರ್ಗದ ಮೂಲದವಳಾಗಿದ್ದು, ನಗರದಲ್ಲಿಯೇ ಹೋಮ್ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾಳೆ. ಕೈ ಕತ್ತರಿಸಿ ಪರಾರಿಯಾದ ದುಷ್ಕರ್ಮಿಗಳ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

    ಇವತ್ತೇನಾಯ್ತು?
    ಇಂದು ಇಬ್ಬರು ಸೇರಿ ಬನ್ನೇರುಘಟ್ಟದ ಚಂಪಕಧಾಮ ಸ್ವಾಮಿ ದೇವಾಲಯದ ಹಿಂಭಾಗದಿಂದ ಸುವರ್ಣಮುಖಿ ಆಂಜನೇಯ ದೇವಸ್ಥಾನಕ್ಕೆ ಹೋಗುತ್ತಿದ್ದರು. ಅಲ್ಲಿಗೆ ಅರಣ್ಯ ಪ್ರದೇಶದ 3 ಕಿ.ಮೀ. ಕಾಲು ದಾರಿಯ ಮೂಲಕವೇ ಹೋಗಬೇಕು. ಈ ವೇಳೆ ದಾರಿ ಮಧ್ಯದಲ್ಲಿಯೇ ಕೆಲ ದುಷ್ಕರ್ಮಿಗಳು ಲಾಂಗು ಹಾಗೂ ಮಚ್ಚು ಬಳಸಿ, ಯುವಕನ ಬಲಭಾಗದ ಮುಂಗೈ ಕತ್ತರಿಸಿದ್ದಾರೆ. ಇಷ್ಟಕ್ಕೂ ಸುಮ್ಮನಾಗದೇ ವಿಕೃತಿ ಮೆರೆದ ದುಷ್ಕರ್ಮಿಗಳು ಕತ್ತರಿಸಿ ಕೈಯನ್ನು ಕೊಂಡೊಯ್ದಿದ್ದಾರೆ.

    ಕೈ ಕಳೆದುಕೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಪ್ರಿಯಕರನನ್ನು ಕಾಪಾಡಿ ಎಂದು ಯುವತಿ ಸ್ಥಳೀಯರಲ್ಲಿ ಕೇಳಿಕೊಂಡಿದ್ದಾಳೆ. ಬಳಿಕ ಸ್ಥಳೀಯರ ಸಹಾಯದಿಂದ ರವೀಶ್ ನನ್ನು ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅತಿಯಾದ ರಕ್ತಸ್ರಾವದಿಂದ ಬಳಲುತ್ತಿದ್ದ ರವೀಶ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ಮಾಡಿಸಲಾಗಿದೆ. ಸದ್ಯ ರವೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    ಘಟನೆಯಿಂದಾಗಿ ಯುವತಿ ಗಾಬರಿಗೊಂಡಿದ್ದು, ದಾಳಿ ಮಾಡಿದವರ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ಎಷ್ಟು ಜನ ದಾಳಿ ಮಾಡಿದ್ದಾರೆ ಎಂದು ಪೊಲೀಸರು ಕೇಳಿದ ಪ್ರಶ್ನೆಗೆ ಒಂದು ಬಾರಿ ಇಬ್ಬರು ಎಂದರೆ, ಮತ್ತೊಮ್ಮೆ ಮೂವರು ಎಂದು ಹೇಳುತ್ತಿದ್ದಾಳೆ. ಯಾವುದೇ ಮಾಹಿತಿ ಕೇಳಿದರೂ ಗೊಂದಲದ ಉತ್ತರ ನೀಡುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv