ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta National Park) 6 ವರ್ಷದ ಹಿಮಾ ಎಂಬ ಹುಲಿ (Tiger) ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾ ಜೂನ್ 2024 ರಲ್ಲಿ ಮೊದಲ ಬಾರಿಗೆ ಮರಿಗಳಿಗೆ ಜನ್ಮ ನೀಡಿತ್ತು. ಈಗ ಮತ್ತೆ ಮರಿಗಳಿಗೆ ಜನ್ಮ ನೀಡಿದೆ.
8 ವರ್ಷದ ಆರುಣ್ಯ ಎಂಬ ಹುಲಿ ಮೊದಲ ಬಾರಿಗೆ ಎರಡು ಮರಿಗಳಿಗೆ ಜನ್ಮ ನೀಡಿದೆ. ಈ ಹೆಣ್ಣು ಹುಲಿಯನ್ನು ಪ್ರಾಣಿ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ ತಮಿಳುನಾಡಿನ ಚೆನ್ನೈನ ಅರಿಗ್ನಾರ್ ಅನ್ನಾ ಜೂಲಾಜಿಕಲ್ ಪಾರ್ಕ್‌ನಿಂದ ತಂದಿರುವ ಬಿಳಿ ಹುಲಿ ವೀರ್‌ಗೆ ಜೊತೆ ಮಾಡಲಾಗಿತ್ತು. ತಾಯಿ ಮತ್ತು ಮರಿಗಳು ಎರಡೂ ಆರೋಗ್ಯವಾಗಿವೆ.
ಸಫಾರಿಯಲ್ಲಿರುವ ತಾಯಿ ಆರುಣ್ಯ ಜೊತೆ ಎರಡು ಮರಿಗಳು ಆರೋಗ್ಯವಾಗಿದ್ದು ತಾಯಿ ಮರಿಗಳಿಗೆ ಹಾಲುಣಿಸುತ್ತಿದೆ. ಹಿಮಾ ನಾಲ್ಕು ಮರಿಗಳಿಗೆ ಜನ್ಮ ನೀಡಿದ ಕೆಲವು ಹೊತ್ತು ಮಾತ್ರ ಮರಿಗಳ ಜೊತೆಗೆ ಇತ್ತು. ಅದಾದ ಬಳಿಕ ಮರಿಗಳಿಗೆ ಹಾಲುಣಿಸದೆ ದೂರವಾಗಿತ್ತು.
ಹಿಮಾ ಜನ್ಮ ನೀಡಿದ ಮರಿಗಳಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆಸ್ಪತ್ರೆಯಲ್ಲಿ ಆರೈಕೆ ಮಾಡಲಾಗುತ್ತಿದೆ. ಪ್ರತಿದಿನ ಬೆಳಗ್ಗೆಯಿಂದ ರಾತ್ರಿಯವರೆಗೆ ಮರಿಗಳಿಗೆ ಆಡಿನ ಹಾಲನ್ನು ನೀಡಲಾಗುತ್ತಿದೆ. ಮರಿಗಳ ಆರೈಕೆಗಾಗಿ ಸಿಬ್ಬಂದಿ ನೇಮಕ ಮಾಡಲಾಗಿದೆ. ವೈದ್ಯರು ಮರಿಗಳನ್ನು ನೋಡಿಕೊಳ್ಳುತ್ತಿದ್ದು, ನಾಲ್ಕು ಮರಿಗಳನ್ನು ಪ್ರತ್ಯೇಕವಾಗಿಟ್ಟು ಆರೈಕೆ ಮಾಡುತ್ತಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ (Bannerughatta) ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ.
ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.
ಮೈಸೂರು ಶ್ರೀ ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.
ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು. ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.
ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.
ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು.
ಇತರ ನಿರ್ಣಯಗಳು:
>. ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.
>. ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.
>. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.
>. ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.
ಮಾರ್ಗ ಮಧ್ಯೆ ಸಾನ ಮಾವು ಸಮೀಪ ವಾಹನವನ್ನು ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ಚಾಲಕ ಹೋಗಿದ್ದ. ಈ ವೇಳೆ ವಾಹನ ನಿಯಂತ್ರಣ ತಪ್ಪಿ ಅರಣ್ಯ ಪ್ರದೇಶದ ಒಳಗೆ ನುಗ್ಗಿದೆ. ಈ ಸಮಯದಲ್ಲಿ ವಾಹನವನ್ನು ಹತೋಟಿಗೆ ತರಲು ಚಾಲಕ ಪ್ರಯತ್ನಿಸಿದ್ದಾನೆ. ಆದರೆ ದುರದೃಷ್ಟವಶಾತ್ ವಾಹನಕ್ಕೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತ ಚಾಲಕನ ಹೆಸರು ಆರೋಗ್ಯ ಸ್ವಾಮಿ ಎಂದು ತಿಳಿದುಬಂದಿದ್ದು, ಹೊಸೂರು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ರಾಜಕೀಯದಲ್ಲಿ ವಿಲನ್ ಅಂದ್ರೆ ಅದು ಮಿಸ್ಟರ್ ಕುಮಾರಸ್ವಾಮಿ: ಸಿದ್ದರಾಮಯ್ಯ
ಬೆಂಗಳೂರು: ಐದು ದಿನದಿಂದ ಅರಣ್ಯ ಇಲಾಖೆ (Forest Department) ಯ ಬೋನಿಗೂ ಬೀಳದೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿರುವ ಚಿರತೆ ಈಗ ನೈಸ್ ರೋಡ್ (Nice Road) ತುರಹಳ್ಳಿ ಕೆಂಗೇರಿ ಬಿಟ್ಟು ಬೇರೆ ಕಡೆ ಜಾಡು ಬದಲಾಯಿಸಿದ್ಯಾ ಎನ್ನುವ ಅನುಮಾನ ಮೂಡಿದೆ.
ಹೌದು. ಬನ್ನೇರುಘಟ್ಟ (Bannerughatta) ರಸ್ತೆಯ ಪಾರ್ಕಿಂಗ್ ಜಾಗದಲ್ಲಿ ಬೈಕ್ ಪಕ್ಕ ನಿಂತು ಡೆಡ್ಲಿ ಚಿರತೆ ಆರಾಮವಾಗಿ ಅಡ್ಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಷ್ಟೇ ಅಲ್ಲ ಒಂದು ನಾಯಿಮರಿಯನ್ನು ಕೂಡ ಕೊಂದು ಹಾಕಿದೆ. ಭರ್ತಿ ಇಂದಿಗೆ ಆರು ದಿನವಾಯ್ತ. ಆದರೂ ಚಿರತೆಯ ಭೀತಿ ಮಾತ್ರ ಜನ್ರಿಗೆ ಕಡಿಮೆಯಾಗಿಲ್ಲ.
ಅತ್ತ ಬೋನು ಹಾಕಿ ಚಿರತೆ ಇಂದು ಬೀಳಬಹುದು ನಾಳೆ ಬೀಳಬಹುದು ಅಂತ ಅಂದುಕೊಂಡ ಅರಣ್ಯ ಇಲಾಖೆ, ಅಧಿಕಾರಿಗಳಿಗೆ ಚೆನ್ನಾಗಿ ಚಳ್ಳಹಣ್ಣು ತಿನ್ನಿಸಿ ಚಿರತೆ (Leopard) ಎಸ್ಕೇಪ್ ಆಗಿದೆ. ತುರಹಳ್ಳಿ ಫಾರೆಸ್ಟ್, ನೈಸ್ ರೋಡ್ ಕೆಂಗೇರಿ ಭಾಗದಲ್ಲಿ ಕಾಣಿಸಿಕೊಂಡ ಚಿರತೆ ಈಗ, ಜಾಡು ಬದಲಾಯಿಸಿ ಬನ್ನೇರುಘಟ್ಟ ರಸ್ತೆಯತ್ತ ಹೋಗಿರಬಹುದು ಎನ್ನುವ ಅನುಮಾನವೂ ಮೂಡಿದೆ. ಇದನ್ನೂ ಓದಿ: ತುರಹಳ್ಳಿ ಫಾರೆಸ್ಟ್‌ನಲ್ಲಿ ಆಪರೇಷನ್ ಚಿರತೆ- ಬೆಂಗ್ಳೂರಿನಲ್ಲೂ `ರುದ್ರಪ್ರಯಾಗ’ದ ಥ್ರಿಲ್ಲರ್ ಸ್ಟೋರಿ
ಬನ್ನೇರುಘಟ್ಟ ರಸ್ತೆಯ ಜನ ಕೂಡ ಆತಂಕದಿಂದ ವಾಸಮಾಡುವಂತಾಗಿದೆ. ಅದರಲ್ಲೂ ಮಿಡ್‍ನೈಟ್‍ನಲ್ಲಿ ಚಿರತೆಯ ಈ ದೃಶ್ಯ ಸಿಸಿಟಿವಿ (CCTV) ಯಲ್ಲಿ ಸೆರೆಯಾಗಿದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಸದ್ಯ ಅರಣ್ಯ ಇಲಾಖೆಯವರು ಕೂಡ ಬನ್ನೇರುಘಟ್ಟದತ್ತ ಚಿರತೆ ಶಿಫ್ಟ್ ಆಗಿರಬಹುದು ಎನ್ನುವ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಗ್ರಾಮೀಣ ಭಾಗದಲ್ಲಿ ಚಿರತೆ ಹಾವಳಿ ಕಾಮನ್ ಆಗಿತ್ತು. ಆದರೆ ಈಗ ಸಿಟಿಯಲ್ಲಿ ಈ ರೀತಿ ಚಿರತೆ ಹಾವಳಿ ಜನರ ನಿದ್ದೆಗೆಡಿಸಿದೆ. ಅರಣ್ಯ ಇಲಾಖೆಯೂ ಅಸಹಾಯಕತೆ ವ್ಯಕ್ತಪಡಿಸಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪ್ರಿಯತಮೆ ಕೈ ಕೊಟ್ಟ ಹಿನ್ನೆಲೆಯಲ್ಲಿ ಪ್ರಿಯಕರ ಪ್ರೇಮಿಗಳ ದಿನವೇ ನೇಣಿಗೆ ಶರಣಾದ ಘಟನೆ ಬನ್ನೇರುಘಟ್ಟ ಬಳಿಯ ಹುಳಿಮಾವಿನಲ್ಲಿ ನಡೆದಿದೆ.
ಕೊಳ್ಳೆಗಾಲ ಮೂಲದ ಮುತ್ತುರಾಜ್(22) ಮೃತ ಪ್ರಿಯಕರ. ಪ್ರಿಯತಮೆ ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದು ಮುತ್ತುರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಒಂದು ವರ್ಷದಿಂದ ಮುತ್ತುರಾಜ್ ಮತ್ತು ಯುವತಿ ಪ್ರೀತಿಸುತ್ತಿದ್ದರು. ಈ ನಡುವೆ ಪ್ರಿಯತಮೆಗೆ ಬೇರೊಬ್ಬ ಯುವಕನ ಜೊತೆ ಪ್ರೇಮಾಂಕುರವಾಗಿದೆ. ಈ ವಿಚಾರ ಸಂಬಂಧ ಎರಡು ದಿನದ ಹಿಂದೆ ಇಬ್ಬರು ಪರಸ್ಪರ ಜಗಳವಾಡಿಕೊಂಡಿದ್ದರು. ಮನನೊಂದಿದ್ದ ಮುತ್ತುರಾಜ್ ಇಂದು ನೇಣಿಗೆ ಶರಣಾಗಿದ್ದು, ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.